bharath jodo yathre – Peepal Media

ಭಾರತ ಐಕ್ಯತಾ ಯಾತ್ರೆಯಲ್ಲಿ ಕೆಸಿ ವೇಣುಗೋಪಾಲ್‌ಗೆ ಗಾಯ
ಇಂದೋರ್‌( ಮಧ್ಯಪ್ರದೇಶ): ಮಧ್ಯಪ್ರದೇಶದಲ್ಲಿ ನಡೆಯುತ್ತಿರುವ ಭಾರತ್‌ ಐಕ್ಯತಾ ಯಾತ್ರೆಯಲ್ಲಿ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್‌ ಅವರು ಕೆಳಗೆ ಬಿದ್ದು ಗಾಯಗೊಂಡಿದ್ದಾರೆ.

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆಯುತ್ತಿರುವ ಐದನೇ ದಿನದ ಭಾರತ ಐಕ್ಯತಾ ಯಾತ್ರೆಯಲ್ಲಿ ಭಾನುವಾರದಂದು ವೇಣುಗೋಪಾಲ್‌ ಅವರು ಪೆಟ್ಟು ಮಾಡಿಕೊಂಡಿದ್ದಾರೆ. ರಾಹುಲ್‌ ಗಾಂಧಿಯವರನ್ನು ಭೇಟಿ ಮಾಡಲು, ಯಾತ್ರೆಯಲ್ಲಿ ಹೆಜ್ಜೆ ಹಾಕಲು ಬಂದ ಜನರ ಗುಂಪನ್ನು ನಿಯಂತ್ರಣ ಮಾಡುವುದರಲ್ಲಿ ಅಲ್ಲಿನ ಪೊಲೀಸರು ವಿಫಲಗೊಂಡಿದ್ದು, ಈ ಸಂದರ್ಭದಲ್ಲಿ ಕಾಲ್ತುಳಿತಕ್ಕೆ ಸಿಲುಕಿದ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೊಪಾಲ್‌ ಅವರಿಗೆ ಕೈ ಮತ್ತು ಮೊಣಕಾಲಿಗೆ ಗಾಯಗಳಾಗಿದ್ದು, ಯಾತ್ರೆಯ ನಡವೆಯೇ ಪ್ರಥಮ ಚಿಕಿತ್ಸೆ ನೀಡಲಾಗಿದೆ.

ರಾಹುಲ್‌ ಗಾಂಧಿಯನ್ನು ನೋಡಲು ಬಂದ ಜನಜಂಗುಳಿಯನ್ನು ನಿಯಂತ್ರಣ ಮಾಡುವುದರಲ್ಲಿ ಪೊಲೀಸರು ವಿಫಲರಾಗಿರುವ ಕಾರಣ ಈ ಘಟನೆ ನಡೆದಿದ್ದು, ಚಿಕಿತ್ಸೆಯ ನಂತರ ಸ್ವಲ್ಪ ಸಮಯದ ಕಾಲ ವಿಶ್ರಾಂತಿ ಪಡೆದು, ನಿಧಾನವಾಗಿ ಹೆಜ್ಜೆ ಹಾಕಿ ಯಾತ್ರೆಯಲ್ಲಿ ಮುಂದುವರೆದಿದ್ದಾರೆ.

ಭಾರತ್ ಜೋಡೋ ಯಾತ್ರೆ ವೇಳೆ ಎಡವಿ ಬಿದ್ದ ದಿಗ್ವಿಜಯ್ ಸಿಂಗ್ : ಕೆಟ್ಟ ರಸ್ತೆಗಳೇ ಇದಕ್ಕೆ ಕಾರಣ ಎಂದ ಕಾಂಗ್ರೆಸ್
ಮಣಿಹಾರ್ (ಮಧ್ಯಪ್ರದೇಶ): ಮಧ್ಯಪ್ರದೇಶದ ಖರ್ಗೋನ್ ಜಿಲ್ಲೆಯ ಬರ್ವಾಹಾ ಬಳಿ ಶನಿವಾರ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸುತ್ತಿದ್ದಾಗ ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಆಯತಪ್ಪಿ ಬಿದ್ದಿದ್ದಾರೆ. ಈ ಘಟನೆಯು ರಾಜ್ಯದ ರಸ್ತೆಗಳ ಸ್ಥಿತಿಯ ಬಗ್ಗೆ ವಿರೋಧ ಪಕ್ಷ ಮತ್ತು ಆಡಳಿತಾರೂಢ ಭಾರತೀಯ ಜನತಾ ಪಕ್ಷದ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ.

ಮೆರವಣಿಗೆಯ ನಡುವೆ ಚಹಾ ವಿರಾಮದ ಸಮಯದಲ್ಲಿ ರಸ್ತೆ ಬದಿಯ ರೆಸ್ಟೋರೆಂಟ್ ಕಡೆಗೆ ಚಲಿಸುವಾಗ ದಿಗ್ವಿಜಯ್ ಸಿಂಗ್ ಬಿದ್ದು ಗಾಯಗೊಂಡಿದ್ದಾರೆ.

ಈ ಕುರಿತು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಮಾಧ್ಯಮ ಉಸ್ತುವಾರಿ ಜೈರಾಮ್ ರಮೇಶ್ ಸುದ್ದಿಗಾರರೊಂದಿಗೆ ಮಾತನಾಡಿದ್ದು, ‘ದಿಗ್ವಿಜಯ್ ಸಿಂಗ್ ಅವರು ಭಾರತ್ ಜೋಡೋ ಯಾತ್ರೆಯಲ್ಲಿ ಈವರೆಗೆ ನಾಲ್ಕು ಬಾರಿ ನೆಲಕ್ಕೆ ಬಿದ್ದಿದ್ದಾರೆ. ಆದಾಗ್ಯೂ, ಮಧ್ಯಪ್ರದೇಶದಲ್ಲಿ ಅವರು ಮೊದಲ ಬಾರಿಗೆ ಕುಸಿದಿದು ಬಿದ್ದಿದ್ದು, ರಾಜ್ಯವು ಕೆಟ್ಟ ರಸ್ತೆಗಳನ್ನು ಹೊಂದಿರುವುದು ಇದಕ್ಕೆ ಕಾರಣʼ ಎಂದು ವ್ಯಂಗಿಸಿದ್ದಾರೆ.

ಆಡಳಿತಾರೂಢ ಬಿಜೆಪಿಯನ್ನು ಅಣಕಿಸಿದ ರಮೇಶ್‌ರವರು, ಮಧ್ಯಪ್ರದೇಶದ ರಸ್ತೆಗಳು ಅಮೆರಿಕದ ವಾಷಿಂಗ್ಟನ್ ಡಿಸಿಗಿಂತ ಉತ್ತಮವಾಗಿವೆ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಹಳೆಯ ಹೇಳಿಕೆಯನ್ನು ಉಲ್ಲೇಖಿಸಿ ಟೀಕಿಸಿದ್ದಾರೆ.

ʼಮಧ್ಯಪ್ರದೇಶದ ರಸ್ತೆಗಳು ಕಿಲ್ಲರ್ ರಸ್ತೆಗಳಾಗಿವೆ ಮತ್ತು ವಾಷಿಂಗ್ಟನ್ ಡಿಸಿಗಿಂತ ಉತ್ತಮವಾಗಿಲ್ಲ. ಕೆಟ್ಟ ರಸ್ತೆಗಳಿಂದಾಗಿ ರಾಜ್ಯದಲ್ಲಿ ಮೂರು ಬಾರಿ ಬೀಳುವುದರಿಂದ ನನ್ನನ್ನು ನಾನು ರಕ್ಷಿಸಿಕೊಂಡಿದ್ದೇನೆʼ ಎಂದು ರಮೇಶ್ ಹೇಳಿದ್ದಾರೆ.

ಬಿಜೆಪಿ ನಾಯಕ ನರೇಂದ್ರ ಸಲೂಜಾ ಅವರು ಘಟನೆಯ ವೀಡಿಯೊವನ್ನು ಟ್ವೀಟ್ ಮಾಡಿ, ರಾಜ್ಯಸಭಾ ಸಂಸದರು ರಸ್ತೆ ಸ್ಥಿತಿಗಿಂತ ಹೆಚ್ಚಾಗಿ ಕಾಂಗ್ರೆಸ್ ಕಾರ್ಯಕರ್ತರನ್ನು ತಳ್ಳುವ ಕಾರಣದಿಂದಾಗಿ ಬಿದ್ದಿದ್ದಾರೆ ಎಂದು ಹೇಳಿದ್ದಾರೆ.

अरे ये कैसा अनुशासन…?

यात्रा में धक्का मुक्की से वरिष्ठ नेता गिर रहे है…

चलो हटो यहाँ से… pic.twitter.com/mazFezGR1Q
— Narendra Saluja (@NarendraSaluja) November 26, 2022

ಮೋರ್ಬಿ ಸೇತುವೆ ದುರಂತಕ್ಕೆ ಬಿಜೆಪಿ ನೇರ ಹೊಣೆ : ರಾಜಕೋಟ್ ನಲ್ಲಿ ರಾಹುಲ್ ಗಾಂಧಿ
ಚುನಾವಣಾ ಹೊಸ್ತಿಲಲ್ಲಿ ಇರುವ ಗುಜರಾತ್ ನಲ್ಲಿ ರಾಜಕೀಯ ಕಾವು ರಂಗೇರಿದೆ. ಭಾರತ್ ಜೋಡೋ ಯಾತ್ರೆಗೆ 2 ದಿನಗಳ ಬ್ರೇಕ್ ಕೊಟ್ಟಿರುವ ರಾಹುಲ್ ಗಾಂಧಿ (Rahul Gandhi) ರಾಜಕೋಟ್ ನಲ್ಲಿ ಗುಜರಾತ್ ಮೋರ್ಬಿ ಸೇತುವೆ (Morbi Bridge) ದುರಂತವನ್ನು ಪ್ರಸ್ತಾಪಿಸಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಗುಜರಾತ್ ನಲ್ಲಿ ಮೋರ್ಬಿ ಸೇತುವೆ ದುರಂತ ನಡೆದು 150 ಜನರ ದುರ್ಮರಣವಾಗಿದೆ. ಅಂತಹ ದುರ್ಘಟನೆ ನಡೆದು ಇಷ್ಟು ದಿನವಾದರೂ ಪ್ರಮುಖ ಆರೋಪಿಗಳ ಬಂಧನವಾಗಿಲ್ಲ. ಪ್ರಕರಣದ ತನಿಖೆ ಯಾವ ಹಂತದಲ್ಲಿದೆ ಎಂಬುದೂ ಇನ್ನೂ ನಿಗೂಢ. ಇದು ಬಿಜೆಪಿ ಸರ್ಕಾರದ ಆಡಳಿತ ವೈಖರಿ ಎಂದು ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಮುಂದುವರಿದು ‘ಇದು ಖಂಡಿತಾ ರಾಜಕೀಯ ವಿಚಾರವಲ್ಲ. ನೊಂದವರಿಗೆ ನ್ಯಾಯ ಕೊಡಬೇಕಾದದು ಸರ್ಕಾರದ ಕರ್ತವ್ಯ. ಆದರೆ ಸೇತುವೆ ದುರಂತಕ್ಕೆ ಕಾರಣ ಆದವರ ಮೇಲೆ ಇಲ್ಲಿಯವರೆಗೂ ವಿಚಾರಣೆಗೆ ಕರೆದಿಲ್ಲ, FIR ಕೂಡಾ ದಾಖಲಾಗಿಲ್ಲ. ಯಾವುದೇ ಮಹತ್ವದ ಕ್ರಮ ಕೂಡಾ ಜರುಗಿಸಿಲ್ಲ. ಹೀಗಿದ್ದ ಮೇಲೆ ಬಿಜೆಪಿ ಪಕ್ಷದ ಮೇಲೆ ಯಾವ ಭರವಸೆ ಉಳಿಸಿಕೊಳ್ಳಬೇಕು’ ಎಂದು ಜನತೆಗೇ ಪ್ರಶ್ನೆ ಮುಂದಿಟ್ಟಿದ್ದಾರೆ.

“ಮೋರ್ಬಿ ಸೇತುವೆ ದುರಂತದ ಪ್ರಮುಖ ಆರೋಪಿಗಳು ಬಿಜೆಪಿ ಪಕ್ಷದ ಜೊತೆಗೆ ನಿಕಟ ಸಂಪರ್ಕ ಹೊಂದಿದ್ದಾರೆ. ಹಾಗಾಗಿ ಅವರಿಗೆ ಸರ್ಕಾರದ ಅಡಿಯಲ್ಲೇ ಭದ್ರತೆ ಸಿಗುತ್ತಿದೆ. ಈ ಸಂಬಂಧ ಇಬ್ಬರು ಕಾವಲುಗಾರರನ್ನು ಬಂಧಿಸಿ ತಮ್ಮ ಪರಾಕ್ರಮ ತೋರಿಸಿದ್ದಾರೆ. ಹಳೆಯದಾದ ಸೇತುವೆ ರಿಪೇರಿಗೆ 2 ಕೋಟಿ ಹಣ ಬಿಡುಗಡೆಯಾಗಿದ್ದರೂ ಕಳಪೆ ಕಾಮಗಾರಿ ನಡೆಸಿ 150 ಜನರ ದುರಂತ ಸಾವಿಗೆ ಕಾರಣರಾಗಿದ್ದಾರೆ. 150 ಜನರ ಸಾವಿಗೆ ಬಿಜೆಪಿ ಪಕ್ಷ ಕೂಡಾ ನೇರ ಹೊಣೆ ಹೊರಬೇಕಾಗುತ್ತದೆ.” ಎಂದು ನೇರ ವಾಗ್ದಾಳಿ ನಡೆಸಿದ್ದಾರೆ.

