AAP state president Prithvi Reddy – Peepal Media

ಎಸ್ಐಟಿ ಕಾಂಗ್ರೆಸ್ ಪಕ್ಷದ ಬ್ಲಾಕ್ಮೇಲ್ ತಂತ್ರದ ಒಂದು ಭಾಗ : ಎಎಪಿ ಗಂಭೀರ ಆರೋಪ
ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣಗಳಿಗೆ ಈಗಿನ ಕಾಂಗ್ರೆಸ್ ಸರ್ಕಾರಕ್ಕೆ ಬದ್ಧತೆ ಇದ್ದರೆ ನ್ಯಾಯಾಂಗ ತನಿಖೆಗೆ ಆದೇಶಿಸಲಿ. ಎಸ್ಐಟಿ ಎಂಬುದು ಪ್ರತಿಪಕ್ಷಗಳ ಬಾಯಿ ಮುಚ್ಚಿಸಲು ಕಾಂಗ್ರೆಸ್ ಸರ್ಕಾರ ಬಳಸುತ್ತಿರುವ ಅಸ್ತ್ರ ಅಷ್ಟೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಘಟಕ ಗಂಭೀರ ಆರೋಪ ಮಾಡಿದೆ.

ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಇಂದು ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಸರ್ಕಾರದ ಮೇಲೆ ಗಂಭೀರ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಮುಕ್ತ ಆಡಳಿತ ನಡೆಸುವುದೇ ಆದರೆ ಮೊದಲು ಬಿಜೆಪಿ ಅವಧಿಯಲ್ಲಿ ನಡೆದ ಭ್ರಷ್ಟಾಚಾರದ ಪ್ರಕರಣಗಳನ್ನು ನ್ಯಾಯಾಂಗ ತನಿಖೆಗೆ ವಹಿಸಲಿ. ಅದು ಬಿಟ್ಟು ಎಸ್ಐಟಿ ರಚನೆ ಮಾಡಿ ಪ್ರತಿಪಕ್ಷಗಳ ಬಾಯಿ ಮುಚ್ಚಿಸುವುದು ಒಂದು ಬ್ಲಾಕ್ಮೇಲ್ ತಂತ್ರವಷ್ಟೆ ಎಂದು ಹೇಳಿದ್ದಾರೆ.

ಬಿಜೆಪಿ ಅವಧಿಯಲ್ಲಿ ಗಂಭೀರವಾಗಿ ಕೇಳಿಬಂದ 40% ಕಮಿಷನ್ ಆರೋಪ, ಬಿಟ್ ಕಾಯಿನ್ ಹಗರಣ, ಕಳಪೆ ಕಾಮಗಾರಿಗಳ ಕಮಿಷನ್ ದಂಧೆ, ಕೋವಿಡ್ ಕಾಲದ ಬೆಡ್ ಬ್ಲಾಕಿಂಗ್ ಹಗರಣ, ಪಿಎಸ್ಐ ನೇಮಕಾತಿ ಹಗರಣ ಸೇರಿದಂತೆ ಪ್ರಮುಖ ಆರೋಪಗಳ ಬಗ್ಗೆ ನ್ಯಾಯಾಂಗ ತನಿಖೆ ಮಾಡಿದರೆ ಮಾತ್ರ ಆರೋಪಕ್ಕೆ ನಿಜವಾದ ನ್ಯಾಯ ಸಿಗಲು ಸಾಧ್ಯ. ಅದರ ಹೊರತಾಗಿ ತನಿಖೆಗೆ SIT ರಚನೆ ಕಣ್ಣೊರೆಸುವ ತಂತ್ರವಷ್ಟೆ ಎಂದು ಆರೋಪಿಸಿದ್ದಾರೆ.

