bhihar – Peepal Media

ಬಿಹಾರ: ಮದುವೆ ಮೆರವಣಿಗೆ ವೇಳೆ ಟ್ರಕ್‌ ಪಲ್ಟಿ, 12 ಮಂದಿ ಸಾವು
ಹಾಜಿಪುರ: ಧಾರ್ಮಿಕ ಮೆರವಣಿಗೆ ನಡೆಯುತ್ತಿರುವ ಸಂದರ್ಭದಲ್ಲಿ ವೇಗವಾಗಿ ಬಂದ ಟ್ರಕ್‌, ನಿಯಂಣತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 12 ಜನರು ಸಾವನ್ನಪ್ಪಿರುವ ಘಟನೆ ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ಭಾನುವಾರ ಸಂಜೆ ನಡೆದಿದೆ.

ಈ ಕುರಿತು ಪೊಲೀಸ್‌ ಅಧಿಕಾರಿಗಳು ಮಾಹಿತಿ ನೀಡಿದ್ದು, ಬಿಹಾರ ರಾಜಧಾನಿಯಿಂದ ಸುಮಾರು 30 ಕಿ.ಮೀ ದೂರದಲ್ಲಿರುವ ಉತ್ತರ ಬಿಹಾರ ಜಿಲ್ಲೆಯ ದೇಸ್ರಿ ಪೊಲೀಸ್ ಠಾಣೆ ಪ್ರದೇಶದ ಬಳಿ ರಾತ್ರಿ 9 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ ಎಂದು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಅಪಘಾತದ ಬಗ್ಗೆ ದುಃಖ ವ್ಯಕ್ತಪಡಿಸಿದ್ದು, ಸಾವನ್ನಪ್ಪಿರುವ ಕುಟುಂಬಕ್ಕೆ ₹ 2 ಲಕ್ಷ ಮತ್ತು ಗಾಯಾಳುಗಳಿಗೆ ತಲಾ ₹ 50,000 ಪರಿಹಾರವನ್ನು ಘೋಷಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ಬಿಹಾರದ ವೈಶಾಲಿಯಲ್ಲಿ ನಡೆದ ಅಪಘಾತವು ದುಃಖಕರವಾಗಿದ್ದು, ದುಃಖತಪ್ತ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಹಾಗೂ ಗಾಯಗೊಂಡವರು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದು ಆರೈಸಿದ್ದಾರೆ. ನಂತರ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿ (PMNRF)ನಿಂದ 2 ಲಕ್ಷ ರೂ.ಗಳ ಪರಿಹಾರವನ್ನು ಮೃತರ ಕುಟುಂಬಗಳಿಗೆ ನೀಡಲಾಗುತ್ತಿದ್ದು, ಗಾಯಗೊಂಡವರಿಗೆ 50,000 ರೂ.ಗಳನ್ನು ನೀಡಲಾಗುವುದು ಎಂದು ತಿಳಿಸಿದ್ದಾರೆ.

The accident in Vaishali, Bihar is saddening. Condolences to the bereaved families. May the injured recover soon. An ex-gratia of Rs. 2 lakh from PMNRF would be given to the next of kin of each deceased. The injured would be given Rs. 50,000: PM @narendramodi
— PMO India (@PMOIndia) November 20, 2022

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೂಡ ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದು, ಅಪಘಾತವಾಗಿರುವುದು ʼಅತ್ಯಂತ ನೋವಿನ ಸಂಗತಿʼ ಎಂದು ಹೇಳಿದ್ದಾರೆ.

ಬಿಹಾರದ ವೈಶಾಲಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಕ್ಕಳು ಸೇರಿದಂತೆ ಹಲವರು ಸಾವನ್ನಪ್ಪಿದ ಸುದ್ದಿ ಅತ್ಯಂತ ನೋವಿನ ಸಂಗತಿಯಾಗಿದೆ. ಈ ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತೇನೆ ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ಟ್ವೀಟ್‌ ಮಾಡಿದ್ದಾರೆ.

