ballary – Peepal Media

ಸಮೀರ್ ಗೆ ಬಿಗ್ ರಿಲೀಫ್, ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದ ಪೊಲೀಸರಿಗೆ ಹೈಕೋರ್ಟ್ ತರಾಟೆ
ಬಳ್ಳಾರಿ : ಸೌಜನ್ಯ ಕೊಲೆ ಮತ್ತು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವೀಡಿಯೋ ಮಾಡಿದ್ದ ಯೂಟ್ಯೂಬರ್ ಸಮೀರ್ ಬಿಗ್ ರಿಲೀಫ್ ಸಿಕ್ಕಿದೆ. ಅವರನ್ನು ಅರೆಸ್ಟ್ ಮಾಡುವಂತಿಲ್ಲ ಹಾಗೂ ಪೊಲೀಸ್‌ ಠಾಣೆಗೂ ಕರೆಯುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಜೊತೆಗೆ ಕಾನೂನು ಉಲ್ಲಂಘಸಿ ಪೂಲೀಸರು ನೋಟಿಸ್ ಕೊಟ್ಟಿದ್ದಾರೆ ಎಂದು ಪೊಲೀಸರಿಗೆ ಹೈಕೋರ್ಟ್ ತರಾಟೆ ತೆಗೆದುಕೊಂಡಿದೆ.

ಈ ಬಗ್ಗೆ ಮಾಜಿ ಪಿಎಸ್ಐ ಗಿರೀಶ್ ಮಟ್ಟಣ್ಣನವರ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಕೊಲೆ ಹಾಗೂ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮೀರ್ ಎಂ.ಡಿ. ವಿಡಿಯೋ ಮಾಡಿದ್ದರು, ಇದು ಸಾಮಾಜಿಕ ಜಾಣತಾಣಗಳಲ್ಲಿ ಸಕತ್ ವೈರಲ್ ಆಗುವ ಮೂಲಕ ಸೌಜನ್ಯ ಪ್ರಕರಣವನ್ನು ಮತ್ತೆ ಮುನ್ನೆಲೆಗೆ ಬರುವಂತೆ ಮಾಡಿತ್ತು.

ಈ ಬಗ್ಗೆ ಪರ ವಿರೋಧ ಚರ್ಚೆಗಳು ಹೆಚ್ಚಾಗಿ ಸಮೀರ್ ವಿರುದ್ಧ ಬಳ್ಳಾರಿ ಜಿಲ್ಲೆಯ ಕೌಲ್‌ಬಝಾರ್ ಠಾಣೆಯ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದರು.

ಧರ್ಮಸ್ಥಳ ಮತ್ತು ಧರ್ಮಾಧಿಕಾರಿಗಳ ಮೇಲೆ ಧಾರ್ಮಿಕ ಭಾವನೆ ಹೊಂದಿರುವ ಸಾರ್ವಜನಿಕರ ಧಾರ್ಮಿಕ ಭಾವನೆಗೆ ಧಕ್ಕೆಯಾಗುವ ರೀತಿ ವೀಡಿಯೋ ಮಾಡಲಾಗಿದೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿತ್ತು.

ಬುಧವಾರ ರಾತ್ರಿ ಸಮೀರ್ ಅವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದ ಪೊಲೀಸರು, ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಕಲಂ -299 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.

ತಡರಾತ್ರಿ 10.45 ಗಂಟೆಗೆ ಸಮೀರ್ ಎಂಡಿ ಅವರಿಗೆ ನೋಟಿಸ್ ನೀಡಿದ್ದರು. ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದ ಸಮೀರ್ ನನಗೆ ಪೊಲೀಸ್ ನೋಟಿಸ್ ಬಂದಿದೆ ಆದರೆ ಇದರ ಬಗ್ಗೆ ನನಗೆ ಯಾವುದೇ ಭಯ ಇಲ್ಲ. ಯಾಕೆಂದರೆ ನಾನು ಮಾಡಿದಂತಹ ಸೌಜನ್ಯ ಪ್ರಕರಣದ ವೀಡಿಯೋ ಸಂಬಂಧ ಎಲ್ಲ ಆಧಾರಗಳನ್ನು ಇಟ್ಟುಕೊಂಡು ಮಾತನಾಡಿದ್ದೇನೆ.

ಈ ವೀಡಿಯೋಗೆ ಒಂದು ಮಿಲಿಯನ್ ವ್ಯೂವ್ಸ್‌ ಬರುತ್ತಿದ್ದಂತಯೇ ಸಾಮಾಜಿಕ ಮಾಧ್ಯಮದಲ್ಲಿ ನನ್ನ ವೈಯಕ್ತಿಕ ಮಾಹಿತಿ ಮತ್ತು ನನ್ನ ವಿಳಾಸ ಲೀಕ್‌ ಆಯಿತು. ನಂತರ ನನಗೆ ಹಲವಾರು ಜೀವ ಬೆದರಿಕೆ ಕರೆಗಳ ಬರಲು ಪ್ರಾರಂಭವಾದವು. ಪೊಲೀಸರ ಬಳಿ ಹೋದರೆ ರಕ್ಷಣೆ ಸಿಗುತ್ತೆ ಎಂಬ ನಂಬಿಕೆಯೂ ನನಗಿರಲಿಲ್ಲ. ಬಳಿಕ ನಾನು ಕೂಡಲೇ ಸೌಜನ್ಯ ಪ್ರಕರಣದ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ತಂಡದ ಸದಸ್ಯರನ್ನು ಸಂಪರ್ಕಿಸಿದೆ. ಅವರು ನನಗೆ ದೈರ್ಯ ನೀಡಿ ವಕೀಲರ ಸಹಾಯವನ್ನು ನೀಡಿದ್ದಾರೆ ಎಂದು ಸಮೀರ್ ವೀಡಿಯೊದಲ್ಲಿ ತಿಳಿಸಿದ್ದರು.

ಇದೀಗ ಕರ್ನಾಟಕ ಹೈಕೋರ್ಟ್ ಈ ಪ್ರಕರಣದಲ್ಲಿ ಸಮೀರ್ ಅವರಿಗೆ ರಿಲೀಫ್ ನೀಡಿದ್ದು, ಅವರನ್ನು ಅರೆಸ್ಟ್ ಮಾಡುವಂತಿಲ್ಲ ಎಂದು ಪೊಲೀಸರಿಗೆ ತಾಕೀತು ಮಾಡಿದೆ. ಜೊತೆಗೆ ಕಾನೂನು ಉಲ್ಲಂಘಿಸಿ ನೋಟಿಸ್ ಕೊಟ್ಟಿರುವುದಾಗಿ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದೆ.

