40% commission – Peepal Media

40% ಕಮಿಷನ್ ಆರೋಪ: ಅಂಬಿಕಾಪತಿ ಮರಣದಿಂದಾಗಿ ಲೋಕಾಯುಕ್ತದಲ್ಲಿ ಆರೋಪ ಸಾಬೀತಾಗಿಲ್ಲ- ಪ್ರಿಯಾಂಕ್ ಖರ್ಗೆ
ಬೆಂಗಳೂರು: ಲೋಕಾಯುಕ್ತ ವರದಿಯಲ್ಲಿ ಅಂಬಿಕಾಪತಿಯವರು ಮರಣ ಹೊಂದಿರುವ ಕಾರಣ, ಸದರಿಯವರಿಂದ ಹೆಚ್ಚಿನ ಮಾಹಿತಿ ಸಂಗ್ರಹಿಸಲು ಸಾಧ್ಯವಾಗಲಿಲ್ಲ, ಹಾಗಾಗಿ ಅಂಬಿಕಾಪತಿಯವರು ಮಾಡಿರುವ ಆಪಾಧನೆಯು ಮೇಲ್ನೋಟಕ್ಕೆ ಸಾಬೀತಾಗಿರುವುದಿಲ್ಲವೆಂದು ವಿಚಾರಣಾಧಿಕಾರಿಗಳು ವಿಚಾರಣಾ ವರದಿಯನ್ನು ಸಲ್ಲಿಸಿರುತ್ತಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೆ ಇದ್ದ ಬಿಜೆಪಿ ಸರ್ಕಾರದ ಮೇಲೆ ಕಾಂಗ್ರೇಸ್‌ ಮಾಡಿದ್ದ 40% ಕಮಿಷನ್ ಆರೋಪದ ಬಗ್ಗೆ  ತನಿಖೆ ನಡೆಸಿದ ಲೋಕಾಯುಕ್ತರು “ಈ ಆರೋಪ ಸಾಬೀತಾಗಿಲ್ಲ ಎಂದು ಹೇಳಿದ್ದಾರೆ,” ಬಿಜೆಪಿ ಕಾಂಗ್ರೇಸ್‌ ಸರ್ಕಾರದ ಮೇಲೆ ಮುಗಿಬಿದ್ದಿದೆ. ಈ ಹಿನ್ನಲೆಯಲ್ಲಿ ಬಿಜೆಪಿಯ ವಾದಕ್ಕೆ ಉತ್ತರವನ್ನು ನೀಡುತ್ತಾ ಖರ್ಗೆಯವರು, ” 2022 ರ ಅಗಸ್ಟ್‌ 30 ND TV ಗೆ ನೀಡಿದ ಹೇಳಿಕೆಯಲ್ಲಿ ದಿವಂಗತ ಆರ್. ಅಂಬಿಕಾಪತಿ ಹಾಗೂ ಗುತ್ತಿಗೆದಾರರ ಸಂಘದ ಇತರ ಪದಾಧಿಕಾರಿಗಳು ಪಿಡಬ್ಲೂಡಿ, ಆರೋಗ್ಯ, ವಸತಿ, ಉನ್ನತ ಶಿಕ್ಷಣ, ಸಣ್ಣ ನೀರಾವರಿ ಹೀಗೆ ಹಲವು ಇಲಾಖೆಗಳಲ್ಲಿನ ಕಮಿಷನ್ ಹಾಗೂ ಕೋಲಾರ ಜಿಲ್ಲೆಯ ಹಿಂದಿನ ಉಸ್ತುವಾರಿ ಸಚಿವರಾದ ಮುನಿರತ್ನರವರ ವಿರುದ್ಧ ಲಂಚದ ಆರೋಪ ಹಾಗೂ ಕರ್ನಾಟಕ ಖಾಸಗಿ ಶಾಲಾ ಮಾಲೀಕರ ಎರಡು ಸಂಘಟನೆಗಳ ಲಂಚದ ಆರೋಪ, ಅಲ್ಲದೆ ಪಾವಗಡ ಆಸ್ಪತ್ರೆ ನಿರ್ಮಾಣ ಕಾಮಗಾರಿಯಲ್ಲಿ ಲಂಚದ ಅಕ್ರಮದ ಬಗ್ಗೆ ಆರೋಪಿಸಿದ್ದರು. ಆದರೆ ಹಿಂದಿನ ಬಿಜೆಪಿ ಸರ್ಕಾರ ತನಿಖೆಗೆ ವಹಿಸಿದ್ದು ಕೇವಲ ಬಿಬಿಎಂಪಿ ಪೂರ್ವ ವಲಯಕ್ಕೆ ಸಂಬಂಧಿಸಿದ ಆಟದ ಮೈದಾನ ಕಾಮಗಾರಿಯ ಒಂದು ಆರೋಪವನ್ನು ಮಾತ್ರ,” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

“ಲೋಕಾಯುಕ್ತ  ತನಿಖೆಗೆ ವಹಿಸಿದ್ದು 2023 ರ ಮಾರ್ಚ್ 27 ರಂದು, ಆಗ ಬಿಜೆಪಿ ಸರ್ಕಾರವಿತ್ತು. ಈ ಸಂದರ್ಭದಲ್ಲಿ NDTV ಯಲ್ಲಿ ನೀಡಿದ ಹೇಳಿಕೆಯೊಂದನ್ನು ಆಧರಿಸಿ ತನಿಖೆಗೆ ವಹಿಸಿದ ಬಿಜೆಪಿ ಸರ್ಕಾರ ಇನ್ನುಳಿದ ಆರೋಪಗಳನ್ನು ತನಿಖೆಗೆ ವಹಿಸಲಿಲ್ಲ ಏಕೆ? ಇದಲ್ಲದೆ 40% ಕಮಿಷನ್ ಗೆ ಸಂಬಂಧಿಸಿದಂತೆ ಇನ್ನೂ ಹಲವು ವಿಷಯಗಳ ಬಗ್ಗೆ ದಾಖಲೆಗಳೊಂದಿಗೆ ದೂರು ಸಲ್ಲಿಸಿದ್ದರೂ ಏಕೆ ತನಿಖೆಗೆ ವಹಿಸಲು ಗಂಭೀರವಾಗಿ ಪರಿಗಣಿಸಲಿಲ್ಲ?” ಎಂದು ಪ್ರಶ್ನಿಸಿದ್ದಾರೆ.

