basavaraja bommai – Peepal Media

ಬಸವರಾಜ ಬೊಮ್ಮಾಯಿ ಆಸ್ಪತ್ರೆಗೆ ದಾಖಲು
ಅನಾರೋಗ್ಯದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೋಮವಾರ ಸಂಜೆಯ ವೇಳೆಗೆ ಸ್ವಲ್ಪ ಮಟ್ಟಿಗೆ ಅನಾರೋಗ್ಯ ಕಾಣಿಸಿಕೊಂಡ ಕಾರಣ ಬಸವರಾಜ ಬೊಮ್ಮಾಯಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗೆ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಶಸ್ತ್ರಚಿಕಿತ್ಸೆಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ನಿಕಟ ಪೂರ್ವ ಮುಖ್ಯಮಂತ್ರಿಗಳು, ಆತ್ಮೀಯರು ಆದ ಬಸವರಾಜ ಬೊಮ್ಮಾಯಿ ಆದಷ್ಟು ಶೀಘ್ರದಲ್ಲಿ ಸಂಪೂರ್ಣ ಗುಣಮುಖರಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.

ಶಸ್ತ್ರಚಿಕಿತ್ಸೆಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ನಿಕಟಪೂರ್ವ ಮುಖ್ಯಮಂತ್ರಿಗಳು, ಆತ್ಮೀಯರೂ ಆದ ಶ್ರೀ ಬಸವರಾಜ ಬೊಮ್ಮಾಯಿ ಅವರು ಆದಷ್ಟು ಶೀಘ್ರದಲ್ಲಿ ಸಂಪೂರ್ಣ ಗುಣಮುಖರಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ.@BSBommai
— B.S.Yediyurappa (@BSYBJP) October 16, 2023

ಹಲವು ದಿನಗಳಿಂದ ಬಸವರಾಜ ಬೊಮ್ಮಾಯಿಯವರು ಮೊಣಕಾಲಿನ ತೀವ್ರ ನೋವಿನಿಂದ ಬಳಲುತ್ತಿದ್ದರು. ಚುನಾವಣಾ ಸಂದರ್ಭದಲ್ಲೂ ಸಹ ಎಡೆಬಿಡದ ಓಡಾಟದಿಂದ ಕಾಲುನೋವು ಕಾಣಿಸಿಕೊಂಡಿತ್ತು‌.

ಈಗ ವೈದ್ಯರ ಸಲಹೆಯ ಮೇರೆಗೆ ಮೊಣಕಾಲು ನೋವಿನ ಶಸ್ತ್ರಚಿಕಿತ್ಸೆಗಾಗಿ ಬಸವರಾಜ ಬೊಮ್ಮಾಯಿ ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.

ರಾಜ್ಯಾಧ್ಯಕ್ಷ, ವಿಪಕ್ಷ ನಾಯಕನ ಸ್ಥಾನಮಾನ ; ಬುಗಿಲೇಳುತ್ತಾ ಅಸಮಾಧಾನ?
ವಿಪಕ್ಷ ನಾಯಕನ ಆಯ್ಕೆ ವಿಚಾರದಲ್ಲಿ ತೀರಾ ಹಿಂದುಳಿದಿದ್ದ ಬಿಜೆಪಿ ಅಂತೂ ವಿಪಕ್ಷ ನಾಯಕನ ಆಯ್ಕೆ ಜೊತೆಗೆ ಹೊಸ ರಾಜ್ಯಾಧ್ಯಕ್ಷನ ಆಯ್ಕೆಗೂ ಮುಹೂರ್ತ ನಿಗದಿ ಮಾಡಿದೆ. ನಾಳೆ ದೆಹಲಿಯಲ್ಲಿ ನಡೆಯಲಿರುವ ಬಿಜೆಪಿ ಪಕ್ಷದ ಹೈವೋಲ್ಟೇಜ್ ಸಭೆಗೆ ಮಾಜಿ ಶಾಸಕ ಸಿಟಿ ರವಿಗೆ ಆಹ್ವಾನಿಸಿದ್ದು, ಈ ವಾರದಲ್ಲಿ ಬಿಜೆಪಿ ಹೊಸ ರಾಜ್ಯಾಧ್ಯಕ್ಷರ ಘೋಷಣೆ ಮಾಡಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಇನ್ನೇನು ಲೋಕಸಭಾ ಚುನಾವಣೆ ವರ್ಷದ ಒಳಗೇ ಬರುವುದರಿಂದ ಬಿಜೆಪಿ ಕೂಡಾ ಈ ವಿಚಾರದಲ್ಲಿ ತಡ ಮಾಡುವಂತಿಲ್ಲ. ಜೊತೆಗೆ ಸಾಂವಿಧಾನಿಕವಾಗಿ ವಿಪಕ್ಷ ನಾಯಕನ ಆಯ್ಕೆ ಕೂಡಾ ತೀರಾ ಅನಿವಾರ್ಯ. ಈಗಾಗಲೇ ಸರ್ಕಾರದ ಒಂದು ಹಂತದ ಅಧಿವೇಶನ ಕೂಡಾ ಮುಗಿದಿದ್ದರೂ ವಿಪಕ್ಷ ನಾಯಕನ ಆಯ್ಕೆ ಆಗದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ದಿನಕ್ಕೊಮ್ಮೆ ಟ್ರೋಲ್ ಮಾಡುತ್ತಿದೆ. ಹಾಗಾಗಿಯೇ ಮಾಜಿ ಶಾಸಕ ಸಿ.ಟಿ.ರವಿಯವರನ್ನು ಹೈಕಮಾಂಡ್ ದೆಹಲಿಗೆ ಕರೆದಿದೆ.

ಬಿಜೆಪಿ ಪಕ್ಷದ ಹೀನಾಯ ಸೋಲು, ಅಸಮರ್ಥ ನಾಯಕತ್ವ, ಆಡಳಿತದಲ್ಲಿ ನಿರಂತರ ಲೋಪ ಇವೆಲ್ಲವುಗಳಿಂದ ಎಚ್ಚೆತ್ತುಕೊಳ್ಳುವ ದಾರಿಯಲ್ಲಿರುವ ಬಿಜೆಪಿ ಪಕ್ಷ, ಕಾಂಗ್ರೆಸ್‌ ಸರ್ಕಾರವನ್ನ ಎದುರಿಸುವ ನಿಟ್ಟಿನಲ್ಲಿ ಅಳೆದು ತೂಗಿ ವಿಪಕ್ಷ ನಾಯಕ ಹಾಗೂ ರಾಜ್ಯಾಧ್ಯಕ್ಷ ಸ್ಥಾನದ ಆಯ್ಕೆಗೆ ಮುಂದಾಗಿದೆ. ಇದೇ ಕಾರಣಕ್ಕೆ ರಾಷ್ಟ್ರೀಯ ಹುದ್ದೆಯಿಂದ ಸಿ ಟಿ ರವಿ ಅವರನ್ನ ಕೆಳಗಿಳಿಸಿದ್ದು ಎನ್ನುವುದಕ್ಕೆ ಈ ಎಲ್ಲಾ ಬೆಳವಣಿಗೆ ಸಾಕ್ಷಿಯಂತಿದೆ.

ಇತ್ತ ‘ಹಿಂದೂ ನಾವೆಲ್ಲ ಒಂದು’ ಎಂಬ ಘೋಷಣೆ ಮೂಲಕ ಸುದ್ದಿ ಮಾಡುತ್ತಿದ್ದ ಬಿಜೆಪಿ ಈಗ ಜಾತಿ ಸೂತ್ರಕ್ಕೆ ಬಿದ್ದಿತೇ ಎಂಬ ಅನುಮಾನ ವ್ಯಕ್ತವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಒಕ್ಕಲಿಗರನ್ನು, ವಿಪಕ್ಷ ನಾಯಕನ ಸ್ಥಾನಕ್ಕೆ ಲಿಂಗಾಯತರನ್ನು ಆಯ್ಕೆ ಮಾಡುವುದು ಪಕ್ಕಾ ಎಂದು ಪಕ್ಷದ ಮೂಲಗಳಿಂದ ತಿಳಿದು ಬಂದಿದೆ. ಆ ನಿಟ್ಟಿನಲ್ಲಿ ಸಿ.ಟಿ.ರವಿಯನ್ನು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡುವುದು ಪಕ್ಕಾ ಎನ್ನಲಾಗಿದೆ.

ಅದೇ ರೀತಿ ವಿಪಕ್ಷ ನಾಯಕನ ಸ್ಥಾನಕ್ಕೆ ಹೆಚ್ಚಿನ ಪೈಪೋಟಿ ಇದ್ದು, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮುರುಗೇಶ್ ನಿರಾಣಿ, ಬಸನಗೌಡ ಪಾಟೀಲ್ ಯತ್ನಾಳ್ ಜೊತೆಗೆ ಯಡಿಯೂರಪ್ಪ ಬಣದಿಂದ ಬಿ.ವೈ.ವಿಜಯೇಂದ್ರ ಕೂಡಾ ವಿಪಕ್ಷ ನಾಯಕನ ರೇಸ್ ನಲ್ಲಿ ಇದ್ದಾರೆ. ನಿರಾಣಿ ಮತ್ತು ಯತ್ನಾಳ್ ಈಗಾಗಲೇ ತಮ್ಮ ಒಳಜಗಳವನ್ನು ಬೀದಿಗೆ ತಂದಿರುವುದರಿಂದ ಪಟ್ಟಿಯಿಂದ ಅವರನ್ನು ಕೈಬಿಡುವುದೇ ಸೂಕ್ತ ಎನ್ನಲಾಗಿದೆ.

ಇತ್ತ ಪ್ರಬಲ ಪೈಪೋಟಿ ನೀಡುತ್ತಿರುವ ಇನ್ನೊಬ್ಬ ವ್ಯಕ್ತಿ ಎಂದರೆ ಯಡಿಯೂರಪ್ಪ ಪುತ್ರ, ಬಿ.ವೈ.ವಿಜಯೇಂದ್ರ. ವಿಜಯೇಂದ್ರ ಯಡಿಯೂರಪ್ಪ ಅವರ ಏಕೈಕ ಆಯ್ಕೆಯಾಗಿದೆ. ಆದರೆ ಬಿಜೆಪಿ ಹೈಕಮಾಂಡ್ ಗೆ ಯಡಿಯೂರಪ್ಪ ಸೂಚಿಸುವ ವ್ಯಕ್ತಿಗೆ ವಿಪಕ್ಷ ನಾಯಕನ ಪಟ್ಟ ಕಟ್ಟುವುದು ಅಷ್ಟು ಒಪ್ಪಿಗೆ ಇಲ್ಲ ಎಂದು ತಿಳಿದು ಬಂದಿದೆ. ಆ ಕಾರಣಕ್ಕೇ ಇತ್ತ ಎಲ್ಲಾ ಕಡೆಗೂ ಸಲ್ಲುವ ಬಸವರಾಜ ಬೊಮ್ಮಾಯಿಗೇ ವಿಪಕ್ಷ ನಾಯಕನ ಸ್ಥಾನ ನೀಡುವ ಬಗ್ಗೆ ಹೈಕಮಾಂಡ್ ಚಿಂತಿಸಿದೆ ಎನ್ನಲಾಗಿದೆ.

