actors – Peepal Media

ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ಚಿತ್ರನಟಿ ರಮ್ಯಾ
ನಿನ್ನೆಯ ದಿನ ಹೊಸ ಸುದ್ದಿ ನೀಡುವುದಾಗಿ ಘೋಷಣೆ ಮಾಡುವ ಮೂಲಕ ಚಿತ್ರನಟಿ ರಮ್ಯಾ ತಮ್ಮ ಅಭಿಮಾನಿಗಳು ಮತ್ತು ಸಿನಿಮಾಸಕ್ತರಲ್ಲಿ ಕುತೂಹಲ ಮೂಡಿಸಿದ್ದರು. ಈಗಾಗಲೇ ರಮ್ಯಾ ಚಿತ್ರರಂಗಕ್ಕೆ ಮರು ಪ್ರವೇಶದ ಅವರ ಅಭಿಮಾನಿಗಳಲ್ಲಿ ಸಾಕಷ್ಟು ನಿರೀಕ್ಷೆ ಇತ್ತು. ಅದಕ್ಕೆ ಸರಿಯಾಗಿ ರಮ್ಯಾ ಅಭಿಮಾನಿಗಳಿಗೆ ಖುಷಿ ಸುದ್ದಿಯೊಂದನ್ನು ನೀಡಿದ್ದಾರೆ.

ಈ ಬಗ್ಗೆ ರಮ್ಯಾ ತಮ್ಮ ಅಧಿಕೃತ ಫೇಸ್ಬುಕ್ ಮತ್ತು ಟ್ವಿಟ್ಟರ್ ಖಾತೆಯಲ್ಲಿ ಈ ಬಗ್ಗೆ ಚಿತ್ರರಂಗದಲ್ಲಿ ತಮ್ಮ ಮುಂದಿನ ನಡೆಯ ಬಗ್ಗೆ ಸ್ಪಷ್ಟಪಡಿಸಿದ್ದಾರೆ. ಅವರ ಸಂದೇಶ ಈ ಕೆಳಕಂಡಂತಿದೆ.

ಎಲ್ಲರಿಗೂ ಗೌರಿ ಗಣೇಶ ಹಬ್ಬದ ಶುಭಾಶಯಗಳು. ಸಿಹಿ ಸುದ್ದಿಯ ಕುರಿತು ನಿಮ್ಮೆಲ್ಲರ ಊಹೆ ಸರಿಯಾಗಿದೆ. ಹೌದು, ನಾನು ಮತ್ತೆ ಚಿತ್ರರಂಗಕ್ಕೆ ಹಿಂತಿರುಗುತ್ತಿದ್ದೇನೆ. ಆದರೆ ಈ ಬಾರಿ ನನ್ನ ನಿರ್ಮಾಣ ಸಂಸ್ಥೆ ‘ಆಪಲ್ ಬಾಕ್ಸ್ ಸ್ಟುಡಿಯೋಸ್’ ನ ಮೂಲಕ ನಿರ್ಮಾಪಕಿ ಆಗಲಿದ್ದೇನೆ ಎನ್ನುವುದು ವಿಶೇಷ.

ಏನಿದು ಆಪಲ್ ಬಾಕ್ಸ್? ಅದೊಂದು ಸಾಧಾರಣವಾದ, ಆದರೆ ಅಷ್ಟೇ ಉಪಯುಕ್ತವಾದ ಪುಟ್ಟ ಮರದ ಪೆಟ್ಟಿಗೆ. ನನ್ನ ಚಿತ್ರರಂಗದ ಪಯಣದುದ್ದಕ್ಕೂ ನಿರಂತರವಾಗಿ ಆಪಲ್ ಬಾಕ್ಸ್ ಜೊತೆಗಿದೆ. ಸೆಟ್ ನಲ್ಲಿ ಕೂರಲು ಕುರ್ಚಿಗಳಿಲ್ಲದೇ ಇದ್ದಾಗ ಅಥವಾ ಕ್ಯಾಮೆರಾದ, ಇಲ್ಲವೇ ನಟರ ಎತ್ತರ ಹೆಚ್ಚಿಸಬೇಕಾದಾಗ ಈ ಆಪಲ್ ಬಾಕ್ಸ್ ನೆರವಿಗೆ ಬಂದಿದೆ. ಈ ಪೆಟ್ಟಿಗೆಯ ಸರಳತೆ ನನಗೆ ಸದಾ ಸ್ಪೂರ್ತಿಯಾಗಿ ನನ್ನನ್ನು ಪ್ರೇರೇಪಿಸಿದೆ.

