bcci – Peepal Media

ಏಷ್ಯಾ ಕಪ್‌ 2023: ಭಾರತದ ಪರವಾಗಿ ಆಡಲಿದ್ದಾರೆ ಈ ಆಟಗಾರರು, ಕನ್ನಡಿಗರಿಗೂ ಸಿಕ್ಕಿದೆ ಅವಕಾಶ
ಏಷ್ಯಾ ಕಪ್ 2023 ಆಗಸ್ಟ್ 30ರಿಂದ ಪ್ರಾರಂಭವಾಗಲಿದ್ದು (Team India Squad for Asia Cup 2023), ಫೈನಲ್ ಪಂದ್ಯವು ಸೆಪ್ಟೆಂಬರ್ 17ರಂದು ನಡೆಯಲಿದೆ. ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯು ಈ ಟೂರ್ನಿಗೆ ಭಾರತ ತಂಡವನ್ನು ಪ್ರಕಟಿಸಿದೆ. ಆಯ್ಕೆಗಾರರು ಬಲಿಷ್ಠ ತಂಡವನ್ನು ಆಯ್ಕೆ ಮಾಡಿದ್ದು, ಈ ತಂಡದ ಚುಕ್ಕಾಣಿ ರೋಹಿತ್ ಶರ್ಮಾ ಕೈಯಲ್ಲಿರಲಿದೆ.

ರೋಹಿತ್ ಶರ್ಮಾ (ನಾಯಕ) (Rohit Sharma) ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ (Virat Kohli), ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್​ ಪಟೇಲ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಪ್ರಸಿದ್ಧ್ ಕೃಷ್ಣ. ಇನ್ನು ಸಂಜು ಸ್ಯಾಮ್ಸನ್​ ಅವರಿಗೆ ಮೀಸಲು ಆಟಗಾರನಾಗುವ ಅವಕಾಶ ನೀಡಲಾಗಿದೆ.

Rohit Sharma (Captain), Shubman Gill, Virat Kohli, Shreyas Iyer, Suryakumar Yadav, Tilak Varma, KL Rahul, Ishan Kishan, Hardik Pandya (VC), Ravindra Jadeja, Shardul Thakur, Axar Patel, Kuldeep Yadav, Jasprit Bumrah, Mohd. Shami, Mohd. Siraj, Prasidh Krishna

Traveling stand-by…
— BCCI (@BCCI) August 21, 2023

ಅಜಿತ್ ಅಗರ್ಕರ್ ನೇತೃತ್ವದ ಭಾರತೀಯ ಆಯ್ಕೆ ಸಮಿತಿಯು ಏಷ್ಯಾಕಪ್‌’ಗೆ 17 ಸದಸ್ಯರ ತಂಡವನ್ನು ಪ್ರಕಟಿಸಿದೆ. ದೆಹಲಿಯಲ್ಲಿ ನಡೆದ ಆಯ್ಕೆ ಸಭೆಯ ನಂತರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ರೋಹಿತ್-ವಿರಾಟ್ ಸೇರಿದಂತೆ ಹಲವು ಸ್ಟಾರ್ ಆಟಗಾರರು ಈ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಮತ್ತೊಂದೆಡೆ, ಶ್ರೇಯಸ್​ ಅಯ್ಯರ್, ಜಸ್ಪ್ರೀತ್ ಬುಮ್ರಾ ಕೂಡ ಏಕದಿನ ತಂಡಕ್ಕೆ ಮರಳಿದ್ದಾರೆ. ಇವರ ಜೊತೆಗೆ ಗಾಯದಿಂದ ಚೇತರಿಸಿಕೊಂಡಿರುವ ಕೆಎಲ್ ರಾಹುಲ್ ಕಂಬ್ಯಾಕ್ ಮಾಡಿದ್ದಾರೆ.

ಕಣದಲ್ಲಿರಲಿವೆ ಆರು ತಂಡಗಳು

ಈ ಬಾರಿ ಏಷ್ಯಾಕಪ್ ನಲ್ಲಿ ಲೀಗ್ ಹಂತ, ಸೂಪರ್-4 ಹಾಗೂ ಫೈನಲ್ ಸೇರಿದಂತೆ ಒಟ್ಟು 13 ಪಂದ್ಯಗಳು ಏಕದಿನ ಮಾದರಿಯಲ್ಲಿ ನಡೆಯಲಿದೆ. ಭಾರತ, ಪಾಕಿಸ್ತಾನ, ಶ್ರೀಲಂಕಾ, ಬಾಂಗ್ಲಾದೇಶ, ಅಫ್ಘಾನಿಸ್ತಾನ ಮತ್ತು ನೇಪಾಳದ ತಂಡಗಳು ಕಾದಾಡಲಿವೆ. ಭಾರತ, ಪಾಕಿಸ್ತಾನ ಮತ್ತು ನೇಪಾಳ ತಂಡಗಳು ಒಂದು ಗುಂಪಿನಲ್ಲಿ ಸ್ಥಾನ ಪಡೆದರೆ, ಹಾಲಿ ಚಾಂಪಿಯನ್ ಶ್ರೀಲಂಕಾ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶ ಮತ್ತೊಂದು ಗುಂಪಿನಲ್ಲಿವೆ. ಟೀಂ ಇಂಡಿಯಾ ತನ್ನ ಮೊದಲ ಪಂದ್ಯವನ್ನು ಪಾಕಿಸ್ತಾನದ ವಿರುದ್ಧ ಸೆಪ್ಟೆಂಬರ್ 2 ರಂದು ಆಡಲಿದೆ. ಇದಾದ ಬಳಿಕ ಸೆಪ್ಟೆಂಬರ್ 4ರಂದು ನೇಪಾಳವನ್ನು ಎದುರಿಸಲಿದೆ.

