BENGALORE – Peepal Media

ಬೆಂಗಳೂರಿನಲ್ಲಿ ನಾವಿನ್ಯತಾ ಅನುಭವ ವಸ್ತು ಸಂಗ್ರಹಾಲಯ ಸ್ಥಾಪನೆ: ಬೊಮ್ಮಾಯಿ
ಬೆಂಗಳೂರು: ಕರ್ನಾಟಕದಲ್ಲಿ ಅಭಿವೃದ್ಧಿ ಹಾಗೂ ನಾವಿನ್ಯತೆಯ ಪಯಣ, ಇದಕ್ಕೆ ಕಾರಣವಾಗಿರುವ ಸಾಧಕರು, ಇವರ ಸಾಧನೆಗಳನ್ನು ಬಿಂಬಿಸುವ ನಾವಿನ್ಯತಾ ಅನುಭವ ವಸ್ತು ಸಂಗ್ರಹಾಲಯ(Innovation Experience Museum) ವನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರದಂದು ತಿಳಿಸಿದ್ದಾರೆ.

ಇಂದು  ಬೆಂಗಳೂರು ವಿನ್ಯಾಸಕಾರರ ಸಮುದಾಯದ ವತಿಯಿಂದ ಆಯೋಜಿಸಿದ್ದ ಬಿ.ಎಲ್.ಆರ್ ಡಿಸೈನ್ ವೀಕ್ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಬೆಂಗಳೂರಿನಲ್ಲಿ ನಾವಿನ್ಯತಾ ಅನುಭವ ವಸ್ತು ಸಂಗ್ರಹಾಲಯ ಸ್ಥಾಪನೆ ಬಗ್ಗೆ ಹೇಳಿದ್ದಾರೆ.

ರಾಜ್ಯದ ಎಲ್ಲ ನಾವಿನ್ಯತೆ, ಅವಿಷ್ಕಾರಗಳ ಬಗ್ಗೆ ಮಾಹಿತಿ ನೀಡುವ ಅಂತರರಾಷ್ಟ್ರೀಯ ಮಟ್ಟದ ಮ್ಯೂಸಿಯಂ ಇದಾಗಲಿದ್ದು, ಹಸಿರಿನ ಪರಿಸರವನ್ನೂ ಒಳಗೊಂಡಿರಲಿದೆ. ಇದರಿಂದ ವಿದೇಶಿ ಪ್ರವಾಸೋದ್ಯಮವನ್ನು ಪ್ರೋತ್ಸಾಹ ದೊರೆಯುತ್ತದೆ. ಈ ಮ್ಯೂಸಿಯಂ ನಿಂದ ಯುವ ಆವಿಷ್ಕಾರಿಗಳು, ವಿನ್ಯಾಸಕಾರರಿಗೆ ಸ್ಪೂರ್ತಿ ದೊರೆಯಲಿದೆ ಎಂದರು.

ಬೆಂಗಳೂರಿಗೆ 8 ನಗರ ಕೇಂದ್ರಗಳ ನಿರ್ಮಾಣ:

ವಿಶ್ವದ ಯಾವುದೇ ಸಣ್ಣ ನಗರದಲ್ಲಿ  ಒಂದು ನಗರ ಕೇಂದ್ರವಿರುವಂತೆ, ಬೆಂಗಳೂರಿನ 8 ದಿಕ್ಕುಗಳಲ್ಲಿ 8 ನಗರ ಕೇಂದ್ರಗಳ ನಿರ್ಮಾಣಕ್ಕೆ ರೂಪುರೇಷೆ ಸಿದ್ಧಪಡಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ ಬೆಂಗಳೂರು ನಗರಕ್ಕೆ ಮಾತ್ರ ನಗರಕೇಂದ್ರವೆಂಬುದಿಲ್ಲ. ಆದ್ದರಿಂದ 8 ನಗರ ಕೇಂದ್ರಗಳನ್ನು ನಿರ್ಮಿಸಿ, ಇದಕ್ಕೆ ಪೂರಕವಾಗಿ ರಸ್ತೆ, ರೈಲುಗಳನ್ನು ಅಭಿವೃದ್ಧಿಗೊಳಿಸಬಹುದು. ಈ ಯೋಜನೆಗೆ ಬೇಕಾದ ಸಲಹೆಗಳನ್ನು ವಿನ್ಯಾಸಕಾರರಿಂದ ತಿಳಿದುಕೊಳ್ಳುವುದಾಗಿ ಬೊಮ್ಮಾಯಿಯವರು  ಹೇಳಿದ್ದಾರೆ.

ಈ ಸಂದರ್ಭದಲ್ಲಿ ಐ.ಟಿ. ಬಿ.ಟಿ, ಉನ್ನತ ಶಿಕ್ಷಣ ಸಚಿವ ಸಿ.ಎನ್.ಅಶ್ವತ್ಥ್ ನಾರಾಯಣ್, ಸ್ಟಾರ್ಟ್ ಅಪ್ ವಿಷನ್ ಗುಂಪಿನ ಅಧ್ಯಕ್ಷ ಪ್ರಶಾಂತ್ ಭೂಷಣ್  ಮೊದಲಾದವರು ಉಪಸ್ಥಿತರಿದ್ದರು.

