araga jnanendhra – Peepal Media

ಮಾಜಿ ಗೃಹ ಸಚಿವರ ಆಪ್ತ ಕಾರ್ಯದರ್ಶಿ ಎಂಬ ಸೋಗಿನಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ, ದೂರು ದಾಖಲು
ಗೃಹ ಸಚಿವರ ಆಪ್ತ ಕಾರ್ಯದರ್ಶಿ ಎಂದು ನಂಬಿಸಿ, ವ್ಯಕ್ತಿಯೊಬ್ಬರಿಗೆ ಎಸ್’ಡಿಎ ಕೆಲಸ ಕೊಡಿಸುವುದಾಗಿ ವಂಚಿಸಿದ ಪ್ರಕರಣದ ಅಡಿಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಮೂಲದ ಶ್ರೀನಿವಾಸ್ ಎಂಬುವವರ ವಿರುದ್ಧ ದೂರು ದಾಖಲಾಗಿದೆ. ಕೆಲಸ ಕೊಡಿಸಲು 10.50 ಲಕ್ಷ ತಗೆದುಕೊಂಡು ಮೋಸ ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ದೂರುದಾರ ರಾಮಚಂದ್ರ ಎಂಬುವವರು ‘ತಾನು ಗೃಹಮಂತ್ರಿಗಳ ಆಪ್ತ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದೇನೆ. ಯಾವುದೇ ಸರ್ಕಾರಿ ಉದ್ಯೋಗ, ವರ್ಗಾವಣೆ ಏನೇ ಇದ್ದರೂ ಮಾಡಿ ಕೊಡುವುದಾಗಿ, ಅದಕ್ಕೆ ಸ್ವಲ್ಪ ಖರ್ಚು ವೆಚ್ಚವಿದೆ. ಅಧಿಕಾರಿಗಳು ಹಾಗೂ ಸಚಿವರಿಗೆ ಕೊಡಬೇಕು. ಕೆಲಸ ಮಾಡಿಸಿಕೊಡುವ ನನಗೆ 50 ಸಾವಿರ ಕೊಡಬೇಕು’ ಎಂದು ಶ್ರೀನಿವಾಸ್ ನಂಬಿಸಿ ಮೋಸ ಮಾಡಲಾಗಿದೆ ಎಂದು ತನ್ನ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ದೂರಿನ ಪ್ರಕರಣ ಬೆಂಗಳೂರಿನ ಕೊಡಿಗೆಹಳ್ಳಿ ಠಾಣೆಯಲ್ಲಿ ದಾಖಲಾಗಿದ್ದು, ಈಗಾಗಲೇ 10.50 ಲಕ್ಷದಲ್ಲಿ 5 ಲಕ್ಷ ಮಾತ್ರ ಮರಳಿ ಕೊಡಲಾಗಿದೆ, ಇನ್ನು 5.5 ಲಕ್ಷ ವಾಪಸ್ ಕೇಳಿದರೆ ಜೀವ ಬೆದರಿಕೆ ಹಾಕಿರುವ ಬಗ್ಗೆಯೂ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಕೆಲವಷ್ಟು ಮಾಧ್ಯಮಗಳು ಈ ಬಗ್ಗೆ ವರದಿ ಬಿತ್ತರಿಸಿ, ಹಾಲಿ ಗೃಹ ಸಚಿವರಿಗೆ ಈ ಪ್ರಕರಣ ತಳುಕು ಹಾಕಲು ಮುಂದಾದಾಗ ಅಸಲಿ ವಿಚಾರ ಹೊರಬಿದ್ದಿದೆ.

ಅಸಲಿ ವಿಚಾರ ಏನೆಂದರೆ ವಂಚನೆ ಆರೋಪಿ ಶ್ರೀನಿವಾಸ್ ಮಾಜಿ ಗೃಹ ಸಚಿವರ ನಿಕಟ ಸಂಪರ್ಕದಲ್ಲಿ ಇದ್ದ ಎಂದು ತಿಳಿದು ಬಂದಿದೆ. 2018 ರ ರಾಜ್ಯ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಮಾಜಿ ಗೃಹ ಸಚಿವರ ಪರವಾಗಿ ಆರೋಪಿ ಶ್ರೀನಿವಾಸ್ ತೀರ್ಥಹಳ್ಳಿ ಕ್ಷೇತ್ರದಲ್ಲಿ ಸಾಕಷ್ಟು ಕೆಲಸ ಮಾಡಿದ್ದ ಎಂಬ ಮಾಹಿತಿ ಹೊರಬಿದ್ದಿದೆ.

ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಆಗಿನ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಹೆಸರನ್ನು ಬಳಸಿ ಹಲವಷ್ಟು ಮಂದಿಗೆ ಈ ರೀತಿಯ ವಂಚನೆ ಮಾಡಿದ್ದ, ಇನ್ನೂ ಕೆಲವರಿಗೆ ಹಣ ತಗೆದುಕೊಂಡು ಕೆಲಸ ಕೂಡಾ ಮಾಡಿಸಿಕೊಟ್ಟಿದ್ದ ಎಂಬ ಬಗ್ಗೆಯೂ ಮಾಹಿತಿ ಹೊರಬಿದ್ದಿದೆ. ವಿಶೇಷವಾಗಿ ಗೃಹ ಸಚಿವರ ಇಲಾಖೆಯಲ್ಲಿನ ಬಹುತೇಕ ವ್ಯವಹಾರಗಳಲ್ಲಿ ಶ್ರೀನಿವಾಸ್ ಹೆಸರು ಓಡಾಡುತ್ತಿತ್ತು ಎಂಬ ಬಗ್ಗೆಯೂ ಮಾತುಗಳು ಕೇಳಿ ಬಂದಿವೆ.

ಈ ಹಿನ್ನೆಲೆಯಲ್ಲಿ ತನಿಖೆ ಚುರುಕುಗೊಂಡರೆ ಮಾಜಿ ಗೃಹ ಸಚಿವರ ಅತ್ಯಾಪ್ತರೂ ಶ್ರೀನಿವಾಸ್ ಜೊತೆಗಿನ ಈ ರೀತಿಯ ವ್ಯವಹಾರದಲ್ಲಿ ತೊಡಗಿರುವ ಬಗ್ಗೆಯೂ ಮಾಹಿತಿ ಸಿಗಬಹುದು ಎಂದು ಯುವ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಆದರ್ಶ್ ಹುಂಚದಕಟ್ಟೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಉಲ್ಲೇಖಿಸಿ ಬರೆದಿದ್ದಾರೆ.

ಅಂದಹಾಗೆ ಬೆಳಕಿಗೆ ಬಂದ ಈ ಒಂದು ವಂಚನೆ 2021 ರಲ್ಲೇ ನಡೆದಿದ್ದು, ಹಿಂದಿನ ಸರ್ಕಾರದ ಅವಧಿಯಲ್ಲಿ ನಡೆದ ಪ್ರಕರಣ ಇದಾಗಿದೆ. ಈ ಹಿನ್ನೆಲೆಯಲ್ಲಿ ತನಿಖೆ ತೀವ್ರಗತಿಯಲ್ಲಿ ನಡೆದರೆ ಮಾಜಿ ಗೃಹ ಮಂತ್ರಿಗಳ ಹಲವು ಆಪ್ತರು ಈ ಪ್ರಕರಣದಲ್ಲಿ ಭಾಗಿ ಆಗಿರಬಹುದು.. ಈ ಬಗ್ಗೆ ತನಿಖೆ ನಡೆಯಬೇಕು ಎಂದು ಕಾಂಗ್ರೆಸ್ ವಕ್ತಾರರು ಒತ್ತಾಯಿಸಿದ್ದಾರೆ.

ಶಾಸಕ ಆರಗ ಜ್ಞಾನೇಂದ್ರ ಮೇಲೆ ಕ್ರಮಕ್ಕೆ ವೀರಶೈವ ಮಹಾಸಭಾ ಆಗ್ರಹ
ಇತ್ತೀಚೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರ ಮೈಬಣ್ಣದ ವಿಚಾರದಲ್ಲಿ ನಾಲಿಗೆ ಹರಿಬಿಟ್ಟಿದ್ದ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅವರ ಮೇಲೆ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಆಕ್ರೋಶ ಹೊರಹಾಕಿದೆ.

ರಾಜಕೀಯ ನಾಯಕರ ಬಣ್ಣದ ವಿಚಾರದಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ್ದ ಮಾಜಿ ಗೃಹ ಸಚಿವ ಹಾಗೂ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಅಖಿಲ ಭಾರತ ವೀರಶೈವ ಮಹಾಸಭಾ ಪದಾಧಿಕಾರಿಗಳು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಕಚೇರಿಗೆ ತೆರಳಿ ದೂರು ಸಲ್ಲಿಸಿದೆ.

ಇದಕ್ಕೂ ಮುನ್ನ ಮಹಾಸಭಾದ 20 ಕ್ಕೂ ಹೆಚ್ಚು ಜಿಲ್ಲಾಧ್ಯಕ್ಷರು ಸಭೆ ನಡೆಸಿ ಜ್ಞಾನೇಂದ್ರ ವಿರುದ್ಧ ಕ್ರಮ ಕೈಗೊಳ್ಳಲು ವಿಫಲವಾದರೆ ಪ್ರತಿಭಟನೆ ನಡೆಸುವುದಾಗಿ ಬೆದರಿಕೆ ಹಾಕಿದ್ದಾರೆ. ಅಷ್ಟೆ ಅಲ್ಲದೆ ಆರಗ ಜ್ಞಾನೇಂದ್ರ ಅವರನ್ನು ಪಕ್ಷದಿಂದ ವಜಾಗೊಳಿಸಿ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಮಹಾಸಭಾ ಸಭೆಯಲ್ಲಿ ಬಿಜೆಪಿ ಪಕ್ಷಕ್ಕೂ ಒತ್ತಾಯಿಸಲಾಗಿದೆ. ಈ ಬಗ್ಗೆ ಬಿಜೆಪಿ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಮಹಾಸಭಾ ಕಾರ್ಯದರ್ಶಿ ರೇಣುಕಾ ಪ್ರಸನ್ನ ತಿಳಿಸಿದ್ದಾರೆ.

ಮಹಾಸಭಾ ಕಾರ್ಯದರ್ಶಿ ರೇಣುಕಾ ಪ್ರಸನ್ನ ಮಾತನಾಡಿ, ಜ್ಞಾನೇಂದ್ರ ಅವರು ಆಗಸ್ಟ್ 1 ರಂದು ಹೇಳಿಕೆ ನೀಡಿದ್ದು, ಮರುದಿನ ಬೆಂಗಳೂರಿನ ಸದಾಶಿವನಗರ ಪೊಲೀಸರು ದೂರು ದಾಖಲಿಸಿದ್ದಾರೆ. ಆದರೆ ಒಂದು ವಾರ ಕಳೆದರೂ ಪೊಲೀಸರ ಕಡೆಯಿಂದಾಗಲಿ, ಸರ್ಕಾರದ ಕಡೆಯಿಂದಾಗಲಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿದ್ದಾರೆ.

ಇನ್ನು ವಿಧಾನ ಸಭಾಧ್ಯಕ್ಷ ಯು.ಟಿ ಖಾದರ್ ಅವರನ್ನು ಭೇಟಿ ಮಾಡಿದ ಮಹಾಸಭಾ ಪದಾಧಿಕಾರಿಗಳು, ಖರ್ಗೆ ಮತ್ತು ಅರಣ್ಯ ಸಚಿವ ಖಂಡ್ರೆ ವಿರುದ್ಧ ಹೇಳಿಕೆ ನೀಡಿದ ಆರಗ ಜ್ಞಾನೇಂದ್ರ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಒತ್ತಾಯಿಸಿದ ಹಿನ್ನೆಲೆಯಲ್ಲಿ, ದೂರನ್ನು ಪರಿಶೀಲಿಸುವುದಾಗಿ ಖಾದರ್ ಭರವಸೆ  ನೀಡಿದರು.

ಜ್ಞಾನೇಂದ್ರ ಅವರ ಹೇಳಿಕೆಗೆ ದೇಶಾದ್ಯಂತ ನೆಟಿಜನ್‌ಗಳಿಂದ ಟೀಕೆ ವ್ಯಕ್ತವಾಗಿದೆ. ಈ ಬಗ್ಗೆ ಸಂಘಟನೆಯ ಸಭೆಯಲ್ಲಿ ಚರ್ಚಿಸಿದ್ದರೂ ಜ್ಞಾನೇಂದ್ರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಟೀಕೆ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧ್ಯಕ್ಷರು ಸ್ವಯಂ ಪ್ರೇರಿತವಾಗಿ ಮಹಾಸಭಾ ಸಭೆ ಕರೆದಿದ್ದಾರೆ ಎಂದು ಪ್ರಸನ್ನ ತಿಳಿಸಿದರು.