“ತನಿಖಾಧಿಕಾರಿಯು ತನಿಖೆಯ ವಿಚಾರವಾಗಿ ಅಂಬಿಕಾಪತಿ ಅವರ ಮನೆಗೆ ತೆರಳಿದಾಗ ಅಂಬಿಕಾಪತಿ ಮರಣ ಹೊಂದಿರುತ್ತಾರೆ, ಅವರ ಪುತ್ರನಿಗೆ ತಂದೆ ಮಾಡಿದ್ದ ಆರೋಪದ ಕುರಿತು ಯಾವುದೇ ಮಾಹಿತಿ ಇರುವುದಿಲ್ಲ,, ತನಿಖಾಧಿಕಾರಿ ಅಂಬಿಕಾಪತಿಯವರ ಮರಣ ಪ್ರಮಾಣಪತ್ರವನ್ನು ಪಡೆದು ಹಿಂತಿರುಗುತ್ತಾರೆ. ಕೇವಲ ಬಿಬಿಎಂಪಿ ವ್ಯಾಪ್ತಿಯ ಆಟದ ಮೈದಾನಕ್ಕೆ ಸಂಬಂಧಿಸಿದ ಕೇವಲ ಒಂದು ಕಾಮಗಾರಿಗೆ ಸಂಬಂಧಿಸಿದಂತೆ ಮಾಡಿರುವ ತನಿಖೆ, ಇದು ಬಿಜೆಪಿಯ 40% ಹಗರಣಕ್ಕೆ ಸಿಕ್ಕಿರುವ ಕ್ಲೀನ್ ಚಿಟ್ ಅಲ್ಲ, ಅಥವಾ ಅಕ್ರಮದ ನಿರಾಕರಣೆಯೂ ಅಲ್ಲ, ಆರೋಪ ಮಾಡಿದವರು ಅಕಾಲಿಕ ಮರಣದಿಂದಾಗಿ ಸಾಕ್ಷ್ಯಾಧಾರಗಳ ಕೊರತೆ ಉಂಟಾದ್ದರಿಂದ ಆರೋಪವನ್ನು ತನಿಖೆಯಲ್ಲಿ ಸಾಬೀತು ಮಾಡಲು ಸಾಧ್ಯವಾಗಿರುವುದಿಲ್ಲ. ಗುತ್ತಿಗೆದಾರರು ಮಾಡಿದ್ದ ಇತರ ಗಂಭೀರ ಆರೋಪಗಳ ಬಗ್ಗೆ ತನಿಖೆ ನಡೆಸಲು ಮುಂದಾಗಲೇ ಇಲ್ಲ ಬಿಜೆಪಿ ಸರ್ಕಾರ. ಇದು ಬಿಜೆಪಿಯವರ ಜಾಣ ಕುರುಡುತನವಲ್ಲವೇ?” ಬಿಜೆಪಿ ನಾಯಕರನ್ನು ಖರ್ಗೆ ಪ್ರಶ್ನಿಸಿದ್ದಾರೆ.

ವಿವಿಧ ಇಲಾಖೆಗಳಲ್ಲಿನ  40% ಕಮಿಷನ್ ಆರೋಪದ ಕುರಿತ ಸಮಗ್ರ ತನಿಖೆಗಾಗಿ ಜಸ್ಟಿಸ್ ನಾಗಮೋಹನ್ ದಾಸ್ ಅವರ ನೇತೃತ್ವದಲ್ಲಿ ತನಿಖಾ ಆಯೋಗವನ್ನು ರಚಿಸಲಾಗಿದ್ದು ಪ್ರಸ್ತುತ ತನಿಖೆ ನಡೆಯುತ್ತಿದೆ, ಈ ಆಯೋಗವು ನೀಡುವ ವರದಿಯ ಆಧಾರದ ಮೇಲೆ ” ಬಿಜೆಪಿ ಸರ್ಕಾರದ 40% ಕಮಿಷನ್” ಆರೋಪದ ಕುರಿತ ಸತ್ಯಾಸತ್ಯತೆ ಹೊರಬರಲಿದೆ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ PSI ಹಗರಣ, ಗಂಗಾಕಲ್ಯಾಣ ಹಗರಣ, KKRDB ಹಗರಣ, ಕೋವಿಡ್ ಹಗರಣ ಹಾಗೂ ಇನ್ನಿತರ ಹಗರಣಗಳು ನಡೆದಿದ್ದರೂ ಅವುಗಳನ್ನು ಬಿಜೆಪಿ ನಿರಾಕರಿಸುತ್ತಲೇ ಬಂದಿತ್ತು. ಆದರೆ ಈಗ ಅವೆಲ್ಲಾ ಹಗರಣಗಳು ನಡೆದಿರುವುದು ತನಿಖೆಯಲ್ಲಿ ಮೇಲ್ನೋಟಕ್ಕೆ ಸಾಬೀತಾಗುತ್ತಿವೆ,” ಎಂದು ಹೇಳಿದ್ದಾರೆ.

