bhommai – Peepal Media

60 ವರ್ಷ ಮೇಲ್ಪಟ್ಟ ನಾಗರಿಕರಿಗೆ ಉಚಿತ ನೇತ್ರ ತಪಾಸಣೆ, ಉಚಿತ ಕನ್ನಡಕ: ಬೊಮ್ಮಾಯಿ
ಚಾಮರಾಜನಗರ: ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟ ನಾಗರಿಕರಿಗೆ ಉಚಿತ ನೇತ್ರ ತಪಾಸಣೆ ನಡೆಸಿ, ಉಚಿತ ಕನ್ನಡಕವನ್ನು ವಿತರಿಸುವ ಕಾರ್ಯಕ್ರಮಕ್ಕೆ ಶೀಘ್ರವೇ ಚಾಲನೆ ನೀಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಿಳಿಸಿದ್ದಾರೆ.

ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಚಾಮರಾಜನಗರ ಜಿಲ್ಲೆಗೆ ಭೇಟಿ ನೀಡಿದ್ದು, ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ್ದಾರೆ.

ಉದ್ಘಾಟನೆ ಸಮಾರಂಭದ ನಂತರ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಚಾಮರಾಜನಗರಕ್ಕೆ ನಾನು ಹಿಂದೆಯೂ ಭೇಟಿ ನೀಡಿದ್ದೇನೆ, ಮುಂದೆಯೂ ಭೇಟಿ ನೀಡಲಿದ್ದೇನೆ. ಚಾಮರಾಜ ನಗರಕ್ಕೆ ಭೇಟಿ ನೀಡಿದ್ದರಿಂದ ನಮ್ಮ ಶಕ್ತಿ ವೃದ್ಧಿಯಾಗಿದೆಯೇ ಹೊರತು ಕಮ್ಮಿಯಾಗಿಲ್ಲ. ಈ ನಗರದವರು ಮುತ್ತಿನಂತಾ ಜನರು, ಶ್ರೀಮಂತ ಹೃದಯಿಗಳು. ಇಲ್ಲಿಗೆ ಭೇಟಿ ನೀಡುವುದು ಒಂದು ಶುಭ ಸೂಚನೆ ಎಂದು ಮಾತನಾಡಿದ್ದಾರೆ.

ಸರ್ಕಾರಗಳು ತಾವು ಕೈಗೊಂಡ ಅಭಿವೃದ್ಧಿ ಆಧಾರದ ಮೇಲೆ ಚುನಾವಣೆಯಲ್ಲಿ ಮತ ಕೇಳಬೇಕೇ ವಿನಃ ಇನ್ನಾವುದೇ ವಿಚಾರದಿಂದಲ್ಲ. ಪ್ರಜಾಪ್ರಭುತ್ವದಲ್ಲಿ ಸಕಾರಾತ್ಮಕ ಹಾಗೂ ರಚನಾತ್ಮಕ ಆಡಳಿತ ನಿರ್ಮಾಣವಾಗಬೇಕೆ ಹೊರತು ಮತ್ತೊಬ್ಬರ ತಪ್ಪುಗಳನ್ನು ಎತ್ತಿ ತೋರಿಸುವ ಕೆಲಸಕ್ಕೆ ಪ್ರಾಧಾನ್ಯತೆ ನೀಡಬಾರದು. ಹಾಗಾದಾಗ ಮಾತ್ರೆ ಜನಪಯೋಗಿ ಸರ್ಕಾರದ ಉದ್ದೇಶಗಳು ನೆರವೇರುತ್ತವೆ ಎಂದು ಹೇಳಿದ್ದಾರೆ.

ನಮ್ಮ ಸರ್ಕಾರ ಜನತೆಯ ಆಶೋತ್ತರಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿದೆ. ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದು, ಕರ್ನಾಟಕ ರಾಜ್ಯ ರಚನೆಯಾದ ನಂತರ ಇದೇ ಮೊದಲ ಬಾರಿ ಒಂದೇ ವರ್ಷದಲ್ಲಿ 8000 ಶಾಲಾ ಕೊಠಡಿಗಳನ್ನು ನಿರ್ಮಿಸಿದ್ದೇವೆ. ರಾಜ್ಯದ 100 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸುತ್ತಿದ್ದೇವೆ ಎಂದು ಮಾತನಾಡಿದ್ದಾರೆ.

ಅಲ್ಲದೇ ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟ ನಾಗರಿಕರಿಗೆ ಉಚಿತ ನೇತ್ರ ತಪಾಸಣೆ ನಡೆಸಿ, ಉಚಿತ ಕನ್ನಡಕವನ್ನು ವಿತರಿಸುವ ಕಾರ್ಯಕ್ರಮಕ್ಕೆ ಶೀಘ್ರವೇ ಚಾಲನೆ ನೀಡುತ್ತೇವೆ ಎಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ನಾವಿನ್ಯತಾ ಅನುಭವ ವಸ್ತು ಸಂಗ್ರಹಾಲಯ ಸ್ಥಾಪನೆ: ಬೊಮ್ಮಾಯಿ
ಬೆಂಗಳೂರು: ಕರ್ನಾಟಕದಲ್ಲಿ ಅಭಿವೃದ್ಧಿ ಹಾಗೂ ನಾವಿನ್ಯತೆಯ ಪಯಣ, ಇದಕ್ಕೆ ಕಾರಣವಾಗಿರುವ ಸಾಧಕರು, ಇವರ ಸಾಧನೆಗಳನ್ನು ಬಿಂಬಿಸುವ ನಾವಿನ್ಯತಾ ಅನುಭವ ವಸ್ತು ಸಂಗ್ರಹಾಲಯ(Innovation Experience Museum) ವನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರದಂದು ತಿಳಿಸಿದ್ದಾರೆ.

ಇಂದು  ಬೆಂಗಳೂರು ವಿನ್ಯಾಸಕಾರರ ಸಮುದಾಯದ ವತಿಯಿಂದ ಆಯೋಜಿಸಿದ್ದ ಬಿ.ಎಲ್.ಆರ್ ಡಿಸೈನ್ ವೀಕ್ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಬೆಂಗಳೂರಿನಲ್ಲಿ ನಾವಿನ್ಯತಾ ಅನುಭವ ವಸ್ತು ಸಂಗ್ರಹಾಲಯ ಸ್ಥಾಪನೆ ಬಗ್ಗೆ ಹೇಳಿದ್ದಾರೆ.

