BELAGAVI – Peepal Media

ಬಿಜೆಪಿ-RSS ಗೊಡ್ಡು ಬೆದರಿಕೆಗಳಿಗೆ ನಾವು ಜಗ್ಗಲ್ಲ-ಬಗ್ಗಲ್ಲ. ನಿಮ್ಮನ್ನು ಸಾರ್ವಜನಿಕವಾಗಿ ಎದುರಿಸುವ ಶಕ್ತಿ ನನಗಿದೆ: ಸಿದ್ದರಾಮಯ್ಯ ಗುಡುಗು
ಬೆಳಗಾವಿ: ನಾವು ಬಿಜೆಪಿ-RSS ಗೊಡ್ಡು ಬೆದರಿಕೆಗಳಿಗೆ  ಜಗ್ಗಲ್ಲ-ಬಗ್ಗಲ್ಲ. ನಿಮ್ಮನ್ನೆಲ್ಲಾ ಸಾರ್ವಜನಿಕವಾಗಿ ಎದುರಿಸುವ ಶಕ್ತಿ ನನಗಿದೆ. ನಮ್ಮ ಕಾರ್ಯಕರ್ತರಿಗೂ ಇದೆ ಎಂದು ಸಿದ್ದರಾಮಯ್ಯ ಗುಡುಗಿದರು.

ಏಪ್ರಿಲ್ 28ರಂದು ಬೆಳಗಾವಿಯಲ್ಲಿ AICC ಆಯೋಜಿಸಿದ್ದ, ಕೇಂದ್ರ ಸರ್ಕಾರದ ಬೆಲೆ ಏರಿಕೆ, ಜನ ವಿರೋಧಿ ನೀತಿ ಹಾಗೂ ದೇಶ ವಿರೋಧಿ ಆಡಳಿತ ವಿರೋಧಿ ಖಂಡನಾ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬಿಜೆಪಿಯ ದೇಶ ವಿರೋಧಿ ಆಡಳಿತ, ಜನ ವಿರೋಧಿ ಕ್ರಮಗಳನ್ನು ಖಂಡಿಸಿ ಭಾಷಣ ಮಾಡುವ ವೇಳೆ ಮುಖ್ಯಮಂತ್ರಿಗಳ ಭಾಷಣಕ್ಕೆ ಅಡ್ಡಿ ಪಡಿಸಿದ, ಬಿಜೆಪಿ ಕಿಡಿಗೇಡಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಸಿಎಂ ಬಿಜೆಪಿ-RSS ಗೆ ನೇರವಾಗಿ ಸವಾಲೆಸೆದು ಸೆಡ್ಡು ಹೊಡೆದರು.

ಕಳೆದ ಹತ್ತು ವರ್ಷಗಳಿಂದ ನಿರಂತರವಾಗಿ ಬೆಲೆ ಏರಿಕೆ ಮಾಡುತ್ತಾ, ಭಾರತೀಯರ ಬದುಕನ್ನು ಬೆಲೆ ಏರಿಕೆಯಲ್ಲಿ ಬೇಯಿಸುತ್ತಾ, ಭಾರತೀಯ ಸಮಾಜವನ್ನು ಛಿದ್ರಗೊಳಿಸುತ್ತಾ, ಬಿರುಕು ಮೂಡಿಸುತ್ತಾ ಜನದ್ರೋಹಿಯಾಗಿ ವರ್ತಿಸುತ್ತಿರುವುದು ಬಿಟ್ಟರೆ ಜನರಿಗಾಗಿ ಬೇರೆ ಏನು ಮಾಡಿದ್ದೀರಿ ತೋರಿಸಿ ಎಂದು ಸವಾಲು ಹಾಕಿದರು.

ಭಾರತೀಯರು ಬ್ರಿಟೀಷರ ವಿರುದ್ಧ ಪ್ರಾಣತ್ಯಾಗ ಮಾಡಿ ಹೋರಾಡುತ್ತಿದ್ದಾಗ ನೀವು ಸಂಘ ಪರಿವಾರದವರು ಏನು ಕಡೆದು ಕಟ್ಟೆ ಹಾಕ್ತಿದ್ರಿ ? ಸ್ವಾತಂತ್ರ್ಯ. ಹೋರಾಟಕ್ಕೆ  ಏಕೆ ಬರಲಿಲ್ಲ ? ಏನ್ ಮಾಡ್ತಾ ಕೂತಿದ್ರಿ ಆಗ ಎಂದು ಪ್ರಶ್ನಿಸಿದರು.

ಮೊನ್ನೆ ಕಾಶ್ಮೀರದಲ್ಲಿ ಅಮಾಯಕ ಭಾರತೀಯರನ್ನು, ಕರ್ನಾಟಕದ ಮೂವರು ಅಮಾಯಕರನ್ನು ರಾಜಾರೋಷವಾಗಿ ಗನ್ ಗಳ ಸಮೇತ ಬಂದು ಅಮಾನುಷವಾಗಿ ಹತ್ಯೆ ಮಾಡಿ ಹೋದರಲ್ಲಾ ಇದು ಕೇಂದ್ರ ಸರ್ಕಾರದ ಭದ್ರತಾ ಲೋಪ ಅಲ್ಲವಾ ? ಭಾರತೀಯರಿಗೆ ರಕ್ಷಣೆ ಕೊಡುವುದರಲ್ಲಿ ವಿಫಲ ಆಗಿರುವುದನ್ನು ನಾವು ಭಾರತೀಯರು  ಪ್ರಶ್ನಿಸಬಾರದಾ ? ಪ್ರಶ್ನಿಸಿದರೆ ಕಾರ್ಯಕ್ರಮಕ್ಕೆ ಅಡ್ಡಿ ಪಡಿಸ್ತೀರಾ ಎಂದು ಪ್ರಶ್ನಿಸಿದರು.

ಭಾರತಕ್ಕೆ ಸ್ವಾತಂತ್ರ್ಯ ಬಂದು 52 ವರ್ಷಗಳ ಕಾಲ RSS ಕಚೇರಿ ಮೇಲೆ ಭಾರತದ ಬಾವುಟ ಹಾರಿಸಲೇ ಇಲ್ಲ ನೀವು. ಇದಕ್ಕೂ ನಾಚಿಕೆ ಆಗುವುದಿಲ್ಲವೇ ನಿಮಗೆ ಎಂದು ಪ್ರಶ್ನಿಸಿದರು.