ಉದಾಹರಣೆಗೆ, 545 PSI ಹಗರಣ ನಡೆದೇ ಇಲ್ಲವೆಂದು ವಾದಿಸುತ್ತಿದ್ದ ಬಿಜೆಪಿಗೆ ಈಗ ಉತ್ತರ ಸಿಕ್ಕಿದೆ. ನಮ್ಮ ಸರ್ಕಾರವು ಮರುಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದೆ. ನ್ಯಾಯಮೂರ್ತಿ  ಮೈಕೆಲ್ ಕುನ್ಹಾ ಆಯೋಗದ ಮಧ್ಯಂತರ ವರದಿಯಲ್ಲಿ ಕೋವಿಡ್ ಅವಧಿಯಲ್ಲಿ ನಡೆದಿದ್ದ ಅಕ್ರಮ ಸಾಬೀತಾಗಿದ್ದು, ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಅಂದಿನ ಆರೋಗ್ಯ ಸಚಿವ ಶ್ರೀ ರಾಮುಲುರವರ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ 1988 ಸೆಕ್ಷನ್ 7 ಹಾಗೂ ಸೆಕ್ಷನ್ 11ರ ಅಡಿ ವಿಚಾರಣೆ ನಡೆಸಬಹುದೆಂದು ವರದಿ ಸಲ್ಲಿಸಿರುತ್ತಾರೆ. KKRDB ಯಲ್ಲಿಯೂ ಸಹ ಹಗರಣ ನಡೆದೇ ಇಲ್ಲ ಎಂದು ಬಿಜೆಪಿಯವರು ಹೇಳುತ್ತಿದ್ದರು, ಆದರೆ ಈಗ ನಿವೃತ್ತ IAS ಅಧಿಕಾರಿ ನೇತೃತ್ವದಲ್ಲಿ ತನಿಖಾ ತಂಡ ರಚಿಸಲಾಗಿದೆ. ಗಂಗಾ ಕಲ್ಯಾಣ ಯೋಜನೆಯಲ್ಲಿನ ಅಕ್ರಮವನ್ನು ನಿರಾಕರಿಸಲಾಗಿತ್ತು, ಆದರೆ ಇಲಾಖಾ ತನಿಖೆಯಲ್ಲಿ ಆರೋಪ ನಡೆದಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಬಿಜೆಪಿಗೆ ಪ್ರತ್ಯುತ್ತರ ನೀಡಿದ್ದಾರೆ.

40% ಕಮೀಷನ್ ಆರೋಪ ನ್ಯಾಯಾಂಗ ತನಿಖೆಗೆ ; ಬಿಜೆಪಿಗೆ ದೊಡ್ಡ ತಲೆನೋವಾದ ಸರ್ಕಾರದ ಆದೇಶ
ಚುನಾವಣೆಗೂ ಮುನ್ನ ಬಾರೀ ಸದ್ದು ಮಾಡಿದ್ದ ಬಿಜೆಪಿ ಸರ್ಕಾರದ ಮೇಲಿನ 40% ಕಮೀಷನ್ ಆರೋಪದ ಪ್ರಕರಣವನ್ನು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನ್ಯಾಯಾಂಗ ತನಿಖೆಗೆ ಒಪ್ಪಿಸಿದೆ. ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದಲ್ಲಿ ಸಮಿತಿ ರಚಿಸಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ವಿವಿಧ ಇಲಾಖೆಗಳಲ್ಲಿ ನಡೆದ 40% ಕಮೀಷನ್ ಹಗರಣ ರಾಜ್ಯ ಮಾತ್ರವಲ್ಲದೆ ದೇಶಾದ್ಯಂತ ದೊಡ್ಡ ಸದ್ದು ಮಾಡಿತ್ತು. ಇದೇ ಕಾರಣಕ್ಕೆ ಬೊಮ್ಮಾಯಿ ನೇತೃತ್ವದ ಸರ್ಕಾರ ಚುನಾವಣೆಯಲ್ಲೂ ದೊಡ್ಡ ಮಟ್ಟದಲ್ಲಿ ಮುಗ್ಗರಿಸಿತ್ತು. ಕಾಂಗ್ರೆಸ್ ಮಾತ್ರವಲ್ಲದೆ ರಾಜ್ಯ ಗುತ್ತಿಗೆದಾರರ ಸಂಘ ಕೂಡ ಬಿಜೆಪಿ ಮೇಲೆ ಈ ಆರೋಪ ಮಾಡಿದ ಹಿನ್ನೆಲೆಯಲ್ಲಿ 40% ಹಗರಣ ಹೆಚ್ಚು ಮಹತ್ವ ಪಡೆದಿತ್ತು.

ಇನ್ನು ಜಸ್ಟೀಸ್ ನಾಗಮೋಹನ್ ದಾಸ್ ಅವರ ನೇತೃತ್ವದ ಸಮಿತಿಗೆ ಈ ಬಗ್ಗೆ ವರದಿ ಸಿದ್ದಪಡಿಸಲು ಒಂದು ತಿಂಗಳ ಕಾಲಾವಕಾಶ ನೀಡಿದೆ. ಹಗರಣದ ಸ್ಥಳ ಹಾಗೂ ದಾಖಲಾತಿಗಳನ್ನು ಪರಿಶೀಲಿಸಿ ವಿವರವಾದ ತನಿಖೆ ನಡೆಸಿ, ಲೋಪದೋಷಗಳ ಮಾಹಿತಿ ಹಾಗೂ ಕಾರಣರಾದ ಆರೋಪಿಗಳನ್ನು ಪತ್ತೆ ಮಾಡಿ ಸಂಪೂರ್ಣ ವರದಿಯನ್ನು ಒಂದು ತಿಂಗಳು ದಿನಗಳ ಒಳಗೆ ನೀಡಬೇಕು. ಹಾಗೇ ಈ ಪ್ರಕರಣಕ್ಕೆ ಸಂಬಂಧಿಸಿದ ಅಗತ್ಯ ಕಡತ, ದಾಖಲೆಗಳನ್ನು ಆಯಾ ಇಲಾಖೆಯ ಅಧಿಕಾರಿಗಳು ಈ ತನಿಖಾ ಸಮಿತಿಗೆ ನೀಡಬೇಕೆಂದು ಆದೇಶದಲ್ಲಿ ಸೂಚಿಸಿದೆ.