ಬೆಂಗಳೂರಿನಲ್ಲಿ ಬೃಹತ್‌ ನಕಲಿ ಮಾರ್ಕ್ಸ್‌ಕಾರ್ಡ್‌ ದಂಧೆ : ನಾಲ್ವರ ಬಂಧನ
ಬೆಂಗಳೂರು: ಬೆಂಗಳೂರಿನಲ್ಲಿ ಬೃಹತ್‌  ನಕಲಿ ಮಾರ್ಕ್ಸ್‌ಕಾರ್ಡ್‌ ದಂಧೆ ನಡೆಸುತ್ತಿದ್ದ ಜಾಲವನ್ನು ಸಿಸಿಬಿ ಪೊಲೀಸರು ಭೇದಿಸಿದ್ದು, ದೇಶದ 29 ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ಅಂಕಪಟ್ಟಿಯನ್ನು ನಕಲಿ ಮಾಡಿ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್‌ನಲ್ಲಿ ನಕಲಿ ಮಾರ್ಕ್ಸ್‌ಕಾರ್ಡ್‌ ದಂಧೆ ನಡೆಸುತ್ತಿದ್ದು, ದೇಶದಲ್ಲಿನ 29 ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ಅಂಕಪಟ್ಟಿಗಳನ್ನು ನಕಲಿ ಮಾಡಿ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ಅವರ ಬಳಿ ಇದ್ದ, 1500ಕ್ಕೂ ಹೆಚ್ಚು ನಕಲಿ ಮಾರ್ಕ್ಸ್‌ ಕಾರ್ಡ್‌, 80 ನಕಲಿ ಸೀಲ್‌ಗಳು. 30 ಹಾಲೋಗ್ರಾಂ ಸ್ಟಿಕರ್‌, 8 ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಹಾಗೂ ಪಿಯು ಬೋರ್ಡ್, ಸಿ.ವಿ ರಾಮನ್‌ ವಿವಿ, ದೆಹಲಿಯ ಸೆಕೆಂಡರಿ ಬೋರ್ಡ್‌, ಮೇಘಾಲಯದ ವಿಲಿಯಂ ಕ್ಯಾರಿ ಯೂನಿವರ್ಸಿಟಿ ಸೇರಿದಂತೆ 25 ಕ್ಕೂ ಹೆಚ್ಚು ವಿವಿಗಳ ಮಾರ್ಕ್ಸ್‌ಕಾರ್ಡ್‌ಗಳನ್ನು ನಕಲು ಮಾಡಿ ಮಾರಾಟ ಮಾಡುತ್ತಿದ್ದ ಬಗ್ಗೆ, ಸಿಸಿಬಿ ಸೈಬರ್‌ ಕ್ರೈಂ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನ ವಿ.ಎಸ್.ಎಸ್‌ ಇನ್ಸಿಟ್ಯೂಟ್‌ ಮೇಲೆ ಸಿಸಿಬಿ ಪೊಲೀಸರು ದಾಳಿ  ನಡೆಸಿದ್ದು, ಅಂಕಪಟ್ಟಿಗಳ ವ್ಯವಸ್ಥಿತ ಜಾಲವನ್ನು ಭೇದಿಸಿದ್ದಾರೆ. ಈ ದಂಧೆಯಲ್ಲಿ ಒಂದೊಂದು ಸರ್ಟಿಫಿಕೇಟ್‌ಗೂ ಬೇರೆ ಬೇರೆ ರೀತಿಯಲ್ಲಿ ಹಣ ಫಿಕ್ಸ್‌ ಮಾಡಲಾಗಿದೆ.  ಸುಮಾರು ಐದು ವರ್ಷಗಳಿಂದ ಆರೋಪಿಗಳು ಈ ಕೃತ್ಯದಲ್ಲಿ ತೊಡಗಿಸಿಕೊಂಡಿದ್ದು, ದೇಶದ ವಿವಿಧ ವಿಶ್ವವಿದ್ಯಾಲಯಗಳ ಸೀಲ್‌ಗಳನ್ನು ಬಳಸಿ  ಈ ಅಕ್ರಮ ಚಟುವಟಿಕೆಗಳನ್ನು ನಡೆಸಿರುವ ವಿಚಾರ  ಬೆಳಕಿಗೆ ಬಂದಿದೆ. ವಿ. ಎಸ್‌.ಎಸ್‌ ವೆಬ್‌ಸೈಟ್‌ ಮೂಲಕ ದೂರ ಶಿಕ್ಷಣ ನೀಡುವುದಾಗಿ ತಿಳಿಸಿ ಈ ಮೂಲಕ ಸಾಕಷ್ಟು ಜನರಿಗೆ ನಕಲಿ ಮಾರ್ಕ್ಸ್ ಕಾರ್ಡ್‌ ನೀಡಿದ್ದು, 1 ಲಕ್ಷದಿಂದ 15 ಲಕ್ಷದವರೆಗೂ ನಕಲಿ ಮಾರ್ಕ್ಸ್‌ಕಾರ್ಡ್‌ ಮಾರಾಟ ಮಾಡಿದ್ದಾರೆ . ಈ ಕುರಿತು ನಕಲಿ  ಮಾರ್ಕ್ಸ್‌ಕಾರ್ಡ್‌ ಪಡೆದವರನ್ನು ಕೂಡ ವಿಚಾರಣೆ ನಡೆಸುತ್ತೇವೆ ಎಂದು ಪೊಲೀಸ್‌ ಆಯುಕ್ತ ಪ್ರತಾಪ್‌ ರೆಡ್ಡಿ ತಿಳಿಸಿದ್ದಾರೆ.

ಮೆಡಿಕಲ್‌ ಹೊರತು ಪಡಿಸಿ ಪಿಯುಸಿ ಇಂದ ಪಿಎಚ್‌ಡಿ ವರೆಗೂ ನಕಲಿ ಅಂಕಪಟ್ಟಿಗಳನ್ನು ತಯಾರಿಸಿ ಮಾರಾಟ ಮಾಡಲಾಗುತ್ತಿತ್ತು. ಈಗಾಗಲೇ ಅಯೂಬ್‌ ಪಾಷಾ, ಖಲೀಲ್‌ ವುಲ್ಲಾ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ಅವರ ಬಳಿಯಿದ್ದ ದಂಧೆಗೆ ಸಂಬಂಧಿಸಿದ ನಕಲಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಇನ್ನು ಹಲವು ಆರೋಪಿಗಳನ್ನು ತಲೆಮರೆಸಿಕೊಂಡಿದ್ದು ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಬಾಕಿ ಉಳಿಸಿಕೊಂಡಿರುವ ಹಾಲಿನ ಪ್ರೋತ್ಸಾಹ ಧನವನ್ನು ಕೂಡಲೇ ಬಿಡುಗಡೆ ಮಾಡಿ: ಸಿದ್ದರಾಮಯ್ಯ ಆಗ್ರಹ
ಬೆಂಗಳೂರು: ಬಾಕಿ ಉಳಿಸಿಕೊಂಡಿರುವ ಹಾಲಿನ ಪ್ರೋತ್ಸಾಹ ಧನವನ್ನು ಕೂಡಲೇ ಬಿಡುಗಡೆ ಮಾಡಿ ಹಾಲಿನ ಉತ್ಪನ್ನಗಳ ದರ ಏರಿಕೆಯಿಂದಾಗಿ ಬರುವ ಲಾಭವನ್ನು ಪೂರ್ಣವಾಗಿ ಹೈನುಗಾರರಿಗೇ ನೀಡಬೇಕೆಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.

