andrapradesh – Peepal Media

ಆಂದ್ರಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಚಂದ್ರಬಾಬು ನಾಯ್ಡು
ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಇಂದು ಬುಧವಾರ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ, ಇದು ಸೇರಿ ಅವರು ನಾಲ್ಕನೆ ಬಾರಿಗೆ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಅಧಿಕಾರವಹಿಸಿಕೊಂಡಂತಾಗುತ್ತದೆ.

ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವುದರೊಂದಿಗೆ ಚಂದ್ರಬಾಬು ನಾಯ್ಡು ಅವರು ಆಂಧ್ರದ ರಾಜಕೀಯ ಇತಿಹಾಸದಲ್ಲಿ ಹೊಸ ಅಧ್ಯಾಯವನ್ನು ಬರೆದಿದ್ದಾರೆ. ಕೇವಲ ತಿಂಗಳುಗಳ ಹಿಂದೆಯಷ್ಠೇ ಕೌಶಲ್ಯ ಅಭಿವೃದ್ಧಿ ಹಗರಣಕ್ಕೆ ಸಂಬಂಧಿಸಿ ಮನಿ ಲಾಂಡರಿಂಗ್ ತನಿಖೆಯಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧಿಸಲ್ಪಟ್ಟ ನಂತರ ಅವರು ಜೈಲು ಸೇರಿದ್ದರು. ಜಾಮೀನಿನ ಮೇಲೆ ಬಿಡುಗಡೆಯಾದ ನಂತರ, ನಾಯ್ಡು ಅವರು ಟಿಡಿಪಿಯನ್ನು ಬಿಜೆಪಿ ಮತ್ತು ಜನಸೇನೆಯೊಂದಿಗೆ ಮೈತ್ರಿ ಮಾಡಿಕೊಂಡು ಚುನಾವಣೆಯನ್ನು ಎದುರಿಸಿದ್ದರು ಮತ್ತು ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದರು.

ಚಂದ್ರಬಾಬು ನಾಯ್ಡು ಜೊತೆಗೆ ಜನಸೇನಾ ಪಕ್ಷದ ಮುಖ್ಯಸ್ಥ ಮತ್ತು ‘ಪವರ್ ಸ್ಟಾರ್’ ಪವನ್ ಕಲ್ಯಾಣ್ ಕೂಡ ಕ್ಯಾಬಿನೆಟ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.  ಪವನ್ ಕಲ್ಯಾಣ್ ಅವರೊಂದಿಗೆ ಚಂದ್ರಬಾಬು ನಾಯ್ಡು ಅವರ ಪುತ್ರ ನಾರಾ ಲೋಕೇಶ್ ಸೇರಿದಂತೆ 23 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಜನಸೇನೆಗೆ ಮೂರು ಕ್ಯಾಬಿನೆಟ್ ಸ್ಥಾನಗಳು ದೊರೆತಿವೆ. ಬಿಜೆಪಿಯ ಸತ್ಯ ಕುಮಾರ್ ಯಾದವ್ ಅವರಿಗೆ ಕೂಡ ಆಂಧ್ರಪ್ರದೇಶದ ಸಚಿವ ಸಂಪುಟದಲ್ಲಿ ಅವಕಾಶವನ್ನು ನೀಡಿದ್ದು ವಿಶೇಷ.

ವಿಜಯವಾಡದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಸೂಪರ್‌ಸ್ಟಾರ್ ರಜನಿಕಾಂತ್, ನಟ ಚಿರಂಜೀವಿ, ತೆಲಂಗಾಣ ಮಾಜಿ ರಾಜ್ಯಪಾಲ ತಮಿಳಿಸೈ ಸೌಂದರರಾಜನ್ ಮತ್ತು ಹಲವಾರು ನಾಯಕರು ಉಪಸ್ಥಿತರಿದ್ದರು.

2024ರ ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ 175 ಸ್ಥಾನಗಳಲ್ಲಿ 164 ಸ್ಥಾನಗಳನ್ನು ಗಳಿಸಿದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA)ಗೆ ಪ್ರಚಂಡ ವಿಜಯವನ್ನು ನೀಡಿತ್ತು. ಟಿಡಿಪಿ ಏಕಾಂಗಿಯಾಗಿ 135 ಸ್ಥಾನಗಳನ್ನು ಗೆದ್ದರೆ, ಪವನ್ ಕಲ್ಯಾಣ್ ಅವರ ಜನಸೇನೆ 21 ಸ್ಥಾನಗಳನ್ನು ಗಳಿಸಿತ್ತು ಮತ್ತು ಬಿಜೆಪಿ 8 ಸ್ಥಾನಗಳನ್ನು ಗಳಿಸಿತ್ತು. ಆಡಳಿತರೂಢ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್‌ಆರ್ ಕಾಂಗ್ರೆಸ್ ಪಕ್ಷ (ವೈಎಸ್‌ಆರ್‌ಸಿಪಿ) ಕೇವಲ 11 ಸ್ಥಾನಗಳನ್ನು ಮಾತ್ರ ಗಳಿಸಿಕೊಂಡಿತ್ತು.

ಕಾಂಗ್ರೆಸ್‌ ಯುವ ಮುಖಂಡ ರಾಜ್ ಸಂಪತ್ ನಿಗೂಢ ಸಾವು
ಧರ್ಮಾವರಂ: ಎನ್‌ಎಸ್‌ಯುಐ ರಾಷ್ಟ್ರೀಯ ಕಾರ್ಯದರ್ಶಿ ಹಾಗೂ ಕಾಂಗ್ರೆಸ್‌ ಯುವ ಮುಖಂಡ ರಾಜ್ ಸಂಪತ್ ಆಂಧ್ರಪ್ರದೇಶದ ಶ್ರೀ ಸತ್ಯಸಾಯಿ ಜಿಲ್ಲೆಯ ಧರ್ಮಾವರಂ ಹೊರವಲಯದ ನೀರಾವರಿ ಟ್ಯಾಂಕ್ ಬಳಿ ನಿಗೂಢವಾಗಿ ಸಾವನ್ನಪ್ಪಿದ್ದು, ಶವವಾಗಿ ಪತ್ತೆಯಾಗಿದ್ದಾರೆ.