ಚೊಚ್ಚಲ ಅಥವಾ ಗಂಡಾಂತರ ಗರ್ಭಿಣಿಯರ ನಿರಂತರ ತಪಾಸಣೆಯಾಗಬೇಕು: ಡಾ. ಯಲ್ಲಾ ರಮೇಶಬಾಬು
ಬಳ್ಳಾರಿ,ಡಿ.18: ಚೊಚ್ಚಲ ಅಥವಾ ಗಂಡಾಂತರ ಗರ್ಭಿಣಿಯರು ಹತ್ತಿರದ ಸರಕಾರಿ ಆಸ್ಪತ್ರೆಗಳಿಗೆ ಹೋಗಿ ನಿರಂತರ ತಪಾಸಣೆ ಮಾಡಿಸಬೇಕು ಮತ್ತು ತಪ್ಪದೇ ತಾಯಿ ಕಾರ್ಡ್ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್‌ಬಾಬು ಅವರು ಹೇಳಿದರು.
ಬಳ್ಳಾರಿ ತಾಲ್ಲೂಕಿನ ವೈ.ಕಗ್ಗಲ್ ಗ್ರಾಮದಲ್ಲಿ ಆಯುಷ್ಮಾನ ಆರೋಗ್ಯ ಮಂದಿರಕ್ಕೆ ಭೇಟಿ ನೀಡಿ ಗ್ರಾಮದಲ್ಲಿಯ ಗರ್ಭೀಣಿಯರ ಆರೋಗ್ಯ ವಿಚಾರಿಸಿ ಅವರ ಪಾಲಕರೊಂದಿಗೆ ಮಾತನಾಡಿದರು.
ಮನೆಯಲ್ಲಿ ಮಗಳಾಗಲಿ ಅಥವಾ ಸೊಸೆಯಾಗಲಿ ಗರ್ಭಿಣಿಯೆಂದು ತಿಳಿದ ದಿನದಿಂದಲೇ ನಿರಂತರವಾಗಿ ವೈದ್ಯರಿಂದ ಮಾಡಿಸಬೇಕಾದ ತಪಾಸಣೆ ಹಾಗೂ ಅಗತ್ಯ ಚಿಕಿತ್ಸೆ ನೀಡುವ ಅವಶ್ಯಕತೆ ಇದ್ದಲ್ಲಿ ಕುಟುಂಬದ ಸದಸ್ಯರು ವೈಯಕ್ತಿಕ ಕೆಲಸಗಳ ಕಾರಣದಿಂದ ತಡ ಮಾಡಬಾರದು. ಗರ್ಭಿಣಿಯರ ಆರೋಗ್ಯ ಸುರಕ್ಷತೆಗೆ ಒತ್ತು ನೀಡಬೇಕು ಎಂದು ತಿಳಿಸಿದರು.
ಗಂಡಾಂತರ ಗರ್ಭಿಣಿಯರು ಎಂದು ಗುರ್ತಿಸಿದ ನಂತರ ವೈದ್ಯರ ಸೂಚನೆಯಂತೆ ಅವರ ನಿರಂತರ ನಿಗಾವಣೆ, ರಕ್ತದೊತ್ತಡ ಪರೀಕ್ಷೆ ಕೈಗೊಂಡ ನಂತರ ಕಂಡುಬರುವ ವ್ಯತ್ಯಾಸ ಉಪಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪರಿಶೀಲಿಸಿ ಅಗತ್ಯವೆನಿಸಿದಲ್ಲಿ ತಜ್ಞ ವೈದ್ಯರ ಬಳಿ ತಕ್ಷಣವೇ ತೆರಳಬೇಕು ಎಂದರು.
ರಕ್ತಹೀನತೆ ಕಂಡುಬಂದಲ್ಲಿ ಸ್ಥಳೀಯವಾಗಿ (ಐಎಫ್‌ಎ ಮಾತ್ರೆ, ಐರನ್ ಸುಕ್ರೋಸ್, ರಕ್ತ ಹಾಕಿಸುವಿಕೆ) ನೀಡುವ ಚಿಕಿತ್ಸೆಯಿಂದ ಸುಧಾರಣೆ ಹೊಂದಬಹುದು. ಅಗತ್ಯವಿದ್ದಲ್ಲಿ ಸ್ಕಾö್ಯನ್ ಮಾಡಿಸಬೇಕು. ಮೊದಲ ಹೆರಿಗೆ ಶಸ್ತçಚಿಕಿತ್ಸೆ ಮೂಲಕವಾದಲ್ಲಿ ಪುನಃ ಗರ್ಭಿಣಿಯಾಗುವ ಅವಧಿಯನ್ನು ಕನಿಷ್ಟ 3 ವರ್ಷಕ್ಕೆ ಕಡ್ಡಾಯವಾಗಿ ಮುಂದೂಡಬೇಕು. ಇದಕ್ಕಾಗಿ ಅಂತರ ಚುಚ್ಚುಮದ್ದು, ಕಾಪರ-ಟಿ, ನೀರೊಧ್ ಕುರಿತು ಆರೋಗ್ಯ ಶಿಕ್ಷಣ ಹೊಂದಬೇಕು ಮರೆಯಬಾರದು.
ಅತಿ ಮುಖ್ಯವಾಗಿ ಗರ್ಭಿಣಿಗೆ ಮೇಲ್ಮಟ್ಟದ ಆಸ್ಪತ್ರೆಗೆ ಶಿಫಾರಸ್ಸು ಮಾಡುವಾಗ 108 ಆರೋಗ್ಯ ಕವಚ ಬರುವ ಸಮಯ ತಡವಾಗುವ ಸಾಧ್ಯತೆ ಇದ್ದಲ್ಲಿ ತಕ್ಷಣ ವೈದ್ಯಾಧಿಕಾರಿಗಳು ಪರ್ಯಾಯ ಸಾರಿಗೆ ವ್ಯವಸ್ಥೆ ಮಾಡಬೇಕು. ಹೆರಿಗೆ ವಿಷಯವನ್ನು ಆದ್ಯತೆಯಾಗಿಟ್ಟುಕೊಂಡು ಸ್ಥಳೀಯ ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಸದಸ್ಯರೊಂದಿಗೆ ಸಮನ್ವಯ ಸಭೆ ಕೈಗೊಂಡು ತಮ್ಮ ವ್ಯಾಪ್ತಿಯ ಗರ್ಭಿಣಿಯರ ಆರೈಕೆ ಕುರಿತು ನಿಗಾವಹಿಸಲು ಕ್ರಮವಹಿಸಿ ಎಂದು ತಿಳಿಸಿದರು.
ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ.ಹನುಮಂತಪ್ಪ ಅವರು ಮಾತನಾಡಿ, ಹಬ್ಬ, ಜಾತ್ರೆ, ಊರ ದೇವರ ಪçಜೆ ಮುಂತಾದ ಆಚರಣೆಯ ಮಾಡುವಾಗ ಗರ್ಭಿಣಿಯ ಸಕಾಲದಲ್ಲಿ ಆಗಬೇಕಾದ ತಪಾಸಣೆಗೆ ಅಡಚಣೆಯಾಗದಂತೆ ಪಾಲಕರು ಮೊದಲು ಆದ್ಯತೆ ನೀಡಬೇಕು. ವೈದ್ಯಾಧಿಕಾರಿಗಳು ತಮ್ಮ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ಗಂಡಾಂತರ ಗರ್ಭಿಣಿಯರ ಮನೆ ಭೇಟಿ ಹಾಗೂ ಆರೋಗ್ಯದ ಸ್ಥಿತಿ ಕುರಿತು ಪ್ರತಿ ವಾರ ಚರ್ಚಿಸಬೇಕು ಎಂದು ಹೇಳಿದರು.
ಧಾರ್ಮಿಕ ಸ್ಥಳಗಳಿಗೆ ಗರ್ಭಿಣಿಯರು ತಮ್ಮ ಆರೋಗ್ಯ ಸಮಸ್ಯೆಗಳಿಗೆ ಪದೇ-ಪದೇ ಭೇಟಿ ನೀಡುತ್ತಿದ್ದರೆ ಅಂತ ಧಾರ್ಮಿಕ ಕೇಂದ್ರಗಳ ಸ್ವಾಮೀಜಿಯರನ್ನು ಭೇಟಿ ಮಾಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಸೂಚಿಸುವಂತೆ ವಿನಂತಿಸಬೇಕು. ಆಕಸ್ಮಿಕ ಘಟನೆಗಳಲ್ಲಿ ಗರ್ಭಿಣಿಯರ ಆರೈಕೆಗೆ ಯಾರು ಇಲ್ಲದಿದ್ದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಮಾಹಿತಿ ತಿಳಿಸಿ ಆರೈಕೆ ಕೇಂದ್ರಕ್ಕೆ ಕಳುಹಿಸಬೇಕು ಎಂದು ತಿಳಿಸಿದರು.

ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಹೆರಿಗೆಗೆ ಗರ್ಭಿಣಿ ಬಂದಾಗ ಅಗತ್ಯ ಪರೀಕ್ಷೆ ಮೂಲಕ ಹೆರಿಗೆ ನಿರ್ವಹಿಲು ಸಾಧ್ಯತೆಯಾಗಬೇಕು. ಇಲ್ಲದಿದ್ದಲ್ಲಿ ಗಂಭೀರತೆ ಕಂಡುಬಂದರೆ ತಡ ಮಾಡದೇ ಸಿಬ್ಬಂದಿ ಸಹಿತ ಶಿಫಾರಸ್ಸಿಗೆ ಮರೆಯಬಾರದು ಎಂದರು.

ಈ ಸಂದರ್ಭದಲ್ಲಿ ವೈದ್ಯಾಧಿಕಾರಿ ಡಾ.ಕಾವ್ಯಶ್ರೀ, ಡಿಎನ್‌ಓ ಗಿರೀಶ್, ಹಿರಿಯ ಪ್ರಾಥಮಿಕ ಸುರಕ್ಷಾಧಿಕಾರಿ ಚಂದ್ರಕಲಾ, ಸಮುದಾಯ ಆರೋಗ್ಯಾಧಿಕಾರಿ ಮೊನಿಕಾ, ಪ್ರಾಥಮಿಕ ಸುರಕ್ಷಾಧಿಕಾರಿ ನಾಗಮ್ಮ, ಆಶಾ ಕಾರ್ಯಕರ್ತೆಯರಾದ ಸಿದ್ದಮ್ಮ, ರೇಣುಕಾ, ಕಸ್ತೂರಿ ಸೇರಿದಂತೆ ತಾಯಂದಿರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ನವೆಂಬರ್ 20 ರಂದು ಬಳ್ಳಾರಿಯಲ್ಲಿ ಎಸ್.ಸ್ಟಿ ಮೋರ್ಚಾ ಸಮಾವೇಶ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು: ಇದೇ ನವೆಂಬರ್ 20 ರಂದು ಬಳ್ಳಾರಿಯಲ್ಲಿ ಎಸ್.ಟಿ ಮೋರ್ಚಾ ಸಮಾವೇಶ ಹಾಗೂ ನ. 30 ರಂದು ಮೈಸೂರಿನಲ್ಲಿ ಎಸ್.ಸಿ ಮೋರ್ಚಾ ಸಮಾವೇಶ ಹಮ್ಮಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಈ ಕುರಿತು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಳೆಯಿಂದ ಜನಸಂಕಲ್ಪ ಯಾತ್ರೆ ಪುನಃ ಪ್ರಾರಂಭವಾಗಲಿದೆ. ಉಡುಪಿ, ಗದಗ, ಹಾವೇರಿ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಮೂರು ದಿನಗಳು ಸತತವಾಗಿ ಕಾರ್ಯಕ್ರಮಗಳಿವೆ. ಡಿಸೆಂಬರ್ ವರೆಗೆ ಜನಸಂಕಲ್ಪ ಯಾತ್ರೆ ಮುಂದುವರೆಯಲಿದೆ.  ಅಭೂತಪೂರ್ವ ಬೆಂಬಲ ಎಲ್ಲೆಡೆ ದೊರೆಯುತ್ತಿದೆ. ಈ ಬಾರಿ ಮುಂಬೈ ಕರ್ನಾಟಕದಲ್ಲಿ ಪ್ರವಾಸ ಮಾಡುತ್ತಿದ್ದು, ಇದು ನಮ್ಮ ಮುಂದಿನ ವಿಜಯಕ್ಕೆ ಪುಷ್ಟಿ ನೀಡುತ್ತಿದೆ ಎಂದರು.