ಇನ್ನೊಂದು ಕಡೆ, ಅಶ್ವಥ್ ನಾರಾಯಣ್, ಆರ್.ಅಶೋಕ್ ಕೂಡಾ ವಿಪಕ್ಷ ನಾಯಕನ ರೇಸ್ ನಲ್ಲಿ ಇದ್ದರೂ ರಾಜ್ಯಾಧ್ಯಕ್ಷ ಮತ್ತು ವಿಪಕ್ಷ ನಾಯಕ ಎರಡೂ ಸ್ಥಾನಕ್ಕೆ ಒಂದೇ ಸಮುದಾಯದವರನ್ನು ಕೂರಿಸಿದರೆ ಮತ್ತೆ ಲಿಂಗಾಯತರ ವಿರೋಧ ಕಟ್ಟಿಕೊಳ್ಳುವ ಭಯ ಕೂಡಾ ಬಿಜೆಪಿ ಹೈಕಮಾಂಡ್ ಗೆ ಇದೆ. ಹಾಗಾಗಿಯೇ ಇವರಿಬ್ಬರನ್ನು ಎರಡೂ ಆಯ್ಕೆಯಿಂದ ದೂರ ಇಡಲಾಗಿದೆ.

ಇತ್ತೀಚೆಗಷ್ಟೇ ಸಿ.ಟಿ.ರವಿ. ಬಿಎಸ್​ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದರು. ಅಲ್ಲದೇ ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ ಅವರು ಸಹ ಸಿಟಿ ರವಿ ಅವರಿಗೆ ಅಧ್ಯಕ್ಷ ಸ್ಥಾನ ಎಂದು ಬಹಿರಂಗವಾಗಿಯೇ ಹೇಳಿದ್ದರು. ಇದೆಲ್ಲರ ಮಧ್ಯೆ ಇದೀಗ ಹೈಕಮಾಂಡ್​ನಿಮದ ಬುಲಾವ್ ಬಂದಿದ್ದು, ರಾಜ್ಯ ಬಿಜೆಪಿಯಲ್ಲಿ ಸಂಚಲನ ಮೂಡಿಸಿದೆ. ಅಲ್ಲದೇ ಬಹುತೇಕ ಸಿ ಟಿ ರವಿಯವರು ನೂತನ ಬಿಜೆಪಿ ಸಾರಥಿಯಾಗಲಿದ್ದು, ಈ ವಾರದೊಳಗೆ ಹೈಕಮಾಂಡ್‌ ಅಧಿಕೃತವಾಗಿ ಪ್ರಕಟಗೊಳಿಸುವ ಸಾಧ್ಯತೆ ಇದೆ.

ಇದರ ಬೆನ್ನಲ್ಲೇ ವಿಪಕ್ಷ ನಾಯಕನಾಗಿ ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಬಣದ ಆಪ್ತ ನಾಯಕ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ವಿಪಕ್ಷ ನಾಯಕ ಸ್ಥಾನ ಒಲಿಯಬಹುದು ಎಂದು ಹೇಳಲಾಗಿದ್ದು, ಬಿ.ಎಲ್. ಸಂತೋಷ್‌ ಬಣದ ಸಿ.ಟಿ ರವಿಗೆ ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎರಡೂ ಸಮುದಾಯಕ್ಕೂ ನ್ಯಾಯ ಎಂಬ ತೇಪೆ ಹಚ್ಚುವ ಕೆಲಸ ಸರಾಗವಾಗಲಿದೆ.

ಇಷ್ಟಾದರೂ ಬಿಜೆಪಿಯಲ್ಲಿ ಬಿನ್ನಮತ ಮತ್ತೊಮ್ಮೆ ಬುಗಿಲೇಳುವ ಸಾಧ್ಯತೆ ಇದೆ. ಯಾಕೆಂದರೆ, ನಾನೊಬ್ಬ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿ ಎಂದೇ ಹೇಳಿಕೊಂಡು ಬಂದಿರುವ ಲಿಂಗಾಯತ ನಾಯಕ ವಿ.ಸೋಮಣ್ಣ ಪಕ್ಷದಿಂದ ಕಾಲ್ಕಿತ್ತರೂ ಆಶ್ಚರ್ಯವಿಲ್ಲ ಎನ್ನಲಾಗಿದೆ. ಹೈಕಮಾಂಡ್ ಆದೇಶಕ್ಕೆ ತಲೆಬಾಗಿ ಚಾಮರಾಜನಗರ ಮತ್ತು ವರುಣಾ ಎರಡೂ ಕ್ಷೇತ್ರಗಳಲ್ಲಿ ನಿಂತು, ಸೋಲುಂಡ ನಂತರ ರೆಬೆಲ್ ಆಗಿರುವ ವಿ.ಸೋಮಣ್ಣ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಪಟ್ಟು ಹಿಡಿದು ಕೂತಿದ್ದಾರೆ. ಹಾಗಾಗಿ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಮತ್ತು ವಿಪಕ್ಷ ನಾಯಕ ಸ್ಥಾನ ಏನೇ ಘೋಷಣೆ ಆದರೂ ಬಿನ್ನಮತ ಏಳುವುದು ಪಕ್ಕಾ ಎನ್ನಲಾಗಿದೆ.

ಜೆಡಿಎಸ್ ಬಿಜೆಪಿ ಮೈತ್ರಿ : ಎತ್ತು ಏರಿಗೆ, ಕೋಣ ನೀರಿಗೆ ಅಂತಾಗ್ತಿದೆ ಜೆಡಿಎಸ್ ನಾಯಕರ ನಡೆ
ಪ್ರಾದೇಶಿಕ ಪಕ್ಷವಾದ ಜೆಡಿಎಸ್ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಕಾಂಗ್ರೆಸ್ ಮತ್ತು ಬಿಜೆಪಿ ಯಿಂದ ಸಮಾನ ಅಂತರ ಉಳಿಸಿಕೊಳ್ಳಬೇಕು ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ದೇವೇಗೌಡರು ಅಭಿಪ್ರಾಯ ಪಟ್ಟಿದ್ದಾರೆ. ಆದರೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮಾತ್ರ ಇಂದೂ ಕೂಡಾ ಬಿಜೆಪಿಯ ಬಸವರಾಜ ಬೊಮ್ಮಾಯಿಯವರ ಜೊತೆ ಜಂಟಿ ಪತ್ರಿಕಾಗೋಷ್ಠಿ ನಡೆಸಿ ದೇವೇಗೌಡರ ನಿಲುವಿಗೆ ವ್ಯತಿರಿಕ್ತವಾಗಿ ನಡೆದುಕೊಂಡಿದ್ದಾರೆ. ಕುಮಾರಸ್ವಾಮಿಯವರ ಈ ನಡೆ ಈಗ ಜೆಡಿಎಸ್ ಕಾರ್ಯಕರ್ತರಿಗೂ ಇರಿಸುಮುರಿಸು ಉಂಟುಮಾಡಿದೆ.

2024 ರ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಇನ್ನೇನು ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಳ್ಳುವ ಹಂತದಲ್ಲೇ NDA ಮೈತ್ರಿಕೂಟದ ಸಭೆಯಿಂದ ದೂರ ಉಳಿದಿತ್ತು. ಜೆಡಿಎಸ್ ಹಿರಿಯ ನಾಯಕ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧಿಸಲಿದೆ. ಯಾವ ಪಕ್ಷ ಅಥವಾ ಒಕ್ಕೂಟಕ್ಕೂ ನಮ್ಮ ಬೆಂಬಲವಿಲ್ಲ ಎಂದು ಹೇಳಿದ್ದಾರೆ.

ಆದರೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮಾತ್ರ ದಿನಕ್ಕೊಂದು ಬಾರಿಯಾದರೂ ಬಿಜೆಪಿ ಜೊತೆಗೆ ಗುರುತಿಸಿಕೊಳ್ಳುವುದನ್ನ ನಿಲ್ಲಿಸಿಲ್ಲ. ಇಂದೂ ಸಹ ಕುಮಾರಸ್ವಾಮಿ ಮತ್ತು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಂಟಿ ಪತ್ರಿಕಾಗೋಷ್ಠಿ, ಬೆಂಕಿ ಇಲ್ಲದೇ ಹೊಗೆ ಆಡುತ್ತಿಲ್ಲ ಎಂಬುದನ್ನು ಸಾಕ್ಷೀಕರಿಸುತ್ತಿದೆ. ಕಾಂಗ್ರೆಸ್ ವಿರುದ್ಧ ರಾಜ್ಯಪಾಲರಿಗೆ ಸಲ್ಲಿಸಿದ ಬಿಜೆಪಿ ಪಕ್ಷದ ದೂರಿನ ಅರ್ಜಿಯಲ್ಲೂ ಕುಮಾರಸ್ವಾಮಿಯವರ ಸಹಿ ಇವೆಲ್ಲಾ ಬೆಳವಣಿಗೆಯನ್ನು ಪುಷ್ಠೀಕರಿಸಿದಂತಿದೆ.

ಈ ನಡುವೆ ಬಿಜೆಪಿ ಜೊತೆಗಿನ ಮೈತ್ರಿ ಕಾರಣಕ್ಕೆ ಜೆಡಿಎಸ್ ಪಾಳಯದಲ್ಲೇ ಬಿರುಕು ಮೂಡಿದೆ. ಹೆಚ್.ಡಿ.ಕುಮಾರಸ್ವಾಮಿ ನಡೆಯ ಬಗ್ಗೆ ಸ್ವತಃ ಜೆಡಿಎಸ್ ಶಾಸಕರೇ ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಜೊತೆಗಿನ ಮೈತ್ರಿ ವಿಚಾರವಾಗಿ ಜೆಡಿಎಸ್‌ ನಾಯಕರಲ್ಲಿ ಒಮ್ಮತ ಮೂಡುತ್ತಿಲ್ಲ ಎಂಬುದು ಸ್ಪಷ್ಟವಾಗಿ ಗೊತ್ತಾಗಿದೆ. ಈಗಿರುವ ಜೆಡಿಎಸ್‌ನ 19 ಶಾಸಕರ ಪೈಕಿ ಕೆಲವು ಶಾಸಕರಿಗೆ ಬಿಜೆಪಿ ಮೈತ್ರಿ ಕುರಿತು ಭಿನ್ನಾಭಿಪ್ರಾಯವಿದೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಎರಡು ದಿನಗಳ ಹಿಂದೆ ಕಾಂಗ್ರೆಸ್ ವಕ್ತಾರ ಲಕ್ಷ್ಮಣ್ ಕೂಡಾ ‘ಕುಮಾರಸ್ವಾಮಿ ನಡೆಯಿಂದ ಬೇಸತ್ತ ಜೆಡಿಎಸ್ ಶಾಸಕರು ನಮ್ಮ ಸಂಪರ್ಕದಲ್ಲಿ ಇದ್ದಾರೆ. ಯಾವುದೇ ಕಂಡೀಶನ್ ಹೊರತುಪಡಿಸಿ ಅವರು ನಮ್ಮ ಜೊತೆಗೆ ಕೈ ಜೋಡಿಸಲು ತಯಾರಿದ್ದಾರೆ’ ಎಂದು ಹೊಸ ಬಾಂಬ್ ಎಸೆದದ್ದು ಜೆಡಿಎಸ್ ನಲ್ಲಿ ಎಲ್ಲವೂ ಸರಿಯಿಲ್ಲ ಎಂಬುದಕ್ಕೆ ಮತ್ತೊಂದು ಸಾಕ್ಷಿ.