‘ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಆದಂತಹ ದೊಡ್ಡ ದೊಡ್ಡ ಭ್ರಷ್ಟಾಚಾರ ಪ್ರಕರಣಗಳ ಬಗ್ಗೆ ತನಿಖೆ ಮಾಡಿಸಲಾಗುತ್ತದೆ ಎಂದು ಕಾಂಗ್ರೆಸ್ ಹೇಳಿಕೆ ನೀಡಿತ್ತು. ಆದರೆ ಈಗ ನೋಡಿದರೆ ಎಸ್ಐಟಿ ರಚನೆ ಎಂಬ ಮಾತು ಬರುತ್ತಿದೆ. ಸರ್ಕಾರದ ಅಡಿಯಲ್ಲಿನ ಪೊಲೀಸ್ ಅಧಿಕಾರಿಗಳಿಂದ ಯಾವುದೇ ನ್ಯಾಯ ಸಿಗುವುದಿಲ್ಲ. ಇವರು ತಮ್ಮದೇ ಇಲಾಖೆಯ ಅಧಿಕಾರಿಗಳನ್ನು ವಿಚಾರಣೆಗೊಳಪಡಿಸುವ ಬದ್ಧತೆ ಎಂದಿಗೂ ಸಾಧ್ಯವಿರುವುದಿಲ್ಲ. ಈ ಹಿಂದೆ SIT ತನಿಖೆ ಮಾಡಿದ ಎಷ್ಟೋ ಹಗರಣಗಳು ಹಾದಿ ತಪ್ಪಿವೆ. ಹಾಗಾಗಿ ಇವೂ ಸಹ ತಿಪ್ಪೆ ಸಾರಿಸುವ ಕಾರ್ಯ’ ಎಂದು ಪೃಥ್ವಿ ರೆಡ್ಡಿ ಗಂಭೀರ ಆರೋಪ ಮಾಡಿದ್ದಾರೆ.

ಮುಖ್ಯಮಂತ್ರಿಗಳಿಗೆ ಮಳೆ ಹಾನಿ ತಡೆಗಟ್ಟಲು ಆಮ್ ಆದ್ಮಿ ಪಕ್ಷದಿಂದ ಆರು ಅಂಶಗಳ ಪತ್ರ
ಪೃಥ್ವಿ ರೆಡ್ಡಿ, ಆಮ್ ಆದ್ಮಿ ಪಕ್ಷದ ಮುಖ್ಯಸ್ಥರು

ಸತತವಾಗಿ ರಾಜ್ಯದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿರುವ ಹಾನಿಗಳ ಬಗ್ಗೆ ಮುಖ್ಯಮಂತ್ರಿಗಳಿಗೆ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿರೆಡ್ಡಿ ರವರಿಂದ 6 ಅಂಶಗಳ ಪತ್ರವನ್ನು ಬರೆಯಲಾಗಿದೆ. ಈ ಮೂಲಕ ಸಮರೋಪಾದಿಯಲ್ಲಿ ಮಳೆ ಹಾನಿಯನ್ನು ತಡೆಗೆಟ್ಟಲು ಕೋರಲಾಗಿದೆ.

ಪರಿಹಾರ ಒದಗಿಸಲು ಸೂಕ್ತ ತಂಡಗಳನ್ನು ಸನ್ನದ್ಧವಾಗಿಟ್ಟುಕೊಂಡು, ಸಾರ್ವಜನಿಕ ಮಾಧ್ಯಮಗಳಲ್ಲಿ ಹವಾಮಾನ ವೈಪರಿತ್ಯದ ಅಗತ್ಯ ಸಂದೇಶ, ಸೂಚನೆಗಳನ್ನು ನೀಡುತ್ತಿರಬೇಕು.

ನೆರೆ ಹಾನಿಗೆ ಪದೇ ಪದೇ ತುತ್ತಾಗುವ ಸ್ಥಳಗಳ ವಿಚಾರ ಮತ್ತು ಸಮಗ್ರ ಮಾಹಿತಿ ಕಲೆಹಾಕಲು ಜಿಲ್ಲಾಡಳಿತಕ್ಕೆ ಸೂಚಿಸಿ, ಈ ಬಾರಿ ಹಾನಿ ತಡೆಗಟ್ಟಲು ತೆಗೆದುಕೊಂಡಿರುವ ಸೂಕ್ತ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಬೇಕು.

ಹಾನಿಗೀಡಾದ ಸ್ಥಳಗಳಲ್ಲಿ ಅಲ್ಲಿನ ಶಾಸಕರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರುಗಳು ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸುತ್ತಿಲ್ಲ. ಆದ್ದರಿಂದ ಅಲ್ಲಿನ ಸಾಮಾಜಿಕ ಕಳಕಳಿ ಹೊಂದಿರುವ ಸಂಘ ಸಂಸ್ಥೆಗಳು, ಸ್ವ-ಸಹಾಯ ಸಂಘಗಳು, ರೈತಪರ ಸಂಘಗಳು ಮತ್ತು ನಾಗರಿಕ ಸಂಘಗಳನ್ನು ಸೇರಿಸಿಕೊಂಡು ಹಾನಿಗೀಡಾದ ಸ್ಥಳಗಳಲ್ಲಿ ಪರಿಹಾರ ಕಾರ್ಯಗಳನ್ನು ನಿರಂತರವಾಗಿ ನಡೆಸಬೇಕು. ನಾಗರಿಕ ಸಂಘದ ಕಚೇರಿಗಳ ಮೂಲಕ ಅಗತ್ಯ ಸಂದೇಶಗಳನ್ನು ತಕ್ಷಣದಲ್ಲಿ ರವಾನಿಸಲು ಕ್ರಮ ವಹಿಸಬೇಕು.

