ಹೊಸದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಜಾಮೀನು ವಿಷಯಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು (ಶುಕ್ರವಾರ) ತೀರ್ಪು ನೀಡಲಿದೆ.
ಸಿಬಿಐ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಈಗಾಗಲೇ ಪೂರ್ಣಗೊಳಿಸಿದೆ. ಶುಕ್ರವಾರ ಜಾಮೀನು ದೊರೆತರೆ ಅರವಿಂದ್ ಕೇಜ್ರಿವಾಲ್ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.
ಸೆ.5ರಂದು ನಡೆದ ವಿಚಾರಣೆಯಲ್ಲಿ ಉಭಯ ಪಕ್ಷಗಳ ವಾದ ಆಲಿಸಿದ ನ್ಯಾಯಮೂರ್ತಿ ಸೂರ್ಯಕಾಂತ್ ಹಾಗೂ ನ್ಯಾಯಮೂರ್ತಿ ಉಜ್ವಲ್ ಭುಯಾನ್ ಅವರನ್ನೊಳಗೊಂಡ ಪೀಠ ಜಾಮೀನು ತೀರ್ಪನ್ನು ಕಾಯ್ದಿರಿಸಿತ್ತು.