bbmp election – Peepal Media

ಬಿಬಿಎಂಪಿ ವಾರ್ಡ್ ಮರುವಿಂಗಡಣೆಯ ಕರಡು ಪಟ್ಟಿ ಬಿಡುಗಡೆ: ಸಾರ್ವಜನಿಕರ ಆಕ್ಷೇಪಕ್ಕೆ 15 ದಿನಗಳ ಗಡುವು
ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಾರ್ಡ್ ಮರುವಿಂಗಡಣೆಯ ಕರಡು ಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದ್ದು, ಸಾರ್ವಜನಿಕರಿಗೆ ಆಕ್ಷೇಪಣೆ ಸಲ್ಲಿಸಲು 15 ದಿನಗಳ ಅವಕಾಶ ನೀಡಲಾಗಿದೆ.

ಸಚಿವ ರಾಮಲಿಂಗಾರೆಡ್ಡಿ ನೇತೃತ್ವದ ವಾರ್ಡು ಮರುವಿಂಗಡಣೆ ಸಮಿತಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾಡಿದ್ದ 243 ವಾರ್ಡ್ ಗಳನ್ನು ರದ್ದುಗೊಳಿಸಿ 225 ವಾರ್ಡ್ ಗಳನ್ನು ಪಟ್ಟಿ ಮಾಡಿ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಈ ವರದಿಯನ್ನು ಪರಿಗಣಿಸಿ ರಾಜ್ಯ ಸರ್ಕಾರ ವಾರ್ಡು ಮರುವಿಂಗಡಣೆ ಪಟ್ಟಿಯನ್ನು ಬಿಡುಗಡೆಗೊಳಿಸಿದೆ.

ಬಿಜೆಪಿ ಪಕ್ಷದ ಅಧಿಕಾರಾವಧಿಯಲ್ಲಿ ಮಾಡಿರೋ ವಾರ್ಡ್ ವಿಂಗಡಣೆ ಸೂಕ್ತವಲ್ಲ ಎಂದು ಆರೋಪಿಸಿ ಕಾಂಗ್ರೆಸ್ ಕೋರ್ಟ್‌ ಮೊರೆ ಹೋಗಿತ್ತು. ಇದೀಗ ಕಾಂಗ್ರೆಸ್‌ ಪಕ್ಷ ವಾರ್ಡ್‌ಗಳನ್ನು ಮರುವಿಂಗಡಣೆ ಮಾಡಿದೆ. 15 ವಾರ್ಡ್‌ಗಳನ್ನು ಕಡಿಮೆ ಮಾಡಿ ಸಾರ್ವಜನಿಕ ಆಕ್ಷೇಪಕ್ಕೆ 15 ದಿನಗಳ ಗಡುವು ನೀಡಿದೆ.

ಬಿಬಿಎಂಪಿ ಸದಸ್ಯರ ಅಧಿಕಾರದ ಅವಧಿ 2020 ಕ್ಕೆ ಮುಗಿದಿದ್ದರೂ ಇನ್ನೂ ಚುನಾವಣೆ ನಡೆದಿಲ್ಲ. ಈ ಸಂದರ್ಭದಲ್ಲಿ ಮಾಡಿದ್ದ 198 ವಾರ್ಡುಗಳ ಮರುವಿಂಗಡಣೆಯನ್ನು ರದ್ದು ಮಾಡಿ ಬಿಬಿಎಂಪಿ-2020 ಹೊಸ ಕಾಯ್ದೆಯನ್ನು ಜಾರಿಗೆ ತರಲಾಯಿತು. ಮತ್ತೆ ವಾರ್ಡುಗಳ ಸಂಖ್ಯೆಯನ್ನು 243 ಕ್ಕೆ ಏರಿಸಿದಾಗ ಆಕ್ಷೇಪ ಎತ್ತಿದ ಪಾಲಿಕೆಯ ಮಾಜೀ ಸದಸ್ಯರು ಹೈಕೋರ್ಟ್ ಗೆ ಹೋಗಿದ್ದರು. ಹೈಕೋರ್ಟ್ 12 ವಾರಗಳಲ್ಲಿ ಹೊಸದಾಗಿ ವಾರ್ಡುಗಳ ಪಟ್ಟಿ ತಯಾರಿಸಿದ ಹಿನ್ನಲೆಯಲ್ಲಿ ಕಾಂಗ್ರೆಸ್ ಸರ್ಕಾರ ಸಚಿವ ರಾಮಲಿಂಗಾರೆಡ್ಡಿ ನೇತೃತ್ವದ ಸಮಿತಿ ರಚಿಸಿತು.