ಕೇಂದ್ರ ಸರ್ಕಾರದ ಪರಿಹಾರ ಧನವನ್ನು ಕೂಡಲೇ ಪಡೆದು, ಹಾನಿಯಾದ ಸಂದರ್ಭದಲ್ಲಿ ತಕ್ಷಣಕ್ಕೆ ಹಣ ನೀಡುವ ಕ್ರಮ ವಹಿಸಬೇಕು. ಮಳೆಯಿಂದ ಹಾನಿಯಾದ ಅದೆಷ್ಟೋ ತಿಂಗಳುಗಳಾದ ನಂತರ ಹಣ ಬಿಡುಗಡೆಯಾಗುವ ಪರಿಪಾಠ ತಪ್ಪಿಸಿ ಅಗತ್ಯ ಆರ್ಥಿಕ ಸೌಕರ್ಯಗಳು ರಾಜ್ಯದಲ್ಲಿರುವಂತೆ ನೋಡಿಕೊಳ್ಳುಬೇಕು.

ನಿರಂತರವಾಗಿ ನದಿಗಳ ಪರಿವೀಕ್ಷಣೆ ನಡೆಸಿ, ನೀರಿನ ಮಟ್ಟದ ಮೇಲೆ ಸದಾ ನಿಗಾ ವಹಿಸುವುದು ಈಗ ಬಹಳ ಮುಖ್ಯ. ನೀವು ನೀರಾವರಿ ಮಂತ್ರಿಯಾಗಿ ಕೆಲಸ ಮಾಡಿರುವುದರಿಂದ ನದಿ ಮತ್ತು ಜಲಾಶಯದ ಶೇಖರಣಾ ಮಟ್ಟ ಮತ್ತು ಅದರ ನಿರ್ವಹಣೆ ಬಗ್ಗೆ ತೋರಿರುವ ನಿಷ್ಕಾಳಜಿ ನಿಮಗೆ ತಿಳಿದ ವಿಷಯ. ಇದನ್ನು ಸರಿಯಾಗಿ ನಿರ್ವಹಿಸಿದರೆ ಆಗುವ ಹಾನಿಗಳನ್ನು ತಡೆಯಬಹುದು.

ರಾಜ್ಯದ 224 ಕ್ಷೇತ್ರಗಳಲ್ಲಿ ಇರುವ ಆಮ್ ಆದ್ಮಿ ಪಾರ್ಟಿಯ ಕಾರ್ಯಕರ್ತರು ಸಹಾಯ ಮಾಡಲು ಸನ್ನದ್ಧರಾಗಿದ್ದಾರೆ. ಎಂಥದ್ದೇ ಕಠಿಣ ಸಂದರ್ಭದಲ್ಲಿ ಸರ್ಕಾರದೊಂದಿಗೆ ಕೆಲಸ ಮಾಡಲು, ಯಾವುದೇ ಸವಾಲನ್ನು ಎದುರಿಸಿ ರಕ್ಷಣಾ ಕಾರ್ಯದಲ್ಲಿ ಭಾಗವಹಿಸಲು ಸಿದ್ಧರಿದ್ದಾರೆ.

