accident – Peepal Media

ಸೆಲ್ಫಿ ತೆಗೆದುಕೊಳ್ಳಲು ಹೋಗಿ ಬೆಟ್ಟದಿಂದ ಬಿದ್ದ ಮಹಿಳೆ
ಹರಿದ್ವಾರ : ಮುಜಾಫರ್‌ನಗರದ ಜನಕ್‌ಪುರಿಯ ರೇಶು ಎಂಬ 28ರ ಹರೆಯದ ಮಹಿಳೆಯೊಬ್ಬರು ಅಕ್ಟೋಬರ್‌ 26 ಶನಿವಾರ ಬೆಳಗ್ಗೆ ಸೆಲ್ಪಿ ತೆಗೆದುಕೊಳ್ಳಲು ಹೋಗಿ ಮಾನಸ ದೇವಿ ದೇವಸ್ಥಾನದ ಬೆಟ್ಟದ ಬಳಿ 70 ಅಡಿ ಕಮಕದಿಂದ ಬಿದ್ದು ತೀವ್ರವಾಗಿ ಗಾಯಗೊಂಡಿದ್ದಾರೆ.

ಘಟನೆ ನಡೆದಾಗ ರೇಶು ತನ್ನ ಕುಟುಂಬದೊಂದಿಗೆ ಶಿವಾಲಿಕ್ ಪರ್ವತದ ಮೇಲಿರುವ ಮಾನಸಾ ದೇವಿ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದರು ಎಂದು ನಗರ ಪೊಲೀಸ್ ಠಾಣೆ ಎಸ್‌ಎಸ್‌ಐ ವೀರೇಂದ್ರ ರಾಮೋಲಾ ತಿಳಿಸಿದ್ದಾರೆ. ಸ್ಥಳೀಯರ ಸಹಾಯದಿಂದ ರಕ್ಷಿಸಲ್ಪಟ್ಟ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಯಿತು ಮತ್ತು ನಂತರ ಹೆಚ್ಚಿನ ಚಿಕಿತ್ಸೆಗಾಗಿ ಏಮ್ಸ್ ರಿಷಿಕೇಶಕ್ಕೆ ಸ್ಥಳಾಂತರಿಸಲಾಗಿದೆ.

ದೇವಾಲಯದ ಬೆಟ್ಟದ ಕಡಿದಾದ ಭೂಪ್ರದೇಶವು ಯಾತ್ರಾರ್ಥಿಗಳ ನೆಚ್ಚಿನ ಸ್ಥಳವಾಗಿದ್ದು, ಎಚ್ಚರಿಕೆಯ ಫಲಕಗಳ ಹೊರತಾಗಿಯೂ ಸುಂದರವಾದ ದೃಶ್ಯವನ್ನು ನೋಡಲು ಬೆಟ್ಟದ ಅಂಚುಗಳ ಬಳಿ ನಿಲ್ಲುತ್ತಾರೆ. ಈ ರೀತಿಯ ಅಪಘಾತಗಳನ್ನು ತಡೆಯಲು ಹೆಚ್ಚಿನ ಪೊಲೀಸ್ ಬಂದೋಬಸ್ತ್ ಅನ್ನು ಸ್ಥಳೀಯರು ಈಗ ಒತ್ತಾಯಿಸುತ್ತಿದ್ದಾರೆ.

ಪುಣೆ: ಹೆಲಿಕಾಪ್ಟರ್ ಪತನ, 2 ಪೈಲಟ್ ಸೇರಿದಂತೆ 3 ಸಾವು
ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ ಹೆಲಿಕಾಪ್ಟರ್ ಪತನಗೊಂಡು ಬೆಂಕಿ ಹೊತ್ತಿಕೊಂಡ ಪರಿಣಾಮ ಇಬ್ಬರು ಪೈಲಟ್‌ಗಳು ಮತ್ತು ಇಂಜಿನಿಯರ್ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದೆಹಲಿ ಮೂಲದ ಹೆರಿಟೇಜ್ ಏವಿಯೇಷನ್ ​​ಎಂಬ ಖಾಸಗಿ ಸಂಸ್ಥೆಗೆ ಸೇರಿದ ಹೆಲಿಕಾಪ್ಟರ್ ಇಲ್ಲಿನ ಆಕ್ಸ್‌ಫರ್ಡ್ ಕೌಂಟಿ ಗಾಲ್ಫ್ ಕೋರ್ಸ್ ಹೆಲಿಪ್ಯಾಡ್‌ನಿಂದ ಹೊರಟು ಮುಂಬೈನ ಜುಹುಗೆ ತೆರಳುತ್ತಿದ್ದಾಗ ಬೆಳಗ್ಗೆ 7.40ಕ್ಕೆ ಅಪಘಾತಕ್ಕೀಡಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗೋಲ್ಡ್ ಕೋರ್ಸ್‌ಗೆ ಸಮೀಪವಿರುವ ಬವ್‌ಧಾನ್ ಪ್ರದೇಶದ ಗುಡ್ಡಗಾಡು ಪ್ರದೇಶದ ಬಳಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. “ಹೆಲಿಕಾಪ್ಟರ್ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ನಮ್ಮ ತಂಡಗಳು ಅಗ್ನಿಶಾಮಕ ಇಲಾಖೆ ವಾಹನಗಳೊಂದಿಗೆ ಸ್ಥಳಕ್ಕೆ ತಲುಪಿವೆ” ಎಂದು ಪಿಂಪ್ರಿ ಚಿಂಚ್‌ವಾಡ್ ಕಮಿಷನರ್ ಆಫ್ ಪೊಲೀಸ್ ವಿನಯಕುಮಾರ್ ಚೌಬೆ ಹೇಳಿದರು.