ವೃತ್ತಿಯಲ್ಲಿ ವಕೀಲರಾಗಿದ್ದ ಸಂಪತ್(36) ಲೋಕಸಭೆ ಚುನಾವಣೆಗೆ ಕೇರಳದಲ್ಲಿ ಎನ್‌ಎಸ್‌ಯುಐ ಉಸ್ತುವಾರಿಯನ್ನು ವಹಿಸಿಕೊಂಡು ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳ ಪರವಾಗಿ ಸಾಕಷ್ಟು ಕೆಲಸ ಮಾಡಿದ್ದರು. ಜೊತೆಗೆ ರಾಹುಲ್ ಗಾಂಧಿಯವರ ಐದು ತಿಂಗಳ ಭಾರತ್ ಜೋಡೋ ಯಾತ್ರೆಯಲ್ಲಿ ಹೆಜ್ಜೆ ಹಾಕಿದ್ದರು.

ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ರಾಜ್ ಸಂಪತ್‌ಗೆ ಅವರ ಸ್ನೇಹಿತರು ಕೊನೆಯ ಬಾರಿ ನೋಡಿದ್ದರು. ಆ ಬಳಿಕ ಅವರು ನಾಪತ್ತೆಯಾಗಿದ್ದರು. ಸ್ಥಳೀಯರು ಮೃತದೇಹವೊಂದು ಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದಾಗ ಪ್ರಕರಣ ಬಯಲಿಗೆ ಬಂದಿದೆ. ಪ್ರಾಥಮಿಕ ತನಿಖೆಯಿಂದ ಸಂಪತ್‌ನನ್ನು ಬೇರೆಡೆ ಕೊಲೆ ಮಾಡಿ ಶವವನ್ನು ಪಟ್ಟಣದ ಹೊರವಲಯದ ತೊಟ್ಟಿಯ ಬಳಿ ಎಸೆದು ಹೋಗಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ಪ್ರಕರಣದ ತನಿಖೆಯ ನೇತೃತ್ವ ವಹಿಸಿರುವ ಡಿಎಸ್ಪಿ ಶ್ರೀನಿವಾಸ ರಾವ್, ವಿಧಿವಿಜ್ಞಾನ ತಂಡದೊಂದಿಗೆ ಶವ ಪತ್ತೆಯಾದ ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದಾರೆ.

ಸಂಪತ್‌ಗೆ ಸಹ ವಕೀಲರೊಬ್ಬರ ಜತೆ ಜಮೀನು ವಿವಾದವಿದ್ದು, ಈ ಕುರಿತು ಇತ್ತೀಚೆಗೆ ಹಿರಿಯ ಪೊಲೀಸ್‌ ಅಧಿಕಾರಿಗೆ ವಾಟ್ಸಾಪ್‌ ಸಂದೇಶ ಕಳುಹಿಸಿ ಜೀವಕ್ಕೆ ಅಪಾಯವಿದೆ ಎಂದು ಹೇಳಿದ್ದರು ಎಂದು ಸಂಪತ್‌ ಅವರ ಆಪ್ತ ಮೂಲಗಳು ತಿಳಿಸಿವೆ. ಈ ಕುರಿತು ಎಲ್ಲಾ ಕೋನಗಳಲ್ಲೂ ತನಿಖೆ ನಡೆಸಲಾಗುವುದು ಎಂದು ಪೊಲೀಸರು ಹೇಳಿಕೆ ನೀಡಿದ್ದಾರೆ.

ವಕೀಲರಾಗಿರುವ ಸಂಪತ್ ಅವರು ಧರ್ಮಾವರಂ ಮಂಡಲದ ಯರ್ರಗುಂಟಪಲ್ಲೆ ಮೂಲದವರು ಆದರೆ ಎರಡು ದಶಕಗಳಿಗೂ ಹೆಚ್ಚು ಕಾಲ ಹಿಂದೂಪುರದಲ್ಲಿ ನೆಲೆಸಿದ್ದರು. ವಿದ್ಯಾರ್ಥಿ ಜೀವನದಿಂದ ರಾಜಕೀಯ ಪ್ರಾರಂಭಿಸಿ ಅವರು ಕಾಂಗ್ರೆಸ್ ಪಕ್ಷದಲ್ಲಿ ಮುನ್ನೆಲೆಗೆ ಬಂದಿದ್ದರು ಮತ್ತು NSUIನ ರಾಷ್ಟ್ರೀಯ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದರು.

ಈ ಕುರಿತು NSUI ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ರಾಜ್ ಸಂಪತ್‌ ನಿಧನಕ್ಕೆ ಸಂತಾಪವನ್ನು ಸೂಚಿಸಿದೆ. ನಿಮ್ಮ ನಾಯಕತ್ವ ಮತ್ತು ಬದ್ಧತೆಯನ್ನು NSUI ಮತ್ತು ಕಾಂಗ್ರೆಸ್‌ ಕುಟುಂಬವು ಶಾಶ್ವತವಾಗಿ ಸ್ಮರಿಸುತ್ತದೆ. ನೀವು ಯಾವಾಗಲೂ ನಮ್ಮ ಹೃದಯದಲ್ಲಿ ಉಳಿಯುತ್ತೀರಿ ಎಂದು ಹೇಳಿಕೊಂಡಿದೆ.

ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅರೆಸ್ಟ್
ಸ್ಕಿಲ್​ ಹಗರಣದ ಆರೋಪದ ಮೇಲೆ ಆಂದ್ರಪ್ರದೇಶದ ಮಾಜಿ ಮುಖ್ಯಮಂತ್ರಿ, ಟಿಡಿಪಿ ಪಕ್ಷದ ನಾಯಕ ಚಂದ್ರಬಾಬು ನಾಯ್ಡು ಅವರನ್ನು ಬಂಧಿಸಲಾಗಿದೆ. ತಡರಾತ್ರಿ ಸಿಐಡಿ ಪೊಲೀಸರು ಆಂದ್ರಪ್ರದೇಶದ ನಂದ್ಯಾಲದಲ್ಲಿ ಬಂಧಿಸಿದ್ದಾರೆ.

ಚಂದ್ರಬಾಬು ನಾಯ್ಡು ಅವರ ಮೇಲೆ ಸ್ಕಿಲ್​ ಡೆವಲಪ್​​ಮೆಂಟ್​ ಯೋಜನೆಯಲ್ಲಿ 371 ಕೋಟಿ ರೂ. ಅಕ್ರಮ ಎಸಗಿದ ಆರೋಪ ಬಂದಿದ್ದು, ಹಗರಣ ಸಂಬಂಧ ಈವರೆಗೆ ಸೂಕ್ತ ಉತ್ತರ ನೀಡದ ಹಿನ್ನೆಲೆಯಲ್ಲಿ ಹೈಕೋರ್ಟ್ ಸೂಚನೆ ಮೇರೆಗೆ ಬಂಧಿಸಲಾಗಿದೆ.

