asia cup – Peepal Media

ಕೆಎಲ್ ರಾಹುಲ್ ಔಟ್, ಕೊಹ್ಲಿ ‘ಸ್ಥಾನ’ದ ಗೊಂದಲ… ಪಾಕಿಸ್ತಾನದೆದುರಿನ ಪಂದ್ಯದ ಕತೆಯೇನು?
ಪ್ರತಿಷ್ಠಿತ ಏಷ್ಯಾಕಪ್ (Asia cup) ಆರಂಭಕ್ಕೂ ಮುನ್ನವೇ ಟೀಂ ಇಂಡಿಯಾ ಸಂಕಷ್ಟಕ್ಕೆ ಸಿಲುಕಿದೆ. ಮೊದಲೆರಡು ಪಂದ್ಯಗಳಲ್ಲಿ ಕೆಎಲ್ ರಾಹುಲ್ ಅನುಪಸ್ಥಿತಿಯೇ ಈ ಸಮಸ್ಯೆಗೆ ಪ್ರಮುಖ ಕಾರಣವಾಗಿದೆ.

ಕೆಎಲ್ ರಾಹುಲ್ ತಂಡದ ಪ್ರಮುಖ ವಿಕೆಟ್ ಕೀಪರ್ ಮತ್ತು ಮಧ್ಯಮ ಕ್ರಮಾಂಕದ ಆಟಗಾರ ಕೂಡ. ಆದರೆ 17 ಸದಸ್ಯರ ಭಾರತ ತಂಡದಲ್ಲಿ ಇಶಾನ್ ಕಿಶನ್ ರಾಹುಲ್ ಅವರ ಪರ್ಯಾಯ ವಿಕೆಟ್-ಕೀಪರ್ ಆಗಿದ್ದರೂ, ಈ ಯುವ ಆಟಗಾರ ಆರಂಭಿಕರಾಗಿದ್ದಾರೆ. ಇದು ಈಗ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಇಶಾನ್ ಕಿಶನ್ ಆರಂಭಿಕರಾಗಿ ರೋಹಿತ್ ಶರ್ಮಾ ಅವರನ್ನು ಸೇರಿಕೊಂಡರೆ, ಶುಭಮನ್ ಗಿಲ್ ಮೂರನೇ ಕ್ರಮಾಂಕದಲ್ಲಿ ಮತ್ತು ವಿರಾಟ್ ಕೊಹ್ಲಿ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಬೇಕಾಗುತ್ತದೆ.

ಮೂರನೇ ಕ್ರಮಾಂಕದಲ್ಲಿ ಶುಭಮನ್ ಗಿಲ್ ಬ್ಯಾಟ್ ಮಾಡಿದರೆ, ಟೀಂ ಇಂಡಿಯಾ ಕೊಹ್ಲಿ ರನ್‌ಗಳನ್ನು ಮಿಸ್ ಮಾಡಿಕೊಳ್ಳಬೇಕಾಗುತ್ತದೆ. ಏಕೆಂದರೆ ಕೊಹ್ಲಿ ಯಾವುದೇ ಸ್ಥಾನದಲ್ಲಿ ಬ್ಯಾಟಿಂಗ್ ಮಾಡುವ ಸಾಮರ್ಥ್ಯ ಹೊಂದಿದ್ದರೂ ಸಹ. ಅಂದರೆ ಮೂರನೇ ಕ್ರಮಾಂಕದಲ್ಲಿ ಗಿಲ್‌ಗಿಂತ ಕೊಹ್ಲಿ ಅತ್ಯುತ್ತಮ ಆಯ್ಕೆಯಾಗಿದ್ದಾರೆ, ಆದರೆ ಕೆಎಲ್ ರಾಹುಲ್ ಗಾಯದಿಂದಾಗಿ ಭಾರತ ತಂಡವು ಬ್ಯಾಟಿಂಗ್ ಕ್ರಮಾಂಕದಲ್ಲಿ ಅನಿರೀಕ್ಷಿತ ಬದಲಾವಣೆಗಳನ್ನು ಮಾಡಬೇಕಾಗಿದೆ. ಇದರ ಹೊರತಾಗಿ ಕೊಹ್ಲಿ ಮೂರನೇ ಕ್ರಮಾಂಕದಲ್ಲಿ ಮತ್ತು ಗಿಲ್ ನಾಲ್ಕನೇ ಕ್ರಮಾಂಕದಲ್ಲಿ ಆಡಿದರೆ ಯಾವುದೇ ನಷ್ಟವಾಗದಿರಬಹುದು.

