ಕೆಎಂಎಫ್ – Peepal Media

ಕೆಎಂಎಫ್ ಹಾಲಿನ ದರ ಏರಿಕೆ, ನಷ್ಟದ ಆತಂಕ ವ್ಯಕ್ತಪಡಿಸಿದ ಹೆಚ್.ಡಿ‌ ರೇವಣ್ಣ
ಹಾಸನ: ರಾಜ್ಯ ಸರಕಾರವು ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ (ಕೆಎಂಎಫ್)ನಿAದ ಹಾಲು ಮತ್ತು ಮೊಸರಿನ ದರವನ್ನು ಲೀಟರಿಗೆ 4 ರೂ. ಹೆಚ್ಚಿಸಿದ್ದು, ಸರ್ಕಾರದ ಈ ನಿರ್ಧಾರದಿಂದ ಸಂಸ್ಥೆಗೆ ಭಾರಿ ನಷ್ಟವಾಗಲಿದ್ದು, ಇದಕ್ಕೆ ಯಾರು ಜವಬ್ಧಾರರು? ಒಕ್ಕೂಟದಲ್ಲಿ ಹಣ ಮುಗಿಯುವರೆಗೂ ಸಿಎಂ ಆದೇಶ ಪಾಲನೆ ಮಾಡಲಾಗುವುದು ಎಂದು ಹಮುಲ್ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್.ಡಿ. ರೇವಣ್ಣ ಪ್ರಶ್ನೆ ಮಾಡಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ನಗರದ ಡೈರಿ ವೃತ್ತದ ಬಳಿ ಇರುವ ಹಾಸನ ಹಾಲು ಒಕ್ಕೂಟದ ಕಚೇರಿ ಸಭಾಂಗಣದಲ್ಲಿ ಮಾಧ್ಯಮದೊಂದಿಗೆ ಮಾತನಾಡಿ, ಹಾಲು ಹೆಚ್ಚಿಸಿ ಎಂದು ನಿಮಗೆ ಯಾರು ಕೇಳಿದವರು? ನಮ್ಮ ಒಕ್ಕೂಟದಲ್ಲಿ ಪ್ರತಿದಿನ 12,58,000 ಲೀಟರ್ ಹಾಲು ಉತ್ಪಾದನೆಯಾಗುತ್ತದೆ. ಆದರೆ, ಕೇವಲ 1,98,000 ಲೀಟರ್ ಹಾಲು ಮಾತ್ರ ಮಾರಾಟವಾಗುತ್ತಿದೆ. ಇದರ ಜೊತೆಗೆ 1,20,000 ಲೀಟರ್ ಮೊಸರು ಮಾರಾಟವಾಗುತ್ತಿದೆ. ಆದರೆ ಸಂಗ್ರಹವಾಗುವ ಹಾಲಿನಲ್ಲಿ ಪ್ರತಿದಿನ 9,40,000 ಲೀಟರ್ ಹಾಲು ಉಳಿಕೆಯಾಗುತ್ತದೆ. ಮಳೆಗಾಲದಲ್ಲಿ ಈ ಪ್ರಮಾಣ 12,00,000 ಲೀಟರ್‌ಗೆ ಏರಿಕೆಯಾಗುತ್ತದೆ. ಇದರಿಂದ ತಿಂಗಳಿಗೆ 9 ಕೋಟಿ ರೂಪಾಯಿ ನಷ್ಟವಾಗುತ್ತದೆ ಎಂದರು. ಹಾಸನ ಹಾಲು ಒಕ್ಕೂಟದಲ್ಲಿ ಐದುವರೆಯಿಂದ ಆರು ಕೋಟಿ ರೂ ಹಣವಿದ್ದು, ಈ ದುಡ್ಡು ಮುಗಿಯುವವರೆಗೂ ಮುಖ್ಯಮಂತ್ರಿ ಆದೇಶ ಪಾಲಿಸುತ್ತೇವೆ. ಹಾಲಿನ ಧರದ ವಸ್ತು ಸ್ಥಿತಿ ಏನಿದೆ ನಮ್ಮ ಬೋರ್ಡಿನಲ್ಲಿ ಸಭೆ ಮಾಡಿ ತೀರ್ಮಾನ ಮಾಡಲಾಗಿದೆ. ಈ ಬಗಗೆ ಸರಕಾರಕ್ಕೆ ಪತ್ರ ಬರೆದು ಇಲ್ಲಿನ ಒಕ್ಕೂಟದ ಸ್ಥಿತಿ ತಿಳಿಸಲಾಗಿದೆ.