ಚಂದ್ರಬಾಬು ನಾಯ್ಡು ಅವರ ವಿರುದ್ಧ 58 ಕೋಟಿ ಯೋಜನೆಯ ವೆಚ್ಚವನ್ನು 371 ಕೋಟಿ ರೂ.ಗೆ ಹೆಚ್ಚಿಸಿದ ಆರೋಪ ಕೇಳಿ ಬಂದಿತ್ತು. ಕೋರ್ಟ್ ಉತ್ತರಿಸದ ಕಾರಣ ಹಾಗೂ ವಿವಿಧ ಆರೋಪದ ಮೇಲೆ ಹೈಕೋರ್ಟ್ ಸೂಚನೆ ಮೇರೆಗೆ ಐಪಿಸಿ ಸೆಕ್ಷನ್​ 166, 167, 481, 420, 465, 468, 471, 409, 201, r/w 109, 34 ಮತ್ತು 37ರ ಅಡಿ ಚಂದ್ರಬಾಬು ನಾಯ್ಡು ಅವರನ್ನು ಬಂಧಿಸಲಾಗಿದೆ.

ಚಂದ್ರಬಾಬು ನಾಯ್ಡು ಬಂಧನಕ್ಕೆ ಪೊಲೀಸರು ಬಂದ ಸಂದರ್ಭದಲ್ಲಿ ಪೊಲೀಸರಿಗೇ ಧಿಕ್ಕಾರ ಕೂಗಿದ್ದಾರೆ ಎಂದು ತಿಳಿದು ಬಂದಿದೆ. ಇದರ ಜೊತೆಗೆ ಅರೆಸ್ಟ್ ವಾರೆಂಟ್ ಬೇಕು, ಎಫ್ಐಆರ್ ಆಗಿಲ್ಲ, ನಮ್ಮ ಹಕ್ಕು ಕಸಿಯುವ ಕೆಲಸ ಆಗ್ತಿದೆ, ಮುಖ್ಯಮಂತ್ರಿ ಜಗನ್ ಗೆ ಧಿಕ್ಕಾರ ಎಂದೆಲ್ಲಾ ಕೂಗಿ ಹೈಡ್ರಾಮ ಮಾಡಿದ್ದಾರೆ ಎನ್ನಲಾಗಿದೆ.

ಗರ್ಭಿಣಿ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸದೆ ರಸ್ತೆಯಲ್ಲೇ ಪ್ರಸೂತಿ ; ತಿರುಪತಿಯ ವಿಡಿಯೋ ವೈರಲ್
100 ಹಾಸಿಗೆಗಳ ಹೆರಿಗೆ ಆಸ್ಪತ್ರೆ ಎದುರಿನಲ್ಲೇ ಇದ್ದರೂ ಮಹಿಳೆಯೊಬ್ಬರು ಬೀದಿ ಬದಿಯಲ್ಲಿ ಮಗುವಿಗೆ ಜನ್ಮ ನೀಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದುರಂತ ಎಂದರೆ ಪ್ರತಿದಿನ ಸಾವಿರಾರು ಜನ ಪವಿತ್ರ ಕ್ಷೇತ್ರವೆಂದು ಬಂದು ಹೋಗುವ ತಿರುಪತಿ ಕ್ಷೇತ್ರದಲ್ಲೇ ಇಂತದ್ದೊಂದು ಅಮಾನವೀಯ ದುರಂತ ನಡೆದಿದೆ‌.

ಆಂಧ್ರಪ್ರದೇಶದ ತಿರುಪತಿಯ ಆಸ್ಪತ್ರೆ ಸಮೀಪ ರಸ್ತೆಯ ಮಧ್ಯದಲ್ಲಿ ಕೆಲವು ಮಹಿಳೆಯರು ಗರ್ಭಿಣಿ ಮಹಿಳೆಯನ್ನು ಬೆಡ್ ಶೀಟ್ ಮೂಲಕ ಮರೆ ಮಾಡುತ್ತಿರುವುದು ವಿಡಿಯೋದಲ್ಲಿ ನೋಡಬಹುದು. ಜೊತೆಗೆ ಒಬ್ಬ ಪುರುಷನು ಮಗುವಿಗೆ ಜನ್ಮ ನೀಡಲು ಸಹಾಯ ಮಾಡುತ್ತಾನೆ. ಮಹಿಳೆ ನೋವಿನಿಂದ ಕಿರುಚುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ತುಂಬು ಗರ್ಭಿಣಿಯಾಗಿದ್ದ ಮಹಿಳೆ ಹೆರಿಗೆಗೆಂದು ಆಸ್ಪತ್ರೆಗೆ ಬಂದರೆ ಆಸ್ಪತ್ರೆ ಸಿಬ್ಬಂದಿ ಮತ್ತು ಅಧಿಕಾರಿಗಳು ಆಕೆಯನ್ನು ಆಸ್ಪತ್ರೆಗೆ ದಾಖಲಿಸಲು ನಿರಾಕರಿಸಿದ್ದಾರೆ. ಇತ್ತ ಆಸ್ಪತ್ರೆ ಮುಂಭಾಗದಲ್ಲಿ ಮಹಿಳೆಗೆ ಹೆರಿಗೆ ಮಾಡಿಸಲೂ ಸಹ ಸಿಬ್ಬಂದಿ ನಿರಾಕರಿಸಿದ ಕಾರಣ ಈ ಬಗ್ಗೆ ಸಾರ್ವಜನಿಕವಾಗಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಇನ್ನು ಆಸ್ಪತ್ರೆ ಅಧಿಕಾರಿಗಳು ಮತ್ತು ಸಿಬ್ಬಂದಿ ಆಕೆಯ ಬಳಿ ಯಾವುದೇ ದಾಖಲೆಗಳು ಇಲ್ಲದ ಮತ್ತು ಆಕೆಯ ಜೊತೆಯಲ್ಲಿ ಯಾರೂ ಇಲ್ಲದ ಕಾರಣ ಆಕೆಯನ್ನು ಸೇರಿಸಲು ಸಾಧ್ಯವಿಲ್ಲ ಎಂದು ಆಸ್ಪತ್ರೆಯ ಸಿಬ್ಬಂದಿ ಮಹಿಳೆಗೆ ತಿಳಿಸಿದ್ದಾರೆ ಎನ್ನಲಾಗಿದೆ. ಸಾರ್ವಜನಿಕವಾಗಿ ಎಲ್ಲೆಡೆ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಇದನ್ನು ತನಿಖೆಗೆ ಒಪ್ಪಿಸಲಾಗಿದೆ ಎಂದು ಸ್ಥಳೀಯ ಆಡಳಿತ ತಿಳಿಸಿದೆ.