ನವೆಂಬರ್ 11 ರಂದು ರಾಜ್ಯಕ್ಕೆ ಪ್ರಧಾನಿಗಳ ಭೇಟಿ

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ನವೆಂಬರ್ 11 ರಂದು ರಾಜ್ಯ ಕ್ಕೆ ಆಗಮಿಸಿದ್ದು ಮೂರು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ವಂದೇ ಭಾರತ್ –  ಚೆನ್ನೈ – ಮೈಸೂರು- ಬೆಂಗಳೂರು  ರೈಲನ್ನು ಉದ್ಘಾಟಿಸಲಿದ್ದಾರೆ. ಇದು ಬಹಳ ದಿನಗಳ ನಮ್ಮ ಬೇಡಿಕೆಯಾಗಿದ್ದ ಹೈಸ್ಪೀಡ್ ರೈಲನ್ನು ಪ್ರಧಾನಿಗಳು ಈಡೇರಿಸುತ್ತಿದ್ದಾರೆ.  ಜೊತೆಗೆ ಕೆಂಪೇಗೌಡ ಅಂತರರಾಷ್ಟ್ರೀಯ ನಿಲ್ದಾಣದಲ್ಲಿ ಟರ್ಮಿನಲ್ ಉದ್ಘಾಟಿಸಲಿದ್ದಾರೆ. ಬೆಂಗಳೂರಿಗೆ ಆಗಮಿಸುವ ಅಂತರರಾಷ್ಟ್ರೀಯ ಪ್ರಯಾಣಿಕರ ಸಂಖ್ಯೆ ದೊಡ್ಡ ಪ್ರಮಾಣದಲ್ಲಿ ಇದ್ದು, 25 ಲಕ್ಷ ಜನರನ್ನು ನಿಭಾಯಿಸುವ ಸಾಮರ್ಥ್ಯ ವುಳ್ಳ, ನೂರು ಕೌಂಟರ್ ಗಳುಳ್ಳ  ಅಂತರರಾಷ್ಟ್ರೀಯ ಟರ್ಮಿನಲ್ ಉದ್ಘಾಟನೆಯಾಗುತ್ತಿದೆ. ಎರಡೂ ಟರ್ಮಿನಲ್ ಕೂಡಿದರೆ, ದೆಹಲಿಯ ನಂತರ ದೇಶದ ಅತಿ ದೊಡ್ಡ ವಿಮಾನ ನಿಲ್ದಾಣವಾಗಲಿದೆ. ಹೀಗಾಗಿ ಕರ್ನಾಟಕ ಮತ್ತು ಬೆಂಗಳೂರಿನ ಅಭಿವೃದ್ಧಿಗೆ ಪೂರಕವಾಗಲಿದೆ. ಪ್ರವಾಸೋದ್ಯಮ, ಕೈಗಾರಿಕೆ, ಐ.ಟಿ, ಬಿಟಿ, ಆರ್.ಅಂಡ್ ಡಿ ವಲಯಗಳಿಗೂ ದೊಡ್ಡ ಅನುಕೂಲ ವಾಗಲಿದೆ ಎಂದರು.

ನಂತರ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆ ಅನಾವರಣವಾಗುತ್ತಿದೆ. ಕೆಂಪೇಗೌಡರು ವಿಕಾಸಪುರುಷರು. ಹೀಗಾಗಿ ಪ್ರತಿಮೆಗೆ ಪ್ರಗತಿಯ ಪ್ರತಿಮೆ ಎಂದು ಹೆಸರಿಡಲಾಗಿದೆ. ಇಡೀ ದೇಶವನ್ನು ಪ್ರಗತಿಯತ್ತ ಕೊಂಡೊಯ್ಯುತ್ತಿರುವ ಪ್ರಧಾನಿಗಳಿಂದ ಉದ್ಘಾಟನೆಯಾಗುತ್ತಿರುವುದು ಅತ್ಯಂತ ಯೋಗ್ಯವಾಗಿದೆ. ನಂತರ ಸಾರ್ವಜನಿಕ ಕಾರ್ಯಕ್ರಮವಿರಲಿದೆ ಎಂದರು.

ಸೋಲಾರ್ ಪರವಾನಗಿ ಬಗ್ಗೆ ತನಿಖೆ

ಹಿಂದಿನ ಸರ್ಕಾರದ ಅವಧಿಯಲ್ಲಿ ಖಾಸಗಿಯವರಿಗೆ ಸೋಲಾರ್ ನಿಂದ ವಿದ್ಯುತ್ ಉತ್ಪಾದನೆಗೆ ನೀಡಿರುವ ಪರವಾನಗಿಯಲ್ಲಿ ಆಗಿರುವ ಅವ್ಯವಹಾರವನ್ನು ಮುಚ್ಚಿಹಾಕಲು ಪ್ರಯತ್ನ ಮಾಡುತ್ತಿದ್ದಾರೆ. ಕೇವಲ 7 ಸೆಕೆಂಡಿನಲ್ಲಿ ಆನ್ ಲೈನ್ ಮೂಲಕ ನೀಡಿರುವ ಪಟ್ಟಿಯನ್ನು ನೀಡಿದರೆ ಯಾವ ರೀತಿ ಆಗಿದೆ ಎಂದು ತಿಳಿಯುತ್ತದೆ. ಅದರ ಬಗ್ಗೆ ತನಿಖೆ ಮಾಡಲಾಗುತ್ತಿದೆ ಎಂದರು.

ಎಲ್ಲಾ ಆಯಾಮಗಳಲ್ಲಿ ತನಿಖೆ

ಶಾಸಕ ರೇಣುಕಾಚಾರ್ಯ ಅವರ ಸಹೋದರನ  ನಿಗೂಢ ಸಾವಿಗೆ ಸಂಬಂಧಿಸಿದಂತೆ ಶಾಸಕರೊಂದಿಗೆ ಮಾತನಾಡಿದ್ದು,ಅವರ ಪ್ರಕಾರ ಏನು ನಡೆದಿದೆ ಎಂದು  ಮಾಹಿತಿಯನ್ನು ನೀಡಿ,  ಸೂಕ್ತ ನಿರ್ದೇಶನವನ್ನು ಐ.ಜಿ ಹಾಗೂ ಜಿಲ್ಲಾ ರಕ್ಷಣಾಧಿಕಾರಿಗಳಿಗೆ ನೀಡುವುದಾಗಿ ತಿಳಿಸಿದ್ದೇನೆ. ಮರಣೋತ್ತರ ಪರೀಕ್ಷೆಯಲ್ಲಿ ಬಹುತೇಕ ಸತ್ಯಾಂಶ ಹೊರಬರುತ್ತದೆ ನಂತರ ತನಿಖೆಯನ್ನು ಯಾವ ದಿಕ್ಕಿನಲ್ಲಿ ತೆಗೆದುಕೊಂಡು ಹೋಗಬೇಕೆಂದು ನಿರ್ಧರಿಸಲಾಗುತ್ತದೆ. ಹೀಗಾಗಿ ಎಲ್ಲಾ ಆಯಾಮಗಳಲ್ಲಿ ತನಿಖೆ ಮಾಡಲಾಗುವುದು ಎಂದರು.

ಬಳ್ಳಾರಿ ಹೋಮ್‌ ಟೈಲರಿಂಗ್‌ ಘಟಕಕ್ಕೆ ಭೇಟಿ ನೀಡಿದ ರಾಹುಲ್‌ ಗಾಂಧಿ
ಬಳ್ಳಾರಿ: ರಾಷ್ಟ್ರೀಯ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರು ಬಳ್ಳಾರಿಯ ಹೋಮ್ ಟೈಲರಿಂಗ್ ಘಟಕಕ್ಕೆ ಭೇಟಿ ನೀಡಿ, ತಯಾರಕರು, ಕಾರ್ಮಿಕರೊಂದಿಗೆ ಮಾತುಕತೆ ನಡೆಸಿದರು.

ಬಳ್ಳಾರಿಯಲ್ಲಿ ಭಾರತ ಐಕ್ಯತಾ ಯಾತ್ರೆ ಸಾಗುತ್ತಿರುವ ಹಿನ್ನೆಲೆಯಲ್ಲಿ, ಜಿಲ್ಲೆಯ ಹೋಮ್ ಟೈಲರಿಂಗ್ ಘಟಕಕ್ಕೆ ಭೇಟಿ ನೀಡಿದ ರಾಹುಲ್‌ ಗಾಂಧಿ ಅವರು, ಸ್ಥಳೀಯ ತಯಾರಕರು ಎದುರಿಸುತ್ತಿರುವ ಸವಾಲುಗಳ ಬಗ್ಗೆ ಮಾಹಿತಿ ಪಡೆದರು.