ಎರಡು ದಿನಗಳ ಹಿಂದೆ ವಿಧಾನಸಭೆಯ ಸ್ಪೀಕರ್ ಕುರ್ಚಿಗೆ ಹರಿದ ಪೇಪರ್ ಎಸೆದು ಅಸಭ್ಯವಾಗಿ ವರ್ತಿಸಿ, ಸದನದಿಂದ ಅಮಾನತುಗೊಂಡ 10 ಮಂದಿ ಬಿಜೆಪಿ ಶಾಸಕರ ಪರವಾಗಿ ಕುಮಾರಸ್ವಾಮಿ ನಿಂತಿದ್ದು ಸಹ ಕುಮಾರಸ್ವಾಮಿಗೆ ಬಿಜೆಪಿ ಪರ ಒಲವನ್ನು ತೋರ್ಪಡಿಸಿದಂತಿದೆ. ಆದರೆ ಮಾಜಿ ಸಚಿವ, ಜೆಡಿಎಸ್ ಹಿರಿಯ ನಾಯಕ ಜಿ ಟಿ ದೇವೇಗೌಡ ಸೇರಿದಂತೆ ಹಲವು ಜೆಡಿಎಸ್ ನಾಯಕರು ಇದಕ್ಕೆ ವಿರೋಧವಾಗಿ ನಿಂತಿದ್ದಾರೆ. ಬಿಜೆಪಿ ಶಾಸಕರ ನಿಲುವು ಸಮ್ಮತವಲ್ಲ. ಸ್ಪೀಕರ್ ಜೊತೆಗೆ ನಡೆದುಕೊಂಡ ರೀತಿ ಸರಿಯಲ್ಲ ಎಂದು ಮಾಜಿ ಸಚಿವ ಜಿ.ಟಿ.ಡಿ ಅಭಿಪ್ರಾಯ ಪಟ್ಟಿದ್ದಾರೆ.

ಇನ್ನು ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ರದ್ದುಪಡಿಸಲು ಕಾಂಗ್ರೆಸ್ ಪಕ್ಷವು ಮಸೂದೆಯನ್ನು ಅಂಗೀಕರಿಸಿದೆ. ಇದಕ್ಕೆ ವಿರೋಧ ವ್ಯಕ್ತಪಡಿಸಿ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ಸದನದಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದರು. ಇದು ಮಾಜಿ ಸಚಿವ ಎಚ್‌ಡಿ ರೇವಣ್ಣ ಅವರಿಗೆ ಸರಿ ಕಂಡುಬರಲಿಲ್ಲ ಎಂದು ಮುಖಂಡರೊಬ್ಬರು ತಿಳಿಸಿದ್ದಾರೆ‌. ಜೆಡಿಎಸ್ (ಕುಮಾರಸ್ವಾಮಿ) ನಡೆ ಸರಿಯಲ್ಲ ಎಂದು ಆಪ್ತರ ಬಳಿ ಹೇಳಿಕೊಂಡಿದ್ದರು ಎನ್ನುವ ಮಾತು ಕೇಳಿ ಬರುತ್ತಿದೆ.2024 ರ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದೊಂದಿಗೆ ಬಿಜೆಪಿ ಮೈತ್ರಿ ಮಾಡಿಕೊಳ್ಳಬೇಕೆಂದು ಕುಮಾರಸ್ವಾಮಿ ಬಯಸಿದ್ದಾರೆ. ಆದರೆ, ಎಚ್‌ಡಿ ರೇವಣ್ಣ ಅವರು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಕುಮಾರಸ್ವಾಮಿ ಅವರ ಬಯಕೆಗೆ ಸುಮಾರು 12 ಜೆಡಿಎಸ್ ಶಾಸಕರು ವಿರೋಧ ವ್ಯಕ್ತಪಡಿಸಿದ್ದಾರೆ. ರಾಜಕೀಯ ವಿರೋಧಗಳೇನೇ ಇದ್ದರೂ ಹೊಸ ಮೈತ್ರಿಕೂಟ, ಹಳೆಯ ದೋಸ್ತಿಗಳ ಜೊತೆಗೆ ಕೈಜೋಡಿಸಿ, “INDIA” ಮೈತ್ರಿಕೂಟದ ನಾಯಕರೊಂದಿಗೆ ಮಾತುಕತೆ ನಡೆಸಬಹುದಿತ್ತು ಎಂಬ ಅಭಿಪ್ರಾಯವನ್ನೂ ವ್ಯಕ್ತಪಡಿಸಿದ್ದಾರೆ. ಹೇಗಿದ್ದರೂ ಮಾಜಿ ಪ್ರಧಾನಿ ದೇವೇಗೌಡರಿಗೆ ಅಲ್ಲಿ ವಿಶೇಷ ಸ್ಥಾನಮಾನ ಕೂಡಾ ಸಿಗುತ್ತಿತ್ತು. ಆದರೆ ಕುಮಾರಸ್ವಾಮಿಯವರ ನಡೆಯಿಂದಾಗಿ ಇವೆಲ್ಲವನ್ನೂ ಕಳೆದುಕೊಳ್ಳಬೇಕಾಗಿದೆ ಎಂಬ ಅಸಮಾಧಾನ ಕೂಡಾ ಜೆಡಿಎಸ್ ನಲ್ಲಿ ಇದೆ ಎನ್ನಲಾಗಿದೆ.

ರಾಜಕೀಯವಾಗಿ ಹೆಚ್.ಡಿ.ಕುಮಾರಸ್ವಾಮಿಯವರ ದಿನಕ್ಕೊಂದು ನಡೆ, ಪಕ್ಷದ ನಿಲುವಿನ ಬಗ್ಗೆ ಹೆಚ್.ಡಿ.ದೇವೇಗೌಡರ ಹೇಳಿಕೆ, ಒಂದೇ ಕುಟುಂಬವಾದರೂ ಹೆಚ್.ಡಿ.ರೇವಣ್ಣನವರ ವ್ಯತಿರಿಕ್ತ ನಿಲುವು, ಕುಮಾರಸ್ವಾಮಿ ನಡೆಯಿಂದ ಬೇಸತ್ತ ಶಾಸಕರು.. ಎಲ್ಲಕ್ಕಿಂತ ಹೆಚ್ಚಾಗಿ ಅತಂತ್ರ ಸ್ಥಿತಿಯಲ್ಲಿರುವ ಕಾರ್ಯಕರ್ತರು.. ಇವೆಲ್ಲವನ್ನೂ ನೋಡುತ್ತಿದ್ದರೆ ಮೇಲಿನ ಸಾಲು ಜೆಡಿಎಸ್ ನ ಇಂದಿನ ಸ್ಥಿತಿಗೆ ಸೂಕ್ತ ಅನ್ನಿಸದಿರದು.

ಪುರಸಭೆ ಸದಸ್ಯತ್ವಕ್ಕೆ ರೌಡಿಶೀಟರ್ ನಾಮನಿರ್ದೇಶನ ಮಾಡಿದ ಬಿಜೆಪಿ ಸರ್ಕಾರ
ಬಿಜೆಪಿ ಕಾರ್ಯಕ್ರಮಗಳಲ್ಲಿ ರೌಡಿ ಶೀಟರ್‌ಗಳ ಉಪಸ್ಥಿತಿಯ ಗದ್ದಲದ ನಡುವೆ ಕರ್ನಾಟಕದ ಬಸವರಾಜ ಬೊಮ್ಮಾಯಿ ಸರ್ಕಾರ ರೌಡಿಶೀಟರ್ ಒಬ್ಬನನ್ನು ಪುರಸಭೆ ಸದಸ್ಯನನ್ನಾಗಿ ನಾಮನಿರ್ದೇಶನ ಮಾಡಿದೆ. ಬೆಂಗಳೂರಿನ ಆನೇಕಲ್ ಭಾಗದ ಮಂಜುನಾಥ್ ಅಲಿಯಾಸ್ ಉಪ್ಪಿಯನ್ನು ಆನೇಕಲ್ ಪುರಸಭೆ ಸದಸ್ಯರನ್ನಾಗಿ ಸರ್ಕಾರ ನಾಮನಿರ್ದೇಶನ ಮಾಡಿದೆ.

ಕಳೆದ ಒಂದು ವಾರದಿಂದ ಬಿಜೆಪಿ ಪಕ್ಷದ ವಲಯದಲ್ಲಿ ರೌಡಿ ರಾಜಕಾರಣದ ಮಾತೇ ಹೆಚ್ಚು ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಬಿಜೆಪಿ ನಾಯಕರ ಜೊತೆ ರೌಡಿ ಶೀಟರ್ ಕಾಣಿಸಿಕೊಂಡ ಸುದ್ದಿಯಲ್ಲಿ ಇದು ಐದನೇ ಬಾರಿ. ಬೆಂಗಳೂರು ನಗರದ ಹೊರವಲಯದಲ್ಲಿ ಇರುವ ಆನೇಕಲ್ ರಿಯಲ್ ಎಸ್ಟೇಟ್‌ನಲ್ಲಿ ಹಂತಹಂತವಾಗಿ ಅಭಿವೃದ್ಧಿ ಹೊಂದುತ್ತಿದೆ. ಈ ಹಿನ್ನೆಲೆಯಲ್ಲಿ ರಿಯಲ್ ಎಸ್ಟೇಟ್ ದಂಧೆ ಮತ್ತು ಹಲವು ಕೊಲೆ ಪ್ರಕರಣದ ಆರೋಪದಲ್ಲಿ ಕೇಳಿ ಬಂದ ರೌಡಿ ಶೀಟರ್ ಮಂಜುನಾಥ್ ಅಲಿಯಾಸ್ ಉಪ್ಪಿಯನ್ನು ಸರ್ಕಾರ ನಾಮ ನಿರ್ದೇಶನ ಮಾಡಿದ್ದು ಮತ್ತೊಮ್ಮೆ ಎಲ್ಲರ ಹುಬ್ಬೇರಿಸುವಂತೆ ಮಾಡಿದೆ.

ಸಿಸಿಬಿ ಪೊಲೀಸರ ವಾಂಟೆಡ್ ಪಟ್ಟಿಯಲ್ಲಿ ಇರುವ, ಸಿಸಿಬಿ ದಾಖಲೆಗಳಲ್ಲಿ ಪರಾರಿಯಾಗಿರುವ ರೌಡಿ ಸುನೀಲ್ ಕುಮಾರ್ ಅಲಿಯಾಸ್ ಸೈಲೆಂಟ್ ಸುನೀಲ್ ಬಿಜೆಪಿಯ ಹಿರಿಯ ನಾಯಕರೊಂದಿಗೆ ವೇದಿಕೆ ಹಂಚಿಕೊಂಡ ನಂತರ ಕರ್ನಾಟಕದಲ್ಲಿ ರೌಡಿ ರಾಜಕಾರಣದ ವಿವಾದ ಭುಗಿಲೆದ್ದಿದೆ. ನವೆಂಬರ್ 29 ರಂದು ನಡೆದ ರಕ್ತದಾನ ಶಿಬಿರದಲ್ಲಿ ಸಂಸದರಾದ ತೇಜಸ್ವಿ ಸೂರ್ಯ, ಪಿ.ಸಿ.ಮೋಹನ್, ಬಿಜೆಪಿ ಮುಖಂಡ ಎನ್.ಆರ್.ರಮೇಶ್ ಸೇರಿದಂತೆ ಮುಂತಾದ ಬಿಜೆಪಿ ಮುಖಂಡರು ಇದ್ದ ವೇದಿಕೆಯಲ್ಲಿ ಸೈಲೆಂಟ್ ಸುನೀಲ ಕಾಣಿಸಿಕೊಂಡಿದ್ದರು. ಸ್ವತಃ ಕರ್ನಾಟಕ ಪೊಲೀಸರ ಭದ್ರತೆಯಲ್ಲೇ ಈ ಕಾರ್ಯಕ್ರಮ ನಡೆದದ್ದು ಹೆಚ್ಚು ಸುದ್ದಿಯಾಗಿತ್ತು.

