AAP Bangalore Spokesperson Usha Mohan – Peepal Media

ಗಂಭೀರ ಖಾಯಿಲೆಯ ಲಕ್ಷಣಗಳಿವೆ, ಆದ್ರೂ ನಾಡಿದ್ದು ಜೈಲಿಗೆ ಹೋಗ್ತಿನಿ: ಕೇಜ್ರಿವಾಲ್‌
ನವದೆಹಲಿ: ನನ್ನ ದೇಹದೊಳಗೆ ಗಂಭಿರ ಖಾಯಿಲೆಗಳ ಲಕ್ಷಣಗಳಿವೆ. ಆದರೂ ನಾಡಿದ್ದು  ಜೂನ್‌ 2ರಂದು ಜೈಲಿಗೆ ಹೋಗಿ ಶರಣಾಗ್ತಿನಿ. ದೇಶದ ಸರ್ವಾಧಿಕಾರಿಗೆ ಬುದ್ಧಿ ಕಲಿಸುವುದಕ್ಕಾಗಿ ನಾನು ಮತ್ತೆ ಜೈಲಿಗೆ ಹೋಗಲಿದ್ದೇನೆ ಎಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, ‘ನನ್ನನ್ನು ಎಷ್ಟು ದಿನ ಜೈಲಿನಲ್ಲಿ ಇರಿಸಲಾಗುತ್ತದೆ ಎಂದು ನನಗೆ ತಿಳಿದಿಲ್ಲ. ನಾಡಿದ್ದು ತಿಹಾರ್ ಜೈಲಿನಲ್ಲಿ ಪೊಲೀಸರ ಮುಂದೆ ಶರಣಾಗುತ್ತೇನೆ ಎಂದು ಶುಕ್ರವಾರ ಹೇಳಿದ್ದಾರೆ.

ಮೇ 10 ರಿಂದ ಮಧ್ಯಂತರ ಜಾಮೀನಿನ ಮೇಲೆ ಹೊರಗಿರುವ ಕೇಜ್ರಿವಾಲ್ ಹೊರಗಿದ್ದರು. ಅವರ ದೇಹವು “ಗಂಭೀರ ಕಾಯಿಲೆ”ಯ ಕೆಲವು ಲಕ್ಷಣಗಳನ್ನು ಹೊಂದಿರಬಹುದು ಎಂದು ವೈದ್ಯರು ತಿಳಿಸಿದ್ದರು.

ಚಿತ್ರಹಿಂಸೆಗೆ ತಲೆಬಾಗುವುದಿಲ್ಲ:  ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಕೇಜ್ರಿವಾಲ್, “ಅವರು ನನ್ನನ್ನು ಬಗ್ಗಿಸಲು ಮತ್ತು ನನ್ನ ಬಾಯಿ ಮುಚ್ಚಿಸಲು ಹಲವು ರೀತಿಯಲ್ಲಿ ಪ್ರಯತ್ನಿಸಿದರು. ಆದರೆ, ಯಶಸ್ವಿಯಾಗಲಿಲ್ಲ, ನಾನು ಜೈಲಿನಲ್ಲಿದ್ದಾಗ ಹಲವು ರೀತಿಯಲ್ಲಿ ಚಿತ್ರಹಿಂಸೆ ನೀಡಿದರು. ನನ್ನ ಔಷಧಿಗಳನ್ನು ನಿಲ್ಲಿಸಿದರು. ಆದರೂ ನಾನು ಸೋಲಲಿಲ್ಲ ಎಂದರು.

“ಜೈಲಿಗೆ ಹೋದಾಗ ನನ್ನ ತೂಕ 70 ಕೆ.ಜಿ. ಇವತ್ತು 64 ಕೆ.ಜಿ. ಇದೆ. ಜೈಲಿನಿಂದ ಬಿಡುಗಡೆಯಾದ ಮೇಲೂ ತೂಕ ಹೆಚ್ಚುತ್ತಿಲ್ಲ, ಇದು ದೇಹದಲ್ಲಿ ಯಾವುದೋ ಗಂಭೀರ ಕಾಯಿಲೆಯ ಲಕ್ಷಣವೂ ಆಗಿರಬಹುದು ಎಂದು ವೈದ್ಯರು ಹೇಳುತ್ತಿದ್ದಾರೆ. ಅನೇಕ ಪರೀಕ್ಷೆಗಳನ್ನು ಮಾಡಬೇಕಾಗಿದೆ” ಎಂದು ಅವರು ಹೇಳಿದರು.

