awards – Peepal Media

‘ಷಡ್ಜ ಗೋಡ್ಕಿಂಡಿ’ ಅವರಿಗೆ ಕಲಾಚೇತನ ಪ್ರಶಸ್ತಿ
ಗದಗ: ನವೆಂಬರ್‌ 6 ರಂದು ನಡೆಯಲಿರುವ ‘ಕಲಾಚೇತನ ಸಾಂಸ್ಕೃತಿಕ ಅಕಾಡೆಮೆಯ’ ಬೆಳ್ಳಿಹಬ್ಬ ಸಂಭ್ರಮದಲ್ಲಿ, ಕೊಳಲು ವಾದಕರಾದ ‘ಶ್ರೀ ಷಡ್ಜ ಗೋಡ್ಕಿಂಡಿ’ ಅವರಿಗೆ ಕಲಾಚೇತನ ಪ್ರಶಸ್ತಿ ಘೋಷಿಸಲಾಗಿದೆ.

ಕಲಾಚೇತನ ಸಾಂಸ್ಕೃತಿಕ ಅಕಾಡೆಮೆಯು ಕಳೆದ 25 ವರ್ಷಗಳಿಂದ ಅಪೂರ್ವ ಕಾರ್ಯಕ್ರಮಗಳನ್ನು ಏರ್ಪಡಿಸುತ್ತಾ ಬಂದಿದ್ದು, ಉತ್ತರ ಕರ್ನಾಟಕದ ಸಾಂಸ್ಕೃತಿಕ ಪ್ರಜ್ಞೆಯನ್ನು ಹೆಚ್ಚಿಸುತ್ತಲೇ ಬಂದಿದೆ.

ಗದಗ ಜಿಲ್ಲೆಯ ಸಾಹಿತ್ಯಿಕ-ಸಾಂಸ್ಕೃತಿಕ ಬದುಕನ್ನು ರೂಪಿಸುವಲ್ಲಿ ಮಹತ್ತರ ಪಾತ್ರ ವಹಿಸಿದ ಕಲಾಚೇತನದ 25 ವರ್ಷಗಳ ಸಾಧನೆಯ ಸವಿನೆನಪಿಗಾಗಿ ಕಲಾಚೇತನ ಬೆಳ್ಳಿಹಬ್ಬ ಸಂಭ್ರಮವನ್ನು ಏರ್ಪಡಿಸಲಾಗಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ನಡೆಯುತ್ತಿರುವ ʼಬೆಳ್ಳಿಹಬ್ಬʼ ಸಂಭ್ರಮವು ಗದಗ ಜಿಲ್ಲೆಯ ಶ್ರೀ ತೋಂಟದಾರ್ಯ ಕಲ್ಯಾಣ ಮಂಟಪದಲ್ಲಿ ನಡೆಯಲಿದ್ದು, ನವೆಂಬರ್‌ 6ರಂದು ಭಾನುವಾರ ಸಂಜೆ 6 ಗಂಟೆಗೆ ಕಾರ್ಯಕ್ರಮ ನಡೆಯಲಿದೆ.

ಈ ಬೆಳ್ಳಿ ಸಂಭ್ರಮದಲ್ಲಿ ಗದಗಿನ ಶಿವಾನಂದ ಬ್ರಹ್ಮಮಠದ ಸದಾಶಿವನಂದ ಭಾರತಿ ಮಹಾಸ್ವಾಮಿಗಳು, ಪ್ರಜಾವಾಣಿ ಕಾರ್ಯನಿರ್ವಾಹಕ ಸಂಪಾದಕರಾದ ಶ್ರೀ ರವೀಂದ್ರ ಭಟ್‌,ಖ್ಯಾತ ವಾಗ್ಮಿಗಳಾದ ಡಾ. ಗುರುರಾಜ ಕರ್ಜಗಿ, ಅಂತರಾಷ್ಟ್ರೀಯ ಖ್ಯಾತಿಯ ಹಿಂದೂಸ್ತಾನಿ ಕಲಾವಿದರಾದ ಪದ್ಮಶ್ರೀ ಪಂ.ವೆಂಕಟೇಶ ಕುಮಾರ ಮತ್ತಿತರರು ಭಾಗವಹಿಸಲಿದ್ದಾರೆ.

ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಗಾಯಕ ಡಿ.ಆರ್.ರಾಜಪ್ಪ ಅವರಿಗೆ ಅಭಿನಂದನಾ ಕಾರ್ಯಕ್ರಮ
ಮಾಲೂರು: ಗಡಿ ನಾಡ ಸಾಂಸ್ಕೃತಿಕ ಕಲೆ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಖ್ಯಾತ ಜಾನಪದ ಹಿನ್ನೆಲೆ ಗಾಯಕರು ಹಾಗೂ ಮಾಜೀ ಜಾನಪದ ಅಕಾಡೆಮಿಯ ಅಧ್ಯಕ್ಷರಾದ ಪಿಚ್ಚಳ್ಳಿ ಶ್ರೀನಿವಾಸ್ ರವರ ನೇತೃತ್ವದಲ್ಲಿ ಶುರುವಾದ ‘ಸಾರಂಗ ರಂಗ’ ಸಾಂಸ್ಕೃತಿಕ ಕಲಾ ತಂಡದ ವತಿಯಿಂದ ಇಂದಿನ ‘ದೇಸಿ ದರುವು’ ಕಾರ್ಯಕ್ರಮದಲ್ಲಿ ಜಾನಪದ ಅಕಾಡೆಮಿಯ ವಾರ್ಷಿಕ ಪ್ರಶಸ್ತಿಗೆ ಭಾಜನರಾಗಿರುವಂತಹ ಡಿ.ಆರ್.ರಾಜಪ್ಪ ಅವರನ್ನು ಅಭಿನಂದಿಸಿ ಸನ್ಮಾನಿಸಲಾಯಿತು.

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಕೆಜಿಎಫ್ ನ ಪೋಲೀಸ್ ವರಿಷ್ಠಾಧಿಕಾರಿಗಳು ಹಾಗೂ ಸಾಹಿತಿಗಳಾದ ಡಾ. ಧರಣಿದೇವಿ ಮಾಲಗತ್ತಿ ರವರು ಜಾನಪದ ಗೀತೆಗಳ ಇತಿಹಾಸದೊಂದಿಗೆ ಮಾತನಾಡುತ್ತಾ ಜಾನಪದ ಗಾಯನ ಯಾವತ್ತಿಗೂ ಸಮೂಹ ಗಾಯನ, ಅದು  ವೈಯಕ್ತಿಕವಾದದ್ದಲ್ಲ. ಜಾನಪದ ಗಾಯನದಲ್ಲಿ ವೈಯಕ್ತಿಕ ಮೇಲುಗೈ ಇಲ್ಲವೇ ಇಲ್ಲ ಇದೊಂದು ಸಮೂಹದಲ್ಲೇ ಹಾಡುವಂತದ್ದು ಮತ್ತು ಇದು ಸಂಕೇತಿಸುವಂತದ್ದು ಸಮೂದಲ್ಲೇ ಹಾಡುವಂತವರು, ಕೆಲಸ ಮಾಡುವಂತವರು ಮತ್ತು ಸಮೂಹಕ್ಕಾಗಿ ಬದುಕುವಂತವರು ಎಂದು ಸೂಚಿಸುತ್ತದೆ ಎಂದು ಅಭಿಪ್ರಾಯ ಪಟ್ಟರು.