ನಂತರ ಮಂಡ್ಯದ ಫೈಟರ್ ರವಿ ಬಿಜೆಪಿ ಸೇರ್ಪಡೆ ಮತ್ತು ಜೆಡಿಎಸ್ ಪಕ್ಷದ ಸದಸ್ಯರೊಬ್ಬರಿಗೆ ಧಮಕಿ ಹಾಕಿ ಅವಾಚ್ಯ ಶಬ್ದಗಳಿಂದ ನಿಂಧಿಸಿದ ಸುದ್ದಿ ಕೂಡಾ ಹೆಚ್ಚು ಸುದ್ದಿಯಾಗಿತ್ತು. ಇಂತಹ ವ್ಯಕ್ತಿಗೂ ಬಿಜೆಪಿ ಮಣೆ ಹಾಕಿ ಆತಿಥ್ಯ ನೀಡಿದ್ದು ಜಗಜ್ಜಾಹೀರಾಗಿದೆ. ಇದರ ಜೊತೆಗೆ ರೌಡಿಶೀಟರ್ ಬೆತ್ತನಗೆರೆ ಶಂಕರ ಕೂಡಾ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ವೇದಿಕೆ ಹಂಚಿಕೊಂಡಿದ್ದ. ಸದ್ಯ ಈ ಇಬ್ಬರೂ ರೌಡಿಗಳು ಬಿಜೆಪಿ ಸೇರ್ಪಡೆ ಮಾಧ್ಯಮಗಳಲ್ಲಿ ಹೆಚ್ಚು ಪ್ರಚಾರಕ್ಕೆ ಬಂದಿತ್ತು.

ಇದರ ನಂತರ ಕಳೆದ ಎರಡು ದಿನಗಳಿಂದ ಬಿಜೆಪಿಯ ಹಿರಿಯ ಮುಖಂಡ ಸಚಿವ ಸೋಮಣ್ಣ ನಿವಾಸಕ್ಕೆ ರೌಡಿಶೀಟರ್ ನಾಗರಾಜ್ ಅಲಿಯಾಸ್ ವಿಲ್ಸನ್ ಗಾರ್ಡನ್ ನಾಗ ಬಂದು ಹೋಗಿದ್ದು ಮತ್ತೊಮ್ಮೆ ಬಿಜೆಪಿ ಪಕ್ಷದ ಕಡೆಯಿಂದ ಹೆಚ್ಚು ಪ್ರಚಾರಕ್ಕೆ ಬಂದಿದೆ. ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗನ ಭೇಟಿ ನಂತರ ಪ್ರತಿಕ್ರಿಯಿಸಿದ ಸಚಿವ ವಿ ಸೋಮಣ್ಣ ಯಾವ ನಾಗ ಯಾರೂ ನನಗೆ ಗೊತ್ತಿಲ್ಲ ಎಂದು ಉಚ್ಚರಿಸಿದ್ದಾರೆ.

ಈಗ ಮತ್ತೆ ಬಿಜೆಪಿ ಸರ್ಕಾರವೇ ಆನೇಕಲ್ ಭಾಗದಲ್ಲಿ ಪುರಸಭೆಗೆ ರೌಡಿಶೀಟರ್ ಒಬ್ಬನನ್ನು ನಾಮನಿರ್ದೇಶನ ಮಾಡಿರುವುದು ಮತ್ತೆ ಸುದ್ದಿಗೆ ಬಂದಿದೆ. ಬಿಜೆಪಿ ಪಕ್ಷ ಮುಂಬರುವ ಚುನಾವಣೆ ಸಂದರ್ಭದಲ್ಲಿ ರೌಡಿಗಳನ್ನು ಒಟ್ಟುಮಾಡುತ್ತಿದೆ. ಆ ಮೂಲಕ ಜನರಲ್ಲಿ ಭಯಭೀತಿ ಹುಟ್ಟಿಸಲು ತೊಡಗಿದೆ ಎಂಬುದನ್ನು ಬಿಜೆಪಿ ವಿರೋಧಿಗಳು ಮಾತನಾಡಿಕೊಳ್ಳುತ್ತಿದ್ದಾರೆ.

ಮುಖ್ಯಮಂತ್ರಿಗೆ ಪ್ರಶ್ನಿಸಲು ಹೊರಟ ದಲಿತ ಮುಖಂಡರ ವಶಕ್ಕೆ ಪಡೆದ ಪೊಲೀಸರು
ತೀರ್ಥಹಳ್ಳಿ :  ಸಾರ್ವಜನಿಕ ಕೆಲಸಗಾರರಿಂದ ವಿಪರೀತ ಲಂಚದ ಬೇಡಿಕೆ, ಹದಗೆಟ್ಟ ಆಡಳಿತ ವ್ಯವಸ್ಥೆ ಮತ್ತು ಸ್ಥಳೀಯ ಜ್ವಲಂತ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆಯಲು ಅವಕಾಶ ಕೋರಿದ್ದ ತೀರ್ಥಹಳ್ಳಿ ತಾಲ್ಲೂಕು ದಲಿತ ಮುಖಂಡ ಇಬ್ಬರನ್ನು ಇಂದು ಬೆಳಿಗ್ಗೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವಿವಿಧ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಪ್ರಗತಿ ಪರಿಶೀಲನೆಗೆಂದು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕೊಪ್ಪ ಮತ್ತು ತೀರ್ಥಹಳ್ಳಿಗೆ ಆಗಮಿಸುವ ಕಾರ್ಯಕ್ರಮವಿತ್ತು. ಈ ಸಂದರ್ಭದಲ್ಲಿ ವಿವಿಧ ಬೇಡಿಕೆಗಳನ್ನು ಸಲ್ಲಿಸಿ, ಸ್ಥಳೀಯ ಹದಗೆಟ್ಟ ಆಡಳಿತ ವ್ಯವಸ್ಥೆ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆಯಲು ಶಿವಮೊಗ್ಗ ಜಿಲ್ಲಾ ಮಟ್ಟದ ಮುಖಂಡರು ಸಿದ್ಧತೆ ನಡೆಸಿಕೊಂಡಿದ್ದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳಿಂದ ಸೂಕ್ತ ಪರಿಹಾರ ಮತ್ತು ಬೇಡಿಕೆಗಳ ಈಡೇರಿಸಲು ಮುಂದಾಗದಿದ್ದರೆ ಅಲ್ಲೇ ಕಪ್ಪು ಬಟ್ಟೆ ಪ್ರದರ್ಶನ ಮಾಡುವುದಾಗಿಯೂ ನವೆಂಬರ್ 26 ರ ಶನಿವಾರ ಪತ್ರಿಕಾ ಹೇಳಿಕೆ ನೀಡಿದ್ದರು. ಈ ಸಂಬಂಧ ನವೆಂಬರ್ 27 ರ ಭಾನುವಾರ ಬೆಳಿಗ್ಗೆಯೇ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕರಾದ ಕೀಗಡಿ ಕೃಷ್ಣಮೂರ್ತಿ ಮತ್ತು ಹಾರೇಗೊಳಿಗೆ ವಿಶ್ವನಾಥ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ತಾಲ್ಲೂಕಿನ ಹದಗೆಟ್ಟ ಆಡಳಿತ ವ್ಯವಸ್ಥೆಯನ್ನು ಮುಖ್ಯಮಂತ್ರಿಗಳು ಸರಿಪಡಿಸಬೇಕು, ಬಗರ್ ಹುಕುಂ ಸಾಗುವಳಿ ಜಮೀನಿಗೆ ದಾಖಲೆ ಒದಗಿಸಬೇಕು. ವಿವಿಧ ಯೋಜನೆಗಳ ಅಡಿಯಲ್ಲಿ ಅಕ್ರಮ ಸಕ್ರಮ, 94 ಸಿ, 94ಸಿಸಿ, ಹಕ್ಕುಪತ್ರ ಇದ್ದರೂ ಬ್ಯಾಂಕುಗಳಲ್ಲಿ ಸಾಲ ದೊರೆಯುತ್ತಿಲ್ಲ. ಇಂತಹ ಹಕ್ಕುಪತ್ರ ಇದ್ದರೆಷ್ಟು ಬಿಟ್ಟರೆಷ್ಟು. ಇವುಗಳನ್ನು ಸರಿಪಡಿಸಬೇಕು. ಎಲ್ಲಕ್ಕಿಂತ ಮುಖ್ಯವಾಗಿ ತಾಲ್ಲೂಕಿನಲ್ಲಿ ಮಿತಿಮೀರಿದ ಸರ್ಕಾರಿ ಅಧಿಕಾರಿಗಳ ಲಂಚದ ಹಾವಳಿಗೆ ಕಡಿವಾಣ ಹಾಕಬೇಕು ಎಂಬ ಇತ್ಯಾದಿ ಬೇಡಿಕೆಗಳನ್ನು ಇಟ್ಟು ದಲಿತ ಮುಖಂಡರು ಮುಖ್ಯಮಂತ್ರಿಗಳಿಗೆ ಅಹವಾಲು ಸಲ್ಲಿಸುತ್ತೇವೆ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದರು.

ಈ ಬೆಳವಣಿಗೆಗೆ ಸಂಬಂಧಿಸಿದಂತೆ ಸ್ಥಳೀಯ ನಾಗರೀಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಜಾಪ್ರಭುತ್ವದ ಆಶಯದಂತೆ ಸಾರ್ವಜನಿಕರು ಜನಪ್ರತಿನಿಧಿಗಳನ್ನು ಪ್ರಶ್ನಿಸುವ ಹಕ್ಕನ್ನು ಹೊಂದಿದ್ದಾರೆ. ಪ್ರಶ್ನೆ ಮಾಡುವುದನ್ನು ಹತ್ತಿಕ್ಕಲು ಇದೇನು ರಾಜಪ್ರಭುತ್ವ ಅಲ್ಲ. ಆ ಮೂಲಕ ತಾಲ್ಲೂಕಿನಲ್ಲಿ ಅರಾಜಕತೆ ಸೃಷ್ಟಿ ಆಗಿದೆ ಎಂಬುದನ್ನು ಬಿಜೆಪಿ ಮುಖಂಡರೇ ಸಾಭೀತುಪಡಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತೀರ್ಥಹಳ್ಳಿಯಲ್ಲಿ ಮುಖ್ಯಮಂತ್ರಿಗಳ ಕಾರ್ಯಕ್ರಮ ; ಆಡಳಿತ ಯಂತ್ರದ ದುರುಪಯೋಗ ಮಾಡಿಕೊಂಡಿತೇ ಸ್ಥಳೀಯ ಆಡಳಿತ?
ಕಳೆದೊಂದು ವಾರದಿಂದ ತೀರ್ಥಹಳ್ಳಿ ಭಾಗದ ಎಲ್ಲಾ ಸಣ್ಣಪುಟ್ಟ ಸರ್ಕಾರಿ ನೌಕರರ, ಗುತ್ತಿಗೆ ನೌಕರರ ಕೆಲಸಗಳು ಸ್ತಬ್ಧವಾಗಿದೆ. ಅದರಲ್ಲೂ ವಿಶೇಷವಾಗಿ ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತೆಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಕಾರ್ಯಕ್ರಮಕ್ಕೆ ಜನ ಸೇರಿಸುವ ಕೆಲಸವನ್ನು ತಾಲ್ಲೂಕು ಆಡಳಿತ ವಹಿಸಿದೆ ಎಂದು ಸ್ಥಳೀಯ ನಾಗರೀಕರು ಆರೋಪಿಸಿದ್ದಾರೆ.