ಈ ಎಲ್ಲಾ ಮುನ್ನೆಚ್ಚರಿಕಾ ಅಂಶಗಳನ್ನು ಸರ್ಕಾರವು ಕೂಡಲೇ ಜಾರಿಗೊಳಿಸಿ ಮುಂದಾಗಬಹುದಾದ ಅನಾಹುತಗಳನ್ನು ತಡೆಗಟ್ಟುವ ದಿಸೆಯಲ್ಲಿ ತುರ್ತು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ ಎಂದು ಪೃಥ್ವಿ ರೆಡ್ಡಿ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

ಸಾಮಾಜಿಕ ಕಾರ್ಯಕರ್ತ ಡಾ. ಎ.ರಾಜು ಆಮ್‌ ಆದ್ಮಿ ಪಾರ್ಟಿ ಸೇರ್ಪಡೆ
ಬೆಂಗಳೂರು: ಸುಮಾರು 400 ವಿದ್ಯಾರ್ಥಿಗಳಿಗೆ ಉಚಿತ ಮನೆಪಾಠ ನೀಡುವುದರಲ್ಲಿ ತೊಡಗಿಕೊಂಡಿರುವ ಸಾಮಾಜಿಕ ಕಾರ್ಯಕರ್ತ ಡಾ. ಎ.ರಾಜುರವರು ಆಮ್‌ ಆದ್ಮಿ ಪಾರ್ಟಿಗೆ ಸೇರ್ಪಡೆಯಾಗಿದ್ದು, ಆಮ್‌ ಆದ್ಮಿ ಪಾರ್ಟಿಯ (ಎಎಪಿ) ರಾಜ್ಯ ಚುನಾವಣಾ ಉಸ್ತುವಾರಿ ದಿಲೀಪ್‌ ಪಾಂಡೆ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿಯವರು ಪಕ್ಷದ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಡಾ. ಎ.ರಾಜುರವರನ್ನು ಬರಮಾಡಿಕೊಂಡರು.

ಈ ವೇಳೆ ಮಾತನಾಡಿದ ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಅವರು, ಮೂಲತಃ ಇದೇ ಬೆಂಗಳೂರಿನವರಾದ ಡಾ. ಎ.ರಾಜುರವರು ಕೆನರಾ ಬ್ಯಾಂಕ್‌ ಉದ್ಯೋಗಿಯಾಗಿ ಸೇವೆ ಸಲ್ಲಿಸಿದವರು. 2019ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಬಿಎಸ್‌ಪಿಯಿಂದ ಸ್ಪರ್ಧಿಸಿದ್ದರು. ಕೆನರಾ ಬ್ಯಾಂಕ್‌ ನೌಕರರ ಸಂಘಟನೆ ಹಾಗೂ ಅಖಿಲ ಭಾರತ ಪರಿಶಿಷ್ಟ ಜಾತಿ ಸಂಘಟನೆಯ ಪ್ರಧಾನ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇದರ ಜೊತೆಗೆ, ಕರ್ನಾಟಕ ಬಾಕ್ಸಿಂಗ್‌ ಅಸೋಸಿಯೇಷನ್‌ ಅಧ್ಯಕ್ಷರಾಗಿ ಹಾಗೂ ಅಖಿಲ ಭಾರತ ಬಾಕ್ಸಿಂಗ್‌ ಅಸೋಸಿಯೇಷನ್‌ ಉಪಾಧ್ಯಕ್ಷರಾಗಿ ಕೂಡ ಸೇವೆ ಸಲ್ಲಿಸುತ್ತಿದ್ದಾರೆ. ಮೀಡಿಯಾ ಕ್ಲಬ್‌ ಆಫ್‌ ಕರ್ನಾಟಕದ ಪ್ರಧಾನ ಕಾರ್ಯದರ್ಶಿಯಾಗಿ ಕೂಡ ಕಾರ್ಯ ನಿರ್ವಹಿಸಿದ ಅನುಭವಿ ವ್ಯಕ್ತಿತ್ವ ಡಾ. ಎ.ರಾಜುರವರದ್ದು ಎಂದು ಹೇಳಿದರು.

ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳ ಬಗ್ಗೆ ಅಪಾರ ಕಾಳಜಿ ಹೊಂದಿರುವ ಡಾ. ಎ.ರಾಜುರವರು ಬೆಂಗಳೂರಿನ ರಾಜಾಜಿನಗರದಲ್ಲಿ ಸುಮಾರು 400 ವಿದ್ಯಾರ್ಥಿಗಳಿಗೆ ಉಚಿತವಾಗಿ ಟ್ಯೂಷನ್‌ ಮಾಡುತ್ತಿದ್ದಾರೆ. ಜೊತೆಗೆ, ಇನ್ನೂ ಅನೇಕ ರೀತಿಯಲ್ಲಿ ವಿದ್ಯಾರ್ಥಿಗಳಿಗೆ ನಿರಂತರವಾಗಿ ನೆರವಾಗುತ್ತಾ ಬಂದಿದ್ದಾರೆ. ಪ್ರಚಾರ ಬಯಸದೇ ಸಮಾಜಸೇವೆಯಲ್ಲಿ ತೊಡಗಿಕೊಳ್ಳುವ ಇವರ ಸ್ವಭಾವವು ಆದರ್ಶವಾದದ್ದು ಎಂದು ಪೃಥ್ವಿ ರೆಡ್ಡಿ ಹೇಳಿದರು.