ಬಿಬಿಎಂಪಿ ಚುನಾವಣೆ : ಗೆಲ್ಲುವ ಹುಮ್ಮಸ್ಸಿನಲ್ಲಿದ್ದ ಬಿಜೆಪಿಗೆ, ಕಾಂಗ್ರೆಸ್ ಸರ್ಕಾರ ಶಾಕ್
ಈ ಹಿಂದೆ ರಾಜ್ಯ ಹೈಕೋರ್ಟ್ ನಿರ್ದೇಶನದ ಮೇರೆಗೆ ಬಿಬಿಎಂಪಿ ಆಯುಕ್ತರ ನೇತೃತ್ವದಲ್ಲಿ ಆದ ಡಿಲಿಮಿಟೇಷನ್ ಸಮಿತಿಯ ಮೂಲಕ ಬಿಬಿಎಂಪಿಗೆ 243 ವಾರ್ಡ್ ಗಳನ್ನು ರಚಿಸಿ ಕಳೆದ ಬಿಜೆಪಿ ಸರ್ಕಾರ ಆದೇಶಿಸಿತ್ತು. ಆ ಮೂಲಕ ತಾನು ಗೆಲ್ಲಲು ಬೇಕಾದ ಎಲ್ಲಾ ವಾರ್ಡುಗಳನ್ನು ಬಿಜೆಪಿ ಭದ್ರಪಡಿಸಿಕೊಂಡಿತ್ತು. ಆದರೆ ಈಗ ಬಿಜೆಪಿಯ ಎಲ್ಲಾ ಆಸೆಗೆ ತಣ್ಣೀರು ಎರಚಿದೆ.

2020ರಲ್ಲಿ ಬಿಬಿಎಂಪಿ(BBMP) ಸದಸ್ಯರ ಅಧಿಕಾರಾವಧಿ ಮುಗಿದಿದ್ದು, ಚುನಾವಣೆ ನಡೆಸುವ ದೃಷ್ಟಿಯಿಂದ 198 ವಾರ್ಡ್‌ಗಳಾಗಿ ಪುನರ್ ವಿಂಗಡಣೆ ಮಾಡಲಾಗಿತ್ತು. ಆದರೆ ಬಿಜೆಪಿ ತನ್ನ ಅಧಿಕಾರಾವಧಿಯಲ್ಲಿ 198 ವಾರ್ಡ್ ಗಳಿಂದ ಗೆಲ್ಲುವ ಲೆಕ್ಕಾಚಾರ ಹಾಕಿ ಅಂದಿನ ಸರ್ಕಾರದಲ್ಲಿ 243 ವಾರ್ಡ್‌ಗಳಿಗೆ ಏರಿಕೆ ಮಾಡಿತ್ತು.

ಸಧ್ಯ ಬಿಬಿಎಂಪಿ ಚುನಾವಣೆಗೆ ರಾಜ್ಯ ಸರ್ಕಾರ ಸಜ್ಜಾಗಿದ್ದು, ವಾರ್ಡ್‌ಗಳ ಸಂಖ್ಯೆಯನ್ನು 225ಕ್ಕೆ ಇಳಿಕೆ ಮಾಡಿ ಆದೇಶ ಹೊರಡಿಸಿದೆ.

ಬಿಜೆಪಿ ಪಕ್ಷದ ಅಧಿಕಾರಾವಧಿಯಲ್ಲಿ ಮಾಡಿರೋ ವಾರ್ಡ್ ವಿಂಗಡಣೆ ಸೂಕ್ತವಲ್ಲ ಎಂದು ಆರೋಪಿಸಿ ಕಾಂಗ್ರೆಸ್ ಕೋರ್ಟ್‌ ಮೊರೆ ಹೋಗಿತ್ತು. ಇದೀಗ ಕಾಂಗ್ರೆಸ್‌ ಪಕ್ಷ ವಾರ್ಡ್‌ಗಳನ್ನು ಮರುವಿಂಗಡಣೆ ಮಾಡಿದೆ. 15 ವಾರ್ಡ್‌ಗಳನ್ನು ಕಡಿಮೆ ಮಾಡಲು ಕಾಂಗ್ರೆಸ್‌ ತೀರ್ಮಾನಿಸಿದೆ.