ಹೆರಿಗೆಯ ನಂತರ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಜೊತೆಗೆ ತಿರುಪತಿಯ ಆರೋಗ್ಯ ಇಲಾಖೆ ಸಿಬ್ಬಂದಿ ಮಹಿಳೆಗೆ ಆರೋಗ್ಯ ಕಿಟ್ ಮತ್ತು ಹಣ್ಣುಗಳನ್ನು ಕೊಟ್ಟಿದ್ದಾರೆ.

ಬಿಜೆಪಿಯೇತರ ರಾಜ್ಯಗಳಲ್ಲಿ ‘ಸೂಪರ್ ಸಿಎಂ’ ಆಗ ಹೊರಟ ರಾಜ್ಯಪಾಲರುಗಳಿವರು!
ತಮಿಳುನಾಡಿನ ಡಿಎಂಕೆ ಸಂಸದೀಯ ಪಕ್ಷದ ನಾಯಕ ಟಿ ಆರ್ ಬಾಲು ಅವರು ತಮಿಳುನಾಡು ರಾಜ್ಯಪಾಲರಾದ ಆರ್.ಎನ್. ರವಿ ಅವರನ್ನು ತಕ್ಷಣವೇ ಹಿಂಪಡೆಯಬೇಕು ಅಥವಾ ಪದಚ್ಯುತಗೊಳಿಸಬೇಕು ಎಂಬುದಾಗಿ ಒತ್ತಾಯಿಸುವಂತೆ ತಮ್ಮ ಮಿತ್ರ ಪಕ್ಷಗಳಿಗೆ ಮನವಿ ಮಾಡಿದ್ದಾರೆ. ಭಾರತದ ರಾಷ್ಟ್ರಪತಿಗಳಿಗೆ ಸಹಿ ಜ್ಞಾಪಕ ಪತ್ರಕ್ಕೆ ಸಹಿ ಹಾಕುವಂತೆ ಟಿ.ಆರ್.ಬಾಲು ಸಮಾನ ಮನಸ್ಕ ಪಕ್ಷಗಳ ಸದಸ್ಯರು ಮತ್ತು ಸಮಾನ ಮನಸ್ಕ ಸಂಸದರಿಗೆ ಪತ್ರ ಬರೆದಿದ್ದಾರೆ.

ತಮಿಳುನಾಡಿನ ಎಲ್ಲಾ ರಾಜಕೀಯ ಪಕ್ಷಗಳಿಗೆ ಪತ್ರ ಬರೆದಿರುವ ಡಿಎಂಕೆ ಪಕ್ಷದ ಸಂಸದೀಯ ನಾಯಕ ಟಿ.ಆರ್.ಬಾಲು ಅವರು ಗುರುವಾರದೊಳಗೆ ಈ ಜ್ಞಾಪಕ ಪತ್ರಕ್ಕೆ ಸಹಿ ಹಾಕುವಂತೆ ಮನವಿ ಮಾಡಿದ್ದಾರೆ. ಜ್ಞಾಪಕ ಪತ್ರಕ್ಕೆ ಸಹಿ ಹಾಕಲು ಕಾಂಗ್ರೆಸ್ ಒಪ್ಪಿಗೆ ಸೂಚಿಸಿದೆ ಎಂದು ತಿಳಿದು ಬಂದಿದೆ. ಆ ಮೂಲಕ ತಮಿಳುನಾಡು ಸರ್ಕಾರ ಮತ್ತು ಗವರ್ನರ್ ನಡುವಿನ ಮಸುಕಿನ ಗುದ್ದಾಟ ಈಗ ಅಧಿಕೃತವಾಗಿ ಹೊರಬಿದ್ದಿದೆ.

ರಾಜ್ಯಪಾಲರ ಪದಚ್ಯುತಿಗೆ ಡಿಎಂಕೆ ಪಟ್ಟು ಹಿಡಿದದ್ಯಾಕೆ?
PUC ಪರೀಕ್ಷಾ ಫಲಿತಾಂಶಗಳ ನಂತರವೇ ವೈದ್ಯಕೀಯ ಕೋರ್ಸ್‌ಗಳಿಗೆ ವಿದ್ಯಾರ್ಥಿಗಳ ಪ್ರವೇಶವನ್ನು ಕೈಗೊಳ್ಳುವಂತೆ ತಮಿಳುನಾಡು ಸರ್ಕಾರ ಹೊರಡಿಸಿದ ಮಸೂದೆಯಲ್ಲಿ ಪ್ರಸ್ತಾಪಿಸಲಾಗಿತ್ತು. ಈ ಪ್ರಸ್ತಾವನೆ ತಮಿಳುನಾಡು ವಿಧಾನ ಮಂಡಲದಲ್ಲೂ ಅಂಗೀಕರಿಸಿ ಅದು ರಾಜ್ಯಪಾಲರ ಕೈ ಸೇರಿತ್ತು ಎಂಬುದು ಪ್ರಮುಖ ಅಂಶ. ಆದರೆ ಈ ಪ್ರಸ್ತಾಪವನ್ನು ಮರು ಪರಿಶೀಲಿಸುವಂತೆ ರಾಜ್ಯಪಾಲ ಆರ್.ಎನ್.ರವಿಯವರು ಫೆಬ್ರವರಿ ತಿಂಗಳಿನಲ್ಲಿ ಅಸೆಂಬ್ಲಿಗೆ ಹಿಂದಿರುಗಿಸಿದ್ದಾರೆ. PUC ನಂತರದ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ NEET ಪರೀಕ್ಷೆಗೆ ತಮಿಳುನಾಡು ವಿದ್ಯಾರ್ಥಿಗಳಿಗೆ ವಿನಾಯಿತಿ ನೀಡುವ ಪ್ರಸ್ತಾವನೆಯನ್ನು ಅಂಗೀಕರಿಸಿದ ಮಸೂದೆಯನ್ನು ರಾಜ್ಯಪಾಲರು ಪರೋಕ್ಷವಾಗಿ ತಿರಸ್ಕರಿಸಿದ್ದು, ಇದು ಡಿಎಂಕೆ ಮತ್ತು ಮಿತ್ರಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ.