ಟೈಲರಿಂಗ್‌ ಘಟಕಗಳ ಕಾರ್ಮಿಕರು ಸರ್ಕಾರದ ಯಾವುದೇ ಸಹಾಯವಿಲ್ಲದೆ ಯಂತ್ರಗಳನ್ನು ಬಾಡಿಗೆಗೆ ಪಡೆಯುವುದರಿಂದ ಹೆಚ್ಚುವರಿ ಹೊರೆ ಅನುಭವಿಸುತ್ತಿದ್ದೇವೆ ಎಂದು ಅಳಲು ತೋಡಿಕೊಂಡರು. ಜಿಎಸ್‌ ಟಿ ಯಿಂದಾಗಿ ಹಲವಾರು ಘಟಕಗಳನ್ನು ಮುಚ್ಚಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 150 ಸ್ಥಾನ ಗೆಲ್ಲಲಿದೆ: ಡಿ.ಕೆ. ಶಿವಕುಮಾರ್
ಬಳ್ಳಾರಿ: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಸಮ್ಮಿಶ್ರ ಪಾಳುದಾರರ ಬೆಂಬಲವಿಲ್ಲದೆಯೂ ಕಾಂಗ್ರೆಸ್‌ ಪಕ್ಷ 150 ಸ್ಥಾನಗಳನ್ನು ಗೆಲ್ಲಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಹೇಳಿದರು.

ಬಳ್ಳಾರಿಯಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು, ಯಾರ ಬೆಂಬಲವಿಲ್ಲದೇ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ 150 ಸ್ಥಾನಗಳನ್ನು ಗೆಲ್ಲುತ್ತೆವೆ. ಇದಕ್ಕೆ ಕರ್ನಾಟಕದ ಜನತೆ 150 ಸ್ಥಾನಗಳ ಸ್ಪಷ್ಟ ಜನಾದೇಶ ನೀಡಲಿದ್ದಾರೆ ಎಂದು ಹೇಳಿದರು.

ಮುಂದುವರೆದು ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರದ ಅಡಿಯಲ್ಲಿ ಆಪಾದಿತ ಭ್ರಷ್ಟಾಚಾರದ ವಿರುದ್ಧ ಕಾಂಗ್ರೆಸ್‌ ಅಕ್ರಮಣಕಾರಿ ಅಭಿಯಾನವನ್ನು ಕೈಗೊಂಡಿದ್ದು, ಬೊಮ್ಮಾಯಿಯವರ ವಿರುದ್ಧ ಪೋಸ್ಟ್‌ರ್‌ ಮತ್ತು ಬ್ಯಾನರ್‌ಗಳೊಂದಿಗೆ ʼಪೇ ಸಿಎಂʼ ಅಭಿಯಾನವನ್ನು ಹೆಚ್ಚಿಸಿದೆ ಎಂದು ಡಿ.ಕೆ.ಶಿ ಹೇಳಿದರು.

ಆರ್‌ಎಸ್‌ಎಸ್ ಬೆಂಬಲಿತ ಬಿಜೆಪಿ ಸರ್ಕಾರ ಕೇಂದ್ರ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡಿದೆ: ಮಲ್ಲಿಕಾರ್ಜುನ ಖರ್ಗೆ
ಬಳ್ಳಾರಿ: ಅಖಿಲ ಭಾರತ ಕಾಂಗ್ರೆಸ್ ಸಮಿತಿ(ಎಐಸಿಸಿ) ಅಧ್ಯಕ್ಷ ಸ್ಥಾನದ ಚುನಾವಣೆಗೆ ಸ್ಪರ್ಧಿಸಿರುವ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು, ಕೇಂದ್ರದ ಬಿಜೆಪಿ ಸರ್ಕಾರವನ್ನು ಬೆಂಬಲಿಸುವ ರಾಷ್ಟ್ರೀಯ ಸ್ವಯಂಸೇವಕ ಸಂಘವು (ಆರ್‌ಎಸ್‌ಎಸ್‌) ಸಂವಿಧಾನದ ಪ್ರಕಾರ ಕಾರ್ಯನಿರ್ವಹಿಸುತ್ತಿಲ್ಲ ಮತ್ತು ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಆರೋಪಿಸಿದರು.

ಅಕ್ಟೋಬರ್ 17 ರಂದು ನಡೆಯಲಿರುವ ಚುನಾವಣೆಗೆ ಮತ ಯಾಚಿಸಲು ಬಳ್ಳಾರಿಯ ಕಾಂಗ್ರೆಸ್‌ ಪಕ್ಷದ ಕಚೇರಿಗೆ ಆಗಮಿಸಿದ್ದ ಖರ್ಗೆ ಅವರು, ನರೇಂದ್ರ ಮೋದಿ ಸರ್ಕಾರಕ್ಕೆ ಪ್ರಜಾಪ್ರಭುತ್ವದ ಬಗ್ಗೆ ಗೌರವವಿಲ್ಲ ಮತ್ತು ಇದು ಕರ್ನಾಟಕ, ಮಧ್ಯಪ್ರದೇಶ, ಗೋವಾ, ಮಹಾರಾಷ್ಟ್ರ ಮತ್ತು ಕಾಂಗ್ರೆಸ್ ಆಡಳಿತದ ಸರ್ಕಾರಗಳನ್ನು ಅಸ್ಥಿರಗೊಳಿಸಿದೆ ಎಂದರು.

ಪ್ರಜಾಪ್ರಭುತ್ವವನ್ನು ಬಲಪಡಿಸಲು ಮತ್ತು ದೇಶದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಹೋರಾಡಲು ಪ್ರಬಲ ಪ್ರತಿಪಕ್ಷದ ಅಗತ್ಯವಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಭಾರತ ಐಕ್ಯತಾ ಯಾತ್ರೆ ವೇಳೆ ವಿದ್ಯುತ್ ಸ್ಪರ್ಶ: 4 ಮಂದಿ ಆಸ್ಪತ್ರೆಗೆ ದಾಖಲು
ಬಳ್ಳಾರಿ: ರಾಜ್ಯದಲ್ಲಿ ಭಾರತ ಐಕ್ಯತಾ ಯಾತ್ರೆಯು ಬಳ್ಳಾರಿಯಲ್ಲಿ ಸಾಗುತ್ತಿದ್ದು, ಯಾತ್ರೆಯ ವೇಳೆ ನಾಲ್ವರಿಗೆ ವಿದ್ಯುತ್‌ ಸ್ಪರ್ಶಿಸಿರುವ ಘಟನೆ ನಡೆದಿದೆ.

ಮಾಹಿತಿ ಪ್ರಕಾರ ಯಾತ್ರೆಯಲ್ಲಿ ಭಾಗವಹಿಸಿದ್ದವರೊಬ್ಬರು ಕಾಂಗ್ರೆಸ್‌ ಬಾವುಟವಿರುವ ಕಬ್ಬಿಣದ ರಾಡ್‌ ಇಡಿದು ಸಾಗುತ್ತಿರುವ ವೇಳೆ, ಬಾವುಟ ಹಿಡಿದ ವ್ಯಕ್ತಿಯನ್ನು ಸೇರಿದಂತೆ ನಾಲ್ವರಿಗೆ ವಿದ್ಯುತ್‌ ಸ್ಪರ್ಶಿಸಿದೆ ಎಂದು ತಿಳಿದುಬಂದಿದೆ.

ಈ ಕುರಿತು ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಮಾಹಿತಿ ನೀಡಿದ್ದು, ವಿದ್ಯುತ್ ಸ್ಪರ್ಶಿಸಿದ ಸಂತ್ರಸ್ತರಿಗೆ ಸ್ಥಳದಲ್ಲಿ ಆಂಬ್ಯುಲೆನ್ಸ್‌ನಲ್ಲಿ ವೈದ್ಯರು ಚಿಕಿತ್ಸೆ ನೀಡಿದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿಸಿದರು.

40% ಆಡಳಿತದಲ್ಲಿ ದುಡ್ಡಿದ್ರೆ ಸರ್ಕಾರಿ ಹುದ್ದೆ ಇಲ್ಲದಿದ್ದರೆ ನಿರುದ್ಯೋಗ: ರಾಹುಲ್‌ ಗಾಂಧಿ
ಬಳ್ಳಾರಿ: 40% ಆಡಳಿತದಿಂದ ರಾಜ್ಯದಲ್ಲಿ ಹಣ ನೀಡಿದರೆ ಸರ್ಕಾರಿ ಹುದ್ದೆ, ಹಣವಿಲ್ಲದಿದ್ದರೆ ಜೀವನಪೂರ್ತಿ ನಿರುದ್ಯೋಗಿಗಳಾಗಿರಬೇಕು ಎಂದು ರಾಷ್ಟ್ರೀಯ ಕಾಂಗ್ರೆಸ್‌ ಪಕ್ಷದ ನಾಯಕ ರಾಹುಲ್‌ ಗಾಂಧಿ ಟೀಕಿಸಿದರು.

