anand chandra shekar mamani – Peepal Media

ಆನಂದ ಚಂದ್ರಶೇಖರ ಮಾಮನಿ ನಿಧನ : ಗಣ್ಯರ ಸಂತಾಪ
ಬೆಂಗಳೂರು :  ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವಿಧಾನಸಭಾ ಉಪಸಭಾಧ್ಯಕ್ಷರಾದ ಆನಂದ ಚಂದ್ರಶೇಖರ ಮಾಮನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಹಲವಾರು ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಬಹುದಿನಗಳಿಂದ ಬೆಳಗಾವಿ ಜಿಲ್ಲೆ ಸವದತ್ತಿ ಯಲ್ಲಮ್ಮ ಮತಕ್ಷೇತ್ರದ ಶಾಸಕ, ಉಪಸಭಾಧ್ಯಕ್ಷರಾದ ಆನಂದ ಚಂದ್ರಶೇಖರ ಮಾಮನಿಯವರು ಕ್ಯಾನ್ಸರ್‌ ರೋಗಕ್ಕೆ ಚಿಕಿತ್ಸೆಯಿಂದ ಬಳಲುತ್ತಿದ್ದರು. ಮಣಿಪಾಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಈ ಕುರಿತು ದುಃಖ ಹಂಚಿಕೊಂಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ʼನಮ್ಮ ಪಕ್ಷದ ಶಾಸಕರು, ರಾಜ್ಯ ವಿಧಾ‌ನಸಭೆಯ ಮಾನ್ಯ ಉಪ ಸಭಾಧ್ಯಕ್ಷರಾದ ಆತ್ಮೀಯ ಶ್ರೀ ಆನಂದ ಚಂದ್ರಶೇಖರ ಮಾಮನಿ ಅವರು ನಿಧನರಾದ ವಿಷಯ ತಿಳಿದು ಅತೀವ ದುಃಖವಾಗಿದೆ‌. ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಿ, ಈ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗಕ್ಕೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ‌ʼ ಎಂದು ಹೇಳಿದ್ದಾರೆ.

ಬೆಳಗಾವಿ ಜಿಲ್ಲೆ ಸವದತ್ತಿ ಯಲ್ಲಮ್ಮ ಮತಕ್ಷೇತ್ರದ ಶಾಸಕ, ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು. ಮೃತರ ಆಶ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ದೇವರು ಕುಟುಂಬವರ್ಗ ಮತ್ತು ಅಭಿಮಾನಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯ ವಿಧಾನ ಸಭೆಯ ಉಪ ಸಭಾಧ್ಯಕ್ಷರು‌‌ ಹಾಗೂ ಸವದತ್ತಿ ಕ್ಷೇತ್ರದ ಶಾಸಕರಾಗಿದ್ದ ಶ್ರೀ ಆನಂದ ಚಂದ್ರಶೇಖರ ಮಾಮನಿ ಅವರು ನಿಧನರಾದ ವಿಷಯ ತಿಳಿದು ಮನಸ್ಸಿಗೆ ಅಪಾರ ನೋವಾಯಿತು. ಅವರ‌ ಆತ್ಮಕ್ಕೆ ಶಾಂತಿ ಸಿಗಲಿ, ಮೃತರ ಕುಟುಂಬಕ್ಕೆ ಸಾಂತ್ವನಗಳು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸಂತಾಪ ಸೂಚಿಸಿದ್ದಾರೆ.