ಅಷ್ಟಕ್ಕೂ ತಮಿಳುನಾಡು ಸರ್ಕಾರ ಈ ಪ್ರಸ್ತಾವನೆ ಮುಂದಿಟ್ಟ ಹಿನ್ನೆಲೆಯನ್ನು ನೋಡುವುದಾದರೆ, NEET ನ ಪ್ರಶ್ನೆ ಪತ್ರಿಕೆಯು CBSE ಪಠ್ಯಕ್ರಮವನ್ನು ಆಧರಿಸಿದ್ದು, ಇದು ತಮಿಳುನಾಡು ರಾಜ್ಯ ಮಂಡಳಿಯ ಶೈಕ್ಷಣಿಕ ಪಠ್ಯಕ್ರಮಕ್ಕಿಂತ ಬಹುತೇಕ ಭಿನ್ನವಾಗಿದೆ. ಹಾಗಾಗಿ NEET ಪರೀಕ್ಷೆಯು ರಾಜ್ಯ ಮಂಡಳಿಯ ವಿದ್ಯಾರ್ಥಿಗಳ ಭವಿಷ್ಯಕ್ಕೆ ಹಾನಿ ಮಾಡುತ್ತದೆ ಎಂಬ ಕಾರಣಕ್ಕಾಗಿ ತಮಿಳುನಾಡು ಸರ್ಕಾರ ಈ ಪರೀಕ್ಷೆಯನ್ನು ವಿರೋಧಿಸಿ ಹೊಸ ಪ್ರಸ್ತಾವನೆ ಮುಂದಿಟ್ಟಿತ್ತು.

ತಮಿಳುನಾಡು ರಾಜ್ಯಪಾಲರ ಪದಚ್ಯುತಿ ಮನವಿಯನ್ನು ಮುಂದಿಟ್ಟುಕೊಂಡು ದಕ್ಷಿಣದ ಇತರೆ ರಾಜ್ಯಗಳ ರಾಜ್ಯಪಾಲ ಮತ್ತು ಸರ್ಕಾರಗಳ ಮಸುಕಿನ ಗುದ್ದಾಟವನ್ನು ಸೂಕ್ಷ್ಮವಾಗಿ ಅವಲೋಕಿಸಬೇಕಿದೆ. ಇಲ್ಲಿ ಕೇಂದ್ರ ಸರ್ಕಾರ ಪರೋಕ್ಷವಾಗಿ ರಾಜ್ಯಪಾಲರನ್ನು ಮುಂದಿಟ್ಟು ಬಿಜೆಪಿಯೇತರ ಸರ್ಕಾರವನ್ನು ಹಿಡಿತದಲ್ಲಿ ಇಟ್ಟುಕೊಳ್ಳುವ ಕೆಲಸ ಮಾಡುತ್ತಿದೆಯೇ ಎಂಬ ಅನುಮಾನ ವ್ಯಕ್ತವಾಗುತ್ತದೆ. ದಕ್ಷಿಣ ಭಾರತದ ರಾಜ್ಯಗಳಲ್ಲಿ ಕರ್ನಾಟಕ ಹೊರತುಪಡಿಸಿ ತಮಿಳುನಾಡು, ಕೇರಳ, ತೆಲಂಗಾಣ, ಆಂಧ್ರಪ್ರದೇಶ ರಾಜ್ಯಗಳಲ್ಲಿ ಸರ್ಕಾರ ಮತ್ತು ರಾಜ್ಯಪಾಲರ ಸಂಘರ್ಷ ಈ ಎಲ್ಲಾ ಅನುಮಾನಗಳಿಗೆ ಸಾಕ್ಷಿ ಒದಗಿಸುತ್ತಿವೆ.

ಕೇರಳದ 9 ವಿವಿ ಗಳ ಉಪಕುಲಪತಿಗಳ ರಾಜೀನಾಮೆಗೆ ಗವರ್ನರ್ ಪಟ್ಟು
ಇತ್ತೀಚೆಗೆ ಸುಪ್ರೀಂ ಕೋರ್ಟ್, ಎಪಿಜೆ ಅಬ್ದುಲ್ ಕಲಾಂ ತಾಂತ್ರಿಕ ವಿಶ್ವವಿದ್ಯಾಲಯದ ಉಪಕುಲಪತಿ ನೇಮಕವನ್ನು ಯುಜಿಸಿ ನಿಯಮಗಳಿಗೆ ವಿರುದ್ಧವಾಗಿದೆ ಎಂದು ರದ್ದುಗೊಳಿಸಿತ್ತು. ಇದರ ಬೆನ್ನಲ್ಲೇ ಕೇರಳ ರಾಜ್ಯಪಾಲ ಆರೀಫ್ ಖಾನ್ 9 ವಿವಿಗಳ ಉಪಕುಲಪತಿಗಳಿಗೆ ರಾಜೀನಾಮೆ ನೀಡುವಂತೆ ಸೂಚಿಸಿದ್ದಾರೆ. ಈ ಪೈಕಿ ಎಪಿಜೆ ಅಬ್ದುಲ್ ಕಲಾಂ ತಾಂತ್ರಿಕ ವಿವಿಯ ಉಪಕುಲಪತಿಗಳೂ ಇದ್ದರು. ವಿವಿಗಳ ಕುಲಪತಿಗಳೂ ಆಗಿರುವ ರಾಜ್ಯಪಾಲರು ಕಳೆದ ಅಕ್ಟೋಬರ್ 24 ರ ಒಳಗೆ ರಾಜೀನಾಮೆಗೆ ಪಟ್ಟು ಹಿಡಿದಿದ್ದರು. ಇದು ಕೇರಳದ ಆಡಳಿತಾರೂಢ ಕಮ್ಯುನಿಸ್ಟ್ ಪಕ್ಷದ ಕೆಂಗಣ್ಣಿಗೆ ಗುರಿಯಾಗಿತ್ತು. ರಾಜ್ಯಪಾಲರ ನಡೆ ಸಂಘಪರಿವಾರದ ಪಿತೂರಿಯಾಗಿದ್ದು, ದೇಶದ ಶಿಕ್ಷಣ ವ್ಯವಸ್ಥೆಯನ್ನು ಕೇಸರೀಕರಣಗೊಳಿಸುವ ಅಜೆಂಡಾ ಆಗಿದೆ ಎಂದು ಕಮ್ಯುನಿಸ್ಟ್ ಪಕ್ಷ ಟೀಕಿಸಿತ್ತು.