ಹೈಬ್ರಿಡ್ ಮಾದರಿಯಲ್ಲಿ ಏಷ್ಯಾಕಪ್ ನಡೆಯುತ್ತಿರುವ ಕಾರಣ ಪಾಕಿಸ್ತಾನ ಮತ್ತು ಶ್ರೀಲಂಕಾ ಜಂಟಿಯಾಗಿ ಟೂರ್ನಿಗೆ ಆತಿಥ್ಯ ನೀಡುತ್ತಿವೆ. ಈಗಾಗಲೇ ಪಾಕಿಸ್ತಾನ, ಬಾಂಗ್ಲಾದೇಶ, ನೇಪಾಳ ತಂಡಗಳು ಪ್ರಕಟವಾಗಿದ್ದವು. ಆಗಸ್ಟ್​ 30ರಿಂದ ಈ ಟೂರ್ನಿ ಆರಂಭವಾಗಲಿದ್ದು, ಸೆಪ್ಟೆಂಬರ್ 17ಕ್ಕೆ ಟೂರ್ನಿ ಮುಕ್ತಾಯಗೊಳ್ಳಲಿದೆ.

ಒಂದೆರಡು ಬದಲಾವಣೆಗಳೊಂದಿಗೆ ವಿಶ್ವಕಪ್‌ ಪಂದ್ಯಾವಳಿಗೂ ಇದೇ ತಂಡ ಆಡುವ ಸಾಧ್ಯತೆಯಿದೆ.

ವೆಸ್ಟ್ ಇಂಡೀಸ್ ನಲ್ಲಿ ಹಿಟ್.. ಅಬ್ಬರದ ಪ್ರಚಾರ.. ಐರ್ಲೆಂಡ್ ನಲ್ಲಿ ಅಟ್ಟರ್ ಫ್ಲಾಪ್ .. ಏಷ್ಯಾಕಪ್ ಟೂರ್ನಿಯಿಂದ ಔಟ್..
ಏಷ್ಯಾ ಕಪ್ ಟೂರ್ನಿಗೆ ಭಾರತ ಕ್ರಿಕೆಟ್ ತಂಡವನ್ನು ಇಂದು ಪ್ರಕಟಿಸಲಾಗುವುದು. ಈ ನಿಟ್ಟಿನಲ್ಲಿ ಹೊಸದಿಲ್ಲಿಯಲ್ಲಿ ಆಯ್ಕೆ ಸಮಿತಿ ಸಭೆ ನಡೆಯಲಿದೆ. ಈಗ ಯಾವ ಆಟಗಾರರು ತಂಡದಲ್ಲಿ ಸ್ಥಾನ ಪಡೆಯುತ್ತಾರೆ ಎಂಬುದು ಕುತೂಹಲಕಾರಿ ಸಂಗತಿ.

ಟೀಂ ಇಂಡಿಯಾಕ್ಕೆ ಬಂದಿರುವ ಯುವ ಬ್ಯಾಟ್ಸ್‌ಮನ್ ತಿಲಕ್ ವರ್ಮಾ ಹೆಸರು ಈಗಾಗಲೇ ಜೋರಾಗಿ ಚರ್ಚೆಯಾಗುತ್ತಿದೆ. ತಿಲಕ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಬೇಕೆಂದು ಹಲವು ಮಾಜಿ ದಿಗ್ಗಜರು ಒತ್ತಾಯಿಸಿದ್ದಾರೆ. ತಿಲಕ್ ತಂಡಕ್ಕೆ ಆಯ್ಕೆಯಾಗುತ್ತಾರೋ ಇಲ್ಲವೋ ಎಂಬುದು ಸೋಮವಾರ ತಿಳಿಯಲಿದೆ. ಆದರೆ ತಂಡದ ಆಯ್ಕೆಗೆ ಒಂದು ದಿನ ಬಾಕಿ ಇರುವಾಗಲೇ ತಿಲಕ್ ವರ್ಮಾ ಬ್ಯಾಟಿಂಗ್ ಲಯ ಕಳೆದುಕೊಂಡಂತೆ ಕಾಣುತ್ತಿದೆ.

ತಿಲಕ್ ವರ್ಮಾ ಎರಡು ವಾರಗಳ ಹಿಂದೆ ವೆಸ್ಟ್ ಇಂಡೀಸ್ ವಿರುದ್ಧ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. ಆ ಟಿ20 ಸರಣಿಯಲ್ಲಿ ತಿಲಕ್ ವರ್ಮಾ ಅದ್ಭುತ ಪ್ರದರ್ಶನ ನೀಡಿ ಎಲ್ಲರನ್ನೂ ಆಕರ್ಷಿಸಿದ್ದರು. ಆ ಸರಣಿಯಲ್ಲಿ ಟೀಮ್ ಇಂಡಿಯಾ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೂ ತಿಲಕ್ ಪಾತ್ರರಾದರು. ಇದೇ ಪರಿಸ್ಥಿತಿಯಲ್ಲಿ ಐರ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಅವರು ಇದೇ ರೀತಿಯ ಪ್ರದರ್ಶನವನ್ನು ಮುಂದುವರಿಸುತ್ತಾರೆ ಎಂದು ಎಲ್ಲರೂ ನಿರೀಕ್ಷಿಸಿದ್ದರು. ಆದರೆ, ಐರ್ಲೆಂಡ್ ಸರಣಿಯ ಎರಡೂ ಪಂದ್ಯಗಳಲ್ಲಿ ತಿಲಕ್ ತಮ್ಮ ಇನ್ನಿಂಗ್ಸ್ ಅನ್ನು ಕೇವಲ 3 ಎಸೆತಗಳಲ್ಲಿ ಕೊನೆಗೊಳಿಸಿದರು.