ಪ್ರಸ್ತುತ, ಆಪಲ್ ಬಾಕ್ಸ್ ಸಂಸ್ಥೆ ಎರಡು ಚಿತ್ರಗಳನ್ನು ನಿರ್ಮಿಸಲು ಸಜ್ಜಾಗಿದೆ ಎಂದು ಹೇಳುವಲ್ಲಿ ನನಗೆ ಸಂತಸವಿದೆ. ಈ ಎರಡೂ ಚಿತ್ರಗಳು ಕೆ.ಆರ್.ಜಿ ಸಂಸ್ಥೆಯ ವಿತರಣೆ ಮೂಲಕ ಚಿತ್ರಮಂದಿರಗಳಲ್ಲಿ ತೆರೆ ಕಾಣಲಿವೆ. ಅದರ ಜೊತೆಯಲ್ಲೇ OTT ಪ್ಲಾಟಫಾರಂಗಳಿಗಾಗಿ ಸಿನೆಮಾ ಹಾಗೂ ವೆಬ್ ಸೀರಿಸ್ ನಿರ್ಮಾಣ ಮಾಡಲು ಆಪಲ್ ಬಾಕ್ಸ್ ಸ್ಟುಡಿಯೋಸ್ ಸಿದ್ಧವಾಗುತ್ತಿದೆ.

ಈ ಬಗ್ಗೆ ಮತ್ತಷ್ಟು ಹೊಸ ವಿವರಗಳನ್ನು ಆಪಲ್ ಬಾಕ್ಸ್ ನ ಸಾಮಾಜಿಕ ಜಾಲತಾಣಗಳಲ್ಲಿ ನಿರೀಕ್ಷಿಸಿ.

ನನ್ನೆಲ್ಲಾ ಪ್ರಯತ್ನಗಳಲ್ಲೂ ನಿರಂತರವಾಗಿ ಜೊತೆಗಿರುವ ನನ್ನ ಕುಟುಂಬ, ಸ್ನೇಹಿತರು, ಹಿತೈಷಿಗಳು, ಸಿನಿಮಾ ವರ್ಗದವರು ಮತ್ತು ಎಲ್ಲಕ್ಕಿಂತಲೂ ಹೆಚ್ಚಾಗಿ ನನ್ನ ಪ್ರೀತಿಯ ಅಭಿಮಾನಿಗಳಿಗೆ ಹೃತ್ಪೂರ್ವಕ ವಂದನೆಗಳು. ನಿಮ್ಮೆಲ್ಲರ ಸಹಕಾರ ಮತ್ತು ಪ್ರೋತ್ಸಾಹ ಬೆಲೆ ಕಟ್ಟಲಾಗದ್ದು.

ಇದರ ಜೊತೆಗೆ ವಿಜಯ ಕಿರಗಂದೂರು, ಜಯಣ್ಣ, ಯೋಗಿ ಜಿ ರಾಜ್ ಮತ್ತು ಕಾರ್ತಿಕ್ ಗೌಡ ಇವರಿಗೂ ವಿಶೇಷ ಧನ್ಯವಾದಗಳು.

ಹೊಸ ಆರಂಭದತ್ತ ಹೆಜ್ಜೆ ಇಡುತ್ತಾ
ಕೃತಜ್ಞತೆಗಳೊಂದಿಗೆ
ರಮ್ಯಾ

ಪ್ರಗತಿಪರ ಆಲೋಚನೆ, ಒಳ್ಳೆಯ ಉದ್ದೇಶಗಳನ್ನು ಹೊಂದಿರುವ ರಮ್ಯಾ ಅವರಿಂದ ಅವರ ನಿರ್ಮಾಣ ಸಂಸ್ಥೆಯ ಕಡೆಯಿಂದ ಈ ಮೂಲಕ ಸದಭಿರುಚಿಯ, ವಿಶಿಷ್ಟ ಪ್ರಯೋಗದ ಚಿತ್ರಗಳನ್ನು ನಿರೀಕ್ಷಿಸಬಹುದು. ರಮ್ಯಾ ಅವರ ಹೊಸ ನಿರ್ಮಾಣ ಸಂಸ್ಥೆ ‘ಆಪಲ್ ಬಾಕ್ಸ್ ಸ್ಟುಡಿಯೋಸ್’ ಚಿತ್ರರಂಗದಲ್ಲಿ ಹೆಚ್ಚು ಎತ್ತರಕ್ಕೆ ಬೆಳೆಯಲಿ ಎಂಬುದೂ ನಮ್ಮ ಹಾರೈಕೆ.