ಸ್ವಾತಂತ್ರ್ಯ ಹೋರಾಟದಿಂದ ಹಿಡಿದು ಆಧುನಿಕ ಭಾರತ ನಿರ್ಮಾಣದವರೆಗೂ ಬಿಜೆಪಿ, ಸಂಘ ಪರಿವಾರದ ಕೊಡುಗೆ ಏನಿದೆ ? ನಾಚಿಕೆ ಇಲ್ಲದೆ ದೇಶಭಕ್ತಿ ಬಗ್ಗೆ ಮಾತಾಡ್ತೀರಾ. ಭಾರತೀಯ ಸಮಾಜವನ್ನು ಬಿರುಕು ಮೂಡಿಸಿದ್ದು ಬಿಟ್ಟರೆ ಇಷ್ಟು ವರ್ಷಗಳ ನಿಮ್ಮ ಕೊಡುಗೆ ಭಾರತಕ್ಕೆ ಏನು ಕೊಟ್ಟಿದ್ದೀರಿ ಎಂದು ದೇಶದ ಜನಕ್ಕೆ ವಿವರಿಸಿ ಎಂದು ಸವಾಲು ಹಾಕಿದರು.

ಮನಮೋಹನ್ ಸಿಂಗ್ ಅವರು ಪ್ರಧಾನಿ ಆಗಿದ್ದಾಗ ಅತ್ಯಂತ ಶ್ರೀಮಂತರ ಮೇಲೆ 32% ಟ್ಯಾಕ್ಸ್ ಇತ್ತು. ಮೋದಿ ಬಂದ ಮೇಲೆ ಅತ್ಯಂತ ಶ್ರೀಮಂತರ ಮೇಲಿನ ತೆರಿಗೆಯನ್ನು ಶೇ25 ಇಳಿಸಿದಿರಿ. ಬಡವರು, ಮಧ್ಯಮ ವರ್ಗದವರ ಮೇಲಿನ ತೆರಿಗೆಯನ್ನು ಹೆಚ್ಚಿಸಿದಿರಿ. ನಾಚಿಕೆ ಆಗುತ್ತಿಲ್ಲ ನಿಮಗೆ. ಬಡವರ, ಮಧ್ಯಮ ವರ್ಗದವರ ವಿರೋಧಿ ಬಿಜೆಪಿಯ ಆಡಳಿತವನ್ನು ಪ್ರಶ್ನಿಸಬಾರದಾ ? ಭಾರತೀಯರನ್ನು ನಿರಂತರ ಸುಳ್ಳುಗಳಲ್ಲಿ ಇನ್ನೂ ಎಷ್ಟು ವರ್ಷ ಮರಳು ಮಾಡ್ತೀರಿ. ಸತ್ಯ ಹೇಳಿ ಎಂದು ಪ್ರಶ್ನಿಸಿದರು.

ಭಾರತದ ಸ್ವಾತಂತ್ರ್ಯಕ್ಕೆ ಪ್ರಾಣ ತ್ಯಾಗ ಮಾಡಿದ ಕಾಂಗ್ರೆಸ್ ಪಕ್ಷಕ್ಕೆ ಹೋರಾಟ ಹೊಸದಲ್ಲ. ಬ್ರಿಟೀಷರನ್ನೇ ಒದ್ದೋಡಿಸಿದ ನಮಗೆ ನೀವು ಬಿಜೆಪಿ-RSS ನ್ನೂ ಎದುರಿಸಿ ನಿಲ್ಲುವ ಶಕ್ತಿ ಇದೆ ಎಂದು ಎಚ್ಚರಿಕೆ ನೀಡಿದರು.

ನಾವು ಹಾಲಿನ ದರ 4 ರೂ ಹೆಚ್ಚಿಸಿ, ಇಡೀ 4 ರೂಪಾಯಿಯನ್ನು ಪೂರ್ತಿಯಾಗಿ ರೈತರಿಗೆ, ಗೋಪಾಲಕರಿಗೆ, ಗೋ ಸಾಕಾಣಿಕೆದಾರರಿಗೆ ವರ್ಗಾಯಿಸಿದ್ದೀವಿ. ಇದರಲ್ಲಿ ಒಂದು ರೂಪಾಯಿ ಕೂಡ ಸರ್ಕಾರಕ್ಕೆ ಬರಲ್ಲ. ನಾವು 4 ರೂ ಹೆಚ್ಚಿಸಿದರೂ ಹಾಲಿನ‌ ದರ ಇಡೀ ದೇಶದಲ್ಲಿ ಕಡಿಮೆ ಇರುವುದು ನಮ್ಮ ರಾಜ್ಯದಲ್ಲಿ ಮಾತ್ರ. ಬಸ್ ದರ, ನೀರಿನ ದರ,  ವಿದ್ಯುತ್ ದರ ಅಕ್ಕ ಪಕ್ಕದ ರಾಜ್ಯಗಳಿಗಿಂತ ಅತ್ಯಂತ ಕಡಿಮೆ ಇರುವುದು ನಮ್ಮ ರಾಜ್ಯದಲ್ಲಿ ಮಾತ್ರ. ನಿಮ್ಮ ಸುಳ್ಳು, ಅಪಪ್ರಚಾರ, ಬೆದರಿಕೆಗೆ ಈ ಸಿದ್ದರಾಮಯ್ಯ ಹೆದರುವವನಲ್ಲ. ನಿಮ್ಮನ್ನು ಮೆಟ್ಟಿ ನಿಲ್ತೀವಿ. ಕಾಂಗ್ರೆಸ್ ಸರ್ಕಾರಕ್ಕೆ ಆ ಶಕ್ತಿ ಇನ್ನೂ ಇದೆ ಎಂದರು.

ಅಕ್ಕಿ, ಎಣ್ಣೆ, ಚಿನ್ನ, ಬೆಳ್ಳಿ, ಗೊಬ್ಬರ, ಕಾಳು, ಬೇಳೆ, ಡೀಸೆಲ್, ಪೆಟ್ರೋಲ್, ಸಿಲಿಂಡರ್ ಎಲ್ಲದರ ಬೆಲೆ ಏರಿಸಿದ್ದೀರಿ. ಯಾವುದನ್ನು ಬಿಟ್ಟಿದ್ದೀರಿ ಹೇಳಿ ಎಂದರು.

