5 Guarantee – Peepal Media

ಗ್ಯಾರಂಟಿ ಯೋಜನೆಗಳಿಗೆ ಐದು ವರ್ಷಗಳ ವಾರಂಟಿ ಇದೆ : ಡಿಸಿಎಂ ಡಿ.ಕೆ. ಶಿವಕುಮಾರ್
ನಮ್ಮ ಗ್ಯಾರಂಟಿ ಯೋಜನೆಗಳಿಗೆ ಐದು ವರ್ಷಗಳ ವಾರಂಟಿ ಇದೆ. ಇದಕ್ಕೆ ಅಗತ್ಯವಾದ ಅನುದಾನವನ್ನು ಬಜೆಟ್ ನಲ್ಲಿ ಇಡಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

“ಫ್ಯಾನ್, ಕುಕ್ಕರ್ ಗಳಿಗೆ ಒಂದು ವರ್ಷದ ವಾರಂಟಿ ಇದ್ದರೆ, ನಮಗೆ ಜನ ಐದು ವರ್ಷಗಳ ವಾರಂಟಿ ನೀಡಿದ್ದಾರೆ. ಈ ವಾರಂಟಿಯನ್ನು 10 ವರ್ಷಗಳಿಗೆ ನೀಡುವಂತೆ ದೇವಾಲಯಗಳಿಗೆ ಭೇಟಿ ನೀಡಿ ಪ್ರಾರ್ಥಿಸುತ್ತಿದ್ದೇನೆ” ಎಂದು ಹೇಳಿದರು.

ಪ್ರಯತ್ನ ವಿಫಲವಾಗಬಹುದು, ಆದರೆ ಪ್ರಾರ್ಥನೆ ವಿಫಲ ಆಗುವುದಿಲ್ಲ. ಪ್ರಾರ್ಥನೆಗೆ ಫಲ ಖಂಡಿತವಾಗಿ ಸಿಗುತ್ತದೆ. ಹೀಗಾಗಿ ನಾನು ಧರ್ಮ ಯುದ್ಧ ಆರಂಭವಾಗುವ ಮುನ್ನ ಪ್ರಮುಖ ದೇವಸ್ಥಾನಗಳಿಗೆ ಭೇಟಿ ನೀಡಿ, ನಮ್ಮ ಪಕ್ಷ ಹಾಗೂ ರಾಜ್ಯದ ಜನರ ಪರವಾಗಿ ಪ್ರಾರ್ಥನೆ ಸಲ್ಲಿಸುತ್ತಿದ್ದೇನೆ. ಈ ನಾಡು ಸುಭಿಕ್ಷವಾಗಲಿ, ಒಳ್ಳೆಯ ಆಡಳಿತ ನೀಡುವ ಶಕ್ತಿ ನೀಡಲಿ ಎಂದು ಕೇಳಿಕೊಂಡಿದ್ದೇನೆ. ನಾವು ನುಡಿದಂತೆ ನಡೆದಿರುವುದು ಕೂಡ ನಮ್ಮ ಪ್ರಾರ್ಥನೆಯ ಫಲ.” ಎಂದು ಹೇಳಿದ್ದಾರೆ.

ತಂಗಡಗಿ ಅವರನ್ನು ಲೀಡರ್ ಮಾಡುತ್ತಿದ್ದಾರೆ:
ಸಚಿವ ಶಿವರಾಜ್ ತಂಗಡಗಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಅವರು ಆಡುಭಾಷೆಯಲ್ಲಿ ಕಪಾಳಕ್ಕೆ ಹೊಡೆಯಿರಿ ಎಂದು ಹೇಳಿರಬಹುದು. ಇದೇನು ದೊಡ್ಡ ವಿಚಾರವಲ್ಲ. ಇದನ್ನೇ ಇಟ್ಟುಕೊಂಡು ತಂಗಡಗಿ ಅವರನ್ನ ಮಾಧ್ಯಮಗಳಲ್ಲಿ ಹೈಲೈಟ್ ಮಾಡಿದರೆ, ತಂಗಡಗಿ ಅವರನ್ನು ದೊಡ್ಡ ಲೀಡರ್ ಆಗಿ ಮಾಡುತ್ತಿದ್ದಾರೆ, ಮಾಡಲಿ” ಎಂದರು.