ವರ್ಣಭೇದದ ಹೇಳಿಕೆ : ಬಾಯ್ತಪ್ಪಿನ ಮಾತು ಎಂಬುದನ್ನು ನಂಬಲಾಗದು‌, ಇದೇ ಬಿಜೆಪಿ ಸಿದ್ದಾಂತ : ಕಿಮ್ಮನೆ ರತ್ನಾಕರ್ ವಾಗ್ದಾಳಿ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಈಶ್ವರ್ ಖಂಡ್ರೆ ಅವರ ಮೈಬಣ್ಣದ ಬಗ್ಗೆ ಶಾಸಕ ಆರಗ ಜ್ಞಾನೇಂದ್ರ ಆಗಿರುವ ಮಾತನ್ನು ಬಿಜೆಪಿಯ ಯಾವೊಬ್ಬ ನಾಯಕ ಕೂಡಾ ಖಂಡಿಸಿಲ್ಲ. ಇದನ್ನು ನೋಡಿದರೆ ಬಿಜೆಪಿ ಪಕ್ಷದ ನಾಯಕರ ಮೌನವೇ ಆರಗ ಜ್ಞಾನೇಂದ್ರ ಅವರ ಹೇಳಿಕೆಯನ್ನು ಸಮರ್ಥಿಸುವಂತಿದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ಬಿಜೆಪಿ ಮತ್ತು ಆರಗ ಜ್ಞಾನೇಂದ್ರ ವಿರುದ್ಧ ಕಿಡಿಕಾರಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ವಕ್ತಾರರಾದ ಕಿಮ್ಮನೆ ರತ್ನಾಕರ್ ಅವರು, “ಬಿಜೆಪಿಯ ಬಹುತೇಕ ನಾಯಕರು ಈ ದೇಶದ ಕಾನೂನಿನ ವಿರುದ್ಧವಾಗಿ, ಸಂವಿಧಾನದ ವಿರುದ್ಧವಾಗಿ, ಅಂಬೇಡ್ಕರ್ ವಿರುದ್ಧವಾಗಿ, ಮಹಾತ್ಮಾ ಗಾಂಧೀಜಿ ವಿರುದ್ಧವಾಗಿ ಮಾತನಾಡಿದಾಗಲೂ ಬಿಜೆಪಿ ಇದೇ ಮೌನವನ್ನು ವಹಿಸಿತ್ತು. ಈ ಮೌನ ಬಿಜೆಪಿ ನಾಯಕರ ನಡೆ ಮತ್ತು ನುಡಿಯನ್ನು ಸಮರ್ಥಿಸುವ ಮೌನವಾಗಿದೆ..” ಎಂದು ಕಿಮ್ಮನೆ ರತ್ನಾಕರ್ ಅವರು ಆರಗ ಜ್ಞಾನೇಂದ್ರ ಹೇಳಿಕೆಯನ್ನು ಖಂಡಿಸದ ಬಿಜೆಪಿ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಈ ಹಿಂದೆ ಬಸನಗೌಡ ಪಾಟೀಲ್ ಯತ್ನಾಳ್, ಅನಂತಕುಮಾರ್ ಹೆಗ್ಡೆ ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷ ಹರಡಿದಾಗ, ಸಂವಿಧಾನದ ವಿರುದ್ಧ ಮಾತನಾಡಿದಾಗಲೂ ಬಿಜೆಪಿಯ ಯಾವ ನಾಯಕನೂ ಅದನ್ನು ಖಂಡಿಸಿರಲಿಲ್ಲ. ಯಾಕೆಂದರೆ ಬಿಜೆಪಿ ಪಕ್ಷ ತಾನು ಪಾಲಿಸಿಕೊಂಡು ಬಂದ ಸಂಸ್ಕೃತಿಯನ್ನೇ ಅವರುಗಳು ಮಾತನಾಡಿದ್ದು. ಅದನ್ನು ಈಗ ಆರಗ ಜ್ಞಾನೇಂದ್ರ ಮುಂದುವರೆಸಿಕೊಂಡು ಬಂದಿದ್ದಾರೆ” ಎಂದು ಕಿಮ್ಮನೆ ರತ್ನಾಕರ್ ವಾಗ್ದಾಳಿ ನಡೆಸಿದ್ದಾರೆ.

“ನಿನ್ನೆಯ ದಿನ ಮಲ್ಲಿಕಾರ್ಜುನ ಖರ್ಗೆ ಮತ್ತು ಈಶ್ವರ್ ಖಂಡ್ರೆ ಮೈಬಣ್ಣದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಆರಗ ಜ್ಞಾನೇಂದ್ರ ಮಾರನೇ ದಿನ ತಾನು ಬಾಯ್ತಪ್ಪಿನಿಂದ ಈ ಮಾತನ್ನು ಆಡಿದ್ದು ಎಂದು ಹೇಳಿದ್ದಾರೆ. ಆದರೆ ಜಾತಿ, ಧರ್ಮ ಹಾಗೂ ವರ್ಣದ ಆಧಾರದಲ್ಲಿ ಸದಾ ದ್ವೇಷವನ್ನೇ ಉಗುಳುವ ಬಿಜೆಪಿ ಸಿದ್ಧಾಂತದ ಆರಗ ಜ್ಞಾನೇಂದ್ರ ಬಾಯ್ತಪ್ಪಿನಿಂದ ಆಡಿದ ಮಾತು ಎಂಬುದನ್ನು ನಂಬಲಾಗದು. ಇದೇ ಬಿಜೆಪಿ ಸಿದ್ಧಾಂತವಾಗಿದೆ. ಇದನ್ನೇ ಆರಗ ಜ್ಞಾನೇಂದ್ರ ಪ್ರತಿಪಾದಿಸಿದ್ದಾರೆ” ಎಂದು ಕಿಮ್ಮನೆ ರತ್ನಾಕರ್ ಕಿಡಿಕಾರಿದ್ದಾರೆ.

“ರಾಹುಲ್ ಗಾಂಧಿಯವರು ಮೋದಿ ಉಪನಾಮ ಬಳಸಿದ ಮಾತ್ರಕ್ಕೆ ಅವರನ್ನು ಅಪರಾಧಿ ಎಂದು ಬಿಂಬಿಸಿ, ಸಂಸತ್ ಸದಸ್ಯತ್ವ ರದ್ದು ಮಾಡಿದ ಬಿಜೆಪಿ, ಅದೇ ಆಧಾರದಲ್ಲಿ ಖರ್ಗೆ ಅವರ ಮೈಬಣ್ಣದ ಬಗ್ಗೆ ಆಡಿರುವ ಮಾತುಗಳು ಅಪರಾಧ ಅಲ್ಲವೇ? ಈ ಬಗ್ಗೆ ವಿಧಾನಸಭೆಯ ಸ್ಪೀಕರ್ ಅವರಿಗೂ ದೂರು ಕೊಡಲಾಗುವುದು. ನ್ಯಾಯಾಲಯದಲ್ಲೂ ಕೇಸು ದಾಖಲಿಸಲಾಗುವುದು ಎಂದ ಕಿಮ್ಮನೆ ರತ್ನಾಕರ್, ಆರಗ ಜ್ಞಾನೇಂದ್ರ ವಿರುದ್ಧ ತೀರ್ಥಹಳ್ಳಿಲ್ಲೂ ಬೃಹತ್ ಪ್ರತಿಭಟನೆ ನಡೆಸಲಾಗುವುದು” ಎಂದು ತಿಳಿಸಿದರು.

ಮಾತಾಡುವ ಭರದಲ್ಲಿ ಮಲ್ಲಿಕಾರ್ಜುನ ಖರ್ಗೆ ಮೈಬಣ್ಣದ ಬಗ್ಗೆ ವ್ಯಂಗ್ಯ ಮಾಡಿದ ಆರಗ ಜ್ಞಾನೇಂದ್ರ

ಇನ್ನು ಕಸ್ತೂರಿ ರಂಗನ್ ವರದಿ ವಿರೋಧಿಸಿ ನಡೆದ ಪ್ರತಿಭಟನೆ ಬಗ್ಗೆ ಮಾತನಾಡಿದ ಕಿಮ್ಮನೆ ರತ್ನಾಕರ್, “ಕಸ್ತೂರಿ ರಂಗನ್ ವರದಿಯನ್ನು ಅನುಷ್ಠಾನಕ್ಕೆ ತರಲು ಪಟ್ಟು ಹಿಡಿದಿರೋದು ಕೇಂದ್ರ ಬಿಜೆಪಿ ಸರ್ಕಾರ. ಕಾಂಗ್ರೆಸ್ ಹಿಂದಿನಿಂದಲೂ ಆ ವರದಿಯನ್ನು ವಿರೋಧಿಸಿಕೊಂಡೇ ಬಂದಿದೆ. ಆರಗ ಜ್ಞಾನೇಂದ್ರ ಜನರ ದಾರಿ ತಪ್ಪಿಸಲು ಪ್ರತಿಭಟನೆ ಹಾದಿ ಹಿಡಿದಿದ್ದಾರೆ. ನಿಜವಾಗಿಯೂ ಇವರು ಪ್ರತಿಭಟನೆ ಮಾಡೋದೇ ಆದರೆ ಅದು ನರೇಂದ್ರ ಮೋದಿ ವಿರುದ್ಧ ಮಾಡಬೇಕು. ಬಿಜೆಪಿ ಎಲ್ಲರನ್ನೂ ಒಟ್ಟಾಗಿ ತಗೆದುಕೊಂಡು ಹೋಗುವ ಮನಸ್ಥಿತಿ ಇರದ ಕಾರಣ ಇಷ್ಟೆಲ್ಲಾ ಗೊಂದಲ ಏರ್ಪಟ್ಟಿದೆ” ಎಂದು ವಾಗ್ದಾಳಿ ನಡೆಸಿದ್ದಾರೆ

“ಆರಗ ಜ್ಞಾನೇಂದ್ರ 21 ವರ್ಷಗಳ ಕಾಲ ಶಾಸಕರಾಗಿ ಕೆಲಸ ಮಾಡಿದವರು. ವಿಧಾನಸಭಾ ಸಮಿತಿಗಳ ಸ್ಥಾನಮಾನದಲ್ಲಿ ಇದ್ದವರು, ಸಚಿವರಾಗಿಯೂ ಕೆಲಸ ಮಾಡಿದವರು. ಇವರಿಗೆ ಸಂವಿಧಾನಾತ್ಮಕವಾಗಿ, ಕಾನೂನಿನ ಚೌಕಟ್ಟಿನಲ್ಲಿ, ಜನಪ್ರತಿನಿಧಿ ಎಂಬ ಜವಾಬ್ದಾರಿ ಅರಿತು ಮಾತನಾಡಬೇಕು ಎಂಬುದರ ಅರಿವು ಇಲ್ಲ. ಇವರದ್ದೇನಿದ್ದರೂ RSS ಸಿದ್ಧಾಂತದ ಚಿಂತನಗಂಗಾ ಓದಿಕೊಂಡು ಬಂದವರಾದ್ದರಿಂದ ಎಲ್ಲಿ, ಹೇಗೆ ಮಾತನಾಡಬೇಕು ಎಂಬ ಕನಿಷ್ಟ ಅರಿವು ಇಲ್ಲ. ಹಾಗಾಗಿ ಆರಗ ಜ್ಞಾನೇಂದ್ರ ಅವರ ವರ್ಣಭೇದ ನೀತಿಯ ಮಾತನ್ನು, ಅವರ ಸಂವಿಧಾನ ಉಲ್ಲಂಘನೆಯನ್ನು ಪರಿಗಣಿಸಿ ಅವರ ಶಾಸಕ ಸ್ಥಾನವನ್ನು ರದ್ದುಗೊಳಿಸಬೇಕು ಎಂದು ಕಿಮ್ಮನೆ ರತ್ನಾಕರ್ ಆಗ್ರಹಿಸಿದ್ದಾರೆ.

ಕಸ್ತೂರಿ ರಂಗನ್ ವರದಿಗೆ ಪಟ್ಟು ಹಿಡಿದಿರುವುದು ಕೇಂದ್ರವೇ ಹೊರತು, ರಾಜ್ಯ ಸರ್ಕಾರವಲ್ಲ : ಅರಣ್ಯ ಸಚಿವ ಈಶ್ವರ್ ಖಂಡ್ರೆ
ಕಸ್ತೂರಿ ರಂಗನ್ ವರದಿ ಜಾರಿಯ ಕಾರಣಕ್ಕೆ ಬಿಜೆಪಿ ಪಕ್ಷ ಮಲೆನಾಡು ಭಾಗದಲ್ಲಿ ನಡೆಸಿದ ಪ್ರತಿಭಟನೆ ಬಗ್ಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಅಷ್ಟೆ ಅಲ್ಲದೆ ಯಾವ ಕಾರಣಕ್ಕೂ ಕಸ್ತೂರಿ ರಂಗನ್ ವರದಿ ಜಾರಿಗೆ ಸರ್ಕಾರ ಬದ್ಧ ಎಂಬ ಹೇಳಿಕೆ ಕೊಟ್ಟೇ ಇಲ್ಲ ಎಂದೂ ಹೇಳಿದ್ದಾರೆ. ಅದೂ ಅಲ್ಲದೇ ಪಶ್ಚಿಮ ಘಟ್ಟಗಳ ಅಧ್ಯಯನಕ್ಕೆ ನಿವೃತ್ತ ಐಎಫ್ಎಸ್ ಅಧಿಕಾರಿಯನ್ನು ನೇಮಿಸಿರುವುದು ಕೇಂದ್ರ ಸರ್ಕಾರವೇ ಹೊರತು ರಾಜ್ಯ ಸರ್ಕಾರ ಅಲ್ಲ ಎಂದು ಈಶ್ವರ್ ಖಂಡ್ರೆ ಹೇಳಿದ್ದಾರೆ.

“ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮ ಒಂದರ ಸಂವಾದದ ವೇಳೆ ಕೆಲವರು ಕಸ್ತೂರಿರಂಗನ್ ವರದಿ ಕುರಿತಂತೆ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ತಾವು ಯಾವುದೇ ಹಂತದಲ್ಲೂ “ಕಸ್ತೂರಿ ರಂಗನ್ ವರದಿ ಜಾರಿಗೆ ಸರ್ಕಾರ ಬದ್ಧ’’ ಎಂದು ತಿಳಿಸಿರುವುದಿಲ್ಲ. ಇದು ತಿರುಚಿದ ಹೇಳಿಕೆ. ಬಿಜೆಪಿ ಇದನ್ನು ತಿರುಚಿ ರಾಜಕೀಯಕ್ಕೆ ಬಳಸಿಕೊಂಡಿದೆ” ಎಂದು ಈಶ್ವರ್ ಖಂಡ್ರೆ ಆರೋಪಿಸಿದ್ದಾರೆ.

ಅಷ್ಟೆ ಅಲ್ಲದೆ “ಈ ಬಗ್ಗೆ ಭಾನುವಾರವೇ ಬೀದರ್ ನಲ್ಲಿ ನಡೆದ ಪತ್ರಿಕಾ ದಿನಾಚರಣೆಯಲ್ಲಿ ನಾನು ಸ್ಪಷ್ಟೀಕರಣ ನೀಡಿದ್ದೇನೆ. ಸೋಮವಾರ ಮತ್ತೊಮ್ಮೆ ಕೂಡಾ ಸ್ಪಷ್ಟೀಕರಣ ಹೇಳಿಕೆ ಬಿಡುಗಡೆ ಮಾಡಿದ್ದು, ಇದು ಎಲ್ಲ ಮಾಧ್ಯಮದಲ್ಲೂ ಪ್ರಕಟವಾಗಿದೆ. ಹೀಗಿದ್ದೂ, ಬಿಜೆಪಿ ರಾಜಕೀಯ ದುರ್ಲಾಭಕ್ಕಾಗಿ ಮಂಗಳವಾರ ಪ್ರತಿಭಟನೆ ನಡೆಸಿರುವುದು ಅರ್ಥಹೀನ” ಎಂದು ಹೇಳಿದರು.

ಇನ್ನು ಕಸ್ತೂರಿ ರಂಗನ್ ವರದಿ ವಿಚಾರವಾಗಿ ಪ್ರತಿಭಟನೆ ಮಾಡೋ ನೆಪದಲ್ಲಿ ಆರಗ ಜ್ಞಾನೇಂದ್ರ ಅನವಶ್ಯಕವಾಗಿ ಮಲ್ಲಿಕಾರ್ಜುನ ಖರ್ಗೆಯವರ ಮೈಬಣ್ಣದ ಬಗ್ಗೆ ಪ್ರಸ್ತಾಪಿಸಿದ್ದು ಬಿಜೆಪಿ ಪಕ್ಷದ ನಿಲುವನ್ನು ಹೊರಹಾಕಿದಂತಿದೆ. ಆರಗ ಜ್ಞಾನೇಂದ್ರ ಅವರು ನಮ್ಮ ಕಲ್ಯಾಣ ಕರ್ನಾಟಕದಲ್ಲಿ ಮರಗಳಿಲ್ಲ ನೆರಳಿಲ್ಲ ನಮ್ಮ ತಲೆಕೂದಲೇ ನೆರಳು ಎಂದೆಲ್ಲಾ ತುಚ್ಛವಾಗಿ ಮಾತನಾಡಿರುವುದು ಅವರ ಕೀಳು ಅಭಿರುಚಿಗೆ ಹಿಡಿದ ಕನ್ನಡಿಯಾಗಿದೆ. ಗೃಹ ಮಂತ್ರಿಯಾಗಿ ಸೇವೆ ಸಲ್ಲಿಸಿದ ವ್ಯಕ್ತಿ ಮನುಷ್ಯರ ಬಣ್ಣದ ಮೇಲೆ ಟೀಕೆ ಮಾಡಿ, ಈ ರೀತಿ ನಾಡಿನ ಒಂದು ಕಾಲು ಕೋಟಿ ಜನತೆಗೆ ಅವಮಾನ ಮಾಡಿರುವುದು ನಿಜಕ್ಕೂ ದುರ್ದೈವ ಎಂದು ತಿಳಿಸಿದ್ದಾರೆ.

ತಾವು ಅರಣ್ಯ ಇಲ್ಲದ ಪ್ರದೇಶದಿಂದ ಬಂದಿರಬಹುದು. ಆದರೆ ಹಸಿರಿನ ಮಹತ್ವ ತಮಗೆ ತಿಳಿದಿದೆ. ಅರಣ್ಯ ಸಚಿವನಾಗಿ ರಾಜ್ಯದ ಹಸಿರು ವ್ಯಾಪ್ತಿಯನ್ನು ಹೆಚ್ಚಿಸಲು ಶಕ್ತಿಮೀರಿ ಶ್ರಮಿಸುತ್ತಿದ್ದು, ಕಲ್ಯಾಣ ಕರ್ನಾಟಕವನ್ನು ಹಸಿರುಮಯಗೊಳಿಸಲು ಮುಂದಾಗಿದ್ದೇನೆ. ಈ ಕಾರ್ಯವನ್ನು ಬಿಜೆಪಿ ಸರ್ಕಾರ ಮಾಡಿರಲಿಲ್ಲ ಎಂದು ಈಶ್ವರ್ ಖಂಡ್ರೆ ಹೇಳಿದ್ದಾರೆ.

ಹಾಗೆಯೇ ಕೇಂದ್ರ ಸರ್ಕಾರವೇ ನಿವೃತ್ತ ಐಎಫ್ಎಸ್ ಅಧಿಕಾರಿ ಸಂಜಯ್ ಕುಮಾರ್ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಿ ಎಲ್ಲ ಪಶ್ಚಿಮ ಘಟ್ಟದ ರಾಜ್ಯಗಳಿಗೆ ಅಧ್ಯಯನಕ್ಕೆ ಕಳಿಸಿದೆ, ವರದಿ ಜಾರಿಗೆ ಪಟ್ಟು ಹಿಡಿದಿರುವುದು ಕೇಂದ್ರ ಸರ್ಕಾರವೇ ಹೊರತು ರಾಜ್ಯ ಸರ್ಕಾರವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಮೈಬಣ್ಣದ ಮೇಲೆ ವ್ಯಂಗ್ಯ ; ಆರಗ ಜ್ಞಾನೇಂದ್ರ ಅವರು, ಮಲ್ಲಿಕಾರ್ಜುನ ಖರ್ಗೆ ಹಾಗೂ ದಲಿತರ ಕ್ಷಮೆ ಯಾಚಿಸುವಂತೆ ಕಾಂಗ್ರೆಸ್ ಸರಣಿ ಟ್ವಿಟ್
‘ಶ್ರೀ ಮಲ್ಲಿಕಾರ್ಜುನ್ ಖರ್ಗೆಯವರ ಮೈಬಣ್ಣದ ಬಗ್ಗೆ ಅವಹೇಳನ ಮಾಡಿದ ಮಾಜಿ ಸಚಿವ ಆರಗ ಜ್ಞಾನೇಂದ್ರ ಅವರು ಬಿಜೆಪಿಯ ಕೀಳು ಮಟ್ಟದ ಮನಸ್ಥಿತಿಯನ್ನು ಪ್ರತಿನಿಧಿಸಿದ್ದಾರೆ. ಬಿಜೆಪಿಯವರಲ್ಲಿ ದಲಿತರ ಬಗ್ಗೆ ಇರುವ ಅಸಹನೆ, ಅಸಡ್ಡೆಯನ್ನು ವ್ಯಕ್ತಪಡಿಸಿದ್ದಾರೆ’ ಎಂದು ರಾಜ್ಯ ಕಾಂಗ್ರೆಸ್ ಸರಣಿ ಟ್ವಿಟ್ ಮಾಡಿದೆ.

ತೀರ್ಥಹಳ್ಳಿಯಲ್ಲಿ ಬಿಜೆಪಿ ಆಯೋಜಿಸಿದ್ದ ಪ್ರತಿಭಟನೆಯೊಂದರಲ್ಲಿ ಅಗತ್ಯ ಇಲ್ಲದೇ ಇದ್ದರೂ ಮಲ್ಲಿಕಾರ್ಜುನ ಖರ್ಗೆಯವರ ಹೆಸರನ್ನು ಪ್ರಸ್ತಾಪಿಸಿದ್ದೂ ಅಲ್ಲದೇ, ಅವರ ಮೈಬಣ್ಣದ ಬಗ್ಗೆ ಆರಗ ಜ್ಞಾನೇಂದ್ರ ಮಾತನಾಡಿದ್ದರು. ಅದಷ್ಟೇ ಅಲ್ಲದೇ ಬಿಸಿಲಿನ ಹೊಡೆತಕ್ಕೆ ಉತ್ತರ ಕರ್ನಾಟಕದ ಮಂದಿ ಸುಟ್ಟು ಕರಕಲಾದಂತೆ ಆಗಿರುತ್ತಾರೆ ಎನ್ನುವ ಮೂಲಕ ಉತ್ತರ ಕರ್ನಾಟಕದ ಜನರ ಮೈಬಣ್ಣವನ್ನೇ ಉಲ್ಲೇಖಿಸಿ ಆರಗ ಜ್ಞಾನೇಂದ್ರ ಮಾತನಾಡಿದ್ದರು.

ಈ ಬಗ್ಗೆ ಪೀಪಲ್ ಮೀಡಿಯಾ ವರದಿ ಮಾಡಿತ್ತು. ಇದರ ಬಗ್ಗೆ ಸಾಮಾಜಿಕ ಜಾಲತಾಣ ಸೇರಿದಂತೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಪಕ್ಷ ಸರಣಿ ಟ್ವೀಟ್ ಮಾಡಿದ್ದು, ಜ್ಞಾನೇಂದ್ರ ಮತ್ತು ಬಿಜೆಪಿ ಪಕ್ಷ ಖರ್ಗೆ, ದಲಿತರು ಹಾಗೂ ಉತ್ತರ ಕರ್ನಾಟಕದ ಜನರ ಕ್ಷಮೆ ಕೇಳಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದೆ.

“ಮೈಬಣ್ಣದ ಬಗೆಗಿನ ಈ ಅವಹೇಳನ ಕೇವಲ ಖರ್ಗೆಯವರನ್ನು ಅವಮಾನಿಸಿದ್ದಲ್ಲ, ಖರ್ಗೆಯವರ ಹೆಸರಲ್ಲಿ ಇಡೀ ಮೂಲನಿವಾಸಿ ದಲಿತರಿಗೆ ಮಾಡಿದ ಅವಮಾನ.
ಬಣ್ಣದ ಬಗೆಗಿನ ಶೋಷಣೆ, ಅವಮಾನವನ್ನು ತೊಡೆದುಹಾಕಲು ಜಾಗತಿಕ ಮಟ್ಟದಲ್ಲಿ ಚಳವಳಿಗಳು ನಡೆದಿವೆ, ಪಾಶ್ಚಿಮತ್ಯ ದೇಶಗಳಲ್ಲಿ ಮೈಬಣ್ಣದ ಬಗ್ಗೆ, ದೈಹಿಕ ರೂಪದ ಬಗ್ಗೆ  ಅವಮಾನಿಸಿದರೆ ಮಹಾ ಅಪರಾಧಿಯಂತೆ ಕಾಣಲಾಗುತ್ತದೆ, ಆದರೆ ಇಲ್ಲಿನ ಬಿಜೆಪಿಗರು ದಲಿತರನ್ನು, ದಲಿತರ ಮೈಬಣ್ಣವನ್ನು, ರೂಪವನ್ನು ಅವಮಾನಿಸುವುದು ಹೆಗ್ಗಳಿಕೆಯಾಗಿ ನೋಡುತ್ತದೆ.
ಬಿಜೆಪಿಗೆ ದಲಿತರ ಬಗ್ಗೆ ಕಿಂಚಿತ್ತಾದರೂ ಗೌರವವಿದ್ದರೆ ಜ್ಞಾನೇಂದ್ರರನ್ನು ಉಚ್ಚಾಟನೆ ಮಾಡಬೇಕು, ಜ್ಞಾನೇಂದ್ರ ಅವರು ಮಲ್ಲಿಕಾರ್ಜುನ್ ಖರ್ಗೆಯವರ ಹಾಗೂ ದಲಿತರ ಕ್ಷಮೆ ಕೇಳಬೇಕು” ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಶ್ರೀ ಮಲ್ಲಿಕಾರ್ಜುನ್ ಖರ್ಗೆಯವರ ಮೈಬಣ್ಣದ ಬಗ್ಗೆ ಅವಹೇಳನ ಮಾಡಿದ @JnanendraAraga ಅವರು ಬಿಜೆಪಿಯ ಕೀಳು ಮಟ್ಟದ ಮನಸ್ಥಿತಿಯನ್ನು ಪ್ರತಿನಿಧಿಸಿದ್ದಾರೆ.
ಬಿಜೆಪಿಯವರಲ್ಲಿ ದಲಿತರ ಬಗ್ಗೆ ಇರುವ ಅಸಹನೆ, ಅಸಡ್ಡೆಯನ್ನು ವ್ಯಕ್ತಪಡಿಸಿದ್ದಾರೆ.

