Home ದೇಶ ಚಂಡೀಗಢ ಮೇಯರ್ ಚುನಾವಣೆ: ಕಟ್ಟುನಿಟ್ಟಿನ ನಿಲುವು ತಾಳಿದ ಸುಪ್ರೀಂ ಕೋರ್ಟ್‌, ಪ್ರಜಾಪ್ರಭುತ್ವದ ಕೊಲೆ ಎಂದ ನ್ಯಾಯಾಧೀಶರು

ಚಂಡೀಗಢ ಮೇಯರ್ ಚುನಾವಣೆ: ಕಟ್ಟುನಿಟ್ಟಿನ ನಿಲುವು ತಾಳಿದ ಸುಪ್ರೀಂ ಕೋರ್ಟ್‌, ಪ್ರಜಾಪ್ರಭುತ್ವದ ಕೊಲೆ ಎಂದ ನ್ಯಾಯಾಧೀಶರು

0

ಹೊಸದೆಹಲಿ, 05 ಫೆಬ್ರವರಿ: ಚಂಡೀಗಢ ಮೇಯರ್ ಚುನಾವಣೆಯಲ್ಲಿ ಚುನಾವಣಾಧಿಕಾರಿ ರಿಗ್ಗಿಂಗ್ ಮಾಡಿರುವ ಆರೋಪದ ಬಗ್ಗೆ ಸುಪ್ರೀಂ ಕೋರ್ಟ್ ಕಠಿಣ ನಿಲುವು ತಳೆದಿದ್ದು, ಇದು ಪ್ರಜಾಪ್ರಭುತ್ವದ ಕೊಲೆ ಎಂದು ಬಣ್ಣಿಸಿದೆ.

ಚುನಾವಣಾ ವೀಡಿಯೋ ವೀಕ್ಷಿಸಿದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠ, ಚುನಾವಣಾಧಿಕಾರಿ ಮತಪತ್ರವನ್ನು ಹೇಗೆ ಹಾಳು ಮಾಡುತ್ತಾರೆ, ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಹೇಳಿದೆ.

ಫೆಬ್ರವರಿ 7ರಂದು ನಡೆಯಲಿರುವ ಚಂಡೀಗಢ ಮುನ್ಸಿಪಲ್ ಕಾರ್ಪೊರೇಷನ್ ಸಭೆಯನ್ನು ಸುಪ್ರೀಂ ಕೋರ್ಟ್ ಮುಂದೂಡಿದೆ. ಅಗತ್ಯ ಬಿದ್ದರೆ ಮತ್ತೊಮ್ಮೆ ಚುನಾವಣೆ ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಬ್ಯಾಲೆಟ್ ಪೇಪರ್ ಮತ್ತು ಮತದಾನದ ವಿಡಿಯೋವನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ಗೆ ಹಸ್ತಾಂತರಿಸಬೇಕು ಎಂದು ನ್ಯಾಯಾಲಯ ಹೇಳಿದೆ.

ಚುನಾವಣೆಯ ವಿಡಿಯೋವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ಲೇ ಮಾಡಿದಾಗ, ಈ ರೀತಿ ಚುನಾವಣೆ ನಡೆಸುತ್ತೀರಾ ಎಂದು ನ್ಯಾಯಾಲಯ ಕೇಳಿದೆ. ಇದು ಪ್ರಜಾಪ್ರಭುತ್ವದ ಅಣಕ. ಚುನಾವಣಾಧಿಕಾರಿ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಚುನಾವಣಾಧಿಕಾರಿಗಳು ಕ್ಯಾಮೆರಾಗಳನ್ನು ಏಕೆ ನೋಡುತ್ತಿದ್ದಾರೆ ಮತ್ತು ಅವರು ಪಲಾಯನ ಮಾಡುವವರಂತೆ ಏಕೆ ಓಡುತ್ತಿದ್ದಾರೆ ಎಂದು ಮುಖ್ಯ ನ್ಯಾಯಮೂರ್ತಿ ಪ್ರಶ್ನಿಸಿದರು.