ಐರ್ಲೆಂಡ್ ವಿರುದ್ಧದ ಮೊದಲ ಪಂದ್ಯದಲ್ಲಿ ತಿಲಕ್ ವರ್ಮಾ ಖಾತೆ ತೆರೆಯಲು ಸಾಧ್ಯವಾಗಲಿಲ್ಲ. ಆ ಪಂದ್ಯದಲ್ಲಿ ತಿಲಕ್ ಮೊದಲ ಎಸೆತದಲ್ಲೇ ಔಟಾಗಿ ಪೆವಿಲಿಯನ್ ಸೇರಿದರು. ಭಾರತ ಎರಡನೇ ಪಂದ್ಯದಲ್ಲಿ ಅವರಿಂದ ಬಲಿಷ್ಠ ಇನ್ನಿಂಗ್ಸ್ ನಿರೀಕ್ಷಿಸಿತ್ತು. ಏಕೆಂದರೆ ಈ ಬಾರಿ ಟೀಂ ಇಂಡಿಯಾ ಮೊದಲು ಬ್ಯಾಟ್ ಮಾಡಿತ್ತು. ಆದರೆ, ಈ ಬಾರಿಯೂ ಸಾಧ್ಯವಾಗಿಲ್ಲ. ಈ ವೇಳೆ ತಿಲಕ್ ಕೇವಲ 2 ಎಸೆತಗಳನ್ನು ಎದುರಿಸಿ ವಿಕೆಟ್ ಕಳೆದುಕೊಂಡರು. ಕ್ರೀಸ್ ಗೆ ಬಂದ ತಕ್ಷಣ ಎರಡನೇ ಎಸೆತದಲ್ಲಿ ಪುಲ್ ಶಾಟ್ ಬಾರಿಸಿದರೂ ಚೆಂಡು ಗಾಳಿಯಲ್ಲಿ ಹಾರಿ ಕ್ಯಾಚ್ ಆಯಿತು.

ಈಗ ತಿಲಕ್ ಅವರನ್ನು ಏಷ್ಯಾಕಪ್ ತಂಡಕ್ಕೆ ಆಯ್ಕೆ ಮಾಡಲಾಗುತ್ತದೆಯೇ ಎಂಬ ಪ್ರಶ್ನೆ ಎದ್ದಿದೆ. ವೆಸ್ಟ್ ಇಂಡೀಸ್ ವಿರುದ್ಧದ ಅವರ ಪ್ರಭಾವಶಾಲಿ ಪ್ರದರ್ಶನದ ನಂತರ, ಅನೇಕ ಅನುಭವಿಗಳು ತಿಲಕ್ ಅವರನ್ನು ಏಷ್ಯಾ ಕಪ್, ವಿಶ್ವಕಪ್‌ಗೆ ತಂಡದಲ್ಲಿ ಆಯ್ಕೆ ಮಾಡುವಂತೆ ಕೇಳಲು ಪ್ರಾರಂಭಿಸಿದರು. ಏತನ್ಮಧ್ಯೆ, ತಿಲಕ್ ಲಯ ಕಳೆದುಕೊಂಡಿರುವುದು ಅವರ ಆಯ್ಕೆಗೆ ಭಾರವಾಯಿತು.‌

ಇನ್ನೊಂದೆಡೆ ಮಿಡ್ಲ್‌ ಆರ್ಡರಿನಲ್ಲಿ ಬರುತ್ತಿದ್ದ ಅವರ ಸರದಿಯನ್ನು ಬದಲಾಯಿಸುವ ಮೂಲಕ ತಂಡವೇ ಅವರ ಬ್ಯಾಂಟಿಂಗ್‌ ಕೌಶಲವನ್ನು ನಾಶಪಡಿಸಿದೆ ಎಂದು ಕ್ರಿಕೆಟ್‌ ಅಭಿಮಾನಿಗಳು ಕಿಡಿಕಾರುತ್ತಿದ್ದಾರೆ.

ಪುರುಷ-ಮಹಿಳಾ ಕ್ರಿಕೆಟಿಗರಿಗೆ ಸಮಾನ ಸಂಭಾವನೆ: ಬಿಸಿಸಿಐ ಐತಿಹಾಸಿಕ ನಿರ್ಧಾರ.
ಹೊಸದಿಲ್ಲಿ: ಲಿಂಗ ತಾರತಮ್ಯವನ್ನು ನಿವಾರಿಸುವ ನಿಟ್ಟಿನಲ್ಲಿ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಐತಿಹಾಸಿಕ ನಿರ್ಧಾರ ಕೈಗೊಂಡಿದ್ದು, ಪುರುಷ ಮತ್ತು ಮಹಿಳೆಯರಿಗೆ ಸಮಾನ ಸಂಭಾವನೆ ನೀಡುವುದಾಗಿ ಘೋಷಿಸಿದೆ.

The @BCCIWomen cricketers will be paid the same match fee as their male counterparts. Test (INR 15 lakhs), ODI (INR 6 lakhs), T20I (INR 3 lakhs). Pay equity was my commitment to our women cricketers and I thank the Apex Council for their support. Jai Hind 🇮🇳
— Jay Shah (@JayShah) October 27, 2022

ಬಿಸಿಸಿಐ ಕಾರ್ಯದರ್ಶಿ ಜೈ ಶಾ ಈ ಕುರಿತು ಟ್ಚೀಟ್ ಮಾಡಿದ್ದು, ಲಿಂಗ ಸಮಾನತೆಯನ್ನು ಪ್ರತಿಪಾದಿಸುವ ‌ನಿಟ್ಟಿನಲ್ಲಿ ಬಿಸಿಸಿಐ ಮಹತ್ವದ ಹೆಜ್ಜೆ ಇಟ್ಟಿದ್ದು. ಪುರುಷ, ಮಹಿಳಾ ಕ್ರಿಕೆಟಿಗರಿಗೆ ತಾರತಮ್ಯವಿಲ್ಲದಂತೆ ಸಂಭಾವನೆ ನೀಡುವುದಾಗಿ ತಿಳಿಸಿದ್ದಾರೆ.