ಮುಖ್ಯಮಂತ್ರಿಗಳ ಮಾತಿಗೆ ಬೆಲೆ ಕೊಟ್ಟು 4 ರೂ. ಹೆಚ್ಚಳ ಮಾಡಲಾಗಿದೆ. ಈ ರೀತಿ ಮುಂದುವರೆದರೇ ತಿಂಗಳಿಗೆ 9 ಕೋಟಿ ರೂ ನಷ್ಟವಾಗಲಿದೆ. ಆದರೆ ಈ ಹೆಚ್ಚಳದಿಂದ ಉಂಟಾಗುವ ನಷ್ಟಕ್ಕೆ ಯಾರು ಜವಾಬ್ದಾರರು ಎಂದು ಅವರು ಪ್ರಶ್ನಿಸಿದರು. 3 ರೂ. ಹೆಚ್ಚಿಸಿ, 2.5 ರೂ. ರೈತರಿಗೆ ನೀಡೋಣ ಎಂದು ಮುಖ್ಯಮಂತ್ರಿಗಳು ಹೇಳಿದ್ದರು. ಆದರೆ, 4 ರೂ. ಹೆಚ್ಚಳ ಮಾಡಿದವರು ಯಾರು?” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು. ಪ್ರತಿದಿನ 36 ಲಕ್ಷ ರೂ. ನಷ್ಟವಾಗುತ್ತಿದ್ದು, ಈ ಬಗ್ಗೆ ಜಿಲ್ಲಾ ಮಂತ್ರಿಗಳು ಸೇರಿದಂತೆ, ರಾಜ್ಯಮಟ್ಟದ ಅಧಿಕಾರಿಗಳ ಗಮನಕ್ಕೂ ತರಲಾಗುವುದು. ಈ ರೀತಿ ಮುಂದುವರೆದರೆ ಸಂಸ್ಥೆಯನ್ನು ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂದು ಎಚ್ಚರಿಸಿದರು.

ಈ ಸಂಸ್ಥೆಯನ್ನು ಹಾಳು ಮಾಡಬೇಡಿ. ಸರ್ಕಾರ ರೈತರಿಗೆ ಕೇವಲ 2 ತಿಂಗಳು ಹೆಚ್ಚುವರಿ ಹಣ ನೀಡುತ್ತಾರೆ, ನಂತರ ನಿಲ್ಲಿಸುತ್ತಾರೆ. ಮೈಸೂರು 5 ಕೋಟಿ, ಮಂಡ್ಯ 7 ಕೋಟಿ, ಶಿವಮೊಗ್ಗ 4.5 ಕೋಟಿ ನಷ್ಟ ಅನುಭವಿಸುತ್ತಿವೆ ಎಂದು ಅಂಕಿ ಅಂಶ ನೀಡಿದರು. ಒಂದು ಸಂಸ್ಥೆಯನ್ನು ಕಟ್ಟುವುದು ಸುಲಭವಲ್ಲ, ಕಟ್ಟಿರುವುದನ್ನು ಉಳಿಸಿಕೊಳ್ಳಬೇಕು ಎಂದು ಅವರು ಈ ಆತಂಕವನ್ನು ಮುಖ್ಯಮಂತ್ರಿಗಳಿಗೆ ತಿಳಿಸಿದ್ದೇನೆ. ನಷ್ಟವಾದರೆ ಯಾರು ಜವಾಬ್ದಾರಿ ಹೊರುತ್ತಾರೆ? ಕೆಎಂಎಫ್ ಅಥವಾ ಸರ್ಕಾರ ನಷ್ಟವನ್ನು ಭರಿಸುತ್ತವೆಯೇ?” ಎಂದು ಅವರು ಪ್ರಶ್ನಿಸಿದರು.ಕೆಲವರು ಮುಖ್ಯಮಂತ್ರಿಗಳ ಹೇಳಿಕೆಯನ್ನು ಉಲ್ಲೇಖಿಸಿ 4 ರೂಪಾಯಿ ದರ ಹೆಚ್ಚಿಸಲು ಒತ್ತಡ ಹೇರಿದ್ದಾರೆ. ತಿಂಗಳಿಗೆ 9 ಕೋಟಿ ರೂಪಾಯಿ ನಷ್ಟದಲ್ಲಿ ಹಾಲು ಮಾರಾಟ ಮಾಡುವುದು ಸಾಧ್ಯವೇ? ಈ ವಸ್ತುಸ್ಥಿತಿಯನ್ನು ಸರ್ಕಾರದ ಗಮನಕ್ಕೆ ತರುತ್ತೇನೆ ಎಂದು ಹೇಳಿದರು. ಈ ಬಗ್ಗೆ ಮುಖ್ಯಮಂತ್ರಿ, ಸರ್ಕಾರದ ಕಾರ್ಯದರ್ಶಿ ಹಾಗೂ ಕೆಎಂಎಫ್‌ಗೆ ಎರಡು ಬಾರಿ ಪತ್ರ ಬರೆದು ತಮ್ಮ ಆತಂಕವನ್ನು ವ್ಯಕ್ತಪಡಿಸಿದ್ದೇನೆ ಎಂದು ಮಾಹಿತಿ ನೀಡಿದರು.