ಹೆರಿಟೇಜ್ ಏವಿಯೇಷನ್‌ಗೆ ಸೇರಿದ ಹೆಲಿಕಾಪ್ಟರ್ ಆಕ್ಸ್‌ಫರ್ಡ್ ಕೌಂಟಿ ಗಾಲ್ಫ್ ಕೋರ್ಸ್‌ನ ಹೆಲಿಪ್ಯಾಡ್‌ನಿಂದ ಟೇಕಾಫ್ ಆಗಿದ್ದು, ಗುಡ್ಡಗಾಡು ಪ್ರದೇಶದ ಬವ್‌ಧಾನ್ ಬಳಿ ಅಪಘಾತಕ್ಕೀಡಾಗಿದ್ದು, ಇಬ್ಬರು ಪೈಲಟ್‌ಗಳು ಮತ್ತು ಚಾಪರ್‌ನಲ್ಲಿ ಇಂಜಿನಿಯರ್ ಸಾವನ್ನಪ್ಪಿದ್ದಾರೆ ಎಂದು ಉಪ ಪೊಲೀಸ್ ಆಯುಕ್ತ ವಿಶಾಲ್ ಗಾಯಕ್ವಾಡ್ ಹೇಳಿದ್ದಾರೆ.

ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯದ (ಡಿಜಿಸಿಎ) ಅಧಿಕಾರಿಯೊಬ್ಬರು ಕೂಡ ಘಟನೆ ಬೆಳಗ್ಗೆ 7.40ಕ್ಕೆ ನಡೆದಿದ್ದು, ಅಪಘಾತಕ್ಕೀಡಾದ ಅಗಸ್ಟಾ 109 ಹೆಲಿಕಾಪ್ಟರ್ ಹೆರಿಟೇಜ್ ಏವಿಯೇಷನ್‌ಗೆ ಸೇರಿದ್ದು ಎಂದು ದೃಢಪಡಿಸಿದ್ದಾರೆ. ಅಪಘಾತದ ನಂತರ ಹೆಲಿಕಾಪ್ಟರ್‌ಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಗ್ನಿಶಾಮಕ ದಳದ ಸಿಬ್ಬಂದಿ ಮಾಹಿತಿ ಮೇರೆಗೆ ಸ್ಥಳಕ್ಕೆ ಅಗ್ನಿಶಾಮಕ ಟೆಂಡರ್‌ಗಳು ಮತ್ತು ನೀರಿನ ಟ್ಯಾಂಕರ್‌ಗಳು ಧಾವಿಸಿವೆ.

ಮೃತರನ್ನು ಗಿರೀಶ್ ಕುಮಾರ್, ಪ್ರೀತಮ್ ಸಿಂಗ್ ಭಾರದ್ವಾಜ್ ಮತ್ತು ಪರಮ್‌ಜೀತ್ ಸಿಂಗ್ ಎಂದು ಗುರುತಿಸಲಾಗಿದೆ ಎಂದು ಪಿಂಪ್ರಿ ಚಿಂಚ್‌ವಾಡ್ ಮುನ್ಸಿಪಲ್ ಕಾರ್ಪೊರೇಷನ್‌ನ ಅಗ್ನಿಶಾಮಕ ಅಧಿಕಾರಿ ಅನಿಲ್ ಡಿಮ್ಲೆ ತಿಳಿಸಿದ್ದಾರೆ.

ಆಕ್ಸ್‌ಫರ್ಡ್ ಕೌಂಟಿ ಗೋಲ್ಡ್ ಕೋರ್ಸ್‌ನ ಹೆಲಿಪ್ಯಾಡ್‌ನಿಂದ ಬೆಳಗ್ಗೆ 7.30ರ ಸುಮಾರಿಗೆ ಹೆಲಿಕಾಪ್ಟರ್ ಟೇಕಾಫ್ ಆಯಿತು ಎಂದು ಪಿಂಪ್ರಿ ಚಿಂಚ್‌ವಾಡ್‌ನ ಜಂಟಿ ಪೊಲೀಸ್ ಆಯುಕ್ತ ಶಶಿಕಾಂತ್ ಮಹಾವರ್ಕರ್ ತಿಳಿಸಿದ್ದಾರೆ.

ಈ ಪ್ರದೇಶದಲ್ಲಿ ಮಂಜು ಕವಿದಿದ್ದು ಹೆಲಿಕಾಪ್ಟರ್ ಅಪಘಾತಕ್ಕೆ ಕಾರಣವಾಯಿತು ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. “ವಿಸ್ತೃತ ತನಿಖೆಯು ಅಪಘಾತಕ್ಕೆ ನಿಖರವಾದ ಕಾರಣವನ್ನು ಖಚಿತಪಡಿಸಲಿದೆ,” ಎಂದು ಅವರು ಹೇಳಿದರು.