ರಾಜ್ಯದ ಎಲ್ಲ ನಾವಿನ್ಯತೆ, ಅವಿಷ್ಕಾರಗಳ ಬಗ್ಗೆ ಮಾಹಿತಿ ನೀಡುವ ಅಂತರರಾಷ್ಟ್ರೀಯ ಮಟ್ಟದ ಮ್ಯೂಸಿಯಂ ಇದಾಗಲಿದ್ದು, ಹಸಿರಿನ ಪರಿಸರವನ್ನೂ ಒಳಗೊಂಡಿರಲಿದೆ. ಇದರಿಂದ ವಿದೇಶಿ ಪ್ರವಾಸೋದ್ಯಮವನ್ನು ಪ್ರೋತ್ಸಾಹ ದೊರೆಯುತ್ತದೆ. ಈ ಮ್ಯೂಸಿಯಂ ನಿಂದ ಯುವ ಆವಿಷ್ಕಾರಿಗಳು, ವಿನ್ಯಾಸಕಾರರಿಗೆ ಸ್ಪೂರ್ತಿ ದೊರೆಯಲಿದೆ ಎಂದರು.

ಬೆಂಗಳೂರಿಗೆ 8 ನಗರ ಕೇಂದ್ರಗಳ ನಿರ್ಮಾಣ:

ವಿಶ್ವದ ಯಾವುದೇ ಸಣ್ಣ ನಗರದಲ್ಲಿ  ಒಂದು ನಗರ ಕೇಂದ್ರವಿರುವಂತೆ, ಬೆಂಗಳೂರಿನ 8 ದಿಕ್ಕುಗಳಲ್ಲಿ 8 ನಗರ ಕೇಂದ್ರಗಳ ನಿರ್ಮಾಣಕ್ಕೆ ರೂಪುರೇಷೆ ಸಿದ್ಧಪಡಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ ಬೆಂಗಳೂರು ನಗರಕ್ಕೆ ಮಾತ್ರ ನಗರಕೇಂದ್ರವೆಂಬುದಿಲ್ಲ. ಆದ್ದರಿಂದ 8 ನಗರ ಕೇಂದ್ರಗಳನ್ನು ನಿರ್ಮಿಸಿ, ಇದಕ್ಕೆ ಪೂರಕವಾಗಿ ರಸ್ತೆ, ರೈಲುಗಳನ್ನು ಅಭಿವೃದ್ಧಿಗೊಳಿಸಬಹುದು. ಈ ಯೋಜನೆಗೆ ಬೇಕಾದ ಸಲಹೆಗಳನ್ನು ವಿನ್ಯಾಸಕಾರರಿಂದ ತಿಳಿದುಕೊಳ್ಳುವುದಾಗಿ ಬೊಮ್ಮಾಯಿಯವರು  ಹೇಳಿದ್ದಾರೆ.

ಈ ಸಂದರ್ಭದಲ್ಲಿ ಐ.ಟಿ. ಬಿ.ಟಿ, ಉನ್ನತ ಶಿಕ್ಷಣ ಸಚಿವ ಸಿ.ಎನ್.ಅಶ್ವತ್ಥ್ ನಾರಾಯಣ್, ಸ್ಟಾರ್ಟ್ ಅಪ್ ವಿಷನ್ ಗುಂಪಿನ ಅಧ್ಯಕ್ಷ ಪ್ರಶಾಂತ್ ಭೂಷಣ್  ಮೊದಲಾದವರು ಉಪಸ್ಥಿತರಿದ್ದರು.

ರಾಜ್ಯಗಳ ನಡುವೆ ವ್ಯಾಜ್ಯ ಹೆಚ್ಚುವ ಕೆಲಸ ಮಹಾರಾಷ್ಟ್ರ ಸಿಎಂ ಮಾಡಬಾರದು: ಬೊಮ್ಮಾಯಿ
ಬೆಂಗಳೂರು: ರಾಜ್ಯ ರಾಜ್ಯಗಳ ನಡುವೆ ವ್ಯಾಜ್ಯ ಹೆಚ್ಚಿಸುವ ಕೆಲಸವನ್ನು ಮಹಾರಾಷ್ಟ್ರ ಸರ್ಕಾರದ ಮುಖ್ಯಮಂತ್ರಿಗಳು ಮಾಡಬಾರದು ಎಂದು ಮಹಾರಾಷ್ಟ್ರದ ಗಡಿ ವಿಚಾರದ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿದ್ದಾರೆ.

ಗಡಿ ವಿಚಾರದ ಕುರಿತು ನವೆಂಬರ್‌ 22, ಮಂಗಳವಾರದಂದು ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ʼಗಡಿ ಅಭಿವೃದ್ಧಿ ಪ್ರಾಧಿಕಾರವು ಮಹಾರಾಷ್ಟ್ರದಲ್ಲಿರುವ ಕನ್ನಡ ಶಾಲೆಯ ಅಭಿವೃದ್ಧಿಗೆ ವಿಶೇಷ ಅನುದಾನ ನೀಡಬೇಕೆನ್ನುವ ತೀರ್ಮಾನ ಮಾಡಲಾಗಿದೆ. ಕರ್ನಾಟಕದ ಏಕೀಕರಣ ಹಾಗೂ ಸ್ವಾತಂತ್ರ್ಯ ಹೋರಾಟದಲ್ಲಿ ಹಾಗೂ ಗೋವಾ ವಿಮೋಚನೆಗೆ  ಕೆಲಸ ಮಾಡಿದ ಮಹಾರಾಷ್ಟ್ರದಲ್ಲಿರುವ ಕನ್ನಡಿಗರ ದಾಖಲೆಗಳನ್ನು ತರಿಸಿ ಅವರಿಗೂ ಪಿಂಚಣಿ ನೀಡುವ ಕೆಲಸವನ್ನು ಕಾರ್ಯಗತ ಮಾಡಲಾಗುವುದುʼ ಎಂದು ಹೇಳಿದ್ದಾರೆ.