ಹೊಸ ನೀತಿ ಅನ್ವಯ ಪುರುಷ ಮತ್ತು ಮಹಿಳಾ ಕ್ರಿಕೆಟಿಗರು ಟೆಸ್ಟ್ ಪಂದ್ಯವೊಂದಕ್ಕೆ 15 ಲಕ್ಷ ರುಪಾಯಿ, ಒಂದು ದಿನದ ಅಂತಾರಾಷ್ಟ್ರೀಯ ಪಂದ್ಯಕ್ಕೆ 6 ಲಕ್ಷ ರುಪಾಯಿ ಹಾಗು ಟಿಟ್ವೆಂಟಿ ಪಂದ್ಯಕ್ಕೆ 3 ಲಕ್ಷ ರುಪಾಯಿ ಸಂಭಾವನೆ ಪಡೆಯಲಿದ್ದಾರೆ.

ಏಕರೂಪದ ಸಂಭಾವನೆ ನೀಡುವುದು ಮಹಿಳಾ ಕ್ರಿಕೆಟಿಗರಿಗೆ ತಾನು ನೀಡಿದ್ದ ವಾಗ್ದಾನವಾಗಿದ್ದು, ಇದನ್ನು ಈಡೇರಿಸಲು ಸಮ್ಮತಿ ನೀಡಿದ ಬಿಸಿಸಿಐ ಸಮಿತಿಗೆ ಜೈಶಾ ಕೃತಜ್ಞತೆ ಸಲ್ಲಿಸಿದ್ದಾರೆ.

ಏಷ್ಯಾಕಪ್‌ 2023| ಭಾರತ ತಂಡ ಪಾಕಿಸ್ತಾನಕ್ಕೆ ಹೋಗುವುದಿಲ್ಲ: ಜಯ್‌ ಶಾ
ನವದೆಹಲಿ: ಏಷ್ಯಾ ಕಪ್ 2023 ಪಾಕಿಸ್ತಾನದಲ್ಲಿ ನಡೆಯಲಿರುವುದರಿಂದ, ಮುಂದಿನ ವರ್ಷ ಭಾರತ ಕ್ರಿಕೆಟ್ ತಂಡವು ಪಂದ್ಯಾವಳಿಗಳನ್ನು ಆಡುವುದರ ಬಗ್ಗೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಹೇಳಿಕೆ ನೀಡಿದ್ದು, ಏಷ್ಯಾಕಪ್‌ ಆಡಲು ಭಾರತ ತಂಡ ಪಾಕಿಸ್ತಾನಕ್ಕೆ ಹೋಗುವುದಿಲ್ಲ ಎಂದು ಹೇಳಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, 2006 ರಲ್ಲಿ ಕೊನೆಯ ಬಾರಿಗೆ ಪಾಕಿಸ್ತಾನ ಪ್ರವಾಸ ಕೈಗೊಂಡಿದ್ದ ಭಾರತ ತಂಡ, ತದನಂತರ ಯಾವುದೇ ಪಂದ್ಯಾವಳಿಗಳಿಗೆ ಪಾಕಿಸ್ತಾನಕ್ಕೆ ಹೋಗಿರುವುದಿಲ್ಲ. ಈ ಕುರಿತಂತೆ ಮಂಗಳವಾರ ಮುಂಬೈನಲ್ಲಿ ನಡೆದ 91 ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಪಾಕಿಸ್ತಾನಕ್ಕೆ ಹೋಗದಿರುವ ನಿರ್ಧಾರವನ್ನು ತೆಗೆದುಕೊಂಡಿದ್ದು, ಮುಂಬರುವ ಏಷ್ಯಾಕಪ್ ಟೂರ್ನಿಗೆ ಭಾರತೀಯ ತಂಡವು ಪಾಕಿಸ್ತಾನ ಹೊರತು ಪಡಿಸಿ ಬೇರೆ ಯಾವುದೇ ಪ್ರದೇಶದಲ್ಲಾದರು ಆಡಲು ಸಿದ್ದವಾಗಿದೆ ಎಂದು ಜಯ್‌ ಶಾ ತಿಳಿಸಿದ್ದಾರೆ.

ಭಾರತ ತಂಡವು ಏಷ್ಯಾಕಪ್‌ ಆಡಲು ಪಾಕಿಸ್ತಾನಕ್ಕೆ ತೆರಳುವುದು ಸೂಕ್ತವಲ್ಲ ಎಂದು ಬಿಸಿಸಿಐ ನಿರ್ಧರಿಸಿದೆ. ಆದರೆ ಭಾರತ ತಂಡ ಪಾಕಿಸ್ತಾನಕ್ಕೆ ಭೇಟಿ ನೀಡುವ ಅನುಮತಿಯ ಕುರಿತು ಸರ್ಕಾರವು ನಿರ್ಧಾರ ಕೈಗೊಳ್ಳುವುದರಿಂದ ನಾವು ಅದರ ಬಗ್ಗೆ ಪ್ರತಿಕ್ರಿಸುವುದಿಲ್ಲ ಎಂದು ಜಯ್‌ ಶಾ ಮಾಹಿತಿ ನೀಡಿದ್ದಾರೆ.