ನಿಲ್ಲದ ಮೆಟ್ರೋ ಆತ್ಮಹತ್ಯೆ ದುರಂತ ; ಸಿಬ್ಬಂದಿ ಮುಂಜಾಗ್ರತೆಯಿಂದ ಉಳಿಯಿತು ಜೀವ
ಬೆಂಗಳೂರು: ನಮ್ಮ ಮೆಟ್ರೋ ಟ್ರ್ಯಾಕ್‌ಗೆ ಹಾರಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ನಡೆದಿದೆ. ಬೆಂಗಳೂರಿನ ಜ್ಞಾನಭಾರತಿ ಮೆಟ್ರೋ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ.

ರೈಲು ಬರಲು ಇನ್ನು ಕೆಲವೇ ನಿಮಿಷಗಳು ಇರುವಾಗ ಏಕಾಏಕಿ ವ್ಯಕ್ತಿಯೊಬ್ಬ ಟ್ರ್ಯಾಕ್ ಗೆ ಜಿಗಿದಿದ್ದಾನೆ. ತಕ್ಷಣವೇ ಕಾರ್ಯಪ್ರವೃತ್ತರಾದ ಮೆಟ್ರೋ ಸಿಬ್ಬಂದಿ ಆತನನ್ನು ರಕ್ಷಿಸಿದ್ದಾರೆ.

ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ವಿವರ ಲಭ್ಯವಾಗಿಲ್ಲ. ಅದೃಷ್ಟವಶಾತ್ ಯಾವುದೇ ಅವಘಡ ಸಂಭವಿಸಿಲ್ಲ. ಏಕಾಏಕಿ ವ್ಯಕ್ತಿ ನಮ್ಮ ಮೆಟ್ರೋಗೆ ಜಿಗಿದಿದ್ದು ಇದನ್ನು ಗಮನಿಸಿದ ಕೂಡಲೇ ಸಿಬ್ಬಂದಿಗಳು ರೈಲು ಸಂಚಾರವನ್ನು ಸ್ಥಗಿತಗೊಳಿಸಿ ಆತನನ್ನು ಬಚಾಚ್ ಮಾಡಿದ್ದಾರೆ.

ತಕ್ಷಣವೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಬೆಂಗಳೂರು ಮೈಸೂರು ಹೈವೆ : ಸರಣಿ ಅಪಘಾತದಲ್ಲಿ ಹೊತ್ತಿ ಉರಿದ ಕಾರು
ಇನ್ನೇನು ಜಗದ್ವಿಖ್ಯಾತ ಮೈಸೂರು ದಸರಾದ ಅದ್ಭುತ ಕ್ಷಣಗಳಿಗೆ ತಯಾರಾಗುತ್ತಿದೆ. ಇನ್ನೊಂದು ಕಡೆ ಬೆಂಗಳೂರು ಮೈಸೂರು ಚತುಷ್ಪಥ ಹೆದ್ದಾರಿಯಲ್ಲಿ ವಾಹನಗಳ ಸಂಚಾರ ದಟ್ಟಣೆ ಹೆಚ್ಚಾಗಿದೆ. ಸಧ್ಯ ಈ ಹಿನ್ನೆಲೆಯಲ್ಲಿ ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಶನಿವಾರ ಸರಣಿ ಅಪಘಾತವಾಗಿದೆ.

ಈ ಸರಣಿ ಅಪಘಾತದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರು ಸೇರಿ ನಾಲ್ಕು ಕಾರು ಜಖಂಗೊಂಡಿವೆ, ಒಂದು ಕಾರು ಹೊತ್ತಿ ಉರಿದ ಬಗ್ಗೆಯೂ ವರದಿ ಲಭ್ಯವಾಗಿದೆ.

ಬೆಂಗಳೂರು ಕಡೆಯಿಂದ ಮೈಸೂರು ಕಡೆಗೆ ತೆರಳುವಾಗ ವೋಕ್ಸ್ ವ್ಯಾಗನ್ ಕಾರಿಗೆ ಸಿಮೆಂಟ್ ಸಾಗಿಸುತ್ತಿದ್ದ ಲಾರಿಯೊಂದು ಹಿಂದಿನಿಂದ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಮುಂದೆ ಚಲಿಸುತ್ತಿದ್ದ ನಾಲ್ಕು ಕಾರುಗಳು ಸಹ ಒಂದಕ್ಕೊಂದು ಡಿಕ್ಕಿಯಾಗಿವೆ.

ಇದೇ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಚಲಿಸುತ್ತಿದ್ದ ಕಾರಿಗೂ ಸಹ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಮೊದಲು ಅಫಘಾತವಾದ ವೋಕ್ಸ್ ವ್ಯಾಗನ್ ಕಾರು ಹೊತ್ತಿ ಉರಿದಿದೆ.

ಕಾರಿಗೆ ಬೆಂಕಿ ಆವರಿಸಿಕೊಳ್ಳುವಷ್ಟರಲ್ಲಿ ಸ್ಥಳೀಯರು ಕಾರಿನಲ್ಲಿ ಇದ್ದವರನ್ನು ರಕ್ಷಿಸಿದ್ದಾರೆ. ಕಾರಿನಲ್ಲಿದ್ದ ಬೆಂಗಳೂರಿನ‌ ನವ ದಂಪತಿ ಯಶವಂತ್- ಯಶಸ್ವಿನಿ ಹಾಗೂ ಚಾಲಕ ರಾಘವೇಂದ್ರ ಅಪಾಯದಿಂದ ಪಾರಾಗಿದ್ದಾರೆ.