ಭಾರತ್ ಜೋಡೋ ಯಾತ್ರೆಯಲ್ಲಿ ತಮ್ಮನ್ನು ತಾವು ಸಂಪೂರ್ಣವಾಗಿ ತೊಡಗಿಸಿಕೊಂಡಿರುವ ರಾಹುಲ್ ಗಾಂಧಿಯವರು ಅಮೋಘ 75 ನೇ ದಿನವನ್ನು ಪೂರೈಸಿ ನವೆಂಬರ್ 21 ಮತ್ತು 22 ಕ್ಕೆ ಗುಜರಾತ್ ರಾಜ್ಯದ ಚುನಾವಣೆಯ ಕಡೆಗೆ ಮುಖ ಮಾಡಿದ್ದಾರೆ. ಸಧ್ಯ ಗುಜರಾತ್ ನ ರಾಜಕೋಟ್ ನಲ್ಲಿ ಚುನಾವಣಾ ರ಼್ಯಾಲಿಯಲ್ಲಿ ಭಾಗವಹಿಸಿ ಆಡಳಿತರೂಢ ಬಿಜೆಪಿ ಮೇಲೆ ವಾಗ್ದಾಳಿ ನಡೆಸಿದ್ದಾರೆ.

ಗುಜರಾತ್ ನಲ್ಲಿ ಚುನಾವಣೆ ಅಬ್ಬರ ಮುಂದುವರಿದಿದೆ. ಒಂದು ಕಡೆ ಆಡಳಿತಾರೂಢ ಬಿಜೆಪಿ ಅದೇ ನರೇಂದ್ರ ಮೋದಿಯವರನ್ನು ಚುನಾವಣಾ ಪ್ರಚಾರದ ಅಸ್ತ್ರವನ್ನಾಗಿ ಬಳಸಿದರೆ ಇತ್ತ ಕಾಂಗ್ರೆಸ್ ಆಡಳಿತ ಪಕ್ಷದ ಲೋಪಗಳನ್ನು ಎತ್ತಿ ಹಿಡಿದು ಜನರ ಮುಂದೆ ಹೋಗುತ್ತಿದೆ. ತಾನೇನು ಕಡಿಮೆ ಎಂಬಂತೆ ಆಪ್ ಕೂಡಾ ದೆಹಲಿಯ ಅಭಿವೃದ್ಧಿ ಮಾದರಿಯನ್ನು ರಾಜ್ಯದ ಮುಂದಿಟ್ಟು ಎರಡು ಬಲಿಷ್ಠ ರಾಷ್ಟ್ರೀಯ ಪಕ್ಷಗಳಿಗೆ ಸೆಡ್ಡು ಹೊಡೆಯಲು ಸಿದ್ದವಾಗಿದೆ.

ಇನ್ನು ಭಾರತ್ ಜೋಡೋ ಯಾತ್ರೆ ಗುಜರಾತ್ ರಾಜ್ಯದಲ್ಲಿ ಹಾದು ಹೋಗದ ಬಗ್ಗೆ ರಾಹುಲ್ ಗಾಂಧಿ ಬೇಸರ ವ್ಯಕ್ತಪಡಿಸಿದ್ದಾರೆ. ಗುಜರಾತ್ ಚುನಾವಣೆ ಹಿನ್ನೆಲೆಯಲ್ಲಿ ಯಾತ್ರೆ ಇಲ್ಲಿಂದಲೇ ಹಾದು ಹೋಗಿದ್ದರೆ ಇನ್ನಷ್ಟು ಪರಿಣಾಮಕಾರಿ ಸಂದೇಶ ಕೊಡಬಹುದಿತ್ತು ಎಂದು ರಾಹುಲ್ ಗಾಂಧಿಯವರು ಹೇಳಿದ್ದಾರೆ.

ಕಾಪಿರೈಟ್‌ ವಿವಾದ: ಕಾಂಗ್ರೆಸ್ ಪಕ್ಷ ಮತ್ತು ಭಾರತ್ ಜೋಡೋ ಯಾತ್ರೆಯ ಖಾತೆಗಳನ್ನು ನಿರ್ಬಂಧಿಸುವಂತೆ ಟ್ವಿಟರ್‌ಗೆ ಕೋರ್ಟ್‌ ಸೂಚನೆ
ಹಾಡೊಂದರ ಸಂಗೀತದ ಕುರಿತಂತೆ ಕಾಪಿರೈಟ್‌ ಆಡಿಯೋ ಸಂಸ್ಥೆಯೊಂದು ದಾಖಲಿಸಿದ್ದ ದೂರಿನ ಅನ್ವಯ ಕಾಂಗ್ರೆಸ್ ಪಕ್ಷದ ಮುಖ್ಯ ಖಾತೆ ಮತ್ತು ಅದರ ಬೃಹತ್ ಜನಾಂದೋಲನ ಅಭಿಯಾನ ಭಾರತ್ ಜೋಡೋ ಯಾತ್ರೆಯನ್ನು ತಾತ್ಕಾಲಿಕವಾಗಿ ನಿರ್ಬಂಧಿಸುವಂತೆ ಬೆಂಗಳೂರಿನ ನ್ಯಾಯಾಲಯ ಸೋಮವಾರ ಸಾಮಾಜಿಕ ಮಾಧ್ಯಮ ವೇದಿಕೆ ಟ್ವಿಟರ್‌ಗೆ ಆದೇಶಿಸಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ಎರಡೂ ಖಾತೆಗಳು ಕೆಜಿಎಫ್ – ಭಾಗ 2 ಚಿತ್ರದ ಸಂಗೀತದ ತುಣುಕುಗಳನ್ನು ಅಕ್ರಮವಾಗಿ ಬಳಸಿಕೊಂಡಿವೆ ಎಂದು ಆರೋಪಿಸಿ ಎಂಆರ್‌ಟಿ ಮ್ಯೂಸಿಕ್ ಸಲ್ಲಿಸಿದ ದಾವೆಗೆ ಸಂಬಂಧಿಸಿದಂತೆ ಹೆಚ್ಚುವರಿ ಸಿಟಿ ಸಿವಿಲ್ ನ್ಯಾಯಾಧೀಶೆ ಲತಾಕುಮಾರಿ ಎಂ ಈ ಆದೇಶವನ್ನು ನೀಡಿದರು.

ಸಾಮಾಜಿಕ ಮಾಧ್ಯಮ ವೇದಿಕೆಯಿಂದ ಮೂರು ಲಿಂಕ್‌ಗಳನ್ನು ತೆಗೆದುಹಾಕಲು ಮತ್ತು ವಿಚಾರಣೆಯ ಮುಂದಿನ ದಿನಾಂಕದವರೆಗೆ @INCIndia ಮತ್ತು @BharatJodo ಎಂಬ ಎರಡು ಹ್ಯಾಂಡಲ್‌ಗಳನ್ನು ನಿರ್ಬಂಧಿಸಲು ನ್ಯಾಯಾಧೀಶರು ಟ್ವಿಟರ್‌ಗೆ ಸೂಚನೆ ನೀಡಿದರು.

“ಮೇಲ್ನೋಟಕ್ಕೆ ಹಕ್ಕುಸ್ವಾಮ್ಯದ ಉಲ್ಲಂಘನೆ ಎದ್ದು ಕಾಣುತ್ತದೆಯದ್ದರಿಂದ, ಫಿರ್ಯಾದುದಾರರಿಗೆ ಹೆಚ್ಚಿನ ಹಾನಿಯನ್ನು ತಪ್ಪಿಸುವ ಸಲುವಾಗಿ ಇದನ್ನು ಮಾಡಲೇಬೇಕಿದೆ. ಇಲ್ಲವಾದರೆ ನಾವು ಪೈರಸಿಯನ್ನು ಬೆಂಬಲಿಸಿದಂತಾಗುತ್ತದೆ,” ಎಂದೂ ನ್ಯಾಯಧೀಶರು ಹೇಳಿದ್ದಾರೆ.

ನವೆಂಬರ್‌ ಏಳರಂದು ತಮ್ಮ ಹಕ್ಕು ಸ್ವಾಮ್ಯದಲ್ಲಿರುವ ಸಂಗೀತದ ತುಣುಕನ್ನು ಕಾಂಗ್ರೆಸ್‌ನ ಭಾರತ್‌ ಜೋಡೋ ಯಾತ್ರೆಯಲ್ಲಿ ಅನುಮತಿಯಿಲ್ಲದೆ ಬಳಸಲಾಗಿದೆ ಎಂದು ಎಂಆರ್‌ಟಿ ಮ್ಯೂಸಿಕ್ ಪ್ರಕರಣ ದಾಖಲಿಸಿತ್ತು. ಆ ಕುರಿತಾದ ಪೀಪಲ್‌ ಮೀಡಿಯಾ ವರದಿಯನ್ನು ನೀವು ಇಲ್ಲಿ ಓದಬಹುದು

ಭಾರತ ಜೋಡೋದಲ್ಲಿ ಅಸುನೀಗಿದ ಕಾಂಗ್ರೆಸ್‌ ಕಾರ್ಯಕರ್ತನ ಕುಟುಂಬಕ್ಕೆ ರೂ.10ಲಕ್ಷದ ಚೆಕ್‌ ನೀಡಿ ಸಾಂತ್ವನ ಹೇಳಿದ ಡಿಕಿಶಿ
ಸಾಗರ: ಇಲ್ಲಿಗೆ ಸಮೀಪದ ಹುತ್ತದಿಂಬ ಗ್ರಾಮದಲ್ಲಿನ ರಮೇಶ್ ಅವರ ನಿವಾಸಕ್ಕೆ ಶುಕ್ರವಾರ ತೆರಳಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಕಾಂಗ್ರೆಸ್‌ ಕಾರ್ಯಕರ್ತನ ಭಾವಚಿತ್ರಕ್ಕೆ ನಮನ ಸಲ್ಲಿಸಿ, ಅವರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

‘ಭಾರತ ಜೋಡೋ ಯಾತ್ರೆಯಲ್ಲಿ ಭಾಗವಹಿಸಿದ್ದಾಗ ಅಪಘಾತದಲ್ಲಿ ಮೃತಪಟ್ಟ ರಮೇಶ್ ಅವರ ಸಾವು ಸಾಮಾನ್ಯವಲ್ಲ. ಅದು ದೇಶಕ್ಕಾಗಿ ಆದ ಪ್ರಾಣತ್ಯಾಗ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬಣ್ಣಿಸಿದರು.

ʼಬಹಳ ದುಃಖದ ವಿಚಾರವಾಗಿ ನಾವೆಲ್ಲ ಇಂದು ಇಲ್ಲಿ ಸೇರಿದ್ದೇವೆ. ಮನುಷ್ಯನ ಹುಟ್ಟು ಆಕಸ್ಮಿಕ, ಸಾವು ಅನಿವಾರ್ಯ. ಜನನ ಉಚಿತ, ಮರಣ ಖಚಿತ. ಈ ಹುಟ್ಟು ಸಾವಿನ ನಡುವೆ ನಾವು ಏನು ಸಾಧಿಸುತ್ತೇವೆ ಎಂಬುದು ಮುಖ್ಯವಾಗುತ್ತದೆ. ಈ ಪಂಚಾಯ್ತಿ ವ್ಯಾಪ್ತಿಯ ಬೂತ್ ನ ಅಧ್ಯಕ್ಷರಾಗಿ ರಮೇಶ್ ಅವರು ಪಕ್ಷದ ಸಂಘಟನೆ ಹಾಗೂ ಸಾರ್ವಜನಿಕ ಸೇವೆ ಮಾಡಿ ದ್ದಾರೆʼ ಎಂದು ಮೆಚ್ಚುಗೆ ಸೂಚಿಸಿದರು.

ಈ ದೇಶವನ್ನು ಒಗ್ಗೂಡಿಸಲು ರಾಹುಲ್ ಗಾಂಧಿ ಅವರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ಮಾಡುತ್ತಿರುವ ಪಾದಯಾತ್ರೆಯಲ್ಲಿ ಭಾಗವಹಿಸಿ ಸಮಾಜದಲ್ಲಿ ಸಾಮರಸ್ಯ ಸ್ಥಾಪನೆ ಪರ ಹಾಗೂ ನಿರುದ್ಯೋಗ, ಬೆಲೆ ಏರಿಕೆ, ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತಲು ರಮೇಶ್ ಅವರು ಮುಂದಾಗಿದ್ದ ಸಂದರ್ಭದಲ್ಲಿ ಈ ದುರಂತ ನಡೆದಿದೆ. ಆ ಮೂಲಕ ರಮೇಶ್ಅವರು ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ್ದಾರೆ. ಇದು ಬರೀ ಸಾವಲ್ಲ, ದೇಶಕ್ಕಾಗಿ ಮಾಡಿದ ಪ್ರಾಣತ್ಯಾಗ. ದೇಶಕ್ಕಾಗಿ ಮಾಡಿರುವ ಸೇವೆ. ಹೀಗಾಗಿ ಅವರಿಗೆ ನಮನ ಸಲ್ಲಿಸಿ ಅವರ ಕುಟುಂಬಕ್ಕೆ ಧೈರ್ಯ ತುಂಬಲು ಪಕ್ಷದ ನಾಯಕರು, ಕಾರ್ಯಕರ್ತರೊಡನೆ ಇಂದು ಇಲ್ಲಿಗೆ ಆಗಮಸಿದ್ದೇವೆ. ನಾವು ಕೂಡ ರಮೇಶ್ ಅವರ ಕುಟುಂಬದವರೇ. ಅವರ ಜತೆ ನಾವಿದ್ದೇವೆ.