2023 ರ ಏಷ್ಯಾಕಪ್ ಆಡಲು ಭಾರತ ತಂಡವು ಪಾಕಿಸ್ತಾನಕ್ಕೆ ಹೋಗಬಹುದು ಎನ್ನುವ ವಿಷಯ ಈ ಹಿಂದೆ ಬಹಿರಂಗವಾಗಿತ್ತು. ಆದರೆ ಸಚಿನ್‌ ಜಯ್‌ ಶಾ ಅವರ ಹೇಳಿಕೆ ಭಾರತೀಯ ಕ್ರಿಕೆಟ್‌ ಅಭಿಮಾನಿಗಳಲ್ಲಿ ಗೊಂದಲ ಸೃಷ್ಟಿಸಿದೆ.

ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಶಿಖರ್‌ ಧವನ್‌ ನಾಯಕತ್ವ: ಬಿಸಿಸಿಐ
ನವದೆಹಲಿ: ಭಾರತದಲ್ಲಿ ನಡೆಯುವ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ)  ಭಾರತ ತಂಡವನ್ನು ಪ್ರಕಟಿಸಿದ್ದು, ತಂಡದ ನಾಯಕನಾಗಿ ಶಿಖರ್ ಧವನ್, ಉಪನಾಯಕನಾಗಿ ಶ್ರೇಯಸ್ ಅಯ್ಯರ್ ಆಯ್ಕೆಯಾಗಿದ್ದಾರೆ.

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಭಾನುವಾರ, ಅಕ್ಟೋಬರ್ 2 ರಂದು ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ 16 ಸದಸ್ಯರ ತಂಡವನ್ನು ಪ್ರಕಟಿಸಿದೆ. ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಶಿಖರ್ ಧವನ್ ನಾಯಕನಾಗಿ ಭಾರತ ತಂಡವನ್ನು ಮುನ್ನಡೆಸಲಿದ್ದು, ಶ್ರೇಯಸ್ ಅಯ್ಯರ್ ಉಪನಾಯಕನಾಗಿ ಆಯ್ಕೆಯಾಗಿದ್ದಾರೆ.‌

ಅಕ್ಟೋಬರ್ 6 ರಿಂದ 3 ಪಂದ್ಯಗಳ ಏಕದಿನ ಸರಣಿಯು ಪ್ರಾರಂಭವಾಗಲಿದ್ದು, ಮೊದಲ ಪಂದ್ಯ ಲಖನೌ ನಲ್ಲಿ ನಡೆಯಲಿದೆ.

ದಕ್ಷಿಣ ಆಪ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಭಾರತ ತಂಡದ ಪಟ್ಟಿ ಹೀಗಿದೆ: ಶಿಖರ್ ಧವನ್ (ನಾಯಕ), ಶ್ರೇಯಸ್ ಅಯ್ಯರ್ (ಉಪನಾಯಕ), ರುತುರಾಜ್ ಗಾಯಕ್ವಾಡ್, ಶುಭ್ಮನ್ ಗಿಲ್, ರಜತ್ ಪಾಟಿದಾರ್, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್ (ವಿಕೆಟ್‌ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್‌ ಕೀಪರ್), ಶಹಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ರವಿ ಬಿಷ್ಣೋಯ್, ಮುಖೇಶ್ ಕುಮಾರ್ , ಅವೇಶ್ ಖಾನ್, ಮೊಹಮ್ಮದ್. ಸಿರಾಜ್, ದೀಪಕ್ ಚಹಾರ್.‌

🚨 NEWS 🚨: India’s squad for ODI series against South Africa announced. #TeamIndia | #INDvSA | @mastercardindia
— BCCI (@BCCI) October 2, 2022

ಟಿ-20 ವಿಶ್ವಕಪ್‌ನಿಂದ ಬುಮ್ರಾ ಹೊರಗುಳಿದಿಲ್ಲ: ಸೌರವ್‌ ಗಂಗೊಲಿ
ನವದೆಹಲಿ: ಮುಂಬರುವು ಟಿ-20 ವಿಶ್ವಕಪ್‌ನಿಂದ ಭಾರತ ತಂಡದ  ಪ್ರಮುಖ ಬೌಲರ್‌ ಜಸ್ಪ್ರೀತ್‌ ಬುಮ್ರಾ ಅವರು ಹೊರಬಿದ್ದಿಲ್ಲ ಎಂದು ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸೌರವ್‌ ಗಂಗೂಲಿ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಟಿ-20 ಸರಣಿಯಲ್ಲಿ ಬುಮ್ರಾ ಅವರು ಅಭ್ಯಾಸ ನಡೆಸುತ್ತಿರುವ ವೇಳೆ ಬೆನ್ನುನೋವಿನಿಂದ ಬಳಲುತ್ತಿದ್ದು, ಮೂರು ಪಂದ್ಯಗಳ ಸರಣಿಯಿಂದ ಹೊರಗುಳಿದಿದ್ದರು.ಈ ಹಿನ್ನಲೆ ಬುಮ್ರಾ ಅವರಿಗೆ ಸ್ಕ್ಯಾನ್‌ ಮಾಡಲಾಗಿದ್ದು, ಬುಧವಾರ ತಿರುವನಂತಪುರಂನಿಂದ ಬೆಂಗಳೂರಿನ ರಾಷ್ಟ್ರೀಯ ಕ್ರೀಕೆಟ್‌ ಅಕಾಡೆಮಿಗೆ (ಎನ್‌ಸಿಎ) ಕರೆದೊಯ್ಯಲಾಯಿತು ಎಂದು ಮಾಹಿತಿ ನೀಡಿದರು.