“ಚುನಾವಣಾ ಪ್ರಚಾರಕ್ಕಾಗಿ ಸುಪ್ರೀಂ ಕೋರ್ಟ್ ನನಗೆ 21 ದಿನಗಳ ಕಾಲಾವಕಾಶ ನೀಡಿತ್ತು. ನಾಡಿದ್ದು ದಿನ ನಾನು ತಿಹಾರ್ ಜೈಲಿಗೆ ಹಿಂತಿರುಗುತ್ತೇನೆ, ಮಧ್ಯಾಹ್ನ 3 ಗಂಟೆ ಸುಮಾರಿಗೆ ನನ್ನ ಮನೆಯಿಂದ ಹೊರಡುತ್ತೇನೆ. ಈ ಬಾರಿ ಅವರು ನನಗೆ ಹೆಚ್ಚು ಚಿತ್ರಹಿಂಸೆ ನೀಡುವ ಸಾಧ್ಯತೆಯಿದೆ. ಆದರೆ ನಾನು ತಲೆಬಾಗುವುದಿಲ್ಲ” ಎಂದು ಹೇಳಿದರು.

ಉಚಿತ ಯೋಜನೆಗಳ ಮುಂದುವರಿಕೆ: “ ಜನರಿಗಾಗಿ ಪ್ರಾರಂಭಿಸಲಾಗಿರುವ ಉಚಿತ ವಿದ್ಯುತ್, ಮೊಹಲ್ಲಾ ಚಿಕಿತ್ಸಾಲಯಗಳು, ಆಸ್ಪತ್ರೆಗಳು, ಉಚಿತ ಔಷಧಿಗಳು, ಚಿಕಿತ್ಸೆ, 24 ಗಂಟೆಗಳ ವಿದ್ಯುತ್ ಮತ್ತು ಇತರ ಹಲವು ವಿಷಯಗಳು ಮುಂದುವರಿಯುತ್ತದೆ. ಹಿಂದಿರುಗಿದ ನಂತರ, ನಾವು ದೆಹಲಿಯ ಪ್ರತಿ ತಾಯಿ ಮತ್ತು ಸಹೋದರಿಗೆ ಪ್ರತಿ ತಿಂಗಳು 1,000 ರೂಪಾಯಿಗಳನ್ನು ನೀಡಲು ಪ್ರಾರಂಭಿಸುತ್ತೇವೆ” ಎಂದು ಅವರು ಹೇಳಿದರು.

ನನ್ನ ತಾಯಿಗಾಗಿ ಪ್ರಾರ್ಥಿಸಿ:  ಅಸ್ವಸ್ಥರಾಗಿರುವ ತಮ್ಮ ತಾಯಿಗಾಗಿ ಪ್ರಾರ್ಥಿಸುವಂತೆ ಕೇಜ್ರಿವಾಲ್ ಜನರಲ್ಲಿ ಮನವಿ ಮಾಡಿದ್ದಾರೆ. “ನನ್ನ ಹೆತ್ತವರಿಗೆ ತುಂಬಾ ವಯಸ್ಸಾಗಿದೆ, ನನ್ನ ತಾಯಿ ತುಂಬಾ ಅನಾರೋಗ್ಯದಿಂದ ಬಳಲುತ್ತಿದ್ದಾರೆ, ನಾನು ಜೈಲಿನಲ್ಲಿ ಅವಳ ಬಗ್ಗೆ ತುಂಬಾ ಚಿಂತೆ ಮಾಡುತ್ತೇನೆ.  ನನ್ನ ಹೆತ್ತವರನ್ನು ನೋಡಿಕೊಳ್ಳಿ ಮತ್ತು ಅವರಿಗಾಗಿ ಪ್ರಾರ್ಥಿಸಿ” ಎಂದು ಬೇಸರದಿಂದ ಹೇಳಿದರು.

ಅಬಕಾರಿ ನೀತಿ ಪ್ರಕರಣದಲ್ಲಿ ಮಧ್ಯಂತರ ಜಾಮೀನಿನ ಏಳು ದಿನಗಳ ವಿಸ್ತರಣೆಗೆ ಕೇಜ್ರಿವಾಲ್ ಅವರ ಮನವಿಯನ್ನು ಆಲಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಬುಧವಾರ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.