ʼಎರಡು ರಾಜ್ಯಗಳ ನಡುವೆ ಸೌಹಾರ್ದತೆ ಇರುವಾಗ, ಎಲ್ಲಾ ಭಾಷಿಕರನ್ನು  ಒಂದೇ ರೀತಿಯಲ್ಲಿ ನೋಡಿಕೊಳ್ಳುವಾಗ, ರಾಜ್ಯ ರಾಜ್ಯಗಳ ನಡುವೆ ವ್ಯಾಜ್ಯ ಹೆಚ್ಚಿಸುವ ಕೆಲಸವನ್ನು ಮಹಾರಾಷ್ಟ್ರ ಸರ್ಕಾರದ ಮುಖ್ಯಮಂತ್ರಿಗಳು ಮಾಡಬಾರದು. ಮಹಾರಾಷ್ಟ್ರದಲ್ಲಿ ದೊಡ್ಡ ಪ್ರಮಾಣದಲ್ಲಿ ಇರುವ ಕನ್ನಡಿಗರು ಅವರ ಹಿತರಕ್ಷಣೆ ಮಾಡುವುದು ನಮ್ಮ ಕರ್ತವ್ಯ ಅದನ್ನು ನಾವು ಮಾಡುತ್ತೇವೆʼ ಎಂದಿದ್ದಾರೆ.

ನಕಲಿ ಮತದಾರರನ್ನು ತೆಗೆದರೆ ಮಾತ್ರ ನ್ಯಾಯ ಸಮ್ಮತ ಸಿಗುವುದು : ಬೊಮ್ಮಾಯಿ
ಬೆಂಗಳೂರು: ನಕಲಿ ಮತದಾರರನ್ನು ತೆಗೆದರೆ ಮಾತ್ರ ನ್ಯಾಯ ಸಮ್ಮತ ಸಿಗುವುದು, ಎಲ್ಲಿಂದಲೋ ಬಂದವರನ್ನು ಎಲ್ಲೋ ಸೇರಿಸಿ ಗೆಲ್ಲುವ ಇಷ್ಟು ದಿನದ ತಂತ್ರ ಬಂದ್‌ ಆಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಭಾನುವಾರದಂದು  ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ.

ಅರಿವು ಕಾರ್ಯಕ್ರಮ ಎಂಬ ಹೆಸರಿನಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಎಂದು ಚಿಲುಮೆ ಸಂಸ್ಥೆ ಮೂಲಕ ಮತದಾರರ ಮಾಹಿತಿಯನ್ನು ಕಳವು ಮಾಡಲಾಗಿದೆ ಎಂದು ಆರೋಪಿಸಿ, ಹಲವು ಕಾಂಗ್ರೆಸ್‌ ಮುಖಂಡರು ಸೇರಿ ನಡೆದಿರುವ ಅಕ್ರಮದ ವಿರುದ್ದ ಕೇಂದ್ರ ಚುನಾವಣೆ ಆಯೋಗದ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ್ದು, ಈ ಹಿನ್ನೆಲೆಯಲ್ಲಿ ಸಿಎಂ ಬೊಮ್ಮಾಯಿಯವರು ಮಾಧ್ಯದವರ ಜೊತೆ ಮಾತನಾಡಿದ್ದಾರೆ.

ಈ ಕುರಿತು ಮಾತನಾಡಿದ ಬೊಮ್ಮಯಿಯವರು, ʼ2013ರಿಂದಲೂ ಚಿಲುಮೆ ಸಂಸ್ಥೆಗೆ ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಇತರ ಜವಾಬ್ದಾರಿಗಳನ್ನು ವಹಿಸಿದ ಬಗ್ಗೆ ಸಮಗ್ರ ತನಿಖೆಗೆ ಆದೇಶಿಸಿದ್ದೇನೆ. ನಿರಾಧಾರ ಆರೋಪ ಮಾಡುತ್ತಿರುವ ಕಾಂಗ್ರೆಸ್‌ನ ಈ ಪ್ರಯತ್ನ, ಮುಂದಿನ ದಿನಗಳಲ್ಲಿ ಅವರಿಗೆ ತಿರುಗುಬಾಣವಾಗಲಿದೆʼ ಎಂದು ಹೇಳಿದ್ದಾರೆ.

ʼಈ ಚಿಲುಮೆ ಸಂಸ್ಥೆ ಬಗ್ಗೆ ಯಾರು,  ಏನು ಆದೇಶ ಕೊಟ್ಡಿದ್ದಾರೆ ಎನ್ನುವುದು ಬಹಳ ಸ್ಪಷ್ಟವಾಗಿ ಸತ್ಯಾಸತ್ಯತೆ ಹೊರಗೆ ಬರಲಿ. ಜಾಗೃತಿ ಮೂಡಿಸಬೇಕೆಂದು ನಾವು ಆದೇಶ ಕೊಟ್ಟಿದ್ದೀವಿ ಮತ್ತು ಯಾವುದೇ ರಾಜಕೀಯ ಪಕ್ಷದ ಜೊತೆ ಸಂಬಂಧ ಇರಬಾರದು ಅಂತ ಹೇಳಿದ್ದೆವು. ಆದರೆ ಅವರು ಹೇಳಿರುವ ಆದೇಶದ ಪ್ರಕಾರ ಎಲೆಕ್ಷನ್‌ ಕಮೀಷನ್‌ ಜವಬ್ದಾರಿಯನ್ನು ಪ್ರೈವೇಟ್‌ಗೆ ಕೊಟ್ಟಿರುತ್ತಾರೆ. ಅದನ್ನೇ ತನಿಖೆ ಮಾಡಿ ಅಂತ ಹೇಳುವುದು ಅಕ್ಷಮ್ಯ ಅಪರಾಧವಾಗಿದೆʼ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ʼವೋಟರ್‌ ಡಿವಿಷನ್‌ ಅಲ್ಲಿ ಸೇರಿಸುವುದು ತೆಗೆಯುವುದು ಎಲ್ಲವೂ ಎಲೆಕ್ಷನ್‌ ಕಮೀಷನ್‌ ಮಾಡುತ್ತದೆ. ಆ ಕೆಲಸ ನಾವು ಮಾಡುವುದು ಅಲ್ಲವೇ ಅಲ್ಲ. ಸುಮ್ಮನೆ ರಾಜಕೀಯ ಪ್ರಯುಕ್ತವಾದ ಆರೋಪವನ್ನು ಮಾಡುತ್ತಿದ್ದಾರೆʼ ಎಂದು ತಿಳಿಸಿದರು.