’ಮಾದೇವ’ನಿಗೆ ಸೋನಲ್ ಮೊಂಥೆರೋ ಮತ್ತೆ ‘ರಾಬರ್ಟ್’ ಜೋಡಿಯ ಮೋಡಿ
ಮರಿ ಟೈಗರ್ ವಿನೋದ್ ಪ್ರಭಾಕರ್ ಬತ್ತಳಿಕೆಯ ಬಹುನಿರೀಕ್ಷಿತ ಸಿನಿಮಾಗಳಲ್ಲೊಂದು ಮಾದೇವ. ವಿಭಿನ್ನ ಕಥಾಹಂದರ ಹೊಂದಿರುವ ಈ ಸಿನಿಮಾ ಅಂಗಳಕ್ಕೀಗ ಪಂಚತಂತ್ರ ಬ್ಯೂಟಿ ಸೋನಲ್ ಮೊಂಥೆರೋ ಎಂಟ್ರಿ ಕೊಟ್ಟಿದ್ದಾರೆ. ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಸೋನಲ್ ಈ ಚಿತ್ರದಲ್ಲಿ ವಿನೋದ್ ಪ್ರಭಾಕರ್ ಗೆ ಜೋಡಿಯಾಗಿ ನಟಿಸಲಿದ್ದಾರೆ.

ವಿನೋದ್ ಹಾಗೂ ಸೋನಲ್ ಈ ಹಿಂದೆ ರಾಬರ್ಟ್ ಸಿನಿಮಾದಲ್ಲಿ ತನು-ರಾಘವ ಎಂಬ ಪಾತ್ರದ ಮೂಲಕ ಪ್ರೇಕ್ಷಕರ ಮನೆ ಗೆದ್ದಿದ್ದರು. ಇದೀಗ ಮತ್ತೊಮ್ಮೆ ಈ ಜೋಡಿ ಒಂದಾಗಿರುವುದು ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಿಸಿದೆ. ಖಾಕಿ ಸಿನಿಮಾ ಸಾರಥಿ ನವೀನ್ ಬಿ ರೆಡ್ಡಿ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಮಾದೇವ ಚಿತ್ರದಲ್ಲಿ ಸೋನಲ್ 80ರ ದಶಕದ ಮಧ್ಯಮವರ್ಗದ ಹುಡುಗಿಯಾಗಿ ಬಣ್ಣ ಹಚ್ಚಲಿದ್ದಾರೆ.

80 ದಶಕದ ಎಮೋಷನಲ್ ಹಾಗೂ ಮಾಸ್ ಎಲಿಮೆಂಟ್ ಕಂಟೆಂಟ್ ಹೊಂದಿರುವ ಮಾದೇವ ಸಿನಿಮಾ ರೈಲು ಮತ್ತು ಜೈಲಿನ ಬ್ಯಾಕ್ ಡ್ರಾಪ್ ನಲ್ಲಿ ನಡೆಯಲಿದೆ. ವಿನೋದ್ ಪ್ರಭಾಕರ್ ಈ ಹಿಂದಿನ ಪಾತ್ರಗಳಿಗಿಂತ ಈ ಚಿತ್ರದಲ್ಲಿ ಡಿಫರೆಂಟ್ ಆಗಿ ಕಾಣಿಸಿಕೊಳ್ಳಲಿದ್ದಾರೆ. ಶಿವಮೊಗ್ಗ, ಧಾರವಾಡ ಮತ್ತು ಹೈದರಾಬಾದ್‌ನಲ್ಲಿ ಸಿನಿಮಾದ ಶೂಟಿಂಗ್ ನಡೆಯಲಿದೆ. ಹಿರಿಯ ನಟಿ ಶ್ರುತಿ, ಪೋಷಕ ಕಲಾವಿದ ಅಚ್ಯುತ್ ಕುಮಾರ್, ಕಾಕ್ರೋಚ್ ಸುಧಿ ಸೇರಿದಂತೆ ಹಲವರು ತಾರಾಬಳಗದಲ್ಲಿದ್ದು, ಬಾಲಕೃಷ್ಣ ತೋಟ ಕ್ಯಾಮೆರಾ ವರ್ಕ್, ಪ್ರದ್ಯೋಥನ್ ಮ್ಯೂಸಿಕ್  ಸಿನಿಮಾಕ್ಕಿದೆ. ಗಾಯತ್ರಿ ರಾಜೇಶ್ ಹಾಗೂ ಲವ್ ಗುರು ಸುಮನ್ ನಿರ್ಮಾಣದ ಮಾದೇವ ಸಿನಿಮಾದ ಶೂಟಿಂಗ್ ಭರದಿಂದ ಸಾಗ್ತಿದೆ.