ಕಚ್ಛಾ ತೈಲ ಬೆಲೆ ಕಡಿಮೆ ಇದ್ದಾಗಲೂ ಪೆಟ್ರೋಲ್, ಡೀಸೆಲ್ ಬೆಲೆ ಮಾತ್ರ ನಿರಂತರವಾಗಿ ಏರಿಕೆ ಮಾಡುತ್ತಲೇ ಇರುವುದು ಭಾರತೀಯರಿಗೆ ಬಿಜೆಪಿ ಬಗೆಯುತ್ತಿರುವ ಮಹಾ ದ್ರೋಹ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ನಿರಂತರವಾಗಿ ಭಾರತೀಯರನ್ನು ಸುಳ್ಳುಗಳ ಸರಮಾಲೆಯಲ್ಲಿ ಮುಳುಗಿಸಿ, ಸಮಾಜವನ್ನು ಬಿರುಕು ಮೂಡಿಸಿ ಕಾಲ ಕಳೆಯುತ್ತಿದೆ. ನಿಮಗೆ ತಕ್ಕ ಉತ್ತರ ಕೊಡುವ ಶಕ್ತಿ ನಮಗಿದೆ. ನಾವು ಉತ್ತರ ಕೊಡ್ತೀವಿ ಎಂದರು.

ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವ ಎಚ್.ಸಿ. ಮಹದೇವಪ್ಪ, ಲಕ್ಷ್ಮಿ ಹೆಬ್ಬಾಳ್ಕರ್, ಸತೀಶ್ ಜಾರಿಕಿಹೊಳಿ ಸೇರಿದಂತೆ ಕಾಂಗ್ರೆಸ್ ಸರ್ಕಾರದ ಅನೇಕ ಸಚಿವರು, ಮುಖಂಡರು ಭಾಗಿಯಾಗಿದ್ದರು.

ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಶತಮಾನೋತ್ಸವ ವ್ಯವಸ್ಥಿತವಾಗಿ ನಡೆಸಲು ಕ್ರಮ: ಸಿದ್ದರಾಮಯ್ಯ
ಬೆಂಗಳೂರು, ಡಿ.21: ಡಿಸೆಂಬರ್ 26 ಮತ್ತು 27ರಂದು ಬೆಳಗಾವಿಯಲ್ಲಿ ನಡೆಯುವ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮವನ್ನು ಅತ್ಯಂತ ವ್ಯವಸ್ಥಿತವಾಗಿ ಆಯೋಜಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು.

ಶನಿವಾರ ಕೃಷ್ಣಾದಲ್ಲಿ ಶತಮಾನೋತ್ಸವ ಆಚರಣೆ ಸಂಬಂಧವಾಗಿ ರಚಿಸಲಾಗಿರುವ ಸಚಿವರು ಹಾಗೂ ಸಂಸತ್‌ ಸದಸ್ಯರನ್ನು ಒಳಗೊಂಡ ವಿವಿಧ ಸಮಿತಿಗಳು ಕೈಗೊಂಡ ಸಿದ್ದತೆಗಳ ಪರಿಶೀಲನೆ ನಡೆಸಿದರು.

ಬೆಳಗಾವಿಯಲ್ಲಿ ಎರಡು ದಿನಗಳ ಕಾರ್ಯಕ್ರಮಗಳ ಮೂಲಕ ಶತಮಾನೋತ್ಸವ ಕಾರ್ಯಕ್ರಮಗಳಿಗೆ ಚಾಲನೆ ದೊರೆಯಲಿದೆ. ಪ್ರಥಮ ದಿನ ಡಿಸೆಂಬರ್ 26ರಂದು ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ನಡೆಯಲಿದ್ದು, 27ರಂದು ಸಾರ್ವಜನಿಕ ಸಮಾರಂಭ ನಡೆಯಲಿದೆ.

ಶತಮಾನೋತ್ಸವ ಸಮಾರಂಭಕ್ಕೆ ರಾಷ್ಟ್ರದೆಲ್ಲೆಡೆಯಿಂದ ಆಗಮಿಸಲಿರುವ ಸಂಸದರು, ಗಣ್ಯರಿಗೆ ವಸತಿ, ಊಟೋಪಚಾರ ಸೇರಿದಂತೆ ಸೂಕ್ತ ಆತಿಥ್ಯ ವ್ಯವಸ್ಥೆ ಕಲ್ಪಿಸಲು ಸಂಬಂಧಿಸಿದ ಸಮಿತಿಗಳಿಗೆ ಸೂಚಿಸಲಾಯಿತು.

ಡಿಸೆಂಬರ್ 27ರಂದು ಸುವರ್ಣಸೌಧದ ಆವರಣದಲ್ಲಿ ಮಹಾತ್ಮ ಗಾಂಧೀಜಿ ಪ್ರತಿಮೆ ಅನಾವರಣ ನೆರವೇರಿಸುವ ಕುರಿತು ನಿರ್ಧರಿಸಲಾಯಿತು ಇದೇ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸುವ ಬಗ್ಗೆ ನಿರ್ಧರಿಸಲಾಯಿತು

1924ರಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದಲ್ಲಿ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು ಹಾಡನ್ನು ಪ್ರಥಮ ಬಾರಿಗೆ ಗಂಗೂಬಾಯಿ ಹಾನಗಲ್ ಅವರು ಹಾಡಿದ್ದರು. ಈಗ ಅದಕ್ಕೂ ನೂರು ವರ್ಷಗಳು ಸಂದ ಹಿನ್ನೆಲೆಯಲ್ಲಿ ಆ ಹಾಡನ್ನು ಪುನಃ ಶತಮಾನೋತ್ಸವ ಆಚರಣೆ ಯಲ್ಲಿ ಹಾಡಿಸುವ ಕುರಿತು ತೀರ್ಮಾನಿಸಲಾಯಿತು.

ಮಹಾತ್ಮಾ ಗಾಂಧಿ ಅವರ ಅಧ್ಯಕ್ಷತೆಯ ಬೆಳಗಾವಿ ಅಧಿವೇಶನದಲ್ಲಿ ಕರ್ನಾಟಕ ಏಕೀಕರಣದ ಮೊದಲ ಧ್ವನಿ ಬಲವಾಗಿ ಪ್ರತಿಪಾದಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಸಮಾವೇಶ ಕನ್ನಡಿಗರ ಪಾಲಿಗೂ ಮಹತ್ವದ್ದಾಗಿದೆ ಎಂದು ಮುಖ್ಯಮಂತ್ರಿ ಅವರು ಈ ಸಂದರ್ಭದಲ್ಲಿ ತಿಳಿಸಿದರು.

ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸಚಿವರಾದ ಪರಮೇಶ್ವರ್, ಎಚ್ ಕೆ ಪಾಟೀಲ್, ಕೆ ಜೆ ಜಾರ್ಜ್, ಕೆ ಎಚ್ ಮುನಿಯಪ್ಪ, ಬೋಸರಾಜು, ಡಾ. ಎಂ ಸಿ ಸುಧಾಕರ್, ರಹೀಂಖಾನ್‌, ಪ್ರಿಯಾಂಕ ಖರ್ಗೆ, ಶಿವರಾಜ ತಂಗಡಗಿ, ಮಧು ಬಂಗಾರಪ್ಪ ಸೇರಿದಂತೆ ಸಂಸತ್ ಸದಸ್ಯರು, ಸಮಿತಿ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು

ಬೆಳಗಾವಿಯ ಹಿರೇಬಾಗೇವಾಡಿ ಪೊಲೀಸರಿಂದ ಸಿಟಿ ರವಿ ಬಂಧನ
ಬೆಳಗಾವಿ ಡಿ.19: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಅಸಭ್ಯವಾಗಿ ಮಾತನಾಡಿರುವ ಆರೋಪದ ಮೇಲೆ ಬಿಜೆಪಿ ಪರಿಷತ್ ಸದಸ್ಯ ಮತ್ತು ಮಾಜಿ ಸಚಿವ ಸಿಟಿ ರವಿ ಅರೆಸ್ಟ್ ಆಗಿದ್ದಾರೆ. ಸಿಟಿ ರವಿ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ನಡುವೆ ಇಂದು ದೊಡ್ಡ ಮಾತಿನ ಚಕಮಕಿಯ ವೇಳೆ ಲಕ್ಷ್ಮೀಯವರನ್ನು ಉದ್ದೇಶಿಸಿ ರವಿ ಅಸಭ್ಯವಾಗಿ ಮಾತನಾಡಿದ್ದರು.

ಬೆಳಗಾವಿಯ ಹಿರೇಬಾಗೇವಾಡಿ ಪೊಲೀಸರು ಸಿಟಿ ರವಿಯನ್ನು ಬಂಧಿಸಿದ್ದಾರೆ.

ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಅಸಭ್ಯ ಪದಬಳಸಿದ ಸಿಟಿ ರವಿಗೆ ಬೆಂಬಲಿಗರಿಂದ ಗೂಸ!

ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಅಸಭ್ಯ ಪದಬಳಸಿದ ಸಿಟಿ ರವಿಗೆ ಬೆಂಬಲಿಗರಿಂದ ಗೂಸ!
ಬೆಳಗಾವಿ ಡಿ.19: ವಿಧಾನ ಪರಿಷತ್ ಅಧಿವೇಶನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಬಿಜೆಪಿ ಸದಸ್ಯ ಸಿ.ಟಿ. ರವಿ ಅವರು ಪ್ರಾಸ್ಟಿಟ್ಯೂಟ್ ಎಂದು ಕರೆದಿದ್ದಾರೆ ಎಂಬ ಆರೋಪದ ಹಿನ್ನಲೆಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗರು ಸುವರ್ಣ ಸೌಧದೊಳಗೆ ನುಗ್ಗಿದ ಸಿಟಿ ರವಿ ಮೇಲೆ ಹಲ್ಲೆ ನಡೆಸಿದ್ದಾರೆ. ಸುವರ್ಣ ಸೌಧದಲ್ಲಿ, “ಹುಚ್ಚ ಸಿಟಿ ರವಿ ಹೊರಗೆ ಬಾ ಎಂದು ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ,” ಆರಂಭಿಸಿದ್ದಾರೆ.

ಸುವರ್ಣ ಸೌಧದ ವಿಐಪಿ ಗೇಟಿನ ಬಳಿ ಕಾರಿನಿಂದ ಇಳಿದಾಗ ಹೊಡೆಯಲು ಬಂದ ಬೆಂಬಲಿಗರಿಂದ ತಪ್ಪಿಸಿಕೊಂಡು ಸಿ.ಟಿ. ರವಿ ಒಳಗೆ ಓಡಿದ್ದರು. ಆಮೇಲೆ  ಒಳಗೆ ಸೆಕ್ಯೂರಿಟಿ ಬಾಗಿಲಿನಿಂದ ಒಳಗೆ ಹೋಗುವಾಗ ಲಕ್ಷ್ಮೀ ಆಪ್ತ ಸಹಾಯಕ ಹಾಗೂ ಲಕ್ಷ್ಮೀ ಅವರ ಸಹೋದರ ಚನ್ನರಾಜ್  ಸಿ.ಟಿ. ರವಿ ಮೇಲೆ ಹಲ್ಲೆ ಮಾಡಿದ್ದಾರೆ. ಲಕ್ಷ್ಮೀ ಪಿಎ ಸಂಗನಗೌಡ ಹಾಗೂ ಅವರ ಸಹೋದರ ಚೆನ್ನರಾಜ್ ಪಿಎ ಸದ್ದಾಂ ಅವರೂ ಹಲ್ಲೆ ನಡೆಸಿದ್ದಾರೆ.  ಭದ್ರತಾ ಸಿಬ್ಬಂದಿ ತಡೆಯಲು ಬಂದರೂ ರವಿ ಮೇಲೆ ಕಾಲಿನಿಂದ ಒದ್ದು ಹಲ್ಲೆ ಮಾಡಿದ್ದಾರೆ. ಆಮೇಲೆ ಭದ್ರತಾ ಸಿಬ್ಬಂದಿ ರವಿ ಅವರನ್ನು ಗೇಟಿನ ಒಳಗೆ ಕರೆದುಕೊಂಡು ಹೋಗಿದ್ದಾರೆ.

ಬೆಳಗಾವಿಯ ಅಧಿವೇಶನದ ವೇಳೆ ವಿಧಾನ ಪರಿಷತ್ತಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದರು ಎಂಬ ಆರೋಪ ಕೇಳಿಬಂತು. ಇದನ್ನು ಕೇಳಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕಣ್ಣೀರಿಡುತ್ತಾ ಪರಿಷತ್ ಸಭೆಯಿಂದ ಹೊರಗೆ ಹೋಗಿ, ಸಭಾಪತಿ ಕಚೇರಿಯಲ್ಲಿ ಕುಳಿತರು. ಸಭಾಪತಿ ಬಂದ ನಂತರ ಸಿ.ಟಿ. ರವಿ ವಿರುದ್ಧ ದೂರು ದಾಖಲಿಸಿ ಅವರನ್ನು ಅಮಾನತ್ತು ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಸಿಟಿ ರವಿ ಆಡಿದ ಮಾತುಗಳ ಆಡಿಯೋ ಮತ್ತು ವಿಡಿಯೋ ಪರಿಶೀಲನೆ ಮಾಡಲು ಸಭಾಪತಿ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.