ʼನಕಲಿ ಮತದಾರರನ್ನು ತೆಗೆದರೆ ಮಾತ್ರ ನ್ಯಾಯ ಸಮ್ಮತ ಸಿಗುವುದು, ಎಲ್ಲಿಂದಲೋ ಬಂದವರನ್ನು ಎಲ್ಲೋ ಸೇರಿಸಿ ಗೆಲ್ಲುವ ಇಷ್ಟು ದಿನದ ತಂತ್ರ ಬಂದ್‌ ಆಗುತ್ತದೆʼ ಎಂದು ಮಾತನಾಡಿದ್ದಾರೆ.

ಬೊಮ್ಮಾಯಿ ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರೆಯರು ಅರ್ಹರೇ? : ಸಿದ್ದರಾಮಯ್ಯ
ಬೆಂಗಳೂರು: ಅಮೇರಿಕಾದಲ್ಲಿ ವಾಟರ್‌ ಗೇಟ್‌ ಪ್ರಕರಣ ಎಂದು ಕರೆಯುತ್ತಿದ್ದೆವು, ಅದೇ ರೀತಿ ಇದು ವೋಟರ್‌ ಗೇಟ್‌ ಪ್ರಕರಣ ಆಗಿದೆ. ಜಗತ್ತಿನಲ್ಲಿ ಇಂಥಾ ಪ್ರಕರಣಗಳು ನಡೆಯುವುದು ಬಹಳ ಅಪರೂಪ, ನಮ್ಮ ರಾಜ್ಯದಲ್ಲಿ ನಡೆದಿದೆ. ಈ ಹಗರಣದಲ್ಲಿ ನೇರವಾಗಿ ಮುಖ್ಯಮಂತ್ರಿಗಳು ಷಾಮೀಲಾಗಿದ್ದಾರೆ. ಬೊಮ್ಮಾಯಿಯವರೇ ಪ್ರಮುಖ ಅಪರಾಧಿಯಾಗಿದ್ದಾರೆ ಎಂದು ವಿಪಕ್ಷನಾಯಕ ಸಿದ್ಧರಾಮಯ್ಯನವರು ಶನಿವಾರದಂದು ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದಾರೆ.

ಶನಿವಾರದಂದು ಮತಪಟ್ಟಿ ಪರಿಷ್ಕರಣೆ ಅಕ್ರಮದ ಕುರಿತು ಹಮ್ಮಿಕೊಂಡಿದ್ದ ಜಂಟಿಪತ್ರಿಕಾಗೋಟಿ ಆಗಿರುವ ಅಕ್ರಮಗಳ ಕುರಿತು ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರು, ಮಾಡಿರುವ ಅಕ್ರಮಗಳನ್ನು ಮುಂದಿಟ್ಟುಕೊಂಟು ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿ ಸ್ಥಾನದಲ್ಲಿರಲು ನೈತಿಕತೆ ಇದೆಯಾ ಎಂದು ಪ್ರಶ್ನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯನವರು, ʼಅಮೇರಿಕಾದಲ್ಲಿ ವಾಟರ್‌ ಗೇಟ್‌ ಪ್ರಕರಣ ಎಂದು ಕರೆಯುತ್ತಿದ್ದೆವು, ಅದೇ ರೀತಿ ಇದು ವೋಟರ್‌ ಗೇಟ್‌ ಪ್ರಕರಣ ಆಗಿದೆ. ಜಗತ್ತಿನಲ್ಲಿ ಇಂಥಾ ಪ್ರಕರಣಗಳು ನಡೆಯುವುದು ಬಹಳ ಅಪರೂಪ, ನಮ್ಮ ರಾಜ್ಯದಲ್ಲಿ ನಡೆದಿದೆ. ಈ ಹಗರಣದಲ್ಲಿ ನೇರವಾಗಿ ಮುಖ್ಯಮಂತ್ರಿಗಳು ಷಾಮೀಲಾಗಿದ್ದಾರೆ. ಅವರೇ ಪ್ರಮುಖ ಅಪರಾಧಿಯಾಗಿದ್ದಾರೆ. ಜನರ ಮತದಾನದ ಹಕ್ಕನ್ನು ಸರ್ಕಾರ ದುರುಪಯೋಗ ಮಾಡಿಕೊಂಡಿರುವುದು ಒಂದು ಗಂಭೀರ ಅಪರಾಧ. ಚುನಾವಣಾ ಆಯೋಗ ಒಂದು ಸಂವಿಧಾನಬದ್ಧವಾದ ಸಂಸ್ಥೆ, ಇದು ನ್ಯಾಯಯುತವಾಗಿ ಮತ್ತು ನಿಷ್ಪಕ್ಷಪಾತವಾಗಿ ಚುನಾವಣೆಯನ್ನು ನಡೆಸಬೇಕು. ಚುನಾವಣೆಯಲ್ಲಿ ಅವ್ಯವಹಾರಗಳು ನಡೆದರೆ ಅದು ಪ್ರಜಾ ಪ್ರತಿನಿಧಿಕ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆ ಪ್ರಕಾರ ಶಿಕ್ಷಾರ್ಹ ಅಪರಾಧʼ ಎಂದು ಹೇಳಿದ್ದಾರೆ