ಬಿಬಿಎಂಪಿ ಚುನಾವಣೆಗೆ ಆಗ್ರಹಿಸಿ ಆಮ್‌ ಆದ್ಮಿ ಪಾರ್ಟಿ ಮುಖಂಡರ ಉಪವಾಸ ಸತ್ಯಾಗ್ರಹ
ಬೆಂಗಳೂರು: ಕಳೆದೆರಡು ವರ್ಷಗಳಿಂದ ಬಿಬಿಎಂಪಿ ಚುನಾವಣೆಗೆ ಅಡ್ಡಗಾಲು ಹಾಕುತ್ತಾ ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಂಟಕವಾಗಿರುವ ರಾಜ್ಯ ಬಿಜೆಪಿ ಸರ್ಕಾರದ ಪ್ರಜಾಪ್ರಭುತ್ವವಿರೋಧಿ ನಡೆ ಖಂಡಿಸಿ ಆಮ್‌ ಆದ್ಮಿ ಪಾರ್ಟಿ ಮುಖಂಡರು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಿದರು. ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆ ತನಕ ಉಪವಾಸ ಕುಳಿತ ಪಕ್ಷದ ಮುಖಂಡರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಬೆಂಗಳೂರು ನಗರ ಎಎಪಿ ಅಧ್ಯಕ್ಷ ಮೋಹನ್‌ ದಾಸರಿಯವರು, ʼಸೋಲಿನ ಭಯದಿಂದಾಗಿ ಅಧಿಕಾರ ದುರ್ಬಳಕೆ ಮಾಡಿಕೊಂಡು ಬಿಜೆಪಿಯು ಬಿಬಿಎಂಪಿ ಚುನಾವಣೆಯನ್ನು ಮುಂದೂಡುತ್ತಿದೆ. ಬಿಜೆಪಿಯ ಈ ಕುತಂತ್ರ ರಾಜಕೀಯದಿಂದಾಗಿ ಬೆಂಗಳೂರಿನ ಜನತೆ ನೂರಾರು ತೊಂದರೆ ಅನುಭವಿಸುತ್ತಿದ್ದಾರೆ. ಸಣ್ಣಪುಟ್ಟ ಸಮಸ್ಯೆಗಳನ್ನು ಹೇಳಿಕೊಳ್ಳಲು ಕಾರ್ಪೊರೇಟರ್‌ಗಳೇ ಇಲ್ಲ. ಶಾಸಕರು ಹಾಗೂ ಸಂಸದರು ಇದ್ದರೂ ಕೈಗೆ ಸಿಗುವುದಿಲ್ಲ. ತಮ್ಮ ಸ್ವಾರ್ಥಕ್ಕಾಗಿ ಪ್ರಜಾಪ್ರಭುತ್ವ ವ್ಯವಸ್ಥೆಯ ಆಶಯವನ್ನೇ ಬುಡಮೇಲು ಮಾಡುತ್ತಿರುವ ಬಿಜೆಪಿಯ ಮುಖ್ಯಮಂತ್ರಿ, ಸಚಿವರು ಹಾಗೂ ಶಾಸಕರಿಗೆ ನಾಚಿಕೆಯಾಗಬೇಕುʼ ವಾಗ್ದಾಳಿ ನಡೆಸಿದ್ದಾರೆ.

ʼಬಿಬಿಎಂಪಿ ಚುನಾವಣೆಗೆ ಒತ್ತಾಯಿಸಿ ಕಳೆದ ಮೂರು ದಿನಗಳು ಬೆಂಗಳೂರಿನಾದ್ಯಂತ ಎಎಪಿ ಕಾರ್ಯಕರ್ತರು ಸಹಿಸಂಗ್ರಹ ಮಾಡಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಜನರು ನಿಲುವು ತಾಳಿರುವುದು ಈ ವೇಳೆ ನಮ್ಮ ಗಮನಕ್ಕೆ ಬಂದಿದೆ. ಬೆಂಗಳೂರಿನಾದ್ಯಂತ ಆಮ್‌ ಆದ್ಮಿ ಪಾರ್ಟಿಗೆ ಜನಬೆಂಬಲ ಹೆಚ್ಚಾಗುತ್ತಿದ್ದು, ಇದು ಬಿಜೆಪಿ ನಾಯಕರ ನಿದ್ದೆಗೆಡಿಸಿದೆ. ಭ್ರಷ್ಟ ಪಕ್ಷಗಳನ್ನು ಬದಿಗೊತ್ತಿ ಪ್ರಾಮಾಣಿಕ ಆಡಳಿತವನ್ನು ತರಬೇಕೆಂಬ ಬೆಂಗಳೂರಿಗರ ನಿಲುವನ್ನು ಸಹಿಸಿಕೊಳ್ಳಲು ಸಾಧ್ಯವಾಗದೇ ಬಿಜೆಪಿಯು ಚುನಾವಣೆಯನ್ನು ಮುಂದೂಡುತ್ತಿದೆ. ಸರ್ಕಾರವು ಚುನಾವಣೆ ಮುಂದೂಡಲು ತೋರಿದ ಉತ್ಸಾಹವನ್ನು ಬೆಂಗಳೂರನ್ನು ಅಭಿವೃದ್ಧಿ ಪಡಿಸಲು ತೋರಿಸಿದ್ದರೆ, ಇದು ಇಂದು ಜಗತ್ತಿನ ನಂಬರ್‌ ಒನ್‌ ನಗರವಾಗುತ್ತಿತ್ತುʼ ಎಂದು ಮೋಹನ್‌ ದಾಸರಿ ತಿಳಿಸಿದರು.

ʼಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ನಾಯಕರು ಬಿಬಿಎಂಪಿ ಚುನಾವಣೆ ನಡೆಯಬೇಕೆಂದು ಆಗ್ರಹಿಸುತ್ತಿಲ್ಲ. ಆಮ್‌ ಆದ್ಮಿ ಪಾರ್ಟಿಯೊಂದೇ ನಿರಂತರವಾಗಿ ಹೋರಾಟ ಮಾಡುತ್ತಾ, ಪ್ರಜಾಪ್ರಭುತ್ವ ಉಳಿಸಲು ಆಗ್ರಹಿಸುತ್ತಿದೆ. ನಾವು ಚುನಾವಣೆಗೆ ಸಂಪೂರ್ಣ ಸಿದ್ಧವಾಗಿದ್ದು, ಯಾವಾಗ ಚುನಾವಣೆ ನಡೆದರೂ ನಾವೇ ಗೆಲ್ಲುವ ದೃಢ ವಿಶ್ವಾಸವಿದೆ. ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಮ್‌ ಆದ್ಮಿ ಪಾರ್ಟಿ ಭರ್ಜರಿ ಬಹುಮತದಿಂದ ಜಯಗಳಿಸಲಿದ್ದು, ಬಿಬಿಎಂಪಿ ಚುನಾವಣೆಯಲ್ಲೂ ಅಂತಹದೇ ಫಲಿತಾಂಶ ಬರಲಿದೆʼ ಎಂದು ಮೋಹನ್‌ ದಾಸರಿ ಹೇಳಿದರು.