वैशाली, बिहार में हुई सड़क दुर्घटना में बच्चों समेत कई लोगों के हताहत होने की ख़बर अत्यंत पीड़ादायक है। मैं इस हादसे में अपने प्रियजनों को खोने वाले परिवारों के प्रति गहन शोक-संवेदनाएं व्यक्त करती हूं तथा घायल हुए लोगों के शीघ्र स्वस्थ होने की कामना करती हूं।
— President of India (@rashtrapatibhvn) November 20, 2022

ಈ ಘಟನೆ ನಡೆದ ಸ್ಥಳವು ಮಹುವಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರಿವ ಹಿನ್ನೆಲೆಯಲ್ಲಿ,  ಆರ್ಜೆಡಿ ಶಾಸಕ ಮುಖೇಶ್ ರೋಶನ್ ಅವರು ಘಟನೆ ನಡೆದಿರುವ ಸ್ಥಳಕ್ಕೆ ಧಾವಿಸಿ, ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಹಾಜಿಪುರದ (ಜಿಲ್ಲಾ ಕೇಂದ್ರ) ಸದರ್ ಆಸ್ಪತ್ರೆಗೆ ರವಾನಿಸಿದ್ದಾರೆ.

ನಂತರ ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ʼಕನಿಷ್ಠ ಒಂಬತ್ತು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ ಅನೇಕರು ಗಾಯಗೊಂಡಿರುವ ಪರಿಣಾಮ, ಚಿಕಿತ್ಸೆಗೆ ಕರೆದೊಯ್ಯಲಾಗಿದ್ದು, ಮೂವರು ಮಾರ್ಗದ ಮಧ್ಯೆಯೇ ಸಾವನ್ನಪ್ಪಿದ್ದಾರೆ. ಹೀಗಾಗಿ ಯಾರ ಸ್ಥಿತಿ ಗಂಭೀರವಾಗಿದೆಯೋ ಅವರನ್ನು ಪಾಟ್ನಾದ ಆಸ್ಪತ್ರೆಗಳಿಗೆ ಕಳುಹಿಸಲಾಗುತ್ತಿದೆʼ ಎಂದು ಮಾಹಿತಿ ನೀಡಿದ್ದಾರೆ.

ವೈಶಾಲಿ ಪೊಲೀಸ್ ಅಧೀಕ್ಷಕ ಮನೀಶ್ ಕುಮಾರ್ ಮಾತನಾಡಿ, ʼಮದುವೆಗಳಿಗೆ ಸಂಬಂಧಿಸಿದ ಸಂಪ್ರದಾಯದ ಭಾಗವಾಗಿ ಮೆರವಣಿಗೆಯನ್ನು ನಡೆಸಲಾಗಿತ್ತು, ಹತ್ತಿರದ ಸುಲ್ತಾನಪುರ ಗ್ರಾಮದ ನಿವಾಸಿಯೊಬ್ಬರ ಮನೆಯಲ್ಲಿ ಕೆಲವೇ ದಿನಗಳಲ್ಲಿ ಮದುವೆ ನಿಶ್ಚಯವಾಗಿತ್ತು. ಪಕ್ಕದ ಮಹ್ನಾರ್-ಹಾಜಿಪುರ ಹೆದ್ದಾರಿಯಲ್ಲಿ ವೇಗವಾಗಿ ಚಲಿಸುತ್ತಿದ್ದ ಟ್ರಕ್ ನ ಚಾಲಕ ನಿಯಂತ್ರಣ ಕಳೆದುಕೊಂಡಿದ್ದರಿಂದ ಈ ಅಪಘಾತ ಸಂಭವಿಸಿದ್ದು, ಚಾಲಕ ಕೂಡ ಟ್ರಕ್‌ ಒಳಗೆ ಸಿಕ್ಕಿಹಾಕಿಕೊಂಡಿದ್ದಾನೆ. ಹಾಗೆಯೇ ಅವನು ಜೀವಂತವಾಗಿರುವ ಯಾವುದೇ ಲಕ್ಷಣಗಳು ಕಂಡುಬರುತ್ತಿಲ್ಲ. ಘಟನೆಯಲ್ಲಿ ಕನಿಷ್ಠ ನಾಲ್ಕು ಮಕ್ಕಳು ಸಾವನ್ನಪಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆಂದು ತಿಳಿಸಿದ್ದಾರೆ.

