aap candidate – Peepal Media

ಬಿಜೆಪಿಯೇ ಇಡಿ ಹೆಸರಿನಲ್ಲಿ ತನಿಖೆ ನಡೆಸುತ್ತಿದೆ: ಎಎಪಿ ಆರೋಪ
ನವದೆಹಲಿ: ಇಡಿ ಸ್ವಾಯತ್ತ ಸಂಸ್ಥೆ ಎನ್ನುವುದು ಸಂಪೂರ್ಣ ಸುಳ್ಳು. ಬಿಜೆಪಿ ಕಚೇರಿಯೇ ಇಡಿ ಹೆಸರಿನಲ್ಲಿ ತನಿಖೆ ನಡೆಸುತ್ತಿದೆ ಎಂದು ಎಎಪಿ ಆರೋಪಿಸಿದೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ದೆಹಲಿ ಸಚಿವೆ ಅತಿಶಿ, ಜಾರಿ ನಿರ್ದೇಶನಾಲಯವು ಸ್ವತಂತ್ರ ತನಿಖಾ ಸಂಸ್ಥೆ ಎನ್ನುವುದು ಸುಳ್ಳು. ಇಡಿ ಆರೋಪಿತರಿಗೆ ಏನಾದರೂ ಹೇಳಬೇಕಾದರೆ, ಮೊದಲು ಆರೋಪಪಟ್ಟಿ ಸಿದ್ದಪಡಿಸಿಕೊಂಡು ಸಲ್ಲಿಸಬೇಕು. ಅದನ್ನು ನ್ಯಾಯಾಧೀಶರ ಮುಂದೆ ಒಪ್ಪಿಸಬೇಕು. ಇದ್ಯಾವುದು ಇಲ್ಲದೇ ಬಿಜೆಪಿ ತಾಳಕ್ಕೆ ಇಡಿ ಕುಣಿಯುತ್ತಿದೆ ಎಂದು ಆರೋಪಿಸಿದರು.

ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಅಬಕಾರಿ ಹಗರಣದ ದಾಖಲೆಗಳನ್ನು ಹೊಂದಿರುವ ಹಳೆಯ ಫೋನ್ ಅನ್ನು ಕಳೆದುಕೊಂಡಿದ್ದಾರೆ ಎನ್ನುವುದೆಲ್ಲ ಸುಳ್ಳು ಆರೋಪ ಎಂದು ತಿರಸ್ಕರಿಸಿರುವ ಅವರು, ಬಿಜೆಪಿ ಕಚೇರಿಯಿಂದಲೇ ತನಿಖೆ ನಡೆಸಲಾಗುತ್ತಿದೆ. ಜಾರಿ ನಿರ್ದೇಶನಾಲಯ ಬಿಜೆಪಿಯ ರಾಜಕೀಯ ಪಾಲುದಾರ  ಪಕ್ಷದಂತೆ ವರ್ತಿಸುತ್ತಿದೆ ಎಂದು ದೂರಿದರು.

ದೇಶದ ಸಂವಿಧಾನ ಮತ್ತು ಕಾನೂನು ಇಡಿ ಅಧಿಕಾರಿಗಳಿಗೆ ಅಧಿಕಾರ ನೀಡಿದೆ ಎಂದು ಹೇಳಲು ಬಯಸುತ್ತೇನೆ. ನೀವು ಸಂವಿಧಾನವನ್ನು ಉಲ್ಲಂಘಿಸಬೇಡಿ; ಸಂವಿಧಾನವನ್ನು ಕೊಲ್ಲಬೇಡಿ. ನೀವು ಭಾರತೀಯ ಜನತಾ ಪಕ್ಷದ ಅಂಗಸಂಸ್ಥೆಯಲ್ಲ. ನೀವು ಈ ದೇಶದ ಕಾನೂನುಗಳ ಅಡಿಯಲ್ಲಿ ರಚಿಸಲಾದ ಸ್ವತಂತ್ರ ತನಿಖಾ ಸಂಸ್ಥೆ ಎಂಬುದನ್ನು ಮರೆಯಬಾರದು ಎಂದು ಅವರು ಎಚ್ಚರಿಕೆ ನೀಡಿದರು.