ಮಹಾತ್ಮ ಗಾಂಧಿ ಅವರು ಒಂದು ಮಾತು ಹೇಳಿದ್ದಾರೆ. ನೀನು ನಿನ್ನನ್ನು ನಿಯಂತ್ರಿಸಿಕೊಳ್ಳಬೇಕಾದರೆ ನಿನ್ನ ಮೆದುಳನ್ನು ಬಳಸು, ಬೇರೆಯವರನ್ನು ನಿಯಂತ್ರಿಸಬೇಕಾದರೆ ನಿನ್ನ ಹೃದಯವನ್ನು ಬಳಸು ಎಂದು. ಅದೇ ರೀತಿ ರಾಹುಲ್ ಗಾಂಧಿ ಅವರು ದೇಶದುದ್ದಗಲಕ್ಕೂ ಜನರ ಹೃದಯ ಗೆಲ್ಲಲು ಮುಂದಾಗಿದ್ದಾರೆ. ನಿಮ್ಮ ಸಹಕಾರ ಸದಾ ಹೀಗೇ ಇರಲಿ ಎಂದು ವಿನಂತಿಸಿದರು.

ಭಾರತ್ ಜೋಡೋ ಯಾತ್ರೆ ಬಗ್ಗೆ ಬಿಜೆಪಿಯ ಟೀಕೆ ಕುರಿತು ಕೇಳಿದ ಪ್ರಶ್ನೆಗೆ, ‘ಅಸೂಯೆಗೆ ಮದ್ದಿಲ್ಲ. ಅವರು ಇಂತಹ ಸಾಹಸಕ್ಕೆ ಎಂದಾದರೂ ಮುಂದಾಗಿದ್ದಾರಾ? ದೇಶಕ್ಕಾಗಿ ಪ್ರಾಣ ಬಿಟ್ಟಿದ್ದಾರಾ? ಸ್ವಾತಂತ್ರ್ಯ, ಸಂವಿಧಾನ ತಂದಿದ್ದಾರಾ? ಬಡವರಿಗೆ ಜಮೀನು, ಸೈಟು ಕೊಟ್ಟಿದ್ದಾರಾ? ನಾವು ಕೊಟ್ಟಿರುವ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅವರು ಅಧಿಕಾರಕ್ಕೆ ಬಂದಿದ್ದಾರೆ. ಟೀಕೆ ಮಾಡುವ ಅಧಿಕಾರ ಸಿಕ್ಕಿದೆ. ಅವರು ಟೀಕೆ ಮಾಡುತ್ತಿರಲಿ, ನಾವು ಬಡವರ ಪರವಾಗಿ ಕೆಲಸ ಮಾಡುತ್ತಿರುತ್ತೇವೆ’ ಎಂದು ತಿರುಗೇಟು ನೀಡಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್‌ ಧುರೀಣ, ಮಾಜಿ ಸ್ಪೀಕರ್‌ ಕಾಗೋಡು ತಿಮ್ಮಪ್ಪ ಹಾಗೂ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಉಪಸ್ಥಿತರಿದ್ದರು.

ರಾಹುಲ್ ಗಾಂಧಿ ನಡಿಗೆ ಜನಸಾಮಾನ್ಯರ ಕಡೆಗೆ: ಡಿ.ಕೆ. ಶಿವಕುಮಾರ್
ಬೆಂಗಳೂರು: ದೇಶಾದ್ಯಂತ ಜನಸಾಮಾನ್ಯರ ಬಳಿಗೆ ಹೋಗಿ ಅವರ ನೋವನ್ನು ಖುದ್ದಾಗಿ ಆಲಿಸಿರುವ ಏಕೈಕ ನಾಯಕ ರಾಹುಲ್ ಗಾಂಧಿ’ ಹಾಗಾಗಿ ಅವರ ನಡಿಗೆ ಜನಸಾಮಾನ್ಯರ ಕಡೆಗೆ ಆಗಿತ್ತು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬಣ್ಣಿಸಿದ್ದಾರೆ.

ರಾಜ್ಯದಲ್ಲಿ ಭಾರತ ಐಕ್ಯತಾ ಯಾತ್ರೆ ಯಶಸ್ವಿ ನಂತರ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಶಿವಕುಮಾರ್ ಅವರು, ರಾಜ್ಯದ ಜನತೆಯ ಸಹಕಾರದಿಂದ ಕರ್ನಾಟಕದಲ್ಲಿ ಭಾರತ ಐಕ್ಯತಾ ಯಾತ್ರೆ ಯಶಸ್ವಿಯಾಗಿ ನಡೆದಿದೆ. ಇದಕ್ಕೆ ನಿಮ್ಮ ಕ್ಯಾಮೆರಾ ಕಣ್ಣುಗಳೇ ಸಾಕ್ಷಿ ಎಂದರು.

ರಾಷ್ಟ್ರ ರಾಜಕಾರಣವನ್ನು ಬೇರೆ ದಿಕ್ಕಿನೆಡೆ ತೆಗೆದುಕೊಂಡು ಹೋಗುವ ಆಂದೋಲನವಾಗಿ ಈ ಯಾತ್ರೆ ಸಾಗಿದೆ. ಇದು ಕೇವಲ ಯಾತ್ರೆಯಾಗಿ ಉಳಿದಿಲ್ಲ. ಇದರಲ್ಲಿ ನೀವು ನಾವು ಕಂಡಿದ್ದು, ಯುವಕರು, ಮಹಿಳೆಯರು, ಪುಟಾಣಿ ಮಕ್ಕಳ ಪ್ರೀತಿ ವಿಶ್ವಾಸ. ಇಂದಿರಾ ಗಾಂಧಿ ಅವರನ್ನು ನೋಡಲು ಜನ ಹೇಗೆ ನೂಕುನುಗ್ಗಲು ಮಾಡಿಕೊಂಡು ಬರುತ್ತಿದ್ದರೋ ಅದೇ ರೀತಿ ರಾಹುಲ್ ಗಾಂಧಿ ಅವರನ್ನು ನೋಡಲು ನೂರಾರು ಕಿ.ಮೀ ದೂರದಿಂದ ಮಕ್ಕಳು ತಮ್ಮ ತಂದೆ ತಾಯಂದಿರ ಜತೆ ಆಗಮಿಸುತ್ತಿದ್ದರು.

ಈ ವೇಳೆ ರಾಹುಲ್ ಗಾಂಧಿ ಅವರು ಸಾವಿರಾರು ಜನರ ಜತೆ ಮಾತನಾಡಿ, ನೀವು ಏನು ಮಾಡುತ್ತಿದ್ದೀರಿ, ಏನು ಓದುತ್ತಿದ್ದೀರಿ, ಮುಂದೆ ಏನು ಮಾಡುತ್ತೀರಿ ಎಂದು ಕೇಳಿ ಅವರ ಅಭಿಪ್ರಾಯ ಪಡೆದರು ಎಂದು ತಿಳಿಸಿದರ.

ಬೆಳಗ್ಗೆ 5.30ಕ್ಕೆ ಎದ್ದು, 6.25ರ ವೇಳೆಗೆ ಪಾದಯಾತ್ರೆ ಆರಂಭಿಸುತ್ತಿದ್ದರು. ನಿಗದಿತ ನಡಿಗೆ ವೇಳಾಪಟ್ಟಿಯಲ್ಲಿ ಸ್ವಲ್ಪವೂ ಬದಲಾವಣೆ ಮಾಡಲಿಲ್ಲ. ನಾನು ತಡವಾಗಿ ಯಾತ್ರೆ ಆರಂಭಿಸೋಣ ಎಂದು ಮನವಿ ಮಾಡಿದಾಗ ಅದಕ್ಕೆ ಒಪ್ಪಲಿಲ್ಲ. ಇದು ನಮ್ಮಿಬ್ಬರ ನಡಿಗೆ ಮಾತ್ರವಲ್ಲ. 3500 ಕಿ.ಮೀ ದೂರ ಸಾಗಬೇಕು. ಹೀಗಾಗಿ ಯಾವುದೇ ಬದಲಾವಣೆ ಸಾಧ್ಯವಿಲ್ಲ ಎಂದರು. ಸಂಜೆ 4 ರಿಂದ ಮತ್ತೆ ಹೆಜ್ಜೆ ಹಾಕಿ ಎಲ್ಲಾ ಜನರ ಜತೆ ಮಾತನಾಡುತ್ತಿದ್ದರು ಎಂದು ರಾಹುಲ್‌ ಗಾಂಧಿ ಅವರ ಸಮಯ, ಶಿಸ್ತನ್ನು ಕುರಿತು ಹೊಗಳಿದರು.

ಚಾಮರಾಜನಗರದಲ್ಲಿ ಆದಿವಾಸಿಗಳು, ಆಕ್ಸಿಜನ್ ದುರಂತದಲ್ಲಿ ಮಡಿದವರ ಕುಟುಂಬದವರು, ರಾಯಚೂರಿನಲ್ಲಿ ದೇವದಾಸಿಗಳು ಸೇರಿದಂತೆ ನರೇಗಾ ಕಾರ್ಮಿಕರು, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಐಟಿ ಉದ್ಯೋಗಿಗಳು, ನಿರುದ್ಯೋಗಿ ಯುವಕರು, ರೈತರು, ನಿವೃತ್ತ ಸೈನಿಕರು, ವ್ಯಾಪಾರಸ್ಥರು, ಎಲ್ಲ ವರ್ಗದವರ ಜತೆ ಸಂವಾದ ನಡೆಸಿದರು. ವಿಕಲಚೇತನ ಅತಿಥಿ ಶಿಕ್ಷಕಿ, ಮೆಕಾನಿಕ್ ಅವರ ಜತೆಗೆ ಚರ್ಚೆ ಸಂದರ್ಭದಲ್ಲಿ ಅವರು ಬಹಳ ಸ್ಪೂರ್ತಿದಾಯಕ ಅನುಭವ ಪಡೆದರು.  ರಾಹುಲ್ ಗಾಂಧಿ ಅವರ ದೈಹಿಕ ಕ್ಷಮತೆ ಒಂದೆಡೆಯಾದರೆ ಅವರ ಮಾನಸಿಕ ಕ್ಷಮತೆ ಬಹಳ ಬಲಿಷ್ಟವಾಗಿದೆ. ಅವರು ದೇಶ ಹಾಗೂ ಪಕ್ಷಕ್ಕಾಗಿ ಪ್ರಧಾನಮಂತ್ರಿ ಹುದ್ದೆ ಹಾಗೂ ಪಕ್ಷದ ಅಧ್ಯಕ್ಷ ಸ್ಥಾನ ತ್ಯಾಗ ಮಾಡಿದವರು ಎಂದು ಹೇಳಿದರು.

ಯಾತ್ರೆ ಸಂದರ್ಭದಲ್ಲಿ ಮಾಧ್ಯಮ ಮಿತ್ರರೊಬ್ಬರು ರಾಹುಲ್ ಗಾಂಧಿ ಅವರಿಗೆ ಅಧಿಕಾರ ವ್ಯಾಮೋಹ ಇಲ್ಲದ ನೀವು ಈ ಯಾತ್ರೆ ಮಾಡುತ್ತಿರುವುದೇಕೆ ಎಂದು ಕೇಳಿದಾಗ, ನೆಹರೂ ಅವರಿಂದ ಹಿಡಿದು ನಮ್ಮ ಕುಟುಂಬದ ಎಲ್ಲರಿಗೂ ಈ ದೇಶದ ಜನ ತೋರಿರುವ ಪ್ರೀತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಈ ಋಣ ತೀರಿಸಲು ಸಾಧ್ಯವಿಲ್ಲ. ನಮಗೆ ಅಧಿಕಾರ ಬರುತ್ತದೆ, ಹೋಗುತ್ತದೆ. ನಾನು ಈ ಹಿಂದೆಯೇ ಅಧಿಕಾರ ಅನುಭವಿಸಬಹುದಾಗಿತ್ತು. ಆದರೆ ಅವರ ಪ್ರೀತಿಯ ಋಣ ತೀರಿಸಲು ಅಸಾಧ್ಯ. ಹೀಗಾಗಿ ಅವರ ನೋವು, ಕಷ್ಟ ಆಲಿಸುತ್ತಿದ್ದೇನೆ. ನಮ್ಮ ಕೈಲಾದ ನೆರವು ನೀಡುತ್ತೇವೆ ಎಂದು ಉತ್ತರಿಸಿದರು.

