Saturday, September 13, 2025

ಸತ್ಯ | ನ್ಯಾಯ |ಧರ್ಮ

ರಾಜಕೀಯ ಪಕ್ಷಗಳ ನಿಯಂತ್ರಣದ ಕುರಿತಾದ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್ ಅಸ್ತು

ರಾಜಕೀಯ ಪಕ್ಷಗಳ ನೋಂದಣಿ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಹೊಸ ನಿಯಮಗಳನ್ನು ಜಾರಿ ಮಾಡುವಂತೆ ಆಯೋಗಕ್ಕೆ, ನಿರ್ದೇಶನ ಕೋರಿ ಸಲ್ಲಿಕೆಯಾಗಿರುವ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಲು ಸುಪ್ರೀಂಕೋರ್ಟ್ ಸಮ್ಮತಿ ನೀಡಿದೆ.

ಜಾತ್ಯತೀತತೆ, ಪಾರದರ್ಶಕತೆ, ರಾಜಕೀಯ ನ್ಯಾಯಕ್ಕೆ ಉತ್ತೇಜನ ನೀಡುವಂತೆ ಪಕ್ಷಗಳಿಗೆ ನಿಯಮಗಳನ್ನು ರೂಪಿಸಬೇಕು ಎಂದು ಕೋರಿ ಅಶ್ವಿನಿ ಕುಮಾರ್ ಉಪಾಧ್ಯಾಯ ಎಂಬವರು ಅರ್ಜಿ ಸಲ್ಲಿಸಿದ್ದರು. ಅರ್ಜಿಗೆ ಸಂಬಂಧಿಸಿ ಸುಪ್ರೀಂ ಕೋರ್ಟ್ ಶುಕ್ರವಾರ ಕೇಂದ್ರ ಸರಕಾರ, ಚುನಾವಣಾ ಆಯೋಗ ಮತ್ತು ಕಾನೂನು ಆಯೋಗಕ್ಕೆ ನೋಟಿಸ್‌ ಜಾರಿ ಮಾಡಿದೆ.

ಜುಲೈ 13 ರಂದು ಇಂಡಿಯನ್ ಸೋಶಿಯಲ್ ಪಾರ್ಟಿ ಮತ್ತು ಯುವ ಭಾರತ್ ಆತ್ಮ ನಿರ್ಭರ್ ದಳದ ಮೇಲೆ ನಡೆಸಿದ ದಾಳಿಗಳ ಬಗ್ಗೆಯೂ ನ್ಯಾಯಾಲಯಕ್ಕೆ ತಿಳಿಸಲಾಯಿತು, ಈ ದಾಳಿಯಲ್ಲಿ ₹500 ಕೋಟಿ ಮೌಲ್ಯದ ಲೆಕ್ಕವಿಲ್ಲದ ಹಣ ಪತ್ತೆಯಾಗಿದೆ ಎಂದು ವರದಿಯಾಗಿದೆ. ಆಗಸ್ಟ್ 12, 2025 ರಂದು, ರಾಷ್ಟ್ರೀಯ ಸರ್ವ ಸಮಾಜ ಪಕ್ಷದ ಪದಾಧಿಕಾರಿಗಳ ನಿವಾಸಗಳಿಂದ ₹271 ಕೋಟಿ ಲೆಕ್ಕವಿಲ್ಲದ ಸಂಪತ್ತು ಪತ್ತೆಯಾಗಿದೆ ಎಂದು ವರದಿಯಾಗಿದೆ. ಈ ಎಲ್ಲಾ ಅಂಶಗಳನ್ನು ಒಳಗೊಂಡಂತೆ ಹೊಸದಾಗಿ ನೊಂದಣಿ ಆಗುವ ರಾಜಕೀಯ ಪಕ್ಷಗಳಿಗೆ ನಿಯಂತ್ರಣ ಹೇರಬೇಕು ಎಂದು ಅರ್ಜಿದಾರರು ಕೋರಿದ್ದರು.

ಈ ಬಗ್ಗೆ ಅರ್ಜಿಗೆ ಸಂಬಂಧಿಸಿ ಸುಪ್ರೀಂ ಕೋರ್ಟ್ ಶುಕ್ರವಾರ ಕೇಂದ್ರ ಸರಕಾರ, ಚುನಾವಣಾ ಆಯೋಗ ಮತ್ತು ಕಾನೂನು ಆಯೋಗಕ್ಕೆ ನೋಟಿಸ್‌ ಜಾರಿ ಮಾಡಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page