ಪಕ್ಷ ಸೇರಿ ಮಾತನಾಡಿದ ಡಾ. ಎ.ರಾಜು ಅವರು, ʼಆಮ್‌ ಆದ್ಮಿ ಪಾರ್ಟಿಯ ಭ್ರಷ್ಟಾಚಾರ ವಿರೋಧಿ ಧೋರಣೆ ಹಾಗೂ ಶೈಕ್ಷಣಿಕ ಪ್ರಗತಿಯ ಬಗ್ಗೆ ಪಕ್ಷಕ್ಕಿರುವ ಬದ್ಧತೆಯನ್ನು ಮೆಚ್ಚಿ ಸೇರ್ಪಡೆಯಾಗುತ್ತಿದ್ದೇನೆ. ಬಡ ಹಾಗೂ ಮಧ್ಯಮ ವರ್ಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕಾದರೆ ಸರ್ಕಾರಿ ಶಾಲೆಗಳು ಅಭಿವೃದ್ಧಿಯಾಗಬೇಕು. ಆಗ ಮಾತ್ರ ದೇಶವು ನಿಜವಾದ ಪ್ರಗತಿ ಸಾಧಿಸುತ್ತದೆ. ಇದನ್ನು ಆಮ್‌ ಆದ್ಮಿ ಪಾರ್ಟಿಯೊಂದೇ ಸಾಕಾರಗೊಳಿಸಬಲ್ಲದು. ದೆಹಲಿಯ ಅರವಿಂದ್‌ ಕೇಜ್ರಿವಾಲ್‌ ಸರ್ಕಾರವು ಇದನ್ನು ಸಾಧಿಸಿ ತೋರಿಸಿದ್ದು, ಪಂಜಾಬ್‌ ಸರ್ಕಾರ ಕೂಡ ಇದೇ ಮಾದರಿಯಲ್ಲಿ ಸಾಗಿದೆ. ಕರ್ನಾಟಕದಲ್ಲಿ ಕೂಡ ಎಎಪಿ ಆಡಳಿತ ಬಂದು ಇಲ್ಲಿನ ಸಮಸ್ಯೆಗಳು ಬಗೆಹರಿಯಬೇಕಿದೆ ಎಂದು ಹೇಳಿದರು.

ಕನ್ನಡದಲ್ಲಿಲ್ಲ ಎಸ್‌ಎಸ್‌ಸಿ ಪರೀಕ್ಷೆ: ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ವಿರೋಧ
ಬೆಂಗಳೂರು: ಕೇಂದ್ರ ಸರ್ಕಾರದ ಸಿಬ್ಬಂದಿ ಆಯ್ಕೆ ಆಯೋಗವು (ಎಸ್‌ಎಸ್‌ಸಿ) ಪದವಿ ಮಟ್ಟದ ಪರೀಕ್ಷೆಯನ್ನು ಕೇವಲ ಇಂಗ್ಲಿಷ್‌ ಹಾಗೂ ಹಿಂದಿಯಲ್ಲಿ ನಡೆಸಲು ಆದೇಶ ಹೊರಡಿಸಿರುವುದಕ್ಕೆ ಆಮ್‌ ಆದ್ಮಿ ಪಾರ್ಟಿಯ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ವಿರೋಧ ವ್ಯಕ್ತಪಡಿಸಿದರು.