ನಾವು ಮೊದಲ ದಿನ ಗುಂಡ್ಲುಪೇಟೆಯಿಂದ ಈ ಯಾತ್ರೆ ಆರಂಭಿಸಿದೆವು. ನಂತರ ಬದನವಾಳು ಗ್ರಾಮದಲ್ಲಿ ಸವರ್ಣೀಯರು ಹಾಗೂ ದಲಿತರ ಮಧ್ಯೆ ದಶಕಗಳಿಂದ ಇದ್ದ ವೈಮನಸ್ಸಿಗೆ ಅಂತ್ಯವಾಡಿ, ಅವರ ಮಧ್ಯೆ ನಾಶವಾಗಿದ್ದ ಸಾಮರಸ್ಯವನ್ನು ಮತ್ತೆ ಬೆಸೆದು, ಅಲ್ಲಿ ರಸ್ತೆ ನಿರ್ಮಾಣ ಮಾಡಿದ್ದೇವೆ. ಅದು ಸಣ್ಣ ರಸ್ತೆ. ಅದಕ್ಕೆ ಭಾರತ ಜೋಡೋ ರಸ್ತೆ ಎಂದು ಹೆಸರಿಟ್ಟು, ಎರಡೂ ಸಮಾಜದವರ ಜತೆ ಒಟ್ಟಿಗೆ ಕೂತು ಊಟ ಮಾಡಿ ಅವರಲ್ಲಿ ಮತ್ತೆ ಬಾಂಧವ್ಯ ಬೆಸೆಯಲಾಗಿದೆ. ಈ ಯಾತ್ರೆ ಯಶಸ್ಸಿಗೆ ಇದಕ್ಕಿಂತ ಬೇರೆ ಯಾವ ಸಾಕ್ಷಿ ಬೇಕು? ಎಂದರು.

ನಾನು ಬೇರೆ ಪಕ್ಷದ ಟೀಕೆ ಬಗ್ಗೆ ಚರ್ಚೆ ಮಾಡುವುದಿಲ್ಲ. ಈ ಐಕ್ಯತಾ ಯಾತ್ರೆ ಎಲ್ಲರ ಬದುಕಿನ ಭಾಗವಾಗಿದೆ. ಬಳ್ಳಾರಿಯಲ್ಲಿ ರಾಹುಲ್ ಗಾಂಧಿ ಅವರ ಗಮನ ಸೆಳೆದದ್ದು ಎಂದರೆ, ಬಳ್ಳಾರಿಯಲ್ಲಿ ಜೀನ್ಸ್ ತಯಾರಿಕಾ ಉದ್ದಿಮೆಗಳ ಜತೆಗಿನ ಸಂವಾದ. ಕಡಿಮೆ ಬೆಲೆಗೆ ಅತ್ಯುತ್ತಮ ಜೀನ್ಸ್ ಪ್ಯಾಂಟ್ ತಯಾರು ಮಾಡುತ್ತಿದ್ದಾರೆ. ಅದಕ್ಕೆ ಭಾರತದ ಜೀನ್ಸ್ ರಾಜಧಾನಿ ಬಳ್ಳಾರಿ ಎಂದರು. ಇಂತಹ ಸಂಪನ್ಮೂಲದ ಉದ್ದಿಮೆಯನ್ನು ಸರಿಯಾಗಿ ಬಳಸಿಕೊಳ್ಳಬೇಕು ಎಂದು ಹೇಳಿದರು.

ರಾಹುಲ್ ಗಾಂಧಿ ಅವರು ಕೇವಲ ರಾಷ್ಟ್ರೀಯ ಸಮಸ್ಯೆ ಮಾತ್ರವಲ್ಲ, ರೈತರ ವಿಚಾರ ಕೂಡ ತಿಳಿದುಕೊಂಡರು. ನಿರುದ್ಯೋಗಿ ಯುವಕರ ಸಮಸ್ಯೆಯನ್ನು ಪ್ರತ್ಯೇಕವಾಗಿ ಆಲಿಸಿರು. ಹೀಗಾಗಿ ರಾಜ್ಯದಲ್ಲಿನ ಸಮಸ್ಯೆ ಬಗ್ಗೆಯೂ ಹೆಚ್ಚು ಗಮನ ಹರಿಸಿದರು. ರಾಜ್ಯದಲ್ಲಿ ದಕ್ಷ ಆಡಳಿತ ನೀಡಬೇಕು, ಭ್ರಷ್ಟ ಸರ್ಕಾ ಕಿತ್ತೊಗೆಯಬೇಕು, ಯುವಕರಿಗೆ ಆಗುತ್ತಿರುವ ಮೋಸ ತಡೆಯಬೇಕು ಎಂದು ರಾಹುಲ್‌ರವರು ಚಿಂತನೆ ನಡೆಸಿದ್ದಾರೆ. ಸ್ಥಳೀಯ ಭಾಷೆ, ಕೇಂದ್ರದ ಪರೀಕ್ಷೆಗಳಲ್ಲಿ ಕನ್ನಡಕ್ಕೆ ಆದ್ಯತೆ, ಕನ್ನಡದ ಸ್ವಾಭಿಮಾನಕ್ಕೆ ಧಕ್ಕೆ ಆಗಬಾರದು ಎಂಬ ಸ್ಪಷ್ಟ ಸಂದೇಶ ನೀಡಿದರು ಎಂದರು.

ಅವರು ಈ ಯಾತ್ರೆಯಲ್ಲಿ ಎಲ್ಲಾ ಜಾತಿ, ಧರ್ಮಗಳ ಮಂದಿರಕ್ಕೆ ಭೇಟಿ ನೀಡಿ ನಮನ ಸಲ್ಲಿಸಿದರು. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ದಸರಾ ಸಮಯದಲ್ಲಿ ರಾಜ್ಯಕ್ಕೆ ಆಗಮಿಸಿ, ನಮ್ಮ ಸಂಸ್ಕಾರ ಹಾಗೂ ಸಂಪ್ರದಾಯದಂತೆ ಹಬ್ಬ ಆಚರಣೆ ಮಾಡಿ, ಅರ್ಧ ದಿನ ಯಾತ್ರೆಯಲ್ಲಿ ಕೂಡ ಹೆಜ್ಜೆ ಹಾಕಿದರು.

ರಾಹುಲ್ ಗಾಂಧಿ ಅವರು ಸೋನಿಯಾ ಗಾಂಧಿ ಅವರ ಶೂ ಲೇಸ್ ಹಾಕಿದ್ದಕ್ಕೆ ಬಿಜೆಪಿ ತನ್ನ ಸಾಮಾಜಿಕ ಜಾಲತಾಣವೆಂಬ ಸುಳ್ಳಿನ ಕಾರ್ಖಾನೆ ಮೂಲಕ ಟೀಕೆ ಮಾಡಿದ್ದರು. ಆದರೆ, ತಾಯಿ ಮಗನ ಬಾಂಧವ್ಯ, ಜನರ ಪ್ರೀತಿ, ಅವರ ಅಕ್ಕರೆ ನಿಮ್ಮ ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿದೆ. ಇದೆಲ್ಲವನ್ನೂ ಜನ ಕಣ್ಣಾರೆ ನೋಡಿದ್ದಾರೆ.  ನಮ್ಮ ರಾಜ್ಯದಲ್ಲಿ ಈ ಯಾತ್ರೆಯನ್ನು ಇಲ್ಲಿಗೆ ನಿಲ್ಲಿಸದೆ, ಎಲ್ಲಾ ಜಿಲ್ಲೆಗಳಲ್ಲಿ ಯಾತ್ರೆಯ ಛಾಯಾಚಿತ್ರ ಪ್ರದರ್ಶನ ಮಾಡಲಾಗುವುದು. ಧ್ರುವನಾರಾಯಣ್ ಅವರ ಅಧ್ಯಕ್ಷತೆಯಲ್ಲಿ ಬಿ.ಎಲ್ ಶಂಕರ್, ವಿ.ಆರ್ ಸುದರ್ಶನ್, ಪ್ರೊ.ರಾಧಾಕೃಷ್ಣ, ಸಿ.ಎಸ್ ದ್ವಾರಕನಾಥ್, ಐಶ್ವರ್ಯ ಮಹಾದೇವ್, ಗುರುಪಾದಸ್ವಾಮಿ, ಸೆಂಥಿಲ್, ಮನ್ಸೂರ್ ಅಲಿ ಖಾನ್ ಹಾಗೂ ದಿನೇಶ್ ಗೂಳಿಗೌಡ ಅವರನ್ನೊಳಗೊಂಡ ಸಮಿತಿ ಮಾಡಿ, ಈ ಯಾತ್ರೆ ಬಗ್ಗೆ ಅಧ್ಯಯನ ಮಾಡಿ, ರಾಜ್ಯದಲ್ಲಿ ಈ ಯಾತ್ರೆ ಮುಂದುವರಿಸಲು ನಮ್ಮ ನಾಯಕರ ಜತೆ ಚರ್ಚೆ ಮಾಡುತ್ತೇನೆ ಎಂದು ಡಿ.ಕೆ.ಶಿ ಹೇಳಿದರು.

ರಾಹುಲ್ ಗಾಂಧಿ ಅವರು ರಾಯಚೂರಿನಲ್ಲಿ ಸಭೆ ಮಾಡಿ ಯಾತ್ರೆ ಕುರಿತು ನಮ್ಮ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಈ ಹಿನ್ನಲೆಯಲ್ಲಿ, ಈ ಯಾತ್ರೆಯನ್ನು ಮುಂದಿನ ದಿನಗಳಲ್ಲಿ ಹೇಗೆ ತೆಗೆದುಕೊಂಡು ಹೋಗಬೇಕು ಎಂದು ಕಾರ್ಯಯೋಜನೆ ರೂಪಿಸುತ್ತೇವೆ. ಈ ಯಾತ್ರೆಯಲ್ಲಿ ಜನ ಹೇಳಿಕೊಂಡಿರುವ ಸಮಸ್ಯೆ ಬಗ್ಗೆ ನಾವು ಚರ್ಚಿಸಿ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಸೇರಿಸುತ್ತೆವೆ ಎಂದು ಹೇಳಿದರು.

ಈ ಯಾತ್ರೆ ಯಶಸ್ಸು ಕೇವಲ ಡಿ.ಕೆ. ಶಿವಕುಮಾರ್ ಅವರದಲ್ಲ. ನನ್ನ ಅಧಿಕಾರ ಸ್ವೀಕಾರ ಕಾರ್ಯಕ್ರಮ, ಕೋವಿಡ್ ಸಮಯದಲ್ಲಿ ಪಕ್ಷದ ನೆರವಿನ ಕಾರ್ಯಕ್ರಮಗಳು , ಮೇಕೆದಾಟು ಪಾದಯಾತ್ರೆ ಸೇರಿ ಒಂದೊಂದು ಹೋರಾಟವೂ ಒಂದೊಂದು ಮೈಲಿಗಲ್ಲು ಸಾಧಿಸಿದೆ. ಮೇಕೆದಾಟು ಪಾದಯಾತ್ರೆ ಒಂದು ಟ್ರೆಂಡ್ ಸೆಟ್ಟರ್ ಆಗಿದೆ. ಸ್ವಾತಂತ್ರ್ಯ ನಡಿಗೆ ಕೂಡ ಯಶಸ್ವಿಯಾಗಿತ್ತು. ಈ ಎಲ್ಲಾ ಅನುಭವಗಳಿಂದ ಈ ಯಾತ್ರೆ ಮಾಡಲು ಅನುಕೂಲವಾಯಿತು. ನಮ್ಮ ರಾಜ್ಯದಲ್ಲಿನ ಯಾತ್ರೆ ಬೇರೆ ರಾಜ್ಯಗಳಿಗೆ ಮಾದರಿ ಆಗಿದೆ. ಬೇರೆ ರಾಜ್ಯದವರು ಈ ಯಾತ್ರೆ ಆಯೋಜನೆ ಬಗ್ಗೆ ಪ್ರಶಂಸೆ ಮಾಡಿದ್ದಾರೆ ಎಂದು ತಿಳಿಸಿದರು.

ನಾನು ಈ ಸಂದರ್ಭದಲ್ಲಿ ಯಾತ್ರೆಗೆ ಬಂದ ಎಲ್ಲಾ ಕಾರ್ಯಕರ್ತರು, ನಾಯಕರು, ಪಕ್ಷಾತೀತವಾಗಿ ಬಂದ ನಾಗರೀಕ ಸಮಾಜದವರು, ರೈತರು, ಯುವಕರು, ಮಹಿಳೆಯರು, ಕಾರ್ಮಿಕರು ಎಲ್ಲಾ ವರ್ಗದವರಿಗೆ ನಮನ ಸಲ್ಲಿಸಿದರು.

ಈ ಯಾತ್ರೆ ಒಂದು ಆಂದೋಲನವಾಗಿತ್ತು. ಇದು ಜನ ಸಂಪರ್ಕ ಯಾತ್ರೆ ಮಾತ್ರವಲ್ಲ, ದೇಶಕ್ಕೆ ಒಂದು ಹೋರಾಟ ಆಗಿತ್ತು. ಈ ಯಾತ್ರೆ ಇಡೀ ದೇಶ ಕೋಮು ಸಾಮರಸ್ಯ ಬೆಸೆಯುವತ್ತ ಗಮನಹರಿಸುವಂತೆ ಮಾಡಿದೆ ಎಂದರು.

ಬೆಲೆ ಏರಿಕೆ, ರೈತರ ಸಮಸ್ಯೆ, ಭ್ರಷ್ಟಾಚಾರ, ನಿರುದ್ಯೋಗ, ಕೋಮು ದ್ವೇಷದ ವಿರುದ್ದದ ಈ ನಡಿಗೆ ಹಳ್ಳಿ, ಹಳ್ಳಿಯಲ್ಲೂ ಜನರ ಮನ ಮುಟ್ಟಿದೆ. ಈ ಬಗ್ಗೆ ರಾಹುಲ್ ಗಾಂಧಿ ಅವರು ಯಾತ್ರೆಯಲ್ಲಿ ಪ್ರಸ್ತಾಪ ಮಾಡಿದರೆ ಜನ ಜೋರಾಗಿ ಧ್ವನಿ ಎತ್ತುತ್ತಿದ್ದರು ಎಂದರು.