ಸಿ. ಟಿ ರವಿ ಅಸಭ್ಯ ಪದ ಬಳಕೆ: ಕ್ರಿಮಿನಲ್‌ ಅಪರಾಧ ಎಂದ ಸಿದ್ದರಾಮಯ್ಯ
ಬೆಂಗಳುರು ಡಿ.19: ವಿಧಾನ ಪರಿಷತ್ ಸದಸ್ಯ ಸಿ. ಟಿ ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಸಭ್ಯ ಪದ ಬಳಕೆ ಮಾಡಿದ್ದು , ಅದು ಕ್ರಿಮಿನಲ್ ಅಪರಾಧವಾಗಿದೆ. ಈ ಬಗ್ಗೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ವಿಧಾನಪರಿಷತ್ ಸಭಾಪತಿಯವರಿಗೆ ದೂರು ನೀಡಿರುವ ಬಗ್ಗೆ ಮಾಹಿತಿ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಸುವರ್ಣ ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಸಿ. ಟಿ.ರವಿ ಅವರು ಆರೋಪವನ್ನು ಅಲ್ಲಗಳೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಕಾರಂಜಾ ಜಲಾಶಯ ಯೋಜನೆಯ ಮುಳುಗಡೆ ಪ್ರದೇಶದ ಸಂತ್ರಸ್ತರ ಬೇಡಿಕೆ ಪರಿಶೀಲನೆಗೆ ತಾಂತ್ರಿಕ ಸಮಿತಿ ರಚನೆ : ಸಿದ್ದರಾಮಯ್ಯ
ಬೆಳಗಾವಿ, ಡಿ.19: ಬೀದರಿನ ಕಾರಂಜಾ ಜಲಾಶಯ ಯೋಜನೆಯ ಸಂತ್ರಸ್ತರಿಗೆ ಹೆಚ್ಚಿನ ಪರಿಹಾರ ನೀಡುವ ಕುರಿತಾದ ಬೇಡಿಕೆ ಪರಿಶೀಲನೆಗೆ ತಾಂತ್ರಿಕ ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಅವರು ಗುರುವಾರ ಸುವರ್ಣ ಸೌಧದಲ್ಲಿ ಕಾರಂಜಾ ಯೋಜನೆ ಸಂತ್ರಸ್ರರ ಹೋರಾಟಗಾರರು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆ ನಡೆಸಿ, ಸಂತ್ರಸ್ತರ ಬೇಡಿಕೆ ಅನುಷ್ಠಾನದ ಸಾಧ್ಯತೆಗಳ ಬಗ್ಗೆ ಚರ್ಚೆ ನಡೆಸಿದರು.

ತಮ್ಮನ್ನು ಭೇಟಿ ಮಾಡಿದ ನಿಯೋಗ ಮತ್ತು ಮುಖಂಡರುಗಳೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿಗಳು ಸಂತ್ರಸ್ತರಿಗೆ ಪರಿಹಾರ ನೀಡುವ ಸಂಬಂಧ ತಾಂತ್ರಿಕ ಸಮಿತಿಯೊಂದನ್ನು ರಚಿಸಿ, ಸಮಿತಿ ನೀಡುವ ವರದಿಯಾಧರಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

ಕಾರಂಜಾ ಜಲಾಶಯ ನಿರ್ಮಾಣಕ್ಕೆ 1972-73ರಲ್ಲಿ ಭೂಸ್ವಾಧೀನ ವಾಗಿತ್ತು. ಜಮೀನು ಕಳೆದುಕೊಂಡ ಸಂತ್ರಸ್ತರಿಗೆ ಎಕರೆಗೆ ರೂ 3000 ದಂತೆ 1981-86ರಲ್ಲಿ ಆಗಿನ ಮಾರುಕಟ್ಟೆ ಬೆಲೆ ಆಧರಿಸಿ ಪರಿಹಾರ ನೀಡಲಾಗಿತ್ತು. ಆದರೆ ಪರಿಹಾರ ಧನದ ಬಗ್ಗೆ ತಕರಾರು ಎತ್ತಿ ನ್ಯಾಯಾಲಯದ ಮೊರೆ ಹೋದ ಸಂತ್ರಸ್ತರು ಹೆಚ್ಚು ಪರಿಹಾರ ಧನ ಪಡೆದಿದ್ದರು. ನ್ಯಾಯಾಲಯದ ಮೊರೆ ಹೋಗದ ರೈತರು ಹೆಚ್ಚುವರಿ ಪರಿಹಾರಕ್ಕಾಗಿ ಆಗ್ರಹಿಸಿ ಕಳೆ 20 ಹೋರಾಟ ನಡೆಸುತ್ತಿದ್ದಾರೆ ಎಂದು ಸಚಿವ ಈಶ್ವರ ಖಂಡ್ರೆ ಅವರು ತಿಳಿಸಿದರು.
ಸಚಿವರಾದ ರಹೀಂ ಖಾನ್, ಕೆಕೆಡಿಬಿ ಅಧ್ಯಕ್ಷ ಅಜಯ ಸಿಂಗ್ ಸೇರಿದಂತೆ ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಬೆಳಗಾವಿ ಮಹಿಳೆಗೆ ಚಪ್ಪಲಿ ಹಾಕಿ ಮೆರವಣಿಗೆ: ಪ್ರಕರಣದ ಪ್ರಮುಖ ಆರೋಪಿ ಬಂಧನ
ಬೆಳಗಾವಿ: ಹನಿ ಟ್ರ್ಯಾಪಿಂಗ್ ಶಂಕೆಯಲ್ಲಿ ಮಹಿಳೆಯೊಬ್ಬರಿಗೆ ಚಪ್ಪಲಿ ಹಾರ ತೊಡಿಸಿ ಮೆರವಣಿಗೆ ನಡೆಸಿದ ಪ್ರಕರಣದ ಪ್ರಮುಖ ಆರೋಪಿಯನ್ನು ಕರ್ನಾಟಕ ಪೊಲೀಸರು ಸೋಮವಾರ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಯನ್ನು ಅರ್ಜುನ ಗುಂಡವ್ವಗೋಳ ಎಂದು ಗುರುತಿಸಲಾಗಿದೆ. ಮಹಿಳೆಯ ಮೇಲೆ ಹಲ್ಲೆ ನಡೆಸಿದ ಇತರರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಹನಿ ಟ್ರ್ಯಾಪಿಂಗ್ ಶಂಕೆಯ ಮೇರೆಗೆ ಸ್ಥಳೀಯ ಜನರು ಬೆಳಗಾವಿ ಜಿಲ್ಲೆಯ ಹಳ್ಳಿಯೊಂದರಲ್ಲಿ ಸಂತ್ರಸ್ತೆಯನ್ನು ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ್ದರು.