ಮೈಬಣ್ಣದ ಬಗೆಗಿನ ಈ ಅವಹೇಳನ ಕೇವಲ ಖರ್ಗೆಯವರನ್ನು ಅವಮಾನಿಸಿದ್ದಲ್ಲ, ಖರ್ಗೆಯವರ ಹೆಸರಲ್ಲಿ ಇಡೀ…
— Karnataka Congress (@INCKarnataka) August 2, 2023

ಹಾಗೆಯೇ ಉತ್ತರ ಕರ್ನಾಟಕದ ಮಂದಿಯ ಮೈಬಣ್ಣದ ಬಗ್ಗೆಯೂ ಮಾತನಾಡಿರುವ ಆರಗ ಜ್ಞಾನೇಂದ್ರರಿಗೆ “ಬಿಸಿಲು ನಾಡಿನ ಉತ್ತರ ಕರ್ನಾಟಕದ ಜನರನ್ನು, ಕಪ್ಪು ಬಣ್ಣದವರನ್ನು, ದಲಿತರನ್ನು ಬಿಜೆಪಿ ತುಚ್ಚವಾದ ದೃಷ್ಟಿಯಲ್ಲಿ ನೋಡುತ್ತದೆ ಎನ್ನುವುದಕ್ಕೆ ಆರಗ ಜ್ಞಾನೇಂದ್ರ ಅವರ ಕೀಳು ಮಟ್ಟದ ಹೇಳಿಕೆಯೇ ಸಾಕ್ಷಿ.
ಬಿಸಿಲುನಾಡಿನ ಶ್ರಮಜೀವಿಗಳು ಕಪ್ಪು ಬಣ್ಣದಲ್ಲಿರುವುದು ಭ್ರಷ್ಟಾಚಾರದ ಹಣದಿಂದ ಎಸಿ ಮನೆಯಲ್ಲಿರುವ ಬಿಜೆಪಿಗರಿಗೆ ನೋಡಲಾಗುತ್ತಿಲ್ಲವೇ?
ಉತ್ತರ ಕರ್ನಾಟಕದವರನ್ನು ಪ್ರತ್ಯೇಕತಾ ಭಾವನೆಯಲ್ಲಿ ನೋಡುತ್ತಿರುವ ಬಿಜೆಪಿಗೆ ಅಲ್ಲಿನ ಜನರ ಮತಗಳು ಮಾತ್ರ ಬೇಕೇ?” ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಬಿಸಿಲು ನಾಡಿನ ಉತ್ತರ ಕರ್ನಾಟಕದ ಜನರನ್ನು, ಕಪ್ಪು ಬಣ್ಣದವರನ್ನು, ದಲಿತರನ್ನು ಬಿಜೆಪಿ ತುಚ್ಚವಾದ ದೃಷ್ಟಿಯಲ್ಲಿ ನೋಡುತ್ತದೆ ಎನ್ನುವುದಕ್ಕೆ @JnanendraAraga ಅವರ ಕೀಳು ಮಟ್ಟದ ಹೇಳಿಕೆಯೇ ಸಾಕ್ಷಿ.

ಬಿಸಿಲುನಾಡಿನ ಶ್ರಮಜೀವಿಗಳು ಕಪ್ಪು ಬಣ್ಣದಲ್ಲಿರುವುದು ಭ್ರಷ್ಟಾಚಾರದ ಹಣದಿಂದ ಎಸಿ ಮನೆಯಲ್ಲಿರುವ ಬಿಜೆಪಿಗರಿಗೆ ನೋಡಲಾಗುತ್ತಿಲ್ಲವೇ?…
— Karnataka Congress (@INCKarnataka) August 2, 2023

ಹಾಗೆಯೇ ಈ ಮನಸ್ಥಿತಿ ಹೊಂದಿರುವ ಆರಗ ಜ್ಞಾನೇಂದ್ರ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಬೇಕು ಎಂದು ಕಾಂಗ್ರೆಸ್ ಪಕ್ಷ ಆಗ್ರಹಿಸಿದೆ.

,@BJP4Karnataka ಗೆ ಉತ್ತರ ಕರ್ನಾಟಕದ ಜನರ ಬಗ್ಗೆ, ದಲಿತರ ಬಗ್ಗೆ, ಕಪ್ಪುವರ್ಣದವರ ಬಗ್ಗೆ ನಿಜಕ್ಕೂ ಗೌರವ ಇದ್ದಿದ್ದೇ ಆದರೆ ಎಐಸಿಸಿ ಅಧ್ಯಕ್ಷರಾದ @kharge ಅವರನ್ನು, ಅರಣ್ಯ ಸಚಿವರಾದ @eshwar_khandre ಅವರನ್ನು ಹಾಗೂ ಉತ್ತರ ಕರ್ನಾಟಕದ ಜನತೆಯನ್ನು ಅತ್ಯಂತ ಕೀಳು ಅಭಿರುಚಿಯ ಮಾತುಗಳಿಂದ ಅವಮಾನಿಸಿದ @JnanendraAraga ಅವರನ್ನು ಬಿಜೆಪಿ…
— Karnataka Congress (@INCKarnataka) August 2, 2023

ಮಾತಾಡುವ ಭರದಲ್ಲಿ ಮಲ್ಲಿಕಾರ್ಜುನ ಖರ್ಗೆ ಮೈಬಣ್ಣದ ಬಗ್ಗೆ ವ್ಯಂಗ್ಯ ಮಾಡಿದ ಆರಗ ಜ್ಞಾನೇಂದ್ರ

ಮಾತಾಡುವ ಭರದಲ್ಲಿ ಮಲ್ಲಿಕಾರ್ಜುನ ಖರ್ಗೆ ಮೈಬಣ್ಣದ ಬಗ್ಗೆ ವ್ಯಂಗ್ಯ ಮಾಡಿದ ಆರಗ ಜ್ಞಾನೇಂದ್ರ
ಕಸ್ತೂರಿ ರಂಗನ್ ವರದಿ ಜಾರಿಗೊಳಿಸುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ವಿವಾದವೊಂದನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಪ್ರತಿಭಟನೆ ವೇಳೆ ಭಾಷಣ ಮಾಡುವ ಸಂದರ್ಭದಲ್ಲಿ ಅನಗತ್ಯವಾಗಿ ಮಲ್ಲಿಕಾರ್ಜುನ ಖರ್ಗೆಯವರ ಹೆಸರು ಪ್ರಸ್ತಾಪಿಸಿ ಖರ್ಗೆಯವರ ಮೈ ಬಣ್ಣದ ಬಗ್ಗೆ ವ್ಯಂಗ್ಯವಾಡಿದ್ದಾರೆ.

ಆರಗ ಜ್ಞಾನೇಂದ್ರ ಅವರ ಸ್ವಕ್ಷೇತ್ರ ತೀರ್ಥಹಳ್ಳಿಯಲ್ಲಿ ಕಸ್ತೂರಿ ರಂಗನ್ ವರದಿ ಜಾರಿಗೊಳಿಸುವುದನ್ನು ವಿರೋಧಿಸಿ ಸ್ಥಳೀಯ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿತ್ತು. ಈ ವೇಳೆ ಸರ್ಕಾರದ ನಿಲುವನ್ನು ವಿರೋಧಿಸಿ ಘೋಷಣೆ, ಧಿಕ್ಕಾರ ಕೂಗಲಾಗಿತ್ತು. ಈ ಸಂದರ್ಭದಲ್ಲಿ ಆರಗ ಜ್ಞಾನೇಂದ್ರ ಅವರ ಮಾತಿನ ಸರದಿ ಬಂದಾಗ ಈಶ್ವರ್ ಖಂಡ್ರೇ ಹಾಗೂ ಮಲ್ಲಿಕಾರ್ಜುನ್ ಖರ್ಗೆ ವಿರುದ್ಧ ತೀವ್ರ ವಾಗ್ದಾಳಿ ಮಾಡಿದ್ದಾರೆ.

ಈ ವೇಳೆ ಕಸ್ತೂರಿ ರಂಗನ್ ವರದಿ ಜಾರಿ ಮಾಡಿದರೆ ಮಲೆನಾಡು ಭಾಗಕ್ಕೆ ಆಗಬಹುದಾದ ದುಷ್ಪರಿಣಾಮ ಏನು ಎಂಬ ಬಗ್ಗೆ ಸರ್ಕಾರಕ್ಕೆ ಅರಿವಿರಬೇಕು. ಇದಕ್ಕೆ ಸರಿಯಾಗಿ ಕಾಡಿನ ಬಗ್ಗೆ ಅರಿವೇ ಇರದಂತಹ ಜನಪ್ರತಿನಿಧಿಯನ್ನು ಅರಣ್ಯ ಸಚಿವರನ್ನಾಗಿ ಮಾಡಿದರೆ ಇಂತಹ ವರದಿಗಳು ಜಾರಿ ಆಗುತ್ತವೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಬಗ್ಗೆ ವಾಗ್ದಾಳಿ ನಡೆಸಿದ್ದಾರೆ.

ಇದೇ ವೇಳೆ ರಾಜ್ಯ ಸರ್ಕಾರ, ಅರಣ್ಯ ಸಚಿವರನ್ನು ಟೀಕಿಸುವ ಮಧ್ಯೆ ಅನಗತ್ಯವಾಗಿ ಮಲ್ಲಿಕಾರ್ಜುನ ಖರ್ಗೆಯವರ ಹೆಸರು ಪ್ರಸ್ತಾಪಿಸಿದ ಆರಗ ಜ್ಞಾನೇಂದ್ರ ಖರ್ಗೆಯವರ ಮೈ ಬಣ್ಣದ ಬಗ್ಗೆ ವ್ಯಂಗ್ಯಬರಿತವಾಗಿ ಮಾತನ್ನಾಡಿದ್ದಾರೆ.

“ಅವರಿಗೆ ಮರ-ಗಿಡ ಎನ್ನುವುದರ ಬಗ್ಗೆ ಗೊತ್ತಿಲ್ಲ. ಮರದ ನೆರಳಿನ ಮಹತ್ವ ಗೊತ್ತಿಲ್ಲ. ಸುಟ್ಟು ಕರಕಲಾದಂತೆ ಇರ್ತಾರೆ…, ನಮ್ಮ ಖರ್ಗೆಯವರನ್ನ ನೋಡಿದ್ರೇ ಗೊತ್ತಾಗುತ್ತೆ. ಪಾಪ.., ತಲೆ ಕೂದಲು ಮುಚ್ಚಿಕೊಂಡಿದ್ದಕ್ಕೆ ಸ್ವಲ್ಪ ಉಳಿದುಕೊಂಡಿದ್ದಾರೆ. ಅದೇ ನೆರಳು ಅವರಿಗೆ.  ಮಲೆನಾಡು ಮತ್ತು ಪಶ್ಚಿಮಘಟ್ಟದ ಬದುಕು ಅವರಿಗೆ ಗೊತ್ತಿಲ್ಲ..” ಎನ್ನುವ ಮೂಲಕ ಮಲ್ಲಿಕಾರ್ಜುನ ಖರ್ಗೆ ಹೆಸರನ್ನು ಪ್ರಸ್ತಾಪಿಸಿಯೇ ಅವರ ಬಣ್ಣದ ಬಗ್ಗೆ ವ್ಯಂಗ್ಯ ಮಾಡುವಂತೆ ಮಾತನ್ನಾಡಿದ್ದಾರೆ.