ವಿಶೇಷವಾಗಿ ಮಕ್ಕಳು ಯಾತ್ರೆಗೆ ಬಂದು ಭಾಗವಹಿಸಿದ್ದು ಅವಿಸ್ಮರಣೀಯ ಕ್ಷಣವಾಗಿತ್ತು.

ಈ ಯಾತ್ರೆಯಲ್ಲಿ ರಾಹುಲ್ ಗಾಂಧಿಯವರು ತಲೆಮಾರುಗಳ ನಡುವಣ ಅಂತರವನ್ನು ಭರ್ತಿ ಮಾಡಿದ್ದಾರೆ. ಮಕ್ಕಳಿಂದ ವೃದ್ಧರವರೆಗೆ, ರೈತರಿಂದ ಕಾರ್ಮಿಕರವರೆಗೆ, ವಿದ್ಯಾರ್ಥಿಗಳಿಂದ ಯುವಕರವರೆಗೆ ಎಲ್ಲರನ್ನೂ ಮುಟ್ಟಿದ್ದು ರಾಹುಲ್ ಗಾಂಧಿ. ಅವರ ಹೊರತಾಗಿ ಬೇರೆಯವರಿಂದ ಇದು ಅಸಾಧ್ಯ. ಇದೊಂದು ಕ್ರಾಂತಿಕಾರಿ ಯಾತ್ರೆ. ಈ ಯಾತ್ರೆಯಲ್ಲಿ ಜನರಿಂದ ಸಿಕ್ಕ ಪ್ರೀತಿ ಅನುಭವ ವರ್ಣಿಸಲು ಅಸಾಧ್ಯ ಎಂದು ಹೇಳಿದರು.

ಈ ಯಾತ್ರೆಯಲ್ಲಿ ನೋವು ತಂದ ವಿಚಾರ ಎಂದರೆ ನಮ್ಮ ಕಾರ್ಯಕರ್ತರೊಬ್ಬರು ಅಪಘಾತದಲ್ಲಿ ಮೃತಪಟ್ಟಿದ್ದು, ಪೊಲೀಸ್ ಹೆಣ್ಣು ಮಗಳು ನಿಧನರಾಗಿದ್ದು. ನಾನು ಇದೇ 28ರಂದು ಶಿವಮೊಗ್ಗಕ್ಕೆ ಭೇಟಿ ಕೊಟ್ಟು ಕಾರ್ಯಕರ್ತನ ಕುಟುಂಬಕ್ಕೆ ಘೋಷಣೆ ಮಾಡಿರುವಂತೆ 10 ಲಕ್ಷ ರು.ಪರಿಹಾರ ನೀಡಲಾಗುವುದು ಎಂದು ತಿಳಿಸಿದರು.

ಯಾತ್ರೆ ಅಂತಿಮ ದಿನ ರಾಯಚೂರಿನಲ್ಲಿ 1 ಲಕ್ಷಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದು, ನನ್ನ ಕಾಲದಲ್ಲಿ ಇಂತಹ ಐತಿಹಾಸಿಕ ಘಟ್ಟ ದಾಖಲಿಸುವ ಅವಕಾಶ ಸಿಕ್ಕಿತಲ್ಲ ಎಂಬ ತೃಪ್ತಿ, ಸಂತೋಷ ನನಗಿದೆ. ದೇಶದುದ್ದಗಲ ಜನಸಾಮಾನ್ಯರ ನೋವನ್ನು ತಾನೇ ಖುದ್ದಾಗಿ ಬಂದು ಆಲಿಸಿದ ಏಕೈಕ ನಾಯಕ ಎಂದರೆ ರಾಹುಲ್ ಗಾಂಧಿ ಮಾತ್ರ ಎಂದರು.

ಇದು ಸೋನಿಯಾ ಗಾಂಧಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಡೆಯ ಯಾತ್ರೆ ಆಗಿತ್ತು. ಅದೇ ರೀತಿ ಪಕ್ಷದ ಆಂತರಿಕ ಚುನಾವಣೆಯಲ್ಲಿ ನಮ್ಮ ರಾಜ್ಯದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರು ಅಧ್ಯಕ್ಷರಾಗಿ ಆಯ್ಕೆ ಆದರು. ಇದು ದೇಶಕ್ಕೆ ಮಾತ್ರವಲ್ಲ ರಾಜ್ಯಕ್ಕೆ ಹೆಚ್ಚಿನ ಶಕ್ತಿ ಬಂದಿದೆ ಎಂದರು.

ಭಾರತ್ ಜೋಡೋ ಯಾತ್ರೆಗೆ ನಿಮ್ಮ ನಾಯಕರು ಸರಿಯಾದ ಸಹಕಾರ ನೀಡಿಲ್ಲ ಎಂಬ ವರದಿಗಳು ಇವೆಯಲ್ಲ ಎಂಬ ಪ್ರಶ್ನೆಗೆ ಉತ್ತರಿಸದ ಡಿ.ಕೆ.ಶಿಯವರು ‘ಎಲ್ಲರೂ ಸಹಕಾರ ಕೊಟ್ಟ ಕಾರಣದಿಂದ ಈ ಯಾತ್ರೆ ಆಗಿದೆ. ಎಲ್ಲರೂ ತಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಕೊಡುಗೆ ನೀಡಿದ್ದಾರೆ. ಒಬ್ಬರು 10 ಗಾಡಿ ಜನ ತಂದರೆ, ಮತ್ತೊಬ್ಬರು 300 ಗಾಡಿ ಜನ ಕರೆತಂದಿದ್ದರು. ಕೆಲವರು 10 ಕಿ.ಮೀ ನಡೆದರೆ ಮತ್ತೊಬ್ಬರು 500 ಕಿ.ಮೀ ನಡೆದಿದ್ದಾರೆ. ಎಲ್ಲರ ಕೆಲಸದ ಬಗ್ಗೆ ವರದಿ ತರಿಸಿಕೊಳ್ಳುತ್ತೇನೆ. ಯಾರು ಯಾವ ಕೆಲಸ ಮಾಡಿದ್ದಾರೆ ಎಂಬ ಮಾಹಿತಿ ಇದೆ. ಪ್ರತಿ ಶಾಸಕ, ಮಾಜಿ ಶಾಸಕ ಹಾಗೂ ಪರಿಷತ್ ಸದಸ್ಯರು ಜನರನ್ನು ಕರೆತರುವಂತೆ ಮಾಡಿದ್ದೇವೆ. ನಾನು ಅಧ್ಯಕ್ಷನಾಗಿದ್ದ ಕಾರಣ ನನ್ನ ಮೇಲೆ ಹೆಚ್ಚು ಜವಾಬ್ದಾರಿ ಇತ್ತು’ ಎಂದರು.

ಯಾತ್ರೆ ಕುರಿತು ಛಾಯಾಚಿತ್ರ ಪ್ರದರ್ಶನ ಯಾವಾಗ ಮಾಡುತ್ತೀರಾ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ ಇದಕ್ಕಾಗಿ ಒಂದು ಸಮಿತಿ ರಚಿಸಿ, ಯಾವ ಯಾವ ಘಟನೆಗಳು ಮುಖ್ಯ ಎಂದು ಆಯ್ಕೆ ಮಾಡಿ, ನಂತರ ಎಲ್ಲಾ ಜಿಲ್ಲೆಗಳಲ್ಲಿ ಛಾಯಾಚಿತ್ರ ಪ್ರದರ್ಶನ ಮಾಡಲಾಗುವುದು’ ಎಂದು ತಿಳಿಸಿದರು.

ಖರ್ಗೆ ಅವರು ಅಧ್ಯಕ್ಷರಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಎಐಸಿಸಿ ಮಹಾಧಿವೇಶನ ಮಾಡುತ್ತೀರಾ ಎಂದು ಕೇಳಿದಾಗ, ‘ ಖರ್ಗೆ ಅವರು ನಾಳೆ ಅಧಿಕಾರ ಸ್ವೀಕಾರ ಮಾಡಲಿ. ನಂತರ ನಾವು ಚರ್ಚೆ ಮಾಡಿ ನಿಮಗೆ ಮಾಹಿತಿ ನೀಡುತ್ತೇವೆ ‘ ಎಂದರು.

ಕರ್ನಾಟಕವನ್ನು ಬಿಜೆಪಿಯ ದ್ವೇಷ ಪ್ರಯೋಗಾಲಯ ಮಾಡಲು ಕಾಂಗ್ರೆಸ್‌ ಬಿಡುವುದಿಲ್ಲ : ರಾಹುಲ್‌ ಗಾಂಧಿ
ರಾಯಚೂರು : ಚಾಮರಾಜನಗರದ ಬಂಡೀಪುರ ಅರಣ್ಯದ ಹೊರವಲಯದಿಂದ ಹೊರಟ ಭಾರತ ಜೋಡೋ ಯಾತ್ರೆಯು ಸಾಂಸ್ಕೃತಿಕ ರಾಜಧಾನಿ ಮೈಸೂರು ಮೂಲಕ ಸಾಗಿ, ಕಾವೇರಿ, ತುಂಗಭದ್ರಾ, ಕೃಷ್ಣಾ ನದಿಗಳನ್ನು ದಾಟುತ್ತಾ ರಾಯಚೂರಿನ ಹತ್ತಿ ಗದ್ದೆಗಳ ಬಳಿ ಕರ್ನಾಟಕದಲ್ಲಿ ಸುಧೀರ್ಘ 22ನೇ ದಿನದಂದು ತನ್ನ ಪಯಣವನ್ನು ಪೂರ್ಣಗೊಳಿಸಿದ್ದು, ಇಂದು ರಾಯಚೂರು ಜಿಲ್ಲೆಯ ಕಾರ್ಯಕ್ರಮದಲ್ಲಿ ಮಾತನಾಡಿದ ರಾಹುಲ್‌ಗಾಂಧಿಯವರು ಕರ್ನಾಟಕದ ಜನತೆಗೆ ಯಾತ್ರೆಯ ಬಗ್ಗೆ ಸಂದೇಶ ಸಾರಿದ್ದಾರೆ.

ಈ ಕುರಿತು ರಾಯಚೂರು ಜಿಲ್ಲೆಯಲ್ಲಿ ಮಾತನಾಡಿದ ರಾಹುಲ್‌ಗಾಂಧಿಯವರು, ʼಕರ್ನಾಟಕದ ಮಹಾಕವಿ ಕುವೆಂಪು ಅವರು ಈ ಭೂಮಿಯನ್ನು “ಸರ್ವ ಜನಾಂಗದ ಶಾಂತಿಯ ತೋಟ” ಎಂದು ಬಣ್ಣಿಸಿದ್ದರು. ಇದು ಖಂಡಿತ ಶಾಂತಿ ಹಾಗೂ ಸಾಮರಸ್ಯದ ನಾಡು. ಭಾರತ ಜೋಡೋ ಯಾತ್ರೆಯ ಮೂಲಕ ಈ ಮಾತು ಮತ್ತೊಮ್ಮೆ ಸಾಬೀತಾಗಿದೆ. ಕರ್ನಾಟಕದ ಜನರು ಈ ಯಾತ್ರೆಗೆ ತಮ್ಮ ಅಭೂತಪೂರ್ವ ಬೆಂಬಲ ನೀಡಿ ಸ್ಪಂದಿಸಿದ್ದಾರೆ. ಅದಕ್ಕಾಗಿ ನಾವು ನಮ್ಮ ಹೃತ್ಪೂರ್ವಕ ಧನ್ಯವಾದಗಳು ಹಾಗೂ ಕೃತಜ್ಞತೆಗಳನ್ನು ಸಲ್ಲಿಸುತ್ತೇವೆ ಎಂದು ಹೇಳಿದರು.

ಯಾತ್ರೆಯು ಕರ್ನಾಟಕದ ಮೂಲಕ ಸಾಗುವ ವೇಳೆ, ಇಲ್ಲಿನ ಜನರ ಅಪರಿಮಿತ ಸಾಮರ್ಥ್ಯವನ್ನು ದುರ್ಬಲಗೊಳಿಸಲಾಗುತ್ತಿದೆ ಎನ್ನುವುದು ಸ್ಪಷ್ಟವಾಯಿತು. ವಿವಿಧ ಬೆಳೆ ಬೆಳೆಯುವ ಪ್ರತಿಯೊಂದು ಪ್ರದೇಶದ ರೈತರೂ ಹೆಚ್ಚುತ್ತಿರುವ ವೆಚ್ಚಗಳು, ಅನಿಶ್ಚಿತ ಇಳುವರಿ ಹಾಗೂ ಬೆಲೆ ಏರಿಳಿತದಿಂದ ತಮ್ಮ ಕುಟುಂಬಗಳನ್ನ ನಿರ್ವಹಿಸಲು ಕಷ್ಟಪಡುತ್ತಿದ್ದಾರೆ ಎಂದರು.

