Friday, June 14, 2024

ಸತ್ಯ | ನ್ಯಾಯ |ಧರ್ಮ

ತೂಗು ಸೇತುವೆ ದುರಂತ: ನ್ಯಾಯಾಂಗ ತನಿಖೆ ವಿಚಾರಣೆಯನ್ನು ನವೆಂಬರ್‌ 14ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್‌

ಗುಜರಾತ್‌: ಗುಜರಾತ್‌ನ ಮೋರ್ಬಿ ಸೇತುವೆ ಕುಸಿತಕ್ಕೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಬೇಕೆಂದು ಕೋರಿ, ವಕೀಲರೊಬ್ಬರು ಸೋಮವಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು, ಸುಪ್ರೀಂ ಕೋರ್ಟ್‌ ನವೆಂಬರ್‌ 14ಕ್ಕೆ ಮುಂದೂಡಿದೆ.

ಪಶ್ಚಿಮ ಗುಜರಾತ್‌ನ ಮೊರ್ಬಿಯಲ್ಲಿನ ಮಚ್ಚು ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ತೂಗು ಸೇತುವೆಯು ಅಕ್ಟೋಬರ್‌ 30 ಭಾನುವಾರದಂದು ಕುಸಿದಿತ್ತು. ಈ ದುರಂತದಲ್ಲಿ ಕನಿಷ್ಠ 47 ಮಕ್ಕಳು ಸೇರಿದಂತೆ, ಹಲವಾರು ಮಹಿಳೆಯರು ಮತ್ತು ವೃದ್ಧರು ಸೇರಿ ಒಟ್ಟು 135 ಕ್ಕೂ ಹೆಚ್ಚು ಜನ ಮೃತಪಟ್ಟಿದ್ದರು ಎಂದು ಮೂಲಗಳಿಂದ ತಿಳಿದುಬಂದಿತ್ತು.

ಈ ಹಿನ್ನಲೆಯಲ್ಲಿ ಸೇತುವೆ ಕುಸಿತದ ಬಗ್ಗೆ ನ್ಯಾಯಾಂಗ ತನಿಖೆಯಾಗುವಂತೆ ಅರ್ಜಿ ಸಲ್ಲಿಸಲಾಗಿತ್ತು.

ಈ ಕುರಿತು ವಕೀಲರು ಸಲ್ಲಿಸದ ಮನವಿಯಲ್ಲಿ, ಪರಿಸರದ ಕಾರ್ಯಸಾಧ್ಯತೆ ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಹಳೆಯ ಮತ್ತು ಅಪಾಯಕಾರಿ ಸ್ಮಾರಕಗಳು ಮತ್ತು ಸೇತುವೆಗಳ ಸಮೀಕ್ಷೆ ನಡೆಸಲು ಸಮಿತಿಯನ್ನು ರಚಿಸಲು ರಾಜ್ಯ ಸರ್ಕಾರಗಳಿಗೆ ನಿರ್ದೇಶನಗಳನ್ನು ನೀಡುವಂತೆ ಕೂರಲಾಗಿತ್ತು.

ಆದರೆ ಇಂದು ಈ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಕೈಗೆತ್ತಿಕೊಂಡಿದ್ದು, ಅರ್ಜಿಯಲ್ಲಿನ ವಿಚಾರಣೆಯನ್ನು ನವೆಂಬರ್‌ 14ಕ್ಕೆ ನಡೆಸಲಾಗುವುದು ಎಂದು ತಿಳಿಸಿದೆ.

Related Articles

ಇತ್ತೀಚಿನ ಸುದ್ದಿಗಳು