ಹಾಗೆಯೇ ಕಳೆದ ಅಕ್ಟೋಬರ್ 25 ರಂದು ಕೇರಳ ಸರ್ಕಾರದ ಹಣಕಾಸು ಸಚಿವರನ್ನು ಅವರ ಸ್ಥಾನದಿಂದ ವಜಾಗೊಳಿಸಬೇಕು ಎಂದು ರಾಜ್ಯಪಾಲ ಆರೀಫ್ ಖಾನ್ ಮುಖ್ಯಮಂತ್ರಿಗೆ ಪತ್ರ ಬರೆದಿದ್ದರು. ಪ್ರಾದೇಶಿಕತೆ ಮತ್ತು ಪ್ರಾಂಥೀಯತೆ ಹಿನ್ನೆಲೆಯಲ್ಲಿ ಉತ್ತರ ಭಾರತದ ವಿದ್ಯಾರ್ಥಿಗಳಿಗೆ ಇಲ್ಲಿನ ನೆಲದ ಬಗ್ಗೆ ಹೊಂದಿಕೊಳ್ಳಲು ಕಷ್ಟ ಆಗಬಹುದು ಎಂದಿದ್ದು ಆರೀಫ್ ಖಾನ್ ಅವರ ‘ವಜಾ’ ಪತ್ರಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ. ಈ ಸಂಬಂಧ ರಾಜ್ಯಪಾಲರ ಮನವಿಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿರಸ್ಕರಿಸಿದ್ದರು.

ತೆಲಂಗಾಣದಲ್ಲೂ ಇದೆ ರಾಜ್ಯಪಾಲ ಮತ್ತು ಸರ್ಕಾರದ ಮಸುಕಿನ ಗುದ್ದಾಟ
ಈ ಹಿಂದೆ ತಮಿಳುನಾಡಿನ ಬಿಜೆಪಿ ಪಕ್ಷದ ಪ್ರಮುಖ ಮುಖಂಡರಾಗಿದ್ದ ತೆಲಂಗಾಣ ರಾಜ್ಯಪಾಲೆ ತಮಿಳ್ ಸಾಯಿ ಸೌಂದರರಾಜನ್ ಮತ್ತು ತೆಲಂಗಾಣ ಸರ್ಕಾರದ ಮಸುಕಿನ ಗುದ್ದಾಟ ಸಹ ಅಷ್ಟು ಗುಟ್ಟಾಗೇನು ಉಳಿದಿಲ್ಲ. ಇತ್ತೀಚೆಗೆ ಮಾಧ್ಯಮಗಳಿಗೆ ನೀಡಿದ ಸಂದರ್ಶನವೊಂದರಲ್ಲಿ ತೆಲಂಗಾಣ ಸರ್ಕಾರದ ಮೇಲಿರುವ ತಮ್ಮ ಅಸಮಾಧಾನವನ್ನು ರಾಜ್ಯಪಾಲೆ ತಮಿಳ್ ಸಾಯಿ ಸೌಂದರರಾಜನ್ ಹೊರಹಾಕಿದ್ದು ತೀರಾ ಹಳೆಯ ವಿಷಯವಲ್ಲ. ಇದೇ ವರ್ಷದ ಸೆಪ್ಟೆಂಬರ್ ತಿಂಗಳಲ್ಲಿ ಆಡಳಿತಾರೂಢ ಟಿಆರ್ಎಸ್ ಪಕ್ಷ ತಮ್ಮನ್ನು ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ ಎಂದು ಆರೋಪಿಸಿದ್ದರು. ಜೊತೆಗೆ ತಾನು ಭಾಗವಹಿಸುವ ಕಾರ್ಯಕ್ರಮಗಳಿಗೆ ಜಿಲ್ಲಾಧಿಕಾರಿ ಸೇರಿದಂತೆ ಪ್ರಮುಖ ಅಧಿಕಾರಿಗಳು ಬರದಂತೆ ಆಡಳಿತ ಪಕ್ಷ ತಡೆಯುತ್ತಿದೆ, ತನಗೆ ಸೂಕ್ತ ಭದ್ರತೆ ವ್ಯವಸ್ಥೆ ಕೂಡ ಸರ್ಕಾರ ಮಾಡಿಲ್ಲ ಎಂದು ತಮಿಳ್ ಸಾಯಿ ಸೌಂದರರಾಜನ್ ಆರೋಪಿಸಿದ್ದಾರೆ. ಜೊತೆಗೆ ರಾಜ್ಯಪಾಲರು ಇಲ್ಲಿಯವರೆಗೆ ಕರೆದ ಎರಡ್ಮೂರು ಔತಣಕೂಟಕ್ಕೂ ಸರ್ಕಾರದ ಪ್ರತಿನಿಧಿಗಳು ಗೈರು ಹಾಜರಾಗಿದ್ದು, ಇಲ್ಲೂ ಸಹ ಸರ್ಕಾರ ಮತ್ತು ರಾಜ್ಯಪಾಲರ ಸಂಬಂಧ ಸರಿ ಇಲ್ಲವಾಗಿದೆ.