ಸುರೇಶ್ ಪ್ರತಿ ಮನೆಗೂ ಗೊತ್ತು
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಗ್ಗೆ ಕೇಳಿದಾಗ, “2013ರಲ್ಲೂ ಬಿಜೆಪಿ, ಜೆಡಿಎಸ್ ಹೊಂದಾಣಿಕೆ ಮೂಲಕ ದೇವೇಗೌಡರ ಸೊಸೆಯನ್ನು ಕಣಕ್ಕಿಳಿಸಿದ್ದವು. ಆಗಲೂ ಇದೇ ಪರಿಸ್ಥಿತಿ ಇತ್ತು. ಆದರೂ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಜನ ಸುರೇಶ್ ಅವರನ್ನು ಗೆಲ್ಲಿಸಿದ್ದರು. ಆಗಲೂ ಸಿದ್ದರಾಮಯ್ಯ ಅವರ ಸರ್ಕಾರ ಇತ್ತು. ಈಗ ಸುರೇಶ್ ಅವರು ಮಾಡಿರುವ ಜನಸೇವೆ ಕೂಡ ಅವರ ಬೆನ್ನಿಗೆ ಇದೆ. ಸುರೇಶ್ ಪ್ರತಿ ಪಂಚಾಯ್ತಿ ಸದಸ್ಯನಂತೆ ಕ್ಷೇತ್ರದ ಜನರ ಸೇವೆ ಮಾಡಿದ್ದಾರೆ. ಸುರೇಶ್ ಪ್ರತಿ ಮನೆಗೂ ಗೊತ್ತು. ಹೀಗಾಗಿ ಜನ ತೀರ್ಮಾನ ಮಾಡುತ್ತಾರೆ” ಎಂದು ತಿಳಿಸಿದರು.

ಗ್ಯಾರಂಟಿ ಯೋಜನೆ: ಪ್ರಧಾನಿ ನರೇಂದ್ರ ಮೋದಿಗೆ ಸಿ ಎಂ ಸಿದ್ದರಾಮಯ್ಯ ತರಾಟೆ
ಕರ್ನಾಟಕ ಮಾದರಿ ಅಭಿವೃದ್ಧಿ ಅನುಸರಿಸಲು ಸಲಹೆ ನೀಡಿದ ಸಿಎಂ

ಸ್ವಾರ್ಥಕ್ಕಾಗಿ ಘೋಷಿಸಿದ ಗ್ಯಾರೆಂಟಿ ಯೋಜನೆ ಜಾರಿಯಿಂದ ಕರ್ನಾಟಕ ಸರ್ಕಾರದ ಬಳಿ ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲ ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಕರ್ನಾಟಕದ ಬಿಜೆಪಿ ನಾಯಕರೇ ಗ್ಯಾರಂಟಿ ಯೋಜನೆ ಜಾರಿಗೆ ಪಟ್ಟು ಹಿಡಿದಿದ್ದಾರೆ, ಆದರೆ ನೀವು ನೋಡಿದರೆ ಹೀಗೆ ಹೇಳುವುದು ವ್ಯತಿರಿಕ್ತವಾಗಿದೆ ಎಂದು ಕಾಲೆಳೆದಿದ್ದಾರೆ.