ದೇಶದ 45 ವರ್ಷಗಳ ಇತಿಹಾಸದಲ್ಲೇ ಗರಿಷ್ಠ ನಿರುದ್ಯೋಗವಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುವುದಾಗಿ ಹೇಳಿದ್ದರು. ಆದರೆ ಇದ್ದ ಉದ್ಯೋಗಗಳೂ ನಾಶವಾಗಿವೆ! ಹಾಗೂ ನೋಟು ರದ್ದತಿ, ಜಿಎಸ್ ಟಿ, ಕೋವಿಡ್ ಸಮಯದಲ್ಲಿನ ನೀತಿಯಿಂದ 12.5 ಕೋಟಿ ಜನ ನಿರುದ್ಯೋಗಿಗಳಾಗಿದ್ದಾರೆ ಎಂದು ಹಾಹುಲ್‌ ಗಾಂಧಿಯವರು ಬೇಸರ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಪೊಲೀಸ್ ಇಲಾಖೆ ಸೇರಬೇಕಾದರೆ ₹80 ಲಕ್ಷ ಲಂಚ ನೀಡಬೇಕು.  ಬಿಜೆಪಿ ಸರ್ಕಾರದ ಆಡಳಿತದಲ್ಲಿ ಹಣವಿದ್ದರೆ ಸರ್ಕಾರಿ ಹುದ್ದೆ ಖರೀದಿಸಬಹುದು. ಹಣವಿಲ್ಲದಿದ್ದರೆ ಜೀವನಪೂರ್ತಿ ನಿರುದ್ಯೋಗಿಗಳಾಗಿರಬೇಕು. ಇದಕ್ಕಾಗಿ ರಾಜ್ಯ ಸರ್ಕಾರಕ್ಕೆ 40% ಕಮಿಷನ್ ಸರ್ಕಾರ ಎಂದೇ ಬಿರುದು ನೀಡಲಾಗಿದೆ! ಎಂದು ವ್ಯಂಗ್ಯವಾಡಿದರು.

ರಾಹುಲ್ ಗಾಂಧಿ ಅವರ ಪಾದಯಾತ್ರೆ ಕಂಡು ವಿಶ್ವಗುರು ತಲೆ ಕೆಡಿಸಿಕೊಂಡಿದ್ದಾರೆ : ಬಿ.ಕೆ. ಹರಿಪ್ರಸಾದ್
2014ರಲ್ಲಿ ವಿಶ್ವಗುರು ಕಾಂಗ್ರೆಸ್ ಮುಕ್ತ ಭಾರತ ಎಂದು ಪ್ರಚಾರ ಘೋಷಣೆ ಮಾಡಿದ್ದರು. ರಾಹುಲ್ ಗಾಂಧಿ ಅವರು ಕನ್ಯಾಕುಮಾರಿಯಲ್ಲಿ ಆರಂಭಿಸಿದ ಈ ಯಾತ್ರೆಯಲ್ಲಿ ನಿತ್ಯ ಲಕ್ಷಾಂತರ ಮಂದಿ ಉತ್ಸಾಹ ನೀಡುತ್ತಿರುವುದನ್ನು ಕಂಡು ವಿಶ್ವಗುರು ತಲೆ ಕೆಡಿಸಿಕೊಂಡಿದ್ದಾರೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ಟೀಕಿಸಿದ್ದಾರೆ.

ಬಳ್ಳಾರಿಯಲ್ಲಿ ಶನಿವಾರ ನಡೆದ ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡಿದ ಅವರು, ಇಂದು ಭಾರತ ಜೋಡೋ ಯಾತ್ರೆ 1000 ಕಿ.ಮೀ ದೂರ ಕ್ರಮಿಸಿ ಬಳ್ಳಾರಿಗೆ ಬಂದಿದೆ. ಕರ್ನಾಟಕ ರಾಜ್ಯದಲ್ಲಿ ಸೆ.30ರಂದು ಆರಂಭವಾದ ಈ ಯಾತ್ರೆ 429 ಕಿ.ಮೀ ಪೂರ್ಣಗೊಳಿಸಿ ಇಂದು ರಾಹುಲ್ ಗಾಂಧಿ ಅವರು ನಿಮ್ಮನ್ನು ಉದ್ದೇಶಿಸಿ ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡಲಿದ್ದಾರೆ. ರಾಹುಲ್ ಗಾಂಧಿ ಅವರು ರಾಜಕೀಯ ದುರುದ್ದೇಶಕ್ಕೆ ಈ ಪಾದಯಾತ್ರೆ ಮಾಡುತ್ತಿಲ್ಲ. ದೇಶದ ತ್ರಿವರ್ಣ ಧ್ವಜ, ಅಂಬೇಡ್ಕರ್ ಅವರ ಸಂವಿಧಾನ, ನಮ್ಮ ಹಕ್ಕು ಪ್ರತಿಪಾದಿಸುವ ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳಿಸಲು ನಮ್ಮೆಲ್ಲರ ನೆಚ್ಚಿನ ನಾಯಕ ರಾಹುಲ್ ಗಾಂಧಿ ಅವರು ಪಾದಯಾತ್ರೆ ಹಮ್ಮಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಪಾದಯಾತ್ರೆ ಮೂಲ ಉದ್ದೇಶ ಸಂಕ್ಷಿಪ್ತವಾಗಿ ಹೇಳುವುದಾದರೆ, ಭಾರತ ದೇಶವನ್ನು ದ್ವೇಷಮುಕ್ತ, ಹಿಂಸೆ ಮುಕ್ತ, ನಿರುದ್ಯೋಗ ಮುಕ್ತ, ಪ್ರಜಾಪ್ರಭುತ್ವ ರಕ್ಷಿಸುವ, ಬಡಮುಕ್ತ ಭಾರತ ಉದ್ದೇಶದಿಂದ ಈ ಯಾತ್ರೆ ಆರಂಭವಾಗಿದೆ. ಈ ಯಾತ್ರೆ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ 3570 ಕಿ.ಮೀ ಯಾತ್ರೆಯಾಗಿದೆ. ಭಾರತ ಯಾತ್ರೆ, ರಾಜ್ಯದ ಪ್ರದೇಶ ಯಾತ್ರಿ, ಅಥಿಥಿ ತ್ರಿಗಳಿದ್ದಾರೆ. ನಮ್ಮ ರಾಜ್ಯದಲ್ಲಿ ನಿತ್ಯ 1 ಲಕ್ಷ ಜನ ಹೆಜ್ಜೆ ಹಾಕಿದ್ದು, ವಿಶ್ವದಲ್ಲಿ ಇದು ಐತಿಹಾಸಿಕ ಯಾತ್ರೆ. ಸ್ವಾತಂತ್ರ್ಯ ಪೂರ್ವದಲ್ಲಿ ಗಾಂಧಿ ನೇತೃತ್ವದಲ್ಲಿ ಯಾತ್ರೆ ನಡೆದಿದ್ದು, ಸ್ವಾತಂತ್ರ್ಯದ ನಂತರ ನಭೂತೋ ನಭವಿಷ್ಯತಿ ಎಂಬ ರೀತಿಯಲ್ಲಿ ಈ ಯಾತ್ರೆ ನಡೆಯುತ್ತಿದೆ ಎಂದಿದ್ದಾರೆ.

ದೇಶದ ರಾಷ್ಟ್ರಧ್ವಜ, ರಾಷ್ಟ್ರಗೀತೆ, ರಾಷ್ಟ್ರಲಾಂಛನ, ಸಂವಿಧಾನ ಇವೆಲ್ಲವಕ್ಕೂ ಆರ್,ಎಸ್‌,ಎಸ್‌ ಮತ್ತು ಸಂಘ ಪರಿವಾರ ವಿರೋಧ ಮಾಡುತ್ತಿದೆ. ಇದನ್ನು ಬಹಿರಂಗವಾಗಿ ಮತ್ತು ಆಡಳಿತಾತ್ಮಕವಾಗಿ ಅವರು ವಿರೋಧ ಮಾಡುತ್ತಿದ್ದಾರೆ, ಇದರಿಂದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಅಪಾಯದಲ್ಲಿದೆ. ಇದನ್ನು ಉಳಿಸುವುದು ನಮ್ಮೆಲ್ಲರ ಜವಾಬ್ದಾರಿ. ಇಂದು ನರೇಂದ್ರ ಮೋದಿ ಅವರು ಪ್ರಧಾನಿಯಾಗಿರುವುದು, ನಾನು ಮುಖ್ಯಮಂತ್ರಿಯಾಗಿರುವುದು ಕೂಡ ಬಾಬಾ ಸಾಹೇಬರು ನೀಡಿರುವ ಸಂವಿಧಾನದಿಂದ. ಇದನ್ನೇ ನಾಶ ಮಾಡಲು ಹೊರಟಿದ್ದೀರಲ್ವಾ ನಿಮಗೆ ನಾಚಿಕೆಯಾಗಲ್ವಾ?  ಎಂದು ಪ್ರಶ್ನಿಸಿದ್ದಾರೆ.