ಎರಡು ವರ್ಷಗಳ ಹಿಂದೆ ಕೇಜ್ರಿವಾಲ್ ಅವರು ಅಬಕಾರಿ ಹಗರಣ ನಡೆದಾಗ ಬಳಸಿದ್ದ ಫೋನ್ ಕಾಣೆಯಾಗಿದೆ ಎಂದು ಕೇಜ್ರಿವಾಲ್‌ ಹೇಳುತ್ತಿದ್ದಾರೆ ಎಂದು ಇಡಿ ಮೂಲಗಳು ನಿನ್ನೆ ಮಾಹಿತಿ ನೀಡಿದ್ದವು.

ಕೇಜ್ರಿವಾಲ್ ಅವರನ್ನು ಗುರುವಾರ ಸಂಜೆ ತಡರಾತ್ರಿ ಬಂಧಿಸಲಾಗಿದ್ದು, ಅವರು ಜೈಲಿನಿಂದಲೇ ಸಿಎಂ ಅಧಿಕಾರ ಚಲಾಯಿಸುವುದಾಗಿ ಘೋಷಿಸಿದ್ದಾರೆ.

ಕೇಜ್ರಿವಾಲ್ ಬಂಧನ ಖಂಡಿಸಿ ಪ್ರತಿಭಟನೆ: ಅತಿಶಿ, ಸೌರಭ್ ಸೇರಿ ಹಲವರು ಪೊಲೀಸ್‌ ವಶಕ್ಕೆ
ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣ ಸಂಬಂಧ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಬಂಧನ ಖಂಡಿಸಿ ಆಮ್ ಆದ್ಮಿ ಪಕ್ಷವು ದೇಶದಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ. ದೆಹಲಿಯ ಎಎಪಿ ಮುಖಂಡರು ಮತ್ತು ಬೆಂಬಲಿಗರು ಆಪ್ ಮತ್ತು ಬಿಜೆಪಿ ಪ್ರಧಾನ ಕಛೇರಿ ಬಳಿಯಿರುವ ಐಟಿಒ ಬಳಿ  ಬೆಳಗ್ಗೆಯಿಂದಲೇ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ.

ಆದರೆ, ಈ ಪ್ರದೇಶದಲ್ಲಿ ಗುಂಪು ಸೇರುವುದನ್ನು ನಿಷೇಧಿಸಿ 144 ಸೆಕ್ಷನ್ ಕರ್ಪ್ಯೂ ಜಾರಿ ಮಾಡಲಾಗಿದೆ. ಪ್ರತಿಭಟನಾ ನಿರತ ಸಚಿವರಾದ ಸೌರಭ್‌ ಭಾರದ್ವಾಜ್‌, ಅತಿಶಿ ಸೇರಿದಂತೆ ಹಲವು ಆಪ್‌ ನಾಯಕರನ್ನು ವಶಕ್ಕೆ ಪಡೆಯಲಾಗಿದೆ.

ಎಎಪಿ ಬೆಂಬಲಿಗರು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಎರಡೂ ಪಕ್ಷಗಳ ಪ್ರಧಾನ ಕಚೇರಿ ಇರುವ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಮಾರ್ಗದಲ್ಲಿ ಪೊಲೀಸರು ಬ್ಯಾರಿಕೇಡ್‌ಗಳನ್ನು ನಿರ್ಮಿಸಿ ಸಂಚಾರಕ್ಕೆ ತಡೆ ನೀಡಿದ್ದಾರೆ.

ಸುಪ್ರೀಂಗೆ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆದ ಕೇಜ್ರಿವಾಲ್‌:  ನಾಟಕೀಯ ಬೆಳವಣಿಗೆಯೊಂದರಲ್ಲಿ ತಮ್ಮ ಬಂಧನದ ವಿರುದ್ಧ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿಯನ್ನು ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಿಂಪಡೆದಿದ್ದಾರೆ.