ಈ ಸಂಬಂಧ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.

ಪತ್ರದಲ್ಲಿ ಸರ್ಕಾರದ ಹಾದಿ ತಪ್ಪಿದ ನೀತಿಗಳಿಂದಾಗಿ ರಾಜ್ಯದ ಹಾಲು ಉತ್ಪಾದಕರು, ಹಾಲು ಉತ್ಪಾದಕ ಮಂಡಳಿಗಳೂ ಸಹ ವಿಪರೀತ ಒತ್ತಡದಲ್ಲಿರುವ ಪರಿಣಾಮ, 94 ಲಕ್ಷ ಲೀಟರುಗಳಿಗೆ ತಲುಪಿದ್ದ ಹಾಲಿನ ಸಂಗ್ರಹವು ಈ ತಿಂಗಳಲ್ಲಿ 77 ಲಕ್ಷ ಲೀಟರುಗಳಿಗೆ ಕುಸಿದಿದೆ. ರಾಜ್ಯದಲ್ಲಿ ಸುಮಾರು 25 ಲಕ್ಷ ನೋಂದಾಯಿತ ಹಾಲು ಉತ್ಪಾದಕರಿದ್ದಾರೆ. ಅವರಲ್ಲಿ ಸರಾಸರಿ 9 ಲಕ್ಷ ಜನರಿಗೆ ಸರ್ಕಾರ ಪ್ರೋತ್ಸಾಹ ಧನವನ್ನು ನೀಡುತ್ತಿದೆ. ಹಾಲನ್ನು ಯಥೇಚ್ಛವಾಗಿ ಉತ್ಪಾದಿಸುತ್ತಿದ್ದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ ಮುಂತಾದ ಜಿಲ್ಲೆಗಳ ರೈತರೆ ಹಸುಗಳನ್ನು ಸಾಕಲು ನಿರಾಸಕ್ತಿ ತೋರಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ನಮ್ಮ ಸರ್ಕಾರ ಇದ್ದಾಗ 2013 ರಿಂದ 2018ರ ಅವಧಿಯಲ್ಲಿ ಹಾಲಿಗೆ ನೀಡುವ ಪ್ರೋತ್ಸಾಹ ಧನವನ್ನು ಲೀಟರಿಗೆ 5 ರೂಪಾಯಿಗಳಷ್ಟು ಹೆಚ್ಚಿಸಿದ್ದೆವು. ವರ್ಷಕ್ಕೆ 4700 ಕೋಟಿ ರೂಪಾಯಿಗೂ ಅಧಿಕ ಮೊತ್ತವನ್ನು ರೈತರ ಖಾತೆಗಳಿಗೆ ವರ್ಗಾಯಿಸಿದ್ದೆವು. ನಮ್ಮ ಸರ್ಕಾರದ ನಿರ್ಧಾರದಿಂದಾಗಿ 2012-13 ರಲ್ಲಿ 45 ಲಕ್ಷ ಲೀಟರ್ ಉತ್ಪಾದನೆಯಾಗುತ್ತಿದ್ದ ಹಾಲಿನ ಪ್ರಮಾಣವು 2017ರ ವೇಳೆಗೆ 73 ಲಕ್ಷ ಲೀಟರಿಗೆ [28 ಲಕ್ಷ ಲೀಟರು] ಏರಿಕೆಯಾಗಿತ್ತು. ಇದರಿಂದಾಗಿ ರೈತರ ಬದುಕಿನಲ್ಲಿ ಚೈತನ್ಯ ಮೂಡಿತ್ತು ಎಂದರು.

ಆದರೆ ಇಂದಿನ ಸರ್ಕಾರ ತನ್ನ ಪಶುಪಾಲಕ ವಿರೋಧಿ ನೀತಿಗಳಿಂದಾಗಿ ಹಾಲು ಉತ್ಪಾದಕರ ಬದುಕನ್ನು ನಿರ್ನಾಮ ಮಾಡಲು ಹೊರಟಿದೆ ಎಂದು ಆರೋಪಿಸಿರುವ ಅವರು, ಸರ್ಕಾರ ಕಾಲ ಕಾಲಕ್ಕೆ ಬಿಡುಗಡೆ ಮಾಡಬೇಕಾದ ಪ್ರೋತ್ಸಾಹಧನವನ್ನು ಬಿಡುಗಡೆ ಮಾಡುತ್ತಿಲ್ಲ. ಇತ್ತೀಚಿನ ಪತ್ರಿಕೆಗಳ ವರದಿ ಪ್ರಕಾರ ಅನೇಕ ಜಿಲ್ಲೆಗಳ ಹಾಲು ಉತ್ಪಾದಕರಿಗೆ ಕಳೆದ 7-8 ತಿಂಗಳಿಂದ ಪ್ರೋತ್ಸಾಹ ಧನವನ್ನು ನೀಡಿಲ್ಲ. ಇದರ ಬಾಬತ್ತು ನೂರಾರು ಕೋಟಿಗಳಷ್ಟು ಬಾಕಿ ಇದೆ ಎಂದು ತಿಳಿಸಿದ್ದಾರೆ.