ನವೆಂಬರ್ 27 ರ ಭಾನುವಾರ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ, ಶಂಕುಸ್ಥಾಪನೆಯ ಉದ್ದೇಶದಿಂದ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಲೆನಾಡು ಭಾಗಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ವಿಶೇಷವಾಗಿ ಶಿವಮೊಗ್ಗ, ತೀರ್ಥಹಳ್ಳಿ, ಕೊಪ್ಪ ಭಾಗಗಳಲ್ಲಿ ಮುಖ್ಯಮಂತ್ರಿ ಪ್ರವಾಸ ಕೈಕೊಂಡಿದ್ದು ಗೃಹಮಂತ್ರಿಗಳ ತವರೂರು ತೀರ್ಥಹಳ್ಳಿಯಲ್ಲಿ ದೊಡ್ಡ ಕಾರ್ಯಕ್ರಮದ ತಯಾರಿ ನಡೆದಿದೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ಆಡಳಿತ ಎಲ್ಲಾ ಡಿ ದರ್ಜೆ ನೌಕರರಿಗೆ ಜನ ಸೇರಿಸೋ ಜವಾಬ್ದಾರಿ ವಹಿಸಿ, ಬಿಜೆಪಿ ಕಾರ್ಯಕರ್ತರಂತೆ ಕೆಲಸ ಮಾಡಿಸಿಕೊಳ್ಳುವ ಅಧಿಕಾರದ ದುರುಪಯೋಗದ ಕೆಲಸ ನಡೆಯುವ ಬಗ್ಗೆ ಸ್ಥಳೀಯರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

ಸಧ್ಯಕ್ಕೆ ಯಾವ ಪಂಚಾಯತಿಗಳಲ್ಲೂ ಸಹ ಅಭಿವೃದ್ಧಿ ಅಧಿಕಾರಿಗಳು ಸರಿಯಾಗಿ ಜನಸಾಮಾನ್ಯರ ಕೈಗೆ ಸಿಗುತ್ತಿಲ್ಲ. ಅಂಗನವಾಡಿ ಕಾರ್ಯಕರ್ತರು ಮಕ್ಕಳ ಪೋಷಣೆ ಮಾಡುವುದು ಬಿಟ್ಟು ಊರೂರು ಬೀದಿ ಬೀದಿ ಸುತ್ತಿದ್ದಾರೆ. ಆಶಾ ಕಾರ್ಯಕರ್ತರೂ ಸಹ ಯಾವ ಬಿಜೆಪಿ ಕಾರ್ಯಕರ್ತರಿಗೂ ಕಡಿಮೆ ಇಲ್ಲದಂತೆ ಕೆಲಸ ಮಾಡುತ್ತಿದ್ದಾರೆ. ಹಾಗಾದರೆ ಅವರಿಗೇ ಎಂದು ಇರುವ ಕೆಲಸ ಮಾಡುವವರ್ಯಾರು. ಇದು ಜನಸಾಮಾನ್ಯರಿಗೂ ದೊಡ್ಡ ತಲೆನೋವಾಗಿ ಮಾರ್ಪಟ್ಟಿದೆ.

ಹೇಳಿಕೇಳಿ ಚುನಾವಣಾ ವರ್ಷ. ಇಂತಹ ಸಮಯದಲ್ಲಿ ಅದೆಂತದ್ದೇ ಸರ್ಕಾರಿ ಕಾರ್ಯಕ್ರಮ ಆದರೂ ರಾಜಕೀಯ ಪಕ್ಷ ತನ್ನ ಲಾಭಕ್ಕಾಗಿಯೇ ಕೆಲಸ ಮಾಡುತ್ತವೆ. ಇಂತಹ ಸಮಯದಲ್ಲಿ ಜನ ಸೇರಿಸಿ ಪ್ರತಿಷ್ಠೆ ಮೆರೆಯುವುದು ಆಡಳಿತ ಪಕ್ಷಗಳು ರೂಢಿಯಿಂದ ನಡೆಸಿಕೊಂಡು ಬಂದಿವೆ. ಆದರೆ ಇಂತಹ ಕೆಲಸಕ್ಕೆ ಸರ್ಕಾರಿ ನೌಕರರನ್ನು ಬಳಸುವುದು ಆಡಳಿತ ಯಂತ್ರದ ಸಂಪೂರ್ಣ ದುರುಪಯೋಗ ಎಂದೇ ತೀರ್ಥಹಳ್ಳಿ ಭಾಗದಲ್ಲಿ ಹೇಳಲಾಗುತ್ತಿದೆ.

ಇನ್ನು ಅಂಗನವಾಡಿ, ಆಶಾ ಕಾರ್ಯಕರ್ತರು ಜನ ಸೇರಿಸುವಲ್ಲಿ ಜನರಿಗೆ, ಸ್ತ್ರೀ ಶಕ್ತಿ, ಸ್ವಸಹಾಯ ಸಂಘಗಳಿಗೆ ಕಡ್ಡಾಯವಾಗಿ ಬರಲೇಬೇಕು ಎಂಬ ಒತ್ತಡ ಹಾಕುತ್ತಿರುವುದೂ ಸಹ ಕಂಡುಬಂದಿದೆ. ಈ ಕಡ್ಡಾಯ ಸುತ್ತೋಲೆಯ ಆದೇಶ ತಾಲ್ಲೂಕು ಆಡಳಿತ, ಸರ್ಕಾರ ಯಾರ ಕಡೆಯಿಂದಲೂ ಬಾರದೇ ಇದ್ದರೂ ಸ್ಥಳೀಯ ಪುಡಾರಿಗಳು ಅಂಗನವಾಡಿ ಕಾರ್ಯಕರ್ತರ ಕಡೆಯಿಂದ ಹೇಳಿಸುತ್ತಿರುವ ಉದ್ದೇಶವಾದರೂ ಏನು ಎಂಬುದು ಪ್ರಶ್ನಾರ್ಹ.

ಅಂದಹಾಗೆ ಕಳೆದ ಬಾರಿ 20,000 ಮತಗಳ ಅಂತರದಿಂದ ಗೆದ್ದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಕ್ಷೇತ್ರದಲ್ಲಿ ಮುಖ್ಯಮಂತ್ರಿಗಳು ಬರುವ ಕಾರ್ಯಕ್ರಮಕ್ಕೆ ಜನ ಸೇರಿಸಲು ಸರ್ಕಾರಿ ನೌಕರರ ಬಳಕೆ ಎಷ್ಟು ಸರಿ. ಹಾಗೆಯೇ 20,000 ಜನ ಸೇರಿಸುವ ಬಗ್ಗೆ ಸ್ಥಳೀಯ ಬಿಜೆಪಿ ಮಾತಾಡುತ್ತಿದ್ದರು. ಆದರೆ ಈಗ ನಾಲ್ಕೈದು ಸಾವಿರ ಜನರಿಗಷ್ಟೆ ಸೀಮಿತವಾಗಿ ಸೇರುವ ಮೈದಾನದಲ್ಲಿ ಜನ ಸೇರಿಸುವುದು ನೋಡಿದರೆ ಕ್ಷೇತ್ರದಲ್ಲಿ ತಮ್ಮ ವರ್ಚಸ್ಸು ಕುಗ್ಗಿದೆ ಎಂಬುದನ್ನು ಬಿಜೆಪಿಗರೇ ಪರೋಕ್ಷವಾಗಿ ಒಪ್ಪಿದಂತಾಗಿದೆ ಎಂದು ಸ್ಥಳೀಯ ಕಾಂಗ್ರೆಸ್ ಪಕ್ಷದ ಮುಖಂಡರ ಅಭಿಪ್ರಾಯವಾಗಿದೆ.

ಇನ್ನು ಸ್ಥಳೀಯ ಜ್ವಲಂತ ಸಮಸ್ಯೆಯಾದ ಅಡಿಕೆ ತೋಟದ ಎಲೆಚುಕ್ಕೆ ರೋಗದ ಬಗ್ಗೆ ಮುಖ್ಯಮಂತ್ರಿ ಕಾರ್ಯಕ್ರಮದಲ್ಲಿ ಪ್ರಸ್ತಾಪ ಮಾಡಲಾಗುವುದೇ ಎಂಬ ಪ್ರಶ್ನೆ ಕೂಡಾ ಎದ್ದಿದೆ. ಹಾಗೊಂದು ವೇಳೆ ಎಲೆಚುಕ್ಕೆ ರೋಗದ ಬಗ್ಗೆ ಮುಖ್ಯಮಂತ್ರಿಗಳು ಸಭೆಯಲ್ಲಿ ಪ್ರಸ್ತಾಪಿಸಿದರೂ ಚುನಾವಣೆ ದೃಷ್ಟಿಯಿಂದ ಅದು ಕೇವಲ ಭರವಸೆ ಮಾತ್ರವೇ ಅಥವಾ ಈ ವರ್ಷದಲ್ಲೇ ಕಾರ್ಯರೂಪಕ್ಕೆ ಬರುವುದೇ ಎಂಬ ಬಗ್ಗೆಯೂ ಸ್ವತಃ ಬಿಜೆಪಿ ಪಾಳಯದಲ್ಲೇ ಮಾತನಾಡಿಕೊಳ್ಳುತ್ತಿದ್ದಾರೆ.

ಒಟ್ಟಾರೆ ಯಾರ ಬೇಡಿಕೆಯೂ ಇಲ್ಲದ ಕೋಟಿ ಲೆಕ್ಕದ ರಸ್ತೆ ಅಭಿವೃದ್ಧಿ ಕಾಮಗಾರಿ ಉದ್ಘಾಟನೆಯ ಹಿಂದೆ ಸ್ಥಳೀಯ ಜ್ವಲಂತ ಸಮಸ್ಯೆಗಳಾದ, ಮಲೆನಾಡಿಗರ ಉಸಿರಾಗಿರುವ ಅಡಿಕೆಗೆ ತಗುಲಿರುವ ಎಲೆಚುಕ್ಕೆ ರೋಗ, ಬೆಲೆಯೇರಿಕೆ ಬಿಸಿ ಮರೆಯಾಗದಿರಲಿ ಎಂಬುದು ಸ್ಥಳೀಯ ಪ್ರಜ್ಞಾವಂತರ ಆಶಯವಾಗಿದೆ.

ಬೆಳಗಾವಿ ಗಡಿ ವಿವಾದ ವಿಚಾರಣೆ ; ಕರ್ನಾಟಕ ಸರ್ಕಾರದ ನಿಲುವೇನು?
1956 ರ ರಾಜ್ಯ ಪುನರ್ ವಿಂಗಡನಾ ಕಾಯ್ದೆಯನ್ನು ಪ್ರಶ್ನಿಸಿ 2004 ರಲ್ಲಿ ಮಹಾರಾಷ್ಟ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರ ಉನ್ನತ ಮಟ್ಟದ ಸಮಿತಿ ಸೇರಿದಂತೆ ಸರ್ವ ಪಕ್ಷಗಳನ್ನು ಒಳಗೊಂಡಂತೆ ಮೇಲಿಂದ ಮೇಲೆ ಸಭೆಗಳನ್ನೂ ಸಹ ಮಾಡಿದೆ. ಈ ವಿಚಾರದಲ್ಲಿ ಕರ್ನಾಟಕ ಸರ್ಕಾರ ಮಾತ್ರ ಅದರ ಬಗೆಗಿನ ಸಿದ್ಧತೆ ಬಗ್ಗೆ ಇಲ್ಲಿಯವರೆಗೆ ತುಟಿ ಬಿಚ್ಚಿಲ್ಲ.