ಬಿಟ್‌ ಕಾಯಿನ್‌ ಹಗರಣದ ಕುರಿತು ಮರು ತನಿಖೆಗೆ ಎಸ್ಐಟಿಗೆ ಜವಾಬ್ದಾರಿ ನೀಡಿದ ಆದೇಶ ಹೊರಬಿದ್ದ ಬೆನ್ನಲ್ಲೇ, 40% ಹಗರಣದ ಆರೋಪಕ್ಕೆ ನ್ಯಾಯಾಂಗ ತನಿಖೆಗೆ ಆದೇಶಿಸಿದ್ದು ಹೆಚ್ಚಿನ ಮಹತ್ವ ಪಡೆದುಕೊಂಡಿದೆ. ರಾಜ್ಯ ರಾಜಕೀಯದಲ್ಲಿ ಕೋಲಾಹಲ ಸೃಷ್ಟಿಸಿದ್ದ ಈ ಕಮಿಷನ್‌ ದಂಧೆ ಆರೋಪವನ್ನು ನ್ಯಾಯಾಂಗ ತನಿಖೆಗೊಪ್ಪಿಸುವ ಮೂಲಕ ಮಹತ್ವದ ತೀರ್ಮಾನವನ್ನು ಸರ್ಕಾರ ಕೈಗೊಂಡಿದೆ.

40% ಕಮೀಷನ್ ಹಗರಣ ನ್ಯಾಯಾಂಗ ತನಿಖೆಗೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ
ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ 40% ಕಮೀಷನ್ ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘ ಇಂದು ಕಾಂಗ್ರೆಸ್ ಸರ್ಕಾರ ಬಾಕಿ ಬಿಲ್ ಪಾವತಿಗೆ ತೋರುತ್ತಿರುವ ವಿಳಂಬದ ಕಾರಣಕ್ಕೆ ಪತ್ರಿಕಾಗೋಷ್ಠಿ ಕರೆದಿತ್ತು. ಅದಕ್ಕೂ ಮುನ್ನವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ 40% ಕಮಿಷನ್ ಹಗರಣವನ್ನು (40% Scam) ನ್ಯಾಯಾಂಗ ತನಿಖೆಗೆ ಒಪ್ಪಿಸಿದ್ದೇವೆ ಎಂದು ತಮ್ಮ ಸಾಮಾಜಿಕ ಜಾಲತಾಣದ ಮೂಲಕ ಸುದೀರ್ಘ ಮಾಹಿತಿಯ ಮೂಲಕ ವಿವರಿಸಿದ್ದಾರೆ.

ಕಾಂಗ್ರೆಸ್‌ ಸರ್ಕಾರ ನುಡಿದಂತೆ ನಡೆಯುತ್ತಿದ್ದು, ಕೊಟ್ಟ ಮಾತಿನಂತೆ ಬಿಜೆಪಿ ಸರ್ಕಾರದ 40% ಕಮಿಷನ್ ಹಗರಣವನ್ನು ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಒಪ್ಪಿಸಿದ್ದೇವೆ ಎಂದು ಸರ್ಕಾರದ ವಿರುದ್ಧ ತಿರುಗಿ ಬಿದ್ದ ಗುತ್ತಿಗೆದಾರರಿಗೆ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

ನಾವು ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಹಗರಣಗಳನ್ನು ತನಿಖೆ ಮಾಡಿಸುವ ಭರವಸೆ ನೀಡಿದ್ದೆವು. ನಾಡಿನ ಮತದಾರರು ನಮ್ಮ ಮಾತಿನ ಮೇಲೆ ನಂಬಿಕೆಯಿಟ್ಟು ಬಿಜೆಪಿಯ ಭ್ರಷ್ಟಾಚಾರ, ಕಮಿಷನ್ ಹಾವಳಿ, ತೆರಿಗೆ ಲೂಟಿಯ ವಿರುದ್ಧ ಮತ ಚಲಾಯಿಸಿ 135 ಸ್ಥಾನಗಳಲ್ಲಿ ನಮ್ಮ‌ ಅಭ್ಯರ್ಥಿಗಳನ್ನು ಗೆಲ್ಲಿಸಿ ಸುಭದ್ರ, ಸುಸ್ಥಿರ ಸರ್ಕಾರ ರಚನೆಗೆ ಅವಕಾಶ ನೀಡಿದ್ದಾರೆ. ಈಗ ಜನರಿಗೆ ನೀಡಿದ್ದ ವಚನ ಪಾಲನೆ ನಮ್ಮ ಕರ್ತವ್ಯವಾಗಿದ್ದು ಬಿಜೆಪಿ ಸರ್ಕಾರದ 40% ಕಮಿಷನ್ ಹಗರಣವನ್ನು ನಿವೃತ್ತ ನ್ಯಾಯಮೂರ್ತಿ ಬಿ. ವೀರಪ್ಪ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಒಪ್ಪಿಸಿದ್ದೇವೆ ಎಂದು ತಿಳಿಸಿದ್ದಾರೆ‌‌.

“ಬಿಜೆಪಿ ಅವಧಿಯಲ್ಲಿ ಕಾಮಗಾರಿಯನ್ನೇ ನಡೆಸದೆ, ಹಳೆಯ ಕಾಮಗಾರಿಗಳಿಗೆ, ಇನ್ನು ಕೆಲವು ಕಡೆ ಅರ್ಧಂಬರ್ದ ಕೆಲಸ ಮಾಡಿ ಬಿಲ್ ಹಣ ಪಡೆಯಲಾಗಿದೆ. ನಿವೃತ್ತ ನ್ಯಾಯಮೂರ್ತಿ ಬಿ. ವೀರಪ್ಪ ನೇತೃತ್ವದಲ್ಲಿ ನ್ಯಾಯಾಂಗ ಸಮಿತಿಯು ಈ ಎಲ್ಲಾ ಹಗರಣಗಳ ಕುರಿತು ತನಿಖೆ ನಡೆಸುತ್ತಿದ್ದು, ತನಿಖೆ ಪೂರ್ಣವಾಗಿ ವರದಿ ಬರುವ ಮೊದಲೇ ಬಾಕಿಯಿರುವ ಬಿಲ್ ಹಣ ಬಿಡುಗಡೆ ಮಾಡುವುದು ಸಮಂಜಸವಲ್ಲ” ಎಂದು ಬಿಲ್ ಪಾವತಿ ವಿಳಂಬಕ್ಕೆ ಕಾರಣ ನೀಡಿದ್ದಾರೆ.