ʼರಕ್ಷಣಾ ಕಾರ್ಯವನ್ನು ಮುಂದುವರೆಸಲು ಮತ್ತು ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಯನ್ನು ನಿಯಂತ್ರಣದಲ್ಲಿಡಲು ನಾವು ಪಕ್ಕದ ಹಲವಾರು ಪೊಲೀಸ್ ಠಾಣೆಗಳಿಂದ ಸಿಬ್ಬಂದಿಯನ್ನು ಕರೆಸಿದ್ದೇವೆ” ಎಂದು ಎಸ್ಪಿ ಹೇಳಿದ್ದಾರೆ.

ಏತನ್ಮಧ್ಯೆ, ಉಪ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಅಪಘಾತದ ಬಗ್ಗೆ ದುಃಖ ವ್ಯಕ್ತಪಡಿಸಿದ್ದು, ಅಪಘಾತದಲ್ಲಿ ಗಾಯಗೊಂಡವರಿಗೆ ಸರಿಯಾದ ಚಿಕಿತ್ಸೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಸಾವನ್ನಪಿರುವವರ ಕುಟುಂಬಕ್ಕೆ ನಿಯಮಗಳ ಪ್ರಕಾರ ಪರಿಹಾರವನ್ನು ವಿತರಿಸಲು ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು, ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.

आज रात्रि हाजीपुर में एक सड़क दुर्घटना में कई लोगों की मृत्यु की हृदयविदारक खबर से मर्माहत हूँ। शोक संतप्त परिजनों के प्रति अपनी गहरी संवेदना व्यक्त तथा घायलों के शीघ्र स्वस्थ होने कामना करता हूँ। ईश्वर दिवंगत आत्माओं की शांति व उनके परिजनों को यह दुःख सहने की शक्ति प्रदान करें।
— Tejashwi Yadav (@yadavtejashwi) November 20, 2022

ಬಿಹಾರ: ಪೊಲೀಸ್‌ ಠಾಣೆಯಲ್ಲೇ ವ್ಯಕ್ತಿ ಆತ್ಮಹತ್ಯೆ
ಬಕ್ಸಾರ್ (ಬಿಹಾರ): ಇಲ್ಲಿನ ಕೊರಾನ್ಸರೈ ಪೊಲೀಸ್ ಠಾಣೆಯ ಕೊಠಡಿಯೊಂದರಲ್ಲಿ 70 ವರ್ಷದ ವ್ಯಕ್ತಿಯೊಬ್ಬರು ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗುರುವಾರ ನಡೆದಿದೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಪೊಲೀಸ್ ಅಧಿಕಾರಿ ನೀರಜ್ ಕುಮಾರ್ ಸಿಂಗ್, ‘ನಿಗೂಢ ಸನ್ನಿವೇಶದಲ್ಲಿʼಈ ಘಟನೆ ಸಂಭವಿಸಿದ್ದು, ಜನಾಕ್ರೋಶಕ್ಕೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಠಾಣಾಧಿಕಾರಿ (ಎಸ್‌ಎಚ್‌ಒ) ಜುನೈದ್ ಆಲಂ ಅವರನ್ನು ಅಮಾನತುಗೊಳಿಸಲಾಗಿದೆ ಮತ್ತು ಪ್ರಕರಣದ ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ತಿಳಿಸಿದ್ದಾರೆ.