ಕೇಜ್ರಿವಾಲ್ ಬಂಧನ ಖಂಡಿಸಿ ಪ್ರತಿಭಟನೆ: ಅತಿಶಿ, ಸೌರಭ್ ಸೇರಿ ಹಲವರು ಪೊಲೀಸ್‌ ವಶಕ್ಕೆ
ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣ ಸಂಬಂಧ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಬಂಧನ ಖಂಡಿಸಿ ಆಮ್ ಆದ್ಮಿ ಪಕ್ಷವು ದೇಶದಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ. ದೆಹಲಿಯ ಎಎಪಿ ಮುಖಂಡರು ಮತ್ತು ಬೆಂಬಲಿಗರು ಆಪ್ ಮತ್ತು ಬಿಜೆಪಿ ಪ್ರಧಾನ ಕಛೇರಿ ಬಳಿಯಿರುವ ಐಟಿಒ ಬಳಿ  ಬೆಳಗ್ಗೆಯಿಂದಲೇ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ.

ಆದರೆ, ಈ ಪ್ರದೇಶದಲ್ಲಿ ಗುಂಪು ಸೇರುವುದನ್ನು ನಿಷೇಧಿಸಿ 144 ಸೆಕ್ಷನ್ ಕರ್ಪ್ಯೂ ಜಾರಿ ಮಾಡಲಾಗಿದೆ. ಪ್ರತಿಭಟನಾ ನಿರತ ಸಚಿವರಾದ ಸೌರಭ್‌ ಭಾರದ್ವಾಜ್‌, ಅತಿಶಿ ಸೇರಿದಂತೆ ಹಲವು ಆಪ್‌ ನಾಯಕರನ್ನು ವಶಕ್ಕೆ ಪಡೆಯಲಾಗಿದೆ.

ಎಎಪಿ ಬೆಂಬಲಿಗರು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಎರಡೂ ಪಕ್ಷಗಳ ಪ್ರಧಾನ ಕಚೇರಿ ಇರುವ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಮಾರ್ಗದಲ್ಲಿ ಪೊಲೀಸರು ಬ್ಯಾರಿಕೇಡ್‌ಗಳನ್ನು ನಿರ್ಮಿಸಿ ಸಂಚಾರಕ್ಕೆ ತಡೆ ನೀಡಿದ್ದಾರೆ.

ಸುಪ್ರೀಂಗೆ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆದ ಕೇಜ್ರಿವಾಲ್‌:  ನಾಟಕೀಯ ಬೆಳವಣಿಗೆಯೊಂದರಲ್ಲಿ ತಮ್ಮ ಬಂಧನದ ವಿರುದ್ಧ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿಯನ್ನು ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಿಂಪಡೆದಿದ್ದಾರೆ.

ಕಳೆದ ವಾರ ಇದೇ ಪ್ರಕರಣದಲ್ಲಿ ಬಂಧಿತರಾಗಿದ್ದ ಬಿಆರ್‌ ಎಸ್ ನಾಯಕಿ ಕೆ.ಕವಿತಾ ಅವರ ಅರ್ಜಿಯನ್ನು ಸುಪ್ರೀಂ ಕೋರ್ಟ್ ನ ವಿಶೇಷ ಪೀಠವು ತಿರಸ್ಕರಿಸಿರುವ ಹಿನ್ನೆಲೆಯಲ್ಲಿ ಕೇಜ್ರಿವಾಲ್ ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಹೇಳಲಾಗಿದೆ

ಕೇಜ್ರಿವಾಲ್ ಅವರು ಕೆಳ ಹಂತದ ನ್ಯಾಯಾಲಯದ ಮೊರೆ ಹೋಗಲು ನಿರ್ಧರಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಜಾಮೀನು ಸೇರಿದಂತೆ ಯಾವುದೇ ಪರಿಹಾರಕ್ಕೆ ವಿಚಾರಣಾ ನ್ಯಾಯಾಲಯದ ಮೊರೆ ಹೋಗುವಂತೆ ಕೆ.ಕವಿತಾ ಅವರಿಗೆ ವಿಶೇಷ ಪೀಠವು ಸೂಚಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಶಿವಮೊಗ್ಗ | ಯಾವುದೇ ಏನ್‌ಕೌಂಟರ್‌ ನಡೆದಿಲ್ಲ, ಒಮ್ನಿ ಕಾರಿನಲ್ಲಿ ಬಂದಿದ್ದವರರಲ್ಲಿ ಹಿಂದೂ, ಮುಸ್ಲಿಮರಿಬ್ಬರೂ ಇದ್ದರು: ಎಸ್‌ಪಿ
ಶಿವಮೊಗ್ಗ: ಶಿವಮೊಗ್ಗ ಗಲಭೆಯ ವೇಳೆ ಒಮ್ನಿ ಕಾರಿನಲ್ಲಿ ಬಂದು ಕಲ್ಲು ತೂರಿದ್ದಾರೆನ್ನುವ ವದಂತಿಗಳನ್ನು ಶಿವಮೊಗ್ಗ ಎಸ್ಪಿ ಜಿ ಕೆ ಮಿಥುನ್‌ ಕುಮಾರ್‌ ಅವರು ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು ಕಾರಿನಲ್ಲಿ ಬಂದವರು ದಾವಣಗೆರೆ ಜಿಲ್ಲೆಯ ನ್ಯಾಮತಿಯವರಾಗಿದ್ದು, ಇತರೆಡೆ ಮೆರವಣಿಗೆಗಳನ್ನು ನೋಡಿ ರಾಗಿ ಗುಡ್ಡಕ್ಕೂ ಬಂದಿದ್ದರು ಎಂದು ತಿಳಿಸಿದ್ದಾರೆ.