“ನ್ಯಾಯಯುತವಾಗಿ ಕಾಮಗಾರಿ ಮಾಡಿದ ಯಾವೊಬ್ಬ ಗುತ್ತಿಗೆದಾರನಿಗೂ ಅನ್ಯಾಯವಾಗಲು ನಮ್ಮ ಸರ್ಕಾರ ಬಿಡುವುದಿಲ್ಲ. ಈ ಬಗ್ಗೆ ಗುತ್ತಿಗೆದಾರರಿಗೆ ಭಯ ಬೇಡ.. ಆದರೆ ಉಪ್ಪು ತಿಂದವರು ನೀರು ಕುಡಿಯಬೇಕಲ್ಲವೇ?” ಎಂದು ಕಿಚಾಯಿಸಿದ್ದಾರೆ.

“ನಮ್ಮ ಸರ್ಕಾರದ ವಿರುದ್ಧ ಮಾಜಿ ಸಚಿವರಾದ ಆರ್. ಅಶೋಕ್ ಅವರು ಮಾಡಿರುವ 15% ಕಮಿಷನ್ ಆರೋಪ ಸತ್ಯಕ್ಕೆ ದೂರವಾದದ್ದೇ ಆದರೂ ಅದರಲ್ಲಿ ಅವರು ಕಮಿಷನ್ ದರವನ್ನು 40% ನಿಂದ 15% ಗೆ ಇಳಿಸಿರುವುದು ಸಂತೋಷದ ವಿಷಯ. ಅಶೋಕ್ ಅವರ ಈ ಹೇಳಿಕೆಯಿಂದ ಬಿಜೆಪಿ ಸರ್ಕಾರಕ್ಕಿಂತ ಕಾಂಗ್ರೆಸ್ ಸರ್ಕಾರ ಉತ್ತಮ ಎಂಬುದು ಅವರ ಮನಸಿನಲ್ಲೇ ಇದೆ ಎನ್ನುವುದನ್ನು ತೋರಿಸುತ್ತದೆ” ಎಂದು ಬಿಜೆಪಿ ನಾಯಕರ ಧೋರಣೆ ಬಗ್ಗೆ ವ್ಯಂಗ್ಯವಾಡಿದ್ದಾರೆ.

“ನಮ್ಮ ಮೇಲಿನ ಆರೋಪಗಳನ್ನು ಸವಾಲಿನಂತೆ ಸ್ವೀಕರಿಸಿ, ಈ ಅಗ್ನಿಪರೀಕ್ಷೆಯಲ್ಲಿ ಗೆದ್ದುಬಂದು ನಮ್ಮದು ಬರೀ ಉತ್ತಮವಲ್ಲ ಅತ್ಯುತ್ತಮ, ಪಾರದರ್ಶಕ, ಜನಪರ ಸರ್ಕಾರ ಎಂಬುದನ್ನು ನಾಡಿನ ಜನತೆಯೆದುರು ಸಾಬೀತು ಮಾಡುತ್ತೇವೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂದೇಶದಲ್ಲಿ ತಿಳಿಸಿದ್ದಾರೆ.

“ರಾಜ್ಯ ಸರ್ಕಾರ ಗುತ್ತಿಗೆದಾರರಿಗೆ ಬಾಕಿ ಬಿಲ್ ಹಣ ಪಾವತಿ ಮಾಡುತ್ತಿಲ್ಲ, ಹೀಗಾಗಿ ರಾಹುಲ್ ಗಾಂಧಿಯವರು ಮಧ್ಯ ಪ್ರವೇಶಿಸಿ ಬಿಲ್ ಹಣ ಬಿಡುಗಡೆ ಮಾಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒತ್ತಾಯಿಸಿದ್ದಾರೆ. ಆದರೆ ರಾಜ್ಯ ಸರ್ಕಾರಗಳಿಗೆ ಸೂಚನೆ, ನಿರ್ದೇಶನ ನೀಡುವ ಅಧಿಕಾರವಿರುವುದು ದೇಶದ ಪ್ರಧಾನಿಗಳಿಗೆ, ನರೇಂದ್ರ ಮೋದಿ ಅವರು ಮಾಡಬೇಕಿರುವ ಕೆಲಸವನ್ನು ರಾಹುಲ್ ಗಾಂಧಿಯವರಿಗೆ ಮಾಡಿ ಎಂದು ಒತ್ತಾಯಿಸುತ್ತಿರುವುದು ನೋಡಿದರೆ ಸ್ವತಃ ಬೊಮ್ಮಾಯಿಯವರಿಗೆ ಮೋದಿ ಅವರ ಕಾರ್ಯದಕ್ಷತೆ ಬಗ್ಗೆ ನಂಬಿಕೆ ಇದ್ದಂತೆ ಕಾಣುತ್ತಿಲ್ಲ” ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ದೋರಣೆ ಬಗ್ಗೆ ವ್ಯಂಗ್ಯವಾಡಿದ್ದಾರೆ.

“ಈಗಾಗಲೇ ಕರ್ನಾಟಕ ರಾಜ್ಯ ಸಣ್ಣ ಮತ್ತು ಮಧ್ಯಮ ಗುತ್ತಿಗೆದಾರರು ಹಾಗೂ ಬಿಬಿಎಂಪಿ ಗುತ್ತಿಗೆದಾರರ ಸಂಘದವರು ಬಾಕಿ ಬಿಲ್ ಹಣ ಬಿಡುಗಡೆಗೆ ಸಂಬಂಧಿಸಿದಂತೆ ನನ್ನೊಂದಿಗೆ ಚರ್ಚಿಸಿದ್ದಾರೆ, P.O.W ಕಾಮಗಾರಿಗಳ ಬಿಲ್ ಅನ್ನು ಬಿಡುಗಡೆ ಮಾಡುವಂತೆ ಸೂಚನೆಯನ್ನು ನೀಡಲಾಗಿದೆ. ಕಾಮಗಾರಿಗಳ ಬಿಲ್ ಬಿಡುಗಡೆಗೆ ಸಂಬಂಧಿಸಿದಂತೆ ಇರುವ ಕೆಲವು ಸಾಮಾನ್ಯ ಪ್ರಕ್ರಿಯೆಗಳು ಮುಗಿದ ಕೂಡಲೇ ಈ ಹಣವನ್ನು ಬಿಡುಗಡೆ ಮಾಡಲಾಗುತ್ತದೆ” ಎಂದು ಗುತ್ತಿಗೆದಾರರಿಗೆ ಅಭಯ ನೀಡುವ ಮಾತನ್ನಾಡಿದ್ದಾರೆ.