ಮಂಗಳವಾರದ ದಿನ ಪ್ರಧಾನಿ ನರೇಂದ್ರ ಮೋದಿ ಪುಣೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ ನಡೆಸಿ, ಕರ್ನಾಟಕ ಮತ್ತು ರಾಜಸ್ಥಾನದಲ್ಲಿ ಕಾಂಗ್ರೆಸ್ ಘೋಷಿಸಿದ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಸ್ತಾಪಿಸಿ “ಕರ್ನಾಟಕ ಮತ್ತು ರಾಜಸ್ಥಾನದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರಗಳನ್ನು ತರಾಟೆಗೆ ತೆಗೆದುಕೊಂಡ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಆಡಳಿತವು ತಪ್ಪು ಕೈಗೆ ಹೋದಾಗ ನಾಗರಿಕರು ಮತ್ತು ಸಮಾಜವು ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಸರ್ಕಾರದ ನಿಲುವನ್ನು ಟೀಕಿಸಿದ್ದರು. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರಧಾನಿಯವರ ಮಾತಿಗೆ ಕೌಂಟರ್ ಕೊಟ್ಟು ಟೀಕಿಸಿದ್ದಾರೆ.

“ಕರ್ನಾಟಕದ ಗ್ಯಾರಂಟಿ (ಉಚಿತ) ಯೋಜನೆಗಳಿಂದಾಗಿ ರಾಜ್ಯದ ಖಜಾನೆ ಬರಿದಾಗಲಿದೆ ಮತ್ತು ಅಭಿವೃದ್ದಿಗೆ ಹಣ ಇಲ್ಲದಂತಾಗಿದೆ ಎಂದು ಕಾಳಜಿ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು. ನರೇಂದ್ರ ಮೋದಿಯವರೇ, ಇದು ನಿಮ್ಮ ವೈಯಕ್ತಿಕ ಅಭಿಪ್ರಾಯವೇ, ಪ್ರಧಾನಿಯವರ ಅಭಿಪ್ರಾಯವೇ? ಇಲ್ಲವೆ ಪಕ್ಷದ ಅಭಿಪ್ರಾಯವೇ? ಎನ್ನುವುದನ್ನು ದಯವಿಟ್ಟು ಸ್ಪಷ್ಟಪಡಿಸಬೇಕೆಂದು ವಿನಂತಿ ಮಾಡುತ್ತಿದ್ದೇನೆ” ಎಂದು ಪ್ರಶ್ನೆ ಮಾಡಿದ್ದಾರೆ.

ನಂತರ “ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುವುದಾದರೆ ನಿಮ್ಮ ಮತ್ತು ನಿಮ್ಮ ಪಕ್ಷದ ನಿಲುವನ್ನು ಸ್ಪಷ್ಟಪಡಿಸಿ. ಕರ್ನಾಟಕದ ಬಿಜೆಪಿ ನಾಯಕರಿಗೂ ನಮ್ಮ ಗ್ಯಾರಂಟಿ ಯೋಜನೆಗಳನ್ನು ಸಾರ್ವಜನಿಕವಾಗಿ ವಿರೋಧಿಸಲು ನಿರ್ದೇಶನ ನೀಡಿ. ಮುಂದಿನ ಲೋಕಸಭಾ ಚುನಾವಣೆಯನ್ನು ಗ್ಯಾರಂಟಿ ಯೋಜನೆಗಳ ವಿಷಯವನ್ನೇ ಮುಂದಿಟ್ಟುಕೊಂಡು ಎದುರಿಸಲು ನಾವು ಸಿದ್ಧರಿದ್ದೇವೆ, ನೀವು ಸಿದ್ಧರಿದ್ದರೆ ಹಾಗೆಂದು ಘೋಷಿಸಿಬಿಡಿ.” ಎಂದು ಸವಾಲು ಹಾಕಿದ್ದಾರೆ.