ಗಡಿ ವಿವಾದ: ಸಮಸ್ಯೆಯನ್ನು ಸಾಂವಿಧಾನಿಕ ರೀತಿಯಲ್ಲಿ ಪರಿಹರಿಸಲು ಇಬ್ಬರು ಸಿಎಂಗಳು ಸಮ್ಮತಿ- ಅಮಿತ್‌ ಶಾ
ಹೊಸದಿಲ್ಲಿ: ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮತ್ತು ಕರ್ನಾಟಕದ ಮುಖ್ಯಮಂತ್ರಿಗಳೊಂದಿಗೆ ಬುಧವಾರ ಸಭೆ ನಡೆಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಈ ಸಮಸ್ಯೆಯನ್ನು ಸಾಂವಿಧಾನಿಕ ರೀತಿಯಲ್ಲಿ ಪರಿಹರಿಸಲು ಎರೆಡು ರಾಜ್ಯಗಳ ಮುಖ್ಯಮಂತ್ರಿಗಳು ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಕರ್ನಾಟಕದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಕರ್ನಾಟಕ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಭಾಗವಹಿಸಿದ್ದ ಈ ಸಭೆಯಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ನಡೆಯಿತು.

ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅಮಿತ್ ಶಾ ಅವರು, ʼಮಹಾರಾಷ್ಟ್ರ ಮತ್ತು ಕರ್ನಾಟಕದ ನಡುವೆ ನಡೆಯುತ್ತಿರುವ ಗಡಿ ವಿವಾದಗಳ ಬಗ್ಗೆ ನಾವು ಸಕಾರಾತ್ಮಕ ಚರ್ಚೆ ನಡೆಸಿದ್ದೇವೆ. ಎರಡೂ ಕಡೆಯವರು ಸಕಾರಾತ್ಮಕ ಮನೋಭಾವವನ್ನು ಉಳಿಸಿಕೊಂಡಿದ್ದಾರೆ ಮತ್ತು ಗಡಿ ವಿವಾದಗಳನ್ನು ರಸ್ತೆಗಳಲ್ಲಿ ಪರಿಹರಿಸಲು ಸಾಧ್ಯವಿಲ್ಲ ಮತ್ತು ಸಾಂವಿಧಾನಿಕ ವಿಧಾನಗಳ ಮೂಲಕ ಮಾತ್ರ ಮಾಡಬಹುದು ಎಂದು ಸರ್ವಾನುಮತದಿಂದ ನಿರ್ಧರಿಸಲಾಯಿತು ಎಂದು ಹೇಳಿದ್ದಾರೆ.

ʼಸಮಸ್ಯೆಯನ್ನು ಪರಿಹರಿಸುವ ಸಲುವಾಗಿ ಎರಡೂ ರಾಜ್ಯಗಳ ತಲಾ ಮೂವರು ಸಚಿವರು ಸೇರಿದಂತೆ ಒಟ್ಟು 6 ಸಚಿವರ ಸಮಿತಿಯು ವಿವರವಾದ ಮಾತುಕತೆ ನಡೆಸಲಿದೆ. ಇದಲ್ಲದೆ ಕಾನೂನು ಮತ್ತು ಸುವ್ಯವಸ್ಥೆಯನ್ನು ಖಚಿತಪಡಿಸಿಕೊಳ್ಳಲು, ಹಿರಿಯ ಐಪಿಎಸ್ ಅಧಿಕಾರಿಯ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗುವುದುʼ ಎಂದು ಹೇಳಿದ್ದಾರೆ.

ಉದ್ವಿಗ್ನತೆಯನ್ನು ಸೃಷ್ಟಿಸಲು ಟ್ವಿಟರ್ ಮೂಲಕ ಸುಳ್ಳು ಸುದ್ದಿಗಳನ್ನು ಹರಡಲಾಗುತ್ತಿದೆ ಎಂದು ಉಲ್ಲೇಖಿಸಿದ ಶಾ, ʼಹಿರಿಯ ನಾಯಕರ ಹೆಸರಿನ ನಕಲಿ ಟ್ವಿಟರ್ ಖಾತೆಗಳು ಈ ವಿಷಯವನ್ನು ಪ್ರಚೋದಿಸುವಲ್ಲಿ ಬಹಳ ದೊಡ್ಡ ಪಾತ್ರ ವಹಿಸಿವೆ ಎಂಬುದು ನಮ್ಮ ಗಮನಕ್ಕೆ ಬಂದಿದೆ. ಇದರ ಹಿಂದಿರುವ ಜನರ ವಿರುದ್ಧ ಎಫ್ಐಆರ್‌ಗಳನ್ನು ದಾಖಲಿಸಲು ನಿರ್ಧರಿಸಲಾಗಿದೆ ಮತ್ತು ಅವುಗಳನ್ನು ಆದಷ್ಟು ಬೇಗ ಬಹಿರಂಗಪಡಿಸಲಾಗುವುದುʼ ಎಂದರು.

ವಿರೋಧ ಪಕ್ಷಗಳು ಸಹಕರಿಸುವಂತೆ ಮನವಿ ಮಾಡಿದ ಅಮಿತ್ ಶಾ ಅವರು, ʼಈ ವಿಷಯವನ್ನು ರಾಜಕೀಯಗೊಳಿಸದಂತೆ ಮಹಾರಾಷ್ಟ್ರ ಮತ್ತು ಕರ್ನಾಟಕದ ವಿರೋಧ ಪಕ್ಷಗಳನ್ನು ನಾನು ಒತ್ತಾಯಿಸುತ್ತೇನೆ. ಈ ಸಮಸ್ಯೆಯನ್ನು ಪರಿಹರಿಸಲು ರಚಿಸಲಾದ ಸಮಿತಿಯ ಚರ್ಚೆಗಳ ಫಲಿತಾಂಶಕ್ಕಾಗಿ ಮತ್ತು ಸರ್ವೋಚ್ಚ ನ್ಯಾಯಾಲಯದ ನಿರ್ಧಾರಕ್ಕಾಗಿ ನಾವು ಕಾಯಬೇಕು. ಎನ್ಸಿಪಿ, ಕಾಂಗ್ರೆಸ್ ಮತ್ತು ಉದ್ಧವ್ ಠಾಕ್ರೆ ಗುಂಪು ಸಹಕರಿಸುತ್ತವೆ ಎಂಬ ವಿಶ್ವಾಸ ನನಗಿದೆ ಎಂದು ಹೇಳಿದರು.

ತೀರ್ಥಹಳ್ಳಿಯಲ್ಲಿ ಮುಖ್ಯಮಂತ್ರಿಗಳ ಕಾರ್ಯಕ್ರಮ ; ಆಡಳಿತ ಯಂತ್ರದ ದುರುಪಯೋಗ ಮಾಡಿಕೊಂಡಿತೇ ಸ್ಥಳೀಯ ಆಡಳಿತ?
ಕಳೆದೊಂದು ವಾರದಿಂದ ತೀರ್ಥಹಳ್ಳಿ ಭಾಗದ ಎಲ್ಲಾ ಸಣ್ಣಪುಟ್ಟ ಸರ್ಕಾರಿ ನೌಕರರ, ಗುತ್ತಿಗೆ ನೌಕರರ ಕೆಲಸಗಳು ಸ್ತಬ್ಧವಾಗಿದೆ. ಅದರಲ್ಲೂ ವಿಶೇಷವಾಗಿ ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತೆಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಕಾರ್ಯಕ್ರಮಕ್ಕೆ ಜನ ಸೇರಿಸುವ ಕೆಲಸವನ್ನು ತಾಲ್ಲೂಕು ಆಡಳಿತ ವಹಿಸಿದೆ ಎಂದು ಸ್ಥಳೀಯ ನಾಗರೀಕರು ಆರೋಪಿಸಿದ್ದಾರೆ.

ನವೆಂಬರ್ 27 ರ ಭಾನುವಾರ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ, ಶಂಕುಸ್ಥಾಪನೆಯ ಉದ್ದೇಶದಿಂದ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಲೆನಾಡು ಭಾಗಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ವಿಶೇಷವಾಗಿ ಶಿವಮೊಗ್ಗ, ತೀರ್ಥಹಳ್ಳಿ, ಕೊಪ್ಪ ಭಾಗಗಳಲ್ಲಿ ಮುಖ್ಯಮಂತ್ರಿ ಪ್ರವಾಸ ಕೈಕೊಂಡಿದ್ದು ಗೃಹಮಂತ್ರಿಗಳ ತವರೂರು ತೀರ್ಥಹಳ್ಳಿಯಲ್ಲಿ ದೊಡ್ಡ ಕಾರ್ಯಕ್ರಮದ ತಯಾರಿ ನಡೆದಿದೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ಆಡಳಿತ ಎಲ್ಲಾ ಡಿ ದರ್ಜೆ ನೌಕರರಿಗೆ ಜನ ಸೇರಿಸೋ ಜವಾಬ್ದಾರಿ ವಹಿಸಿ, ಬಿಜೆಪಿ ಕಾರ್ಯಕರ್ತರಂತೆ ಕೆಲಸ ಮಾಡಿಸಿಕೊಳ್ಳುವ ಅಧಿಕಾರದ ದುರುಪಯೋಗದ ಕೆಲಸ ನಡೆಯುವ ಬಗ್ಗೆ ಸ್ಥಳೀಯರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

ಸಧ್ಯಕ್ಕೆ ಯಾವ ಪಂಚಾಯತಿಗಳಲ್ಲೂ ಸಹ ಅಭಿವೃದ್ಧಿ ಅಧಿಕಾರಿಗಳು ಸರಿಯಾಗಿ ಜನಸಾಮಾನ್ಯರ ಕೈಗೆ ಸಿಗುತ್ತಿಲ್ಲ. ಅಂಗನವಾಡಿ ಕಾರ್ಯಕರ್ತರು ಮಕ್ಕಳ ಪೋಷಣೆ ಮಾಡುವುದು ಬಿಟ್ಟು ಊರೂರು ಬೀದಿ ಬೀದಿ ಸುತ್ತಿದ್ದಾರೆ. ಆಶಾ ಕಾರ್ಯಕರ್ತರೂ ಸಹ ಯಾವ ಬಿಜೆಪಿ ಕಾರ್ಯಕರ್ತರಿಗೂ ಕಡಿಮೆ ಇಲ್ಲದಂತೆ ಕೆಲಸ ಮಾಡುತ್ತಿದ್ದಾರೆ. ಹಾಗಾದರೆ ಅವರಿಗೇ ಎಂದು ಇರುವ ಕೆಲಸ ಮಾಡುವವರ್ಯಾರು. ಇದು ಜನಸಾಮಾನ್ಯರಿಗೂ ದೊಡ್ಡ ತಲೆನೋವಾಗಿ ಮಾರ್ಪಟ್ಟಿದೆ.

ಹೇಳಿಕೇಳಿ ಚುನಾವಣಾ ವರ್ಷ. ಇಂತಹ ಸಮಯದಲ್ಲಿ ಅದೆಂತದ್ದೇ ಸರ್ಕಾರಿ ಕಾರ್ಯಕ್ರಮ ಆದರೂ ರಾಜಕೀಯ ಪಕ್ಷ ತನ್ನ ಲಾಭಕ್ಕಾಗಿಯೇ ಕೆಲಸ ಮಾಡುತ್ತವೆ. ಇಂತಹ ಸಮಯದಲ್ಲಿ ಜನ ಸೇರಿಸಿ ಪ್ರತಿಷ್ಠೆ ಮೆರೆಯುವುದು ಆಡಳಿತ ಪಕ್ಷಗಳು ರೂಢಿಯಿಂದ ನಡೆಸಿಕೊಂಡು ಬಂದಿವೆ. ಆದರೆ ಇಂತಹ ಕೆಲಸಕ್ಕೆ ಸರ್ಕಾರಿ ನೌಕರರನ್ನು ಬಳಸುವುದು ಆಡಳಿತ ಯಂತ್ರದ ಸಂಪೂರ್ಣ ದುರುಪಯೋಗ ಎಂದೇ ತೀರ್ಥಹಳ್ಳಿ ಭಾಗದಲ್ಲಿ ಹೇಳಲಾಗುತ್ತಿದೆ.

ಇನ್ನು ಅಂಗನವಾಡಿ, ಆಶಾ ಕಾರ್ಯಕರ್ತರು ಜನ ಸೇರಿಸುವಲ್ಲಿ ಜನರಿಗೆ, ಸ್ತ್ರೀ ಶಕ್ತಿ, ಸ್ವಸಹಾಯ ಸಂಘಗಳಿಗೆ ಕಡ್ಡಾಯವಾಗಿ ಬರಲೇಬೇಕು ಎಂಬ ಒತ್ತಡ ಹಾಕುತ್ತಿರುವುದೂ ಸಹ ಕಂಡುಬಂದಿದೆ. ಈ ಕಡ್ಡಾಯ ಸುತ್ತೋಲೆಯ ಆದೇಶ ತಾಲ್ಲೂಕು ಆಡಳಿತ, ಸರ್ಕಾರ ಯಾರ ಕಡೆಯಿಂದಲೂ ಬಾರದೇ ಇದ್ದರೂ ಸ್ಥಳೀಯ ಪುಡಾರಿಗಳು ಅಂಗನವಾಡಿ ಕಾರ್ಯಕರ್ತರ ಕಡೆಯಿಂದ ಹೇಳಿಸುತ್ತಿರುವ ಉದ್ದೇಶವಾದರೂ ಏನು ಎಂಬುದು ಪ್ರಶ್ನಾರ್ಹ.