ಗೋಕಾಕ ಪೇಟೆ ಸಮೀಪದ ಘಟಪ್ರಭಾ ಮೃತ್ಯುಂಜಯ ಬಡಾವಣೆಯಲ್ಲಿ ಶುಕ್ರವಾರ ತಡರಾತ್ರಿ ಈ ಘಟನೆ ನಡೆದಿದೆ.

ಮಹಿಳೆಯ ವಿರುದ್ಧ ಹನಿ ಟ್ರ್ಯಾಪಿಂಗ್ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ಮಹಿಳೆಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಮಹಿಳೆಯ ಮೇಲೆ ಹಲ್ಲೆ ನಡೆಸಿ ಪರೇಡ್ ಮಾಡಿದ ಸ್ಥಳೀಯರ ವಿರುದ್ಧವೂ ದೂರು ದಾಖಲಿಸಿದ್ದಾರೆ.

ಬೆಳಗಾವಿ | ಹನಿ ಟ್ರ್ಯಾಪಿಂಗ್ ಶಂಕೆ: ಮಹಿಳೆಗೆ ಗುಂಪು ಹಲ್ಲೆ ನಡೆಸಿ, ಚಪ್ಪಲಿ ಹಾರ ಹಾಕಿ ಮೆರವಣಿಗೆ

ಆರೋಪಿ ಅರ್ಜುನ ಗುಂಡವ್ವಗೋಳ್ ಸಂತ್ರಸ್ತೆ ಹನಿ ಟ್ರ್ಯಾಪಿಂಗ್‌ನಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದ್ದ. ಅವನು ತನ್ನ ಸಹಚರರೊಂದಿಗೆ ಸಂತ್ರಸ್ತೆಯ ಮನೆಗೆ ನುಗ್ಗಿ ಅವಳನ್ನು ಪ್ರಶ್ನಿಸಿದ್ದ. ನಂತರ ಆಕೆಯನ್ನು ಮನೆಯಿಂದ ಹೊರಗೆ ಎಳೆದುಕೊಂಡು ಹೋಗಿ ಸಹಚರರು ಹಲ್ಲೆ ನಡೆಸಿದ್ದಾರೆ. ನಂತರ ಘಟಪ್ರಭಾ ಮೃತ್ಯುಂಜಯ ವೃತ್ತದ ಬಳಿ ಚಪ್ಪಲಿ ಹಾರ ತೊಡಿಸಿ ಮೆರವಣಿಗೆ ಮಾಡಲಾಯಿತು.

ನಂತರ ಮಹಿಳೆಯನ್ನು ಠಾಣೆಗೆ ಕರೆದೊಯ್ದಿದ್ದು, ಆಕೆಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಗುಂಪು ಪೊಲೀಸರನ್ನು ಒತ್ತಾಯಿಸಿದೆ. ಸಂತ್ರಸ್ತೆ ಯುವಕನೊಬ್ಬನನ್ನು ಹನಿಟ್ರ್ಯಾಪ್ ಮಾಡಿ ಹಣ ವಸೂಲಿ ಮಾಡಿದ್ದಾಳೆ ಎಂದು ಆರೋಪಿಸಿದ್ದಾರೆ. ಮುಂದಿನ ತನಿಖೆ ನಡೆಯುತ್ತಿದೆ.

ಬೆಳಗಾವಿ | ಹನಿ ಟ್ರ್ಯಾಪಿಂಗ್ ಶಂಕೆ: ಮಹಿಳೆಗೆ ಗುಂಪು ಹಲ್ಲೆ ನಡೆಸಿ, ಚಪ್ಪಲಿ ಹಾರ ಹಾಕಿ ಮೆರವಣಿಗೆ
ಬೆಳಗಾವಿ: ಮಹಿಳೆಯೊಬ್ಬಳು ಹನಿಟ್ರ್ಯಾಪಿಂಗ್‌ ನಡೆಸುತ್ತಿದ್ದಾಳೆನ್ನುವ ಅನುಮಾನದ ಮೇಲೆ ಬೆಳಗಾವಿ ಜಿಲ್ಲೆಯ ಹಳ್ಳಿಯೊಂದರಲ್ಲಿ ಮಹಿಳೆಯೊಬ್ಬರನ್ನು ಶೂಗಳ ಹಾರ ಹಾಕಿ ಮೆರವಣಿಗೆ ಮಾಡಿದ ಘಟನೆ ನಡೆದಿರುವುದಾಗಿ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗೋಕಾಕ ಪೇಟೆ ಸಮೀಪದ ಘಟಪ್ರಭಾ ಮೃತ್ಯುಂಜಯ ಬಡಾವಣೆಯಲ್ಲಿ ಶುಕ್ರವಾರ ಈ ಘಟನೆ ನಡೆದಿದೆ.

ಮಹಿಳೆ ಮೇಲೆ ಹನಿ ಟ್ರ್ಯಾಪಿಂಗ್ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಪೊಲೀಸರು ಮಹಿಳೆಯನ್ನು ವಶಕ್ಕೆ ಪಡೆದಿದ್ದಾರೆ. ಮಹಿಳೆಯ ಮೇಲೆ ಹಲ್ಲೆ ನಡೆಸಿ ಪರೇಡ್ ಮಾಡಿದ್ದಕ್ಕಾಗಿ ಸ್ಥಳೀಯರ ವಿರುದ್ಧವೂ ದೂರು ದಾಖಲಿಸಿದ್ದಾರೆ.

ಆರೋಪಿತ ಮಹಿಳೆಯನ್ನು ಶ್ರೀದೇವಿ ಎಂದು ಗುರುತಿಸಲಾಗಿದ್ದು, ಆಕೆ ಹನಿ ಟ್ರ್ಯಾಪಿಂಗ್ ನಡೆಸುತ್ತಿದ್ದಾಳೆಂದು ಸ್ಥಳೀಯರು ಆರೋಪಿಸಿದ್ದಾರೆ. ಈ ಕುರಿತು ಅಲ್ಲಿನ ಜನರು ಆಕೆಯನ್ನು ಪ್ರಶ್ನಿಸಿದ್ದಾರೆ.