ಕಳೆದ 5 ವರ್ಷಗಳಲ್ಲಿ ಜಾನುವಾರುಗಳಿಗೆ ನೀಡುವ ಹಿಂಡಿ, ಬೂಸ ಮುಂತಾದ ಪಶು ಆಹಾರದ ಬೆಲೆಗಳು ದೊಡ್ಡ ಪ್ರಮಾಣದಲ್ಲಿ ಹೆಚ್ಚಾಗಿವೆ. 2017-18 ರಲ್ಲಿ 49 ಕೆಜಿ ಬೂಸಾದ ಬೆಲೆ 450ರೂ ಇದ್ದದ್ದು ಈಗ 1300 ರಿಂದ 1350 ರೂಗಳಿಗೆ ಏರಿಕೆಯಾಗಿದೆ. 30 ಕೆಜಿ ಹಿಂಡಿಯ ಬೆಲೆ 400 ರೂ ಇದ್ದದ್ದು ಈಗ 1400 ಕ್ಕೂ ಹೆಚ್ಚಾಗಿದೆ. ಆದರೆ ಹಾಲಿನ ದರಗಳು ಮಾತ್ರ ಹೆಚ್ಚಾಗಿಲ್ಲ. ಇದರಿಂದಾಗಿ ನಮ್ಮ ರೈತರು ಜಾನುವಾರುಗಳನ್ನು ಸಾಕಣೆ ಮಾಡಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ಪ್ರತಿ ತಿಂಗಳು 3000 ಟನ್ ಹಾಲಿನ ಪುಡಿಯನ್ನು ‘ಕ್ಷೀರ ಭಾಗ್ಯ’ ಯೋಜನೆಯಡಿ ಶಾಲೆ ಮತ್ತು ಅಂಗನವಾಡಿಗಳ ಮಕ್ಕಳಿಗಾಗಿ ನೀಡಲಾಗುತ್ತಿದೆ. ಆದರೆ ಸರ್ಕಾರ ಕಳೆದ ಕೆಲವು ವರ್ಷಗಳಿಂದ ಈಚೆಗೆ ಹಾಲಿನ ಪುಡಿಗೆ ನೀಡುವ ದರಗಳನ್ನು ಪರಿಷ್ಕರಿಸಿಲ್ಲ. 1 ಕೆಜಿ ಹಾಲಿನ ಪುಡಿ ಉತ್ಪಾದಿಸಲು ಜಿಎಸ್‍ಟಿ ಬಿಟ್ಟು 310ರೂ ತಗಲುತ್ತಿದೆ. ಆದರೆ ಸರ್ಕಾರ ಪ್ರತಿ ಕೆಜಿಗೆ ಕೇವಲ 275ರೂಗಳನ್ನು ಮಾತ್ರ ನೀಡುತ್ತಿದೆ ಎಂದರು.

ಮಾರುಕಟ್ಟೆಯಲ್ಲಿ ಕೆಎಂಎಫ್ ಒಂದು ಕೆಜಿ ಹಾಲಿನ ಪುಡಿಯನ್ನು 350 ರೂಗೆ ಮಾರಾಟ ಮಾಡುತ್ತಿರುವುದರಿಂದ ಪ್ರತಿ ವರ್ಷ 250 ಕೋಟಿ ರೂ ನಷ್ಟವಾಗಿ ಕೆಎಂಎಫ್ ಒತ್ತಡಕ್ಕೆ ಸಿಲುಕಿದೆ. ಸರ್ಕಾರ ಕೆಎಂಎಫ್‍ಗೆ ಮಾಡುತ್ತಿರುವ ಅನ್ಯಾಯದಿಂದಾಗಿ ರಾಜ್ಯದ ಜನರು ಮತ್ತು ಬೆಲೆ ಏರಿಕೆಯ ಹೊರೆಯನ್ನು ಅನುಭವಿಸುತ್ತಿದ್ದಾರೆ. ಸರ್ಕಾರ ಹಾಲು, ಮೊಸರಿಗೆ ಲೀಟರಿಗೆ 2 ರೂ ಹೆಚ್ಚು ಮಾಡಿದ್ದಾರೆ. ಆದರೆ ಕಳೆದ ಎರಡು ತಿಂಗಳಲ್ಲಿ ಪ್ರತಿ ಕೆಜಿ ತುಪ್ಪದ ಬೆಲೆಯನ್ನು ಸದ್ದಿಲ್ಲದೆ 140 ರೂ ಹೆಚ್ಚಿಸಿದ್ದಾರೆ. ಎಲ್ಲ ಸಿಹಿ ಪದಾರ್ಥಗಳು, ಪನ್ನೀರ್ ಮುಂತಾದವುಗಳ ಬೆಲೆಯನ್ನೂ ಸಹ ಶೇ.15 ರಷ್ಟು ಹೆಚ್ಚಿಸಿದ್ದಾರೆ. 10ರೂಗಳಿಗೆ ಮಾರುತ್ತಿದ್ದ ಒಂದು ಸಣ್ಣ ಮೈಸೂರುಪಾಕಿಗೆ 5 ರೂ ಹೆಚ್ಚಿಸಿ ಈಗ 15ರೂಗೆ ಮಾರುತ್ತಿದ್ದಾರೆ. ಆದರೆ ಏರಿಕೆಯಾಗಿರುವ ಹಾಲಿನ ದರವನ್ನು ಹೊರತುಪಡಿಸಿ ಉಳಿದ ಉತ್ಪನ್ನಗಳ ಹೆಚ್ಚುವರಿ ಹಣವನ್ನು ನಮ್ಮ ರೈತರಿಗೆ ವರ್ಗಾಯಿಸದೆ ಮೋಸ ಮಾಡಲಾಗುತ್ತಿದೆ. ತುಪ್ಪ, ಪನ್ನೀರ್, ಸಿಹಿ ತಿಂಡಿಗಳ ಬೆಲೆ ಹೆಚ್ಚಿಸಲಾಗಿದೆ ಎಂಬ ವಿಷಯವನ್ನು ಪ್ರಚಾರ ಮಾಡದೆ ಬಚ್ಚಿಡಲಾಗಿದೆ ಎಂದು ಹೇಳಿದರು.