“ಈ ನಡುವೆ ಕೆಲವೇ ಕೆಲವು ಗುತ್ತಿಗೆದಾರರು ತಮ್ಮ ಸ್ವಾರ್ಥ ಹಾಗೂ ದುರುದ್ದೇಶದ ಈಡೇರಿಕೆಗಾಗಿ ರಾಜ್ಯ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿದ್ದಾರೆಂದು ಸ್ವತಃ ಕರ್ನಾಟಕ ರಾಜ್ಯ ಸಣ್ಣ ಮತ್ತು ಮಧ್ಯಮ ಗುತ್ತಿಗೆದಾರರು ಹಾಗೂ ಬಿಬಿಎಂಪಿ ಗುತ್ತಿಗೆದಾರರ ಸಂಘದವರೇ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ. ನಾವು ಕಮಿಷನ್ ಹಿಂದೆ ಬಿದ್ದವರಲ್ಲ, ಕಮಿಷನ್ ಹಗರಣಗಳ ಹಿಂದಿರುವ ಭ್ರಷ್ಟರ ಬೆನ್ನು ಬಿದ್ದಿದ್ದೇವೆ ಎನ್ನಲು ಇದಕ್ಕಿಂತ ಬೇರೆ ಯಾವ ಸಾಕ್ಷಿ ಬೇಕು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಒಟ್ಟಾರೆ ಸರ್ಕಾರ ಮತ್ತು ಗುತ್ತಿಗೆದಾರರ ನಡುವಿನ ತಿಕ್ಕಾಟ ನೋಡಿದರೆ, ಹಿಂದಿನ ಬಿಜೆಪಿ ಸರ್ಕಾರದ 40% ಕಮೀಷನ್ ನ ತನಿಖೆ ಮತ್ತೆ ಬಿಜೆಪಿ ಕೊರಳಿಗೇ ಉರುಳಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಸಿಎಂ ಕಚೇರಿಯಿಂದ ಪತ್ರಕರ್ತರಿಗೆ ಲಂಚ ನೀಡಿದ ವರದಿಯ ಬಗ್ಗೆ ತನಿಖೆಯಾಗಬೇಕು: ಕಾಂಗ್ರೆಸ್‌ ಒತ್ತಾಯ
ಬೆಂಗಳೂರು : ಪತ್ರಕರ್ತರಿಗೆ ಮುಖ್ಯಮಂತ್ರಿಗಳ ಕಚೇರಿಯಿಂದ ಸಿಹಿಯ ಜೊತೆಗೆ 2.5 ಲಕ್ಷ ರೂಪಾಯಿ ನಗದು ಕೊಡುಗೆಯಾಗಿ ನೀಡಿರುವ ಸುದ್ದಿ ಎಲ್ಲಡೆ ವರದಿಯಾಗಿದ್ದು, ಈ ಕುರಿತು ಟ್ವೀಟ್‌ ಮಾಡಿರುವ ರಾಜ್ಯ ಕಾಂಗ್ರೆಸ್‌ ಸಿಎಂ ಕಚೇರಿಯಿಂದ ಪತ್ರಕರ್ತರಿಗೆ ಲಂಚ ನೀಡಿದ ವರದಿಯ ಬಗ್ಗೆ ತನಿಖೆಯಾಗಬೇಕು ಎಂದು ಒತ್ತಾಯ ಮಾಡಿದೆ.

ಮಾಧ್ಯಮಗಳ ಪತ್ರಕರ್ತರಿಗೆ, ಸಂಪಾದಕರಿಗೆ ಮುಖ್ಯಮಂತ್ರಿಗಳ ಕಚೇರಿಯಿಂದ ದೀಪಾವಳಿ ಗಿಫ್ಟ್‌ ಆಗಿ ಸಿಹಿ ತಿಂಡಿಯೊಂದಿಗೆ ಲಕ್ಷಗಟ್ಟಲೆ ಹಣ ನೀಡಿರುವ ಕುರಿತು ʻಪೀಪಲ್‌ ಮೀಡಿಯಾʼ ಇಂದು ಬೆಳಿಗ್ಗೆ ಸ್ಫೋಟಕ ವರದಿ ಮಾಡಿತ್ತು.

ಈ ಕುರಿತು ಟ್ವೀಟ್‌ ಮಾಡಿರುವ ರಾಜ್ಯ ಕಾಂಗ್ರೆಸ್‌ ಘಟಕ, ʼಸಿಎಂ ಕಚೇರಿಯಿಂದ ಪತ್ರಕರ್ತರಿಗೆ ಲಂಚ ನೀಡಿದ ವರದಿಯ ಬಗ್ಗೆ ತನಿಖೆಯಾಗಬೇಕು. ಆ ಹಣ ಯಾರದ್ದು? ಸರ್ಕಾರದ್ದೇ? ಬಿಜೆಪಿ ಪಕ್ಷದ್ದೇ? ಮುಖ್ಯಮಂತ್ರಿಗಳದ್ದೇ? 40% ಕಮಿಷನ್ ಆ ಹಣದ ಮೂಲವೇ? ಪಡೆದ ಲಂಚವು ಕೊಡುವ ಲಂಚವಾಗಿ ಮಾರ್ಪಟ್ಟಿದೆಯೇ? ನಿಮ್ಮ ಕಚೇರಿಯಲ್ಲಿ ನಡೆದದ್ದಕ್ಕೆ ನೀವೇ ಉತ್ತರದಾಯಿ, ತನಿಖೆಯಾಗಬೇಕಲ್ಲವೇ?ʼ ಎಂದು ಕಾಂಗ್ರೆಸ್‌ ಕಿಡಿಕಾರಿದೆ.