ಬುಮ್ರಾ ಅವರ ಬೆನ್ನುನೋವಿಗೆ ವೈದ್ಯಕೀಯ ತಂಡವು ಮೇಲ್ವಿಚಾರಣೆ ನಡೆಸುತ್ತಿದ್ದು, ಈ ವೇಳೆ ಸೌರವ್‌ ಗಂಗೊಲಿ ಅವರು ಬುಮ್ರಾ ಇನ್ನೂ ವಿಶ್ವಕಪ್‌ನಿಂದ ಹೊರಗುಳಿದಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

ಟಿ-20 ವಿಶ್ವಕಪ್‌ನಿಂದ ಹೊರಗುಳಿದ ಜಸ್ಪ್ರೀತ್ ಬುಮ್ರಾ
ಭಾರತದ ಪ್ರಮುಖ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರು ಬೆನ್ನುನೋವಿನ ಸಮಸ್ಯೆಯಿಂದಾಗಿ ಟಿ20 ವಿಶ್ವಕಪ್‌ನಿಂದ ಹೊರಗುಳಿಯಲಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

ಬಿಸಿಸಿಐ ಮೂಲಗಳ ಪ್ರಕಾರ, ಬುಧವಾರ, ಬುಮ್ರಾ ಅವರು ದಕ್ಷಿಣ ಆಫ್ರಿಕಾ ಟಿ- 20ಸರಣಿಯ ಮೊದಲ ಪಂದ್ಯಕ್ಕೆ ಅಭ್ಯಾಸ ನಡೆಸುತ್ತಿರುವ ಅವಧಿಯಲ್ಲಿ ಬೆನ್ನುನೋವಿನಿಂದ ಬಳಲಿದ ಪರಿಣಾಮ, ದಕ್ಷಿಣ ಆಫ್ರಿಕಾ ವಿರುದ್ಧದ ಟಿ-20 ಸರಣಿಯ ಮೊದಲ ಪಂದ್ಯದಿಂದ ದೂರ ಉಳಿದಿದ್ದರು.

ಈ ಹಿನ್ನಲೆ ಬುಮ್ರಾ ಅವರು ಬೆನ್ನು ನೋವಿನ ಸಮಸ್ಯೆಯಿಂದ ಮುಂದುವರೆದರೆ, ಟಿ20 ವಿಶ್ವಕಪ್‌ನಲ್ಲಿ ಬುಮ್ರಾ ಅನುಪಸ್ಥಿತಿಯು ಭಾರತ ತಂಡಕ್ಕೆ ತೀವ್ರ ಹೊಡೆತವನ್ನುಂಟು ಮಾಡಲಿದೆ.

ಆಸ್ಟ್ರೇಲಿಯಾ ಟಿ-20 ಸರಣಿಯಲ್ಲಿ ಶಮಿ ಬದಲು ಉಮೇಶ್‌ ಯಾದವ್:‌ ಬಿಸಿಸಿಐ
ಮೊಹಾಲಿ: ಆಸ್ಟ್ರೇಲಿಯಾ ವಿರುದ್ಧದ ಟಿ 20 ಸರಣಿಯಿಂದ ಮೊಹಮ್ಮದ್‌ ಶಮಿ ಅವರು ಹೊರಗುಳಿದಿರುವ ಕಾರಣ ಭಾರತ ತಂಡಕ್ಕೆ ಉಮೇಶ್‌ ಯಾದವ್‌ ಅವರನ್ನು ಆಯ್ಕೆ ಮಾಡಲಾಗಿದೆ ಎಂದು  ಭಾರತ  ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ತಿಳಿಸಿದೆ.

ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ ಅವರು ಕೋವಿಡ್ -19 ಕಾರಣದಿಂದ ಸರಣಿಯಿಂದ ಹೊರಗುಳಿದ ನಂತರ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಟಿ 20 ಐ ಸರಣಿಗೆ ವೇಗಿ ಉಮೇಶ್ ಯಾದವ್ ಅವರನ್ನು ತಂಡಕ್ಕೆ ಆಯ್ಕೆಮಾಡಲಾಗಿದೆ ಎಂದು ಬಿಸಿಸಿಐ  ಭಾನುವಾರ ಪ್ರಕಟಿಸಿದೆ.

ಸೆಪ್ಟೆಂಬರ್ 20 ರಂದು ಮೊಹಾಲಿಯಲ್ಲಿ ಪ್ರಾರಂಭವಾಗುವ ಸರಣಿಯ ಮೊದಲು ತಂಡದ ಆಟಗಾರರಿಗೆ ಕೋವಿಡ್ -19 ಪರೀಕ್ಷೆ ಮಾಡಿಸಲಾಗಿದ್ದು, ಪರೀಕ್ಷೆಯಲ್ಲಿ ಮೊಮಮ್ಮದ್‌ ಶಮಿ ಅವರಿಗೆ ಕೋವಿಡ್‌ ದೃಢ ಎಂದು ವರದಿ ಬಂದ ನಂತರ ಬಿಸಿಸಿಐ ಈ ನಿರ್ಧಾರ ಕೈಗೊಂಡಿದೆ.

ಮುಂಬರುವ ಟಿ 20 ವಿಶ್ವಕಪ್‌ ನಲ್ಲಿ ಮೊಹಮದ್‌ ಶಮಿ ಅವರು ಭಾಗವಹಿಸಲಿದ್ದು, ವಿಶ್ವ ಚಾಂಪಿಯನ್‌ ಎಂದೆನಿಸಿಕೊಂಡಿರುವ ಆಸ್ಟ್ರೇಲಿಯಾ ತಂಡದ ವಿರುದ್ಧ ಸರಣಿಯಲ್ಲಿ ಶಮಿ ಅವರು ತಮ್ಮ ಕೌಶಲ್ಯವನ್ನು ಹೇಗೆ ಪ್ರದರ್ಶಿಸಲಿದ್ದಾರೆ ಎಂದು ತಿಳಿಯಲು ಬಿಸಿಸಿಐ ಕಾದಿತ್ತು, ಆದರೆ ಶಮಿ ಅವರಿಗೆ ಕೋವಿಡ್‌ ದೃಢವಾದ ಕಾರಣ ಬಿಸಿಸಿಐಗೆ ನಿರಾಸೆಯಾಗಿದೆ.

