Saturday, May 17, 2025

ಸತ್ಯ | ನ್ಯಾಯ |ಧರ್ಮ

ಪರಿಶಿಷ್ಟ ಜಾತಿಗಳ ವಿವಿಧ ಒಳಮೀಸಲಾತಿ ದತ್ತಾಂಶ ಸಮೀಕ್ಷೆ ಅವಧಿ ವಿಸ್ತರಣೆ

ಶಿವಮೊಗ್ಗ; ಮೇ 16: ಸಮಾಜ ಕಲ್ಯಾಣ ಇಲಾಖೆಯು ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಕುರಿತಂತೆ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನದಾಸ್ ಅಧ್ಯಕ್ಷತೆಯಲ್ಲಿ ಏಕ ವ್ಯಕ್ತಿ ವಿಚಾರಣಾ ಆಯೋಗವನ್ನು ರಚಿಸಲಾಗಿದ್ದು, ಪರಿಶಿಷ್ಟ ಜಾತಿಗಳ ವಿವಿಧ ಒಳಮೀಸಲಾತಿಯನ್ನು ವರ್ಗೀಕರಿಸಿ, ಉಪವರ್ಗೀಕರಣ ಕೈಗೊಳ್ಳಲು ಅವಶ್ಯವಿರುವ ದತ್ತಾಂಶವನ್ನು ಸಂಗ್ರಹಿಸಲು ಕೈಗೊಳ್ಳಲಾದ ಸಮೀಕ್ಷೆಯ ಅವಧಿಯನ್ನು ಮೇ 25 ರವರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆಯವರು ತಿಳಿಸಿದ್ದಾರೆ.

ಮೇ. 05 ರಿಂದ 17ರವರೆಗೆ ನಡೆಯಲಿರುವ ಸಮೀಕ್ಷೆಯನ್ನು ಮೇ 25 ರವರೆಗೆ ಮುಂದುವರೆಸಲಾಗಿದ್ದು, ಈ ಸಮೀಕ್ಷಾ ಸಮಯದಲ್ಲಿ ಮನೆಮನೆಗೆ ಭೇಟಿ ನೀಡಿ ದತ್ತಾಂಶ ಸಂಗ್ರಹಿಸುವುದರಿಂದ ಈ ದಿನಾಂಕಗಳAದು ಮನೆಯ ಹಿರಿಯ ಸದಸ್ಯರು ಹಾಜರಿದ್ದು, ಅಗತ್ಯ ದಾಖಲಾತಿಗಳೊಂದಿಗೆ ಕುಟುಂಬದ ಸಂಪೂರ್ಣ ಮಾಹಿತಿಯನ್ನು ಸಮೀಕ್ಷಾದಾರರಿಗೆ ನೀಡಿ ಸಹಕರಿಸುವಂತೆ ಅವರು ತಿಳಿಸಿರುತ್ತಾರೆ.

ಗಣತಿದಾರರು ಮನೆ-ಮನೆಗೆ ಭೇಟಿ ನೀಡಿ ಸಮೀಕ್ಷೆ ಕೈಗೊಳ್ಳುವ ದಿನಾಂಕ ಮೇ 05 ರಿಂದ 25, ಮತಗಟ್ಟೆ ಪ್ರದೇಶವಾರು ವಿಶೇಷ ಶಿಬಿರಗಳಲ್ಲಿ ಸಮೀಕ್ಷೆ ಕೈಗೊಳ್ಳುವ ದಿನಾಂಕ ಮೇ 26ರಿಂದ 28 ಹಾಗೂ ಸ್ವಯಂ ಘೋಷಣೆ (ಆನ್‌ಲೈನ್ ಮೂಲಕ) ಅವಧಿ ಮೇ 19 ರಿಂದ 28ರವರೆಗೆ ಎಂದು ಅವರು ತಿಳಿಸಿರುತ್ತಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page