ʼಈ ಹಗರಣದಲ್ಲಿ ಅಬ್ಬೆಪಾರಿಗಳ ಮೇಲೆ ಮೊಕದ್ದಮೆ ದಾಖಲು ಮಾಡಿಕೊಂಡು ಬಂಧಿಸಿದರೆ ಅದರಿಂದ ಉಪಯೋಗ ಇಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಬೆಂಗಳೂರು ನಗರದ ಉಸ್ತುವಾರಿ ಸಚಿವರು. ಅವರೇ ರಾಜ್ಯದ ಜನರಿಗೆ ಉತ್ತರ ಕೊಡಬೇಕು, ಅವರು ನನಗೆ ಮತ್ತು ಈ ಹಗರಣಕ್ಕೆ ಸಂಬಂಧ ಇಲ್ಲ ಎಂದು ಹೇಳಲು ಬರಲ್ಲ. ಈಗ ಬೊಮ್ಮಾಯಿ ಅವರು ನಮ್ಮ ಆರೋಪಕ್ಕೆ ಮತ್ತೆ ಸುಳ್ಳು ಉತ್ತರಗಳನ್ನು ನೀಡಿದ್ದಾರೆ. ಎಲ್ಲದಕ್ಕೂ ಹಿಂದಿನ ಸರ್ಕಾರ ಮಾಡಿಲ್ವಾ? ಎಂದು ಕೇಳುತ್ತಾರೆ, ಆಗ ಬೊಮ್ಮಾಯಿ ಅವರು ವಿರೋಧ ಪಕ್ಷದಲ್ಲಿದ್ದು ಮಾತನಾಡದೆ ಸುಮ್ಮನಿದ್ದಿದ್ದು ಏಕೆ? ನಮ್ಮ ಸರ್ಕಾರದ ವಿರುದ್ಧ ಬಂದ ಎಲ್ಲಾ ಆರೋಪಗಳ ಬಗ್ಗೆ ಸಿಬಿಐ ತನಿಖೆಗೆ ವಹಿಸಿದ್ದೆ, ಆಗ ಕೇಂದ್ರದಲ್ಲಿ ನಮ್ಮ ಪಕ್ಷ ಅಧಿಕಾರದಲ್ಲೂ ಇರಲಿಲ್ಲ. 2008 ರಿಂದ 2013ರ ವರೆಗೆ ಯಡಿಯೂರಪ್ಪ, ಸದಾನಂದ ಗೌಡರು ಮತ್ತು ಜಗದೀಶ್‌ ಶೆಟ್ಟರ್‌ ಅವರು ಮುಖ್ಯಮಂತ್ರಿಯಾಗಿದ್ದಾಗ ನಾವು ವಿರೋಧ ಪಕ್ಷವಾಗಿ ಕೆಲವು ಪ್ರಕರಣಗಳನ್ನು ಸಿಬಿಐ ಗೆ ವಹಿಸುವಂತೆ ಒತ್ತಾಯ ಮಾಡಿದ್ದಕ್ಕೆ ಸಿಬಿಐ ಅನ್ನು ಕಾಂಗ್ರೆಸ್‌ ಬ್ಯೂರೋ ಆಫ್‌ ಇನ್ವೆಸ್ಟಿಗೇಷನ್‌ ಎಂದು ಲೇವಡಿ ಮಾಡುತ್ತಿದ್ದರು. ಬಸವರಾಜ ಬೊಮ್ಮಾಯಿ ಅವರು ಒಂದು ತಪ್ಪನ್ನು ಮುಚ್ಚಿಕೊಳ್ಳಲು ನೂರು ಸುಳ್ಳುಗಳನ್ನು ಹೇಳುತ್ತಿದ್ದಾರೆʼ ಎಂದು ಕಿಡಿಕಾರಿದ್ದಾರೆ.

ಈ ಬಗ್ಗೆ ಈಗಾಗಲೇ ನಾವು ಪೊಲೀಸರಿಗೆ ದೂರು ನೀಡಿದ್ದೇವೆ. ಕೇಂದ್ರ ಚುನಾವಣಾ ಆಯೋಗದ ರಾಜ್ಯ ಮುಖ್ಯ ಚುನಾವಣಾಧಿಕಾರಿ ಅವರಿಗೂ ದೂರು ನೀಡಿದ್ದೇವೆ. ನಾನು ಅವರ ಬಳಿ ಹೀಗೆ ಲಕ್ಷಾಂತರ ಜನ ಮತದಾರರನ್ನು ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದೀರಿ. ಇದಕ್ಕೆ ಕಾರಣ ಯಾರು? ಬಿಬಿಎಂಪಿ ಮಾಡಿರುವ ಬೂತ್‌ ಲೆವೆಲ್‌ ಆಫಿಸರ್‌ ಗಳು ಯಾರೂ ಕೂಡ ಸರ್ಕಾರಿ ಅಧಿಕಾರಿಗಳಲ್ಲ. ಇವರು ಕಾನೂನಿಗೆ ವಿರುದ್ಧವಾಗಿ ಪರಿಷ್ಕರಣೆ ಮಾಡಿದ್ದಾರೆ. ಕೃಷ್ಣಪ್ಪ ರವಿಕುಮಾರ್‌ ಅವರ ಚಿಲುಮೆ ಸಂಸ್ಥೆಯ ಮೇಲೆ ಈ ವರೆಗೆ ಕೇಸ್‌ ದಾಖಲಿಸಿ, ಅವರ ಬಂಧನ ಮಾಡಿಲ್ಲ ಏಕೆ? ಕಚೇರಿ ಸಿಬ್ಬಂದಿಗಳನ್ನು ಬಂಧಿಸಿಲ್ಲ ಏಕೆ? ಬಿಬಿಎಂಪಿ ಕಮಿಷನರ್‌ ಅವರ ಬಂಧನವಾಗಿಲ್ಲ ಏಕೆ? ರಾಜ್ಯ ಮುಖ್ಯಚುನಾವಣಾಧಿಕಾರಿ ಅವರು ಜಂಟಿ ಆಯುಕ್ತರ ಮೂಲಕ ತನಿಖೆ ಮಾಡಿಸುತ್ತೇನೆ ಎನ್ನುತ್ತಿದ್ದಾರೆ. ಓರ್ವ ಜಂಟಿ ಆಯುಕ್ತ ತನಗಿಂತ ಮೇಲಿನ ಅಧಿಕಾರದಲ್ಲಿ ಇರುವ ಮುಖ್ಯಮಂತ್ರಿಗಳ ಮೇಲೆ ತನಿಖೆ ಮಾಡಿ ಶಿಕ್ಷೆ ಕೊಡೋಕೆ ಆಗುತ್ತದಾ? ಇವರ ಹೇಳಿಕೆ ಎಷ್ಟು ಹಾಸ್ಯಾಸ್ಪದವಾಗಿದೆ ಅಲ್ಲವೇ? ಎಂದು ಪ್ರಶ್ನೆ ಮಾಡಿದ್ದಾರೆ.