ನಾನು ರಾಹುಲ್‌ ಗಾಂಧಿ ಅವರಿಗೆ ಭಾರತ ಐಕ್ಯತಾ ಯಾತ್ರೆ ಎಂಬ ದೊಡ್ಡ ಸಾಹಸಕ್ಕೆ ಕೈ ಹಾಕಿರುವುದಕ್ಕಾಗಿ ತುಂಬುಹೃದಯದಿಂದ ನಮಸ್ಕಾರ ಮಾಡುತ್ತೇನೆ, ನಾವೆಲ್ಲರೂ ರಾಹುಲ್‌ ಗಾಂಧಿ ಅವರ ಹೆಗಲಿಗೆ ಹೆಗಲು ಕೊಟ್ಟು ದುಡಿಯೋಣ, ಕರ್ನಾಟಕದಲ್ಲಿ ಪಾದಯಾತ್ರೆಯು ನಮ್ಮ ಕಾರ್ಯಕರ್ತರ ಉತ್ಸಾಹವನ್ನು ಇಮ್ಮಡಿಗೊಳಿಸಿದೆ. ಮುಂದಿನ ಚುನಾವಣೆಯಲ್ಲಿ ರಾಜ್ಯದ ಜನ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರುತ್ತಾರೆ ಎಂಬ ಭರವಸೆಯನ್ನು ನಾನು ರಾಹುಲ್‌ ಗಾಂಧಿ ಅವರಿಗೆ ನೀಡಲು ಬಯಸುತ್ತೇನೆ. ಇದು ನೂರಕ್ಕೆ ನೂರರಷ್ಟು ಸತ್ಯ.

ರಾಹುಲ್ ಗಾಂಧಿ ಅವರ ಜತೆ ಫೋಟೋ ತೆಗೆಸಿಕೊಳ್ಳಲು ಸಾವಿರಾರು ಜನ ಪ್ರಯತ್ನಿಸಿದ್ದು, ಅವರಿಗೆ ಭದ್ರತೆ ಕಾರಣದಿಂದ ಅವಕಾಶ ನೀಡಲಿಲ್ಲ. ಈ ಯಾತ್ರೆಯಿಂದ ಬಿಜೆಪಿ ನಿದ್ದೆಗೆಟ್ಟು ಸುಳ್ಳು ಜಾಹೀರಾತು ನೀಡುತ್ತಿದ್ದಾರೆ. ಈ ಯಾತ್ರೆಗೆ ಬೆಂಬಲ ನೀಡಿರುವ ಎಲ್ಲರಿಗೂ ಧನ್ಯವಾದಗಳು ಎಂದಿದ್ದಾರೆ.

ಅಕ್ರಮ ಗಣಿಗಾರಿಕೆಯಲ್ಲಿ ಲೂಟಿ ಹೊಡೆದಿದ್ದು ನಿಮ್ಮ ಸಾಧನೆ: ರಾಮುಲುಗೆ ಬಳ್ಳಾರಿಯಲ್ಲೇ ಟಾಂಗ್‌ ಕೊಟ್ಟ ಸಿದ್ದರಾಮಯ್ಯ
ಕಾಂಗ್ರೆಸ್‌ ಪಕ್ಷ ಮತ್ತು ನೆಹರು, ಇಂದಿರಾ ಗಾಂಧಿ, ಸೋನಿಯಾ ಗಾಂಧಿ ಅವರು ಈ ದೇಶಕ್ಕಾಗಿ ಏನು ಮಾಡಿಲ್ಲ ಎಂದಿದ್ದಾರೆ ಎಂದು ಬೆಳಿಗ್ಗೆ ಟ್ವೀಟ್‌ ಮೂಲಕ ಪ್ರಶ್ನಿಸಿದ್ದ ಸಚಿವ ರಾಮುಲುಗೆ ಬಳ್ಳಾರಿ ನೆಲದಲ್ಲೇ ಉತ್ತರ ಕೊಟ್ಟ ಸಿದ್ದರಾಮಯ್ಯ, 1977ರಲ್ಲಿ ವಿಜಯನಗರ ಉಕ್ಕಿನ ಕಾರ್ಖಾನೆಯನ್ನು ಸ್ಥಾಪನೆ ಮಾಡಿದ್ದು ಯಾರು ಗೊತ್ತಾ? ಸೋನಿಯಾ ಗಾಂಧಿ ಅವರು 1999ರಲ್ಲಿ ಬಳ್ಳಾರಿಯಿಂದ ಸ್ಪರ್ಧೆ ಮಾಡಿ ಲೋಕಸಭಾ ಸದಸ್ಯರಾದ ಮೇಲೆ 3,300 ಕೋಟಿ ರೂಪಾಯಿಯ ಕುಡತಿನಿ ವಿದ್ಯುತ್‌ ಯೋಜನೆ ಜಾರಿ ಮಾಡಿದ್ದರು. ಈಗ ಅವರು ಉತ್ತರ ಕೊಡಲಿ, ಬಳ್ಳಾರಿಯ ಅಭಿವೃದ್ಧಿಗೆ ಶ್ರೀರಾಮುಲು ಅಥವಾ ಬಿಜೆಪಿಯ ಕೊಡುಗೆ ಏನು? ಅಕ್ರಮ ಗಣಿಗಾರಿಕೆಯಲ್ಲಿ ಲೂಟಿ ಹೊಡೆದಿದ್ದು ನಿಮ್ಮ ಸಾಧನೆ. ಎಂದು ಟೀಕಿಸಿದ್ದಾರೆ.

ಬಳ್ಳಾರಿಯಲ್ಲಿ ಇಂದು ನಡೆದ ಭಾರತ ಐಕ್ಯತಾ ಯಾತ್ರೆಯ ಬೃಹತ್‌ ಸಮಾವೇಶದಲ್ಲಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ   ಮಾತನಾಡಿ,  ನಾನು ಶ್ರೀರಾಮುಲು ಅವರಿಗೆ ಇತಿಹಾಸ ನೆನಪಿಸಲು ಬಯಸುತ್ತೇನೆ. 1977ರಲ್ಲಿ ವಿಜಯನಗರ ಉಕ್ಕಿನ ಕಾರ್ಖಾನೆಯನ್ನು ಸ್ಥಾಪನೆ ಮಾಡಿದ್ದು ಯಾರು ಗೊತ್ತಾ? ಇಂದು ಸಾವಿರಾರು ಜನರಿಗೆ ಉದ್ಯೋಗ, ಆ ಮೂಲಕ ಅನ್ನಕ್ಕೆ ದಾರಿ ಆಗಿದ್ದರೆ ಅದಕ್ಕೆ ಕಾರಣ ಶ್ರೀಮತಿ ಇಂದಿರಾ ಗಾಂಧಿ ಅವರು. ಸೋನಿಯಾ ಗಾಂಧಿ ಅವರು 1999ರಲ್ಲಿ ಬಳ್ಳಾರಿಯಿಂದ ಸ್ಪರ್ಧೆ ಮಾಡಿ ಲೋಕಸಭಾ ಸದಸ್ಯರಾದ ಮೇಲೆ 3,300 ಕೋಟಿ ರೂಪಾಯಿಯ ಕುಡತಿನಿ ವಿದ್ಯುತ್‌ ಯೋಜನೆ ಜಾರಿ ಮಾಡಿದ್ದರು. ಈಗ ಅವರು ಉತ್ತರ ಕೊಡಲಿ, ಬಳ್ಳಾರಿಯ ಅಭಿವೃದ್ಧಿಗೆ ಶ್ರೀರಾಮುಲು ಅಥವಾ ಬಿಜೆಪಿಯ ಕೊಡುಗೆ ಏನು? ನರೇಂದ್ರ ಮೋದಿ ಅವರು ಪ್ರಧಾನಿಯಾಗಿ 8 ವರ್ಷಗಳು ಕಳೆದಿದೆ, ಬಳ್ಳಾರಿಗೆ ಒಂದೇ ಒಂದು ರೂಪಾಯಿ ಉಪಯೋಗ ಆಗಿಲ್ಲ. ಶ್ರೀರಾಮುಲು ಚರ್ಚೆಗೆ ತಯಾರಾಗಿದ್ದಾರಂತೆ ಆದರೆ ಅವರಂಥ ಪೆದ್ದನ ಜೊತೆ ಚರ್ಚೆ ಮಾಡುವ ಹುಂಬತನದ ಕೆಲಸ ನಾವು ಮಾಡಲ್ಲ ಎಂದು ಹೇಳಿದ್ದಾರೆ.

ಬಳ್ಳಾರಿಯ ಅಕ್ರಮ ಗಣಿಗಾರಿಕೆಯಲ್ಲಿ ಲೂಟಿ ಹೊಡೆದಿದ್ದು ನಿಮ್ಮ ಸಾಧನೆ. ಇದಕ್ಕೆ ಕುಮ್ಮಕ್ಕು ಕೊಟ್ಟವರು ಯಾರು? ಈ ಅಕ್ರಮಗಳ ವಿರುದ್ಧ ಬೆಂಗಳೂರಿಂದ ಬಳ್ಳಾರಿಗೆ ನಾವು ಪಾದಯಾತ್ರೆ ಮಾಡಿದ ಮೇಲೆ ಜನಾರ್ಧನ ರೆಡ್ಡಿ ಜೈಲು ಸೇರಿದ್ದು. ಇಂದು ಕೂಡ ಅವರ ವಿರುದ್ಧ ಅನೇಕ ಕ್ರಿಮಿನಲ್‌ ಮೊಕದ್ದಮೆಗಳಿವೆ. ಕಾಂಗ್ರೆಸ್‌ ವಿರುದ್ಧ ಮಾತನಾಡುವ ನೈತಿಕತೆ ರಾಮುಲು ಅವರಿಗೆ ಇಲ್ಲ. ಒಂದು ವೇಳೆ ಕಾಂಗ್ರೆಸ್‌ ಪಕ್ಷ ಬಳ್ಳಾರಿಗೆ ಮಾಡಿರುವ ಅಭಿವೃದ್ಧಿ ಕೆಲಸಗಳ ಬಗ್ಗೆ ಚರ್ಚೆ ಮಾಡಲೇಬೇಕು ಎಂದಿದ್ದರೆ ನಮ್ಮ ಪಕ್ಷದ ನಾಯಕರಾದ ಉಗ್ರಪ್ಪನವರನ್ನು ಕಳಿಸಿಕೊಡ್ತೇವೆ ತಯಾರಾಗಿ ಎಂದು ಸವಾಲು ಎಸೆದಿದ್ದಾರೆ.