ಅವರು ಗಲಭೆ ಆರಂಭಗೊಂಡಿದ್ದನ್ನು ನೋಡಿ ನಂತರ ತಮ್ಮ ಊರಿಗೆ ಮರಳಿದ್ದಾರೆ. ಈ ದೃಶ್ಯಗಳು ಸಿಸಿ ಕೆಮೆರಾಗಳಲ್ಲಿ ದಾಖಲಾಗಿದ್ದು, ವಿವರಗಳನ್ನು ನೋಡಲಾಗಿದೆ ಎಂದು ಅವರು ತಿಳಿಸಿದರು. ಸಾರ್ವಜನಿಕರು ದಯವಿಟ್ಟು ಇಂತಹ ವದಂತಿಗಳನ್ನು ನಂಬಬಾರದು ಎಂದು ಮನವಿ ಮಾಡಿಕೊಂಡಿದ್ದಾರೆ.

ಬಿಜೆಪಿ ರಾಜಕಾರಣಿಗಳು ಪತ್ರಿಕಾಗೋಷ್ಟಿ ನಡೆಸಿ ಹೊರಗಿನಿಂದ ಬಂದವರು ಶಿವಮೊಗ್ಗದಲ್ಲಿ ಮೆರವಣಿಗೆಯಲ್ಲಿ ಕಲ್ಲು ತೂರಿದ್ದಾರೆ ಎಂದು ಆರೋಪ ಹೊರಿಸಿದ್ದರು.

ಪೊಲೀಸ್ ಎನ್‌ಕೌಂಟರ್‌ನಲ್ಲಿ ಮುಸ್ಲಿಮ್ ಯುವಕ ಸತ್ತಿದ್ದಾನೆ ಎನ್ನುವುದು ಕೂಡಾ ಸು‍ಳ್ಳು

ಎನ್‌ ಕೌಂಟರಿನಲ್ಲಿ ಮುಸ್ಲಿಂ ಯುವಕನೊಬ್ಬ ಸತ್ತಿದ್ದಾನೆ ಎನ್ನುವ ವದಂತಿ ಹಬ್ಬಿಸಲಾಗಿದ್ದು ಅದೂ ಕೂಡಾ ಸುಳ್ಳು ಎಂದು ಎಸ್ಪಿ ತಿಳಿಸಿದ್ದಾರೆ. ಮೆರವಣಿಗೆ ಸಮಯದಲ್ಲಿ ಕಲ್ಲು ತೂರಾಟದ ಬಳಿಕ ನಡೆದ ಬೆಳವಣಿಗೆಯಲ್ಲಿ ಪೊಲೀಸ್ ಎನ್‌ಕೌಂಟರ್‌ನಲ್ಲಿ ಮುಸ್ಲಿಮ್ ಯುವಕ ಮೃತಪಟ್ಟಿದ್ದಾನೆ ಎಂದು ಹೇಳುವ ಧ್ವನಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಈ ಕುರಿತು ಸ್ಪಷ್ಟನೆ ನೀಡಿರುವ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಇದು ಸಂಪೂರ್ಣ ಸುಳ್ಳು ಸುದ್ದಿಯಾಗಿದ್ದು ಯಾರೂ ಇಂತಹ ಸುದ್ದಿಗಳಿಗೆ ಕಿವಿಯಾಗಬಾರದು ಎಂದು ಮನವಿ ಮಾಡಿಕೊಂಡರು.

