Saturday, June 15, 2024

ಸತ್ಯ | ನ್ಯಾಯ |ಧರ್ಮ

ನೀಟ್ ವಿವಾದ: ಇಂದು ಸುಪ್ರೀಂ ವಿಚಾರಣೆ

ದೆಹಲಿ: ನೀಟ್ ಪರೀಕ್ಷೆ ವಿವಾದದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ನಡೆಸಲಿದೆ. ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ನೀಟ್ ಪರೀಕ್ಷೆಗೆ ಸಂಬಂಧಿಸಿದ ಅಕ್ರಮಗಳ ಬಗ್ಗೆ ಭಾರೀ ದೂರುಗಳ ಹಿನ್ನೆಲೆಯಲ್ಲಿ ಇಂದಿನ ವಿಚಾರಣೆ ಮಹತ್ವ ಪಡೆದುಕೊಂಡಿದೆ.

ಪ್ರಶ್ನೆ ಪತ್ರಿಕೆ ಸೋರಿಕೆ, ಗ್ರೇಸ್ ಮಾರ್ಕ್ ಮತ್ತಿತರ ಅಕ್ರಮಗಳ ಬಗ್ಗೆ ವಿಚಾರಣೆ ನಡೆಯುವ ಸಾಧ್ಯತೆ ಇದೆ. ದೇಶಾದ್ಯಂತ ಸರ್ಕಾರಿ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಎಂಬಿಬಿಎಸ್, ಬಿಡಿಎಸ್, ಆಯುಷ್ ಮತ್ತಿತರ ಕೋರ್ಸ್ ಗಳ ಪ್ರವೇಶಕ್ಕೆ ನಡೆಯುವ ನೀಟ್ ಪರೀಕ್ಷೆಯ ದಿನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದು ವ್ಯಾಪಕ ಆತಂಕಕ್ಕೆ ಕಾರಣವಾಗಿತ್ತು.

ಫಲಿತಾಂಶದ ನಂತರ 67 ವಿದ್ಯಾರ್ಥಿಗಳು ಪೂರ್ಣ ಅಂಕಗಳೊಂದಿಗೆ ಪ್ರಥಮ ರ‍್ಯಾಂಕ್‌ ಪಡೆದಿದ್ದು, ಹರ್ಯಾಣದ ಒಂದೇ ಕೇಂದ್ರದಲ್ಲಿ ಬರೆದ ವಿದ್ಯಾರ್ಥಿಗಳು ಅತ್ಯಧಿಕ ಅಂಕ ಗಳಿಸಿರುವುದು ವಿದ್ಯಾರ್ಥಿಗಳು ಹಾಗೂ ಅವರ ಪೋಷಕರಲ್ಲಿ ಆತಂಕ ಮೂಡಿಸಿದೆ.

ಈ ಪರೀಕ್ಷೆಗಳನ್ನು ನಡೆಸುವ ಜವಾಬ್ದಾರಿಯನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ವಹಿಸಿಕೊಂಡಿದೆ. ಪರೀಕ್ಷೆ ನಡೆಸುವ ಹಕ್ಕನ್ನು ರಾಜ್ಯಗಳಿಗೆ ನೀಡಬೇಕೆನ್ನುವ ಚರ್ಚೆ ಈಗ ಜಾರಿಯಲ್ಲಿದೆ.

Related Articles

ಇತ್ತೀಚಿನ ಸುದ್ದಿಗಳು