ಅಂದಹಾಗೆ ಕಳೆದ ಬಾರಿ 20,000 ಮತಗಳ ಅಂತರದಿಂದ ಗೆದ್ದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಕ್ಷೇತ್ರದಲ್ಲಿ ಮುಖ್ಯಮಂತ್ರಿಗಳು ಬರುವ ಕಾರ್ಯಕ್ರಮಕ್ಕೆ ಜನ ಸೇರಿಸಲು ಸರ್ಕಾರಿ ನೌಕರರ ಬಳಕೆ ಎಷ್ಟು ಸರಿ. ಹಾಗೆಯೇ 20,000 ಜನ ಸೇರಿಸುವ ಬಗ್ಗೆ ಸ್ಥಳೀಯ ಬಿಜೆಪಿ ಮಾತಾಡುತ್ತಿದ್ದರು. ಆದರೆ ಈಗ ನಾಲ್ಕೈದು ಸಾವಿರ ಜನರಿಗಷ್ಟೆ ಸೀಮಿತವಾಗಿ ಸೇರುವ ಮೈದಾನದಲ್ಲಿ ಜನ ಸೇರಿಸುವುದು ನೋಡಿದರೆ ಕ್ಷೇತ್ರದಲ್ಲಿ ತಮ್ಮ ವರ್ಚಸ್ಸು ಕುಗ್ಗಿದೆ ಎಂಬುದನ್ನು ಬಿಜೆಪಿಗರೇ ಪರೋಕ್ಷವಾಗಿ ಒಪ್ಪಿದಂತಾಗಿದೆ ಎಂದು ಸ್ಥಳೀಯ ಕಾಂಗ್ರೆಸ್ ಪಕ್ಷದ ಮುಖಂಡರ ಅಭಿಪ್ರಾಯವಾಗಿದೆ.

ಇನ್ನು ಸ್ಥಳೀಯ ಜ್ವಲಂತ ಸಮಸ್ಯೆಯಾದ ಅಡಿಕೆ ತೋಟದ ಎಲೆಚುಕ್ಕೆ ರೋಗದ ಬಗ್ಗೆ ಮುಖ್ಯಮಂತ್ರಿ ಕಾರ್ಯಕ್ರಮದಲ್ಲಿ ಪ್ರಸ್ತಾಪ ಮಾಡಲಾಗುವುದೇ ಎಂಬ ಪ್ರಶ್ನೆ ಕೂಡಾ ಎದ್ದಿದೆ. ಹಾಗೊಂದು ವೇಳೆ ಎಲೆಚುಕ್ಕೆ ರೋಗದ ಬಗ್ಗೆ ಮುಖ್ಯಮಂತ್ರಿಗಳು ಸಭೆಯಲ್ಲಿ ಪ್ರಸ್ತಾಪಿಸಿದರೂ ಚುನಾವಣೆ ದೃಷ್ಟಿಯಿಂದ ಅದು ಕೇವಲ ಭರವಸೆ ಮಾತ್ರವೇ ಅಥವಾ ಈ ವರ್ಷದಲ್ಲೇ ಕಾರ್ಯರೂಪಕ್ಕೆ ಬರುವುದೇ ಎಂಬ ಬಗ್ಗೆಯೂ ಸ್ವತಃ ಬಿಜೆಪಿ ಪಾಳಯದಲ್ಲೇ ಮಾತನಾಡಿಕೊಳ್ಳುತ್ತಿದ್ದಾರೆ.

ಒಟ್ಟಾರೆ ಯಾರ ಬೇಡಿಕೆಯೂ ಇಲ್ಲದ ಕೋಟಿ ಲೆಕ್ಕದ ರಸ್ತೆ ಅಭಿವೃದ್ಧಿ ಕಾಮಗಾರಿ ಉದ್ಘಾಟನೆಯ ಹಿಂದೆ ಸ್ಥಳೀಯ ಜ್ವಲಂತ ಸಮಸ್ಯೆಗಳಾದ, ಮಲೆನಾಡಿಗರ ಉಸಿರಾಗಿರುವ ಅಡಿಕೆಗೆ ತಗುಲಿರುವ ಎಲೆಚುಕ್ಕೆ ರೋಗ, ಬೆಲೆಯೇರಿಕೆ ಬಿಸಿ ಮರೆಯಾಗದಿರಲಿ ಎಂಬುದು ಸ್ಥಳೀಯ ಪ್ರಜ್ಞಾವಂತರ ಆಶಯವಾಗಿದೆ.

ಕೊಲೆ, ಕಳ್ಳತನ, ಅಪಹರಣ ಯತ್ನ, ಕಳಪೆ ದರ್ಜೆಯ ಮದ್ಯ ಮಾರಾಟ; ಗೃಹ ಸಚಿವರ ಕ್ಷೇತ್ರದಲ್ಲಿ ಲಾ & ಆರ್ಡರ್ ಢಮಾರ್!
ಒಂದು ತಿಂಗಳ ಪ್ರೋಗ್ರೆಸ್ ರಿಪೋರ್ಟ್ ಕಡೆಗೆ ಗಮನ ಹರಿಸಿ ಮುಖ್ಯ ವಿಚಾರಕ್ಕೆ ಬರೋಣ. ಶಾಲೆ ಮತ್ತು ಕಾಲೇಜುಗಳಲ್ಲಿ ಸರಣಿ ಕಳ್ಳತನ, ವಿದ್ಯಾರ್ಥಿನಿ ಮೇಲೆ ಅಪರಣ ಯತ್ನ, ಕಳಪೆ ದರ್ಜೆಯ ಮದ್ಯ ಮಾರಾಟ, ಅನುಮಾನಾಸ್ಪದ ಸಾವು ; ಕೊಲೆ ಶಂಕೆ…! ಇಂತಹ ಆತಂಕಕಾರಿ ದುರ್ಘಟನೆಗಳು ನಡೆಯುತ್ತಿರೋದು ಯಾವುದೋ ದೂರದ ಉತ್ತರ ಪ್ರದೇಶ ಅಥವಾ ಬಿಹಾರದಂತಹ ರಾಜ್ಯಗಳಲ್ಲಿ ಅಲ್ಲ. ಇದು ಕರ್ನಾಟಕ ರಾಜ್ಯದ ಘನತೆವೆತ್ತ ಗೃಹಮಂತ್ರಿ ಆರಗ ಜ್ಞಾನೇಂದ್ರರ ಸ್ವಕ್ಷೇತ್ರ ತೀರ್ಥಹಳ್ಳಿ ಕ್ಷೇತ್ರದಲ್ಲಿ.

ಎಲ್ಲೋ ಒಂದು ಕಡೆ ತೀರ್ಥಹಳ್ಳಿ ಕ್ಷೇತ್ರಕ್ಕೆ ಬಹುಕಾಲದ ನಂತರ ರಾಜ್ಯ ಸರ್ಕಾರದ ಅತ್ಯುನ್ನತ ಸಚಿವ ಸ್ಥಾನ ಗೃಹಮಂತ್ರಿ ಪಟ್ಟ ಸಿಕ್ಕಿತ್ತು ಅಂತಲೇ ಕ್ಷೇತ್ರದ ಜನ ಎರಡು ವರ್ಷಗಳ ಹಿಂದೆ ಬಹಳ ಸಂತಸ ಪಟ್ಟಿದ್ದರು. ಮುಖ್ಯಮಂತ್ರಿ ನಂತರದ ಅತ್ಯಂತ ಪ್ರಭಾವಿ ಹುದ್ದೆ ಸಿಕ್ಕಿದ್ದಕ್ಕೆ ಆಡಳಿತ ಪಕ್ಷದ ಜೊತೆಗೆ ವಿರೋಧ ಪಕ್ಷದ ಕಾರ್ಯಕರ್ತರು ಮುಖಂಡರಾದಿಯಾಗಿ ಸಚಿವ ಆರಗ ಜ್ಞಾನೇಂದ್ರರಿಗೆ ಅಭಿನಂದನೆ ಸುರಿಮಳೆಗೈದಿದ್ದರು. ಆದರೆ ನಂತರದ ದಿನಗಳಲ್ಲಿ ಆರಗ ಜ್ಞಾನೇಂದ್ರರ ಆಡಳಿತ ವೈಖರಿ, ಸಾಮಾಜಿಕವಾಗಿ ಅವರು ಕೊಡುವ ಬಹಿರಂಗ ಹೇಳಿಕೆಗಳು, ತಗೆದುಕೊಳ್ಳುವ ನಿರ್ಧಾರಗಳು ಅತ್ಯಂತ ಕಳಪೆ ಮಟ್ಟದ್ದಾಗಿತ್ತು ಮತ್ತು ಕ್ಷೇತ್ರದ ಪ್ರಜ್ಞಾವಂತ ಜನತೆ ತಲೆ ತಗ್ಗಿಸುವಂತದ್ದಾಗಿತ್ತು.

ಮೈಸೂರಿನಲ್ಲಿ ಯುವತಿ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಜನಪ್ರತಿನಿಧಿಯಾಗಿ, ಜವಾಬ್ದಾರಿಯುತ ಸ್ಥಾನದ ಸಚಿವರಾಗಿ ಆರಗ ಜ್ಞಾನೇಂದ್ರ ಕೊಟ್ಟ ಹೇಳಿಕೆ ವ್ಯಾಪಕ ಟೀಕೆಗೆ ಗುರಿಯಾಗಿತ್ತು. ಬೆಂಗಳೂರಿನ ದಲಿತ ಯುವಕನ ಕೊಲೆ ಸಂದರ್ಭದಲ್ಲೂ ತನಿಖೆಗೆ ಮುನ್ನವೇ ಮುಸ್ಲಿಂ ಧ್ವೇಷದ ಹಿನ್ನೆಲೆಯಲ್ಲಿ ‘ಉರ್ದು ಮಾತನಾಡದ್ದಕ್ಕೆ ಕೊಲೆ ನಡೆಯಿತು’ ಎಂಬ ರೀತಿಯ ಹೇಳಿಕೆ ಕೂಡಾ ಇಡೀ ಸರ್ಕಾರವೇ ತಲೆ ತಗ್ಗಿಸುವಂತೆ ಮಾಡಿತ್ತು. ಪ್ರಸ್ತುತ ರಾಜ್ಯದ ಅತ್ಯಂತ ದೊಡ್ಡ ಸ್ಕ್ಯಾಮ್ ಪಿಎಸ್ಐ ಹಗರಣ ಸಹ ಆರಗ ಜ್ಞಾನೇಂದ್ರರ ಅವಧಿಯಲ್ಲೇ ನಡೆದದ್ದು ಮತ್ತು ಬೆಳಕಿಗೆ ಬಂದದ್ದು ಎಂಬುದು ಉಲ್ಲೇಖಾರ್ಹ.

ಸಚಿವ ಜ್ಞಾನೇಂದ್ರ ಮೇಲೆ ಇಂತದ್ದೊಂದು ಸಣ್ಣ ಪೀಠಿಕೆಗೆ ಉದ್ದೇಶವಿದೆ. ಒಬ್ಬ ವ್ಯಕ್ತಿ ಆಡಳಿತಾತ್ಮಕವಾಗಿ ಎಷ್ಟು ಬಲಿಷ್ಠನಾಗಿದ್ದಾನೆ, ಎಷ್ಟು ಪಕ್ವನಾಗಿದ್ದಾನೆ ಎಂಬುದು ಸಾಮಾಜಿಕವಾಗಿ ಅವರು ಕೊಡುವ ಹೇಳಿಕೆ ಮತ್ತು ತಗೆದುಕೊಳ್ಳುವ ನಿರ್ಧಾರಗಳ ಮೇಲೆ ನಿಲ್ಲುತ್ತದೆ. ಕಳೆದ ಒಂದು ತಿಂಗಳ ಅವಧಿಯಲ್ಲಿ ತೀರ್ಥಹಳ್ಳಿ ಕ್ಷೇತ್ರದಲ್ಲಿ ನಡೆದ ಕ್ರೈಂ ಪ್ರಕರಣಗಳ ಮೇಲೆ ಕಣ್ಣಾಡಿಸಿದರೆ ಸಚಿವ ಆರಗ ಜ್ಞಾನೇಂದ್ರ ಇಡೀ ರಾಜ್ಯದ ಆಡಳಿತದ ಬಗ್ಗೆ ತಲೆ ಕೆಡಿಸಿಕೊಳ್ಳುವುದಕ್ಕಿಂತ ತಮ್ಮ ಕ್ಷೇತ್ರದ ಜನತೆ, ಅಲ್ಲಿನ ವ್ಯವಸ್ಥೆ ಬಗ್ಗೆ ತಲೆ ಕೆಡಿಸಿಕೊಳ್ಳಬೇಕಾದದು ಹೆಚ್ಚು ಸೂಕ್ತ ಎಂದೇ ತೀರ್ಥಹಳ್ಳಿ ಮಹಾಜನತೆ ಮಾತನಾಡಿಕೊಳ್ಳುತ್ತಿದ್ದಾರೆ.