ಇಂದು ರಾಜ್ಯದ ಬಿಜೆಪಿ ಸರ್ಕಾರವನ್ನು 40% ಕಮಿಷನ್‌ ಸರ್ಕಾರ ಎಂದು ಕರೆಯುತ್ತಿದ್ದಾರೆ. ಈ ಮಾತನ್ನು ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣನವರು ಪ್ರಧಾನಿಗಳಿಗೆ ಪತ್ರ ಬರೆದು ಇಲ್ಲಿನ ಸರ್ಕಾರ ಪ್ರತಿ ಕಾಮಗಾರಿಗೆ 40% ಕಮಿಷನ್‌ ಕೇಳುತ್ತಿದೆ ಎಂದು ಆರೋಪ ಮಾಡಿದ್ದಾರೆ. ಪತ್ರ ಬರೆದು 1 ವರ್ಷ ಆಯಿತು, ನರೇಂದ್ರ ಮೋದಿ ಅವರು ಈ ವರೆಗೆ ಯಾವ ಕ್ರಮ ಕೈಗೊಂಡಿಲ್ಲ. ನಾ ಖಾವೂಂಗ, ನಾ ಖಾನೆದೂಂಗ ಎನ್ನುವ ಮೋದಿ ಅವರು ಈಗೆಲ್ಲಿದ್ದಾರೆ? ಯಾಕೆ ಕ್ರಮ ಕೈಗೊಂಡಿಲ್ಲ? ಎಂದು ಪ್ರಶ್ನಿಸಿದ್ದಾರೆ.

ರಾಹುಲ್‌ ಗಾಂಧಿಯವರು ಭಾರತ ಐಕ್ಯತಾ ಯಾತ್ರೆಯನ್ನು ಕೈಗೊಂಡಿರುವುದು ಮುಂದಿನ ಲೋಕಸಭಾ ಚುನಾವಣೆಯನ್ನೋ ಅಥವಾ ರಾಜ್ಯದ ಮುಂದಿನ ವಿಧಾನಸಭಾ ಚುನಾವಣೆಯನ್ನು ಗೆಲ್ಲುವ ಉದ್ದೇಶದಿಂದ ಅಲ್ಲ. ದೇಶದ ಇತಿಹಾಸದಲ್ಲಿ ಇದೊಂದು ಐತಿಹಾಸಿಕ ಪಾದಯಾತ್ರೆ. ಮಹತ್ಮಾ ಗಾಂಧಿ, ವಿನೋಬಾ ಭಾವೆ, ಚಂದ್ರಶೇಖರ್‌ ಅವರು ಪಾದಯಾತ್ರೆಯನ್ನು ಮಾಡಿದ್ದಾರೆ, ಆದರೆ ರಾಹುಲ್‌ ಗಾಂಧಿ ಅವರು ಏಕಕಾಲದಲ್ಲಿ ಸುಮಾರು 3,570 ಕಿ.ಮೀ ಕನ್ಯಾಕುಮಾರಿಯಿಂದ ಕಾಶ್ಮೀರದ ವರೆಗೆ ಇಷ್ಟೊಂದು ಉದ್ದನೆಯ ಪ್ರವಾಸ ಕೈಗೊಂಡಿರುವುದು ಇದೇ ಮೊದಲು. ಈಗಾಗಲೇ 1,000 ಕಿ.ಮೀ ನಡಿಗೆಯನ್ನು ಯಶಸ್ವಿಯಾಗಿ ಮುಗಿಸಿದ್ದಾರೆ. ಕರ್ನಾಟಕದಲ್ಲಿ ಪಾದಯಾತ್ರೆ ಮುಗಿದ ಮೇಲೆ ಆಂದ್ರ ಪ್ರದೇಶ, ತೆಲಂಗಾಣ, ಮಹಾರಾಷ್ಟ್ರ ಹೀಗೆ 12 ರಾಜ್ಯ ಹಾಗೂ 2 ಕೇಂದ್ರಾಡಳಿತ ಪ್ರದೇಶಗಳಲ್ಲಿ ಪಾದಯಾತ್ರೆ ಸಾಗಲಿದೆ ಎಂದಿದ್ದಾರೆ.

ಈ ಪಾದಯಾತ್ರೆಯ ಉದ್ದೇಶವನ್ನು ಅನೇಕ ಬಾರಿ ರಾಹುಲ್‌ ಗಾಂಧಿ ಅವರು ಸ್ಪಷ್ಟವಾಗಿ ಹೇಳಿದ್ದಾರೆ. ಇಂದು ದೇಶದಲ್ಲಿ ಜಾತಿ, ಧರ್ಮ, ವರ್ಗ, ಭಾಷೆಗಳ ಆಧಾರದ ಮೇಲೆ ಜನರನ್ನು ಒಡೆಯುವ ಕೆಲಸ ನಡೆಯುತ್ತಿದೆ, ಜನರ ಮನಸಲ್ಲಿ ವಿಷ ಹಿಂಡುವ ಕೆಲಸವನ್ನು ಬಿಜೆಪಿಯವರು ಮಾಡುತ್ತಿದ್ದಾರೆ. ನರೇಂದ್ರ ಮೋದಿ ಅವರು ಪ್ರಧಾನಿಯಾದ ಮೇಲೆ ಈ ಮನುಷ್ಯ ವಿರೋಧಿ ಕೆಲಸ ಹೆಚ್ಚಾಗಿ ಆಗುತ್ತಿದೆ. ಎಲ್ಲಾ ಕಡೆ ದ್ವೇಷದ ರಾಜಕಾರಣ, ಹಿಂಸೆಯ ರಾಜಕಾರಣ ಮಾಡಲು ಆರಂಭಿಸಿರುವುದರಿಂದ ದಲಿರು, ಮಹಿಳೆಯರು, ಶೋಷಿತರು, ಅಲ್ಪಸಂಖ್ಯಾತ ಜನ ಭಯದಲ್ಲಿ ಬದುಕುವಂತಾಗಿದೆ. ಕುವೆಂಪು ಅವರು ಭಾರತ ಸರ್ವಜನಾಂಗದ ಶಾಂತಿಯ ತೋಟ ಆಗಬೇಕು ಎಂದು ಹೇಳಿದ್ದರು, ಇಲ್ಲಿನ ಜನ ಪ್ರೀತಿ, ವಿಶ್ವಾಸ, ಸೌಹಾರ್ದತೆಯಿಂದ ಬದುಕುವ ಪರಿಸ್ಥಿತಿ ನಿರ್ಮಾಣ ಆಗಬೇಕು ಎಂದು ಅವರು ಹೇಳಿದ್ದಾರೆ. ಆದರೆ ಆರ್‌,ಎಸ್‌,ಎಸ್‌ ಹಾಗೂ ಸಂಘ ಪರಿವಾರ ಧರ್ಮ ರಾಜಕಾರಣ ಮಾಡಿ ದೇಶ ಒಡೆಯುತ್ತಿದೆ ಎಂದು ಗುಡುಗಿದ್ದಾರೆ.

ಬಿಜೆಪಿ ಅವರು ರಾಹುಲ್‌ ಗಾಂಧಿ ಅವರ ಪಾದಯಾತ್ರೆಯನ್ನು ಲಘುವಾಗಿ ಟೀಕೆ ಮಾಡುತ್ತಿದ್ದಾರೆ. ರಾಹುಲ್‌ ಗಾಂಧಿ ಅವರ ಕುಟುಂಬ ದೇಶಕ್ಕಾಗಿ ತ್ಯಾಗ, ಬಲಿದಾನವನ್ನು ಮಾಡಿದೆ. ಈಗ ದೇಶಕ್ಕಾಗಿ ನಿಮ್ಮ ಕೊಡುಗೆ ಏನು ಎಂದು ಅಮಿತ್‌ ಶಾ ಹಾಗೂ ನರೇಂದ್ರ ಮೋದಿ ಅವರನ್ನು ನಾವು ಕೇಳಬೇಕಾಗಿದೆ. ಕಾಂಗ್ರೆಸ್‌ ಪಕ್ಷ ಹೋರಾಟ ಮಾಡಿ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿದೆ. ಮಹಾತ್ಮ ಗಾಂಧಿ, ನೆಹರು ಆದಿಯಾಗಿ ನಮ್ಮ ಪಕ್ಷದ ಅನೇಕರು ತ್ಯಾಗ ಮಾಡಿದ್ದಾರೆ, ಹುತಾತ್ಮರಾಗಿದ್ದಾರೆ. 1925ರಲ್ಲಿ ಆರಂಭವಾದ ಆರ್‌,ಎಸ್‌,ಎಸ್‌ ನವರಲ್ಲಿ ಈ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಒಬ್ಬ ವ್ಯಕ್ತಿ ಇದ್ದಾರ? ಕಾಂಗ್ರೆಸ್‌ ಪಕ್ಷ ತಂದು ಕೊಟ್ಟ ಸ್ವಾತಂತ್ರ್ಯವನ್ನು ಬಿಜೆಪಿಯವರು ಅನುಭವಿಸುತ್ತಿದ್ದಾರೆ.