ಈ ಸಂದರ್ಭದಲ್ಲಿ ಆಮ್‌ ಆದ್ಮಿ ಪಾರ್ಟಿ ಮುಖಂಡರಾದ ಜಗದೀಶ್‌ ವಿ ಸದಂ, ಅಶೋಕ್‌ ಮೃತ್ಯುಂಜಯ, ಗೋಪಿನಾಥ್‌, ಶ್ರೀನಿವಾಸ್‌ ರೆಡ್ಡಿ, ವೀಣಾ ಸೆರ್ರಾವ್‌, ಡಾ. ಕೇಶವ ಕುಮಾರ್‌ ಮತ್ತಿತರ ನಾಯಕರು, ಅನೇಕ ಕಾರ್ಯಕರ್ತರು ಭಾಗವಹಿಸಿದ್ದರು.

ಬಿಬಿಎಂಪಿ ಚುನಾವಣೆಗೆ ಮೂರು ಪಕ್ಷಗಳಿಗೂ ಸೋಲಿನ ಭಯವಿದೆ: ಮೋಹನ್‌ ದಾಸರಿ ವ್ಯಂಗ್ಯ
ಬೆಂಗಳೂರು: ಬಿಬಿಎಂಪಿ ಚುನಾವಣೆ ನಡೆದರೆ ರಾಜ್ಯದ, ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್ ಪಕ್ಷಗಳಿಗೆ ಚುನಾವಣೆಯಲ್ಲಿ ಸೋಲುತ್ತೆವೆ ಎಂಬ ಭಯ ಕಾಡುತ್ತಿದೆ ಎಂದು ಆಮ್‌ ಆದ್ಮಿ ಪಾರ್ಟಿ ಬೆಂಗಳೂರು ಅಧ್ಯಕ್ಷ ಮೋಹನ್‌ ದಾಸರಿಯವರು ವ್ಯಂಗಿಸಿದ್ದಾರೆ.

ಪಕ್ಷದ ರಾಜ್ಯ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿ ವೇಳೆ, ಮೀಸಲಾತಿ ನಿಗದಿಗೆ ಮೂರು ತಿಂಗಳು ಸಮಯ ಬೇಕೆಂದು ರಾಜ್ಯ ಸರ್ಕಾರವು ಕೋರ್ಟ್‌ಗೆ ಮನವಿ ಸಲ್ಲಿಸಿರುವ ಕುರಿತು ಮಾದ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ʼ2020ರಲ್ಲಿ ನಡೆಯಬೇಕಾಗಿದ್ದ ಬಿಬಿಎಂಪಿ ಚುನಾವಣೆಯನ್ನು ಮುಂದೂಡಲು, ಕೋರ್ಟ್‌ ಛೀಮಾರಿ ಹಾಕಿದ ನಂತರವೂ ರಾಜ್ಯ ಸರ್ಕಾರ ಪ್ರಯತ್ನಿಸುತ್ತಿರುವುದು ಬಿಜೆಪಿಯ ಹೇಡಿತನಕ್ಕೆ ಸಾಕ್ಷಿ. ಪ್ರತಿಪಕ್ಷಗಳಾದ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷಗಳ ಬೆಂಗಳೂರು ಶಾಸಕರು ಕೂಡ ಬಿಬಿಎಂಪಿ ಚುನಾವಣೆಗೆ ಒತ್ತಾಯಿಸುತ್ತಿಲ್ಲ. ಮೂರೂ ಪಕ್ಷಗಳಿಗೆ ಸೋಲುವ ಭಯ ಕಾಡುತ್ತಿದ್ದು, ಆದ್ದರಿಂದಲೇ ಚುನಾವಣೆ ಮುಂದೂಡುವುದರಲ್ಲಿ ಒಗ್ಗಟ್ಟು ಪ್ರದರ್ಶಿಸುತ್ತಿವೆʼ ಎಂದು ಟೀಕಿಸಿದ್ದಾರೆ.