ಸಧ್ಯ ಬೆಂಗಳೂರಿನಿಂದ ಮೈಸೂರು ವರೆಗೂ ಸಂಚಾರ ದಟ್ಟಣೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಪ್ರಯಾಣಿಕರು ಸೂಕ್ಷ್ಮವಾಗಿ ವಾಹನ ಚಲಾಯಿಸಲು ಟ್ರಾಫಿಕ್ ಪೊಲೀಸರು ಮನವಿ ಮಾಡಿದ್ದಾರೆ. ಶ್ರೀರಂಗಪಟ್ಟಣ ಬಳಿ ಆದ ಈ ಅಪಘಾತದಲ್ಲಿ ಯಾವುದೇ ಸಾವುನೋವುಗಳು ಸಂಭವಿಸಿಲ್ಲ. ಶ್ರೀರಂಗಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್ ಅಪಘಾತದಲ್ಲಿ ವೈದ್ಯಕೀಯ ವಿದ್ಯಾರ್ಥಿ ಸಾವು, ಮತ್ತೊಬ್ಬನಿಗೆ ಗಾಯ
ಮಂಗಳೂರು: ಬೈಕ್‌ನಲ್ಲಿ ವೇಗವಾಗಿ ಚಲಿಸುತ್ತಿದ್ದ ಕಾರಣ, ಅಪಘಾತ ಸಂಭವಿಸಿ ವೈದ್ಯಕೀಯ ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು, ಹಿಂಬದಿ ಸವಾರ ಗಾಯಗೊಂಡಿರುವ ಘಟನೆ  ಸೋಮವಾರ ತಡರಾತ್ರಿ ಕುತ್ತೂರಿನ ಮಡಕ ಕ್ವಾಟ್ರಗುತ್ತು ಬಳಿ ನಡೆದಿದೆ.

ಪೊಲೀಸ್‌ ಮಾಹಿತಿ ಪ್ರಕಾರ, ಮೃತನು ಯಶವಂತಪುರ ಬೆಂಗಳೂರು ನಿವಾಸಿ ನಿವೃತ್ತ ಶಿಕ್ಷಕ ಸಿದ್ದರಾಜು ಅವರ ಪುತ್ರ ನಿಶಾಂತ್ (22) ಎಂದು ತಿಳಿದುಬಂದಿದ್ದು, ಹಿಂಬದಿ ಸವಾರ ಬೀದರ್ ನಿವಾಸಿ ಶಕೀಬ್ ಎಂದು ತಿಳಿದು ಬಂದಿದೆ. ಇಬ್ಬರೂ ಎಂಬಿಬಿಎಸ್ ಮುಗಿಸಿದ್ದು,ಕಣಚೂರು ವೈದ್ಯಕೀಯ ಕಾಲೇಜಿನಲ್ಲಿ ತಮ್ಮ ಎರಡನೇ ವರ್ಷದ ಇಂಟರ್ನ್ಶಿಪ್ ಮಾಡುತ್ತಿದ್ದರು ಎನ್ನಲಾಗಿದೆ.

ನಿಶಾಂತ್ ಮತ್ತು ಶಕೀಬ್ ತಮ್ಮ ಬೈಕಿನಲ್ಲಿ ವೇಗವಾಗಿ ಹೋಗುವಾಗ ರಸ್ತೆ ಹಂಪ್ ಅನ್ನು ಗಮನಿಸಲಿಲ್ಲದ ಕಾರಣ, ಬೈಕ್‌ ಸವಾರರು ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಬಿದ್ದಕಾರಣ, ಬಲವಾಗಿ ಪೆಟ್ಟು ಬಿದ್ದಿದ್ದರಿಂದ ನಿಶಾಂತ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಿಂಬದಿ ಸವಾರ ಶಕೀಬ್‌ ಗಾಯಗೊಂಡಿದ್ದಾರೆ. ಈ ಘಟನೆಯು ಮಧ್ಯರಾತ್ರಿ 12:15 ರವೇಳೆಗೆ ಸಂಭವಿಸಿದ್ದು, ರಸ್ತೆಯಲ್ಲಿ ನಿರ್ಜನವಾಗಿತ್ತು. ನಂತರ ಅಲ್ಲಿನ ಸ್ಥಳೀಯರು ಅದೇ ದಾರಿಯಲ್ಲಿ ಪ್ರಯಾಣ ನಡೆಸುತ್ತಿರುವಾಗ ಅಪಘಾತವಾಗಿರುವುದನ್ನು ನೋಡಿ ಕೂಡಲೇ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ಸಂಬಂಧ ಮಂಗಳೂರು ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಶೃಂಗೇರಿಯ ದರ್ಶನಕ್ಕೆ ತೆರಳುತ್ತಿದ್ದ ವೇಳೆ ಅಪಘಾತ: ಮೂವರ ಸಾವು
ಉಡುಪಿ : ಖಾಸಗಿ ಬಸ್‌ ಹಾಗೂ ಕಾರಿನ ನಡುವೆ ಭೀಕರ ಅಪಘಾತ ನಡೆದಿದ್ದು, ಒಂದೇ ಕುಟುಂಬದ ಮೂರು ಮಂದಿ ಸಾವನ್ನಪ್ಪಿರುವ ಘಟನೆ ಕಾರ್ಕಾಳದ ಉಡುಪಿ ಸುಬ್ರಮಣ್ಯ ರಾಜ್ಯ ಹೆದ್ದಾರಿಯಲ್ಲಿ ಶನಿವಾರ ಸಂಭವಿಸಿದೆ.