“ಇಲ್ಲಿ ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ತಕ್ಷಣ ಜಾರಿಗೊಳಿಸಬೇಕೆಂದು ಕರ್ನಾಟಕದ ಬಿಜೆಪಿ ನಾಯಕರು ಒಂದೇ ಸಮನೆ ನಮ್ಮ ಬೆನ್ನು ಹತ್ತಿದ್ದಾರೆ. ಬಡವರಿಗೆ ನೀಡುವ ಹೆಚ್ಚುವರಿ ಅಕ್ಕಿಯಲ್ಲಿ ಒಂದು ಕಾಳು ಕಡಿಮೆಮಾಡಿದರೂ ಹೋರಾಟ ನಡೆಸುವುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಗುಡುಗುತ್ತಲೇ ಇದ್ದಾರೆ. ಈ ಬಗ್ಗೆ ನಿಮ್ಮ ಅಭಿಪ್ರಾಯ ಏನು?” ಎಂದು ಪ್ರಧಾನಿ ನರೇಂದ್ರ ಮೋದಿಗೆ ಪ್ರಶ್ನೆ ಹಾಕಿದ್ದಾರೆ.

ಹಾಗೆಯೇ “ಯುಗಾದಿ, ಗಣೇಶ ಚತುರ್ಥಿ ಮತ್ತು ದೀಪಾವಳಿ ಹಬ್ಬಗಳ ಸಮಯದಲ್ಲಿ ವರ್ಷಕ್ಕೆ ಮೂರು ಗ್ಯಾಸ್ ಸಿಲಿಂಡರ್ ಮತ್ತು ಬಿಪಿಎಲ್ ಕುಟುಂಬಗಳಿಗೆ ಅರ್ಧ ಲೀಟರ್ ನಂದಿನ ಹಾಲು ಉಚಿತವಾಗಿ ನೀಡುತ್ತೇವೆ ಎಂದು ಇತ್ತೀಚಿನ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಬಿಡುಗಡೆಗೊಳಿಸಿದ್ದ ಪ್ರಣಾಳಿಕೆಯಲ್ಲಿ ಕರ್ನಾಟಕದ ಬಿಜೆಪಿ ಭರವಸೆ ನೀಡಿತ್ತು. ಇದು ಫ್ರೀಬಿ, ರೇವ್ಡಿ ಯೋಜನೆಗಳಲ್ಲವೇ?” ಎಂದು ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಘೋಷಿಸಿದ ಪ್ರಣಾಳಿಕೆ ಅಂಶಗಳ ಪ್ರಸ್ತಾಪಿಸಿ ಪ್ರಶ್ನೆ ಹಾಕಿದ್ದಾರೆ.

ಇನ್ನು ಚುನಾವಣೆ ಹಿನ್ನಲೆಯಲ್ಲಿ ಮಧ್ಯಪ್ರದೇಶ ಬಿಜೆಪಿ ಘೋಷಿಸಿದ ಅಂಶಗಳ ಬಗ್ಗೆ ಪ್ರಸ್ತಾಪಿಸಿ “ವಿಧಾನಸಭಾ ಚುನಾವಣೆ ಎದುರಿಸಲಿರುವ ಮಧ್ಯಪ್ರದೇಶದ ಮುಖ್ಯಮಂತ್ರಿಗಳು ಹೆಣ್ಣುಮಕ್ಕಳ ಖಾತೆಗೆ ಮಾಸಿಕ 1000 ರೂಪಾಯಿ ಜಮೆ ಮಾಡುವ ಲಾಡ್ಲಿ-ಬೆಹನಾ ಯೋಜನೆಯ ಘೋಷಣೆ ಮಾಡಿದ್ದಾರೆ. ಇದನ್ನು 3000 ರೂಪಾಯಿಗೆ ಹೆಚ್ಚಿಸುವ ಭರವಸೆ ನೀಡಿದ್ದಾರೆ. ಇದು ಉಚಿತ ಯೋಜನೆ ಅಲ್ಲವೇ?” ಎಂದು ಟೀಕಿಸಿದ್ದಾರೆ.