2004 ರಲ್ಲಿ ಸಲ್ಲಿಕೆಯಾದ ಅರ್ಜಿಯ ಬಗ್ಗೆ ಬರೋಬ್ಬರಿ 18 ವರ್ಷಗಳ ನಂತರ ಸುಪ್ರೀಂಕೋರ್ಟ್ ವಿಚಾರಣೆಗೆ ಸಿದ್ದವಾಗಿದ್ದು, ಗಡಿ ವಿವಾದವನ್ನು ಸುಪ್ರೀಂಕೋರ್ಟ್ ತಗೆದುಕೊಳ್ಳಬೇಕೇ, ಬೇಡವೇ ಎಂಬ ನಿರ್ಧಾರವನ್ನು ಪ್ರಕಟಿಸಲಿದೆ. ಸರ್ಕಾರ ಈ ವರೆಗೂ ತಜ್ಞರ ಅಭಿಪ್ರಾಯವನ್ನು ಒಳಗೊಂಡ ಯಾವುದೇ ಸಿದ್ಧತೆಗಳನ್ನು ಮಾಡಿಕೊಂಡಿಲ್ಲ. ಜೊತೆಗೆ 2018 ರ ನಂತರ ಸರ್ಕಾರದ ಕಡೆಯಿಂದ ಇಲ್ಲಿಯವರೆಗೆ ಗಡಿ ಉಸ್ತುವಾರಿ ಸಚಿವರನ್ನೂ ನೇಮಿಸದಿರುವುದು ಸರ್ಕಾರದ ದಿವ್ಯ ನಿರ್ಲಕ್ಷ್ಯಕ್ಕೆ ಸ್ಪಷ್ಟ ಸಾಕ್ಷಿಯಂತಿದೆ.

ಇನ್ನು ಗಡಿ ವಿವಾದದಲ್ಲಿ ಸುಪ್ರೀಂಕೋರ್ಟ್ ಅಷ್ಟು ಸುಲಭವಾಗಿ ಕೇವಲ ಒಂದು ರಾಜ್ಯದ ಪರ ನಿಲ್ಲುವಂತಿಲ್ಲ. ಗಡಿ ವಿವಾದ ಎಂದರೆ ಅದು ಸಂಪೂರ್ಣ ಒಕ್ಕೂಟ ವ್ಯವಸ್ಥೆಯ ಅಸ್ತಿತ್ವಕ್ಕೇ ಕೈ ಇಟ್ಟಂತೆ. ಈ ಸಂದರ್ಭಕ್ಕೆ ಭಾಷಾವಾರು ಪ್ರಾಂತ್ಯದ ವಿಂಗಡಣೆ ಎಂದರೆ ಕೇವಲ ಮಹಾರಾಷ್ಟ್ರಕ್ಕೆ ಹೋಗುವ ಭೂಪ್ರದೇಶ ಮಾತ್ರವಲ್ಲ ಕರ್ನಾಟಕಕ್ಕೆ ಸೇರಬೇಕಾದ ಭೂ ಪ್ರದೇಶಕ್ಕೂ ದಾರಿ ಮಾಡಿಕೊಟ್ಟಂತಾಗಲಿದೆ. ಕನ್ನಡವನ್ನೇ ಹೆಚ್ಚಾಗಿ ಮಾತನಾಡುವ ನೆರೆ ರಾಜ್ಯಗಳ ಗಡಿರೇಖೆಯ ಒಳಗಿರುವ ಕಾಸರಗೋಡು, ಸೊಲ್ಲಾಪುರ, ದಕ್ಷಿಣ ಕೊಲ್ಲಾಪುರ, ಅಕ್ಕಲಕೋಟೆ, ಮಂತ್ರಾಲಯ ಸೇರಿದಂತೆ ಸುತ್ತಲಿನ ಐದು ರಾಜ್ಯಗಳಿಂದ ಬರುವ ಮತ್ತು ಆ ರಾಜ್ಯಗಳಿಗೆ ಸೇರುವ ಅಸಂಖ್ಯಾತ ಊರುಗಳ ವಿವಾದವನ್ನು ಹೊಸದಾಗಿ ಸುಪ್ರೀಂಕೋರ್ಟೇ ಹುಟ್ಟು ಹಾಕಿದಂತಾಗಲಿದೆ. ಹಾಗೊಂದು ವೇಳೆ ಸುಪ್ರೀಂಕೋರ್ಟ್ ವಿಚಾರಣೆಗೆ ತೀರ್ಪು ಕೊಟ್ಟಂತೆ ಜೇನುಗೂಡಿಗೆ ಕಲ್ಲು ಹೊಡೆದಂತಾಗಲಿದೆ.

ಸಾಮಾನ್ಯವಾಗಿ ಇಂತಹ ವಿಚಾರಗಳಲ್ಲಿ ಸುಪ್ರೀಂಕೋರ್ಟ್ ಎರಡು ರಾಜ್ಯಗಳ ಗಡಿ ವಿವಾದದ ನಡುವೆ ಮೂಗು ತೂರಿಸುವುದು ಅಷ್ಟು ಸೂಕ್ತವಲ್ಲ, ಹಾಗೂ ಸುಲಭವೂ ಅಲ್ಲ. ಹಾಗೊಂದು ವೇಳೆ ಮಹಾರಾಷ್ಟ್ರದ ಪಟ್ಟಿಗೆ ಕಟ್ಟು ಬಿದ್ದು ವಿಚಾರಣೆಗೆ ತೀರ್ಪು ಪ್ರಕಟಿಸಿದ್ದೇ ಆದರೆ ಅದಕ್ಕೂ ಮುನ್ನ ಸುಪ್ರೀಂಕೋರ್ಟ್ ಅದಕ್ಕೆ ಬೇಕಾದಂತಹ ಆಯೋಗವನ್ನು ರಚಿಸಿ ಆಯೋಗ ಕೊಟ್ಟ ವರದಿ ಆಧಾರದಲ್ಲಿ ನಿರ್ಧಾರ ಪ್ರಕಟಿಸಬೇಕು. ಆದರೆ ಈ ಹಿಂದೆ ಗಡಿ ಭಾಗಕ್ಕೆ ಸಂಬಂಧಿಸಿದ ಮೆಹರ್ ಚಂದ್ ಮಹಾಜನ್ ಆಯೋಗ ಈಗಾಗಲೇ ಕೊಟ್ಟ ವರದಿಯಂತೆ ಖಾನಾಪುರ ನಿಪ್ಪಾಣಿ ಅಷ್ಟೆ ಮಹಾರಾಷ್ಟ್ರಕ್ಕೆ ಸೇರ್ಪಡೆ ಆಗಲಿದೆ. ಆದರೆ ಮಹಾರಾಷ್ಟ್ರದ ಮುಖ್ಯವಾದ ವಾದ ಎಂದರೆ ನೇರ ಬೆಳಗಾವಿಯೇ ತಮಗೆ ಸೇರಬೇಕೆಂಬುದು.

ಮಹಾರಾಷ್ಟ್ರದ ವಿಚಾರಕ್ಕೆ ಹೇಳುವುದಾದರೆ ಬೆಳಗಾವಿ ಎಂಬುದು ಅಲ್ಲಿನ ಭಾವನೆಗಳಿಗೆ ಸಂಬಂಧಿಸಿದ ವಿಚಾರ. ಮಹಾರಾಷ್ಟ್ರದ ಶಿವಸೇನೆ, NCP ನಾ ಮುಂದು ತಾ ಮುಂದು ಎಂಬಂತೆ ಗಡಿ ವಿವಾದವನ್ನು ಜೀವಂತವಾಗಿ ಇರಿಸಿಕೊಂಡು ಬಂದಿವೆ. ಬಿಜೆಪಿ ಮತ್ತು ಕಾಂಗ್ರೆಸ್ ಕೂಡಾ ಅಲ್ಲಿನ ದೊಡ್ಡ ಪಕ್ಷಗಳ ಜೊತೆಗೆ ಹಿನ್ನೆಲೆಯಲ್ಲಿ ನಿಂತು ಪೋಷಿಸುವುದು ಹಿಂದಿನಿಂದಲೂ ನಡೆದುಕೊಂಡು ಬಂದಿವೆ. ಈಗ ಭಾರತ ಪಾಕಿಸ್ತಾನ ಹೇಗೆ ಶತ್ರುರಾಷ್ಟ್ರಗಳು ಎಂಬುದನ್ನು ಜೀವಂತವಾಗಿ ಇಟ್ಟಿವೆಯೋ ಹಾಗೆ. ಇದು ಆ ಭಾಗದಲ್ಲಿ ಮತ ಗಿಟ್ಟಿಸುವ ಒಂದು ಮಾರ್ಗ ಎಂಬುದು ತೆರೆದಿಟ್ಟ ಗುಟ್ಟು. ಇಂದಿನ ವಿಚಾರಣೆ ಕೂಡಾ ಮಹಾರಾಷ್ಟ್ರ ಸರ್ಕಾರದ ತಂತ್ರಗಾರಿಕೆಯ ಮುಂದುವರಿದ ಭಾಗ.

ಇನ್ನು ರಚನೆಯಾಗಿ ವರದಿ ಬಂದಿದ್ದ ಮಹಾಜನ್ ವರದಿ ಜಾರಿಯಾದರೆ ಕರ್ನಾಟಕಕ್ಕೆ ಒಂದು ರೀತಿಯಲ್ಲಿ ಲಾಭವೇ ಆಗಲಿದೆ. ಕರ್ನಾಟಕದಿಂದ ಹೋಗುವ ಕೆಲವು ಸಣ್ಣಪುಟ್ಟ ಊರುಗಳಿದ್ದರೂ ದೊಡ್ಡ ಊರುಗಳೇ ರಾಜ್ಯಕ್ಕೆ ಸೇರ್ಪಡೆ ಆಗಲಿವೆ. ಆದರೆ ಇದಕ್ಕೆ ಮಹಾರಾಷ್ಟ್ರದ ವಿರೋಧವಿದೆ.

ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂಧೆ ಈಗಾಗಲೇ ಸರ್ವ ಪಕ್ಷಗಳನ್ನು ಒಳಗೊಂಡಂತೆ ವಾರದಿಂದಲೂ ಸಭೆ ನಡೆಸಿ ತಜ್ಞರ ಸಮಿತಿಯನ್ನು ನೇಮಿಸಿದೆ. ಆದರೆ ಕರ್ನಾಟಕದ ಪರ ವಾದ ಮಂಡಿಸುವ ವಕೀಲರ ಪರ ನಿಲ್ಲಲು ಈ ವರೆಗೂ ಯಾವುದೇ ತಜ್ಞರು, ಸರ್ಕಾರದ ಪ್ರತಿನಿಧಿಯಾಗಿ ಯಾವುದೇ ಸಚಿವರು ಈ ವರೆಗೂ ನಿಂತಿಲ್ಲದಿರುವುದು ಕನ್ನಡಿಗರ ಕೆಂಗಣ್ಣಿಗೆ ಗುರಿಯಾದಂತಾಗಿದೆ.

ಸರ್ಕಾರಿ ಶಾಲೆಗಳಿಗೆ ಕೇಸರಿ ಬಣ್ಣ ; ನಟ ಕಿಶೋರ್ ಕುಮಾರ್ ಆಕ್ಷೇಪ
ಇತ್ತೀಚಿನ ದಿನಗಳಲ್ಲಿ ರಾಜಕೀಯ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಅವಲೋಕಿಸಿ ಆಡಳಿತ ಪಕ್ಷಗಳು ಎಸಗುವ ತಪ್ಪು ನಿರ್ಧಾರಗಳನ್ನು ಟೀಕಿಸುವವರಲ್ಲಿ ನಟ ಕಿಶೋರ್ ಕುಮಾರ್ ಗಮನಾರ್ಹರು. ಸಧ್ಯ ರಾಜ್ಯ ಸರ್ಕಾರದ ಸರ್ಕಾರಿ ಶಾಲೆಗಳಿಗೆ ಕೇಸರಿ ಬಣ್ಣ ಹೊಡೆಯುವ ನಿರ್ಧಾರದ ಬಗ್ಗೆಯೂ ಕಿಶೋರ್ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ.

ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸೇರಿ ಸರ್ಕಾರಿ ಶಾಲೆಗಳಿಗೆ ಕೇಸರಿ ಬಣ್ಣ ಹೊಡೆಯುವ ನಿರ್ಧಾರವನ್ನು ಪ್ರಸ್ತಾಪಿಸಿದ್ದರು. ಸ್ವಾಮಿ ವಿವೇಕಾನಂದರ ಹೆಸರು ಮುಂದಿಟ್ಟುಕೊಂಡು ರೂಪಿಸಲಾದ ಇಂತಹ ರಾಜಕೀಯ ಪ್ರೇರಿತ ನಿರ್ಧಾರಕ್ಕೆ ಎಲ್ಲಾ ಕಡೆಗಳಿಂದ ವಿರೋಧ ವ್ಯಕ್ತವಾಗಿತ್ತು.

ಆದರೆ ಬಿಜೆಪಿ ಪಕ್ಷದ ಪ್ರಮುಖರು ಈ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದರು. ‘ಕೇಸರಿ ಕಂಡರೆ ಯಾಕೆ ಇವರಿಗೆ ವಿರೋಧ, ರಾಷ್ಟ್ರಧ್ವಜದಲ್ಲೂ ಕೇಸರಿ ಇಲ್ಲವೇ..’ ಎಂಬ ರೀತಿಯಾಗಿ ತಮ್ಮ ವಾದ ಮಂಡಿಸಿದ್ದರು. ಹೀಗೆ ಸರ್ಕಾರದ ಇಂತಹ ರಾಜಕೀಯ ಪ್ರೇರಿತ  ನಿರ್ಧಾರಕ್ಕೆ ಎಲ್ಲೆಡೆ ಪರ ವಿರೋಧಗಳು ವ್ಯಕ್ತವಾಗಿದ್ದವು.

ಸಧ್ಯ ಸರ್ಕಾರದ ಈ ನಿಲುವಿನ ಬಗ್ಗೆ ನಟ ಕಿಶೋರ್ ಕೂಡ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಸರ್ಕಾರದ ಇಂತಹ ನಿರ್ಧಾರದ ಬಗ್ಗೆ ನಟ ಕಿಶೋರ್ ಈ ರೀತಿಯಾಗಿ ಪ್ರತಿಕ್ರಿಯಿಸಿದ್ದಾರೆ.
“ಜ್ಞಾನದ ದೇಗುಲ, ಶಾಲೆಗಳನ್ನೂ ಬಿಡದ ಹೊಲಸು ರಾಜಕೀಯ. ಧರ್ಮದ ಹೆಸರಿನಲ್ಲಿ ವಿವೇಕಾನಂದರ ಉದಾತ್ತ ಚಿಂತನೆಗಳ ಅವಹೇಳನ, ಅವಿವೇಕತನ.
ಕೇವಲ ಯಾರದ್ದೊ ಓಟು, ಅಧಿಕಾರದ ದಾಹಕ್ಕಾಗಿ ನಮ್ಮ ಮಕ್ಕಳೂ, ಅವರ ಭವಿಷ್ಯವೂ, ದೇಶವೂ ಬಲಿಯಾಗಬೇಕಾದೀತು. ಏಳಿ ಎದ್ದೇಳಿ ಪ್ರತಿಭಟಿಸಿ.” ಎನ್ನುತ್ತಾ ಜನರನ್ನು ಎಚ್ಚರಿಸುವ ರೀತಿಯಲ್ಲಿ ಪ್ರತಿಭಟಿಸಿದ್ದಾರೆ.

ಸಧ್ಯ ಸರ್ಕಾರದ ಈ ನಿರ್ಧಾರದ ಬಗ್ಗೆ ಎಲ್ಲೆಡೆ ವಿರೋಧ ವ್ಯಕ್ತವಾಗಿದ್ದು, ಮೊದಲು ಶಾಲೆಗಳ ಮೂಲಭೂತ ವ್ಯವಸ್ಥೆ ಕಲ್ಪಿಸಿ ನಂತರ ಬಣ್ಣದ ಬಗ್ಗೆ ಯೋಚಿಸಿ ಎಂಬ ಮಾತುಗಳು ಕೇಳಿ ಬರುತ್ತಿವೆ. ಇತ್ತ ಸರ್ಕಾರ ತನ್ನ ಮೊಂಡು ಹಠ ಬಿಡದೇ ಬಣ್ಣ ಹೊಡೆದೇ ತೀರುವ ನಿರ್ಧಾರಕ್ಕೆ ಬಂದಂತಿದೆ.

‘ಆಪರೇಷನ್ ಮತದಾರರ ಪಟ್ಟಿ ಪರಿಷ್ಕರಣೆ’ ಹಗರಣ ; ಬೊಮ್ಮಾಯಿ ಬಂಧನಕ್ಕೆ ಕಾಂಗ್ರೆಸ್ ಪಟ್ಟು
“ಆಪರೇಷನ್ ಮತದಾರರ ಪಟ್ಟಿ ಪರಿಷ್ಕರಣೆ’ ಹಗರಣದಲ್ಲಿ ಭಾಗಿಯಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಕ್ಷಣ ರಾಜೀನಾಮೆ ನೀಡಬೇಕು ಮತ್ತು ಮುಖ್ಯಮಂತ್ರಿಗಳು ಸೇರಿದಂತೆ ಭಾಗಿಯಾಗಿರುವ ಸಚಿವರು, ಎಲ್ಲ ಅಧಿಕಾರಿಗಳನ್ನು ತಕ್ಷಣ ಬಂಧಿಸಬೇಕು ಎಂದು ಕಾಂಗ್ರೆಸ್ ಪಕ್ಷ ಆಗ್ರಹಿಸಿದೆ.

ಇಂದು ನಡೆದ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಮತ್ತು ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರನ್ನು ಒಳಗೊಂಡ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಇದು ಸ್ಪಷ್ಟವಾಗಿ ಸಂವಿಧಾನದ ಅಡಿಯಲ್ಲಿ ಕಾನೂನು ಬಾಹಿರ ಚಟುವಟಿಕೆ. ಒಬ್ಬ ಸರ್ಕಾರದ ಮುಖ್ಯಸ್ಥರಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂತಹ ಪ್ರಕರಣದ ನೇರ ಆರೋಪಿಯಾಗಿದ್ದಾರೆ. ಅವರನ್ನು ಬಂಧಿಸುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡುವ ಮೂಲಕ ಬಿಜೆಪಿ ಸರ್ಕಾರದ ಮೇಲೆ ಹರಿಹಾಯ್ದಿದ್ದಾರೆ.

ಇದು “ಆಪರೇಷನ್ ಕಮಲ’ದ ಮುಂದುವರಿದ ಭಾಗವಾದ “ಆಪರೇಷನ್ ಮತದಾರರ ಪಟ್ಟಿ ಪರಿಷ್ಕರಣೆ’ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡುವ ಗಂಭೀರ ಅಪರಾಧ ಪ್ರಕರಣ. ಈ ಬಗ್ಗೆ ರಾಜ್ಯ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಯವರ ಉಸ್ತುವಾರಿಯಲ್ಲಿಯೇ ನ್ಯಾಯಾಂಗ ತನಿಖೆ ಮಾಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಈ ಪ್ರಕರಣವನ್ನು ಸೂಕ್ಷ್ಮವಾಗಿ ಅವಲೋಕಸಿದರೆ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿ ಮಾತ್ರವಲ್ಲ ಚುನಾವಣಾ ಆಯೋಗ ಕೂಡಾ ಈ ಹೀನ ಕೃತ್ಯದಲ್ಲಿ ಭಾಗಿಯಾಗಿರುವ ಗುಮಾನಿಗಳಿವೆ. ಕೇಂದ್ರ ಚುನಾವಣಾ ಆಯೋಗ ಕೂಡಾ ಇದನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಬೇಕು ಎಂದು ಸಿದ್ದರಾಮಯ್ಯ ನೇರವಾಗಿ ಸರ್ಕಾರ ಮತ್ತು ಬಿಬಿಎಂಪಿ ಮೇಲೆ ವಾಗ್ದಾಳಿ ನಡೆಸಿದ್ದಾರೆ.

ಮತದಾರರ ಪಟ್ಟಿಯ ಅಕ್ರಮ ಪರಿಷ್ಕರಣೆಯ ಹಗರಣ ನಡೆಸಿದ ಸಂಸ್ಥೆಯ ಹೆಸರು ರಾಜ್ಯದ ಸಚಿವರೊಬ್ಬರ ಒಡೆತನದ ಸಂಸ್ಥೆಯ ಹೆಸರಿನ ಜೊತೆ ತಾಳೆಯಾಗುವುದು ಕಾಕತಾಳಿಯವಾಗಿರಲಾರದು. ಅದೇ ರೀತಿ ಸಂಸ್ಥೆಯ ಕಚೇರಿ ಇರುವ ಸ್ಥಳದ ಸಮೀಪದಲ್ಲಿಯೇ ಈ ಸಂಶಯಿತ ಸಚಿವರ ಸಂಸ್ಥೆಗಳೂ ಇರುವುದು ಸಂಶಯವನ್ನು ಇನ್ನಷ್ಟು ಬಲಪಡಿಸುತ್ತದೆ ಎಂದು ಸಚಿವ ಅಶ್ವಥ್ ನಾರಾಯಣ್ ಮತ್ತು ಮುಖ್ಯಮಂತ್ರಿ ಮೇಲೆ ಆರೋಪಿಸಿದ್ದಾರೆ.

ಸರ್ಕಾರದ ಮಟ್ಟದಲ್ಲಿ ಚರ್ಚೆಯಾಗದೆ ಇಂತಹದ್ದೊಂದು ಹಗರಣ ನಡೆಸಲು ಸಾಧ್ಯವಿಲ್ಲ, ಅಧಿಕಾರಿಗಳು ಸ್ವಯೀಚ್ಚೆಯಿಂದ ಇಷ್ಟೊಂದು ಬೇಜವಾಬ್ದಾರಿಯಿಂದ ನಡೆದುಕೊಳ್ಳಲು ಸಾಧ್ಯವಿಲ್ಲ. ಮುಖ್ಯಮಂತ್ರಿಯವರಿಂದ ಹಿಡಿದು ಹಿರಿಯ ಸಚಿವರೆಲ್ಲರೂ ಭಾಗಿಯಾಗಿಯೇ ಈ ಕೆಲಸ ಮಾಡಿದ್ದಾರೆ.

‘ಮೇಲಿನವರ’ ರಕ್ಷಣೆ ಇಲ್ಲದೆ ಮಹಾನಗರ ಪಾಲಿಕೆ ಯಾವುದೇ ಪೂರ್ವಪರ ಪರಿಶೀಲನೆ ನಡೆಸದೆ “ಚಿಲುಮೆ ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆಗೆ ಮತದಾರರ ಪಟ್ಟಿಯನ್ನು ಉಚಿತವಾಗಿ ಪರಿಷ್ಕರಣೆ ಮಾಡಲು ಅನುಮತಿ ನೀಡಲು ಹೇಗೆ ಸಾಧ್ಯ?

ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಮತದಾರರ ಮಾಹಿತಿ ಸಂಗ್ರಹದ ಕೆಲಸವನ್ನು ಚುನಾವಣಾ ಆಯೋಗ ಮಾಡಬೇಕಾಗಿದ್ದು ಖಾಸಗಿ ಸಂಸ್ಥೆಗೆ ಇದನ್ನು ಒಪ್ಪಿಸುವುದೇ ಅಪರಾಧವಾಗಿದೆ. ಬಿಬಿಎಂಪಿಯ ಅಧಿಕಾರಿಗಳೇ ಎಂದು ತಪ್ಪಾಗಿ ತಿಳಿದು ಮತದಾರರು ವೈಯಕ್ತಿಕ ಮಾಹಿತಿಯನ್ನು ನೀಡಿದ್ದಾರೆ. ಇದು ವಿಶ್ವಾಸ ದ್ರೋಹವಾಗಿದೆ.

ಚಿಲುಮೆ ಸಂಸ್ಥೆಯ ಮಾಲೀಕ ಕೃಷ್ಣಪ್ಪ ರವಿಕುಮಾರ ಎಂಬವರು ಈ ಹಗರಣದ ರೂವಾರಿಯಾಗಿ ಮೇಲ್ನೋಟಕ್ಕೆ ಕಾಣಿಸಿದರೂ ಇದರ ಹಿಂದೆ ಸರ್ಕಾರದ ಉನ್ನತ ಸ್ಥಾನದಲ್ಲಿರುವವರ ಕೈವಾಡ ಖಂಡಿತ ಇದೆ. ಈ ಬಗ್ಗೆ ತನಿಖೆ ಮಾಡಿದರೆ ಮಾತ್ರ ಸತ್ಯ ಬಯಲಾಗಲು ಸಾಧ್ಯ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನಂತರ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿ ಬಸವರಾಜ ಬೊಮ್ಮಾಯಿ, ಸಚಿವ ಸಂಪುಟದ ಇತರೆ ಸಚಿವರು, ಸಂಬಂಧಪಟ್ಟ ಅಧಿಕಾರಿಗಳು, ಚಿಲುಮೆ ಸಂಸ್ಥೆಯ ಅಧಿಕಾರಿಗಳು ಸೇರಿದಂತೆ ಪ್ರಕರಣದ ಅಡಿಯಲ್ಲಿ ಬರುವ ಎಲ್ಲರನ್ನೂ ಬಂಧಿಸುವಂತೆ ಪೊಲೀಸ್ ಆಯುಕ್ತರನ್ನು ಒತ್ತಾಯಿಸಿದ್ದಾರೆ.

ಜೊತೆಗೆ ಮತದಾರರ ಪಟ್ಟಿಯನ್ನು ಅಕ್ರಮವಾಗಿ ಪರಿಷ್ಕರಿಸುವ ಈ ರಾಜಕೀಯ ಸಂಚನ್ನು ಬಯಲಿಗೆಳೆಯುವ ಮೂಲಕ ಮಾಧ್ಯಮ ಧರ್ಮವನ್ನು ಎತ್ತಿಹಿಡಿದರುವ Newsminute ಸಂಸ್ಥೆಯ ಕಾರ್ಯವನ್ನು ಸಿದ್ದರಾಮಯ್ಯ ಶ್ಲಾಘಿಸಿದ್ದಾರೆ.

ರಾಜ್ಯದ ಸರ್ಕಾರಿ ನೌಕರರು ಪ್ರತಿದಿನ ಒಂದು ಗಂಟೆ ಹೆಚ್ಚುವರಿ ಕೆಲಸ ಮಾಡಬೇಕು : ಬೊಮ್ಮಾಯಿ
ಬೆಂಗಳೂರು: 7 ನೇ ವೇತನ ಪರಿಷ್ಕರಣೆ ಪ್ರಕಟನೆಯ ಕುರಿತು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿಯವರು, ʼ ʼರಾಜ್ಯದ ಸರ್ಕಾರಿ ನೌಕರರು ಪ್ರತಿದಿನ ಒಂದು ಗಂಟೆ ಹೆಚ್ಚುವರಿ ಕೆಲಸ ಮಾಡಬೇಕುʼ ಎಂದು ಮಾತನಾಡಿದ್ದಾರೆ.

ಸರ್ಕಾರಿ ನೌಕರರ ವೇತನವನ್ನು ಪರಿಷ್ಕರಿಸಲು ಆಯೋಗವನ್ನು ರಚಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಮಾರ್ಚ್‌ನಲ್ಲಿ ಘೋಷಿಸಿದ್ದರು. ಆದರೆ ಅದನ್ನು ನವೆಂಬರ್‌ 9 ರಂದು 7ನೇ ವೇತನ ಆಯೋಗವನ್ನು ಪ್ರಕಟಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ರಾಜ್ಯ ಸರ್ಕಾರಿ ನೌಕರರ ವೇತನವನ್ನು ಪರಿಷ್ಕರಿಸಲು 7ನೇ ವೇತನ ಆಯೋಗವನ್ನು ರಚಿಸುವುದಾಗಿ ನವೆಂಬರ್‌ 9 ಬುಧವಾರದಂದು ಪ್ರಕಟಿಸಿದ್ದಾರೆ. ಈ ಹಿಂದೆಯೇ ನಿವೃತ್ತ ಹೈಕೋರ್ಟ್‌ ನ್ಯಾಯಾಧೀಶರನ್ನು 7ನೇ ವೇತನ ಆಯೋಗದ ಅಧ್ಯಕ್ಷರನ್ನಾಗಿ ನೇಮಿಸುವಂತೆ ಸರ್ಕಾರಿ ನೌಕರರ ವಿವಿಧ ಸಂಘಟನೆಗಳ ಕ್ರಿಯಾ ಸಮಿತಿಯು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ಅದರಂತೆಯೇ ಮಾಜಿ ಮುಖ್ಯ ಕಾರ್ಯದರ್ಶಿ, ನಿವೃತ್ತ ಹೈಕೋರ್ಟ್‌ ನ್ಯಾ.ಸುಧಾಕರ್‌ ರಾವ್ ಅವರನ್ನು ರಾಜ್ಯ ಸರ್ಕಾರಿ ನೌಕರರ ವೇತನ ಶ್ರೇಣಿ ಪರಿಷ್ಕರಣೆ ಆಯೋಗದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ ಎಂದು ಹೇಳಿದ್ದರು.

7 ನೇ ವೇತನ ಪರಿಷ್ಕರಣೆ ಪ್ರಕಟನೆಯ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಅಭಿನಂದಿಸಿದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ʼರಾಜ್ಯದ ಸರ್ಕಾರಿ ನೌಕರರು ಪ್ರತಿದಿನ ಒಂದು ಗಂಟೆ ಹೆಚ್ಚುವರಿ ಕೆಲಸ ಮಾಡಬೇಕುʼ ಎಂದು ಹೇಳಿದ್ದಾರೆ.

ʼಎಲ್ಲರೂ ಪ್ರಾಮಾಣಿಕತೆ ಮತ್ತು ನಿಷ್ಠೆಯಿಂದ ಕೆಲಸ ಮಾಡಿ, ಉಳಿದಿದ್ದನ್ನು ನನಗೆ ಬಿಟ್ಟುಬಿಡಿ. ನಾವು ಈ ರಾಜ್ಯವನ್ನು ಅಭಿವೃದ್ಧಿ ಹೊಂದುವಂತೆ ಮಾಡೋಣ. ನವ ಕರ್ನಾಟಕ ಮೂಲಕ ನವ ಭಾರತ ನಿರ್ಮಾಣಕ್ಕೆ ನಾವೆಲ್ಲರೂ ಶ್ರಮಿಸಬೇಕು. ಭಾರತದ ಉದ್ದೇಶಿತ ಟ್ರೆಲಿಯನ್‌ ಡಾಲರ್‌ ಆರ್ಥಿಕತೆಯಲ್ಲಿ ಒಂದು ಟ್ರೆಲಿಯನ್‌ ಡಾಲರ್‌ ಕರ್ನಾಟಕದ್ದೇ ಆಗಿರಬೇಕುʼ ಎಂದು ಹೇಳಿದ್ದಾರೆ.

ಏನು ಈ 5 ಟ್ರೆಲಿಯನ್ ಆರ್ಥಿಕತೆ?

ʼದೇಶದಲ್ಲಿ 2025-25ರ ವೇಳೆಗೆ 5 ಟ್ರೆಲಿಯನ್‌ ಅಮೆರಿಕನ್‌ ಡಾಲರ್‌ ಮೊತ್ತದ ಆರ್ಥಿಕತೆ ತಲುಪುವ ಉದ್ದೇಶಕ್ಕಾಗಿ ನಿರಂತರ ಆರ್ಥಿಕ ಬೆಳವಣಿಗೆಯನ್ನು ಸಾಧಿಸಲು ಸಜ್ಜಾಗುವುದು. 5 ಟ್ರೆಲಿಯನ್ ಗುರಿ ಸಾಧಿಸಲು ಒಟ್ಟು ದೇಶೀಯ ಉತ್ಪನ್ನ(ಜಿಡಿಪಿ) ದರವನ್ನು ಶೇ.8ಕ್ಕೆ ಕೊಂಡೊಯ್ದು ಮುದುವರೆಯಲು ಆರ್ಥಿಕತೆಯ ವೇಗವನ್ನು ಚುರುಕುಗೊಳಿಸುವಂತೆ ಸೂಚಿಸಲಾಗಿದೆʼ ಎಂದು ಕೇಂದ್ರ ಹಣಕಾರು ಮತ್ತು ಕಾರ್ಪೋರೇಟ್‌ ವ್ಯವಹಾರಗಳ ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮ್‌ ಅವರು ಸಂಸತ್ತಿನಲ್ಲಿ ನಡೆದ 2018-19 ರ ಆರ್ಥಿಕ ಸಮೀಕ್ಷೆಯಲ್ಲಿ ಮಂಡಿಸಿದ್ದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಬೊಮ್ಮಾಯಿಯವರು, ಕೋವಿಡ್‌-19 ಸಾಂಕ್ರಾಮಿಕ ರೋಗದ ಅತ್ಯಂತ ಕಠಿಣ ಸಮಯದಲ್ಲೂ ಶ್ರಮಿಸಿದ ಆರೋಗ್ಯ, ಪೊಲೀಸ್‌, ಗ್ರಾಮೀಣಾಭಿವೃದ್ಧಿ ಮತ್ತು ಕಂದಾಯ ಇಲಾಖೆಯ ಸರ್ಕಾರಿ ನೌಕರರನ್ನು ಅಭಿನಂದಿಸಿದ್ದಾರೆ.

ಪ್ರಸಕ್ತ ರಾಜ್ಯದ ಅರ್ಥಿಕತೆಯಲ್ಲಿ 13,000 ಕೋಟಿ ರೂ ಹೆಚ್ಚಾಗಿದೆ. ಪ್ರತಿ ವರ್ಷವೂ ಹಣದುಬ್ಬರವೂ ಹೆಚ್ಚಾಗುತ್ತಿದೆ. ಆದ್ದರಿಂದ ಎಲ್ಲಾರಿಗೂ ಸಮಯ ಮತ್ತು ಹಣ ಮುಖ್ಯ. ಸರಿಯಾದ ಸಮಯದಲ್ಲಿ ಹಣ ಸಂಪಾದಿಸುವುದು ಜೀವನವನ್ನು ಪ್ರೇರೆಪಿಸುತ್ತದೆ ಇದೇ ಕಾರಣದಿಂದ ಸರ್ಕಾರವು 7 ನೇ ವೇತನ ಆಯೋಗವನ್ನು ಸ್ಥಾಪಿಸುವ ನಿರ್ಧಾರ ಮಾಡಿದೆ ಎಂದು ಹೇಳಿದ್ದಾರೆ.