ಕಳೆದ ವಾರ ಇದೇ ಪ್ರಕರಣದಲ್ಲಿ ಬಂಧಿತರಾಗಿದ್ದ ಬಿಆರ್‌ ಎಸ್ ನಾಯಕಿ ಕೆ.ಕವಿತಾ ಅವರ ಅರ್ಜಿಯನ್ನು ಸುಪ್ರೀಂ ಕೋರ್ಟ್ ನ ವಿಶೇಷ ಪೀಠವು ತಿರಸ್ಕರಿಸಿರುವ ಹಿನ್ನೆಲೆಯಲ್ಲಿ ಕೇಜ್ರಿವಾಲ್ ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಹೇಳಲಾಗಿದೆ

ಕೇಜ್ರಿವಾಲ್ ಅವರು ಕೆಳ ಹಂತದ ನ್ಯಾಯಾಲಯದ ಮೊರೆ ಹೋಗಲು ನಿರ್ಧರಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಜಾಮೀನು ಸೇರಿದಂತೆ ಯಾವುದೇ ಪರಿಹಾರಕ್ಕೆ ವಿಚಾರಣಾ ನ್ಯಾಯಾಲಯದ ಮೊರೆ ಹೋಗುವಂತೆ ಕೆ.ಕವಿತಾ ಅವರಿಗೆ ವಿಶೇಷ ಪೀಠವು ಸೂಚಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಕಾಂಚನ್‌ ಜರಿವಾಲಾ ನಾಪತ್ತೆ : ಬಿಜೆಪಿ ವಿರುದ್ದ ಎಎಪಿ ಕಿಡ್ನಾಪ್‌ ಆರೋಪ
ಗುಜರಾತ್‌: ಗುಜರಾತ್ ವಿಧಾನಸಭಾ ಚುನಾವಣೆ 2022ರ ಸೂರತ್‌ನ ಎಎಪಿ ಅಭ್ಯರ್ಥಿ ಕಾಂಚನ್ ಜರಿವಾಲಾ ಅವರು ನಾಮಪತ್ರ ಅಂಗೀಕರಿಸಿದ ನಂತರ ಬಿಜೆಪಿ ಅವರನ್ನು  ಅಪಹರಿಸಿದೆ.ಅವರು ಮತ್ತು ಅವರ ಕುಟುಂಬದವರು ನಿನ್ನೆಯಿಂದ ಕಾಣೆಯಾಗಿದ್ದಾರೆ ಎಂದು ಮನೀಶ್ ಸಿಸೋಡಿಯಾ ಆರೋಪಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅರವಿಂದ್‌ ಕೇಜ್ರೀವಾಲ್‌, “ಸೂರತ್ ಪೂರ್ವದಿಂದ ನಮ್ಮ ಅಭ್ಯರ್ಥಿ ಕಾಂಚನ್ ಜರಿವಾಲಾ ಮತ್ತು ಅವರ ಕುಟುಂಬ ನಿನ್ನೆಯಿಂದ ಕಾಣೆಯಾಗಿದೆ. ಮೊದಲಿಗೆ, ಬಿಜೆಪಿ ಅವರ ನಾಮಪತ್ರವನ್ನು ತಿರಸ್ಕರಿಸಲು ಪ್ರಯತ್ನಿಸಿತ್ತು. ಆದರೆ ಅವರ ನಾಮನಿರ್ದೇಶನವನ್ನು ಅಂಗೀಕರಿಸಿದ ನಂತರ, ನಾಮಪತ್ರವನ್ನು ಹಿಂತೆಗೆದುಕೊಳ್ಳುವಂತೆ ಅವರ ಮೇಲೆ ಒತ್ತಡ ಹೇರಲಾಯಿತು. ಇದೇ ಕಾರಣದಿಂದ ಅವರನ್ನು ಕಿಡ್ನಾಪ್‌ ಮಾಡಲಾಗಿದೆಯೇ ? ಎಂದು ಕೇಳಿದ್ದಾರೆ.