ಉಡುಪಿಯ ಸುಬ್ರಮಣ್ಯ ರಾಜ್ಯ ಹೆದ್ದಾರಿಯ ಬಜಗೋಳಿ ಸಮೀಪ ನೆಲ್ಲಿಕಾರು ಬಳಿ ಶನಿವಾರದಂದು ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಖಾಸಗಿ ಬಸ್‌ ಮತ್ತು ಕಾರು ಡಿಕ್ಕಿ ಹೊಡೆದುಕೊಂಡಿದ್ದು, ಗಂಡ, ಹೆಂಡತಿ ಮತ್ತು ಮಗು ಸಮೇತ ಒಂದೇ ಕುಟುಂಬರ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೆಂಗಳೂರಿನಲ್ಲಿ ನೆಲೆಸಿದ್ದ ಆಂಧ್ರದ ಮೂವರು ಧರ್ಮಸ್ಥಳದಿಂದ ಶೃಂಗೇರಿಗೆ ಹೋಗುವಾಗ ಈ ಘಟನೆ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಕಾರ್ಕಾಳ ಪೊಲೀಸರು, ಸ್ಥಳವನ್ನು ಪರಿಶೀಲಿಸಿದ್ದು, ಸಾರ್ವಜನಿಕರ ಸಹಕಾರದಿಂದ ಕಾರಿನಲ್ಲಿದ್ದ ಮೃತದೇಹಗಳನ್ನು ಹೊರತೆಗೆದಿದ್ದು, ಬಳಿಕ ಮರಣೋತ್ತರ ಪರೀಕ್ಷೆಗೆಂದು ಆಸ್ಪತ್ರೆಗೆ ರವಾನಿಸಿದ್ದಾರೆ.

ನಾಗರಾಜ್(40‌), ಪ್ರತ್ಯುಷಾ(32) ಮತ್ತು ಎರಡು ವರ್ಷದ ಮಗು ಅಪಘಾತದಲ್ಲಿ ಸಾವನ್ನಪ್ಪಿದ್ದ ದುರ್ದೈವಿಗಳಾಗಿದ್ದಾರೆ.

ನೆಲೋಗಿ ಕ್ರಾಸ್ ಬಳಿ ಅಪಘಾತ: ಸಿಪಿಐ ಹಾಗೂ ಪತ್ನಿ ಸ್ಥಳದಲ್ಲೇ ಸಾವು
ಕಲಬುರಗಿ: ನಿಂತಿದ್ದ , ಕಂಟೇನರ್ ಲಾರಿಗೆ ಮಾರುತಿ ಸ್ವಿಫ್ಟ್ ಡಿಸೈರ್ ಕಾರು ಡಿಕ್ಕಿ ಹೊಡೆದ ಪರಿಣಾಮ, ಸಿಂದಗಿಯ ಆರಕ್ಷಕ ವೃತ್ತ ನಿರೀಕ್ಷಕರಾದ ಶ್ರೀಯುತ ರವಿ ಉಕ್ಕುಂದ ಹಾಗೂ ಅವರ ಧರ್ಮಪತ್ನಿ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್ ಬಳಿ ನಡೆದಿದೆ.

ಮಾಹಿತಿ ಪ್ರಕಾರ, ಸಿಪಿಐ ರವಿ ಉಕ್ಕುಂದ, ಪತ್ನಿ ಮಧುರವರು, ಇಂದು ಆಸ್ಪತ್ರೆಗೆಂದು ಕಾರಿನಲ್ಲಿ ಪ್ರಯಾಣಿಸುವಾಗ ನೆಲೋಗಿ ಕ್ರಾಸ್ ಬಳಿ ನಿಂತಿದ್ದ, ಕಂಟೇನರ್ ಗೆ ರು ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದ್ದು, ರವಿ ಉಕ್ಕುಂದ ಮತ್ತು ಮಧುರವರು ಸ್ಥಳದಲ್ಲೇ ಸಾವನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಬಿಬಿಎಂಪಿ ಟ್ರಕ್ ಗೆ ದ್ವಿಚಕ್ರ ವಾಹನ ಡಿಕ್ಕಿ: ಇಬ್ಬರ ದುರ್ಮರಣ
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ಸೇರಿದ ಕಸದ ಲಾರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರು ಹೊರವಲಯ ಹುಲಿಕುಂಟೆ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 207ರಲ್ಲಿ ಸೋಮವಾರ ಸಂಜೆ ನಡೆದಿದೆ.

