ಹೊಸದೆಹಲಿ: ಇಂದು ನಡೆಯಬೇಕಿದ್ದ ಆಮ್ ಆದ್ಮಿ ಪಕ್ಷದ ನಾಯಕ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದೂಡಿದೆ. ಈ ಪ್ರಕರಣದ ವಿಚಾರಣೆ ನಡೆಸಬೇಕಿದ್ದ ಸುಪ್ರೀಂ ಕೋರ್ಟ್ ನ್ಯಾಯಾಧೀಶ ಗಿರುವ ಸಂಜಯ್ ಕುಮಾರ್ ವಿಚಾರಣೆಯಿಂದ ಹಿಂದಕ್ಕೆ ಸರಿದಿದ್ದಾರೆ.
ಆದರೆ ನೂತನ ಪೀಠ ಪ್ರಕರಣದ ವಿಚಾರಣೆಯನ್ನು ಜುಲೈ 15ಕ್ಕೆ ಮುಂದೂಡಿದೆ. ಫೆಬ್ರವರಿ 26ರಂದು ಸಿಸೋಡಿಯಾ ಅವರನ್ನು ಸಿಬಿಐ ಮೊದಲು ಬಂಧಿಸಿತ್ತು. ಅದರ ನಂತರ ಮಾರ್ಚ್ 9ರಂದು ಇಡಿ ಅವರನ್ನು ವಶಕ್ಕೆ ತೆಗೆದುಕೊಂಡಿತು.
ಫೆಬ್ರವರಿ 28ರಂದು ಸಿಸೋಡಿಯಾ ದೆಹಲಿ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದರು. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್‌ನ ತ್ರಿಸದಸ್ಯ ಪೀಠ ವಿಚಾರಣೆ ನಡೆಸಲಿದೆ. ಸಿಬಿಐ ಮತ್ತು ಇಡಿ ಸಲ್ಲಿಸಿದ ಪ್ರಕರಣಗಳಲ್ಲಿ ಸಿಸೋಡಿಯಾಗೆ ಜಾಮೀನು ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.