ಬಿಬಿಎಂಪಿ ಚುನಾವಣೆಯಲ್ಲಿನ ಮುಖಭಂಗವು ವಿಧಾನಸಭಾ ಚುನಾವಣೆಯ ಮೇಲೆ ಪರಿಣಾಮ ಬೀರಲಿದೆ ಎಂದು ಬಿಜೆಪಿಗೆ ತಿಳಿದಿದೆ. ಆದ್ದರಿಂದ ವಿಧಾನಸಭಾ ಚುನಾವಣೆಯ ಜೊತೆಗೆ ಅಥವಾ ಅದರ ನಂತರದಲ್ಲಿ ಬಿಬಿಎಂಪಿ ಚುನಾವಣೆ ನಡೆಸಲು ಸರ್ಕಾರ ಪಿತೂರಿ ನಡೆಸುತ್ತಿದೆ. ಆದರೆ ಬೆಂಗಳೂರು ಹಾಗೂ ರಾಜ್ಯಾದ್ಯಂತ ಆಮ್‌ ಆದ್ಮಿ ಪಾರ್ಟಿಗೆ ಉತ್ತಮ ಜನಬೆಂಬಲ ವ್ಯಕ್ತವಾಗುತ್ತಿದ್ದು, ಯಾವುದೇ ಸಮಯದಲ್ಲಿ ಬಿಬಿಎಂಪಿ ಹಾಗೂ ವಿಧಾನಸಭೆ ಚುನಾವಣೆ ನಡೆದರೂ ನಮಗೆ ಬಹುಮತ ದೊರೆಯಲಿದೆʼ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಿಬಿಎಂಪಿ ಚುನಾವಣೆ ಮುಂದೂಡಿಕೆ ಸಾಧ್ಯತೆ : ಹೈಕೋರ್ಟ್‌ಗೆ ಮತ್ತೆ ಕಾಲಾವಕಾಶ ಕೋರಿದ ಸರ್ಕಾರ!
ಬೆಂಗಳೂರು: ನವೆಂಬರ್ 30 ರೊಳಗೆ BBMP 243 ವಾರ್ಡ್‌ಗಳಿಗೆ ಮೀಸಲಾತಿ ನಿಗದಿಪಡಿಸಿ, ಡಿಸೆಂಬರ್ ಅಂತ್ಯದೊಳಗೆ ಚುನಾವಣೆ ನಡೆಸಬೇಕು ಎಂದು ಹೈಕೋರ್ಟ್‌ ಸೆಪ್ಟೆಂಬರ್ 30ರಂದು ಆದೇಶ ಹೊರಡಿಸಿತ್ತು. ಈಗ ಈ ಆದೇಶ ಪಾಲನೆಗೆ ಮೂರು ತಿಂಗಳ ಕಾಲ ಅವಧಿ ವಿಸ್ತರಿಸುವಂತೆ ಕೋರಿ ನಗರಾಭಿವೃದ್ಧಿ ಇಲಾಖೆ ಹೈಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಸಿದೆ.

ಹೈಕೋರ್ಟ್‌ಗೆ ಬರೆದ ಪ್ರಮಾಣ ಪತ್ರದಲ್ಲಿ ಏನಿದೆ?

ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸುವ ಸಂಬಂಧ ನ್ಯಾಯಮೂರ್ತಿ ಭಕ್ತವತ್ಸಲ ಆಯೋಗ ವರದಿ ಸಲ್ಲಿಸಿತ್ತು. ಆದರೆ, ಹೈಕೋರ್ಟ್ ನಿರ್ದೇಶನಗಳ ಆಧಾರದಲ್ಲಿ ವರದಿಯನ್ನು ಪುನರ್ ಪರಿಶೀಲಿಸಿ ಪರಿಷ್ಕೃತ ವರದಿ ಸಲ್ಲಿ ಸಲು ನ್ಯಾಯಮೂರ್ತಿ ಭಕ್ತವತ್ಸಲ ಆಯೋಗಕ್ಕೆ ಮನವಿ ಮಾಡಲಾಗಿತ್ತು. ಅದರಂತೆ, ಅಕ್ಟೋಬರ್ 31ಕ್ಕೆ ಪೂರಕ ವರದಿ ಸಲ್ಲಿಸಿದ ಆಯೋಗ, ‘ಈ ಹಿಂದೆ ಸಲ್ಲಿಸಿದ್ದ ವರದಿ ಕಾನೂನುಬದ್ಧವಾಗಿದ್ದು, ಬದಲಾವಣೆಯ ಅವಶ್ಯಕತೆ ಇಲ್ಲ’ ಎಂದು ಸ್ಪಷ್ಟಪಡಿಸಿತ್ತು.

‘243 ವಾರ್ಡ್‌ಗಳಲ್ಲಿ ಎಸ್ಸಿ, ಎಸ್ಟಿ ವರ್ಗಗಳಿಗೆ ಮೀಸಲಾತಿ ನಿಗದಿಪಡಿಸಿದ ಬಳಿಕ ಹಿಂದುಳಿದ ವರ್ಗ ಎ ಮತ್ತು ಬಿ ಗೆ ಮೀಸಲಾತಿ ನಿಗದಿಪಡಿಸಲು ಇರುವ ವಿಧಾನವೇನು?, ಸುಪ್ರೀಂ ಕೋರ್ಟ್ ಹಾಗೂ ಹೈಕೋರ್ಟ್‌ನ ನಿರ್ದೇಶನದ ಪ್ರಕಾರ ರಾಜಕೀಯ ಮೀಸಲಾತಿಗೆ ಅರ್ಹರಿರುವ ಹಿಂದುಳಿದ ವರ್ಗಗಳ ವಿವರವಾದ ಪಟ್ಟಿಯನ್ನು ಸಲ್ಲಿಸುವಂತೆ ಹಾಗೂ ಪೂರಕ ವರದಿಯಲ್ಲಿ ಸಲ್ಲಿಸಲಾಗಿರುವ ಹಿಂದುಳಿದ ವರ್ಗಗಳ ಜನಸಂಖ್ಯೆಯ ವಾಸ್ತವ ದತ್ತಾಂಶದ (ಎಂಪೆರಿಕಲ್ ಡಾಟಾ) ದೃಢೀಕರಣವೇನು? ಎಂಬ ಅಂಶಗಳನ್ನು ಪರಿಶೀಲಿಸುವಂತೆ ನವೆಂ ಬರ್ 17 ರಂದು ಆಯೋಗಕ್ಕೆ ಪತ್ರ ಬರೆಯಲಾಗಿದೆ. ಇದನ್ನು ಪರಿಶೀಲಿಸಿ ಆದಷ್ಟು ಬೇಗ ಪ್ರತಿಕ್ರಿಯಿಸುವುದಾಗಿ ಆಯೋಗ ಹೇಳಿದೆ.

ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಹೊಸದಾಗಿ ಮೀಸಲಾತಿ ನಿಗದಿಪಡಿಸಬೇಕೇ ಬೇಡವೇ ಎಂಬ ತೀರ್ಮಾನಕ್ಕೆ ಬರಲು ಆಯೋಗದ ನಿಲುವು ಮುಖ್ಯವಾಗಿದೆ. ತದ ನಂತರವಷ್ಟೇ ಅರ್ಹ ಹಿಂದುಳಿದ ವರ್ಗಗಳಿಗೆ ನ್ಯಾಯಸಮ್ಮತ ಮೀಸಲಾತಿ ಒದಗಿಸಲು ಸರ್ಕಾರಕ್ಕೆ ಸಾಧ್ಯವಾಗಲಿದೆ’ ಎಂದು ಉಲ್ಲೇಖಿಸಲಾಗಿದೆ.

ಏಪ್ರಿಲ್- ಮೇ ತಿಂಗಳಲ್ಲಿ ರಾಜ್ಯ ವಿಧಾನಸಭಾ ಚುನಾವಣೆ :ಇನ್ಯಾವಾಗ ಬಿಬಿಎಂಪಿ ಚುನಾವಣೆ?

ಕಳೆದ ಎರಡು ಮೂರು ವರ್ಷಗಳಿಂದ ಸ್ಥಳೀಯ ಸರ್ಕಾರವಿಲ್ಲದೆ ಬೆಂಗಳೂರಿನ ಜನರು ನಲುಗಿರುವ ಇಂತಹ ಸಂದರ್ಭದಲ್ಲಿ ಬಿಬಿಎಂಪಿ ಮೀಸಲಾತಿ ನಿಗದಿ ಮತ್ತು ಚುನಾವಣೆಗೆ ಇನ್ನೂ ಮೂರು ತಿಂಗಳು ಕೇಳುತ್ತಿರೋದು ನೋಡಿದರೆ 2023ರ ಏಪ್ರಿಲ್‌-ಮೇ ತಿಂಗಳಲ್ಲಿ ವಿಧಾನಸಭಾ ಚುನಾವಣೆ ನಡೆದ ನಂತರವೇ BBMP ಚುನಾವಣೆ ನಡೆಯುವ ಸಾಧ್ಯತೆ ದಟ್ಟವಾಗಿದೆ.

ಒಂದೇ ವಾರ್ಡ್‌ನ ಮತದಾರನ್ನು ಎರಡು ವಿಧಾನಸಭಾ ಕ್ಚೇತ್ರಗಳಿಗೆ ಹಂಚಿಕೆ ಮಾಡಿರುವ ಸಂಬಂಧ ಏಕ ಸದಸ್ಯಪೀಠದ ಆದೇಶದಲ್ಲಿ ಯಾವುದೇ ಪ್ರಸ್ತಾಪ ಮಾಡದ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ಸಂಬಂಧ ಹೈಕೋರ್ಟ್ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಸತೀಶ್ ರೆಡ್ಡಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಪಿ.ಬಿ.ವರಲೆ ಅವರಿದ್ದ ನ್ಯಾಯಪೀಠ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಮುಂದೂಡಿದೆ.

ರಾಜಪ್ರಭುತ್ವದಿಂದ ಪ್ರಜಾಪ್ರಭುತ್ವಕ್ಕಾಗಿ ಆಮ್ ಆದ್ಮಿ ಪಕ್ಷ ಒಂದೇ ಆಯ್ಕೆ : ಪೃಥ್ವಿರೆಡ್ಡಿ
ಬೆಂಗಳೂರು: ಬೆಂಗಳೂರಿನ ವಿಜಯನಗರ ವಿಧಾನಸಭಾ ಕ್ಷೇತ್ರದ ಬಾಪೂಜಿನಗರ ವಾರ್ಡ್ ನಲ್ಲಿ ನಿನ್ನೆ ಆಮ್ ಆದ್ಮಿ ಪಕ್ಷದ ವತಿಯಿಂದ ಬೃಹತ್ ಪಾದಯಾತ್ರೆ ಹಾಗೂ ಜನಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿರೆಡ್ಡಿ ಪಾದಯಾತ್ರೆಯಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು .

ಸುದ್ದಿಗಾರರೊಂದಿಗೆ ಮಾತನಾಡುತ್ತ ಪೃಥ್ವಿ ರೆಡ್ಡಿಯವರು ರಾಜಪ್ರಭುತ್ವದಿಂದ ಸ್ವತಂತ್ರಗೊಂಡು 75 ವರ್ಷಗಳಾದರೂ ಸಹ ನಮ್ಮನ್ನಾಳುತ್ತಿರುವ ಜನಪ್ರತಿನಿಧಿಗಳು ಅದೇ ರಾಜಪ್ರಭುತ್ವ ವನ್ನು ಉಳಿಸಿಕೊಂಡು ಪ್ರಜಾಪ್ರಭುತ್ವವನ್ನು ದಮನ ಮಾಡುತ್ತಿರುವುದು ಅತ್ಯಂತ ಕಳವಳಕಾರಿಯಾದ ಸಂಗತಿ. ಕೂಡಲೇ ಪ್ರಜಾಪ್ರಭುತ್ವವನ್ನು ಉಳಿಸಿಕೊಳ್ಳಲು ಆಮ್ ಆದ್ಮಿ ಪಕ್ಷದ ಜನಸಾಮಾನ್ಯನನ್ನು ಗೆಲ್ಲಿಸುವುದೊಂದೇ ನಮ್ಮ ಮುಂದಿರುವ ಏಕೈಕ ಮಾರ್ಗ ಎಂದು ಜನತೆಯನ್ನುದ್ದೇಶಿಸಿ ಮಾತನಾಡಿದರು. ಈ ಮೂಲಕ ರಾಜಕೀಯ ಕಲುಷಿತ ತ್ವಚೆಯನ್ನು ಹೋಗಲಾಡಿಸಿ ಜನಸಾಮಾನ್ಯನ ಅಳಲನ್ನು, ನೋವು – ದುಮ್ಮಾನ ಗಳ ಪರಿಹಾರಕ್ಕಾಗಿ  ಆಮ್ ಆದ್ಮಿ ಪಕ್ಷವನ್ನು ಅಪ್ಪಿಕೊಳ್ಳುವುದು ಈಗ ಇರುವ ಏಕೈಕ ದಾರಿ ಎಂದು ತಿಳಿಸಿದರು.

ಮುಂಬರುವ  ಬೆಂಗಳೂರು ಬೃಹತ್  ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವು ಬೃಹತ್ ಬಹುಮತದಿಂದ ಪಾಲಿಕೆಯ ಕೈ ಹಿಡಿಯಲಿದೆ ಎಂದು ತಿಳಿಸಿದರು.

ಪಾದಯಾತ್ರೆ ಸ್ಥಳೀಯ ಬೃಹತ್ ಜನಸ್ತೋಮದೊಂದಿಗೆ ಯಶಸ್ವಿಯಾಯಿತು. ಪಾದಯಾತ್ರೆಯಲ್ಲಿ ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ ಸೇರಿದಂತೆ ಡಾ. ರಮೇಶ್  ಬೆಲ್ಲಮಕೊಂಡ, ರಹೀಂಖಾನ್, ಅರ್ಚನಾ ಹಾಗೂ ಇನ್ನಿತರ ಸ್ಥಳೀಯ ಮುಖಂಡರುಗಳು ಹಾಗೂ ಪಕ್ಷದ ಕಾರ್ಯಕರ್ತರುಗಳು ಭಾಗವಹಿಸಿದ್ದರು.

ಸರ್ಕಾರಕ್ಕೆ ಧಮ್‌ ಇದ್ದರೆ ಶೀಘ್ರವೇ ಬಿಬಿಎಂಪಿ ಚುನಾವಣೆ ನಡೆಸಲಿ: ಬ್ರಿಜೇಶ್‌ ಕಾಳಪ್ಪ
ಬೆಂಗಳೂರು: ಬಿಜೆಪಿಗೆ ಬೆಂಗಳೂರಿನ ಹಿತಕ್ಕಿಂತ ಅಡ್ಡದಾರಿಯಲ್ಲಿ ಅಧಿಕಾರ ಚಲಾಯಿಸುವುದೇ ಮುಖ್ಯವೆಂಬುದು ಬಿಬಿಎಂಪಿ ಚುನಾವಣೆಯ ಪದೇಪದೇ ಮುಂದೂಡಿಕೆಯಿಂದ ಸ್ಪಷ್ಟವಾಗಿದೆ ಎಂದು ಆಮ್‌ ಆದ್ಮಿ ಪಾರ್ಟಿ ಮುಖಂಡರಾದ ಬ್ರಿಜೇಶ್‌ ಕಾಳಪ್ಪ ಹೇಳಿದರು.