ಇದಕ್ಕೆ ಟಿಆರ್ಎಸ್ ಪಕ್ಷ ಕೊಡುವ ಸಮಜಾಯಿಷಿ ಎಂದರೆ, ರಾಜ್ಯಪಾಲರು ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದ ಯಾವುದೇ ಕೆಲಸಕ್ಕೆ ತೊಡಕುಂಟು ಮಾಡುತ್ತಿದ್ದಾರೆ. ವಿಧಾನಸಭೆಯಲ್ಲಿ ಸರ್ವಪಕ್ಷಗಳು ಅಂಗೀಕರಿಸಿದ ವಿಧೇಯಕಗಳನ್ನೂ ಮರುಪರಿಶೀಲನೆಗೆ ಒಡ್ಡಲಾಗುತ್ತಿದೆ. ರಾಜ್ಯಪಾಲರು ತಮ್ಮ ಹುದ್ದೆ ನಿರ್ವಹಿಸದೇ ಕೇಂದ್ರ ಬಿಜೆಪಿ ಸರ್ಕಾರದ ಪ್ರತಿನಿಧಿಯಂತೆ, RSS ಪ್ರತಿನಿಧಿಯಂತೆ ವರ್ತಿಸುವುದು ಆಡಳಿತಕ್ಕೆ ಸಮಸ್ಯೆ ಎದುರಾಗುತ್ತದೆ’ ಎಂಬ ರೀತಿಯಲ್ಲಿ ಸಮರ್ಥಿಸಿದ್ದಾರೆ.

ಈ ಎಲ್ಲಾ ಬೆಳವಣಿಗೆ ಗಮನಿಸಿದರೆ ಕೇಂದ್ರ ಬಿಜೆಪಿ ಸರ್ಕಾರ ಬೇಕಂತಲೇ ರಾಜ್ಯಪಾಲರ ಮೂಲಕ ತನ್ನ ಹಿಡನ್ ಅಜೆಂಡಾವನ್ನು ರಾಜ್ಯ ಸರ್ಕಾರಗಳ ಮೇಲೆ ಹೇರಲು ಎಲ್ಲಾ ತಂತ್ರಗಳನ್ನ ರೂಪಿಸುತ್ತಿದೆ ಎನ್ನಲಾಗುತ್ತಿದೆ. ವಿಶೇಷವಾಗಿ ಶಿಕ್ಷಣ ಕ್ಷೇತ್ರದಲ್ಲಿನ ಬದಲಾವಣೆ, ಗ್ರಾಮೀಣ ವಿದ್ಯಾರ್ಥಿಗಳಿಗೆ ಅನಾನುಕೂಲ ಆಗುವ ಮಟ್ಟಿಗೆ, ಪಟ್ಟಣ ಪ್ರದೇಶದ ಮಕ್ಕಳಿಗೆ ಅನುವು ಮಾಡಿ ಕೊಡುವಂತಹ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ರಾಜ್ಯಪಾಲರ ಕಡೆಯಿಂದ ರಾಜ್ಯದ ಆಡಳಿತದಲ್ಲಿ ಮೂಗು ತೂರಿಸುತ್ತಿರುವುದು ಸ್ಪಷ್ಟ.

ತಮಿಳುನಾಡು ಮತ್ತು ಕೇರಳದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಎರಡೂ ರಾಜ್ಯಗಳ ರಾಜ್ಯಪಾಲರು ಅನವಶ್ಯಕವಾಗಿ ಸರ್ಕಾರಗಳ ನಿರ್ಧಾರವನ್ನು ಮರುಪರಿಶೀಲನೆಗೆ ಬಿಟ್ಟಿರುವುದು ಸಹಜವಾಗಿಯೇ ರಾಜ್ಯಪಾಲರು ತಮ್ಮ ಸೀಮಿತ ರೇಖೆಯನ್ನು ದಾಟುತ್ತಿರಬಹುದೇ ಎಂಬ ಅನುಮಾನ ವ್ಯಕ್ತವಾಗಿದೆ. ವಿಶೇಷವಾಗಿ ಬಿಜೆಪಿ ಅಧಿಕಾರದಲ್ಲಿ ಇಲ್ಲದ ರಾಜ್ಯಗಳನ್ನೇ ಗುರಿಯಾಗಿಸಿಕೊಂಡು ರಾಜ್ಯಪಾಲರು ತಮ್ಮ ತಕರಾರುಗಳನ್ನು ಮುಂದಿಡುತ್ತಿದ್ದಾರೆ. ತಮಿಳುನಾಡು, ಕೇರಳ, ಆಂಧ್ರಪ್ರದೇಶ, ತೆಲಂಗಾಣ ಮತ್ತು ಕರ್ನಾಟಕ ದೇಶದ ಪ್ರಮುಖ ದಕ್ಷಿಣ ಭಾರತದ ರಾಜ್ಯಗಳಾಗಿದ್ದು, ಇಲ್ಲಿ ಬಿಜೆಪಿ ಎಲ್ಲಾ ರೀತಿಗಳಲ್ಲೂ ಅಧಿಕಾರದಲ್ಲಿ ಮೂಗು ತೂರಿಸುವ ಕೆಲಸ ಮಾಡುತ್ತಿದೆ.

ಕೇವಲ ಕರ್ನಾಟಕ ಒಂದು ರಾಜ್ಯವನ್ನು ಉದಾಹರಣೆಗೆ ತಗೆದುಕೊಂಡು ಹೇಳುವುದಾದರೆ, ಕಳೆದ ಎರಡು ವರ್ಷಗಳಿಂದ ರಾಜ್ಯದ ಶೈಕ್ಷಣಿಕ ಕ್ಷೇತ್ರದಲ್ಲಿ ಬಿಜೆಪಿ ತಂದ ನಿರ್ಧಾರಗಳು ಮತ್ತು ನಿಲುವುಗಳು ಸ್ಪಷ್ಟವಾಗಿ ಸಂಘ ಪರಿವಾರದ ಅಜೆಂಡಾವನ್ನು ಹೇರಲಾಗುತ್ತಿದೆ. ಕಳೆದ ಒಂದು ವರ್ಷದ ಅವಧಿಯಲ್ಲಿ ರಾಜ್ಯ ಸರ್ಕಾರ ಪಠ್ಯ ಪುಸ್ತಕ ಪರಿಷ್ಕರಣೆ ಹೆಸರಿನಲ್ಲಿ ತಂದ ಅದ್ವಾನ ಮತ್ತು ಅದರಿಂದ ಸರ್ಕಾರಿ ಶಾಲೆಗಳ ಮಕ್ಕಳಿಗಾದ ದ್ವಂದ್ವಗಳು ಇನ್ನೂ ಮುಗಿದಿಲ್ಲ.