ಇದನ್ನೂ ಓದಿ : ➤➤ಪತ್ರಕರ್ತರಿಗೆ ಲಕ್ಷಗಟ್ಟಲೆ ದುಡ್ಡು: ಸಿಎಂ ಕಚೇರಿಗೆ ಪತ್ರ ಬರೆದ ಪತ್ರಿಕಾ ಸಂಸ್ಥೆ

➤➤ಪತ್ರಕರ್ತರಿಗೆ ಹಣ ಹಂಚಿಕೆ: ಲೋಕಾಯುಕ್ತ ತನಿಖೆಗೆ ಹಿರಿಯ ಪತ್ರಕರ್ತರ ಆಗ್ರಹ

➤➤ಸಿಎಂ ಕಚೇರಿಯ ಗಿಫ್ಟ್‌ ಹಣ ನಿರಾಕರಿಸಿದ ಕನ್ನಡಪ್ರಭ

ಬಿಜೆಪಿಯವರು ದೇಶಭಕ್ತರೂ ಅಲ್ಲ, ಧರ್ಮ ರಕ್ಷಕರೂ ಅಲ್ಲ, 40% ಕಮಿಷನ್ ಕಳ್ಳರು: ರಾಹುಲ್‌ ಗಾಂಧಿ
ಮೈಸೂರು: ಬಿಜೆಪಿಯವರು ದೇಶಭಕ್ತರೂ ಅಲ್ಲ, ಧರ್ಮ ರಕ್ಷಕರೂ ಅಲ್ಲ, 40% ಕಮಿಷನ್‌ ಕಳ್ಳರು ಎಂದು ರಾಷ್ಟ್ರೀಯ ಕಾಂಗ್ರೆಸ್‌ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಬಿಜೆಪಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು.

ರಾಜ್ಯದಲ್ಲಿನ ಭಾರತ ಐಕ್ಯತಾ ಯಾತ್ರೆಯ ಎರಡನೇ ದಿನ(ಶನಿವಾರ) ಬೇಗೂರಿನಿಂದ ನಂಜನಗೂಡು ಮೂಲಕ ತಾಂಡವಪುರ ಗ್ರಾಮಕ್ಕೆ ಆಗಮಿಸಿದ ಅವರು ವರುಣಾ ಕ್ಷೇತ್ರದ ಚಿಕ್ಕಯ್ಯನ ಚತ್ರ ಗ್ರಾಮದ ಬಳಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು.

ದೇಶದ ಮತ್ತು ಧರ್ಮದ ರಕ್ಷಣೆ ಹೆಸರಲ್ಲಿ ಮೂರನೇ ವ್ಯಕ್ತಿಗಳು ಬರುತ್ತಾರೆ. ನಿಮ್ಮ ಕುಟುಂಬವನ್ನು ಹೊಡೆಯುವ ಕೆಲಸ ಮಾಡುತ್ತಾರೆ ಮತ್ತೆ ನಿಮ್ಮ ಮನೆಗೆ ಬಂದು 40% ಹಣವನ್ನು ತೆಗೆದುಕೊಂಡು ಹೋಗುತ್ತಾರೆ. ಆ ವ್ಯಕ್ತಿಗಳನ್ನು ನೀವು ದೇಶ ಭಕ್ತರು ಎಂದು ಕರಿಯುತ್ತೀರೋ, ಧರ್ಮ ರಕ್ಷಕರು ಎಂದು ಕರಿಯುತ್ತಿರೋ ಅಥವಾ ಕಳ್ಳರೆಂದು ಕರಿಯುತ್ತಿರೋ ಎಂದು ಬಿಜೆಪಿ ಪಕ್ಷದ ಕುರಿತು ರಾಹುಲ್‌ ಗಾಂಧಿ ಟೀಕಿಸಿದರು.

ಮುಂದುವರೆದು ಮಾತನಾಡಿದ ಅವರು, ಇಲ್ಲಿ ಯಾರು ರಾಜಕೀಯ ಮಾಡುತ್ತಿದ್ದಾರೋ ಅವರೆಲ್ಲ ದೇಶ ಭಕ್ತರಲ್ಲ ಹಾಗೆ ಧರ್ಮ ರಕ್ಷಕರೂ ಅಲ್ಲಾ 40% ಕಳ್ಳರು ಎಂದು ರಾಹುಲ್‌ ಗಾಂಧಿ ಹೇಳಿದರು.

ಬೋರ್ಡ್‌ ಹಾಕಿಸಬೇಕಿರುವುದು ಸರ್ಕಾರಿ ಕಚೇರಿಗಳಿಗಲ್ಲ ಸಚಿವರ ಮನೆ ಮುಂದೆ: ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ವಿವಿಧ ರಾಜಕೀಯ ಪಕ್ಷಗಳು ಮತ್ತು ಸರ್ಕಾರಗಳ ವಿರುದ್ಧ 10ರಿಂದ 40% ಕಮಿಷನ್‌ ಭ್ರಷ್ಟಾಚಾರದ ಆಪಾದನೆ ಕೇಳಿಬರುತ್ತಿರುವ ಹಿನ್ನಲೆ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ʼನನಗೆ ಲಂಚ ಕೊಡಬೇಕಿಲ್ಲ ನಾನು ಭ್ರಷ್ಟ ಅಧಿಕಾರಿ ಆಗಲಾರೆ ಎಂಬ ಶಿರ್ಷಿಕೆಯ ನಾಮಫಲಕಗಳನ್ನು ಕಡ್ಡಾಯವಾಗಿ ಹಾಕುವಂತೆ ಸರ್ಕಾರ ಹೊರಡಿಸಿರುವ ಅಧಿಕೃತ ಆದೇಶದ ಕುರಿತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು ʼನನಗೆ ಲಂಚ ಕೊಡಬೇಕಾಗಿಲ್ಲ, ನಾನು ಭ್ರಷ್ಟ ಅಧಿಕಾರಿಯಾಗಲಾರೆʼ ಎಂದು ಸರ್ಕಾರಿ ಕಚೇರಿಗಳಲ್ಲಿ ರಾಜ್ಯ ಬಿಜೆಪಿ ಸರ್ಕಾರ ಬೋರ್ಡ್ ಹಾಕಿಸುತ್ತಂತೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ಮೊದಲು ನಿಮ್ಮ ಮತ್ತು ಸಚಿವರ ಕಚೇರಿಗಳು ಹಾಗೂ ಮನೆ ಮುಂದೆ ಈ ಬೋರ್ಡ್ ಹಾಕಿಸಿ ಎಂದು ಟೀಕಿಸಿದ್ದಾರೆ.