ಆಮ್‌ ಆದ್ಮಿ ಪಾರ್ಟಿ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಬ್ರಿಜೇಶ್‌ ಕಾಳಪ್ಪ, ʼಕಳೆದ ಬಿಬಿಎಂಪಿ ಚುನಾವಣೆ ವೇಳೆ ಬೆಂಗಳೂರಿಗೆ ಆಗಮಿಸಿದ್ದ ನರೇಂದ್ರ ಮೋದಿ ಹಾಗೂ ಅಮಿತ್‌ ಷಾರವರು ಬೆಂಗಳೂರನ್ನು ಅಭಿವೃದ್ಧಿ ಪಡಿಸುವುದಾಗಿ ಭರವಸೆ ನೀಡಿದ್ದರು. ಬಿಜೆಪಿಯು ಡಬಲ್‌ ಎಂಜಿನ್‌ ಕೇಳಿದ್ದರೆ, ಜನರು ದೇಶ, ರಾಜ್ಯ ಹಾಗೂ ಬಿಬಿಎಂಪಿಯಲ್ಲೂ ಬಿಜೆಪಿಯನ್ನು ಗೆಲ್ಲಿಸುವ ಮೂಲಕ ತ್ರಿಬಲ್‌ ಎಂಜಿನ್‌ ನೀಡಿದರು. ಆದರೆ ಅಧಿಕಾರ ಸಿಕ್ಕ ಬಳಿಕೆ ಬೆಂಗಳೂರಿನ ಜನರನ್ನು ಬಿಜೆಪಿ ಮರೆತಿದ್ದು, ಬಿಬಿಎಂಪಿ ಚುನಾವಣೆಗೆ ಹೆದರುವ ಸ್ಥಿತಿ ತಲುಪಿದೆ. ಸರ್ಕಾರಕ್ಕೆ ಧಮ್‌ ಇದ್ದರೆ ಚುನಾವಣೆ ನಡೆಸಲಿʼಎಂದು ಹೇಳಿದರು.

ಮೃತಪಟ್ಟ ಹಿಂದೂ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಕುಟುಂಬದವರಿಗೆ ಸಿಎಂ ಬಸವರಾಜ ಬೊಮ್ಮಾಯಿಯವರು ಸರ್ಕಾರಿ ನೌಕರಿ ನೀಡಿದ್ದಾರೆ. ಆದರೆ ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಬಲಿಯಾದವರ ಕುಟುಂಬದವರಿಗೆ ನೌಕರಿ ನೀಡಿಲ್ಲ. ಬೆಂಗಳೂರಿಗರ ಬಗ್ಗೆ ಮುಖ್ಯಮಂತ್ರಿಗಿರುವ ತಾತ್ಸಾರವನ್ನು ಇದರಿಂದ ತಿಳಿಯಬಹುದು. ಬಿಬಿಎಂಪಿ ಚುನಾವಣೆ ನಡೆದರೆ ಜನರ ಸಮಸ್ಯೆಗಳಿಗೆ ಸ್ಪಂದಿಸಲು 243 ಜನಪ್ರತಿನಿಧಿಗಳು ಸಿಗುತ್ತಾರೆ ಎಂಬ ಯೋಚನೆ ಕೂಡ ಈ ಸರ್ಕಾರಕ್ಕಿಲ್ಲ. ಮೊನ್ನೆ ನೆರೆ ಬಂದಾಗ ಕೂಡ ಯಾರನ್ನು ಪ್ರಶ್ನಿಸಬೇಕು ಎಂಬ ಗೊಂದಲವು ಬೆಂಗಳೂರಿನ ಜನರನ್ನು ಕಾಡಿತು. ಬಿಬಿಎಂಪಿ ಚುನಾವಣೆ ನಡೆದರೆ ಬಿಜೆಪಿ ಗೆಲ್ಲುವುದಿಲ್ಲ ಎಂಬ ಕಾರಣಕ್ಕೆ ರಾಜ್ಯ ಸರ್ಕಾರವು ಚುನಾವಣೆಯನ್ನು ಮುಂದೂಡುತ್ತಲೇ ಬಂದಿದೆ ಎಂದು ಬ್ರಿಜೇಶ್‌ ಕಾಳಪ್ಪ ಹೇಳಿದರು.

ಬೆಂಗಳೂರಿನ ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಪಕ್ಷಗಳ 28 ಶಾಸಕರಿದ್ದಾರೆ. ಅವರಲ್ಲಿ ಯಾರೂ ಕೂಡ ಬಿಬಿಎಂಪಿ ಚುನಾವಣೆ ನಡೆಯಬೇಕು ಎಂದು ಗಟ್ಟಿಧ್ವನಿಯಲ್ಲಿ ಕೇಳುವ ಪ್ರಯತ್ನ ಮಾಡಿಲ್ಲ. ಅವರ್ಯಾರಿಗೂ ಬಿಬಿಎಂಪಿ ಚುನಾವಣೆ ನಡೆಯುವುದು ಹಾಗೂ ಬೆಂಗಳೂರಿನ ಸಮಸ್ಯೆಗಳಿಗೆ ಜವಾಬ್ದಾರಿ ಹೊರುವವರು ಇರಬೇಕು ಎಂಬ ಕಾಳಜಿಯಿಲ್ಲ. ಆಮ್‌ ಆದ್ಮಿ ಪಾರ್ಟಿಯೊಂದೇ ಬಿಬಿಎಂಪಿ ಚುನಾವಣೆ ನಡೆಯಬೇಕೆಂದು ದೀರ್ಘಕಾಲದಿಂದ ಆಗ್ರಹಿಸುತ್ತಾ ಬಂದಿದೆ. ಏಕೆಂದರೆ ಎಎಪಿಗೆ ಮಾತ್ರ ಬೆಂಗಳೂರಿನ ಸಮಸ್ಯೆಗಳು ಕಾಣಿಸುತ್ತಿವೆ ಎಂದು ಬ್ರಿಜೇಶ್‌ ಕಾಳಪ್ಪ ಹೇಳಿದರು.