ವ್ಯಕ್ತಿಯನ್ನು ಬಕ್ಸರ್‌ನ ಕೊಪ್ವಾ ಗ್ರಾಮದ ನಿವಾಸಿ ಯಮುನಾ ಸಿಂಗ್ ಎಂದು ಗುರುತಿಸಲಾಗಿದೆ.

ಗ್ರಾಮಸ್ಥರ ನಡುವಿನ ವಿವಾದಕ್ಕೆ ಸಂಬಂಧಿಸಿದಂತೆ ಮಂಗಳವಾರ ವ್ಯಕ್ತಿಯನ್ನು ಪೊಲೀಸ್ ಠಾಣೆಯ ಕಂಪ್ಯೂಟರ್ ಕೊಠಡಿಯಲ್ಲಿ ಇರಿಸಲಾಗಿತ್ತು. ಆದರೆ ಆತ ಸ್ವಲ್ಪಸಮಯದ ನಂತರ ಕೊಠಡಿಯ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು ಎಂದು ಜಿಲ್ಲಾ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಂತರ ಆತನನ್ನು ಕೆಳಗಿಳಿಸಿ ಹತ್ತಿರದ ಆಸ್ಪತ್ರೆಗೆ ಸೇರಿಸಲಾಯಿತು, ಆದರೆ ನೇಣು ಬಿಗಿದುಕೊಂಡ ಕಾರಣ ಉಸಿರು ಗಟ್ಟಿ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.

ತನ್ನ ತಂದೆ ಸಾವಿನ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಪುತ್ರ ಅರುಣ್‌ ಸಿಂಗ್‌, ಪೊಲೀಸರ ಚಿತ್ರಹಿಂಸೆಯಿಂದಾಗಿ ನನ್ನ ತಂದೆ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿದ್ದಾರೆ.

ನಂತರ ಕಸ್ಟಡಿ ಸಾವಿನ ವಿಚಾರ ತಿಳಿದ ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದು, ವ್ಯಕ್ತಿಗೆ ನ್ಯಾಯ ಕೊಡಿಸುವಂತೆ ದುಮ್ರಾನ್-ವಿಕ್ರಮ್‌ಗಂಜ್ ರಸ್ತೆಯನ್ನು ಎರಡು ಮೂರು ಗಂಟೆಗಳ ಕಾಲ ತಡೆಹಿಡಿದಿದ್ದರು.

ಶಿಕ್ಷಕರ ನೇಮಕಾತಿ ಮರುಸ್ಥಾಪನೆಗಾಗಿ ಅಭ್ಯರ್ಥಿಗಳ ಪ್ರತಿಭಟನೆ: ಪೊಲೀಸರಿಂದ ಲಾಠಿ ಚಾರ್ಜ್
ಬಿಹಾರ: ರಾಜಧಾನಿ ಪಾಟ್ನಾದಲ್ಲಿ ಸೋಮವಾರ ಶಿಕ್ಷಕರ ನೇಮಕಾತಿ ಅಭ್ಯರ್ಥಿಗಳು ಏಳನೇ ಹಂತದ ಪುನಶ್ಚೇತನಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಈ ವೇಳೆ ತಮ್ಮ ಬೇಡಿಕೆಗಳಿಗಾಗಿ ಪ್ರತಿಭಟನೆ ನಡೆಸುತ್ತಿದ್ದ ಕೇಂದ್ರ ಶಿಕ್ಷಕರ ಅರ್ಹತಾ ಪರೀಕ್ಷೆ (ಸಿಟಿಇಟಿ) ಮತ್ತು ಬಿಹಾರ ಶಿಕ್ಷಕರ ಅರ್ಹತಾ ಪರೀಕ್ಷೆ (ಬಿಟಿಇಟಿ) ಅಭ್ಯರ್ಥಿಗಳ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.