ʼನಾವು ರಾಜ್ಯ ಹೈಕೋರ್ಟ್‌ ನ ಮುಖ್ಯ ನ್ಯಾಯಮೂರ್ತಿಗಳ ಮೇಲುಸ್ತುವಾರಿಯಲ್ಲಿ ಒಂದು ನ್ಯಾಯಾಂಗ ಸಮಿತಿ ರಚನೆ ಮಾಡಿ, ಅದರ ಮೂಲಕ ತನಿಖೆ ನಡೆಸಿ ಎಂದು ಒತ್ತಾಯ ಮಾಡಿದ್ದೇವೆ. ಆದರೆ ಬೊಮ್ಮಾಯಿ ಅವರು ಇದು ಆಧಾರ ರಹಿತ ಆರೋಪ, ಇದಕ್ಕೂ ತಮಗೂ ಸಂಬಂಧ ಇಲ್ಲ ಎನ್ನುತ್ತಾರೆ. ಇವು ಆಧಾರ ರಹಿತ ಆರೋಪಗಳಾಗಿದ್ದರೆ ಕೆಲವರ ಬಂಧನ ಯಾಕೆ ಆಗಿದೆ? ಮತ ಪಟ್ಟಿ ಪರಿಷ್ಕರಣೆಗೆ ನೀಡಿದ್ದ ಅನುಮತಿಯನ್ನು ರದ್ದು ಮಾಡಿದ್ದು ಯಾಕೆ? ಇಲ್ಲಿ ಸ್ಪಷ್ಟವಾಗಿ ಕಾನೂನಿನ ಉಲ್ಲಂಘನೆಯಾಗಿದೆ. ಇಷ್ಟೆಲ್ಲಾ ಆದಮೇಲೆ ಅವರು ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರೆಯಲು ಅರ್ಹರೇ? ಬಸವರಾಜ ಬೊಮ್ಮಾಯಿ ಅವರಿಗೆ ಕಾನೂನಿನ ಮೇಲೆ ಗೌರವ ಇದ್ದರೆ ತಕ್ಷಣ ರಾಜೀನಾಮೆ ನೀಡಬೇಕು. ಹಗರಣಗಳ ಮೇಲೆ ಹಗರಣ ಮಾಡಿ ಬಚಾವಾಗುತ್ತೇವೆ ಎಂದು ಬೊಮ್ಮಾಯಿ ಅವರು ಅಂದುಕೊಂಡಿದ್ದರೆ ಅದು ಸಾಧ್ಯವಿಲ್ಲ ಎಂದು ಕಿಡಿಕಾರಿದ್ದಾರೆ.

ನಾವು ನೀಡಿರುವ ದೂರಿನಲ್ಲಿ ಮುಖ್ಯಮಂತ್ರಿಗಳು ಹಾಗೂ ಬಿಬಿಎಂಪಿ ಆಯುಕ್ತರ ವಿರುದ್ಧ ದೂರು ದಾಖಲಿಸಿ ಬಂಧಿಸುವಂತೆ ಒತ್ತಾಯ ಮಾಡಿದ್ದೇವೆ. ನಮ್ಮ ಪಕ್ಷದ ಹಲವು ಶಾಸಕರು ಇಂದು ಬಂದು ತಮ್ಮ ಕ್ಷೇತ್ರದಲ್ಲಿ ಯಾವ ರೀತಿ ಅನ್ಯಾಯ ಆಗಿದೆ ಎಂದು ಹೇಳಿದ್ದಾರೆ. ಇದಕ್ಕಿಂತ ಬೇರೆ ಸಾಕ್ಷಿ ಬೇಕೆ? ಎಂದು ಕೇಳಿದ್ದಾರೆ.

ಮಾಧ್ಯಮ ಮಿತ್ರರು ಮೂರು ತಿಂಗಳ ಕಾಲ ಕಷ್ಟಪಟ್ಟು ಶ್ರಮ ಹಾಕಿ ಈ ಹಗರಣವನ್ನು ಹೊರಗೆಡವಿದ್ದಾರೆ. ಈ ಹಗರಣದಲ್ಲಿ ಇನ್ನಷ್ಟು ಸಾಕ್ಷಿಗಳನ್ನು ನಾವು ಸಂಗ್ರಹ ಮಾಡುತ್ತಿದ್ದೇವೆ. ಇದು ಚಿಕ್ಕ ಹಗರಣ ಅಲ್ಲ, ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದೆ. ಯಾರಾದರೂ ಸಾವಿರಾರು ಜನರಿಗೆ ಸಂಬಳ ನೀಡಿ ಉಚಿತವಾಗಿ ಮತದಾರರ ಪಟ್ಟಿ ಪರಿಷ್ಕರಣೆ ಮಾಡಲು ಸಾಧ್ಯವೇ? ಬಿಜೆಪಿಯವರು ಚುನಾವಣೆಯಲ್ಲಿ ಸೋಲುವ ಭಯದಿಂದ ಈ ರೀತಿ ವಾಮ ಮಾರ್ಗ ಹಿಡಿದ್ದಿದ್ದಾರೆ. ಆದರೂ ಇಂಥಾ ಷಡ್ಯಂತ್ರಗಳನ್ನು ಎದುರಿಸಿ ನಾವು ಗೆಲ್ಲುತ್ತಿದ್ದೇವೆ. ಮುಂದೆಯೂ ಗೆಲ್ಲುತ್ತೇವೆ. ಆದರೆ ಜನರಿಗೆ ಸತ್ಯ ಗೊತ್ತಾಗಬೇಕು ಮತ್ತು ಚುನಾವಣಾ ಆಯೋಗ ಮತ್ತು ವ್ಯವಸ್ಥೆಯ ಬಗ್ಗೆ ನಂಬಿಕೆ ಬರಬೇಕು ಎಂಬ ಕಾರಣಕ್ಕಾಗಿ ಈ ಹಗರಣದಲ್ಲಿ ಭಾಗಿಯಾದವರೆಲ್ಲರೂ ಹೊರಬರಬೇಕು ಎಂದು ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿಗಳು ರಾಜೀನಾಮೆ ನೀಡಬೇಕು ಎಂಬುದು ನಮ್ಮ ಒತ್ತಾಯ. ಈ ಹಗರಣದಲ್ಲಿ ಮುಖ್ಯಮಂತ್ರಿಯೇ ಕಿಂಗ್‌ ಪಿನ್. ಮುಖ್ಯಮಂತ್ರಿ ಆದವರು ಯಾವ ಹಗರಣವನ್ನು ಬೇಕಾದರೂ ಮಾಡಬಹುದಾ? ಬೆಂಗಳೂರು ಉಸ್ತುವಾರಿ ಸಚಿವರಾಗಿದ್ದುಕೊಂಡು ಇಂಥದ್ದೊಂದು ಅಕ್ರಮಕ್ಕೆ ಕಾರಣವಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ತಮ್ಮ ಹುದ್ದೆಯಲ್ಲಿ ಮುಂದುವರೆಯುವ ನೈತಿಕತೆ ಇರುತ್ತದಾ? ಎಂದು ಪ್ರಶ್ನಿಸಿದ್ದಾರೆ.