ಜಾನುವಾರುಗಳಿಗೆ ಚರ್ಮಗಂಟು ರೋಗವು ವ್ಯಾಪಕವಾಗಿ ಹರಡುತ್ತಿದೆ. ಅವುಗಳಿಗೆ ಲಸಿಕೆ ಹಾಕಲು ವೈದ್ಯರುಗಳೇ ಇಲ್ಲ. ಸಂಚಾರಿ ಆಸ್ಪತ್ರೆ ಮಾಡುತ್ತೇವೆಂದು ಆಂಬ್ಯುಲೆನ್ಸುಗಳನ್ನು ಖರೀದಿಸಿ ಧೂಳು ತಿನ್ನಿಸಲಾಗುತ್ತಿದೆ. ಖರೀದಿಗೆ ಇರುವ ಉತ್ಸಾಹವು ಅವುಗಳನ್ನು ಬಳಸುವುದರಲ್ಲಿ ಇಲ್ಲವಾಗಿದೆ ಎಂದು ಅಸಮಾಧಾನ ವ್ಯಕ್ತ ಪಡಿಸಿದರು.

ಆದ್ದರಿಂದ ಈ ಕೂಡಲೆ ಬಾಕಿ ಇರುವ ಪ್ರೋತ್ಸಾಹ ಧನವನ್ನು ಬಿಡುಗಡೆ ಮಾಡಬೇಕು. ನಂದಿನಿ ತುಪ್ಪ ಸೇರಿದಂತೆ ಇತರೆ ಉತ್ಪನ್ನಗಳಿಗೆ ಹೆಚ್ಚು ಮಾಡಿರುವ ಬೆಲೆಗಳಿಂದ ಬರುವ ಲಾಭವೆಲ್ಲವನ್ನೂ ರೈತರಿಗೆ ವರ್ಗಾಯಿಸಬೇಕು. ಕ್ಷೀರಭಾಗ್ಯ ಯೋಜನೆಯಡಿ ಕೆಎಂಎಫ್ ನಿಂದ ಖರೀದಿಸುತ್ತಿರುವ 36 ಸಾವಿರ ಟನ್ ಹಾಲಿನ ಪುಡಿಗೆ ನೀಡುತ್ತಿರುವ ಬೆಲೆಯನ್ನು ಪರಿಷ್ಕರಿಸಿ ಮಾರುಕಟ್ಟೆ ದರದಲ್ಲಿ ಖರೀದಿಸಿ ಕೆಎಂಎಫ್ ಮತ್ತು ರೈತರನ್ನು ಉಳಿಸಬೇಕು. ಚರ್ಮಗಂಟು ರೋಗ ತಡೆಯಲು ಕೂಡಲೆ ಸಮರೋಪಾದಿಯಲ್ಲಿ ಲಸಿಕೆ ಹಾಕಿ ಮುಗಿಸಬೇಕು. ವಿವಿಧ ಕಾರಣಗಳಿಂದಾಗಿ ಮರಣ ಹೊಂದುತ್ತಿರುವ ಕುರಿ ಮೇಕೆ ಮತ್ತು ದೊಡ್ಡ ಜಾನುವಾರುಗಳಿಗೆ ಪರಿಹಾರ ನೀಡುವಿಕೆಯನ್ನು ತ್ವರಿತಗೊಳಿಸಿ ಬಾಕಿ ಇರುವ ಎಲ್ಲ ಪ್ರಕರಣಗಳನ್ನು ಮುಕ್ತಾಯಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಜಾನುವಾರು ಹತ್ಯಾ ಕಾಯ್ದೆಯ ನೆಪದಲ್ಲಿ ರೈತರಿಗೆ ವಿಪರೀತ ಕಿರುಕುಳ ನೀಡಲಾಗುತ್ತಿದೆ. ಇದನ್ನು ತಪ್ಪಿಸಬೇಕು. ಆರೆಸ್ಸೆಸ್ಸಿಗೆ ಸರ್ಕಾರಿ ಜಮೀನುಗಳನ್ನು ಮನಸೋ ಇಚ್ಛೆ ನೀಡುತ್ತಿದ್ದೀರಿ. ಆದರೆ ನಮ್ಮ ರೈತರ ಜಾನುವಾರುಗಳು ಮೇಯಲು ಜಾಗ ಇಲ್ಲದಂತಾಗಿದೆ. ಇದನ್ನು ಕೂಡಲೆ ನಿಲ್ಲಿಸಿ ರಾಜ್ಯದಲ್ಲಿರುವ ಎಲ್ಲ ಮೇವಿನ ಕ್ಷೇತ್ರಗಳನ್ನು ಉಳಿಸಬೇಕು. ಸರ್ಕಾರ ಕೂಡಲೆ ಮಧ್ಯ ಪ್ರವೇಶಿಸಿ ರೈತರು ಮತ್ತು ಗ್ರಾಹಕರ ಇಬ್ಬರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ವೈಜ್ಞಾನಿಕವಾಗಿ ಸಮಸ್ಯೆಗಳನ್ನು ಪರಿಹರಿಸಬೇಕು. ಪಶುಭಾಗ್ಯ ಯೋಜನೆಯನ್ನು ಸಶಕ್ತಗೊಳಿಸಬೇಕು. ಸರ್ಕಾರಿ ನೌಕರರಿಂದ 11000 ರೂಪಾಯಿಗಳನ್ನು ದೋಚಲು ಹೊರಟಿರುವ ಯೋಜನೆಯನ್ನು ಕೂಡಲೆ ನಿಲ್ಲಿಸಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ರಾಷ್ಟ್ರೋತ್ಥಾನಕ್ಕೆ ಸಿಎ ನಿವೇಶನ: ಬೊಮ್ಮಾಯಿ ಸೇರಿದಂತೆ 8 ಮಂದಿ ವಿರುದ್ಧ ಲೋಕಾಯುಕ್ತಕ್ಕೆ ದೂರು
ಬೆಂಗಳೂರು: ಬಳ್ಳಾರಿಯ ಕುವೆಂಪು ನಗರದ ಬಡಾಣೆಯಲ್ಲಿ ನಾಗರಿಕ ಸೌಲಭ್ಯ ನಿವೇಶನವನ್ನು ನಿಯಮಬಾಹಿರವಾಗಿ ರಾಷ್ಟ್ರೋತ್ಥಾನ ಪರಿಷತ್‌ಗೆ ಶೇ.25ರ ದರದಲ್ಲಿ 30 ವರ್ಷಗಳಿಗೆ ಗುತ್ತಿಗೆ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಒಟ್ಟು 8 ಜನರ ವಿರುದ್ಧ ಕರ್ನಾಟಕ ರಾಷ್ಟ್ರಾಸಮಿತಿಯು ಲೋಕಾಯುಕ್ತಕ್ಕೆ ದೂರು ದಾಖಲಿಸಿದೆ.