ಸರ್ಕಾರಿ ಗುತ್ತಿಗೆದಾರರು ಲಂಚದ ಆರೋಪ ಮಾಡಿರುವುದು ಸಚಿವರ ಮೇಲೆ, ಅಧಿಕಾರಿಗಳ ಮೇಲೆ ಅಲ್ಲ. ಅಧಿಕಾರಿಗಳನ್ನು ತೋರಿಸಿ ಲಂಚ-ಕಮಿಷನ್ ಆರೋಪದಿಂದ ತಪ್ಪಿಸಿಕೊಳ್ಳುವ ಪ್ರಯತ್ನ ಬೇಡ. ಲಂಚಾವತಾರ ನಾಟಕದಲ್ಲಿ ಅಧಿಕಾರಿಗಳದ್ದು ಪೋಷಕ ಪಾತ್ರ, ಬಿಜೆಪಿ ಸರ್ಕಾರದ ಇಲಾಖಾ ಸಚಿವರದ್ದೇ ಮುಖ್ಯ ಪಾತ್ರ ಎಂದು ವಾಗ್ದಾಳಿ ನಡೆಸಿದ್ದಾರೆ.

ಸಚಿವರಿಂದ ರಕ್ಷಣೆಯ ಅಭಯ ಇಲ್ಲದೆ ಯಾವ ಅಧಿಕಾರಿಯೂ ಲಂಚಕ್ಕೆ ಕೈಯೊಡ್ಡುವ ಸಾಹಸ ಮಾಡುವುದಿಲ್ಲ. ಸಚಿವರು ಪ್ರಾಮಾಣಿಕವಾಗಿದ್ದಾಗ ಸರ್ಕಾರಿ ಅಧಿಕಾರಿಗಳು ಕೂಡಾ ಪ್ರಾಮಾಣಿಕವಾಗಿರುತ್ತಾರೆ. ಸಚಿವರು ಭ್ರಷ್ಟರಾದಾಗ “ಯಥಾ ರಾಜಾ ತಥಾ ಪ್ರಜಾ” ಅಷ್ಟೆ ಎಂದು ಸಿದ್ದರಾಮಯ್ಯ ದೂರಿದ್ದಾರೆ.

ಬೊಮ್ಮಾಯಿ ಅವರೇ, ಈ ಬೋರ್ಡ್ ಬರೆಸಿ ಹಾಕುವ ನಾಟಕಗಳನ್ನೆಲ್ಲ ನಿಲ್ಲಿಸಿ. ಮೊದಲು 40% ಕಮಿಷನ್ ಆರೋಪವೂ ಸೇರಿದಂತೆ ಸಚಿವರುಗಳ ಮೇಲಿನ ಭ್ರಷ್ಟಾಚಾರದ ಆರೋಪಗಳ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶ ಹೊರಡಿಸಿ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ಸರ್ಕಾರಿ ಕಚೇರಿಗಳಲ್ಲಿ “ಲಂಚ ಕೊಡಬೇಕಾಗಿಲ್ಲ” ಎಂಬ ಬೋರ್ಡ್ ಅಳವಡಿಸುವ ಮೊದಲು ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಿ. ನೊಂದ ಜನರು ದೂರು ಕೊಟ್ಟರೆ ಭ್ರಷ್ಟ ಅಧಿಕಾರಿಗಳ ವಿರುದ್ಧ ತಕ್ಷಣ ಕ್ರಮಕೈಗೊಳ್ಳಿ ಎಂದು ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ.

ಸರ್ಕಾರಿ ಶಾಲೆಗಳಿಗೆ 27,360 ಕೋಟಿ ಬಿಡುಗಡೆ ವಿಚಾರ : ಸಾರ್ವಜನಿಕರ ಟೀಕೆ
ಬೆಂಗಳೂರು :  ಬಿಜೆಪಿ ಸರ್ಕಾರ ಯುವಜನರ ಉಜ್ವಲ ಭವಿಷ್ಯಕ್ಕಾಗಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ 27,360 ಕೋಟಿ ರೂ ಬಿಡುಗಡೆ ಮಾಡುವ ಮುಖಾಂತರ ಶೈಕ್ಷಣಿಕ ಕ್ರಾಂತಿಗೆ ನಾಂದಿ ಹಾಡಿದೆ. ಜೊತೆಗೆ ಕೌಶಲ್ಯಗಳನ್ನು ಹೆಚ್ಚಿಸುವ ಮಹತ್ವಾಕಾಂಕ್ಷೆ ಮತ್ತು ನವಭಾರತದ ಭವಿಷ್ಯ ಯುವಜನರ ಕೈಯ್ಯಲ್ಲಿರುತ್ತದೆ ಎಂದು ಮೋದೀಜಿಯವರಿಗೆ ಗೊತ್ತಿದೆ ಎಂದು ರಾಜ್ಯ ಬಿಜೆಪಿ ಸರ್ಕಾರ ಟ್ವೀಟ್‌ ಮಾಡಿದೆ.

ಈ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಕೆಲವರು ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ 40% ಕಮೀಷನ್‌ ಹೊಡೆಯುವುದಕ್ಕೆ ಈ ಅಭಿವೃದ್ಧಿ ಘೋಷಣೆ ಎಂದು ಬಿಜೆಪಿ ಸರ್ಕಾರಕ್ಕೆ ಟೀಕಿಸಿದ್ದಾರೆ.