“ಕೇಂದ್ರ ಸರ್ಕಾರದ್ದೇ ಯೋಜನೆಯಾಗಿರುವ  ರೈತರ ಖಾತೆಗೆ ವಾರ್ಷಿಕ ಆರು ಸಾವಿರ ರೂಪಾಯಿಗಳನ್ನು ಜಮೆ ಮಾಡುವ ಕಿಸಾನ್ ಸಮ್ಮಾನ್ ಯೋಜನೆಯನ್ನು ನೀವು ಹೇಗೆ ವ್ಯಾಖ್ಯಾನಿಸುತ್ತೀರಿ? ನಾನು ಐದು ಕಿಲೋ ಅಕ್ಕಿಯನ್ನು ಹೆಚ್ಚುವರಿಯಾಗಿ ನೀಡಿದರೆ ಅದರಿಂದ ರಾಜ್ಯದ ಖಜಾನೆ ಬರಿದಾಗಲಿದೆ ಎನ್ನುವುದು ನಿಮ್ಮ ಅಭಿಪ್ರಾಯವಾಗಿದ್ದರೆ, ಐದು ಕಿಲೋ ಅಕ್ಕಿಯನ್ನು ಉಚಿತವಾಗಿ ನೀಡುವ ಪಿಎಂ ಗರೀಬ್ ಅನ್ನ ಕಲ್ಯಾಣ ಯೋಜನೆಯನ್ನು ಯಾವ ಗುಂಪಿಗೆ ಸೇರಿಸುತ್ತೀರಿ?” ಎಂದು ಅಕ್ಕಿ ವಿತರಣೆ ಬಗ್ಗೆಯೂ ಸಿದ್ದರಾಮಯ್ಯ ಪ್ರಸ್ತಾಪಿಸಿ ನರೇಂದ್ರ ಮೋದಿಯವರನ್ನ ಟೀಕಿಸಿದ್ದಾರೆ.

“ಉಚಿತ ಸ್ವರೂಪದ ಎಂಟು ಯೋಜನೆಗಳನ್ನು ಕೇಂದ್ರ ಸರ್ಕಾರ ಅಂದಾಜು 1.25 ಲಕ್ಷ ಕೋಟಿ ವೆಚ್ಚದಲ್ಲಿ ಅನುಷ್ಠಾನಗೊಳಿಸುತ್ತಿದೆ. ಉಚಿತ ಯೋಜನೆಗಳನ್ನು ವಿರೋಧಿಸುತ್ತಿರುವ ನೀವು ಈ ಯೋಜನೆಗಳನ್ನು ಹೇಗೆ ಸಮರ್ಥಿಸುತ್ತೀರಿ? ಡಬಲ್ ಎಂಜಿನ್ ಸರ್ಕಾರದ ಜನವಿರೋಧಿ ಆಡಳಿತದಿಂದ ಬೇಸತ್ತು ಹೋಗಿರುವ ಕರ್ನಾಟಕದ ಜನತೆ ನಮ್ಮ ಗ್ಯಾರಂಟಿ ಯೋಜನೆಗಳಿಗೆ ಜನಾದೇಶವನ್ನು ನೀಡಿ ಬಿಜೆಪಿಯನ್ನು ತಿರಸ್ಕರಿಸಿದ್ದಾರೆ. ನುಡಿದಂತೆ ನಡೆಯುವ ಬದ್ಧತೆ ಹೊಂದಿರುವ ನಾವು ಕೊಟ್ಟ ಭಾಷೆಯನ್ನು ಉಳಿಸುವ ಪ್ರಯತ್ನ ಮಾಡುತ್ತಿದ್ದೇವೆ.” ಎಂದು ನರೇಂದ್ರ ಮೋದಿಯವರನ್ನು ಕಟುವಾಗಿ ಟೀಕಿಸಿದ್ದಾರೆ.

