Sunday, January 11, 2026

ಸತ್ಯ | ನ್ಯಾಯ |ಧರ್ಮ

ಇಂದು ‘ಅದಾನಿ-ಹಿಂಡೆನ್‌ಬರ್ಗ್’ ಕುರಿತು ಸುಪ್ರೀಂ ಕೋರ್ಟ್ ತೀರ್ಪು

ಹೊಸದಿಲ್ಲಿ, ಜನವರಿ 2: ಅದಾನಿ ಗ್ರೂಪ್‌ನ ಅಕ್ರಮಗಳ ಕುರಿತು ಹಿಂಡೆನ್‌ಬರ್ಗ್ ಗ್ರೂಪ್ ಮಾಡಿರುವ ಆರೋಪಗಳ ಕುರಿತು ನ್ಯಾಯಾಲಯದ ಮೇಲ್ವಿಚಾರಣೆಯ ತನಿಖೆಯ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ಬುಧವಾರ ತನ್ನ ತೀರ್ಪನ್ನು ಪ್ರಕಟಿಸಲಿದೆ.

ಈ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಾಲಯ ಕಳೆದ ವರ್ಷ ನವೆಂಬರ್ 24 ರಂದು ತೀರ್ಪನ್ನು ಕಾಯ್ದಿರಿಸಿತ್ತು.

ಹಿಂಡೆನ್‌ಬರ್ಗ್ ವರದಿಯ ಹಿನ್ನೆಲೆಯಲ್ಲಿ ಅದಾನಿ ಗ್ರೂಪ್ ಕಾಯಿದೆಯನ್ನು ಉಲ್ಲಂಘಿಸಿದೆಯೇ? ಎನ್ನುವುದರ ಕುರಿತು ಕಳೆದ ವರ್ಷ ಮಾರ್ಚ್‌ನಲ್ಲಿ ಸುಪ್ರೀಂ ಕೋರ್ಟ್ ಷೇರು ಮಾರುಕಟ್ಟೆ ನಿಯಂತ್ರಕ ‘ಸೆಬಿ’ಗೆ ತನಿಖೆ ನಡೆಸುವಂತೆ ಆದೇಶ ನೀಡಿತ್ತು. ತನಿಖೆಯನ್ನು ಪೂರ್ಣಗೊಳಿಸಲು ಸೆಬಿ ವಿಳಂಬ ಮಾಡುತ್ತಿದೆ ಎಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ತನಿಖೆಯನ್ನು ಪೂರ್ಣಗೊಳಿಸಲು ಸುಪ್ರೀಂ ಕೋರ್ಟ್ ನೀಡಿರುವ ಗಡುವನ್ನು ಅನುಸರಿಸದಿರುವ ಸೆಬಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಅರ್ಜಿದಾರರು ಕೋರಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page