2nd puc – Peepal Media

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ -2 : ವಿಧ್ಯಾರ್ಥಿಗಳಿಗೆ KSRTC ಮತ್ತು BMTC ಯಲ್ಲಿ ಉಚಿತ ಪ್ರಯಾಣ
ಆಗಸ್ಟ್ 21 ರಿಂದ ಸೆಪ್ಟಂಬರ್ 2 ರವರೆಗೆ ದ್ವಿತೀಯ PUC ಪೂರಕ ಪರೀಕ್ಷೆ ಜರುಗಲಿದ್ದು, ಈ ಹಿನ್ನೆಲೆಯಲ್ಲಿ ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳಿಗೆ KSRTC, BMTC ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ನೆರವಾಗಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ಎರಡನೇ ಬಾರಿಗೆ ವಿಶೇಷ ಪೂರಕ ಪರೀಕ್ಷೆಯನ್ನು ನಡೆಸಲಾಗುತ್ತಿದೆ.

ಪರೀಕ್ಷೆಗೆ ಇಲಾಖೆ ಈಗಾಗಲೇ ಕಟ್ಟುನಿಟ್ಟಿನ ಸಿದ್ದತಾ ಕ್ರಮ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಕೆಲವು ಕಡ್ಡಾಯ ನಿಯಮ ಪಾಲನೆ ಮಾಡಲು ಮಂಡಳಿ ತೀರ್ಮಾನಿಸಿದೆ. ನಿಯಮಗಳು ಈ ಕೆಳಗಿನಂತಿವೆ.

1) ಪರೀಕ್ಷಾ ಕೇಂದ್ರಗಳಿಗೆ ಮೊಬೈಲ್ ಮತ್ತು ಇತರೆ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳಿಗೆ ಅವಕಾಶವಿರುವುದಿಲ್ಲ.
2) ಬ್ಲೂಟೂತ್ ಡಿವೈಸ್, ವಾಚ್. ಎಲೆಕ್ಟ್ರಾನಿಕ್ ಕ್ಯಾಲುಕೇಟರ್ ಗೆ ನಿರ್ಬಂಧ ವಿಧಿಸಲಾಗಿದ್ದು, ಸಾಮಾನ್ಯ ಕ್ಯಾಲುಕೇಟರ್ ಗೆ ಮಾತ್ರ ಅನುಮತಿ ನೀಡಲಾಗಿದೆ.
3) ವಸ್ತುಗಳನ್ನು ಹಂಚುವುದು/ ರವಾನಿಸುವುದು ಮತ್ತಿತರ ಚಟುವಟಿಕೆ ಸಂಪೂರ್ಣ ನಿಷೇಧಿಸಿದೆ.
4) ಪರೀಕ್ಷಾ ಕೇಂದ್ರದೊಳಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ, ಚಿತ್ರೀಕರಣ ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ.

ಸುಗಮ ಹಾಗೂ ಶಾಂತಿಯುತವಾಗಿ ನಡೆಯುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ (examination centres) ಸುತ್ತ 200ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ನಿಷೇಧಿತ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಜೆರಾಕ್ಸ್, ಟೈಪಿಂಗ್ ಸೈಬರ್ ಸೆಂಟರ್ ನಿಷೇಧಿಸಲಾಗಿದೆ.

ಸಧ್ಯ ಕೆಎಸ್ಆರ್ಟಿಸಿ ಹಾಗೂ ಬಿಎಂಟಿಸಿ ಸಂಸ್ಥೆಗಳು ದ್ವಿತೀಯ ಪಿಯುಸಿ 2ನೇ ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ವಾಪಸ್ ಆಗುವ ವಿದ್ಯಾರ್ಥಿಗಳು ತಮ್ಮ ಹಾಲ್ ಟಿಕೆಟ್ ತೋರಿಸಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಿದೆ. ವಿದ್ಯಾರ್ಥಿಗಳಿಗೆ KSRTC, BMTC ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ.

2022-23 ನೇ ಸಾಲಿನ ದ್ವಿತಿಯ ಪಿಯುಸಿ ಬೋರ್ಡ್ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ
ಬೆಂಗಳೂರು: ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು ಇಂದು (ಅಕ್ಟೋಬರ್ 21) 2022-23 ನೇ ಸಾಲಿನ ದ್ವಿತೀಯ ಪಿಯುಸಿ ಬೋರ್ಡ್ ಪರೀಕ್ಷೆಗಳಿಗೆ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಪದವಿ ಪೂರ್ವ ಶಿಕ್ಷಣ ಇಲಾಖೆಯ ತಾತ್ಕಾಲಿಕ ವೇಳಾಪಟ್ಟಿಯ ಪ್ರಕಾರ, ಪರೀಕ್ಷೆಗಳು ಮಾರ್ಚ್ 10 ಮತ್ತು ಮಾರ್ಚ್ 29 ರ ನಡುವೆ ನಡೆಯಲಿದ್ದು, ಪರೀಕ್ಷೆಯು ಬೆಳಿಗ್ಗೆ 10:15 ರಿಂದ ಮಧ್ಯಾಹ್ನ 1:30 ರವರೆಗೆ ನಡೆಯಲಿವೆ ಎಂದು ತಿಳಿದುಬಂದಿದೆ.

ಕರ್ನಾಟಕ ಪಿಯು ತಾತ್ಕಾಲಿಕ ಪರೀಕ್ಷೆಯ ವೇಳಾಪಟ್ಟಿ ಹೀಗಿದೆ.

ಮಾರ್ಚ್ 10- ಕನ್ನಡ, ಅರೇಬಿಕ್

ಮಾರ್ಚ್ 11- ಗಣಿತ, ಶಿಕ್ಷಣಶಾಸ್ತ್ರ

ಮಾರ್ಚ್ 13- ಅರ್ಥಶಾಸ್ತ್ರ

ಮಾರ್ಚ್ 14- ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಮನೋವಿಜ್ಞಾನ, ರಸಾಯನಶಾಸ್ತ್ರ, ಮೂಲ ಗಣಿತ

ಮಾರ್ಚ್ 15- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್

ಮಾರ್ಚ್ 16- ಲಾಜಿಕ್, ಬಿಸಿನೆಸ್ ಸ್ಟಡೀಸ್

ಮಾರ್ಚ್ 17- ಮಾಹಿತಿ ಮತ್ತು ತಂತ್ರಜ್ಞಾನ, ಚಿಲ್ಲರೆ ವ್ಯಾಪಾರ, ಆಟೋಮೊಬೈಲ್, ಆರೋಗ್ಯ ರಕ್ಷಣೆ, ಸೌಂದರ್ಯ ಮತ್ತು ಕ್ಷೇಮ

ಮಾರ್ಚ್ 18- ಭೂಗೋಳ, ಜೀವಶಾಸ್ತ್ರ

ಮಾರ್ಚ್ 20- ಇತಿಹಾಸ, ಭೌತಶಾಸ್ತ್ರ

ಮಾರ್ಚ್ 21- ಹಿಂದಿ

ಮಾರ್ಚ್ 23 – ಇಂಗ್ಲಿಷ್

ಮಾರ್ಚ್ 25- ರಾಜ್ಯಶಾಸ್ತ್ರ, ಅಂಕಿಅಂಶ

ಮಾರ್ಚ್ 27- ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂವಿಜ್ಞಾನ, ಗೃಹ ವಿಜ್ಞಾನ

ಮಾರ್ಚ್ 29- ಸಮಾಜಶಾಸ್ತ್ರ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್