ಏಷ್ಯಾ ಕಪ್:‌ ಪಾಕಿಸ್ತಾನ ವಿರುದ್ಧ ಭಾರತ ಜಯ ಭೇರಿ
ದುಬೈ: ಪಾಕಿಸ್ತಾನದ ವಿರುದ್ಧ ಏಷ್ಯಾ ಕಪ್‌ ಕ್ರಿಕೆಟ್‌ ಟೂರ್ನಿಯ ತನ್ನ ಮೊದಲ ಟಿ20 ಪಂದ್ಯವನ್ನು ಭಾರತ ತಂಡ 5 ವಿಕೆಟ್‌ ಅಂತರದಿಂದ ಗೆದ್ದು ಬೀಗಿತು.

ದುಬೈನ ಅಂತಾರಾಷ್ಟೀಯ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ರೋಚಕ ಹಣಾಹಣಿಯಲ್ಲಿ ಭಾರತ ಜಯಗಳಿಸುವುದರೊಂದಿಗೆ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ.

ಟಾಸ್‌ ಸೋತರೂ ಬ್ಯಾಟಿಂಗ್‌ ಮಾಡುವ ಅವಕಾಶ ಪಡೆದ ಪಾಕಿಸ್ತಾನ ಭಾರತದ ವೇಗದ ಬೌಲರ್‌ ಗಳ ನಿಖರ ದಾಳಿಗೆ ಸಿಲುಕಿ ನಿಗದಿತ 19.5 ಓವರ್‌ಗಳಲ್ಲಿ 147 ರನ್‌ ಗಳಿಸುವುದರೊಂದಿಗೆ ಸರ್ವಪತನ ಕಂಡಿತು.

ಬಳಿಕ ಗುರಿ ಬೆನ್ನತ್ತಿದ ಭಾರತದ ಪರ ವಿರಾಟ್‌ ಕೋಹ್ಲಿ 35, ರವೀಂದ್ರ ಜಡೇಜಾ 35, ಹಾರ್ದಿಕ್‌ ಪಾಂಡ್ಯ 33 ರನ್‌ ಗಳಿಸಿ ತಂಡಕ್ಕೆ ಜಯ ತಂದುಕೊಟ್ಟರು.

ಆಲ್‌ ರೌಂಡ್‌ ಪ್ರದರ್ಶನ ತೋರಿದ ಹಾರ್ದಿಕ್‌ ಪಾಂಡ್ಯ ಬೌಲಿಂಗ್‌ ನಲ್ಲಿ ಮಿಂಚಿ ಮೂರು ವಿಕೆಟ್‌ ಗಳನ್ನು ಪಡೆದಿದ್ದಲ್ಲದೆ, ಬ್ಯಾಂಟಿಂಗ್‌ ನಲ್ಲೂ ಅಬ್ಬರಿಸಿ ಒಂದು ಸಿಕ್ಸರ್‌, ನಾಲ್ಕು ಬೌಂಡರಿಯೊಂದಿಗೆ ಅಜೇಯ 33 ರನ್‌ ಗಳನ್ನು ಗಳಿಸಿ ಗೆಲುವಿಗೆ ಕಾರಣರಾದರು. ಗೆಲುವಿನ ಹೊಡೆತವನ್ನು ಸಿಕ್ಸರ್‌ ನೊಂದಿಗೆ ಬಾರಿಸಿದ ಹಾರ್ದಿಕ್‌ ಪಾಂಡ್ಯ ಅರ್ಹವಾಗಿಯೇ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

ಭಾರತದ ಪರ ವೇಗದ ಬೌಲರ್‌ ಭುವನೇಶ್ವರ ಕುಮಾರ್‌ ಪಾಕಿಸ್ತಾನದ ಅಪಾಯಕಾರಿ ಆಟಗಾರ ಬಾಬರ್‌ ಅಜಮ್‌ ವಿಕೆಟ್‌ ಸೇರಿದಂತೆ ನಾಲ್ಕು ವಿಕೆಟ್‌ ಗಳನ್ನು ಪಡೆದರು. ಯುವ ಆಟಗಾರ ಅರ್ಷದೀಪ್‌ ಸಿಂಗ್‌ ಎರಡು ವಿಕೆಟ್‌ ಗಳಿಸಿದರು. ಪಾಕಿಸ್ತಾನದ ಎಲ್ಲ ವಿಕೆಟ್‌ ಗಳನ್ನು ವೇಗದ ಬೌಲರ್‌ ಗಳೇ ಪಡೆದಿದ್ದು ವಿಶೇಷವಾಗಿತ್ತು. ಭಾರತದ ಪರ ಟಿ ಟ್ವಿಂಟಿ ಪಂದ್ಯಗಳಲ್ಲಿ ಇದೇ ಮೊದಲ ಬಾರಿಗೆ ಎಲ್ಲ ವಿಕೆಟ್‌ ಗಳನ್ನು ವೇಗದ ಬೌಲರ್‌ ಗಳೇ ಪಡೆದರು.