ʼನಾಡಿನ ಯುವಕರು ಎಷ್ಟೇ ಪ್ರಯತ್ನಿಸಿದರೂ, ತಮ್ಮ ಆಕಾಂಕ್ಷೆಗಳನ್ನು ಪೂರೈಸುವ ಉದ್ಯೋಗಾವಕಾಶಗಳನ್ನು ಕಂಡುಕೊಳ್ಳಲು ಸಾಧ್ಯವಾಗುತ್ತಿಲ್ಲ. ಸಣ್ಣ ಉದ್ಯಮಿಗಳು ಅಸಮರ್ಪಕ ಸಹಕಾರ ಅಥವಾ ಬೆಂಬಲವೇ ಇಲ್ಲದೆ ಉದ್ಯಮವನ್ನು ಮುಚ್ಚುತ್ತಿದ್ದಾರೆ. ಹಾಗೆಯೇ ಮಾರುಕಟ್ಟೆಯನ್ನೂ ಸಹ ಈ ಸರ್ಕಾರ ಕೇವಲ ಕೆಲವೇ ಕೆಲವು ಉದ್ಯಮಿಗಳ ಪರವಾಗಿ ಮಾಡಿದೆ. ಉದ್ಯೋಗ ಖಾತ್ರಿ ಯೋಜನೆಯ ಕಾರ್ಮಿಕರು, ಮಹಿಳಾ ಕಾರ್ಮಿಕರು, ನೇಕಾರರು ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಜನರು ಆದಾಯ ಗಳಿಕೆಯಲ್ಲಿ ಸೋಲುತ್ತಿದ್ದಾರೆ. ಸಮಾಜದ ಶೋಷಿತ, ಹಿಂದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತರು ದ್ವೇಷ ಮತ್ತು ಹಿಂಸೆಯನ್ನು ಎದುರಿಸುತ್ತಿದ್ದಾರೆ. ರಾಜ್ಯದ ಭಾಷೆಗಳನ್ನ, ವೈವಿಧ್ಯಮಯ ಸಂಸ್ಕೃತಿಯನ್ನ ಹಾಗೂ ಇತಿಹಾಸವನ್ನ ತಿರುಚಿ ನಾಶಪಡಿಸಲಾಗುತ್ತಿದೆʼ ಎಂದು ಮಾತನಾಡಿದರು.

‘ಕಳಬೇಡ ಕೊಲಬೇಡ, ಹುಸಿಯ ನುಡಿಯಲು ಬೇಡ, ಮುನಿಯಬೇಡ, ಅನ್ಯರಿಗೆ ಅಸಹ್ಯ ಪಡಬೇಡ’ ಎಂದು ಗುರು ಬಸವಣ್ಣನವರು ಹೇಳಿದ್ದರು. ಕರ್ನಾಟಕದಲ್ಲಿ ಅವರ ಬೋಧನೆಗಳಿಗೆ ತದ್ವಿರುದ್ಧವಾಗಿ ಬಿಜೆಪಿ ನಡೆದುಕೊಳ್ಳುತ್ತಿದೆ. ಇಡೀ ದೇಶಕ್ಕೆ ಬೆಳವಣಿಗೆಯ ದಾರಿದೀಪವಾಗಿದ್ದ ಕರ್ನಾಟಕ ರಾಜ್ಯ ಇಂದು ‘40% ಕಮಿಷನ್’ಸರ್ಕಾರಕ್ಕೆ ಕುಖ್ಯಾತಿಗಳಿಸಿದ್ದು, ಬಿಜೆಪಿಯ “ಸೂಟು-ಬೂಟಿನ ಲೂಟಿ ಸರ್ಕಾರ”ಕ್ಕೆ ತಕ್ಕ ಉದಾಹರಣೆಯಾಗಿದೆ. ಉದ್ಯೋಗಕ್ಕಾಗಿ ಲಂಚ, ಗುತ್ತಿಗೆಗೆ ಲಂಚ, ಜನ ಸಾಮಾನ್ಯರ ಕೆಲಸಕ್ಕೆ ಲಂಚ, ಕರ್ನಾಟಕದಲ್ಲಿ ಬಿಜೆಪಿಗೆ ಮಾರಾಟವಾಗದ ಉಳಿದ ಯಾವುದೇ ಸರ್ಕಾರಿ ಸೇವೆ ಇಲ್ಲ. ಸಾಮಾಜಿಕ ಸೌಹಾರ್ದತೆ ಮತ್ತು ಸಾರ್ವಜನಿಕ ವಲಯದ ಬೆಳೆವಣಿಗೆ ಕುಂಠಿತವಾಗಿದ್ದು, ಅದು ಬಡವರು ಹಾಗೂ ದುರ್ಬಲರನ್ನು ಹೆಚ್ಚು ಭಾದಿಸುತ್ತಿದೆ ಮತ್ತು ಆರ್ಥಿಕ ಪ್ರಗತಿಗೆ ಪಾರ್ಶ್ವವಾಯು ಹಿಡಿಯುವಂತೆ ಮಾಡಿದೆ ಎಂದು ಹೇಳಿದರು.

ಶಾಂತಿಯ ತೋಟವಾದ ಕರ್ನಾಟಕವನ್ನು ಬಿಜೆಪಿಯ ದ್ವೇಷ ಮತ್ತು ದುರಾಡಳಿತದ ಪ್ರಯೋಗಾಲಯವನ್ನಾಗಿ ಮಾಡಲು ಕಾಂಗ್ರೆಸ್ ಪಕ್ಷ ಎಂದಿಗೂ ಬಿಡುವುದಿಲ್ಲ. ನಮ್ಮ ರಾಜ್ಯ ನಾಯಕರು, ಕರ್ನಾಟಕದ ಶ್ರೀಮಂತ ಸಂಸ್ಕೃತಿ ಮತ್ತು ಕೋಟ್ಯಂತರ ಕನ್ನಡಿಗರ ಬೆಂಬಲದಿಂದ, ಅವಿರತ ಪ್ರಯತ್ನಗಳ ಮೂಲಕ ಪ್ರೀತಿ, ಶಾಂತಿ ಹಾಗೂ  ಸೌಹಾರ್ದತೆಯ ಹಾದಿಯಲ್ಲಿ ಈ ಅದ್ಭುತ ರಾಜ್ಯದ ನಿಜವಾದ ಸಾಮರ್ಥ್ಯವನ್ನು ನಾವು ಅನಾವರಣಗೊಳಿಸುವ ದಿನಗಳು ಶೀಘ್ರದಲ್ಲೇ ಬರಲಿವೆ ಎಂದು ಭರವಸೆಯ ಮಾತಗಳನ್ನಾಡಿದರು.

ಕರ್ನಾಟಕ ಯಾತ್ರೆ ಮುಗಿಸಿದ ಭಾರತ ಜೋಡೋ ; ರಾಹುಲ್ ರನ್ನು ಅದ್ಧೂರಿಯಾಗಿ ಬೀಳ್ಕೊಟ್ಟ ಕನ್ನಡಿಗರು
ನಿನ್ನೆ ರಾಯಚೂರಿನಲ್ಲಿ ರಾಹುಲ್ ಗಾಂಧಿ ನೇತೃತ್ವದ ಭಾರತ ಐಕ್ಯತಾ ಯಾತ್ರೆ ಕರ್ನಾಟಕದಲ್ಲಿ ಕೊನೆಗೊಂಡಿತು. ಕರುನಾಡಿನ ನೆಲದಿಂದ ರಾಹುಲ್ ಗಾಂಧಿಯವರನ್ನು ಬೀಳ್ಕೊಡಲು ಲಕ್ಷಗಟ್ಟಲೆ ಜನ ಅಭಿಮಾನಿಗಳು, ಕಾರ್ಯಕರ್ತರು ಬಂದದ್ದು ವಿಶೇಷ.

ರಾಯಚೂರು ನಗರದಲ್ಲಿ ಶನಿವಾರ ನಡೆದ ಪಾದಯಾತ್ರೆ ಅದ್ಧೂರಿಯಾಗಿ ನೆರವೇರಿತು. ಮಂತ್ರಾಲಯ ಮಾರ್ಗದ ಬೃಂದಾವನ ಹೋಟೆಲ್ ನಿಂದ ಪ್ರಾರಂಭವಾದ ಪಾದಯಾತ್ರೆಯ ಜನಸಾಗರ 2 ಕಿಲೋಮೀಟರ್ ವರೆಗೂ ಹಬ್ಬಿತ್ತು. ವಾಲ್ಕಟ್ ಮೈದಾನದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ 70,000 ಆಸನಗಳ ವ್ಯವಸ್ಥೆ ಮಾಡಿದ್ದರೂ ಅಷ್ಟೂ ಆಸನಗಳು ಭರ್ತಿಯಾಗಿ, ಸುತ್ತಲೂ ಸಾವಿರಾರು ಜನರು ಸಭೆಯನ್ನು ವೀಕ್ಷಿಸಿದರು.

ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, “ಕರ್ನಾಟಕದಲ್ಲಿ ನಡೆದ ಅಷ್ಟೂ ದಿನದ ಪಾದಯಾತ್ರೆ ನನಗೆ ಅತೀವ ಸಂತೋಷ ತಂದಿದೆ. ಸಹಕರಿಸಿದ ಕರ್ನಾಟಕದ ಜನತೆಗೆ ಅನಂತ ಧನ್ಯವಾದಗಳು. ನನ್ನ ಕುಟುಂಬಕ್ಕೂ ಕರ್ನಾಟಕಕ್ಕೂ ಅವಿನಾಭಾವ ಸಂಬಂಧವಿದೆ. ನನ್ನ ಅಜ್ಜಿ ಇಂದಿರಾಗಾಂಧಿಯವರನ್ನು ಚಿಕ್ಕಮಗಳೂರಿನಿಂದ, ನನ್ನ ತಾಯಿ ಸೋನಿಯಾಗಾಂಧಿಯವರನ್ನು ಬಳ್ಳಾರಿಯಿಂದ ಗೆಲ್ಲಿಸಿಕೊಟ್ಟದ್ದು ಕರ್ನಾಟಕದ ಜನತೆ. ಇದನ್ನು ಎಂದಿಗೂ ನಾವು ಮರೆಯುವುದಿಲ್ಲ” ಎಂದು ಹೇಳಿ ರಾಜ್ಯದ ಜನತೆಗೆ ದೀಪಾವಳಿ ಶುಭಾಶಯ ಕೋರಿದರು.

“ಕರ್ನಾಟಕದಲ್ಲಿ 500 ಕಿಲೋಮೀಟರ್ ಗೂ ಹೆಚ್ಚು ದೂರ ಹೆಜ್ಜೆ ಹಾಕಿದ್ದು ಒಂದು ಐತಿಹಾಸಿಕ ಪಾದಯಾತ್ರೆಯಾಗಿದೆ. ದಾರಿಯ ಉದ್ದಕ್ಕೂ ಕರ್ನಾಟಕದ ನಾನಾ ರೀತಿಯ ಜನರನ್ನು ನೋಡಿದೆ. ಅವರ ಕಷ್ಟ, ಸುಖಗಳನ್ನು ಆಲಿಸಿದೆ. ಇಲ್ಲಿಯವರೆಗೂ ನನ್ನನ್ನು ತಂದು ಬೀಳ್ಕೊಡಲು ಬಂದ ನಾಡಿನ ಜನತೆಗೆ ನಾನು ಸದಾ ಆಭಾರಿಯಾಗಿದ್ದೇನೆ. ಬಿಸಿಲು, ಚಳಿ, ಮಳೆ, ಬಿರುಗಾಳಿಗೂ ಲೆಕ್ಕಿಸದೆ ನಮ್ಮ ಯಾತ್ರೆ ಮುನ್ನಡೆದಿದೆ. ಎಂತಹ ಶಕ್ತಿಗೂ ನಮ್ಮನ್ನು ತಡೆಯಲಾಗದು. ನಾವು ಕಾಶ್ಮೀರದಲ್ಲೇ ನಮ್ಮ ಯಾತ್ರೆ ಮುಗಿಸಲಿದ್ದೇವೆ” ಎಂದು ರಾಹುಲ್ ಗಾಂಧಿ ಹೇಳಿದಾಗ ನೆರೆದಿದ್ದ ಲಕ್ಷಾಂತರ ಮಂದಿ ಒಮ್ಮೆಲೇ ಉದ್ಗಾರ, ಚಪ್ಪಾಳೆ ಮೂಲಕ ಜಯಘೋಷ ಮೆರೆದದ್ದು ವಿಶೇಷವಾಗಿತ್ತು.

ನಿನ್ನೆಯ ಪಾದಯಾತ್ರೆಯಲ್ಲಿ ರಾಜ್ಯದ ಬಹುತೇಕ ಕಾಂಗ್ರೆಸ್ ನಾಯಕರು ಭಾಗವಹಿಸಿ ಕರ್ನಾಟಕದಿಂದ ಬೀಳ್ಕೊಟ್ಟರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ‌.ಕೆ.ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಕೃಷ್ಣ ಭೈರೇಗೌಡ ಸೇರಿದಂತೆ ನೂರಾರು ಮಂದಿ ರಾಜ್ಯ ನಾಯಕರು ರಾಹುಲ್ ಜೊತೆಗೆ ಹೆಜ್ಜೆ ಹಾಕಿದರು.

