Saturday, July 26, 2025

ಸತ್ಯ | ನ್ಯಾಯ |ಧರ್ಮ

ದಕ್ಕ್ಷಿಣ ಆಫ್ರಿಕಾ ವಿರುದ್ಧದ ಟಿ-20 ಸರಣಿ: ಭಾರತ ತಂಡದಲ್ಲಿ ಬುಮ್ರಾ ಬದಲಿಗೆ ಸಿರಾಜ್‌ಗೆ ಸ್ಥಾನ

ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಟಿ-20 ಸರಣಿಗೆ ಜಸ್ಪ್ರೀತ್ ಬುಮ್ರಾ ಬದಲಿಗೆ ಮೊಹಮ್ಮದ್ ಸಿರಾಜ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಶುಕ್ರವಾರ ಕಚಿತಪಡಿಸಿದೆ.

ಭಾರತೀಯ ತಂಡದ ಪ್ರಮುಖ ಬೌಲರ್‌ಗಳಲ್ಲಿ ಒಬ್ಬರಾದ ಜಸ್ಪ್ರೀತ್‌ ಬುಮ್ರಾ ಅವರು ದಕ್ಷಿಣ ಆಫ್ರಿಕಾ ವಿರುದ್ಧದ ಟಿ-20 ಸರಣಿಯ ಮೊದಲ ಪಂದ್ಯದಲ್ಲಿ, ಅಭ್ಯಾಸ ನಡೆಸುತ್ತಿರುವ ವೇಳೆ ಬೆನ್ನುನೋವಿನಿಂದ ಬಳಲುತ್ತಿರುವ ಹಿನ್ನಲೆ ಅವರನ್ನು ಸರಣಿಯಿಂದ ಹೊರಗಿಡಲಾಗಿತ್ತು. ಹೀಗಾಗಿ ಬೆನ್ನುನೋವು ಗಂಭೀರವಾಗಿರುವ ಕಾರಣ ಬುಮ್ರಾ ಅವರು ಕನಿಷ್ಠ ಆರು ತಿಂಗಳು ಕಾಲ ವಿಶ್ರಾಂತಿ ಪಡೆಯಲಿದ್ದು, ಆಟದಿಂದ ಹೊರಗುಳಿಯಲಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ.

ಈ ಹಿನ್ನಲೆ ಭಾರತ ತಂಡಕ್ಕೆ ದೊಡ್ಡ ಹಿನ್ನಡೆಯಾಗಲಿದ್ದು, ಟಿ-20 ಸರಣಿಯಲ್ಲಿ ಉಳಿದಿರುವ ಎರಡು ಪಂದ್ಯಗಳಿಗೆ ಬುಮ್ರಾ ಬದಲಿಗೆ ಸಿರಾಜ್‌ ತಂಡದಲ್ಲಿ ಸ್ಥಾನ ಪಡೆಯಲಿದ್ದಾರೆ. ಹೀಗಾಗಿ ಬುಮ್ರಾ ಅವರು ಪ್ರಸ್ತುತ ಬಿಸಿಸಿಐ ವೈದ್ಯಕೀಯ ತಂಡದ ಮೇಲ್ವಿಚಾರಣೆಯಲ್ಲಿದ್ದಾರೆ ಎಂದು ಅಖಿಲ ಭಾರತ ಹಿರಿಯ ಆಯ್ಕೆ ಸಮಿತಿ ತಿಳಿಸಿದೆ ಎಂದು ಬಿಸಿಸಿಐ ಹೇಳಿಕೆಯಲ್ಲಿ ಪ್ರಕಟಿಸಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page