ಈ ಕುರಿತು ಮಾಧ್ಯಮಗಳಿಗೆ ಹೇಳಿಕೆ ನೀಡಿದ ಪೃಥ್ವಿ ರೆಡ್ಡಿ ಅವರು, ʼಭಾರತವು ಹಲವು ರಾಜ್ಯಗಳ ಒಕ್ಕೂಟ. ಕರ್ನಾಟಕ ಸೇರಿದಂತೆ ದೇಶದ ಬಹುತೇಕ ರಾಜ್ಯಗಳು ತಮ್ಮದೇ ಆದ ಭಾಷೆಯನ್ನು ಹೊಂದಿವೆ. ಈ ಪ್ರಾದೇಶಿಕ ಭಾಷೆಗಳಿಗೆ ಗೌರವ ನೀಡಬೇಕಾಗಿರುವುದು ಕೇಂದ್ರ ಸರ್ಕಾರದ ಕರ್ತವ್ಯ. ಕೇವಲ ಇಂಗ್ಲಿಷ್‌ ಹಾಗೂ ಹಿಂದಿಯಲ್ಲಿ ಮಾತ್ರ ಕೇಂದ್ರ ಸರ್ಕಾರದ ಪರೀಕ್ಷೆಗಳನ್ನು ನಡೆಸುವುದು ಬೇರೆ ಭಾಷೆಗಳ ಜನರಿಗೆ ಮಾಡುವ ದ್ರೋಹʼ ಎಂದು ಹೇಳಿದರು.

ʼಪರೀಕ್ಷೆ ನಡೆಸುವುದಕ್ಕೆ ಸಂಬಂಧಿಸಿ ಎಸ್‌ಎಸ್‌ಸಿ ಹೊರಡಿಸಿರುವ ಆದೇಶವನ್ನು ತಕ್ಷಣವೇ ಹಿಂಪಡೆಯಬೇಕು. ಕನ್ನಡ ಸೇರಿದಂತೆ ಎಲ್ಲ ರಾಜ್ಯಗಳ ಭಾಷೆಗಳಲ್ಲೂ ಪರೀಕ್ಷೆ ನಡೆಸಬೇಕು. ಹಿಂದಿಗೆ ಸಿಗುವ ಆದ್ಯತೆಯು ಕನ್ನಡ ಹಾಗೂ ಇತರೆ ಭಾಷೆಗಳಿಗೂ ಸಿಗಬೇಕು. ಕೇವಲ ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಪರೀಕ್ಷೆ ನಡೆಸುವುದರ ಹಿಂದೆ, ಕನ್ನಡಿಗರಿಗೆ ಸಿಗಬೇಕಾದ ಉದ್ಯೋಗಗಳನ್ನು ಕಿತ್ತುಕೊಂಡು ಹಿಂದಿ ರಾಜ್ಯಗಳ ಜನರಿಗೆ ನೀಡುವ ಹುನ್ನಾರವಿದೆ. ಆಮ್‌ ಆದ್ಮಿ ಪಾರ್ಟಿಯು ಇದನ್ನು ಖಂಡಿಸುತ್ತದೆ. ಎಲ್ಲ ಭಾಷೆಗಳನ್ನು ಸಮಾನವಾಗಿ ಗೌರವಿಸುವುದರಲ್ಲಿ ಆಮ್‌ ಆದ್ಮಿ ಪಾರ್ಟಿ ನಂಬಿಕೆ ಹೊಂದಿದೆʼ ಎಂದು ಪೃಥ್ವಿ ರೆಡ್ಡಿ ಹೇಳಿದರು.

ʼಕೇಂದ್ರ ಸರ್ಕಾರವು ಕನ್ನಡ ಅನ್ಯಾಯ ಮಾಡುತ್ತಿದ್ದರೂ ಕರ್ನಾಟಕದ ಸರ್ಕಾರ, ಶಾಸಕರು, ಸಂಸದರು ದನಿ ಎತ್ತದಿರುವುದು ಆಶ್ಚರ್ಯ ತಂದಿದೆ. ಕನ್ನಡಿಗ ಉದ್ಯೋಗಾಕಾಂಕ್ಷಿಗಳ ಹಿತ ಕಾಪಾಡುವುದಕ್ಕಾಗಿ ನಾವೆಲ್ಲರೂ ಒಗ್ಗಟ್ಟಿನಿಂದ ನಿಲ್ಲಬೇಕಾದ ಸಮಯ ಬಂದಿದೆ. ಈ ವಿಚಾರದಲ್ಲಿ ರಾಜಕೀಯಕ್ಕಿಂತ ಕನ್ನಡಿಗ ಯುವಜನತೆಯ ಹಿತವೇ ನಾಡಿನ ಎಲ್ಲ ಜನಪ್ರತಿನಿಧಿಗಳಿಗೆ ಮುಖ್ಯವಾಗಬೇಕುʼ ಎಂದು ಪೃಥ್ವಿ ರೆಡ್ಡಿ ಹೇಳಿದರು.