ಮೃತರು ನೆಲಮಂಗಲ ತಾಲೂಕಿನ ಸೋಂಪುರ ಸಮೀಪದ ಮರಳಕುಂಟೆ ನಿವಾಸಿಗಳಾದ ಎಂ.ಮಹೇಶ್ (35) ಮತ್ತು ಆರ್.ಮಾರುತಿ (35)  ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತ ನಡೆದ ಸ್ಥಳದಿಂದ 15 ಕಿ.ಮೀ ದೂರದಲ್ಲಿರುವ ತ್ಯಾಮಗೊಂಡ್ಲು ಬಳಿ ಟ್ರಕ್ ಚಾಲಕ ಸಿಕ್ಕಿಬಿದ್ದಿದ್ದಾನೆ. ಸಂಜೆ 4.30 ರ ಸುಮಾರಿಗೆ ಸಂತ್ರಸ್ತರು ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.

ಘಟನೆಯ ನಂತರ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಮತ್ತು ಪ್ರತಿದಿನ ಕಸವನ್ನು ಎಸೆಯುತ್ತಿರುವ ಎಂಎಸ್ಜಿಪಿ ತ್ಯಾಜ್ಯ ಟೆಕ್ ಪಾರ್ಕ್ ಅನ್ನು ಮುಚ್ಚುವಂತೆ ಒತ್ತಾಯಿಸಿದರು. ಆರಂಭದಲ್ಲಿ ಶವವನ್ನು ಸಾಗಿಸಲು ಪೊಲೀಸರಿಗೆ ಅವಕಾಶ ನೀಡದ ಗ್ರಾಮಸ್ಥರು, ರಸ್ತೆಗಳಲ್ಲಿ ಬಿಬಿಎಂಪಿ ಟ್ರಕ್ ಗಳನ್ನು ದುಡುಕಿನಿಂದ ಓಡಿಸಲಾಗುತ್ತಿದೆ, ಇದು ಇಂತಹ ಅಪಘಾತಗಳಿಗೆ ಕಾರಣವಾಗುತ್ತಿದೆ ಎಂದು ಆರೋಪಿಸಿದ್ದಾರೆ.

ನಿಯಂತ್ರಣ ತಪ್ಪಿದ ಚಾಲಕ: 48 ವಾಹನಗಳು ಜಖಂ
ಪುಣೆ: ಪುಣೆ-ಬೆಂಗಳೂರು ಹೆದ್ದಾರಿಯ ನವಲೆ ಸೇತುವೆ ಬಳಿ ದೊಡ್ಡ ಅಪಘಾತ ಸಂಭವಿಸಿದ್ದು, ಸುಮಾರು 48 ವಾಹನಗಳು ಜಖಂಗೊಂಡಿರುವ ಘಟನೆ ಪುಣೆಯಲ್ಲಿ ನಡೆದಿದೆ.

ಈ ಕುರಿತು ಮಾಹಿತಿ ನೀಡಿರುವ ಪುಣೆ ಪೊಲೀಸರು, ಒಬ್ಬ ಚಾಲಕ ನಿಯಂತ್ರಣ ಕಳೆದುಕೊಂಡ ಪರಿಣಾಮವಾಗಿ, ಒಟ್ಟು 24 ಕಾರುಗಳು ತೀವ್ರ ಹಾನಿಗೊಳಗಾಗಿದ್ದು, ಒಂದರ ಹಿಂದೆ, ಇನ್ನೊಂದು ಗುದ್ದಿಕೊಂಡು ಒಟ್ಟು 48 ವಾಹನಗಳಿಗೆ ಹಾನಿಯಾಗಿದೆ. ಅದರಲ್ಲಿ ಸಣ್ಣ ವಾಹನಗಳು ಸಹ ಸೇರಿವೆ ಎಂದು ತಿಳಿಸಿದ್ದಾರೆ.

ಘಟನೆ ನಡೆದ ಬಳಿಕ ಟ್ರಕ್ ಚಾಲಕ ಪರಾರಿಯಾಗಿದ್ದು, ಆತನನ್ನು ಬಂಧಿಸಲು ಹುಡುಕಾಡುಟ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಅಪಘಾತವಾಗಿರುವ ಹಿನ್ನೆಲೆಯಲ್ಲಿ, ಆಂಬ್ಯುಲೆನ್ಸ್ ನಲ್ಲಿ 11 ಗಾಯಾಳುಗಳಿಗೆ ಸ್ಥಳದಲ್ಲೇ ಚಿಕಿತ್ಸೆ ನೀಡಲಾಯಿತು. ತೀವ್ರ ಗಾಯಗೊಂಡಿದ್ದ 6 ಜನರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸುವ ಅಗತ್ಯವಿದ್ದರಿಂದ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ, ಹೀಗಾಗಿ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಹೇಳಿದರು.