ವಾಗ್ವಾದ ನಡೆದಾಗ ಸ್ಥಳೀಯರ ಗುಂಪು ಆಕೆಯನ್ನು ಮನೆಯಿಂದ ಹೊರಗೆಳೆದು ಹಲ್ಲೆ ನಡೆಸಿದೆ. ನಂತರ ಘಟಪ್ರಭಾ ಮೃತ್ಯುಂಜಯ ವೃತ್ತದ ಬಳಿ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದೆ ಎಂದು IANS ಸುದ್ದಿ ಸಂಸ್ಥೆ ವರದಿ ಮಾಡಿದೆ.

ನಂತರ ಆಕೆಯನ್ನು ಠಾಣೆಗೆ ಕರೆದೊಯ್ದಿದ್ದು, ಆಕೆಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಗುಂಪು ಪೊಲೀಸರನ್ನು ಒತ್ತಾಯಿಸಿತ್ತು.

ಶ್ರೀದೇವಿ ಯುವಕರನ್ನು ಹನಿ ಟ್ರ್ಯಾಪ್ ಮಾಡಿ ಹಣ ವಸೂಲಿ ಮಾಡಿದ್ದಳು ಎಂದು ಸ್ಥಳೀಯರು ಹೇಳಿದ್ದಾರೆ.

ಕೆಡುಕ ಮಗನನ್ನು ಕೊಲ್ಲಲು ಸ್ನೇಹಿತರಿಗೆ ವೀಳ್ಯ ಕೊಟ್ಟ ತಂದೆ!
ಬೆಳಗಾವಿ: ಮನೆಯ ಬೆಲೆಬಾಳುವ ವಸ್ತುಗಳು, ಕಟಾವು ಮಾಡಿದ ಧಾನ್ಯಗಳನ್ನು ಮಾರುವುದು, ತಾನು ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಯರನ್ನು ಥಳಿಸಿ ಕಿರುಕುಳ ನೀಡುತ್ತಿದ್ದ ಮಗನನ್ನು ಕೊಂದು ಹಾಕಲು ತಂದೆಯೇ ವೀಳ್ಯ ನೀಡಿದ ಘಟನೆಯೊಂದು ನಡೆದಿದೆ.

ಕೊಲೆ ನಡೆದ 24 ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದ ಶಿವಾನಂದ ಭಾರತಿ ನಗರದ ಸಂಗಮೇಶ ಮಾರುತಿ ತಿಗಡಿ (39) ಕೊಲೆಯಾದವನು.

ಸವದತ್ತಿ ತಾಲೂಕಿನ ಹಿರೇಕೊಪ್ಪ ಗ್ರಾಮದ ಮಂಜುನಾಥ ಹಾಗೂ ಹಿರೇಕೊಪ್ಪ ಗ್ರಾಮದ ಆಂಜಪ್ಪ ಬಂಧಿತ ಆರೋಪಿಗಳು. ಕೊಲೆಯಾದ ಸಂಗಮೇಶ ಕುಡಿತದ ಚಟ ಹೊಂದಿದ್ದ. ಬೆಳಗ್ಗೆಯಿಂದ ತಡರಾತ್ರಿವರೆಗೂ ಮದ್ಯ ಸೇವಿಸಿ ತಂದೆ-ತಾಯಿಯನ್ನು ನಿಂದಿಸುತ್ತಿದ್ದ. ಅಲ್ಲದೇ ಕುಡಿತದ ಚಟಕ್ಕೆ ಬಿದ್ದಿದ್ದ ಈತ ಮನೆಯಲ್ಲಿನ ಬೆಲೆಬಾಳುವ ವಸ್ತುಗಳು, ಧಾನ್ಯಗಳನ್ನು ಮಾರಾಟ ಮಾಡಿ ಮದ್ಯ ಸೇವಿಸುತ್ತಿದ್ದ. ಇದರ ಜತೆಗೆ ಸಂಗಮೇಶ ಕೆಲ ಮಹಿಳೆಯರೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಎಂದು ತಿಳಿದುಬಂದಿದೆ.

ಅಲ್ಲದೆ ಸಂಗಮೇಶ್ ಕುಡಿದು ಮನೆಗೆ ಬಂದು ತಂದೆ ತಾಯಿಗೆ ಕಿರುಕುಳ ನೀಡುತ್ತಿದ್ದ. ಇದರಿಂದ ಕೋಪಗೊಂಡ ತಂದೆ ಸಂಗಮೇಶ್ ತನ್ನ ಜತೆ ವ್ಯಾಪಾರ ಮಾಡುತ್ತಿದ್ದ, ಸ್ನೇಹಿತರಾದ ಮಂಜುನಾಥ್ ಹಾಗೂ ಅಂಜಪ್ಪನ ಬಳಿ ಕೊಲೆ ಮಾಡುವಂತೆ ಸೂಚಿಸಿದ್ದರು ಎಂದು ತಿಳಿದು ಬಂದಿದೆ. ಕೊಲೆಯಾದ ಸಂಗಮೇಶನನ್ನು ದ್ವಿಚಕ್ರ ವಾಹನದಲ್ಲಿ ಬೈಲಹೊಂಗಲ, ನೇಸರಗಿ, ವನ್ನೂರು, ಮುರಗೋಡ ಮತ್ತಿತರ ಕಡೆ ಕರೆದುಕೊಂಡು ಹೋಗಲಾಗಿತ್ತು.