ಇನ್ನು ಬೆಲೆ ಏರಿಕೆ ಬಗ್ಗೆ ವಿಚಾರ ಪ್ರಸ್ತಾಪಿಸಿ “ಬೆಲೆ ಏರಿಕೆ ಮತ್ತು ನಿರುದ್ಯೋಗಗಳಿಂದಾಗಿ ವಿಪರೀತ ಆರ್ಥಿಕ ಒತ್ತಡಕ್ಕೆ ಸಿಕ್ಕಿ ಕೈಖಾಲಿ ಮಾಡಿಕೊಂಡಿರುವ ಜನಸಾಮಾನ್ಯರನ್ನು ಅರ್ಥಿಕ ಹೊರೆಯಿಂದ ಪಾರು ಮಾಡಲು, ಸಾಲದ ಶೂಲದಿಂದ ಕೆಳಗಿಳಿಸಲು ಮತ್ತು ಸಾಮಾಜಿಕ ಭದ್ರತೆಯನ್ನು ಒದಗಿಸಲು ಇಡೀ ದೇಶಕ್ಕೆ ಕರ್ನಾಟಕ ಮಾದರಿಯ ಆಡಳಿತದ ಅವಶ್ಯಕತೆ ಇದೆ.” ಎಂದು ನರೇಂದ್ರ ಮೋದಿಯನ್ನು ಟೀಕಿಸಿದ್ದಾರೆ.

ಮನೆ ಯಜಮಾನಿಗೆ 2000 ರೂ: ಅರ್ಜಿ ಸಲ್ಲಿಸೋದು ಹೇಗೆ?
ಈಗಾಗಲೇ ‘ಶಕ್ತಿ ಯೋಜನೆ’ ಹೆಸರಿನ ಅಡಿಯಲ್ಲಿ ರಾಜ್ಯದ ಎಲ್ಲಾ ಮಹಿಳೆಯರಿಗೂ ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣವನ್ನು ಅನುಷ್ಠಾನಕ್ಕೆ ತಂದ ಕಾಂಗ್ರೆಸ್ ಸರ್ಕಾರ, ಈಗ ‘ಗೃಹಲಕ್ಷ್ಮಿ’ ಯೋಜನೆಗೆ ಮಾರ್ಗಸೂಚಿ ಹೊರಡಿಸಿದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬಿಡುಗಡೆ ಮಾಡಿರುವ ಪ್ರಸ್ತಾವನೆಯಲ್ಲಿ ‘ಗೃಹಲಕ್ಷ್ಮಿ’ ಯೋಜನೆಯ ಫಲಾನುಭವಿಗಳು ಯಾರು, ಯಾವ ರೀತಿಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಬಹುದು, ನಂತರ ಯಾವಾಗ ಗೃಹಲಕ್ಷ್ಮಿ ಯೋಜನೆ ಅನುಷ್ಠಾನಕ್ಕೆ ಬರಲಿದೆ ಎಂಬ ಬಗ್ಗೆ ತಿಳಿಸಿದೆ.

ಮೇ 20 ರಂದು ಕರೆದ ಸಂಪುಟ ಸಭೆಯಲ್ಲಿ ಅನುಮೋದನೆಗೊಂಡ ಗೃಹಲಕ್ಷ್ಮಿ ಯೋಜನೆಯಲ್ಲಿ ಪ್ರತಿ ಕುಟುಂಬದ ಯಜಮಾನಿಗೆ 2,000 ರೂಪಾಯಿಯ ಮಾಸಿಕ ಭತ್ಯೆ ನೀಡುವ ಬಗೆಗಿನ ಪ್ರಸ್ತಾಪದಲ್ಲಿ ಒಂದಷ್ಟು ನಿಯಮಗಳನ್ನು ಹೊರಡಿಸಲಾಗಿದೆ. ಅದರಂತೆ

* ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ವಿತರಿಸುವ ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ಗುರುತಿಸಿಕೊಂಡ ಮಹಿಳೆ ಈ ಯೋಜನೆಯ ಅರ್ಹ ಫಲಾನುಭವಿ ಆಗಿರುತ್ತಾರೆ.