ಚುನಾವಣಾ ಆಯೋಗಕ್ಕೆ ದೂರು ನೀಡಿ, ನ್ಯಾಯಾಂಗ ತನಿಖೆಗೆ ನೀವೆ ಒಪ್ಪಿಸಬಹುದು ಎಂದು ಅವರಿಗೆ ಒತ್ತಾಯ ಮಾಡಿದ್ದೇವೆ. ಅದಕ್ಕವರು ನಾನು ಕೇಂದ್ರ ಚುನಾವಣಾ ಆಯೋಗದವರ ಜೊತೆ ಮಾತನಾಡಿ ಮತ್ತೆ ನಿಮ್ಮನ್ನು ಸಂಪರ್ಕ ಮಾಡುತ್ತೇನೆ ಎಂದಿದ್ದಾರೆ. ರಾಜ್ಯ ಚುನಾವಣಾ ಆಯೋಗ ನಮ್ಮ ಮನವಿಗೆ ಸೂಕ್ತ ಸ್ಪಂದನೆ ನೀಡದಿದ್ದರೆ ಮುಂದೆ ಕೇಂದ್ರ ಚುನಾವಣಾ ಆಯೋಗದ ಬಳಿ ಹೋಗುತ್ತೇವೆ ಎಂದು ಸಿದ್ದರಾಮಯ್ಯನವರು ಎಚ್ಚರಿಕೆ ನೀಡಿ ಮಾತನಾಡಿದ್ದಾರೆ.

ಅನಾಮಧೇಯ ಸ್ವಾತಂತ್ರ್ಯ ಹೋರಾಟಗಾರರ ಹೆಸರಿನಲ್ಲಿ ಸ್ಮಾರಕ ನಿರ್ಮಾಣ: ಬೊಮ್ಮಾಯಿ ಘೋಷಣೆ
ಮಂಗಳೂರು: ಬೆಂಗಳೂರಿನ ಪ್ರಮುಖ ಸ್ಥಳದಲ್ಲಿ ಅನಾಮಧೇಯ ಸ್ವಾತಂತ್ರ್ಯ ಹೋರಾಟಗಾರರ ಹೆಸರನ್ನೊಳಗೊಂಡ ಸ್ಮಾರಕವನ್ನು ನಿರ್ಮಿಸುವುದಾಗಿ ಶನಿವಾರದಂದು ಮಂಗಳೂರಿನ ಕಾರ್ಯಕ್ರಮದಲ್ಲಿ ಘೋಷಿಸಿದ್ದಾರೆ.

ನವೆಂಬರ್‌ 19, ಶುಕ್ರವಾರದಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರತಿಮೆ ಅನಾವರಣಗೊಳಿಸಲು ಮಂಗಳೂರಿಗೆ ತೆರಳಿದ್ದು, ಬಾವುಟಗುಡ್ಡೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಕೆದಂಬಾಡಿ ರಾಮಯ್ಯ ಗೌಡ ಅವರ ಪ್ರತಿಮೆಯನ್ನು ಅನಾವರಣಗೊಳಿಸಿದ್ದಾರೆ. ನಂತರ ಕಾರ್ಯಕ್ರಮದಲ್ಲಿ ಮಾತನಾಡಿದ್ದು, ಬೆಂಗಳೂರಿನ ಪ್ರಮುಖ ಸ್ಥಳದಲ್ಲಿ ಅನಾಮಧೇಯ ಸ್ವಾತಂತ್ರ್ಯ ಹೋರಾಟಗಾರರ ಹೆಸರನ್ನೊಳಗೊಂಡ ಸ್ಮಾರಕವನ್ನು ನಿರ್ಮಿಸುವುದಾಗಿ ಹೇಳಿದ್ದಾರೆ.

ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿಯವರು, ʼದೇಶವಿದೇಶಗಳಲ್ಲಿ ಇಂತಹ ಸ್ಮಾರಕಗಳಿಗೆ ಬಹಳ ಮಹತ್ವವಿದೆ. ಸ್ಮಾರಕಗಳು ನಮ್ಮ ಇತಿಹಾಸ, ಸಂಸ್ಕೃತಿ-ಪರಂಪರೆಗಳನ್ನು ಬಿಂಬಿಸುವ ಜೊತೆಗೆ ನಮ್ಮ ಅಸ್ಮಿತೆಯನ್ನೂ ಬಿಂಬಿಸುತ್ತದೆ. ವಿವಿಧತೆಯಲ್ಲಿ ಏಕತೆಯನ್ನು ಕಾಣುವ ಭಾರತೀಯತೆ, ಇದಕ್ಕೆ ಪೂರಕವಾದ ಸರ್ಕಾರದ ನೀತಿಗಳು ಭಾರತದ ಅಸ್ಮಿತೆಯನ್ನು ಗಟ್ಟಿಗೊಳಿಸುತ್ತದೆ. ಭಾರತದ ಸ್ವಾತಂತ್ರ್ಯಕ್ಕಾಗಿ ಜೀವತೆತ್ತ ಅನೇಕ ಅನಾಮಧೇಯ ಹೋರಾಟಗಾರರ ಬಗ್ಗೆ ನಮ್ಮ ಯುವಜನತೆಗೆ , ದೇಶವಿದೇಶಗಳಿಗೆ ಅರಿವು ಮೂಡಿಸಬೇಕು. ಜಪಾನ್ ನಲ್ಲಿ ಸುಭಾಷ್ ಚಂದ್ರ ಬೋಸ್ ಪ್ರತಿಮೆ, ಅಮೆರಿಕಾದಲ್ಲಿ ಮಹಾತ್ಮಗಾಂದಿ ಸ್ಮಾರಕ ನಮಗೆ ಸ್ಪೂರ್ತಿ ನೀಡುತ್ತಿದೆ ಎಂದರು.