ಯಾತ್ರೆಯಲ್ಲಿ ಮಾಜಿ ಸಂಸದೆ ರಮ್ಯಾ ಭಾಗಿ, ಜಾಲತಾಣಗಳಲ್ಲಿ ಫೋಟೋಗಳು ವೈರಲ್
ಕರ್ನಾಟಕದಲ್ಲಿ ನಿನ್ನೆಗೆ ಕೊನೆಗೊಂಡ ಪಾದಯಾತ್ರೆಯಲ್ಲಿ ಮಾಜಿ ಸಂಸದೆ, ಚಿತ್ರನಟಿ ರಮ್ಯಾ ಭಾಗಿಯಾದದ್ದು ಕರ್ನಾಟಕದ ಪಾದಯಾತ್ರೆಯ ಹೈಲೈಟ್ ಗಳಲ್ಲಿ ಒಂದು. ಮಂತ್ರಾಲಯ ರಸ್ತೆಯಲ್ಲಿರುವ ಐಬಿ ಕಾಲೋನಿಯಿಂದ ಸಾರ್ವಜನಿಕ ಸಭೆ ನಡೆಯುವ ಸ್ಥಳವಾದ ವಾಲ್ಕಟ್ ಮೈದಾನದ ವರೆಗೂ ನಟಿ ರಮ್ಯಾ, ರಾಹುಲ್ ಗಾಂಧಿ ಮತ್ತು ಇತರ ಕಾಂಗ್ರೆಸ್ ನಾಯಕರ ಜೊತೆಗೆ ಹೆಜ್ಜೆ ಹಾಕಿದರು. ಶನಿವಾರ ಸಂಜೆಯಿಂದಲೇ ರಮ್ಯಾ ಭಾಗಿಯಾದ ಫೋಟೋಗಳು ಫೇಸ್ಬುಕ್, ಟ್ವಿಟ್ಟರ್, ಇನ್ಸ್ಟಾಗ್ರಾಮ್ ಗಳಲ್ಲಿ ಸಾವಿರಾರು ಸಂಖ್ಯೆಯ ಅಭಿಮಾನಿಗಳು ಹಂಚಿಕೊಂಡು ವೈರಲ್ ಆಗಿದ್ದವು.

ಇಷ್ಟು ದಿನಗಳ ವರೆಗೂ ರಮ್ಯಾ ಪಾದಯಾತ್ರೆಯಲ್ಲಿ ಭಾಗವಹಿಸದ ಬಗ್ಗೆ ಸಣ್ಣಪುಟ್ಟ ಮಾತುಗಳು ಕೇಳಿಬಂದಿತ್ತು. ಆದರೆ ಹಲವು ಅಭಿಮಾನಿಗಳ ನಿರೀಕ್ಷೆಯಂತೆ ರಮ್ಯಾ ಭಾಗಿಯಾದರು. ಜಾಲತಾಣಗಳಲ್ಲಿ ಅಸಂಖ್ಯ ಅಭಿಮಾನಿಗಳು ರಮ್ಯಾ ಭಾಗಿಯ ಬಗ್ಗೆ ಸಂತಸ ವ್ಯಕ್ತಪಡಿಸಿ, ಬಹು ನಿರೀಕ್ಷಿತ ಆಗಮನ ಇದು ಎಂದು ಬರೆದುಕೊಂಡಿದ್ದಾರೆ.

ಬಳ್ಳಾರಿ ಹೋಮ್‌ ಟೈಲರಿಂಗ್‌ ಘಟಕಕ್ಕೆ ಭೇಟಿ ನೀಡಿದ ರಾಹುಲ್‌ ಗಾಂಧಿ
ಬಳ್ಳಾರಿ: ರಾಷ್ಟ್ರೀಯ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರು ಬಳ್ಳಾರಿಯ ಹೋಮ್ ಟೈಲರಿಂಗ್ ಘಟಕಕ್ಕೆ ಭೇಟಿ ನೀಡಿ, ತಯಾರಕರು, ಕಾರ್ಮಿಕರೊಂದಿಗೆ ಮಾತುಕತೆ ನಡೆಸಿದರು.

ಬಳ್ಳಾರಿಯಲ್ಲಿ ಭಾರತ ಐಕ್ಯತಾ ಯಾತ್ರೆ ಸಾಗುತ್ತಿರುವ ಹಿನ್ನೆಲೆಯಲ್ಲಿ, ಜಿಲ್ಲೆಯ ಹೋಮ್ ಟೈಲರಿಂಗ್ ಘಟಕಕ್ಕೆ ಭೇಟಿ ನೀಡಿದ ರಾಹುಲ್‌ ಗಾಂಧಿ ಅವರು, ಸ್ಥಳೀಯ ತಯಾರಕರು ಎದುರಿಸುತ್ತಿರುವ ಸವಾಲುಗಳ ಬಗ್ಗೆ ಮಾಹಿತಿ ಪಡೆದರು.

ಟೈಲರಿಂಗ್‌ ಘಟಕಗಳ ಕಾರ್ಮಿಕರು ಸರ್ಕಾರದ ಯಾವುದೇ ಸಹಾಯವಿಲ್ಲದೆ ಯಂತ್ರಗಳನ್ನು ಬಾಡಿಗೆಗೆ ಪಡೆಯುವುದರಿಂದ ಹೆಚ್ಚುವರಿ ಹೊರೆ ಅನುಭವಿಸುತ್ತಿದ್ದೇವೆ ಎಂದು ಅಳಲು ತೋಡಿಕೊಂಡರು. ಜಿಎಸ್‌ ಟಿ ಯಿಂದಾಗಿ ಹಲವಾರು ಘಟಕಗಳನ್ನು ಮುಚ್ಚಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಜನರನ್ನು ಮರೆತು ಮಲಗಿರುವ ಸರ್ಕಾರವನ್ನು ನಾವು ಬಡಿದೆಬ್ಬಿಸುತ್ತಿದ್ದೇವೆ: ಡಿಕೆಶಿ
ಬಳ್ಳಾರಿಯ ಮೋಕಾದಲ್ಲಿ ಡಿ.ಕೆ. ಶಿವಕುಮಾರ್ ಅವರ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದರು. ಅದರ  ಮುಖ್ಯಾಂಶಗಳು ಇಲ್ಲಿವೆ.

ಕರ್ನಾಟಕ ರಾಜ್ಯದಲ್ಲಿ ಭಾರತ ಐಕ್ಯತಾ ಯಾತ್ರೆಗೆ ಜನ ಮತ್ತು ಮಾಧ್ಯಮಗಳಿಂದ ಉತ್ತಮ ಪ್ರೋತ್ಸಾಹ, ಸಹಕಾರ ಸಿಕ್ಕಿದೆ.

ರಾಜ್ಯದಲ್ಲಿ ಚುನಾವಣೆ ಎದುರಾಗುತ್ತಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ 150 ಸ್ಥಾನ ಗೆಲ್ಲುವುದಾಗಿ ಹೇಳಿದ್ದೇನೆ. ಬಿಜೆಪಿಯವರು ನಾವು ಬೇರೆಡೆಯಿಂದ ಜನ ಕರೆದುಕೊಂಡು ಬಂದಿದ್ದೇವೆ ಎಂದು ಹೇಳುತ್ತಿದ್ದಾರೆ.

ರಾಜಕಾರಣದಲ್ಲಿ ಜನ ಸಂಘಟನೆ ಮಾಡಬೇಕಾದರೆ, ರಾಷ್ಟ್ರಮಟ್ಟದ ಪಾದಯಾತ್ರೆ ಮಾಡುವಾಗ ಎಲ್ಲರಿಗೂ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ.

ಈ ಯಾತ್ರೆಯಲ್ಲಿ ಪಕ್ಷಬೇಧ ಮರೆತು ಸಹಸ್ರಾರು ಜನ ಭಾಗವಹಿಸಿದ್ದಾರೆ. ಅವರು ತೋರಿದ ಪ್ರೀತಿ, ವಿಶ್ವಾಸ ಅಪಾರ. ಶ್ರಮ ಇದ್ದಲಿ ಫಲ ಎಂಬುದರಲ್ಲಿ ನಮಗೆ ನಂಬಿಕೆ ಇದೆ.

ರಾಜಕಾರಣದಲ್ಲಿರುವಾಗ ದೇಶದಲ್ಲಿ ಬದಲಾವಣೆ ತಂದು ಸಾಧನೆ ಮಾಡಬೇಕು. ದೇಶ ಒಡೆಯಲಾಗುತ್ತಿದ್ದು, ದ್ವೇಷ, ಆರ್ಥಿಕ ಸಂಕಷ್ಟ, ನಿರುದ್ಯೋಗ, ದುರಾಡಳಿತ ಹೆಚ್ಚಾಗಿದೆ. ಇದರಿಂದ ಬೇಸತ್ತು ಜನ ಹೆಚ್ಚು ಸಂಖ್ಯೆಯಲ್ಲಿ ಈ ಯಾತ್ರೆಯಲ್ಲಿ ಭಾಗವಹಿಸುತ್ತಿದ್ದಾರೆ.

ನಾವು ಮಕ್ಕಳನ್ನು ಕರೆತಂದಿಲ್ಲ. ಅವರೇ ಓಡೋಡಿ ಬಂದು ಯಾತ್ರೆಯಲ್ಲಿ ಭಾಗವಹಿಸಿದ್ದಾರೆ. ಅವರ ಭಾವನೆಯನ್ನು ನಾವು ತಡೆಯಲು ಸಾಧ್ಯವೇ? ಮಕ್ಕಳು, ರೈತರು, ಮಹಿಳೆಯರು, ಕಾರ್ಮಿಕರು ಸೇರಿ ಎಲ್ಲ ವರ್ಗದ ಜನರ ಜತೆಗಿನ ರಾಹುಲ್ ಗಾಂಧಿ ಅವರ ಮಾತುಕತೆ ಸಂದರ್ಭ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗಿದೆ.

ರಾಹುಲ್ ಗಾಂಧಿ ಅವರು ಕೇವಲ ಒಂದು ಮಗು, ಒಬ್ಬ ಯುವಕ, ಒಬ್ಬ ರೈತ, ಕಾರ್ಮಿಕ, ಮಹಿಳೆ ಜತೆ ಮಾತನಾಡಿದ್ದಲ್ಲ. ಎಲ್ಲ ವರ್ಗದ ಜನ ಸಮೂಹದ ಜತೆ ಮಾತುಕತೆ ನಡೆಸಿದ್ದಾರೆ. ಅವರ ನೋವು, ಕಷ್ಟ, ಭಾವನೆ ಅರಿತು, ಮುಂದೆ ಜನ ಆಶೀರ್ವಾದ ಮಾಡಿದಾಗ ಅವರಿಗೆ ಸರಿಯಾದ ರೀತಿಯಲ್ಲಿ ಪರಿಹಾರ ನೀಡುವ ಚಿಂತನೆ ಅವರದಾಗಿದೆ.

ಇಂದು ಬಳ್ಳಾರಿಯಲ್ಲಿ ಯಾತ್ರೆ ಮುಕ್ತಾಯವಾಗಿದ್ದು, ನಾಳೆ ಎಐಸಿಸಿ ಅಧ್ಯಕ್ಷ ಸ್ಥಾನದ ಚುನಾವಣೆ ಇದೆ. ಸಂಸದ ಡಿ ಕೆ ಸುರೇಶ್, ಉಗ್ರಪ್ಪ, ಶಾಸಕ ನಾಗೇಂದ್ರ ಸೇರಿದಂತೆ ಕೆಲವು ನಾಯಕರನ್ನು ಯಾತ್ರಿಗಳು ಎಂದು ಪರಿಗಣಿಸಿ, ಅವರಿಗೆ ಇಲ್ಲೇ ಮತ ಚಲಾಯಿಸುವ ಅವಕಾಶ ನೀಡಬೇಕು ಎಂದು ಮನವಿ ಮಾಡಲಾಗಿದೆ. ಉಳಿದವರು ಬೆಂಗಳೂರಿನಲ್ಲಿ ಮತ ಚಲಾಯಿಸಲಿದ್ದಾರೆ. ನಮ್ಮ ರಾಜ್ಯದವರೇ ಅಭ್ಯರ್ಥಿಯಾಗಿದ್ದು, ಎಲ್ಲರೂ ಚುನಾವಣೆಯಲ್ಲಿ ಉತ್ಸುಕರಾಗಿ ಭಾಗವಹಿಸಲಿದ್ದಾರೆ. ಗಾಂಧಿ ಕುಟುಂಬ ಈ ಚುನಾವಣೆಯಲ್ಲಿ ಯಾವುದೇ ಹಸ್ತಕ್ಷೇಪ ಮಾಡದೆ ಪಕ್ಷದವರಿಗೆ ಸಂಪೂರ್ಣ ಜವಾಬ್ದಾರಿ ನೀಡಿದ್ದು, ಈ ಚುನಾವಣೆ ಪಾರದರ್ಶಕವಾಗಿ ನಡೆಯುತ್ತಿದೆ.

ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಭಾರತ ಐಕ್ಯತಾ ಯಾತ್ರೆ ಬಗ್ಗೆ ಮಾಡಿರುವ ಟೀಕೆ ಬಗ್ಗೆ ಕೇಳಿದ ಪ್ರಶ್ನೆಗೆ, ‘ ಬಿಜೆಪಿ ಜನ ಸ್ಪಂದನ ಸಮಾವೇಶ ಮಾಡಿತು. ಹಾಗಾದರೆ ಅವರು ಇಷ್ಟು ದಿನ ಜನರಿಗೆ ಸ್ಪಂದಿಸಿರಲಿಲ್ಲವೆ? ಅವರು ಅಧಿಕಾರದಲ್ಲಿದ್ದಾಗ ಜನರ ಮಧ್ಯೆ ಇದ್ದು, ಅವರ ಕಷ್ಟಕ್ಕೆ ಸ್ಪಂದಿಸಲಿಲ್ಲವೆ? ನೀವು ನಿಮ್ಮ ಅಧಿಕಾರ ಅವಧಿಯಲ್ಲಿ ಏನು ಸಾಧನೆ ಮಾಡಿದ್ದೀರಿ ಎಂದು ಹೇಳುವ ಬದಲು ಬೇಕಾಬಿಟ್ಟಿ ಹೇಳಿಕೆ, ಜಾಹೀರಾತು ನೀಡುತ್ತಿದ್ದೀರಿ. ಈಗ ಜನ ಸಂಕಲ್ಪ ಮಾಡುತ್ತಿದ್ದಾರೆ. ಭ್ರಷ್ಟ ಬಿಜೆಪಿ ಸರ್ಕಾರ ಕಿತ್ತೊಗೆಯಲು, ಕಾಂಗ್ರೆಸ್ ಪಕ್ಷಕ್ಕೆ 150 ಸ್ಥಾನ ಕೊಡಲು ಜನ ಈಗಾಗಲೇ ಸಂಕಲ್ಪ ಮಾಡಿದ್ದಾರೆ. ಈ ಯಾತ್ರೆಯಲ್ಲಿ ಜನ ನೀಡುತ್ತಿರುವ ಬೆಂಬಲ ನೋಡಿದರೆ ಕಾಂಗ್ರೆಸ್ 150 ಸ್ಥಾನ ಗೆಲ್ಲುವುದು ಖಚಿತ ‘ ಎಂದು ಉತ್ತರಿಸಿದರು.