* ಒಂದು ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರು ಇದ್ದಲ್ಲಿ ಒಬ್ಬ ಮಹಿಳೆಗೆ ಮಾತ್ರ ಯೋಜನೆ ಅನ್ವಯಿಸತಕ್ಕದ್ದು.

* ಯೋಜನೆಯ ಫಲಾನುಭವಿಗಳು ಇದೇ ಜೂನ್ 15 ರಿಂದ ಜುಲೈ 15 ರ ವರೆಗೆ ಅರ್ಜಿ ಸಲ್ಲಿಸಬಹುದು.

* ಅರ್ಜಿದಾರರು ಸೇವಾಸಿಂಧು ಪೋರ್ಟಲ್ ಅಥವಾ ತಾವೇ ಖುದ್ದು ಅಧಿಕಾರಿಗಳ ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದು.

* ಯೋಜನೆಯ ಸೌಲಭ್ಯ ಪಡೆಯುವ ಅರ್ಜಿದಾರರ ಬ್ಯಾಂಕ್ ಖಾತೆಯ ವಿವರ ಮತ್ತು ಆಧಾರ್ ಕಾರ್ಡ್ ಗಳನ್ನು ಜೋಡಣೆ ಮಾಡಬೇಕಿದೆ.

* ಜುಲೈ 15 ರ ನಂತರ ಸಲ್ಲಿಕೆಯಾದ ಅರ್ಜಿಗಳನ್ನು ಪರಿಶೀಲಿಸಿ, ಆಯ್ಕೆಗೊಂಡ ಫಲಾನುಭವಿಗಳಿಗೆ ಆಗಸ್ಟ್ 15 ರಂದು ಅವರ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಲಾಗುವುದು.

* ಅರ್ಜಿಯಲ್ಲಿನ ಅಂಶಗಳು ತಪ್ಪೆಂದು ಕಂಡುಬಂದಲ್ಲಿ ಅರ್ಜಿದಾರರು ಅಲ್ಲಿಯವರೆಗೆ ತಗೆದುಕೊಂಡ ಹಣವನ್ನು ವಸೂಲಿ ಮಾಡಿ, ಸೂಕ್ತ ಕ್ರಮ ತಗೆದುಕೊಳ್ಳಲಾಗುವುದು.

* ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವವರು, ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಹೆಸರಿನಲ್ಲಿ ಅರ್ಜಿ ಸಲ್ಲಿಸಬೇಕು‌.

* ಅರ್ಜಿಯನ್ನು ಗ್ರಾಮ ಒನ್ ಕೇಂದ್ರ, ಬೆಂಗಳೂರು ಒನ್ ಕೇಂದ್ರ, ಸೈಬರ್ ಕೆಫೆಗಳ ಮೂಲಕ ಸಲ್ಲಿಸಬಹುದು‌.

* ಭೌತಿಕವಾಗಿ ಅರ್ಜಿ ಸಲ್ಲಿಸುವವರು ತಮ್ಮ ಸಮೀಪದ ನಾಡ ಕಛೇರಿ ಮೂಲಕ ಅರ್ಜಿ ಸಲ್ಲಿಸಬಹುದು.

* ಗೃಹಲಕ್ಷ್ಮಿ ಅರ್ಜಿಗಳನ್ನು ಪರಿಶೀಲಿಸಿ ಮಂಜೂರಾತಿ ನೀಡಲು ಸಂಬಂಧಿಸಿದ ತಾಲ್ಲೂಕಿನ ಶಿಶು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳನ್ನು ಈ ಯೋಜನೆಯ ಅಧಿಕಾರಿಗಳು ಎಂದು ಮಂಜೂರಾತಿ ಪ್ರಾಧಿಕಾರದ ಅಧಿಕಾರಿಗಳೆಂದು ಪರಿಗಣಿಸಲಾಗಿದೆ.

ಅದರಂತೆ ಜೂನ್ 15 ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಜುಲೈ 15 ಕ್ಕೆ ಕೊನೆಯ ದಿನವಾಗಿದೆ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.