ದೂರಿನಲ್ಲಿರುವ ಮಾಹಿತಿ ಪ್ರಕಾರ, 8 ಜನರ ಪೈಕಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಗರಾಭಿವೃದ್ಧಿ ಸಚಿವ ಭರತಿ ಬಸವರಾಜು, ಪ್ರವಾಸೋದ್ಯಮ ಸಚಿವ ಆನಂದ್‌ ಸಿಂಗ್‌ ಅವರ ಮೇಲೂ ಪ್ರಕರಣ ದಾಖಲಾಗಿರುವ ಕುರಿತು ʼದಿ ಫೈಲ್‌ʼ ವಿವರವಾಗಿ ವರದಿ ಮಾಡಿದೆ.

ಈ ಕುರಿತಂತೆ, ಕರ್ನಾಟಕ ರಾಷ್ಟ್ರಸಮಿತಿಯ ರಾಜ್ಯ ಕಾರ್ಯದರ್ಶಿ ಬಿ.ಎಸ್‌. ಮಲ್ಲಿಕಾರ್ಜುನಯ್ಯ ಅವರು ಕರ್ತವ್ಯಲೋಪ ಮತ್ತು ಭ್ರಷ್ಟಾಚಾರ ಆರೋಪದ ಅಡಿಯಲ್ಲಿ ದೂರು ದಾಖಲಿಸಿದ್ದು, ಬಳ್ಳಾರಿ ನಗರದ ಶಾಸಕ ಜಿ. ಸೋಮಶೇಖರ್‌ ರೆಡ್ಡಿ, ಸಂಸದ ವೈ. ದೇವೇಂದ್ರಪ್ಪ, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ, ಆಯುಕ್ತ, ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್‌ ಸಿಂಗ್‌ ಅವರನ್ನೂಸಹ ಪ್ರಕರಣದಲ್ಲಿ ಪ್ರತಿವಾದಿಯನ್ನಾಗಿಸಿದ್ದಾರೆ. ಈ ಕುರಿತ ಪ್ರತಿಯು ʼದಿ ಪೈಲ್‌ʼಗೆ ಲಭ್ಯವಾಗಿದೆ ಎಂದು ತನ್ನ ವರದಿಯಲ್ಲಿ ತಿಳಿಸಿದೆ.

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಲೋಕಯುಕ್ತರಿಗೆ ನೀಡಿದ ದೂರಿನಲ್ಲಿ, ನಾಗರಿಕ ಸೌಲಭ್ಯ ನಿವೇಶನವನ್ನು ನಿಯಮಬಾಹಿರವಾಗಿ ಬಳ್ಳಾರಿಯ ಕುವೆಂಪು ನಗರದಲ್ಲಿನ ಬಹುಕೋಟಿ ಬೆಲೆಬಾಳುವ 24,008 ಚ.ಮೀ ವಿಸ್ತೀರ್ಣದ ನಿವೇಶನವನ್ನು, ಆಡಳಿತಾತ್ಮಕ ಭ್ರಷ್ಟಾಚಾರ ನಡೆಸಿ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರ ಮತ್ತು ರಾಜ್ಯ ಸರ್ಕಾರವು ರಾಜ್ಯೋತ್ಥಾನ ಪರಿಷತ್‌ಗೆ ಶೇ.25ರ ದರದಲ್ಲಿ 30 ವರ್ಷಗಳಿಗೆ ಗುತ್ತಿಗೆ ನೀಡಿದ್ದರಿಂದ ಬೊಕ್ಕಸಕ್ಕೆ ಅಂದಾಜು 7.50 ಕೋಟಿ ನಷ್ಟ ಸಂಭವಿಸಿದೆ ಎಂದು ತಿಳಿಸಿದೆ.

ಬೆಂಗಳೂರಿನ ರಾಜ್ಯೋತ್ಥಾನ ಪರಿಷತ್‌ಗೆ ಬೆಂಗಳೂರು ನಗರ ಜಿಲ್ಲೆ ಸೇರಿದಂತೆ, ವಿವಿಧೆಡೆ ಗೋಮಾಳವನ್ನು ಕಾನೂನು ಇಲಾಖೆಯ ವಿರೋಧದ ನಡುವೆ ಮತ್ತು ಪ್ರಚಲಿತ ಮಾರುಕಟ್ಟೆ ದರಕ್ಕಿಂತಲೂ ಚಿಲ್ಲರೆ ದರಕ್ಕೆ ಮಂಜೂರು ಮಾಡಿರುವ ರಾಜ್ಯ ಸರ್ಕಾರ, ಬಳ್ಳಾರಿ ನಗರದಲ್ಲಿಯೂ ನಿಯಮಬಾಹಿರವಾಗಿ ಒಟ್ಟಾರೆ 24,008.00 ಚ ಮೀ ವಿಸ್ತೀರ್ಣದ ನಾಗರಿಕ ಸೌಲಭ್ಯದ ನಿವೇಶನವನ್ನು 30 ವರ್ಷ ಅವಧಿಗೆ ಗುತ್ತಿಗೆ ಮಂಜೂರು ಮಾಡಿದೆ ಎಂದು ಹೇಳಿದೆ.

