ಸಿಡ್ನಿ: ಆಸ್ಟ್ರೇಲಿಯಾದ ಸಿಡ್ನಿ ನಗರದ ಪ್ರಸಿದ್ಧ ಬಾಂಡಿ ಬೀಚ್‌ನಲ್ಲಿ ಭಾನುವಾರ ಸಂಜೆ ನಡೆದ ಸಾಮೂಹಿಕ ಗುಂಡಿನ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 15 ಕ್ಕೆ ಏರಿಕೆಯಾಗಿದೆ. ಮೃತಪಟ್ಟವರಲ್ಲಿ ಮಕ್ಕಳು ಮತ್ತು ಮಹಿಳೆಯರು ಸೇರಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಹನುಕ್ಕಾ ಹಬ್ಬದ ಆಚರಣೆಗಾಗಿ ಬೀಚ್‌ನ ಪಕ್ಕದಲ್ಲಿ ನೂರಾರು ಯಹೂದಿ ಸಮುದಾಯದವರು ಸೇರಿದ್ದರು. ಈ ಸಮುದಾಯವನ್ನೇ ಗುರಿಯಾಗಿಸಿ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇಬ್ಬರು ಬಂದೂಕುಧಾರಿಗಳು ಕಡಲತೀರದ ಬಳಿ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಪರಿಣಾಮವಾಗಿ ಅಮಾಯಕರು ಬಲಿಯಾಗಿದ್ದು, ಇನ್ನೂ ಕೆಲವರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಬ್ಬರು ದಾಳಿಕೋರರಲ್ಲಿ ಒಬ್ಬನನ್ನು ಸ್ಥಳದಲ್ಲೇ ಪೊಲೀಸರು ಗುಂಡಿಕ್ಕಿ ಕೊಂದಿದ್ದಾರೆ. ಇನ್ನೊಬ್ಬ ದಾಳಿಕೋರನಿಗೆ ಗಂಭೀರ ಗಾಯಗಳಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಆತ ಚೇತರಿಸಿಕೊಳ್ಳುತ್ತಿದ್ದಾನೆ. ದಾಳಿಕೋರರು ತಂದೆ-ಮಗ ಎಂದು ಗುರುತಿಸಲಾಗಿದೆ.