ನಂತರ ಡಿ.ಆರ್.ರಾಜಪ್ಪ ಅವರನ್ನ ಸನ್ಮಾನಿಸಿದ ಮಾಲೂರಿನ ಶಾಸಕರಾದ ಕೆ.ವೈ.ನಂಜೇಗೌಡ ರವರು ತಮ್ಮ ಜಾನಪದ ಹಾಡುಗಾರರೊಟ್ಟಿಗೆ ಬೆಳೆದ ತಮ್ಮ ಹಿಂದಿನ ನೆನಪುಗಳನ್ನು ಮೆಲುಕು ಹಾಕುತ್ತಾ ಜಾನಪದ ಸಾಹಿತ್ಯ ಕ್ಷೇತ್ರಕ್ಕೆ ತಮ್ಮ ಅಧಿಕಾರದ ಅವಧಿಯಲ್ಲಿ ಮಾಡಿರುವ ಕೆಲಸಗಳನ್ನ ಹಂಚಿಕೊಂಡಿದ್ದಲ್ಲದೆ ಮುಂದಿನ ದಿನಗಳಲ್ಲಿ ಮತ್ತಷ್ಟು ಬೆಂಬಲವಾಗಿ ಇರುವುದಾಗಿ ತಿಳಿಸಿದರು.

ಗಾಯಕರಾದ ಡಾ.ಕೆ.ಆನಂದ್ ಮಾಲೂರು , ದೊಡ್ಡಮಲ್ಲೆ ರವಿ, ಜಿ. ಮುನಿರೆಡ್ಡಿ, ಮಾರುತಿ ಪ್ರಸಾದ್, ರತ್ನ ಸಕಲೇಶ್ವರ, ಸೊಣ್ಣೂರು ಗೋವಿಂದ್, ಯಡಹಳ್ಳಿ ಶ್ರೀನಿವಾಸ್ ರವರು ತಮ್ಮ ಗಾಯನದ ಮೂಲಕ ಜಾನಪದ ಅಕಾಡೆಮಿಯ ಪ್ರಶಸ್ತಿ ಪುರಸ್ಕೃತರಾದ ಡಿ.ಆರ್.ರಾಜಪ್ಪ ರವರನ್ನ ಅಭಿನಂದಿಸಿದರು.

ಕಾರ್ಯಕ್ರಮವನ್ನ ಅಚ್ಚುಕಟ್ಟಾಗಿ ನಿರೂಪಿಸಿದ ಪಿಚ್ಚಳ್ಳಿ ಶ್ರೀನಿವಾಸ್ ರವರು ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯರಿಗೆ ವಂದಿಸಿ ತಮ್ಮ ಹಾಡುಗಾರಿಕೆಯ ಆರಂಭದ ಕುರಿತು ಮೆಲುಕು ಹಾಕಿದ್ದಲ್ಲದೆ ಒಂದು ಹಾಡನ್ನ ಹಾಡುವುದರ ಮುಖಾಂತರ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಿದರು.

ಪುನೀತ್‌ಗೆ ನವೆಂಬರ್ 1 ರಂದು ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ
ಬೆಂಗಳೂರು: ಕನ್ನಡ ಚಿತ್ರರಂಗದ ಹೆಮ್ಮೆಯ ನಟ ದಿವಂಗತ ಡಾ. ಪುನೀತ್ ರಾಜ್‌ಕುಮಾರ್ ಅವರಿಗೆ ನವಂಬರ್ 1 ರಂದು ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಮಾಡುವುದಾಗಿ ರಾಜ್ಯ ಸರ್ಕಾರ ಘೋಷಿಸಿದೆ.

2021 ಸೆಪ್ಟಂಬರ್ 29 ರಂದು ಹೃದಯಾಘಾತದಿಂದ ಮರಣಹೊಂದಿದ ನಟ ಪುನೀತ್ ಅವರಿಗೆ ರಾಜ್ಯ ಸರ್ಕಾರ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡಲಾಗುವುದು ಎಂದು ಕಳೆದ ವರ್ಷ ನವೆಂಬರ್‌ನಲ್ಲಿ ಘೋಷಣೆ ಮಾಡಲಾಗಿತ್ತು. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಅಧಿಕೃತ ಟ್ವಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊAಡಿದ್ದಾರೆ.

ಕನ್ನಡ ಚಿತ್ರರಂಗದ ಮೇರುನಟ ದಿ. ಡಾ. ಪುನೀತ್ ರಾಜ್‍ಕುಮಾರ್ ಅವರಿಗೆ "ಕರ್ನಾಟಕ ರತ್ನ" ಪ್ರಶಸ್ತಿಯನ್ನು ನವೆಂಬರ್ 1 ರಂದು ಪ್ರದಾನ ಮಾಡಲು ತಿರ್ಮಾನಿಸಲಾಗಿದೆ‌. #PuneethRajkumar pic.twitter.com/zAoEwOW5CG
— Basavaraj S Bommai (@BSBommai) August 5, 2022

Vನಟಿ ಮೇಘನರಾಜ್ ಗೆ ಪ್ರತಿಷ್ಠಿತ “FOG HERO” ಪ್ರಶಸ್ತಿ
ಚಂದನವನದ ಜನಪ್ರಿಯ ನಟಿ ಮೇಘನರಾಜ್ ಅವರಿಗೆ ಈ ಬಾರಿಯ ಪ್ರತಿಷ್ಠಿತ “FOG HERO” ಅವಾರ್ಡ್ ದೊರಕಿದೆ. ಕ್ಯಾಲಿಫೋರ್ನಿಯಾದ ಸ್ಯಾನ್ ಫ್ರಾನ್ಸಿಸ್ಕೊದಲ್ಲಿ “ಫೆಡರೇಷನ್ ಆಫ್ ಇಂಡೋ ಅಮೆರಿಕನ್ಸ್ ಆಫ್ ನಾರ್ತೆನ್ ಕ್ಯಾಲಿಫೋರ್ನಿಯಾ” ಇವರು ಆಯೋಜಿಸುವ “ಫೆಸ್ಟಿವಲ್ ಆಫ್ ಗ್ಲೋಬ್”(FOG) ಸಮಾರಂಭ ಕಳೆದ ನಲವತ್ತು ವರ್ಷಗಳಿಂದ ಅದ್ದೂರಿಯಾಗಿ ನಡೆದುಕೊಂಡು ಬರುತ್ತಿದೆ. ಈ ಬಾರಿ ಆಗಸ್ಟ್‌ 19, 20 ಹಾಗೂ 21 ರಂದು ಈ ಸಮಾರಂಭ ನಡೆಯಲಿದೆ. ಮೂರು ದಿನಗಳ ಕಾಲ ನಡೆಯುವ ಈ ಸಮಾರಂಭಕ್ಕೆ ಅಲ್ಲಿ ನೆಲೆಸಿರುವ ಭಾರತೀಯರು, ಸ್ಥಳೀಯರು ಸೇರಿದಂತೆ ಲಕ್ಷಕ್ಕೂ ಅಧಿಕ ಜನ‌ರು ಬರುವ ನಿರೀಕ್ಷೆಯಿದೆ. ಅಲ್ಲಿನ ರಾಜಕೀಯ ಪ್ರಮುಖರು, ಗಣ್ಯರು ಸಹ ಸಮಾರಂಭಕ್ಕೆ ಆಗಮಿಸುತ್ತಾರೆ. ಪ್ರತಿವರ್ಷ ಭಾರತದ ಸ್ವಾತಂತ್ರ್ಯೋತ್ಸವ ದಿನವನ್ನು ಸಂಭ್ರಮದಿಂದ ಆಚರಿಸುವ ಸಲುವಾಗಿ ಈ ಹಬ್ಬವನ್ನು ಆಚರಿಸಲಾಗುತ್ತದೆ.  ಆಗಸ್ಟ್ 15ರ ಆಸುಪಾಸಿನ ದಿನಗಳಲ್ಲಿ ಈ ಹಬ್ಬ ಸಡಗರದಿಂದ ನಡೆಯಲಿದೆ. ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳು ಅಲ್ಲಿ ನಡೆಯುತ್ತದೆ. ಕಳೆದ ಎರಡು ವರ್ಷಗಳ ನಂತರ (ಕೊರೋನ ನಂತರ) ಈ ಬಾರಿ ಮತ್ತೆ ಅದ್ದೂರಿಯಾಗಿ ಈ ಹಬ್ಬವನ್ನು ಆಯೋಜಿಸಲಾಗಿದೆ.

ಪ್ರತಿವರ್ಷ ಈ ಸಂದರ್ಭದಲ್ಲಿ ಭಾರತದಲ್ಲಿ ಸಾಧನೆ ಮಾಡಿರುವ ಗಣ್ಯರೊಬ್ಬರಿಗೆ “FOG HERO” ಅವಾರ್ಡ್” ನೀಡಲಾಗುತ್ತದೆ. ಹೆಚ್ಚಾಗಿ ಚಿತ್ರರಂಗದಲ್ಲಿ ಸಾಧನೆ ಮಾಡಿದವರಿಗೆ ಈ ಪ್ರಶಸ್ತಿ ನೀಡಲಾಗುತ್ತಿದೆ. ಆಶಾ ಪರೇಕ್, ಅಮಿತಾಬ್ ಬಚ್ಚನ್, ದೇವಾನಂದ್, ವಿನೋದ್ ಖನ್ನಾ, ಧರ್ಮೇಂದ್ರ ಮುಂತಾದ ಸಿನಿರಂಗದ ಗಣ್ಯರಿಗೆ ಈ ಪ್ರತಿಷ್ಠಿತ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಈ ಬಾರಿ ದಕ್ಷಿಣ ಭಾರತದ ಖ್ಯಾತ ನಟಿ ಮೇಘನರಾಜ್ “F0G HERO” ಅವಾರ್ಡ್ ಗೆ ಭಾಜನರಾಗಿದ್ದಾರೆ  ಎಂದು ಕಾರ್ಯಕ್ರಮದ ಬಗ್ಗೆ ಹಾಗೂ ಪ್ರಶಸ್ತಿ ಪ್ರದಾನದ ಕುರಿತು ಸಂಸ್ಥೆಯ ಕ್ರಿಸ್ ಮೂರ್ತಿ ಮಾಹಿತಿ ನೀಡಿದ್ದಾರೆ.

ಇನ್ನು ಈ ಬಗ್ಗ ಪ್ರತಿಕ್ರಿಯೆ ನೀಡಿ, ಅಮಿತಾಭ್‌ ಬಚ್ಚನ್‌, ಧರ್ಮೇಂದ್ರ ಮುಂತಾದ ಗಣ್ಯರು ಪಡೆದಿರುವ ಈ ಪ್ರತಿಷ್ಠಿತ ಪ್ರಶಸ್ತಿಗೆ ನಾನು ಭಾಜನಳಾಗಿರುವುದಕ್ಕೆ ತುಂಬಾ ಸಂತೋಷವಾಗಿದೆ. ಅಂತಹ ಮಹಾನ್ ನಟರಿಗೆ ಸಂದಿರುವ ಪ್ರಶಸ್ತಿಗೆ ಈ ಬಾರಿ ನಾನು ಆಯ್ಕೆಯಾಗಿರುವುದು ನನ್ನ ಪುಣ್ಯ. ನನ್ನ ತಂದೆಯ ಮೂಲಕ ಈ ವಿಷಯ ನನಗೆ ತಿಳಿಯಿತು. ಆಗಸ್ಟ್ 21 ರಂದು ನಡೆಯುವ ಅದ್ದೂರಿ ಸಮಾರಂಭದಲ್ಲಿ ಈ ಪ್ರಶಸ್ತಿ ಸ್ವೀಕರಿಸಲಿದ್ದೇನೆ. ಕನ್ನಡ ಚಿತ್ರರಂಗ ಈಗ ಇಡೀ ವಿಶ್ವದಾದ್ಯಂತ ಜನಪ್ರಿಯ. ಕನ್ನಡಿಗಳಾಗಿ ಈ ಪ್ರಶಸ್ತಿ ಸ್ವೀಕರಿಸುತ್ತಿರುವುದು ನನಗೆ ಹೆಚ್ಚಿನ ಖುಷಿಯಾಗಿದೆ ಎಂದಿದ್ದಾರೆ ನಟಿ ಮೇಘನರಾಜ್.

ರಾಷ್ಟ್ರ ಪ್ರಶಸ್ತಿ ವಿಜೇತರಿಗೆ ವಾಣಿಜ್ಯ ಮಂಡಳಿ ಸನ್ಮಾನ￼
68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ಕನ್ನಡಕ್ಕೆ ಮೂರು ಪ್ರಶಸ್ತಿಗಳು ಲಭಿಸಿವೆ. ವಿಶಿಷ್ಟ ಕಥಾಹಂದರದ ‘ಡೊಳ್ಳು’ ಸಿನಿಮಾಗೆ ಅತ್ಯುತ್ತಮ ಕನ್ನಡ ಪ್ರಾದೇಶಿಕ ಸಿನಿಮಾ ವಿಭಾಗ ಹಾಗೂ ಸಿಂಕ್ ಸೌಂಡ್ ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿ ದೊರೆತಿದೆ.  ‘ತಲೆದಂಡ’ ಚಿತ್ರಕ್ಕೆ ಪರಿಸರ ಕಾಳಜಿಯ ಕಥಾವಸ್ತುವುಳ್ಳ ರಾಷ್ಟ್ರ ಪ್ರಶಸ್ತಿಯ ಗರಿ ಒಲಿದಿದೆ.  ‘ಅತ್ಯುತ್ತಮ ಕಲೆ ಹಾಗೂ ಸಾಂಸ್ಕೃತಿಕ ಸಿನಿಮಾ’ ವಿಭಾಗದಲ್ಲಿ ಗಿರೀಶ್​ಕಾಸರವಳ್ಳಿ ನಿರ್ದೇಶನದ ‘ನಾದದ ನವನೀತ’ ಚಿತ್ರ ಪ್ರಶಸ್ತಿಗೆ ಭಾಜನವಾಗಿದ್ದು, ಇದು ಕನ್ನಡಿಗರಿಗೆ ಹೆಮ್ಮೆಯ ಸಂಗತಿ.

ಮೊನ್ನೆ ಫಿಲ್ಮ್‌ ಚೇಂಬರ್ ವತಿಯಿಂದ ರಾಷ್ಟ್ರ ಪ್ರಶಸ್ತಿ ವಿಜೇತರನ್ನು ಸನ್ಮಾನ ಮಾಡಲಾಯಿತು. ಡೊಳ್ಳು ಸಿನಿಮಾ ನಿರ್ಮಾಪಕರಾದ ಪವನ್ ಒಡೆಯರ್ ಹಾಗೂ ಅಪೇಕ್ಷಾ ಪುರೋಹಿತ್ ದಂಪತಿ, ಚಿತ್ರದ ನಿರ್ದೇಶಕ ಸಾಗರ್ ಪುರಾಣಿಕ್ ಹಾಗೂ ‘ತಲೆದಂಡ’ ಚಿತ್ರದ ನಿರ್ಮಾಪಕಿ ಡಾ. ಹೇಮಾಮಾಲಿನಿ ಕೃಪಾಕರ್ ಸೇರಿದಂತೆ ಈ ಬಾರಿ ಪ್ರಶಸ್ತಿ ವಿಜೇತರಿಗೆ ಫಿಲ್ಮಂ ಚೇಂಬರ್ ಅಧ್ಯಕ್ಷರಾದ ಭಾ.ಮಾ.ಹರೀಶ್ ಸಾರಥ್ಯದಲ್ಲಿ ಸನ್ಮಾನ ಮಾಡಲಾಯಿತು. ಈ ಸಂದರ್ಭದಲ್ಲಿ ಫಿಲ್ಮಂ ಚೇಂಬರ್ ಪದಾಧಿಕಾರಿಗಳು, ಮಾಜಿ ಅಧ್ಯಕ್ಷ ಚಿನ್ನೇಗೌಡ ಸೇರಿದಂತೆ ಹಲವರು ಭಾಗಿಯಾಗಿದ್ದರು.