ಅಂಗವಿಕಲರ ಹಾಗೂ ಬುದ್ಧಿಮಾಂದ್ಯರ ಕಲ್ಯಾಣಕ್ಕಾಗಿ ಸ್ಥಾಪಿಸಲಾದ ಸಂಸ್ಥೆಗಳಿಗೆ, ಕನ್ನಡ ಮಾಧ್ಯಮದಲ್ಲಿ ಶಾಲೆ ನಡೆಸುವ ಸಂಸ್ಥೆಗಳಿಗೆ ಮತ್ತು ಕೇಂದ್ರ, ರಾಜ್ಯ ಸರ್ಕಾರದ ಅಂಗ ಸಂಸ್ಥೆಗಳಿಗೆ ಮಾತ್ರ ಪ್ರಾಧಿಕಾರವು ನಿಗದಿಪಡಿಸಿದ ಮೊತ್ತದ ಶೇ.50ರ ದರದಲ್ಲಿ ನಾಗರಿಕ ಸೌಲಭ್ಯ ನಿವೇಶನವನ್ನು ಮಂಜೂರು ಮಾಡಲು ಅವಕಾಶವಿದೆ. ಆದರೆ ಇತರ ಸಂಘ ಸಂಸ್ಥೆಗಳಿಗೆ ನಿಗದಿತ ಮೊತ್ತಕ್ಕೆ ರಿಯಾಯಿತಿ ನೀಡಲು ನಿಯಮಗಳಲ್ಲಿ ಅವಕಾಶವಿಲ್ಲ ಎಂದು ಕಾನೂನು ಇಲಾಖೆಯು ನೀಡಿದ್ದ ಸ್ಪಷ್ಟ ಅಭಿಪ್ರಾಯವನ್ನು ಮುಖ್ಯಮಂತ್ರಿ ನಗರಾಭಿವ್ರುದ್ಧಿ ಸಚಿವರು ಸೇರಿದಂತ ಸಚಿವ ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಭ್ರಷ್ಟಾಚಾರ ಮಾಡಲು ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸಿ ಬದಿಗೆ ಸರಿಸಲಾಗಿದೆ ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ದೂರಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು ಅವರ ಒತ್ತಡಕ್ಕೆ ಮಣಿದ ನಗರಾಭಿವೃದ್ಧಿ ಇಲಾಖೆಯು ನಿಯಮ ಉಲ್ಲಂಘಿಸಿ ಬಹುಕೋಟಿ ಬೆಲೆ ಬಾಳುವ ಜಮೀನನ್ನು ಪ್ರಚಲಿತ ಮಾರುಕಟ್ಟೆ ದರ ಶೇ. 25 ರಷ್ಟು ದರಕ್ಕೆ ಮಂಜೂರು ಮಾಡಿರುವುದರ ಹಿಂದೆ ಅಧಿಕಾರಿಗಳ ಕರ್ತವ್ಯಲೋಪ ಮತ್ತು ಭ್ರಷ್ಟಾಚಾರ ನಡಿದಿದೆ ಎಂದು ಕರ್ನಾಟಕ ರಾಷ್ಟಸಮಿತಿಯು ದೂರಿನಲ್ಲಿ ಆಪಾದಿಸಿದೆ.

ಬೆಂಗಳೂರು ಹಾಗೂ ಕಾನೂನನ್ನು ಬಿಜೆಪಿ ಪಕ್ಷ ಗುತ್ತಿಗೆ ಪಡೆದಿದೆಯೇ? : ಕಾಂಗ್ರೆಸ್‌
ಬೆಂಗಳೂರು : ರಾಜ್ಯ ವಕೀಲ ಸಂಘದ ಅಧ್ಯಕರಾದ ವಿವೇಕ್‌ ಸುಬ್ಬಾರೆಡ್ಡಿ ದೀಪಾವಳಿ ಪ್ರಯುಕ್ತ ಶುಭಾಷಯಗಳನ್ನು ಕೋರಲು ಪ್ರೆಕ್ಸ್‌ಗಳು ಹಾಕಿಸಿದ್ದು, ಕಾಂಗ್ರೆಸ್ ಈ ವಿರುದ್ದ ಕಿಡಿಕಾರಿದೆ

ಬೆಂಗಳೂರಿನಲ್ಲಿ ಫ್ಲೆಕ್ಸ್‌, ಬ್ಯಾನರ್ ನಿಷೇಧಿಸಿದ್ದು, ಅನಧಿಕೃತವಾಗಿ ಫ್ಲೆಕ್ಸ್‌  ಬ್ಯಾನರ್‌ಗಳು ಅಳವಡಿಸಿದರೆ ಕಾನೂನಿನ ಪ್ರಕಾರ 6 ತಿಂಗಳು ಜೈಲು ಮತ್ತು ಒಂದು ಲಕ್ಷ ದಂಡ ಹಾಕಿ ಕ್ರಮ ಕೈಗೊಳ್ಳುವಂತೆ ಬಿಬಿಎಂಪಿಯವರಿಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಈ ವರೆಗೂ  ಇದರ ವಿರುದ್ದ 26 ಎಫ್‌ಐಆರ್‌ ಗಳನ್ನು ದಾಖಲಿಸಲಾಗಿದೆ.

ಆದರೆ ಬಿಬಿಎಂಪಿ ಮತ್ತು ಹೈಕೋರ್ಟ್‌ ನಿರ್ದೇಶನಗಳನ್ನು ರಾಜಕೀಯ ವ್ಯಕ್ತಿಗಳು ಮಾತ್ರ ಆದೇಶನವನ್ನು ಉಲ್ಲಂಘನೆ ಮಾಡುತ್ತಲೇ ಬಂದಿದ್ದಾರೆ. ಇದೀಗ ರಾಜ್ಯ ವಕೀಲ ಸಂಘದ ಅಧ್ಯಕರಾದ ವಿವೇಕ್‌ ಸುಬ್ಬಾರೆಡ್ಡಿ ದೀಪಾವಳಿ ಪ್ರಯುಕ್ತ ಶುಭಾಷಯಗಳನ್ನು ಕೋರಲು ಪ್ರೆಕ್ಸ್‌ಗಳು ಹಾಕಿಸಿದ್ದು, ಕಾಂಗ್ರೆಸ್ ಈ ವಿರುದ್ದ ಕಿಡಿಕಾರಿದೆ.