ರಾಷ್ಟ್ರ ಪ್ರಶಸ್ತಿ ವಿಜೇತರಿಗೆ ವಾಣಿಜ್ಯ ಮಂಡಳಿ ಸನ್ಮಾನ￼
68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ಕನ್ನಡಕ್ಕೆ ಮೂರು ಪ್ರಶಸ್ತಿಗಳು ಲಭಿಸಿವೆ. ವಿಶಿಷ್ಟ ಕಥಾಹಂದರದ ‘ಡೊಳ್ಳು’ ಸಿನಿಮಾಗೆ ಅತ್ಯುತ್ತಮ ಕನ್ನಡ ಪ್ರಾದೇಶಿಕ ಸಿನಿಮಾ ವಿಭಾಗ ಹಾಗೂ ಸಿಂಕ್ ಸೌಂಡ್ ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿ ದೊರೆತಿದೆ.  ‘ತಲೆದಂಡ’ ಚಿತ್ರಕ್ಕೆ ಪರಿಸರ ಕಾಳಜಿಯ ಕಥಾವಸ್ತುವುಳ್ಳ ರಾಷ್ಟ್ರ ಪ್ರಶಸ್ತಿಯ ಗರಿ ಒಲಿದಿದೆ.  ‘ಅತ್ಯುತ್ತಮ ಕಲೆ ಹಾಗೂ ಸಾಂಸ್ಕೃತಿಕ ಸಿನಿಮಾ’ ವಿಭಾಗದಲ್ಲಿ ಗಿರೀಶ್​ಕಾಸರವಳ್ಳಿ ನಿರ್ದೇಶನದ ‘ನಾದದ ನವನೀತ’ ಚಿತ್ರ ಪ್ರಶಸ್ತಿಗೆ ಭಾಜನವಾಗಿದ್ದು, ಇದು ಕನ್ನಡಿಗರಿಗೆ ಹೆಮ್ಮೆಯ ಸಂಗತಿ.

ಮೊನ್ನೆ ಫಿಲ್ಮ್‌ ಚೇಂಬರ್ ವತಿಯಿಂದ ರಾಷ್ಟ್ರ ಪ್ರಶಸ್ತಿ ವಿಜೇತರನ್ನು ಸನ್ಮಾನ ಮಾಡಲಾಯಿತು. ಡೊಳ್ಳು ಸಿನಿಮಾ ನಿರ್ಮಾಪಕರಾದ ಪವನ್ ಒಡೆಯರ್ ಹಾಗೂ ಅಪೇಕ್ಷಾ ಪುರೋಹಿತ್ ದಂಪತಿ, ಚಿತ್ರದ ನಿರ್ದೇಶಕ ಸಾಗರ್ ಪುರಾಣಿಕ್ ಹಾಗೂ ‘ತಲೆದಂಡ’ ಚಿತ್ರದ ನಿರ್ಮಾಪಕಿ ಡಾ. ಹೇಮಾಮಾಲಿನಿ ಕೃಪಾಕರ್ ಸೇರಿದಂತೆ ಈ ಬಾರಿ ಪ್ರಶಸ್ತಿ ವಿಜೇತರಿಗೆ ಫಿಲ್ಮಂ ಚೇಂಬರ್ ಅಧ್ಯಕ್ಷರಾದ ಭಾ.ಮಾ.ಹರೀಶ್ ಸಾರಥ್ಯದಲ್ಲಿ ಸನ್ಮಾನ ಮಾಡಲಾಯಿತು. ಈ ಸಂದರ್ಭದಲ್ಲಿ ಫಿಲ್ಮಂ ಚೇಂಬರ್ ಪದಾಧಿಕಾರಿಗಳು, ಮಾಜಿ ಅಧ್ಯಕ್ಷ ಚಿನ್ನೇಗೌಡ ಸೇರಿದಂತೆ ಹಲವರು ಭಾಗಿಯಾಗಿದ್ದರು.