ಪಾಕಿಸ್ತಾನ ಪೇರಿಸಿದ 147 ರನ್‌ ಗಳ ಸಾಮಾನ್ಯ ಮೊತ್ತವನ್ನು ಬೆನ್ನೆತ್ತಿದ್ದ ಭಾರತ ತಂಡ ಆರಂಭಿಕ ಆಘಾತ ಅನುಭವಿಸಿತು. ತಂಡದ ಉಪನಾಯಕ ಕೆ.ಎಲ್.ರಾಹುಲ್‌ ತಾವು ಎದುರಿಸಿದ ಮೊದಲ ಎಸೆತದಲ್ಲೇ ಬೌಲ್ಡ್‌ ಆಗಿ ಪೆವಿಲಿಯನ್‌ ಗೆ ಮರಳಿದರು. ಚೊಚ್ಚಲ ಟಿ ಟ್ವಿಂಟಿ ಪಂದ್ಯ ಆಡಿದ ನಸೀಮ್‌ ಶಾ ತಾವು ಎಸೆದ ಮೊದಲ ಓವರ್‌ ನಲ್ಲೇ ವಿಕೆಟ್‌ ಪಡೆದು ಸಂಭ್ರಮಿಸಿದರು.

ವಿರಾಟ್‌ ಕೊಹ್ಲಿ ಮತ್ತು ರೋಹಿತ್‌ ಶರ್ಮ ಭಾರತದ ಇನ್ನಿಂಗ್ಸ್‌ ಕಟ್ಟಲು ಶ್ರಮಿಸಿದರಾದರೂ, ರೋಹಿತ್‌ ಶರ್ಮ ಸ್ಪಿನ್ನರ್‌ ನವಾಜ್‌ ಎಸೆತದಲ್ಲಿ ದೊಡ್ಡ ಹೊಡೆತ ಬಾರಿಸಲು ಹೋಗಿ ಇಫ್ತಿಕಾರ್‌ ಅವರಿಗೆ ಕ್ಯಾಚಿತ್ತು ಔಟಾದರು. ನಾಯಕ ರೋಹಿತ್‌ 18 ಚೆಂಡುಗಳಲ್ಲಿ ಕೇವಲ 12 ರನ್‌ ಗಳಿಸಲು ಶಕ್ತರಾದರು. ಇನ್ನೊಂದೆಡೆ ತಾಳ್ಮೆಯ ಆಟವಾಡಿದ ವಿರಾಟ್‌ ಕೊಹ್ಲಿ 34 ಎಸೆತಗಳಲ್ಲಿ 35 ರನ್‌ ಗಳಿಸಿ, ನವಾಜ್‌ ಅವರ ಬೌಲಿಂಗ್‌ ನಲ್ಲೇ ಇಫ್ತಿಕಾರ್‌ ಅವರಿಗೆ ಕ್ಯಾಚಿತ್ತು ಔಟಾದರು.

ಬ್ಯಾಟಿಂಗ್‌ ಕ್ರಮಾಂಕದಲ್ಲಿ ಬಡ್ತಿ ಪಡೆದು ಆಡಲು ಬಂದ ರವೀಂದ್ರ ಜಡೇಜಾ ಭಾರತದ ಗೆಲುವಿನ ಆಸೆಯನ್ನು ಜೀವಂತವಾಗಿ ಇರಿಸಿದ್ದಲ್ಲದೆ, 29 ಎಸೆತಗಳಲ್ಲಿ 35 ರನ್‌ ಗಳಿಸಿದರು. ಕೊನೆಯ ಓವರ್‌ ನಲ್ಲಿ ಗೆಲುವಿಗೆ ಏಳು ರನ್‌ ಗಳು ಬೇಕಾಗಿದ್ದಾಗ ಭರ್ಜರಿ ಹೊಡೆತಕ್ಕೆ ಯತ್ನಿಸಿ ಬೌಲ್ಡ್‌ ಆದರು.

ಪಂದ್ಯದ ಹೀರೋ ಹಾರ್ದಿಕ್‌ ಪಾಂಡ್ಯ ಒತ್ತಡದ ಸ್ಥಿತಿಯಲ್ಲಿ ಬ್ಯಾಟ್‌ ಬೀಸಿ ಕೇವಲ 17 ಎಸೆತಗಳಲ್ಲಿ 33 ರನ್‌ ಗಳಿಸಿ ಅಜೇಯರಾಗಿ ಉಳಿದರು.

ಜಿಂಬಾಬ್ವೆ ವಿರುದ್ಧದ ಏಕದಿನ ಸರಣಿಯಿಂದ ವಾಷಿಂಗ್ಟನ್ ಸುಂದರ್ ಹೊರಗೆ
ಪಿಟಿಐ: ಜಿಂಬಾಬ್ವೆ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ವಾಷಿಂಗ್ಟನ್ ಸುಂದರ್ ಬದಲಿಗೆ ಶಹಬಾಜ್ ಅಹ್ಮದ್ ಅವರನ್ನು ನೇಮಿಸಲಾಗಿದೆ ಎಂದು ಬಿಸಿಸಿಐ ಹೇಳಿದೆ.

ವಾಷಿಂಗ್ಟನ್ ಸುಂದರ್ ಅವರು ಇಂಗ್ಲೆಂಡ್‌ನಲ್ಲಿ ಕೌಂಟಿ ಪಂದ್ಯ ಆಡುವಾಗ ಭುಜಕ್ಕೆ ಗಾಯ ಮಾಡಿಕೊಂಡಿದ್ದರು ಹೀಗಾಗಿ ಅವರನ್ನು ಜಿಂಬಾಬ್ವೆ ಪ್ರವಾಸದಿಂದ ಹೊರಗಿಡಲಾಗಿದ್ದು, ಈ ಸ್ಥಾನಕ್ಕೆ ಆಲ್‌ರೌಂಡರ್ ಆಟಗಾರನಾದ ಶಹಬಾಜ್ ಅಹ್ಮದ್ ಅವರಿಗೆ ತಂಡದಲ್ಲಿ ಅವಕಾಶ ಕಲ್ಪಿಸಿಕೊಡಲಾಗಿದೆ.