ಸರಣಿ ಕಳ್ಳತನದ ಬಗ್ಗೆ ವ್ಯಾಪಕ ಟೀಕೆ
ಕೇವಲ ಒಂದು ವಾರದ ಅಂತರದಲ್ಲಿ ತೀರ್ಥಹಳ್ಳಿ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆದ ಸರಣಿ ಕಳ್ಳತನಕ್ಕೆ ಕ್ಷೇತ್ರದ ಜನತೆ ಕಳ್ಳರ ಜೊತೆಗೆ ಗೃಹ ಮಂತ್ರಿಗಳಿಗೂ ಹಿಡಿಶಾಪ ಹಾಕುತ್ತಿದ್ದಾರೆ. ಹೊಸನಗರ ಪಟ್ಟಣದ ಕೊಡಚಾದ್ರಿ ಪದವಿ ಪೂರ್ವ ಕಾಲೇಜಿನಲ್ಲಿ ರೂಂಗಳ ಬೀಗಗಳನ್ನು ತುಂಡರಿಸಿ 15ಕ್ಕೂ ಹೆಚ್ಚು ಕಾಲೇಜಿನ ಕಡತಗಳು, ಪ್ರಶ್ನೆ ಪತ್ರಿಕೆ, ಉತ್ತರ ಪತ್ರಿಕೆ ಮೊದಲಾದ ದಾಖಲೆಗಳಿರುವ ಕಡತಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದಾರೆ. ನಂತರ ಬೀರುನಲ್ಲಿದ್ದ ಅಂದಾಜು 20,000 ರೂಪಾಯಿಗಳಷ್ಟು ಹಣವನ್ನು ದೋಚಿಕೊಂಡು ಹೋಗಿರುವ ಬಗ್ಗೆ ಪ್ರಕರಣ ದಾಖಲಾಗಿದೆ.

ನಗರದ ಅಮೃತಾಮಯಿ ಶಾಲೆ ಸೇರಿದಂತೆ ಒಟ್ಟು ಎರಡು ಶಾಲೆಗಳಲ್ಲಿ ಕಳ್ಳತನ ಪ್ರಕರಣ ನಡೆದಿದೆ. ಕೋಣಂದೂರು ವಿವೇಕಾನಂದ ಶಾಲೆಯಲ್ಲಿ ಕಳ್ಳತನ ಪ್ರಕರಣ ನಡೆದಿದೆ. ಅಮೃತ ಪದವಿಪೂರ್ವ ಕಾಲೇಜಿನ ಬೀಗ ಮುರಿದು ಕಳ್ಳತನ ನಡೆದ ಬಗ್ಗೆಯೂ ಕ್ಷೇತ್ರದ ಜನ ಮಾತನಾಡಿಕೊಳ್ಳುತ್ತಿದ್ದಾರೆ.

ಎಲ್ಲಕ್ಕಿಂತ ಹೆಚ್ಚಾಗಿ ರಿಪ್ಪನ್ ಪೇಟೆಯ ನಿವೃತ್ತ ಎಎಸ್ಐ ಮನೆಯಲ್ಲಿ ಹಾಡ ಹಗಲೇ ಕಳ್ಳತನ ನಡೆದಿದ್ದು 10 ಲಕ್ಷಕ್ಕೂ ಹೆಚ್ಚು ಹಣ ಮತ್ತು ಚಿನ್ನಾಭರಣ ಕಳುವಾದ ಪ್ರಕರಣ ದಾಖಲಾಗಿದೆ. ಇನ್ನು ಕ್ಷೇತ್ರದಲ್ಲಿ ಕಳ್ಳರು ಸ್ಮಶಾನವನ್ನೂ ಬಿಡದೇ ಕಟ್ಟೆಹಕ್ಕಲು ಸಾಲ್ಗಡಿ ಎಂಬಲ್ಲಿ ಸ್ಮಶಾನದ ಚೇಂಬರ್ ಕಳ್ಳತನ ಮಾಡಿರುವುದು, ಕ್ಷೇತ್ರದಲ್ಲಿ ಆಡಳಿತ ವ್ಯವಸ್ಥೆ ಎಷ್ಟು ಬಲಿಷ್ಠವಾಗಿದೆ ಎಂಬುದಕ್ಕೆ ಸಾಕ್ಷಿ ಕೊಡುವಂತಿದೆ. ತೀರ್ಥಹಳ್ಳಿ ಪಟ್ಟಣಕ್ಕೆ ಸಮೀಪವೇ ಇರುವ ಮೇಲಿನ ಕುರುವಳ್ಳಿ ಗ್ರಾಮದಲ್ಲಿ 6 ನೇ ತರಗತಿ ವಿದ್ಯಾರ್ಥಿನಿಯನ್ನು ದುಷ್ಕರ್ಮಿಗಳು ಓಮ್ನಿ ಕಾರಿನಲ್ಲಿ ಅಪಹರಣಕ್ಕೆ ಯತ್ನಿಸಿದ್ದಾರೆ. ಸ್ಥಳೀಯರ ಸಮಯ ಪ್ರಜ್ಞೆಯಿಂದ ವಿದ್ಯಾರ್ಥಿನಿ ಅಪಹರಣ ಪ್ರಕರಣ ತಪ್ಪಿದೆ.

ಅಕ್ರಮ ಮದ್ಯ ಮಾರಾಟದ ಆರೋಪ, ವ್ಯಕ್ತಿ ಸಾವು ; ಕೊಲೆ ಶಂಕೆ
ಗೃಹ ಸಚಿವರ ಸ್ವಗೃಹ ಗುಡ್ಡೇಕೊಪ್ಪ ಊರಿನ ಕೆಲವೇ ದೂರದಲ್ಲಿ ಬರುವ ಹೊದಲ ಬಾಳೆಕೋಡ್ಲು ಎಂಬಲ್ಲಿ ಮದ್ಯ ಮಾರಾಟ ವಿಚಾರದಲ್ಲಿ ಗಲಾಟೆಯೊಂದು ನಡೆದಿತ್ತು. ಅದರಲ್ಲಿ ರಮೇಶ್ ಎಂಬುವರಿಗೆ ಗಂಭೀರವಾಗಿ ಪೆಟ್ಟುಬಿದ್ದು ಅಸುನೀಗಿದ್ದಾರೆ. ಪ್ರಾರಂಭಿಕ ಹಂತದಲ್ಲಿ ಇದು ಅಕ್ರಮ ಮದ್ಯ ಸೇವನೆಯಿಂದಾದ ಸಾವು ಎಂಬ ಮಾತು ಬಂದರೂ ರಮೇಶ್ ಮೈಮೇಲೆ ಆದ ಗಂಭೀರ ಗಾಯಗಳು ಇದೊಂದು ಕೊಲೆ ಎಂಬುದನ್ನು ಸಾರಿ ಹೇಳುತ್ತಿದೆ. ದುರಂತ ಎಂದರೆ ಈ ಬಗ್ಗೆ ಇಲ್ಲಿಯವರೆಗೂ ಇಷ್ಟು ದಿನವಾದರೂ ಆರೋಪಿಗಳ ಬಂಧನವಾಗಿಲ್ಲ ಮತ್ತು ಪೊಲೀಸ್ ಇಲಾಖೆ ಅಡಿಯಲ್ಲಿ ಎಫ್ಐಆರ್ ಕೂಡ ದಾಖಲಾಗದಿರುವುದು ಆಡಳಿತ ಯಂತ್ರದಲ್ಲಿ ಗೃಹ ಮಂತ್ರಿಗಳ ಹಿಡಿತ ಎಷ್ಟರ ಮಟ್ಟಿಗೆ ಇದೆ ಎಂಬುದನ್ನು ಹೇಳುತ್ತಿದೆ.

ರಮೇಶ್ ಸಾವಿನ ಪ್ರಕರಣದಲ್ಲಿ ಅಬಕಾರಿ ಇಲಾಖೆಯ ಭ್ರಷ್ಟ ಲಂಚಾವತಾರದ ಬಗ್ಗೆಯೂ ಮಾತುಗಳು ಕೇಳಿ ಬಂದಿವೆ. ಕ್ಷೇತ್ರದ ಹಳ್ಳಿ ಹಳ್ಳಿಗಳಲ್ಲಿ ಅಕ್ರಮ ಮದ್ಯ ಮಾರಾಟ ಅವ್ಯಾಹತವಾಗಿ ನಡೆದಿದ್ದರೂ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿರುವ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ. ರಮೇಶ್ ಸಾವಿನ ಹಿನ್ನೆಲೆಯಲ್ಲಿ ತೀರ್ಥಹಳ್ಳಿ ಪೊಲೀಸರು ಇಲ್ಲಿಯವರೆಗೂ ಎಫ್ಐಆರ್ ದಾಖಲು ಮಾಡದ ಹಿನ್ನೆಲೆಯಲ್ಲಿ ಇದರಲ್ಲಿ ರಾಜಕೀಯ ಹಿತಾಸಕ್ತಿ ಅಡಗಿದೆ ಎಂಬುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಎಲ್ಲಕ್ಕಿಂತ ಹೆಚ್ಚಾಗಿ ಮೃತ ರಮೇಶ್ ಸಚಿವ ಆರಗ ಜ್ಞಾನೇಂದ್ರರ ದೂರದ ಸಂಬಂಧಿ ಎಂಬುದು ವಿಶೇಷ.

ಈ ಪ್ರಕರಣದಲ್ಲಿ ರಮೇಶ್ ಪರವಾಗಿ ದೂರು ದಾಖಲಿಸಲಾಗಿದೆ. ಆದರೆ ಹಿನ್ನೆಲೆಯಿಂದ ದೂರು ನೀಡಿದವರಿಗೆ ದೂರನ್ನು ವಾಪಸ್ ತಗೆದುಕೊಳ್ಳಲು ಒತ್ತಡ ಹೇರಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿ ಬರುತ್ತಿದೆ. ಸಧ್ಯ ಈ ಎಲ್ಲಾ ಗಂಭೀರ ಪ್ರಕರಣ ನಡೆದಿರೋದು ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಅಲ್ಲ. ಕೇವಲ ಗೃಹ ಮಂತ್ರಿ ಆರಗ ಜ್ಞಾನೇಂದ್ರರ ಸ್ವಕ್ಷೇತ್ರದಲ್ಲಿ ಎಂಬುದು ಉಲ್ಲೇಖಾರ್ಹ ವಿಚಾರ. ಅದೂ ಕೇವಲ ಒಂದು ತಿಂಗಳ ಪ್ರೋಗ್ರೆಸ್ ರಿಪೋರ್ಟ್.

ಇಲ್ಲಿ ಗೃಹ ಮಂತ್ರಿಗಳಿಗೆ ಕ್ಷೇತ್ರದ ಆಡಳಿತದಲ್ಲಿ ಹಿಡಿತ ತಪ್ಪಿದೆಯೇ? ಸ್ವತಃ ಗೃಹ ಮಂತ್ರಿಗಳು ಸ್ವಜನ ಪಕ್ಷಪಾತಿಯಾಗಿ ಕಳ್ಳರ, ಪುಂಡ ಪೋಕರಿಗಳ, ಕೊಲೆಗಡುಕರ ಪರ ನಿಂತಿದ್ದಾರೆಯೇ? ಅಕ್ರಮ ಮದ್ಯ ಮಾರಾಟದ ಬಗ್ಗೆ ಮಾಹಿತಿಗಳು ಇದ್ದರೂ ಇಲ್ಲಿಯವರೆಗೂ ಅಧಿಕೃತವಾಗಿ ಗೃಹ ಸಚಿವ ಜ್ಞಾನೇಂದ್ರ ಅಧಿಕಾರಿಗಳಿಗೆ ಯಾಕೆ ನಿಯಂತ್ರಣದ ಆದೇಶ ನೀಡಿಲ್ಲ.? ಅಥವಾ ಸ್ವತಃ ಗೃಹ ಸಚಿವರಿಗೆ ಕ್ಷೇತ್ರವನ್ನು ಹಿಡಿತದಲ್ಲಿ ಇಡಲು ಸೋತಿದ್ದಾರೆಯೇ? ಎಂಬ ಹತ್ತಾರು ಪ್ರಶ್ನೆಗಳು ಕ್ಷೇತ್ರದ ಜನರ ಬಾಯಲ್ಲಿ ಓಡಾಡುತ್ತಿದೆ.