ವಿಕ್ರಾಂತ್‌ರೋಣನ ಅದ್ಭುತ ಲೋಕ 27ರಂದು 27 ದೇಶಗಳಲ್ಲಿ ಚಿತ್ರದ ಪ್ರಿವ್ಯೂ
ವಿಕ್ರಾಂತ್‌ರೋಣ ಪ್ರತಿದಿನ ತನ್ನ ವಿಶೇಷತೆಗಳಿಂದ ಸುದ್ದಿಯಾಗುತ್ತಿರೋ ಚಿತ್ರ.  ಮೊನ್ನೆಯಷ್ಟೇ ದುಬೈನಲ್ಲಿ ಚಿತ್ರದ ವರ್ಲ್ಡ್ ಪ್ರೀಮಿಯರ್ ಆಗುತ್ತಿರುವ ಬಗ್ಗೆ ಸುದ್ದಿಯಾಗಿತ್ತು, ಅದಾದ ನಂತರ ಈಗ ‘ಸಿನೆಡಬ್ಸ್’  ಎಂಬ ಆಪ್‌ ಮೂಲಕ ಪ್ರೇಕ್ಷಕರು ವಿಕ್ರಾಂತ್‌ರೋಣ ಚಿತ್ರವನ್ನು ತಮ್ಮಿಷ್ಟದ ಭಾಷೆಗಳಲ್ಲಿ ನೋಡುವಂಥ ಅವಕಾಶವನ್ನು ಕಲ್ಪಿಸುತ್ತಿದೆ.

ನಿನ್ನೆ ನಡೆದ ಚಿತ್ರದ ಪತ್ರಿಕಾಗೋಷ್ಟಿಯಲ್ಲಿ ನಿರ್ಮಾಪಕ ಜಾಕ್‌ಮಂಜು, ಈ ಆಫ್ ಅನ್ನು ಹೊರತಂದಿರುವ ಆದಿತ್ಯಕಶ್ಯಪ್ ಅವರು ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಆದಿತ್ಯ ಕಶ್ಯಪ್ ಮಾತನಾಡುತ್ತ ಪ್ಲೇಸ್ಟೋರ್‌ನಲ್ಲಿ ಇದನ್ನು ಡೌನ್‌ಲೋಡ್ ಮಾಡಿಕೊಂಡು ತೆರೆಮೇಲೆ ಯಾವುದೇ ಭಾಷೆ ಪ್ರದರ್ಶನವಾಗುತ್ತಿರಲಿ, ನಾವು ಮೊಬೈಲ್ ನಲ್ಲಿ ನಮ್ಮಿಷ್ಟದ ಭಾಷೆ ಆಯ್ಕೆ ಮಾಡಿಕೊಂಡು ಹೆಡ್ ಫೋನ್ ಮೂಲಕ ಕೇಳುತ್ತ ಚಿತ್ರವನ್ನು ಎಂಜಾಯ್ ಮಾಡಬಹುದು. ಕಳೆದವಾರ ರಿಲೀಸಾದ ತಮಿಳಿನ ರಾಕೆಟ್ರಿ ಚಿತ್ರದ ಜೊತೆ ನಾವು ಟೈಅಪ್ ಆಗಿದ್ದು, ಅದಕ್ಕೆ ಉತ್ತಮ ಪ್ರತಿಕ್ರಿಯೆ ದೊರಕಿದೆ. ಇದಲ್ಲದೆ ಓಟಿಟಿಯಲ್ಲಿ ಬರುವ ಚಿತ್ರಗಳನ್ನೂ ನಮ್ಮ ಭಾಷೆಯಲ್ಲೇ ವೀಕ್ಷಿಸಬಹುದಾಗಿದೆ. ಚಿತ್ರದ ನಿರ್ಮಾಪಕರು ಆಪ್‌ನೊಂದಿಗೆ ಮೊದಲೇ ಟೈಅಪ್ ಮಾಡಿಕೊಂಡಿದ್ದರೆ ಮಾತ್ರವೇ ಅದು ಸಾಧ್ಯವಾಗಲಿದೆ ಎಂದು ವಿವರಿಸಿದರು.

