Saturday, October 5, 2024

ಸತ್ಯ | ನ್ಯಾಯ |ಧರ್ಮ

ಸರ್ಕಾರವನ್ನು ಟೀಕಿಸುವ ಸುದ್ದಿ ಬರೆದ ಪತ್ರಕರ್ತರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಡಿ‌: ಸುಪ್ರೀಂ ಕೋರ್ಟ್

ಹೊಸದೆಹಲಿ: ಸರ್ಕಾರವನ್ನು ಟೀಕಿಸುವ ಸುದ್ದಿ ಬರೆದ ಪತ್ರಕರ್ತರ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಬಾರದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಸಂವಿಧಾನದ ಪರಿಚ್ಛೇದ 19(1)(ಎ) ಅಡಿಯಲ್ಲಿ ಪತ್ರಕರ್ತರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ರಕ್ಷಿಸಬೇಕು ಎಂದು ಅದು ಹೇಳಿದೆ.

ಪತ್ರಕರ್ತ ಅಭಿಷೇಕ್ ಉಪಾಧ್ಯಾಯ ಅವರು ಯುಪಿ ಸರ್ಕಾರಿ ಅಧಿಕಾರಿಗಳ ನಡುವಿನ ಜಾತಿ ಸಮೀಕರಣಗಳ ಬಗ್ಗೆ ‘ಯಾದವ್ ರಾಜ್ ವರ್ಸಸ್ ಠಾಕೂರ್ ರಾಜ್’ ಎಂಬ ಲೇಖನವನ್ನು ಬರೆದಿದ್ದರು.

ಸೆಪ್ಟೆಂಬರ್ 20ರಂದು ಲಕ್ನೋದ ಹಜರತ್‌ಗಂಜ್ ಪೊಲೀಸ್ ಠಾಣೆಯಲ್ಲಿ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ನಾಲ್ಕು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು. ನ್ಯಾಯಮೂರ್ತಿ ಹೃಷಿಕೇಶ್ ರಾಯ್ ಮತ್ತು ನ್ಯಾಯಮೂರ್ತಿ ಎಸ್‌ವಿಎನ್ ಭಟ್ಟಿ ಶುಕ್ರವಾರ ಈ ಅರ್ಜಿಯ ವಿಚಾರಣೆ ನಡೆಸಿದರು.

ಯುಪಿ ಸರ್ಕಾರಕ್ಕೆ ನೋಟಿಸ್

ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯ ಮಹತ್ವದ ಹೇಳಿಕೆ ನೀಡಿದೆ. ‘ಪತ್ರಕರ್ತರು ಬರೆದದ್ದು ಸರ್ಕಾರವನ್ನು ಟೀಕಿಸುತ್ತದೆ ಎಂಬ ಕಾರಣಕ್ಕೆ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸಬಾರದು’ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಈ ಅರ್ಜಿಗೆ ಉತ್ತರ ನೀಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಲಾಗಿದೆ. ಪ್ರಕರಣವನ್ನು ನಾಲ್ಕು ವಾರಗಳ ಕಾಲ ಮುಂದೂಡಲಾಯಿತು.

ಈ ನಿಟ್ಟಿನಲ್ಲಿ ಅರ್ಜಿದಾರರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಸೂಚಿಸಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page