ಮಂಜುನಾಥ ಅವರೊಂದಿಗೆ ದ್ವಿಚಕ್ರ ವಾಹನದಲ್ಲಿ ಗೋಕಾಕ ತಾಲೂಕಿನ ಅಂಕಲಗಿಗೆ ತೆರಳಿದ್ದನು. ನಂತರ ಹೀರೆಕೊಪ್ಪ ಗ್ರಾಮಕ್ಕೆ ಹಿಂತಿರುಗಿ ಅಂಜಪ್ಪನನ್ನು ಮತ್ತೆ ಅಂಕಲಗಿಗೆ ಕರೆದೊಯ್ದರು. ಆರೋಪಿ ಮಂಜುನಾಥ ಆಂಜಪ್ಪನ ಸಹಾಯದಿಂದ ಅಲ್ಲಿನ ವೈನ್ ಶಾಪ್ ನಲ್ಲಿ ಮದ್ಯ ಸೇವಿಸಿ ನಶೆಯಲ್ಲಿದ್ದ ಸಂಗಮೇಶನನ್ನು ಬೈಕ್ ನಲ್ಲಿ ಸವದತ್ತಿ ತಾಲೂಕಿನ ಕುಟಾರನಟ್ಟಿ ಗ್ರಾಮದ ಹೊರವಲಯಕ್ಕೆ ಕರೆದುಕೊಂಡು ಹೋಗಿದ್ದಾನೆ. ಬಳಿಕ ನಿರ್ಜನ ಪ್ರದೇಶದಲ್ಲಿ ಕಲ್ಲುಗಳಿಂದ ಸಂಗಮೇಶ್ ತಲೆಗೆ ಹಲ್ಲೆ ನಡೆಸಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಗೋಕಾಕ ತಾಲೂಕಿನ ಅಂಕಲಗಿಯಲ್ಲಿ ಕುಟರನಟ್ಟಿಗ್ರಾಮದ ನಿರ್ಜನ ಪ್ರದೇಶದಲ್ಲಿ ಪಾನಮತ್ತರಾಗಿದ್ದ ಮೂವರು ಸಂಗಮೇಶನ ತಲೆ ಮೇಲೆ ಕಲ್ಲು ಎಸೆದು ಪರಾರಿಯಾಗಿದ್ದಾರೆ. ಮಾಹಿತಿ ಪಡೆದ ಮುರಗೋಡ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ನಂತರ ಸಂಗಮೇಶ್ ಹತ್ಯೆಯಾಗಿರುವುದು ಬೆಳಕಿಗೆ ಬಂದಿದೆ. ಕೊಲೆ ನಡೆದ ಪ್ರದೇಶದಲ್ಲಿ ದೊರೆತ ಫೋನ್ ನಂಬರ್ ಆಧರಿಸಿ ಪೊಲೀಸರು ತನಿಖೆ ನಡೆಸಿದ್ದಾರೆ.

ಈ ಸಂಖ್ಯೆಗೆ ಕರೆ ಮಾಡಿದ ಪೊಲೀಸರು ಹಂತಕರಾದ ಮಂಜುನಾಥ್ ಮತ್ತು ಅಂಜಪ್ಪನನ್ನು ಬಂಧಿಸಿದ್ದಾರೆ. ಈ ಮಾಹಿತಿ ಮೇರೆಗೆ ಕೊಲೆಯಾದ ಸಂಗಮೇಶ್ ಮನೆಗೆ ತೆರಳಿ ವಿಚಾರಿಸಿದಾಗ ಅಸಲಿ ವಿಷಯ ಹೊರಬಿದ್ದಿದೆ. ಕೊಲೆ ನಡೆದ 24 ಗಂಟೆಗಳಲ್ಲಿ ಕೊಲೆ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂಘಮೇಶನನ್ನು ಕೊಲ್ಲಲು ಎರಡು ಲಕ್ಷ ರೂಪಾಯಿ ಕೊಡುವುದಾಗಿ ಮಂಜುನಾಥ್ ಜೊತೆ ಆತನ ತಂದೆ ಮಾತುಕತೆ ನಡೆಸಿದ್ದ ಎಂಬುದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ.

ಗಡಿ ವಿವಾದ: 12 ಮಂದಿ ಕರವೇ ಕಾರ್ಯಕರ್ತರ ವಿರುದ್ಧ ಎಫ್ಐಆರ್
ಬೆಳಗಾವಿ: ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ಭುಗಿಲೆದ್ದಿದ್ದು, ಮಂಗಳವಾರ ಬೆಳಗಾವಿ ಬಳಿ ನೂರಾರು ಕರ್ನಾಟಕ ರಕ್ಷಣಾ ವೇದಿಕೆ (ಕೆಆರ್ ವಿ) ಬೆಂಬಲಿಗರನ್ನು ಬಂಧಿಸಲಾಗಿದ್ದು, ಮಹಾರಾಷ್ಟ್ರ ನೋಂದಣಿ ಸಂಖ್ಯೆ ಹೊಂದಿರುವ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ ಆರೋಪದ ಮೇಲೆ ಬೆಳಗಾವಿ ಪೊಲೀಸರು 12 ಮಂದಿಯ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ.

ಕರ್ನಾಟಕದ ಬೆಳಗಾವಿಗೆ ಮಹಾರಾಷ್ಟ್ರ ಸಚಿವರ ನಿಯೋಗದ ಉದ್ದೇಶಿತ ಭೇಟಿಯನ್ನು ಮಂಗಳವಾರ ಮುಂದೂಡಿದ ನಂತರ ವಿವಾದ ಇನ್ನೂ ತಾರಕಕ್ಕೇರಿದ್ದು, ಏತನ್ಮಧ್ಯೆ, ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಎಂಎಸ್ಆರ್‌ಟಿಸಿ) ಪೊಲೀಸ್ ಸಲಹೆಯನ್ನು ಉಲ್ಲೇಖಿಸಿ ದಕ್ಷಿಣ ರಾಜ್ಯಕ್ಕೆ ಬಸ್ ಸೇವೆಗಳನ್ನು ಸ್ಥಗಿತಗೊಳಿಸಿದೆ.

ಬೆಳಗಾವಿ ಸಮೀಪದ ಹಿರೇಬಾಗವಾಡಿಯಲ್ಲಿ ಮಂಗಳವಾರ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಮಹಾರಾಷ್ಟ್ರದ ಆರು ವಾಹನಗಳ ಮೇಲೆ ದಾಳಿ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಕರ್ನಾಟಕ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿಗಳು ಮಂಗಳವಾರ ರಾತ್ರಿ ದೂರವಾಣಿಯಲ್ಲಿ ಪರಸ್ಪರ ಮಾತನಾಡಿ, ಎರಡೂ ಕಡೆ ಶಾಂತಿ ಮತ್ತು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಬೇಕು ಎಂದು ಒಪ್ಪಿಕೊಂಡಿದ್ದಾರೆ.

ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಮಾತನಾಡಿ ಹಿಂಸಾಚಾರದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ, ಇದಕ್ಕೆ ಬೊಮ್ಮಾಯಿ ಅವರು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಮತ್ತು ಮಹಾರಾಷ್ಟ್ರದಿಂದ ಬರುವ ವಾಹನಗಳನ್ನು ರಕ್ಷಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.