ನಂತರ ನಿರ್ಮಾಪಕ ಜಾಕ್ ಮಂಜು ಮಾತನಾಡುತ್ತ ಇವರು ಒಂದೆರಡು ತಿಂಗಳ ಹಿಂದೆಯೇ ನನ್ನಬಳಿ ಬಂದಿದ್ದರೆ ಬೆಂಗಾಳಿ, ಮರಾಠಿ, ಗುಜರಾತಿ ಭಾಷೆಯಲ್ಲೂ ನಮ್ಮ ಚಿತ್ರವನ್ನು ಡಬ್ ಮಾಡಬಹುದಿತ್ತು. ನಾವು ಡಬ್ ಮಾಡಿದ ಅಷ್ಟೂ ಭಾಷೆಯ ಸೌಂಡ್‌ಟ್ರ‍್ಯಾಕನ್ನು ಇವರಿಗೆ ಕೊಟ್ಟಾಗ ಅವರು ಅದನ್ನು ತಮ್ಮ ಆಪ್‌ಗೆ ಅಳವಡಿಸುತ್ತಾರೆ. ಕೆಲ ಕೇಂದ್ರಗಳಲ್ಲಿ ಎಲ್ಲಾ ಭಾಷೆಯಲ್ಲಿ ರಿಲೀಸ್ ‌ಮಾಡಲು ಸಾಧ್ಯವಾಗದಿದ್ದಾಗ ಆ ಭಾಷೆಯ ಜನರಿಗೆ ಇದರಿಂದ ಅನುಕೂಲವಾಗುತ್ತದೆ ಎಂದರು. 27ರಂದು ಪ್ರಪಂಚದ 27 ದೇಶಗಳಲ್ಲಿ ವಿಕ್ರಾಂತ್ ರೋಣ ಪ್ರಿವ್ಯೂ ಆಗುತ್ತಿದೆ. ಜೊತೆಗೆ ದುಬೈನಲ್ಲಿ 5 ಭಾಷೆಯಲ್ಲೂ ಪ್ರದರ್ಶನವಾಗಲಿದೆ. ನಿನ್ನೆಯಷ್ಟೇ ನೇಪಾಳ ಕನ್‌ಫರ್ಮ್ ಆಗಿದೆ. ಅಲ್ಲದೆ ಪಾಕಿಸ್ತಾನದಲ್ಲೂ ವಿಕ್ರಾಂತ್‌ರೋಣ ರಿಲೀಸಾಗುವ ಸಾಧ್ಯತೆಯಿದೆ. ಪ್ರಪಂಚದಾದ್ಯಂತ 3200ರಿಂದ 3500 ಚಿತ್ರಮಂದಿಗಳಲ್ಲಿ ರಿಲೀಸಾಗುತ್ತಿರುವ ವಿಕ್ರಾಂತ್ ರೋಣ, ಕರ್ನಾಟಕದಲ್ಲೇ 400ರಿಂದ 420 ಥೇಟರ್‌ಗಳಲ್ಲಿ ಪ್ರದರ್ಶನ ಕಾಣುತ್ತಿದ್ದು, ಕರ್ನಾಟಕಕ್ಕಿಂತ ತೆಲುಗು ರಾಜ್ಯಗಳಲ್ಲಿ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಈಗಾಗಲೇ ಬಹುತೇಕ ಕಡೆಗಳಲ್ಲಿ ಅಡ್ವಾನ್ಸ್ ಬುಕ್ಕಿಂಗ್ ಶುರುವಾಗಿದ್ದು, ಉತ್ತಮ ಪ್ರತಿಕ್ರಿಯೆ

ಸಿಗುತ್ತಿದೆ. ಇದರ ಜೊತೆಗೆ, ಬಾಲಿವುಡ್‌ನಲ್ಲಿ 900 ಚಿತ್ರಮಂದಿರ, ಟಾಲಿವುಡ್‌ನಲ್ಲಿ 350ಕ್ಕೂ ಹೆಚ್ಚು ಥಿಯೇಟರ್, ವಿದೇಶಗಳಲ್ಲಿ 800ಕ್ಕೂ ಅಧಿಕ ಸ್ಕ್ರೀನ್‌ಗಳಲ್ಲಿ ವಿಕ್ರಾಂತ್‌ರೋಣ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ.

ಶೇಕಡಾ.90 ರಷ್ಟು 3ಡಿ ವರ್ಷನ್ ಚಿತ್ರ ರಿಲೀಸಾಗುತ್ತಿದ್ದು, 3ಡಿ ಇಲ್ಲದ ಕಡೆ ಮಾತ್ರವೇ 2ಡಿ ವರ್ಷನ್ ಪ್ರದರ್ಶನವಾಗಲಿದೆ.