ರಾಹುಲ್‌ ಗಾಂಧಿ ಅವರು ಪಾದಯಾತ್ರೆ ಆರಂಭ ಮಾಡಿದ ಮೇಲೆ ಬಿಜೆಪಿ ಈಗ ಜನಸಂಕಲ್ಪ ಯಾತ್ರೆ ಹೊರಟಿದೆ. ಆದರೆ 2023ಕ್ಕೆ ಬಿಜೆಪಿಯನ್ನು ಕಿತ್ತೆಸೆದು ಮತ್ತೆ ಕಾಂಗ್ರೆಸ್‌ ಸರ್ಕಾರವನ್ನು ಸ್ಥಾಪನೆ ಮಾಡಬೇಕು ಎಂದು ರಾಜ್ಯದ ಜನ ಸಂಕಲ್ಪ ಮಾಡಿದ್ದಾರೆ. ರಾಹುಲ್‌ ಗಾಂಧಿ ಅವರ ಪಾದಯಾತ್ರೆಗೆ ವ್ಯಕ್ತವಾಗುತ್ತಿರುವ ಅಭೂತಪೂರ್ವ ಸ್ಪಂದನೆ ಇಂದ ಬಿಜೆಪಿಗೆ ನಡುಕ ಹುಟ್ಟಿದೆ. ಅದೇ ಕಾರಣಕ್ಕೆ ಬಾಯಿಗೆ ಬಂದಂತೆ ಮಾತನಾಡಲು ಆರಂಭ ಮಾಡಿದ್ದಾರೆ.

ರಾಹುಲ್‌ ಗಾಂಧಿ ಅವರು ನನಗೆ 5 ವರ್ಷ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸುವ ಅವಕಾಶ ಕೊಟ್ಟಿದ್ದರು. ನಮ್ಮ ಸರ್ಕಾರ ನುಡಿದಂತೆ ನಡೆದಿದೆ. ನಾವು ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೇವೆ ಮತ್ತು ಇದರ ಜೊತೆಗೆ ಹೆಚ್ಚುವರಿಯಾಗಿ 30 ಕಾರ್ಯಕ್ರಮಗಳನ್ನು ಜಾರಿ ಮಾಡಿದ್ದೆವು. ಬಿಜೆಪಿ 2018ರಲ್ಲಿ ನೀಡಿದ್ದ ಚುನಾವಣಾ ಪ್ರಣಾಳಿಕೆಯ ಭರವಸೆಗಳಲ್ಲಿ 10% ಭರವಸೆಗಳನ್ನು ಕೂಡ ಈಡೇರಿಸಿಲ್ಲ. ನಾಚಿಕೆಯಾಗಬೇಕು ಬಿಜೆಪಿ ನಾಯಕರಿಗೆ. ಈ ಸತ್ಯ ಜನರಿಗೆ ಗೊತ್ತಾಗಬೇಕೋ? ಬೇಡವೋ? ಒಡೆದಿರುವ ಜನರ ಮನಸುಗಳನ್ನು ಒಂದು ಮಾಡಬೇಕು ಎಂಬ ಕಾರಣಕ್ಕೆ ರಾಹುಲ್‌ ಗಾಂಧಿ ಅವರು ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಇಂದು ಬೆಲೆಯೇರಿಕೆ ಗಗನ ಮುಟ್ಟಿದೆ. ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ಕಚ್ಚಾತೈಲದ ಬೆಲೆ 125 ಡಾಲರ್‌ ಇದ್ದಾಗ ಡೀಸೆಲ್‌ ಬೆಲೆ 46 ಹಾಗೂ ಪೆಟ್ರೋಲ್‌ ಬೆಲೆ 71 ರೂಪಾಯಿ ಇತ್ತು. ಇಂದು ಪೆಟ್ರೋಲ್‌ ಬೆಲೆ 102 ಹಾಗೂ ಡೀಸೆಲ್‌ ಬೆಲೆ 95 ಆಗಿದೆ. 2016ರಲ್ಲಿ ಕಚ್ಚಾತೈಲ ಬೆಲೆ 40 ರಿಂದ 50 ಡಾಲರ್‌ ಒಳಗೆ ಇದ್ದರೂ ಪೆಟ್ರೋಲ್‌ ಡೀಸೆಲ್‌ ಬೆಲೆ ಇಳಿಕೆ ಮಾಡಿಲ್ಲ. ಗ್ಯಾಸ್‌ ಬೆಲೆ 2013ರಲ್ಲಿ 414 ಇತ್ತು, ಇಂದು ಅದು 1050 ಆಗಿದೆ. ಇದನ್ನು ಜನರಿಗೆ ತಿಳಿಸಲು ಪಾದಯಾತ್ರೆ ಮಾಡುತ್ತಿರುವುದು. ನರೇಂದ್ರ ಮೋದಿ ಅವರು ಯುವಕರಿಗೆ ಪ್ರತೀ ವರ್ಷ 2 ಕೋಟಿ ಉದ್ಯೋಗ ಸೃಷ್ಟಿ ಮಾಡುವ ಭರವಸೆ ನೀಡಿದ್ದರು. ಅಂದರೆ 8 ವರ್ಷಗಳಲ್ಲಿ 16 ಕೋಟಿ ಉದ್ಯೋಗ ಸೃಷ್ಟಿ ಮಾಡಬೇಕಿತ್ತು. ಅದರ ಬದಲಿಗೆ ಸುಮಾರು 5 ರಿಂದ 6 ಲಕ್ಷ ಸಣ್ಣ ಮತ್ತು ಮಧ್ಯಮಗಾತ್ರದ ಕೈಗಾರಿಕೆಗಳು ಮುಚ್ಚಿ ಯುವಕರ ಬದುಕು ಬೀದಿ ಪಾಲಾಗಿದೆ.

2022ಕ್ಕೆ ರೈತರ ಆದಾಯ ದುಪ್ಪಟ್ಟು ಮಾಡುತ್ತೇವೆ ಎಂದಿದ್ದರು, ಈಗ ರೈತರು ಕೃಷಿ ಚಟುವಟಿಕೆಗಳಿಗೆ ಮಾಡುವ ಖರ್ಚು ದುಪ್ಪಟ್ಟಾಗಿದೆ. ರೈತರಿಗೆ ಕನಿಷ್ಟ ಬೆಂಬಲ ಬೆಲೆ ಕೊಡದೆ ರೈತರ ಮನೆ ಹಾಳು ಮಾಡಿದ್ದಾರೆ. ಶ್ರೀಮತಿ ಇಂದಿರಾ ಗಾಂಧಿ ಅವರು ಜಾರಿ ಮಾಡಿದ್ದ ಭೂಸುಧಾರಣಾ ಕಾಯ್ದೆಯನ್ನು ತಿದ್ದುಪಡಿ ಮಾಡಿ ಟಾಟಾ, ಬಿರ್ಲಾ, ಅಂಬಾನಿ, ಅದಾನಿಯಂತವರು ಭೂಮಿ ಖರೀದಿಸಲು ಅವಕಾಶ ಮಾಡಿಕೊಟ್ಟು ಸಣ್ಣ ಹಿಡುವಳಿದಾರರನ್ನು ಬೀದಿಪಾಲು ಮಾಡಿದ್ದಾರೆ. ಹೀಗೆ ಆದರೆ ದೇಶ ಉಳೀತದಾ?

ನರೇಂದ್ರ ಮೋದಿ ಅವರು ಪ್ರಧಾನಿಯಾದಾಗ ದೇಶದ ಸಾಲ ಇದ್ದಿದ್ದು 53 ಲಕ್ಷದ 11 ಸಾವಿರ ಕೋಟಿ. 2023ರ ವರ್ಷದ ಮಾರ್ಚ್‌ ಕೊನೆಗೆ ಅದು 155 ಲಕ್ಷ ಕೋಟಿ ಆಗುತ್ತದೆ. ಸ್ವಾತಂತ್ರ್ಯ ಬಂದ ಮೇಲಿಂದ ಇಷ್ಟು ಸಾಲ ಯಾವ ಸರ್ಕಾರವೂ ಮಾಡಿರಲಿಲ್ಲ. ಅಚ್ಚೇದಿನ್‌ ಆಯೇಗಾ ಎಂದಿದ್ದರು, ಇದೇನಾ ಅಚ್ಚೇದಿನ್? ಇದನ್ನು ಜನರಿಗೆ ಹೇಳಬೇಕಾ ಬೇಡ್ವಾ? ಎಂದು ಸಾಲು ಸಾಲು ಪ್ರಶ್ನೆಗಳನ್ನು ಎಸೆದಿದ್ದಾರೆ.