ಏತನ್ಮಧ್ಯೆ, ಬಾರ್ಡರ್ ಗವಾಸ್ಕರ್ ಟೆಸ್ಟ್ ಟ್ರೋಫಿಯ ವೇಳೆ ಗಾಯಗೊಂಡಿದ್ದ ಶ್ರೇಯಸ್ ಅಯ್ಯರ್ ಅವರು ಪುನರಾಗಮನಕ್ಕೆ ಸಿದ್ಧರಾಗಿದ್ದಾರೆ. ಪಾಕಿಸ್ತಾನ ವಿರುದ್ಧದ ಮೊದಲ ಪಂದ್ಯದಲ್ಲಿ ಆಡುವ ಸಾಧ್ಯತೆ ಇದ್ದರೂ, ಯಾವ ಸ್ಥಾನದಲ್ಲಿ ಆಡಲಿದ್ದಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಏಷ್ಯಾ ಕಪ್‌ 2023: ಭಾರತದ ಪರವಾಗಿ ಆಡಲಿದ್ದಾರೆ ಈ  ಆಟಗಾರರು, ಕನ್ನಡಿಗರಿಗೂ ಸಿಕ್ಕಿದೆ ಅವಕಾಶ

ನಾಳೆ ಏಷ್ಯಾಕಪ್ ಆರಂಭವಾಗಲಿದ್ದು, ಮೊದಲ ಪಂದ್ಯದಲ್ಲಿ ಪಾಕಿಸ್ತಾನ ಮತ್ತು ನೇಪಾಳ ತಂಡಗಳು ಮುಖಾಮುಖಿಯಾಗಲಿವೆ. ಭಾರತ ತಂಡವು ಸೆಪ್ಟೆಂಬರ್ 2ರಂದು ಪಾಕಿಸ್ತಾನ ಮತ್ತು ಸೆಪ್ಟೆಂಬರ್ 4ರಂದು ನೇಪಾಳವನ್ನು ಎದುರಿಸಲಿದೆ. ಪಂದ್ಯಾವಳಿಯ ಫೈನಲ್ ಸೆಪ್ಟೆಂಬರ್ 27ರಂದು ನಡೆಯಲಿದೆ.

ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೆ ಭಾರತದ ಸಂಭಾವ್ಯ ಪ್ಲೇಯಿಂಗ್ XI..

ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಶುಭಂ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ.

ಏಷ್ಯಾಕಪ್‌ಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭಂ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಪರ್ದೀಶ್ ಕೃಷ್ಣ, ಸಂಜು ಸ್ಯಾಮ್ಸನ್ (ಮೀಸಲು ಆಟಗಾರ).

Asia Cup 2023: ಸಂಪೂರ್ಣ ವೇಳಾಪಟ್ಟಿ, ತಂಡಗಳು, ಪಂದ್ಯದ ಆರಂಭದ ಸಮಯ, ಲೈವ್ ಸ್ಟ್ರೀಮಿಂಗ್… ಸಂಪೂರ್ಣ ವಿವರಗಳು

ಏಷ್ಯಾ ಕಪ್‌ 2023: ಭಾರತದ ಪರವಾಗಿ ಆಡಲಿದ್ದಾರೆ ಈ ಆಟಗಾರರು, ಕನ್ನಡಿಗರಿಗೂ ಸಿಕ್ಕಿದೆ ಅವಕಾಶ
ಏಷ್ಯಾ ಕಪ್ 2023 ಆಗಸ್ಟ್ 30ರಿಂದ ಪ್ರಾರಂಭವಾಗಲಿದ್ದು (Team India Squad for Asia Cup 2023), ಫೈನಲ್ ಪಂದ್ಯವು ಸೆಪ್ಟೆಂಬರ್ 17ರಂದು ನಡೆಯಲಿದೆ. ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯು ಈ ಟೂರ್ನಿಗೆ ಭಾರತ ತಂಡವನ್ನು ಪ್ರಕಟಿಸಿದೆ. ಆಯ್ಕೆಗಾರರು ಬಲಿಷ್ಠ ತಂಡವನ್ನು ಆಯ್ಕೆ ಮಾಡಿದ್ದು, ಈ ತಂಡದ ಚುಕ್ಕಾಣಿ ರೋಹಿತ್ ಶರ್ಮಾ ಕೈಯಲ್ಲಿರಲಿದೆ.

ರೋಹಿತ್ ಶರ್ಮಾ (ನಾಯಕ) (Rohit Sharma) ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ (Virat Kohli), ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್​ ಪಟೇಲ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಪ್ರಸಿದ್ಧ್ ಕೃಷ್ಣ. ಇನ್ನು ಸಂಜು ಸ್ಯಾಮ್ಸನ್​ ಅವರಿಗೆ ಮೀಸಲು ಆಟಗಾರನಾಗುವ ಅವಕಾಶ ನೀಡಲಾಗಿದೆ.