ಮುಖ್ಯಮಂತ್ರಿ ಹುದ್ದೆ ನಂತರದ ಸ್ಥಾನ ಎಂದೇ ಗೃಹ ಇಲಾಖೆಯನ್ನು ಬಣ್ಣಿಸಲಾದರೂ, ರಾಜ್ಯದ ಮೂಲೆ ಮೂಲೆಗಳಲ್ಲಿ ಅದೆಂತಹ ಗಂಭೀರ ಅಪರಾಧ ಪ್ರಕರಣ ನಡೆದರೂ ಗೃಹ ಮಂತ್ರಿ ಆರಗ ಜ್ಞಾನೇಂದ್ರ ಮಾತ್ರ ಕ್ಷೇತ್ರ ಬಿಟ್ಟು ಕದಲಲ್ಲ. ವಾರದ ಏಳು ದಿನಗಳಲ್ಲಿ ಐದಾರು ದಿನವೂ ಇವರು ಕ್ಷೇತ್ರದಲ್ಲೇ ಇರುತ್ತಾರೆ. ಇದು ಆರಗ ಜ್ಞಾನೇಂದ್ರ ಮೇಲಿರುವ ಗಂಭೀರವಾದ ಆರೋಪ. ಇವರು ರಾಜ್ಯದ ಗೃಹ ಮಂತ್ರಿಯೋ ಅಥವಾ ತೀರ್ಥಹಳ್ಳಿ ಗೃಹ ಮಂತ್ರಿಯೋ ಎಂಬುದು ಜ್ಞಾನೇಂದ್ರ ವಿರೋಧಿಗಳ ಅಣಕ.

ಶಿವಮೊಗ್ಗ ಅರಣ್ಯ ಭೂಮಿ ವಿಚಾರ ಕೇಂದ್ರ ಸರ್ಕಾರದೊಂದಿಗೆ ಬೊಮ್ಮಾಯಿ ಚರ್ಚೆ ನಡೆಸಲಿದ್ದಾರೆ: ಆರಗ ಜ್ಞಾನೇಂದ್ರ
ಬೆಂಗಳೂರು: ಶಿವಮೊಗ್ಗ ಜಿಲ್ಲೆಯ 9,934.02 ಎಕರೆ ಡಿ-ನೋಟಿಫೈಡ್ ಅರಣ್ಯ ಭೂಮಿಯನ್ನು ನಿರಾಶ್ರಿತ ಗ್ರಾಮಸ್ಥರಿಗೆ ಮಂಜೂರು ಮಾಡಿರುವುದನ್ನು ರದ್ದುಪಡಿಸುವ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಕೇಂದ್ರ ಸರ್ಕಾರದೊಂದಿಗೆ ಚರ್ಚಿಸುವುದಾಗಿ ಕರ್ನಾಟಕ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಿಳಿಸಿದ್ದಾರೆ

ಲಿಂಗನಮಕ್ಕಿ ಅಣೆಕಟ್ಟು ನಿರ್ಮಾಣ ಹಂಚಿಕೆ ರದ್ದುಗೊಳಿಸುವ ಕರ್ನಾಟಕ ಸರ್ಕಾರದ ನಿರ್ಧಾರದ ವಿರುದ್ಧ, ಶಿವಮೊಗ್ಗ ಜಿಲ್ಲೆಯಲ್ಲಿ ಸ್ಥಳೀಯರು ಪ್ರತಿಭಟನೆ ನಡೆಸಿದ ದಿನವೇ ಈ ಹೇಳಿಕೆ ನೀಡಿರುವ ಅವರು, ಸಾಗರ ಜಿಲ್ಲೆಯ ಶಾಸಕ ಹರತಾಳು ಹಾಲಪ್ಪ ಅವರೊಂದಿಗೆ ಬೆಂಗಳೂರಿನಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿರುವ ವೇಳೆ , ಶಿವಮೊಗ್ಗ ಜಿಲ್ಲೆಯ ಡಿ-ನೋಟಿಫೈಡ್ ಅರಣ್ಯ ಭೂಮಿಯನ್ನು ನಿರಾಶ್ರಿತ ಗ್ರಾಮಸ್ಥರಿಗೆ ಮಂಜೂರು ಮಾಡಿರುವುದನ್ನು ರದ್ದುಪಡಿಸುವ ಸಂಬಂಧ ಕೇಂದ್ರ ಸರಕಾರದೊಂದಿಗೆ ಚರ್ಚಿಸಲು ಸಿಎಂ ಜೊತೆಗೆ ನಾನು ದೆಹಲಿಗೆ ಹೋಗುತ್ತೇನೆ ಎಂದರು.

ಕೇಂದ್ರ ಸರ್ಕಾರದ ಅನುಮತಿ ಇಲ್ಲದೇ ಅರಣ್ಯ ಭೂಮಿ ಮಂಜೂರು ಮಾಡಲಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಗಿರೀಶ್ ಆಚಾರ್ ಅವರು, ನ್ಯಾಯಾಲಯದ ಮೆಟ್ಟಿಲೇರಿದ್ದ ಹಿನ್ನೆಲೆಯಲ್ಲಿ ಸರ್ಕಾರ ಮಂಜೂರಾತಿ ರದ್ದುಗೊಳಿಸಿತ್ತು. 2015-2017ರ ನಡುವೆ ಶಿವಮೊಗ್ಗ ಜಿಲ್ಲೆಯ 9,934.02 ಎಕರೆ ಅರಣ್ಯ ಭೂಮಿಯನ್ನು ಡಿ-ನೋಟಿಫೈ ಮಾಡಿದ್ದಕ್ಕಾಗಿ ಮಾಜಿ ಐಎಎಸ್ ಅಧಿಕಾರಿಗಳಾದ ಮದನ್ ಗೋಪಾಲ್ ಮತ್ತು ಟಿಎಂ ವಿಜಯ ಭಾಸ್ಕರ್ ವಿರುದ್ಧ ಅವರು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ (ಎಂಒಇಎಫ್ ಮತ್ತು ಸಿಸಿ) ದಕ್ಷಿಣ ವಲಯಕ್ಕೆ ದೂರು ದಾಖಲಿಸಿದ್ದರು.

ಆಚಾರ್‌ ಅವರು ಸೆಪ್ಟಂಬರ್‌ 29 ರಂದು ಸಲ್ಲಿಸಿದ ದೂರಿನಲ್ಲಿ, ಅರಣ್ಯ ಸಂರಕ್ಷಣಾ ಕಾಯ್ದೆಯು ಅರಣ್ಯ ಪ್ರದೇಶಗಳನ್ನು ಡಿ-ನೋಟಿಫೈ ಅಥವಾ ಪರಿವರ್ತಿಸುವ ಮೊದಲು ಕೇಂದ್ರ ಸರ್ಕಾರದ ಅನುಮೋದನೆಯನ್ನು ಪಡೆಯುವುದನ್ನು ರಾಜ್ಯ ಸರ್ಕಾರ ಕಡ್ಡಾಯಗೊಳಿಸಿದ್ದರೂ, ಈ ಪ್ರಕರಣದಲ್ಲಿ ಕೇಂದ್ರ ಸರ್ಕಾರದ ಅನುಮೋದನೆಯನ್ನು ಪಡೆದಿಲ್ಲ. ಈಗಾಗಿ ʼಭೂಮಿ ಮಂಜೂರಾತಿನಲ್ಲಿ ಅಕ್ರಮವಾಗಿದೆʼ ಈ ಕಾರಣ ಸರ್ಕಾರ ಕಾನೂನು ಕ್ರಮ ಅನುಸರಿಸಬೇಕು ಎಂದು ತಿಳಿಸಲಾಗಿತ್ತು ಎಂದರು.

ಗೋಪಾಲ್ ಮತ್ತು ಭಾಸ್ಕರ್ ಅವರು ಕರ್ನಾಟಕ ಅರಣ್ಯ ಕಾಯ್ದೆ 1963ರ ಸೆಕ್ಷನ್ 28 ರ ಅಡಿಯಲ್ಲಿ 56 ಡಿ-ನೋಟಿಫಿಕೇಶನ್‌ಗಳನ್ನು ಹೊರಡಿಸಿದ್ದಾರೆ ಎಂದು ಆಚಾರ್ ಪರ ವಕೀಲ ವೀರೇಂದ್ರ ಪಾಟೀಲ್ ಹೇಳಿದರು. ಡಿ-ನೋಟಿಫಿಕೇಶನ್‌ಗಳನ್ನು ನೀಡಲು ಕೇಂದ್ರ ಸರ್ಕಾರದಿಂದ ಯಾವುದೇ ಅನುಮತಿ ಅಗತ್ಯವಿಲ್ಲ ಎಂದು ಅವರು ವಾದಿಸಿದರು. ಆದಾಗ್ಯೂ, ಅರಣ್ಯ ಸಂರಕ್ಷಣಾ ಕಾಯಿದೆ, 1980, ಸೆಕ್ಷನ್ 2 ಅರಣ್ಯವನ್ನು ಮೀಸಲಿಡುವ ನಿರ್ಬಂಧ ಅಥವಾ ಅರಣ್ಯೇತರ ಉದ್ದೇಶಗಳಿಗಾಗಿ ಅರಣ್ಯ ಭೂಮಿಯನ್ನು ಬಳಸುವುದರ ಕುರಿತು ಸ್ಪಷ್ಟವಾಗಿ ಹೇಳುತ್ತದೆ. ಕೇಂದ್ರ ಸರ್ಕಾರದ ಪೂರ್ವಾನುಮತಿ ಹೊರತುಪಡಿಸಿ ಯಾವುದೇ ರಾಜ್ಯ ಸರ್ಕಾರ ಅಥವಾ ಇತರ ಪ್ರಾಧಿಕಾರವು ಯಾವುದೇ ಬದಲಾವಣೆಯನ್ನು ಮಾಡಬಾರದು ಎಂದು ಪಾಟೀಲ್ ಹೇಳಿದ್ದರು ಎಂದು ಆರಗ ಜ್ಞಾನೇಂದ್ರ ತಿಳಿಸಿದರು.

“1978 ರ ಮೊದಲು ಮಾಡಿದ ಅತಿಕ್ರಮಣಗಳನ್ನು ಕೇಂದ್ರ ಸರ್ಕಾರವು ಸಕ್ರಮಗೊಳಿಸಿದ್ದು, ಅರಣ್ಯ ಸಂರಕ್ಷಣಾ ಕಾಯ್ದೆಯನ್ನು 1980 ರಲ್ಲಿ ಜಾರಿಗೊಳಿಸಲಾಯಿತು ಮತ್ತು ನಂತರ ಅರಣ್ಯ ಭೂಮಿಯನ್ನು ಬೇರೆಡೆಗೆ ತಿರುಗಿಸಲು ಕೇಂದ್ರ ಸರ್ಕಾರದ ಪೂರ್ವಾನುಮತಿ ಅಗತ್ಯ ಎಂದು ಕಡ್ಡಾಯಗೊಳಿಸಲಾಯಿತು. ಹಾಗಾಗಿ 2015-2017ರ ಅವಧಿಯಲ್ಲಿ ಮಾಜಿ ಐಎಎಸ್ ಅಧಿಕಾರಿಗಳು ಮಾಡಿದ ಡಿ-ನೋಟಿಫಿಕೇಶನ್‌ಗಳು ಕಾನೂನುಬಾಹಿರ ಮತ್ತು ಅರಣ್ಯ ಸಂರಕ್ಷಣಾ ಕಾಯ್ದೆಯನ್ನು ಉಲ್ಲಂಘಿಸುತ್ತವೆ ಎಂದು ಪಾಟೀಲ್ ಹೇಳಿದರು ಎಂದರು.

ಅಕ್ಟೋಬರ್ 14 ರಂದು, ಕರ್ನಾಟಕ ಹೈಕೋರ್ಟ್‌ನಲ್ಲಿ ವಿಚಾರಣೆಯ ಸಂದರ್ಭದಲ್ಲಿ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಅರಣ್ಯ, ಪರಿಸರ ಮತ್ತು ಪರಿಸರ) ಜಾವೇದ್ ಅಖ್ತರ್, ಈ ವರ್ಷದ ಸೆಪ್ಟೆಂಬರ್ 29 ರಂದು, ರಾಜ್ಯ ಸರ್ಕಾರವು ಅನುಮೋದನೆಯಿಲ್ಲದೆ ನೀಡಿದ್ದ 56 ಡಿ-ನೋಟಿಫಿಕೇಶನ್ ಆದೇಶಗಳನ್ನು ಕೇಂದ್ರ ಸರ್ಕಾರವು ಹಿಂತೆಗೆದುಕೊಳ್ಳಲಾಯಿತು ಎಂದು ಹೇಳಿದರು.

ಈ ಹಿನ್ನಲೆಯಲ್ಲಿ, ಯಾವುದೇ ಅರಣ್ಯೇತರ ಚಟುವಟಿಕೆಗಳಿಗೆ ಸಂಬಂಧಪಟ್ಟ ಅಧಿಕಾರಿಗಳಿಂದ ಅನುಮತಿ ಇದೆಯೇ ಎಂಬುದನ್ನು ಕಂಡುಹಿಡಿಯಲು ಸರ್ಕಾರವು ಈಗಾಗಲೇ ಕ್ರಮವನ್ನು ಕೈಗೊಂಡಿದೆ ಮತ್ತು ಸರ್ಕಾರವು ಈಗಾಗಲೇ 19.09.2022 ರಂದು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ (ಅರಣ್ಯ ಪಡೆಯ ಮುಖ್ಯಸ್ಥರಿಗೆ) ವಿಚಾರಿಸಲು ಸೂಚನೆ ನೀಡಿದೆ ಎಂದು ಆರಗ ಜ್ಞಾನೇಂದ್ರ ತಿಳಿಸಿದರು.