Saturday, June 15, 2024

ಸತ್ಯ | ನ್ಯಾಯ |ಧರ್ಮ

ಕೇಂದ್ರ ಸರ್ಕಾರಕ್ಕೆ ಸುಪ್ರೀಂ ನೋಟೀಸ್: ಶಾಕ್‌ ಕೊಟ್ಟ ಬಿಜೆಪಿ ಮುಖಂಡ ಸುಬ್ರಹ್ಮಣ್ಯ ಸ್ವಾಮಿ

ನವದೆಹಲಿ: ಭಾರತೀಯ ಜನತಾ ಪಕ್ಷದ ಹಿರಿಯ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿ ಅವರ ಅರ್ಜಿ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್‌ ಇಂದು ಕೇಂದ್ರ ಸರ್ಕಾರ, ಸಿಬಿಐ ಮತ್ತು ಆರ್‌ ಬಿಐಗೆ ನೋಟಿಸ್‌ ಜಾರಿ ಮಾಡಿದೆ.

ಸಾರ್ವಜನಿಕ ಹಣವನ್ನು ಒಳಗೊಂಡ ವಿವಿಧ ಬ್ಯಾಂಕಿಂಗ್‌ ಮತ್ತು ಹಣಕಾಸು ಹಗರಣಗಳಲ್ಲಿ ಆರ್‌ ಬಿಐ ಮತ್ತು ಅದರ ಅಧಿಕಾರಿಗಳ ಪಾತ್ರವನ್ನು ತನಿಖೆಗೆ ಒಪ್ಪಿಸಬೇಕು ಎಂದು ಕೋರಿ ಸುಬ್ರಹ್ಮಣ್ಯಂ ಸ್ವಾಮಿ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು.
ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ಕೇಂದ್ರ ಸರ್ಕಾರ, ಸಿಬಿಐ ಮತ್ತು ಆರ್‌ಬಿಐಗೆ ನೋಟಿಸ್‌ ಜಾರಿ ಮಾಡಿದೆ.

Related Articles

ಇತ್ತೀಚಿನ ಸುದ್ದಿಗಳು