Rohit Sharma (Captain), Shubman Gill, Virat Kohli, Shreyas Iyer, Suryakumar Yadav, Tilak Varma, KL Rahul, Ishan Kishan, Hardik Pandya (VC), Ravindra Jadeja, Shardul Thakur, Axar Patel, Kuldeep Yadav, Jasprit Bumrah, Mohd. Shami, Mohd. Siraj, Prasidh Krishna

Traveling stand-by…
— BCCI (@BCCI) August 21, 2023

ಅಜಿತ್ ಅಗರ್ಕರ್ ನೇತೃತ್ವದ ಭಾರತೀಯ ಆಯ್ಕೆ ಸಮಿತಿಯು ಏಷ್ಯಾಕಪ್‌’ಗೆ 17 ಸದಸ್ಯರ ತಂಡವನ್ನು ಪ್ರಕಟಿಸಿದೆ. ದೆಹಲಿಯಲ್ಲಿ ನಡೆದ ಆಯ್ಕೆ ಸಭೆಯ ನಂತರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ರೋಹಿತ್-ವಿರಾಟ್ ಸೇರಿದಂತೆ ಹಲವು ಸ್ಟಾರ್ ಆಟಗಾರರು ಈ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಮತ್ತೊಂದೆಡೆ, ಶ್ರೇಯಸ್​ ಅಯ್ಯರ್, ಜಸ್ಪ್ರೀತ್ ಬುಮ್ರಾ ಕೂಡ ಏಕದಿನ ತಂಡಕ್ಕೆ ಮರಳಿದ್ದಾರೆ. ಇವರ ಜೊತೆಗೆ ಗಾಯದಿಂದ ಚೇತರಿಸಿಕೊಂಡಿರುವ ಕೆಎಲ್ ರಾಹುಲ್ ಕಂಬ್ಯಾಕ್ ಮಾಡಿದ್ದಾರೆ.

ಕಣದಲ್ಲಿರಲಿವೆ ಆರು ತಂಡಗಳು

ಈ ಬಾರಿ ಏಷ್ಯಾಕಪ್ ನಲ್ಲಿ ಲೀಗ್ ಹಂತ, ಸೂಪರ್-4 ಹಾಗೂ ಫೈನಲ್ ಸೇರಿದಂತೆ ಒಟ್ಟು 13 ಪಂದ್ಯಗಳು ಏಕದಿನ ಮಾದರಿಯಲ್ಲಿ ನಡೆಯಲಿದೆ. ಭಾರತ, ಪಾಕಿಸ್ತಾನ, ಶ್ರೀಲಂಕಾ, ಬಾಂಗ್ಲಾದೇಶ, ಅಫ್ಘಾನಿಸ್ತಾನ ಮತ್ತು ನೇಪಾಳದ ತಂಡಗಳು ಕಾದಾಡಲಿವೆ. ಭಾರತ, ಪಾಕಿಸ್ತಾನ ಮತ್ತು ನೇಪಾಳ ತಂಡಗಳು ಒಂದು ಗುಂಪಿನಲ್ಲಿ ಸ್ಥಾನ ಪಡೆದರೆ, ಹಾಲಿ ಚಾಂಪಿಯನ್ ಶ್ರೀಲಂಕಾ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶ ಮತ್ತೊಂದು ಗುಂಪಿನಲ್ಲಿವೆ. ಟೀಂ ಇಂಡಿಯಾ ತನ್ನ ಮೊದಲ ಪಂದ್ಯವನ್ನು ಪಾಕಿಸ್ತಾನದ ವಿರುದ್ಧ ಸೆಪ್ಟೆಂಬರ್ 2 ರಂದು ಆಡಲಿದೆ. ಇದಾದ ಬಳಿಕ ಸೆಪ್ಟೆಂಬರ್ 4ರಂದು ನೇಪಾಳವನ್ನು ಎದುರಿಸಲಿದೆ.

ಹೈಬ್ರಿಡ್ ಮಾದರಿಯಲ್ಲಿ ಏಷ್ಯಾಕಪ್ ನಡೆಯುತ್ತಿರುವ ಕಾರಣ ಪಾಕಿಸ್ತಾನ ಮತ್ತು ಶ್ರೀಲಂಕಾ ಜಂಟಿಯಾಗಿ ಟೂರ್ನಿಗೆ ಆತಿಥ್ಯ ನೀಡುತ್ತಿವೆ. ಈಗಾಗಲೇ ಪಾಕಿಸ್ತಾನ, ಬಾಂಗ್ಲಾದೇಶ, ನೇಪಾಳ ತಂಡಗಳು ಪ್ರಕಟವಾಗಿದ್ದವು. ಆಗಸ್ಟ್​ 30ರಿಂದ ಈ ಟೂರ್ನಿ ಆರಂಭವಾಗಲಿದ್ದು, ಸೆಪ್ಟೆಂಬರ್ 17ಕ್ಕೆ ಟೂರ್ನಿ ಮುಕ್ತಾಯಗೊಳ್ಳಲಿದೆ.

ಒಂದೆರಡು ಬದಲಾವಣೆಗಳೊಂದಿಗೆ ವಿಶ್ವಕಪ್‌ ಪಂದ್ಯಾವಳಿಗೂ ಇದೇ ತಂಡ ಆಡುವ ಸಾಧ್ಯತೆಯಿದೆ.