ತಮಿಳುನಾಡಿನ ರಾಜ್ಯಪಾಲರು ಸಹ ಇತ್ತೀಚೆಗೆ ಸ್ಪಷ್ಟವಾಗಿ ಬಿಜೆಪಿ ವಕ್ತಾರರಂತೆ ವರ್ತಿಸಿದ್ದೂ ಸಹ ಡಿಎಂಕೆ ರಾಜ್ಯಪಾಲರನ್ನು ಗುರಿಯಾಗಿಸಿದ್ದಕ್ಕೆ ಪ್ರಮುಖ ಕಾರಣ ಎನ್ನಲಾಗುತ್ತಿದೆ. ಕಳೆದ ಜೂನ್‌ ತಿಂಗಳಲ್ಲಿ, “ಸನಾತನ ಧರ್ಮ ವಿವಿಧತೆಯಲ್ಲಿ ಏಕತೆಯನ್ನು ಎತ್ತಿಹಿಡಿಯುತ್ತದೆ” ಎಂದು ಹೇಳಿಕೆ ನೀಡುವ ಮೂಲಕ ರಾಜ್ಯಪಾಲ ರವಿ ಅವರು ತಮ್ಮ ಸಂವಿಧಾನಿಕ ಮಿತಿಯನ್ನು ಮೀರುತ್ತಿದ್ದಾರೆ ಎಂದು ಡಿಎಂಕೆ ಆರೋಪಿಸಿತ್ತು. ನಂತರ ಆಗಸ್ಟ್‌ನಲ್ಲಿ, ಹಿಂಸಾಚಾರದ ಬಗ್ಗೆ ಶೂನ್ಯ ಸಹಿಷ್ಣುತೆ ಇರಬೇಕು ಮತ್ತು ಬಂದೂಕು ಬಳಸುವವ ವಿರುದ್ಧ ಬಂದೂಕಿನಿಂದಲೆ ವ್ಯವಹರಿಸಬೇಕು ಎಂದು ಅವರು ಮತ್ತೊಮ್ಮೆ ವಿವಾದ ಸೃಷ್ಟಿಸಿದ್ದರು. ಸಧ್ಯ ಈ ಎಲ್ಲಾ ಬೆಳವಣಿಗೆ ಹಿಂದೆ ಬಿಜೆಪಿ ತಾನು ಅಧಿಕಾರದಲ್ಲಿ ಇಲ್ಲದ ಕಡೆಗಳಲ್ಲಿ ರಾಜ್ಯಪಾಲರ ಮೂಲಕ ತನ್ನ ಕೆಲಸ ಮಾಡುತ್ತಿದೆ ಎಂಬುದು ಸ್ಪಷ್ಟವಾಗಿದೆ.

ಬೆಟ್ಟದಿಂದ ಪ್ರವಾಸಿ ಬಸ್ ಪಲ್ಟಿ: 10 ಜನರಿಗೆ ಗಾಯ
ಆಂಧ್ರ ಪ್ರದೇಶ: ಪ್ರವಾಸಿ ಬಸ್ ಪಲ್ಟಿಯಾಗಿ ಬೆಟ್ಟದಿಂದ ಕೆಳಗೆ ಬಿದ್ದಿರುವ ಘಟನೆ ಅಲ್ಲೂರಿ ಸೀತಾರಾಮ ರಾಜು (ಎಎಸ್ಆರ್) ಜಿಲ್ಲೆಯ ವನಜಂಗಿಯಲ್ಲಿ ನಡೆದಿದೆ.

ಘಟನೆಯಲ್ಲಿ ಕನಿಷ್ಠ 10 ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ರವಾನಿಸಿದ್ದಾರೆ ಎಂದು ತಿಳಿದುಬಂದಿದೆ.

ಈ ಘಟನೆಯು ಬಸ್ ವಿಶಾಖಪಟ್ಟಣದಿಂದ ಪಾಡೇರು ಕಡೆಗೆ ಹೋಗುತ್ತಿರುವಾಗ ನಡೆದಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸುದ್ದಿ-ಸಂಸ್ಥೆ ಎಎನ್‌ಐ ವರದಿ ಮಾಡಿದೆ.

Andhra Pradesh | At least 10 were injured after a tourist bus fell off a hill in Vanajangi in Alluri Sitharama Raju (ASR) district. The bus was going from Visakhapatnam to Paderu. Injured rescued by locals, rushed to hospital pic.twitter.com/HQ3mIW9q43
— ANI (@ANI) October 9, 2022

ʼನಾವು ತರುವ ಆಡಳಿತದಿಂದ ಯುವಕರಿಗೆ ಉದ್ಯೋಗ ಸಿಗುತ್ತದೆʼ : ಅನೂರಾಗ್‌ ಠಾಕೂರ್
ವಿಜಯವಾಡ/ಆಂದ್ರ ಪ್ರದೇಶ: ʼಜನರು ಉತ್ತಮ ಆಡಳಿತ ಮಾದರಿಯನ್ನು ಬಯಸುತ್ತಾರೆ, ನಾವು ಅದನ್ನು ಇಲ್ಲಿ ಜಾರಿಗೆ ತರುತ್ತೇವೆʼ ಎಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್‌ ಠಾಕೂರ್‌ ಅವರು ಹೇಳಿದರು.

ನಗರದ ಇಂದ್ರಕೀಲಾದ್ರಿಯಲ್ಲಿರುವ ಶ್ರೀ ದುರ್ಗಾ ಮಲ್ಲೇಶ್ವರ ಸ್ವಾಮಿ ವರ್ಲ ದೇವಸ್ಥಾನಕ್ಕೆ ಬೇಟಿ ನೀಡಿ ಮಾತನಾಡಿದ ಅವರು ನಾವು ತರುವ ಆಡಳಿತದಿಂದ ಯುವಕರಿಗೆ ಉದ್ಯೋಗ ಸಿಗುತ್ತದೆ, ರಾಜ್ಯಕ್ಕೆ ಬಂಡವಾಳ, ಅಭಿವೃದ್ಧಿ, ರಸ್ತೆಗಳು ಸಿಗುತ್ತವೆ ಮತ್ತು ನಾವು ನಮ್ಮ ಪ್ರಚಾರವನ್ನು ಪ್ರಾರಂಭಿಸುತ್ತಿದ್ದೇವೆ ಎಂದು ತಿಳಿಸಿದರು.

Vijaywada, AP | People want good governance model, we will implement it here so youth may get employment, state gets investment, development, roads. We are beginning our campaign here: Union Min Anurag Thakur visited Sri Durga Malleswara Swamy Varla Devasthanam at Indrakeeladri pic.twitter.com/4falZYOSlk
— ANI (@ANI) August 21, 2022