ಕಾಂಗ್ರೆಸ್ ಭಾರತ ಜೋಡೋ ಬದಲು, ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಅವರ ಜೋಡೋ ಮಾಡಲಿ ಎಂಬ ಬಿಜೆಪಿ ಲೇವಡಿ ಬಗ್ಗೆ ಕೇಳಿದಾಗ, ‘ನಮ್ಮಿಬ್ಬರನ್ನು ನೆನಪಿಸಿಕೊಳ್ಳದಿದ್ದರೆ ಅವರಿಗೆ ಸಮಾಧಾನ ಆಗುವುದಿಲ್ಲ. ಬೆಳಗ್ಗೆ ಎದ್ದಾಗಿನಿಂದ ರಾತ್ರಿ ಮಲಗುವವರೆಗೆ ಅವರು ನಮ್ಮನ್ನು ನೆನಪಿಸಿಕೊಳ್ಳುತ್ತಿದ್ದಾರೆ. ಬಹಳ ಸಂತೋಷ’ ಎಂದು ಕುಟುಕಿದರು.

ರಾಹುಲ್ ಗಾಂಧಿ ಅವರನ್ನು ಬಚ್ಚಾ ಎಂದು ಕರೆದಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ‘ಯಡಿಯೂರಪ್ಪ, ಯತ್ನಾಳ್, ಶ್ರೀರಾಮುಲು ಸೇರಿದಂತೆ ಯಾರು ಬೇಕಾದರೂ ರಾಹುಲ್ ಗಾಂಧಿ ಅವರ ಬಗ್ಗೆ ಮಾತನಾಡಲಿ. ಆದರೆ ಚಡ್ಡಿ ಹಾಕಿರುವ ಬಚ್ಚಾ ಮುಂದೆ ಪ್ಯಾಂಟು ಧರಿಸಿ, ಪಂಚೆ ಕಚ್ಚೆ ಕಟ್ಟಿ, ಕೆಲಸ ಮಾಡುತ್ತಿರುವವರನ್ನು ಜನ ಗಮನಿಸುತ್ತಿದ್ದಾರೆ. ಅವರ ವಯಸ್ಸಿನ ಮುಂದೆ, ಅವರ ಹಿರಿತನದ ಮುಂದೆ ನಾವು ಬಚ್ಚಾಗಳೇ. ಯಡಿಯೂರಪ್ಪ ಅವರನ್ನು ಯಾಕೆ ಅಧಿಕಾರದಿಂದ ತೆಗೆದಿರಿ ಎಂದು ರಾಹುಲ್ ಗಾಂಧಿ ಅವರು ಗೌರವಯುತವಾಗಿ ಕೇಳಿದ್ದಾರೆ. ಯಡಿಯೂರಪ್ಪ ಅವರು ಅದನ್ನು ಅರಿಯಬೇಕು ‘ ಎಂದರು.

ಕಾಂಗ್ರೆಸ್ ಪಕ್ಷ ಮುಂದೆ ಮಾಡಲಿರುವ ಬಸ್ ಯಾತ್ರೆ ಬಗ್ಗೆ ಕೇಳಿದ ಪ್ರಶ್ನೆಗೆ, ‘ರಾಜ್ಯದ ಎಲ್ಲ ಕ್ಷೇತ್ರಗಳನ್ನೂ ಮುಟ್ಟಬೇಕು ಎಂಬ ಕಾರಣಕ್ಕೆ ನಾನು, ಸಿದ್ದರಾಮಯ್ಯ ಅವರು ಹಾಗೂ ಎಐಸಿಸಿ ನಾಯಕರು ಕೂತು ಚರ್ಚಿಸಿ ಈ ಬಗ್ಗೆ ತೀರ್ಮಾನ ಮಾಡಿದ್ದೇವೆ. ಮುಂದೆ ಈ ಬಗ್ಗೆ ಮಾಹಿತಿ ನೀಡುತ್ತೇವೆ’ ಎಂದರು.

ಕಾಂಗ್ರೆಸ್ ತಂತ್ರಗಳನ್ನು ಬಿಜೆಪಿ ನಕಲು ಮಾಡುತ್ತಿದೆಯೇ ಎಂಬ ಪ್ರಶ್ನೆಗೆ, ‘ಜನರನ್ನು ಮರೆತು ಮಲಗಿರುವ ಸರ್ಕಾರವನ್ನು ನಾವು ಬಡಿದೆಬ್ಬಿಸುತ್ತಿದ್ದೇವೆ’ ಎಂದರು.

ಈ ಯಾತ್ರೆ ಯಶಸ್ಸು ಆಗಿದೆಯೇ ಎಂದು ಕೇಳಿದಾಗ, ‘ಈ ಯಾತ್ರೆ ನೋಡಿ ನಿಮಗೆ ಏನು ಅನಿಸುತ್ತಿದೆ? ನಿಮ್ಮ ಕ್ಯಾಮೆರಾ, ನಿಮ್ಮ ಸಂದರ್ಶನ, ವಿಶ್ಲೇಷಣೆ ಏನು ಹೇಳುತ್ತಿದೆ? ನಮ್ಮ ಯಾತ್ರೆ ಜನರ ಕಷ್ಟಕ್ಕೆ ಸ್ಪಂದಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ ಎಂದು ಎಲ್ಲರೂ ಅಭಿಪ್ರಾಯ ಪಟ್ಟಿದ್ದಾರೆ. ಈ ಯಾತ್ರೆ ಯಶಸ್ಸಿನ ಶ್ರೇಯ ಪಕ್ಷದ ಎಲ್ಲ ನಾಯಕರು, ಕಾರ್ಯಕರ್ತರಿಗೆ ಸಲ್ಲಬೇಕು’ ಎಂದರು.

ಎಐಸಿಸಿ ಅಧ್ಯಕ್ಷ ಸ್ಥಾನದ ಚುನಾವಣೆ ಬಗ್ಗೆ ಕೇಳಿದಾಗ, ‘ಈ ಬಗ್ಗೆ ಮಾಧ್ಯಮಗಳಲ್ಲಿ ಮಾತನಾಡುವುದಿಲ್ಲ. ಮತದಾರರ ಬಳಿ ನೇರವಾಗಿ ಮಾತನಾಡುತ್ತೇನೆ. ನನ್ನನ್ನು ಸಿಲುಕಿಸುವ ಪ್ರಯತ್ನ ಮಾಡಬೇಡಿ ‘ ಎಂದರು.

ಸೋನಿಯಾ ಗಾಂಧಿ ಅವರು ರಾಜ್ಯಕ್ಕೆ ಬಂದರೂ ಮಾತನಾಡಲಿಲ್ಲ ಎಂಬ ಪ್ರಶ್ನೆಗೆ, ‘ಮೋದಿ ಅವರು ಎಂದಾದರೂ ಪತ್ರಿಕಾಗೋಷ್ಠಿ ನಡೆಸಿದ್ದಾರಾ? ರಾಹುಲ್ ಗಾಂಧಿ ಅವರು ಎಲ್ಲೆಡೆ ಮಾತನಾಡುತ್ತಿದ್ದಾರಲ್ಲಾ’ ಎಂದರು.

ಪ್ರಿಯಾಂಕಾ ಗಾಂಧಿ ಅವರ ಆಗಮನದ ಬಗ್ಗೆ ಕೇಳಿದಾಗ, ‘ಅವರು ಸಿಮ್ಲಾ ಚುನಾವಣಾ ಪ್ರಚಾರದಲ್ಲಿದ್ದಾರೆ. ಇಂದು ದೆಹಲಿಗೆ ಹೋಗಿದ್ದು, ರಾಜ್ಯದಲ್ಲಿ ಇನ್ನೂ ಎರಡು ದಿನ ಯಾತ್ರೆ ಬಾಕಿ ಇದೆ. ಅವರ ಭಾಗವಹಿಸುವಿಕೆ ಬಗ್ಗೆ ಶೀಘ್ರದಲ್ಲಿ ತಿಳಿಸುತ್ತೇನೆ ಎಂದರು.

ಬಳ್ಳಾರಿಯಲ್ಲಿ ಸಮಾವೇಶ ಮಾಡಲು ಕಾರಣ ಏನು ಎಂಬ ಪ್ರಶ್ನೆಗೆ, ‘ಈ ಯಾತ್ರೆ ಸುದೀರ್ಘವಾಗಿ ನಡೆದು, ಒಂದಷ್ಟು ಅನುಭವ ಪಡೆದ ನಂತರ ಸಮಾವೇಶ ಮಾಡಲು ತೀರ್ಮಾನ ಮಾಡಲಾಗಿತ್ತು. ಹೀಗಾಗಿ 20 ದಿನಗಳ ಯಾತ್ರೆ ನಂತರ ಬಳ್ಳಾರಿಯಲ್ಲಿ ಮಾಡಿದ್ದೇವೆ. ರಾಯಚೂರಿನಲ್ಲಿ ಮಾಡುವ ಚರ್ಚೆ ನಡೆಯಿತು. ಅಲ್ಲಿ ತೆಲಂಗಾಣ ರಾಜ್ಯದವರೂ ಆಗಮಿಸುವುದಾಗಿ ಹೇಳಿದ್ದರು. ಆದರೆ ನಾವು ಅದನ್ನು ಒಪ್ಪದೇ ಬಳ್ಳಾರಿಯಲ್ಲಿ ಮಾಡಿದ್ದೇವೆ’ ಎಂದರು.

ಈ ಯಾತ್ರೆ ನಂತರ ರಾಜ್ಯದಲ್ಲಿ ನಾಯಕತ್ವಕ್ಕೆ ಬಲ ಬಂದಿದೆಯೇ ಎಂಬ ಪ್ರಶ್ನೆಗೆ, ‘ಪಕ್ಷಕ್ಕೆ ಶಕ್ತಿ ಬಂದಿದ್ದು, ನನ್ನ ಆರೋಗ್ಯ ಗಟ್ಟಿಯಾಗಿದೆ. ನನ್ನ ಅನುಭವ ಹೆಚ್ಚಾಯ್ತು. ನಾನು ರಾಜ್ಯ ಹಾಗೂ ಬೇರೆ ರಾಜ್ಯಗಳಲ್ಲೂ ಇಂತಹ ಹಲವು ಸಂಘಟನೆ ಮಾಡಿದ್ದೇನೆ. ನಮ್ಮ ರಾಜ್ಯದಲ್ಲಿ ಯಾತ್ರೆ ಮಾಡಿದ್ದೇನೆ. ಮೇಕೆದಾಟು ಯಾತ್ರೆ, ಸ್ವಾತಂತ್ರ್ಯ ನಡಿಗೆ ನೋಡಿದ್ದೀರಿ. ಜತೆಗೂಡುವುದು ಆರಂಭ, ಜತೆಗೂಡಿ ಯೋಚಿಸುವುದು ಪ್ರಗತಿ, ಜತೆಗೂಡಿ ಕೆಲಸ ಮಾಡುವುದು ಯಶಸ್ಸು ಎಂಬಂತೆ ಎಲ್ಲ ಕಾರ್ಯಕರ್ತರ, ನಾಯಕರನ್ನು ಸೇರಿಸಿ ಈ ಕಾರ್ಯಕ್ರಮ ಮಾಡಲಾಗಿದೆ’ ಎಂದರು.

ಆರು ತಿಂಗಳ ಮುಂಚಿತವಾಗಿ ಚುನಾವಣೆ ಅಭ್ಯರ್ಥಿ ಘೋಷಣೆ ಬಗ್ಗೆ ಕೇಳಿದ ಪ್ರಶ್ನೆಗೆ, ‘ನಾವು ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಅಂತಿಮ ಘಟ್ಟಕ್ಕೆ ತಲುಪಿದ್ದು, ಯಾತ್ರೆ ಮುಗಿದ ನಂತರ ಮಾತನಾಡುತ್ತೇನೆ. ಯಾರ ಶಕ್ತಿ ಏನು ಎಂದು ನೋಡಿದ್ದೇವೆ. ಪಾದಯಾತ್ರೆಗೆ ಶ್ರಮಿಸುವವರು, ಜನರ ಬಳಿ ಕೆಲಸ ಮಾಡಿರುವವರು, ಜನರ ಪ್ರೀತಿ ವಿಶ್ವಾಸ ಉಳಿಸಿಕೊಂಡಿರುವವರನ್ನು ಗಮನದಲ್ಲಿ ಇಟ್ಟುಕೊಂಡಿದ್ದೇವೆ’ ಎಂದರು.