ಈ ಕುರಿತು ಮಾತನಾಡಿರುವ ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್‌, ಎಸ್‌ಟಿಇಟಿ ಅಭ್ಯರ್ಥಿಯನ್ನು ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ (ಎಡಿಎಂ) ಥಳಿಸುತ್ತಿದ್ದು, ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದ ವಿದ್ಯಾರ್ಥಿಗಳನ್ನು ನಿಯಂತ್ರಿಸಲು ಲಾಠಿ ಚಾರ್ಜ್ ಮಾಡಲಾಗಿದೆ. ತನಿಖಾ ಸಮಿತಿಯನ್ನು ರಚಿಸಲಾಗಿದೆ. ತಪ್ಪಿತಸ್ಥರು ಯಾರೇ  ಕಂಡುಬಂದರು ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

पटना में शिक्षक अभ्यर्थियों पर लाठीचार्ज के दौरान ADM के के सिंह ने किया तिरंगे का अपमान! पटना डीएम ने मामले की जांच के लिए दो सदस्यीय टीम का किया गठन। pic.twitter.com/3T9xNK3zns
— News18 Bihar (@News18Bihar) August 22, 2022

ʼನಿರುದ್ಯೋಗಿ ಯುವಕರಿಗೆ 10ಲಕ್ಷ ಉದ್ಯೋಗʼ: ನಿತೀಶ್‌ ಭರವಸೆ
ಬಿಹಾರ: ರಾಜ್ಯದ ಯವಜನತೆಗ 10ಲಕ್ಷ ಉದ್ಯೋಗ ನೀಡುತ್ತೇವೆ ಎಂದು ಮುಖ್ಯಮಂತ್ರಿ ನಿತೀಶ್‌ ಕುಮಾರ್ ಭರವಸೆ ನೀಡಿದ್ದಾರೆ.

ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ 10 ಲಕ್ಷ ಉದ್ಯೋಗಗಳ ಭರವಸೆ ಬಗ್ಗೆ ನಿತೀಶ್‌ ಕುಮಾರ್‌ ಬಳಿ ಚರ್ಚಿಸಿದ್ದರು. ಈ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ನಿತೀಶ್‌, ಅವರು ಹೇಳಿದ್ದು ಸರಿ. ನಾವು ಅದಕ್ಕಾಗಿ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದೇವೆ ಮತ್ತು  ನಮ್ಮ ಕೈಲಾದಷ್ಟು ಪ್ರಯತ್ನಿಸುತ್ತೇವೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಬಿಹಾರದ ಹೊಸ ಸಿಎಂ ನಿತೀಶ್‌ ಕುಮಾರ್!
ಪಾಟ್ನಾ: ಬಿಜೆಪಿಯೊಂದಿಗಿನ ಮೈತ್ರಿ ಮುರಿದು ರಾಜಿನಾಮೆ ನೀಡಿದ್ದ ನಿತೀಶ್‌ ಕುಮಾರ್‌, ಹೊಸ ಮಿತ್ರಪಕ್ಷಗಳಾದ ಆರ್‌ಜೆಡಿ,ಕಾಂಗ್ರೆಸ್‌ ಮತ್ತು ಎಡಪಕ್ಷಗಳ ಬೆಂಬಲಗಳೊಂದಿಗೆ ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವಿಕರಿಸಿದ್ದಾರೆ.

ನಿತೀಶ್‌ ಕುಮಾರ್‌ ಜೊತೆ ಬಿಹಾರದ ಹೊಸ ಉಪಮುಖ್ಯಮಂತ್ರಿಯಾಗಿ ತೇಜಸ್ವಿ ಯಾದವ್‌ ಕೂಡ ಪ್ರಮಾಣವಚನ ಸ್ವೀಕರಿಸಿದರು. ಈ ಮೂಲಕ ಬಿಹಾರದಲ್ಲಿ 8ನೇ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ದಾಖಲೆ ನಿತೀಶ್ ಅವರದ್ದಾಗಿದೆ.