ಈ ಸುದ್ದಿಯನ್ನು ಹಬ್ಬಿಸಿದವರ ವಿರುದ್ಧ ಈಗಾಗಲೇ ಪ್ರಕರಣ ದಾಖಲಿಸಲಾಗಿದ್ದು, FIR ಕೂಡಾ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ರಸ್ತೆಗುಂಡಿಗೆ ಯೋಧ ಬಲಿ: ಪ್ರತಿಭಟಿಸಿದ ಎಎಪಿ ಮುಖಂಡರ ಬಂಧನ
ಬೆಂಗಳೂರು: ರಾಜಾಜಿನಗರದ ಡಾ. ರಾಜ್‌ಕುಮಾರ್‌ ರಸ್ತೆಯಲ್ಲಿದ್ದ ಗುಂಡಿಯಿಂದಾಗಿ ಸಂಭವಿಸಿದ ಅಪಘಾತದಲ್ಲಿ ಮಾಜಿ ಯೋಧ ಕುಮಾರ್‌ ಮೃತಪಟ್ಟಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸಿದ ಆಮ್‌ ಆದ್ಮಿ ಪಾರ್ಟಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.

ಪ್ರತಿಭಟನೆ ವೇಳೆ ಮಾತನಾಡಿದ ಎಎಪಿ ಬೆಂಗಳೂರು ವಕ್ತಾರರಾದ ಉಷಾ ಮೋಹನ್‌ರವರು, ʼಬೆಂಗಳೂರಿನಲ್ಲಿ ರಸ್ತೆಗುಂಡಿಯಿಂದಾಗಿ ಅಪಘಾತವಾಗುವುದು ಸಾಮಾನ್ಯವಾಗಿಬಿಟ್ಟಿದೆ. ತಿಂಗಳಿಗೆ ಕನಿಷ್ಠ ಮೂರ್ನಾಲ್ಕು ಮಂದಿಯಾದರೂ ಜೀವ ಕಳೆದುಕೊಳ್ಳುತ್ತಿದ್ದಾರೆ. ಅಪಘಾತ ನಡೆದು ಯೋಧ ಕುಮಾರ್‌ ಜೀವ ಕಳೆದುಕೊಂಡ ಸ್ಥಳಕ್ಕೆ ಮುಖ್ಯಮಂತ್ರಿ ಆಗಮಿಸಬೇಕು. ಮೃತರ ಕುಟುಂಬಕ್ಕೆ ಶೀಘ್ರ ಪರಿಹಾರ ವಿತರಿಸಬೇಕು. ರಸ್ತೆ ಗುಂಡಿಗೆ ಕಾರಣರಾದ ಅಧಿಕಾರಿಗಳನ್ನು ಕೂಡಲೇ ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕುʼಎಂದು ಆಗ್ರಹಿಸಿದರು.

ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಎಎಪಿ ಮುಖಂಡರಾದ ಸುಮನ್‌ ಪ್ರಶಾಂತ್‌ ಮಾತನಾಡಿ, ʼಜೀರೋ ಟ್ರಾಫಿಕ್‌ನಲ್ಲಿ ತಿರುಗಾಡುವ ಮುಖ್ಯಮಂತ್ರಿಯವರಿಗೆ ಹಾಗೂ ಸದಾ ಕಾರಿನಲ್ಲೇ ತಿರುಗಾಡುವ ಸಚಿವರುಗಳು ಹಾಗೂ ಶಾಸಕರುಗಳಿಗೆ ಬೈಕ್‌ ಸವಾರರ ಕಷ್ಟ ಅರ್ಥವಾಗುತ್ತಿಲ್ಲ. ಕೇಳಿದಷ್ಟು ಕಮಿಷನ್‌ ಕೊಡಲು ಗುತ್ತಿಗೆದಾರರು ಒಪ್ಪದ ಕಾರಣಕ್ಕೆ ರಸ್ತೆ ಕಾಮಗಾರಿಗೆ ಹಣ ಬಿಡುಗಡೆ ಮಾಡಲೂ ಸರ್ಕಾರ ಮೀನಾಮೇಷ ಎಣಿಸುತ್ತಿದೆ. ಸಚಿವರು ಹಾಗೂ ಶಾಸಕರ ಹಣದ ದಾಹದಿಂದ ಅಮೂಲ್ಯ ವ್ಯಕ್ತಿಗಳನ್ನು ದೇಶ ಕಳೆದುಕೊಳ್ಳುತ್ತಿದೆʼ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಎಎಪಿ ಮುಖಂಡರಾದ ಉಷಾ ಮೋಹನ್‌, ಸುಮನ್‌ ಪ್ರಶಾಂತ್‌, ಪುಟ್ಟಣ್ಣ ಗೌಡ, ವಿಶ್ವನಾಥ್‌, ಮಹೇಶ್‌ ಬಾಬು ಮತ್ತಿತರ ನಾಯಕರು ಹಾಗೂ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ, ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ.