b c nagesh – Peepal Media

ರಾವಣ ಅಂದ್ರೆ ಸಮಸ್ಯೆಯಲ್ಲ, ಕಸಬ್‌ ಅಂದ ಕೂಡಲೇ ಸಮಸ್ಯೆಯಾಗತ್ತೆ: ಶಿಕ್ಷಣ ಸಚಿವ ಬಿ ಸಿ ನಾಗೇಶ್‌ ಉವಾಚ
ಬೆಂಗಳೂರು: ಉಡುಪಿಯ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ, ಮುಸ್ಲಿಂ ವಿದ್ಯಾರ್ಥಿಯೊಬ್ಬನನ್ನು ‘ಕಸಬ್’ (ಭಯೋತ್ಪಾದಕ) ಎಂದು ಕರೆದಿರುವ ಆರೋಪದ ಮೇಲೆ ಶಿಕ್ಷಕನನ್ನು ಡಿಬಾರ್ ಮಾಡಿರುವುದರ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಹೇಳಿಕೆ ನೀಡಿದ್ದು, ʼಇದು ಒಂದು ಸಣ್ಣ ವಿಷಯ ಇಲ್ಲಿ ರಾವಣ ಅಂದ್ರೆ ಸಮಸ್ಯೆಯಲ್ಲ, ಕಸಬ್‌ ಅಂದ ಕೂಡಲೇ ಸಮಸ್ಯೆಯಾಗತ್ತೆʼ ಎಂದು ಹೇಳಿದ್ದಾರೆ.

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು ʼಈ ಘಟನೆ ನಡೆದಿರುವುದು ದುರದೃಷ್ಟಕರ. ಶಿಕ್ಷಕರು ಆ ಹೆಸರನ್ನು ಬಳಸಬಾರದಿತ್ತು. ಆದರೆ ಇದು ಗಂಭೀರ ವಿಷಯವಲ್ಲ ಎಂದು ನಾನು ಭಾವಿಸುತ್ತೇನೆ ಏಕೆಂದರೆ, ಹಲವಾರು ಬಾರಿ, ನಾವು ವಿದ್ಯಾರ್ಥಿಗಳನ್ನು ‘ರಾವಣ’ ಮತ್ತು ‘ಶಕುನಿ’ ಎಂದು ಕರೆಯುತ್ತೇವೆ. ಆದಾಗ್ಯೂ, ಅದು ಯಾವುದೇ ಸಮಸ್ಯೆಯಾಗುವುದಿಲ್ಲ. ಒಂದು ನಿರ್ದಿಷ್ಟ ಸಮುದಾಯಕ್ಕೆ ಸೇರಿದ ‘ಕಸಬ್’ ಎಂಬ ಹೆಸರು ಏಕೆ ಒಂದು ಸಮಸ್ಯೆಯಾಯಿತು ಎಂದು ನನಗೆ ತಿಳಿದಿಲ್ಲ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಕ್ರಮಗಳನ್ನು ತೆಗೆದುಕೊಂಡಿದ್ದರೂ, ಕೆಲವು ಹೆಸರುಗಳು ಏಕೆ ರಾಷ್ಟ್ರೀಯ ವಿಷಯವಾಗಿ ಮಾರ್ಪಟ್ಟಿವೆ ಎಂದು ನನಗೆ ಅರ್ಥವಾಗುತ್ತಿಲ್ಲʼ ಎಂದಿದ್ದಾರೆ.

ʼಏನಾಯಿತೋ ಅದು ಆಗಬಾರದಿತ್ತು. ಈ ಹೇಳಿಕೆ ನೀಡಿರುವುದಕ್ಕೆ ಸರ್ಕಾರವು ಅವರ ಮೇಲೆ ಕ್ರಮ ಕೈಗೊಂಡಿದೆ. ಶಿಕ್ಷಣ ಸಂಸ್ಥೆಯು ಶಿಕ್ಷಕನನ್ನು ಅಮಾನತುಗೊಳಿಸಿದೆʼ.ನಾವು ಸಾಮಾನ್ಯವಾಗಿ ಮಂತ್ರಿಗಳಿಗೆ ʼರಾವಣʼ ಮತ್ತು ʼಶಕುನಿʼಯಂತಹ ಹೆಸರುಗಳನ್ನು ಬಳಸುತ್ತೇವೆ. ಅದು ಏಕೆ ಸುದ್ದಿಯಾಗುವುದಿಲ್ಲ? ರಾವಣ ಎಂಬ ಹೆಸರಿಗೆ ಒಳ್ಳೆಯ ಅರ್ಥವಿದೆಯೇ? ಇಲ್ಲ, ಇದು ಒಂದು ಸಮಸ್ಯೆಯಾಗಿ ಪರಿಣಮಿಸುವುದಿಲ್ಲ. ನೀವು ʼಕಸಬ್ʼ ಬಗ್ಗೆ ಮಾತನಾಡಿದಾಗ ಅದು ಸಮಸ್ಯೆಯಾಗುತ್ತದೆʼ ಎಂದು ನಾಗೇಶ್ ತರ್ಕಿಸಿದ್ದಾರೆ.

ʼಪ್ರಾಧ್ಯಾಪಕ ಅದನ್ನು ಹೇಳಬಾರದಿತ್ತುʼ. ಏಕೆಂದರೆ ಯುವ ಮನಸ್ಸುಗಳಿಗೆ ನೋವಾಗಬಾರದು. ಆದರೆ ಈ ವಿಚಾರ ಮತ್ತು ಅದರ ಸುತ್ತಲಿನ ವಿವಾದಗಳು ವೋಟ್ ಬ್ಯಾಂಕ್ ರಾಜಕೀಯ ಎಂದು ಹೇಳಿದ್ದಾರೆ.

ಇದನ್ನು ಓದಿ: ʼನಾವು ಕಲಿಯುವುದಾದರೆ ಮಾತ್ರ…ʼ

ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಂಐಟಿ)ಯ ಪ್ರೊಫೆಸರ್ ಒಬ್ಬ ಮುಸ್ಲಿಂ ವಿದ್ಯಾರ್ಥಿಯನ್ನು ತರಗತಿಯಲ್ಲಿ ‘ಭಯೋತ್ಪಾದಕ’ ಎಂದು ಕರೆದಿದ್ದದ್ದಾರೆ. ಈ ವೇಳೆ ವಿದ್ಯಾರ್ಥಿಯು ಪ್ರೊಫೆಸರ್ ಹೇಳಿಕೆಯನ್ನು ವಿರೋಧಿಸಿದ್ದು, ನೀವು ಹೀಗೆ ಒಂದು ಸಮುದಾಯವನ್ನು ಅವಹೇಳನಕಾರಿಯಾಗಿ ತಮಾಷೆ ಮಾಡುವಂತಿಲ್ಲ, ಇದು ತಮಾಷೆಯ ವಿಚಾರ ಅಲ್ಲಾ ಸರ್‌ ಎಂದು ತರಾಟೆಗೆ ತೆಗದುಕೊಂಡಿದ್ದಾನೆ. ನಂತರ ಶಿಕ್ಷಕನು ಆತನನ್ನು ಸಮಾಧಾನಗೊಳಿಸಲು ಪ್ರಯತ್ನಿಸಿದ್ದಾರೆ

ಅಸಮರ್ಥ ಶಿಕ್ಷಣ ಸಚಿವ ಹಾಗೂ ಸರ್ಕಾರದ ನಿರ್ಲಕ್ಷ್ಯದಿಂದಾಗಿ 1.62 ಲಕ್ಷ ದಾಖಲಾತಿ ಕುಸಿತ: ಮೋಹನ್‌ ದಾಸರಿ ಆರೋಪ
ಬೆಂಗಳೂರು: ರಾಜ್ಯದ 1.62 ಲಕ್ಷ ವಿದ್ಯಾರ್ಥಿಗಳು ಈ ವರ್ಷ ಸರ್ಕಾರಿ ಶಾಲೆಯನ್ನು ತ್ಯಜಿಸಿ ಖಾಸಗಿ ಶಾಲೆ ಸೇರಿರುವುದಕ್ಕೆ ರಾಜ್ಯ ಬಿಜೆಪಿ ಸರ್ಕಾರಕ್ಕೆ ಶಿಕ್ಷಣ ಕ್ಷೇತ್ರದ ಮೇಲಿರುವ ನಿರ್ಲಕ್ಷ್ಯ ಹಾಗೂ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ರವರ ಅಸಮರ್ಥತೆ ಕಾರಣ ಎಂದು ಆಮ್‌ ಆದ್ಮಿ ಪಾರ್ಟಿ ಬೆಂಗಳೂರು ಅಧ್ಯಕ್ಷ ಮೋಹನ್‌ ದಾಸರಿ ಆರೋಪಿಸಿದ್ದಾರೆ.

ಪಕ್ಷದ ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಮೋಹನ್‌ ದಾಸರಿಯವರು, ʼಕೋವಿಡ್‌ನಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಲಕ್ಷಕ್ಕೂ ಅಧಿಕ ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಯಿಂದ ಬಿಡಿಸಿ, ಸರ್ಕಾರಿ ಶಾಲೆಗೆ ಸೇರಿಸಿದ್ದರು. ಆದರೆ ಈಗ ಸರ್ಕಾರಿ ಶಾಲೆಗಳ ದುಸ್ಥಿತಿಯಿಂದ ಬೇಸತ್ತು ಅವರು ತಮ್ಮ ಮಕ್ಕಳನ್ನು ಪುನಃ ಖಾಸಗಿ ಶಾಲೆಗೆ ಸೇರಿಸುತ್ತಿದ್ದಾರೆ. ಪರಿಣಾಮವಾಗಿ, ಒಂದರಿಂದ ಹತ್ತನೇ ತರಗತಿವರೆಗಿನ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳ ಸಂಖ್ಯೆ 1.62 ಲಕ್ಷ ಕುಸಿದಿದೆʼ ಎಂದು ಹೇಳಿದ್ದಾರೆ.

ʼಕರ್ನಾಟಕದಲ್ಲಿರುವ 47,585 ಸರ್ಕಾರಿ ಶಾಲೆಗಳ ಪೈಕಿ 6,529 ಶಾಲೆಗಳಲ್ಲಿ ಕೇವಲ ಒಬ್ಬರೇ ಶಿಕ್ಷಕರಿದ್ದಾರೆ. ಬಹುತೇಕ ಶಾಲೆಗಳಲ್ಲಿ ಮೂಲಸೌಕರ್ಯಗಳು ಹಾಗೂ ಶಿಕ್ಷಕರ ಕೊರತೆಯಿದೆ. ಶಾಲೆಗಳು ಹಾಗೂ ಕಾಲೇಜುಗಳಲ್ಲಿ ಕೋಮು ರಾಜಕೀಯಕ್ಕೆ ನೀಡುವ ಆದ್ಯತೆಯನ್ನು ಅಭಿವೃದ್ಧಿಗೆ ನೀಡದಿರುವುದು ದುರಂತ. ದೆಹಲಿಯ ಆಮ್‌ ಆದ್ಮಿ ಪಾರ್ಟಿ ಸರ್ಕಾರವು ಸರ್ಕಾರಿ ಶಾಲೆಗಳಲ್ಲಿ ವಿಶ್ವದರ್ಜೆಯ ಮೂಲಸೌಕರ್ಯಗಳನ್ನು ಅಳವಡಿಸಿದ್ದು, ಅಲ್ಲಿ ವಿದ್ಯಾರ್ಥಿಗಳ ಸಂಖ್ಯೆಯು ಗಣನೀಯವಾಗಿ ಏರಿಕೆಯಾಗುತ್ತಿದೆ. ಕರ್ನಾಟಕದಲ್ಲೂ ಅಂತಹ ಶೈಕ್ಷಣಿಕ ಕ್ರಾಂತಿಗಾಗಿ ಆಮ್‌ ಆದ್ಮಿ ಪಾರ್ಟಿ ಸರ್ಕಾರ ಅಧಿಕಾರಕ್ಕೆ ಬರಬೇಕುʼ ಎಂದು ಮೋಹನ್‌ ದಾಸರಿ ಹೇಳಿದ್ದಾರೆ.

ಶಾಲೆಗಾಗಿ ಮಕ್ಕಳ ಕಣ್ಣೀರು: ಹೊಸದೊಂದು ಶಾಲೆ ನಿರ್ಮಿಸುವಂತೆ ಸರ್ಕಾರಕ್ಕೆ ಹೆಚ್‌.ಡಿ.ಕೆ ಒತ್ತಾಯ
ಕೋಲಾರ: ಇಲ್ಲಿನ ಶ್ರೀನಿವಾಸಪುರ ವಿಧಾನಸಭೆ ಕ್ಷೇತ್ರದ ಬಂಗವಾದಿ ಗ್ರಾಮದ ಸರಕಾರಿ ಶಾಲೆಯು ಶಿಥಿಲಗೊಂಡಿದ್ದು, ಶಾಲಾ ಮಕ್ಕಳು ಹೊಸ ಶಾಲಾ ಕಟ್ಟಡ ನಿರ್ಮಿಸಿಕೊಡುವಂತೆ ಕಣ್ಣೀರಿಟ್ಟಿರುವ ಹಿನ್ನಲೆಯಲ್ಲಿ, ಕೂಡಲೇ ಹೊಸದೊಂದು ಶಾಲಾ ಕಟ್ಟಡವನ್ನು ನಿರ್ಮಿಸುವಂತೆ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿಯವರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ʼಪಂಚರತ್ನ ರಥಯಾತ್ರೆ ವೇಳೆ ಎದುರಾದ ಈ ಘಟನೆಯಿಂದ ನನಗೆ ಬಹಳ ನೋವಾಗಿದೆ. ಯಾತ್ರೆಯು ಶ್ರೀನಿವಾಸಪುರ ವಿಧಾನಸಭೆ ಕ್ಷೇತ್ರದಲ್ಲಿ ಸಾಗುವಾಗ ಬಂಗವಾದಿ ಗ್ರಾಮದ ಸರಕಾರಿ ಶಾಲೆ ಮಕ್ಕಳು ಶಾಲಾ ಕಟ್ಟಡಕ್ಕಾಗಿ ಕಣ್ಣೀರಿಟ್ಟರು, ರಸ್ತೆಯಲ್ಲಿ ಅಡ್ಡಗಟ್ಟಿದರು. ನಂತರ ಹಠ ಬಿಡದೇ ನನ್ನನ್ನು ಆ ಶಿಥಿಲವಾಗಿರುವ ಶಾಲೆಗೆ ಕರೆದುಕೊಂಡು ಹೋಗಿ, ಅಲ್ಲಿನ ದುಸ್ಥಿತಿಯ ದರ್ಶನ ಮಾಡಿಸಿದರು. ಕಳೆದ ಎರಡುಮೂರು ವರ್ಷಗಳಿಂದ ಎದುರಿನ ಅಶ್ವತ್ಥಕಟ್ಟೆ ಮೇಲೆ ಶಿಕ್ಷಕರು ಪಾಠ ಮಾಡುತ್ತಿದ್ದಾರೆ ಎಂದು ಹೇಳುತ್ತಾ ಕಣ್ಣೀರು ಹಾಕಿದರುʼ ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.

ಈ ಕಾರಣ ಸ್ಥಳದಿಂದಲೇ ದೂರವಾಣಿಯಲ್ಲಿ ಶಿಕ್ಷಣ ಸಚಿವರಾದ ಬಿ.ಸಿ. ನಾಗೇಶ್‌ ಅವರನ್ನು ಸಂಪರ್ಕಿಸಿದ ಕುಮಾರಸ್ವಾಮಿಯವರು, ಶಾಲಾ ಕಟ್ಟಡದ ಸಮಸ್ಯೆಕುರಿತು ಮಾತನಾಡಿದೆ. ಇದಕ್ಕೆ ಸ್ಪಂದಿಸಿದ, ಬಿ.ಸಿ. ನಾಗೇಶ್‌ ಅವರು ಆದಷ್ಟು ಬೇಗ ಬಂಗವಾದಿ ಗ್ರಾಮದ ಶಾಲೆಗೆ ನೂತನ ಕಟ್ಟಡ ನಿರ್ಮಿಸಿಕೊಡುವುದಾಗಿ ಭರವಸೆ ನೀಡಿದರು ಎಂದು ತಿಳಿಸಿದ್ದಾರೆ.

ಅಲ್ಲದೆ, ಕೋಲಾರ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ಕರೆ ಮಾಡಿ, ಕೂಡಲೇ ಬಂಗವಾದಿ ಶಾಲೆಗೆ ಹೊಸ ಕಟ್ಟಡ ಕಟ್ಟಿಸಿಕೊಡಬೇಕಾಗಿ ಸೂಚನೆ ನೀಡಿದ್ದೇನೆ ಎಂದಿದ್ದಾರೆ.

ಬಿ ಸಿ ನಾಗೇಶ್‌ ವಿರುದ್ದ ಸಿದ್ದು ವಾಗ್ದಾಳಿ
ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಂತದಲ್ಲಿ ದಿನದಿಂದ ದಿನಕ್ಕೆ ಲಂಚದ ಪ್ರಮಾಣ ಏರಿಕೆಯಾಗುತ್ತಿರುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ಕೋವಿಡ್ ಕಾಲದಲ್ಲಿ ಅನುದಾನರಹಿತ ಶಾಲೆಗಳ ಶಿಕ್ಷಕರಿಗೆ ಪರಿಹಾರ ನೀಡಲು ನಿಗದಿಪಡಿಸಿದ್ದ ರೂ.103.47 ಕೋಟಿ ಹಣದಲ್ಲಿ ರೂ.31.14 ಕೋಟಿಯನ್ನು ಖಾಸಗಿ ಶಾಲೆಗಳ ಶಿಕ್ಷಣ ಹಕ್ಕು ಕಾಯಿದೆ (ಆರ್.ಟಿ.ಇ) ಶುಲ್ಕ ಮರುಪಾವತಿಗೆ ನೀಡಿದ್ದಿರಿಲ್ಲಾ? ಇದು ಯಾರ ಮೇಲಿನ ಕಾಳಜಿಯಿಂದ ಎಂದು ಪ್ರಶ್ನಿಸಿದ್ದಾರೆ.

ಖಾಸಗಿ ಶಾಲೆಗಳ ಅಕ್ರಮಗಳ ವಿರುದ್ಧ ಸಮರ ಸಾರಿದವರಂತೆ ಹೇಳಿಕೆ ನೀಡುತ್ತಿರುವ ಸಚಿವ ಬಿ.ಸಿ. ನಾಗೇಶ್‌ ಅವರೇ, ಕೋವಿಡ್ ಪರಿಹಾರದ ಹಣವನ್ನು ಖಾಸಗಿ ಶಾಲೆಗಳ ಆರ್.ಟಿ.ಇ ಶುಲ್ಕ ಮರುಪಾವತಿಗೆ ದುರ್ಬಳಕೆ ಮಾಡಿರುವುದು ಯಾರ ಮೇಲಿನ ಪ್ರೀತಿಯಿಂದ? ಕೋವಿಡ್ ಪರಿಹಾರಕ್ಕಾಗಿಯೇ ನಿಗದಿಪಡಿಸಿದ್ದ ಹಣವನ್ನು ಪೂರ್ಣವಾಗಿ ಆ ಉದ್ದೇಶಕ್ಕಾಗಿಯೇ ಬಳಸದಿರಲು ಕಾರಣವೇನು? ಆರ್.ಟಿ.ಇ ಮರುಪಾವತಿಗಾಗಿಯೇ 2022-23ನೇ ಸಾಲಿಗೆ ನಿಗದಿಪಡಿಸಿದ್ದ ರೂ.500 ಕೋಟಿ ಹಣವನ್ನು ನಿಮ್ಮ ಇಲಾಖೆ ಪೂರ್ಣವಾಗಿ ಬಳಸಿಕೊಂಡಿದೆಯೇ ? ಎಂದು ಪೆಶ್ನೆಗಳ ಸರಮಾಲೆ ಹಾಕಿದ್ದಾರೆ.

ಶಾಲಾ ಮಕ್ಕಳ ಶೂ ಖರೀದಿಗೆ ಐದು ವರ್ಷಗಳ ಹಿಂದಿನ ದರದಲ್ಲಿ ಹಣ ನೀಡಿ ಶಿಕ್ಷಕರನ್ನು ದಾನಿಗಳ ಮುಂದೆ ಕೈಯೊಡ್ಡುವಂತೆ ಮಾಡಿರುವ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರೇ, ನಿಮ್ಮ ಸಾಮಾಜಿಕ ಜಾಲತಾಣ ನಿರ್ವಹಣೆಗೆ ತಿಂಗಳಿಗೆ ರೂ.93,000 ನೀಡುತ್ತಿದ್ದೀರಲ್ಲಾ ಇದು ನ್ಯಾಯವೇ? ಎಂದು ವಾಗ್ದಾಳಿ ನಡೆಸಿದ್ದಾರೆ.

ಅತಿಥಿ ಉಪನ್ಯಾಸಕರು ಕನಿಷ್ಠ 6000 ರೂಪಾಯಿಯಷ್ಟು ಗೌರವಧನ ಹೆಚ್ಚಿಸಿ ಎಂದು ಕೇಳಿದರೆ ರೂ.3000 ಕೊಟ್ಟು ಬಾಯಿ ಮುಚ್ಚಿಸಿದ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಅವರೇ, ನಿಮ್ಮ ಸಾಮಾಜಿಕ ಜಾಲತಾಣ ನಿರ್ವಹಣೆಗೆ ಟೆಂಡರ್ ಕರೆಯದೆ ಮೂರು ತಿಂಗಳಿಗೆ ರೂ.2,83,200 ಖರ್ಚು ಮಾಡುವುದು ಅನ್ಯಾಯ ಅಲ್ಲವೇ? ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.