ಘಟನೆ ತಿಳಿದ ಕೂಡಲೇ ಪುಣೆ ಅಗ್ನಿಶಾಮಕ ದಳ ಮತ್ತು ಪುಣೆ ಮೆಟ್ರೋಪಾಲಿಟನ್ ರೀಜನ್ ಡೆವಲಪ್ಮೆಂಟ್ ಅಥಾರಿಟಿ (MDRDA) ಯಿಂದ ರಕ್ಷಣಾ ತಂಡಗಳು ಸ್ಥಳಕ್ಕೆ ತಲುಪಿ, ರಕ್ಷಣಾ ಕಾರ್ಯಚರಣೆ ಮುಂದುವರೆಸಿವೆ ಎಂದು ಪುಣೆ ಅಗ್ನಿಶಾಮಕ ದಳ ತಿಳಿಸಿದೆ.\

Looks like a Tanker lorry 🚛 was cause of this. It might have rammed through. Elixir effect?

pic.twitter.com/FMIlziASX0
— S͡a͡n͡d͡b͡a͡g͡s͡ (@odradesh) November 20, 2022

ಬಿಹಾರ: ಮದುವೆ ಮೆರವಣಿಗೆ ವೇಳೆ ಟ್ರಕ್‌ ಪಲ್ಟಿ, 12 ಮಂದಿ ಸಾವು
ಹಾಜಿಪುರ: ಧಾರ್ಮಿಕ ಮೆರವಣಿಗೆ ನಡೆಯುತ್ತಿರುವ ಸಂದರ್ಭದಲ್ಲಿ ವೇಗವಾಗಿ ಬಂದ ಟ್ರಕ್‌, ನಿಯಂಣತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 12 ಜನರು ಸಾವನ್ನಪ್ಪಿರುವ ಘಟನೆ ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ಭಾನುವಾರ ಸಂಜೆ ನಡೆದಿದೆ.

ಈ ಕುರಿತು ಪೊಲೀಸ್‌ ಅಧಿಕಾರಿಗಳು ಮಾಹಿತಿ ನೀಡಿದ್ದು, ಬಿಹಾರ ರಾಜಧಾನಿಯಿಂದ ಸುಮಾರು 30 ಕಿ.ಮೀ ದೂರದಲ್ಲಿರುವ ಉತ್ತರ ಬಿಹಾರ ಜಿಲ್ಲೆಯ ದೇಸ್ರಿ ಪೊಲೀಸ್ ಠಾಣೆ ಪ್ರದೇಶದ ಬಳಿ ರಾತ್ರಿ 9 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ ಎಂದು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಅಪಘಾತದ ಬಗ್ಗೆ ದುಃಖ ವ್ಯಕ್ತಪಡಿಸಿದ್ದು, ಸಾವನ್ನಪ್ಪಿರುವ ಕುಟುಂಬಕ್ಕೆ ₹ 2 ಲಕ್ಷ ಮತ್ತು ಗಾಯಾಳುಗಳಿಗೆ ತಲಾ ₹ 50,000 ಪರಿಹಾರವನ್ನು ಘೋಷಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ಬಿಹಾರದ ವೈಶಾಲಿಯಲ್ಲಿ ನಡೆದ ಅಪಘಾತವು ದುಃಖಕರವಾಗಿದ್ದು, ದುಃಖತಪ್ತ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಹಾಗೂ ಗಾಯಗೊಂಡವರು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದು ಆರೈಸಿದ್ದಾರೆ. ನಂತರ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿ (PMNRF)ನಿಂದ 2 ಲಕ್ಷ ರೂ.ಗಳ ಪರಿಹಾರವನ್ನು ಮೃತರ ಕುಟುಂಬಗಳಿಗೆ ನೀಡಲಾಗುತ್ತಿದ್ದು, ಗಾಯಗೊಂಡವರಿಗೆ 50,000 ರೂ.ಗಳನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.

The accident in Vaishali, Bihar is saddening. Condolences to the bereaved families. May the injured recover soon. An ex-gratia of Rs. 2 lakh from PMNRF would be given to the next of kin of each deceased. The injured would be given Rs. 50,000: PM @narendramodi
— PMO India (@PMOIndia) November 20, 2022

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೂಡ ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದು, ಅಪಘಾತವಾಗಿರುವುದು ʼಅತ್ಯಂತ ನೋವಿನ ಸಂಗತಿʼ ಎಂದು ಹೇಳಿದ್ದಾರೆ.

ಬಿಹಾರದ ವೈಶಾಲಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಕ್ಕಳು ಸೇರಿದಂತೆ ಹಲವರು ಸಾವನ್ನಪ್ಪಿದ ಸುದ್ದಿ ಅತ್ಯಂತ ನೋವಿನ ಸಂಗತಿಯಾಗಿದೆ. ಈ ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತೇನೆ ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ಟ್ವೀಟ್‌ ಮಾಡಿದ್ದಾರೆ.

वैशाली, बिहार में हुई सड़क दुर्घटना में बच्चों समेत कई लोगों के हताहत होने की ख़बर अत्यंत पीड़ादायक है। मैं इस हादसे में अपने प्रियजनों को खोने वाले परिवारों के प्रति गहन शोक-संवेदनाएं व्यक्त करती हूं तथा घायल हुए लोगों के शीघ्र स्वस्थ होने की कामना करती हूं।
— President of India (@rashtrapatibhvn) November 20, 2022

ಈ ಘಟನೆ ನಡೆದ ಸ್ಥಳವು ಮಹುವಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರಿವ ಹಿನ್ನೆಲೆಯಲ್ಲಿ,  ಆರ್ಜೆಡಿ ಶಾಸಕ ಮುಖೇಶ್ ರೋಶನ್ ಅವರು ಘಟನೆ ನಡೆದಿರುವ ಸ್ಥಳಕ್ಕೆ ಧಾವಿಸಿ, ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಹಾಜಿಪುರದ (ಜಿಲ್ಲಾ ಕೇಂದ್ರ) ಸದರ್ ಆಸ್ಪತ್ರೆಗೆ ರವಾನಿಸಿದ್ದಾರೆ.