ವಿಚಾರಣೆ ವೇಳೆ ಆಮ್ ಆದ್ಮಿ ಪಕ್ಷದ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಬಿಜೆಪಿ ಅಭ್ಯರ್ಥಿಯನ್ನು ಚುನಾವಣಾಧಿಕಾರಿಯಾಗಿ ಆಯ್ಕೆ ಮಾಡಿ ಪಕ್ಷಾತೀತವಾಗಿ ವರ್ತಿಸಿ ಕಾಂಗ್ರೆಸ್ ಮತ್ತು ಆಮ್ ಆದ್ಮಿಯ ಎಂಟು ಕೌನ್ಸಿಲರ್‌ಗಳ ಮತಪತ್ರಗಳನ್ನು ಉದ್ದೇಶಪೂರ್ವಕವಾಗಿ ಹಾಳು ಮಾಡಿದ್ದಾರೆ ಎಂದು ಹೇಳಿದರು.

ಈ ಕುರಿತು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ವಿಡಿಯೋ ಕೇವಲ ಏಕಪಕ್ಷೀಯ ಕಥೆಯನ್ನು ಹೇಳಿದೆ. ಸಂಪೂರ್ಣ ವಿಡಿಯೋವನ್ನು ವೀಕ್ಷಿಸಿದ ನಂತರ ನ್ಯಾಯಾಲಯವು ಈ ಬಗ್ಗೆ ಸಮಗ್ರ ದೃಷ್ಟಿಕೋನವನ್ನು ತೆಗೆದುಕೊಳ್ಳುವಂತೆ ಅವರು ಒತ್ತಾಯಿಸಿದರು. ಆಗ ಮುಖ್ಯನ್ಯಾಯಮೂರ್ತಿಗಳು ಈ ಬಗ್ಗೆ ಅಗತ್ಯ ಮಧ್ಯಂತರ ಆದೇಶವನ್ನು ಹೊರಡಿಸಬೇಕಾಗುತ್ತದೆ ಎಂದು ಹೇಳಿದ್ದು, ಅದನ್ನು ಹೈಕೋರ್ಟ್ ಮಾಡಿರಲಿಲ್ಲ.

ಚಂಡೀಗಢ, ಜನವರಿ 30ರಂದು ಚಂಡೀಗಢ ಮಹಾನಗರ ಪಾಲಿಕೆಯ ಮೇಯರ್ ಆಯ್ಕೆಗೆ ತಕ್ಷಣ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದ ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಆಮ್ ಆದ್ಮಿ ಪಕ್ಷದ ಕೌನ್ಸಿಲರ್ ಕುಲದೀಪ್ ಕುಮಾರ್ ಸುಪ್ರೀಂ ಕೋರ್ಟಿನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ. ಆದಾಗ್ಯೂ, ಹೈಕೋರ್ಟ್ ಈ ವಿಷಯದಲ್ಲಿ ನೋಟಿಸ್ ನೀಡಿ ಈ ಪ್ರಕರಣದ ವಿಚಾರಣೆಯನ್ನು ಮೂರು ವಾರಗಳ ನಂತರ ನಿಗದಿಪಡಿಸಿತು.

ಮೇಯರ್ ಆಯ್ಕೆ ಪ್ರಕ್ರಿಯೆ ರದ್ದುಪಡಿಸಿ ಚುನಾವಣೆಗೆ ಸಂಬಂಧಿಸಿದ ಸಂಪೂರ್ಣ ದಾಖಲೆಗೆ ಸೀಲ್ ಮಾಡುವಂತೆ ಕೌನ್ಸಿಲರ್ ಕುಲದೀಪ್ ಕುಮಾರ್ ಮನವಿಯಲ್ಲಿ ಆಗ್ರಹಿಸಿದ್ದು, ಮೇಯರ್ ಅಧಿಕಾರ ಸ್ವೀಕಾರಕ್ಕೆ ನಿಷೇಧ ಹೇರಬೇಕು ಎಂದು ಮನವಿ ಮಾಡಿಕೊಂಡಿದ್ದರು. ಇಡೀ ಚುನಾವಣಾ ಪ್ರಕ್ರಿಯೆಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ತನಿಖೆ ನಡೆಸಿ, ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರ ಉಸ್ತುವಾರಿಯಲ್ಲಿ ಹೊಸದಾಗಿ ಚುನಾವಣೆ ನಡೆಸಲು ಸೂಚನೆ ನೀಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

You cannot copy content of this page

Exit mobile version