ಈ ಹಿನ್ನಲೆಯಲ್ಲಿ ಟ್ವೀಟ್‌ ಮಾಡಿರುವ ರಾಜ್ಯ ಕಾಂಗ್ರೆಸ್‌ ಘಟಕ, ʼಬಿಬಿಎಂಪಿ ವ್ಯಾಪ್ತಿಯಲ್ಲಿ ಫ್ಲೆಕ್ಸ್, ಬ್ಯಾನರ್‌ಗಳಿಗೆ ನಿಷೇಧವಿದ್ದರೂ ಬೆಂಗಳೂರಿನಾದ್ಯಂತ 5000ಕ್ಕೂ ಹೆಚ್ಚು ಬಿಜೆಪಿ ಪಕ್ಷದ ಅನಧಿಕೃತ ಬ್ಯಾನರ್‌ಗಳನ್ನು ಹಾಕಲಾಗಿದೆ. ಬಿಬಿಎಂಪಿ, ಬೆಂಗಳೂರು ನಗರ ಪೊಲೀಸರು, ಇವರ ವಿರುದ್ಧ ಪ್ರಕರಣ ದಾಖಲಿಸಲಿಲ್ಲವೇಕೆ? ಬ್ಯಾನರ್‌ಗಳನ್ನು ತೆರವು ಮಾಡಲಿಲ್ಲ ಏಕೆ? ಕಾನೂನು ಬಿಜೆಪಿಗೇ ಬೇರೆ, ಇತರರಿಗೆ ಬೇರೆ ಇದೆಯೇ? ಎಂದು ಪ್ರಶ್ನೆ ಮಾಡಿ ಆಕ್ರೋಶ ವ್ಯಕ್ತ ಪಡಿಸಿದೆ.

ಕಾನೂನು ರಾಜಕೀಯ ದ್ವೇಷಕ್ಕೆ ಬಳಸಿಕೊಳ್ಳಲು ಮಾತ್ರ ಇರುವುದೇ? ಕಾಂಗ್ರೆಸ್ ಬ್ಯಾನರ್‌ಗಳಿಗೆ ತಾವು ತೋರುವ ವೀರಾವೇಶ ನಿಮ್ಮ ಪಕ್ಷದವರ ಬ್ಯಾನರ್‌ಗಳಿಗೆ ತೋರುತ್ತಿಲ್ಲವೇಕೆ? ಬೆಂಗಳೂರನ್ನು ಹಾಗೂ ಕಾನೂನನ್ನು ಬಿಜೆಪಿ ಪಕ್ಷ ಗುತ್ತಿಗೆ ಪಡೆದಿದೆಯೇ? ಎಂದು ಸಿಎಂ ಬೊಮ್ಮಾಯಿಯವರಿಗೆ ಪ್ರಶ್ನೆ ಮಾಡಿ ಕಿಡಿಕಾರಿದೆ.

ಬಿಬಿಎಂಪಿಯವರೇ, ಕ್ರಮ ಕೈಗೊಂಡು ತಮ್ಮ ನಿಷ್ಪಕ್ಷಪಾತವನ್ನು ನಿರೂಪಿಸಿ ಎಂದು ಕಾಂಗ್ರೆಸ್‌  ಬಿಬಿಎಂಪಿಗೆ ಸವಾಲೆಸಗಿದೆ.

ಬೆಂಗಳೂರಿನ ನೆರೆ ಸಮಸ್ಯೆಗೆ ಸಲಹೆ ನೀಡಿದ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದ ರಾಜಧಾನಿಯಲ್ಲಿ ಮಳೆ ಬಂದಾಗ ಮನೆಗಳಿಗೆ ನೀರು ನುಗ್ಗುವುದು ರಸ್ತೆಗಳು ಜಾಲಾವೃತವಾಗುವುದುನ್ನು ತಪ್ಪಿಸಬೇಕಾದರೆ ರಾಜಕಾಲುವೆಗಳನ್ನು ತೆರೆವುಗೊಳಿಸಬೇಕು ಮತ್ತು ಚಿಕ್ಕದಾಗಿರುವ ರಾಜಕಾಲುವೆಗಳನ್ನು ವಿಸ್ತಾರಗೊಳಿಸಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿಧಾನಸಭೆ ಅಧಿವೇಶನದಲ್ಲಿ ತಿಳಿಸಿದರು.

ಈ ಕುರಿತು ಮಾತನಾಡಿದ ಅವರು, ನಾನು ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿದ್ದಾಗ ಬೆಂಗಳೂರು ನಗರದಲ್ಲಿರುವ ರಾಜಕಾಲುವೆಗಳ ಸಮೀಕ್ಷೆ ಮಾಡಿಸಿದ್ದೆ, ಆಗ 1953 ರಾಜಕಾಲುವೆಗಳು ಒತ್ತುವರಿಯಾಗಿದ್ದವು. ಅಧಿಕಾರ ಮುಗಿಯುವುದರೊಳಗೆ 1300 ಒತ್ತುವರೆಗಳನ್ನು ತೆರೆವುಗೊಳಿಸಿದ್ದೆ ಇನ್ನು 653 ಒತ್ತುವರೆಗಳು ಹಾಗೆ ಉಳಿದಿದ್ದಾವೆ. ಅವುಗಳನ್ನೇಲ್ಲ ತೆರವುಗೊಳಿಸಿದ್ದರೆ ಬೆಂಗಳೂರಿನಲ್ಲಿ ಇಷ್ಟು ಪ್ರಮಾಣದ ಹಾನಿ ಆಗುತ್ತಿರಲಿಲ್ಲ ಎಂದರು.

ಒಂದು ಕೆರೆಯಿಂದ ಇನ್ನೊಂದು ಕೆರೆಗೆ ಸಂಪರ್ಕವಿಲ್ಲ ಮತ್ತು ಅವುಗಳು ಹೂಳು ತುಂಬಿಕೊಂಡಿವೆ. ಇದರಿಂದಾಗಿ ಕೆರೆಗಳು ಬೇಗ ತುಂಬಿಕೊಳ್ಳುತ್ತವೆ, ಹಾಗಾಗಿ  ನೀರು ಅಪಾರ ಪ್ರಮಾಣದಲ್ಲಿ  ಗ್ರಾಮಗಳಿಗೆ, ರಸ್ತೆಗಳಿಗೆ ನುಗ್ಗಿ ಜನರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಸರ್ಕಾರ ಆದಷ್ಟು ಬೇಗ ಉಳಿದಿರುವ ರಾಜಕಾಲುವೆಗಳನ್ನು ತೆರವುಗೊಳಿಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಸಲಹೆ ನೀಡಿದರು.