ನಂತರ ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ʼಕನಿಷ್ಠ ಒಂಬತ್ತು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ ಅನೇಕರು ಗಾಯಗೊಂಡಿರುವ ಪರಿಣಾಮ, ಚಿಕಿತ್ಸೆಗೆ ಕರೆದೊಯ್ಯಲಾಗಿದ್ದು, ಮೂವರು ಮಾರ್ಗದ ಮಧ್ಯೆಯೇ ಸಾವನ್ನಪ್ಪಿದ್ದಾರೆ. ಹೀಗಾಗಿ ಯಾರ ಸ್ಥಿತಿ ಗಂಭೀರವಾಗಿದೆಯೋ ಅವರನ್ನು ಪಾಟ್ನಾದ ಆಸ್ಪತ್ರೆಗಳಿಗೆ ಕಳುಹಿಸಲಾಗುತ್ತಿದೆʼ ಎಂದು ಮಾಹಿತಿ ನೀಡಿದ್ದಾರೆ.

ವೈಶಾಲಿ ಪೊಲೀಸ್ ಅಧೀಕ್ಷಕ ಮನೀಶ್ ಕುಮಾರ್ ಮಾತನಾಡಿ, ʼಮದುವೆಗಳಿಗೆ ಸಂಬಂಧಿಸಿದ ಸಂಪ್ರದಾಯದ ಭಾಗವಾಗಿ ಮೆರವಣಿಗೆಯನ್ನು ನಡೆಸಲಾಗಿತ್ತು, ಹತ್ತಿರದ ಸುಲ್ತಾನಪುರ ಗ್ರಾಮದ ನಿವಾಸಿಯೊಬ್ಬರ ಮನೆಯಲ್ಲಿ ಕೆಲವೇ ದಿನಗಳಲ್ಲಿ ಮದುವೆ ನಿಶ್ಚಯವಾಗಿತ್ತು. ಪಕ್ಕದ ಮಹ್ನಾರ್-ಹಾಜಿಪುರ ಹೆದ್ದಾರಿಯಲ್ಲಿ ವೇಗವಾಗಿ ಚಲಿಸುತ್ತಿದ್ದ ಟ್ರಕ್ ನ ಚಾಲಕ ನಿಯಂತ್ರಣ ಕಳೆದುಕೊಂಡಿದ್ದರಿಂದ ಈ ಅಪಘಾತ ಸಂಭವಿಸಿದ್ದು, ಚಾಲಕ ಕೂಡ ಟ್ರಕ್‌ ಒಳಗೆ ಸಿಕ್ಕಿಹಾಕಿಕೊಂಡಿದ್ದಾನೆ. ಹಾಗೆಯೇ ಅವನು ಜೀವಂತವಾಗಿರುವ ಯಾವುದೇ ಲಕ್ಷಣಗಳು ಕಂಡುಬರುತ್ತಿಲ್ಲ. ಘಟನೆಯಲ್ಲಿ ಕನಿಷ್ಠ ನಾಲ್ಕು ಮಕ್ಕಳು ಸಾವನ್ನಪಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆಂದು ತಿಳಿಸಿದ್ದಾರೆ.

ʼರಕ್ಷಣಾ ಕಾರ್ಯವನ್ನು ಮುಂದುವರೆಸಲು ಮತ್ತು ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಯನ್ನು ನಿಯಂತ್ರಣದಲ್ಲಿಡಲು ನಾವು ಪಕ್ಕದ ಹಲವಾರು ಪೊಲೀಸ್ ಠಾಣೆಗಳಿಂದ ಸಿಬ್ಬಂದಿಯನ್ನು ಕರೆಸಿದ್ದೇವೆ” ಎಂದು ಎಸ್ಪಿ ಹೇಳಿದ್ದಾರೆ.

ಏತನ್ಮಧ್ಯೆ, ಉಪ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಅಪಘಾತದ ಬಗ್ಗೆ ದುಃಖ ವ್ಯಕ್ತಪಡಿಸಿದ್ದು, ಅಪಘಾತದಲ್ಲಿ ಗಾಯಗೊಂಡವರಿಗೆ ಸರಿಯಾದ ಚಿಕಿತ್ಸೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಸಾವನ್ನಪಿರುವವರ ಕುಟುಂಬಕ್ಕೆ ನಿಯಮಗಳ ಪ್ರಕಾರ ಪರಿಹಾರವನ್ನು ವಿತರಿಸಲು ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು, ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.

आज रात्रि हाजीपुर में एक सड़क दुर्घटना में कई लोगों की मृत्यु की हृदयविदारक खबर से मर्माहत हूँ। शोक संतप्त परिजनों के प्रति अपनी गहरी संवेदना व्यक्त तथा घायलों के शीघ्र स्वस्थ होने कामना करता हूँ। ईश्वर दिवंगत आत्माओं की शांति व उनके परिजनों को यह दुःख सहने की शक्ति प्रदान करें।
— Tejashwi Yadav (@yadavtejashwi) November 20, 2022