ʼಕೆದಂಬಾಡಿ ರಾಮಯ್ಯ ಗೌಡರ ಸ್ಮಾರಕವನ್ನು ಬೆಂಗಳೂರಿನಲ್ಲಿಯೂ ನಿರ್ಮಿಸಲಾಗುವುದು. ಅವರ ಜೀವನ ಚರಿತ್ರೆಯನ್ನು ಪಠ್ಯಪುಸ್ತಕದಲ್ಲಿಯೂ ಅಳವಡಿಸಲಾಗುವುದು. ಮಂಗಳೂರು ಭಾಗದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಹೆಸರುಗಳನ್ನು ನಾಮಕರಣ ಮಾಡುವ ಬಗ್ಗೆ ಸೂಕ್ತ ನಿರ್ಣಯಗಳನ್ನು ಶೀಘ್ರದಲ್ಲಿ ತೆಗೆದುಕೊಳ್ಳಲಾಗುವುದು. ಲೋಕಮಾನ್ಯ ತಿಲಕರು, ಕಾಲಪಾನಿ ಶಿಕ್ಷೆ ಅನುಭವಿಸಿದ ಸಾರ್ವರ್ಕರ್ ರವರು, ಸುಭಾಷ್ ಚಂದ್ರಬೋಸ್, ಭಗತ್ ಸಿಂಗ್, ಚಂದ್ರಶೇಖರ ಆಜಾದ್ರವರ ತ್ಯಾಗಬಲಿದಾನಗಳನ್ನು ಮರೆಯಬಾರದು. ಇದನ್ನು ಮರೆಯುವವರು ನಿಜ ದೇಶಭಕ್ತರಾಗಲು ಸಾಧ್ಯವಿಲ್ಲʼ ಎಂದು ಬೊಮ್ಮಾಯಿ ಮಾತನಾಡಿದರು.

ʼಇತ್ತೀಚೆಗೆ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಪ್ರಗತಿ ಪ್ರತಿಮೆಯನ್ನು ಲೋಕಾರ್ಪಣೆ ಮಾಡಲಾಯಿತು. ಕೆಂಪೇಗೌಡರು ಬೆಂಗಳೂರಿನ ನಿರ್ಮಾತೃಗಳಾಗಿದ್ದು, ಕೋಟೆಗಳು, ಕೆರೆಗಳು, ಮಾರುಕಟ್ಟೆ, ಆಧುನಿಕ ನಗರ ನಿರ್ಮಿಸಿದರು. ಆರ್ಥಿಕ ಬೆಳವಣಿಗೆಗೆ ಪೂರಕವಾದ ನಗರದ ಮಾದರಿಯನ್ನು ಅಭಿವೃದ್ಧಿಪಡಿಸಿದವರು. ವಿಜಯನಗರ ಸಾಮ್ರಾಜ್ಯದ ಸುವರ್ಣ ಯುಗವನ್ನು ಬೆಂಗಳೂರಿನಲ್ಲಿ ಸೃಷ್ಟಿಸಿದರು. ಆಧುನಿಕ ಕರ್ನಾಟಕ ನಿರ್ಮಾಣಕ್ಕೆ ಪ್ರೇರಣೆಯಾಗಿದ್ದಾರೆʼ ಎಂದು ಮಾತನಾಡಿದರು.

ಈ ಪ್ರತಿಮೆ ಅನಾವರಣ ಸಮಾರಂಭದಲ್ಲಿ, ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಮೀನುಗಾರಿಕೆ ಮತ್ತು ಬಂದರು ಸಚಿವ ಎಸ್. ಅಂಗಾರ, ಐಟಿ, ಬಿಟಿ, ಉನ್ನತ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ,  ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಡಿ.ವಿ. ಸದಾನಂದ ಗೌಡ, ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಯ ಶಾಸಕರು, ಜಿಲ್ಲೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಉತ್ತರ ಕರ್ನಾಟಕ ಮಂದಿನಾ ಯಾವಾಗ ಉದ್ಧಾರ ಮಾಡ್ತೀರಾ? ಬೊಮ್ಮಾಯಿ ವಿರುದ್ಧ ಆಕ್ರೋಶ
ಬೆಂಗಳೂರು: ಉತ್ತರ ಕರ್ನಾಟಕದ ಮಂದಿನಾ ಯಾವಾಗ ಉದ್ಧಾರ ಮಾಡ್ತೀರಾ ಎಂದು ಸೆಮಿಕಂಡಕ್ಟರ್‌ ಉದ್ದಿಮೆಗೆ ಭರವಸೆ ಕೊಟ್ಟ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಉತ್ತರ ಕರ್ನಾಟಕದ ಮಂದಿ ಕಿಡಿಕಾರಿದ್ದಾರೆ.

ಈ ಹಿಂದೆಯೇ, ಮೈಸೂರಿನಲ್ಲಿ ಕೈಗಾರಿಕೋದ್ಯಮ ಬೆಳವಣಿಗೆಗೆ ಬೇಕಾದ ಸಕಲ ಸೌಕರ್ಯಗಳನ್ನು ಕಲ್ಪಿಸಲು ಸರ್ಕಾರ ಸಿದ್ದವಿದ್ದು, ಮುಂದಿನ ಎರಡಿ ವರ್ಷಗಳಲ್ಲಿ ಹೊಸದಾಗಿ 500 ಸ್ಟಾರ್ಟ್‌ ಅಪ್‌ ಕಾರ್ಯಾರಂಭ ಮಾಡಲಿವಿ. ಮೈಸೂರಿನಲ್ಲಿ ಸ್ಥಾಪನೆಯಾಗುತ್ತಿರುವ ಸೆಮಿಕಂಡಕ್ಟರ್‌ ಫ್ಯಾಭ್‌ ವಲಯಕ್ಕೆ 200 ಎಕರೆ ಭೂಮಿ ನೀಡಲಾಗಿದ್ದು, ಜೊತೆಗೆ ಹೆಚ್ಚುವರಿಯಾಗಿ 250 ಎಕರೆ ಭೂಮಿ ಮೀಸಲಿಡಲಾಗಿದೆ. ರಾಜ್ಯದಲ್ಲಿ ಚಿಪ್‌ ತಯಾರಿಕೆ ಆಗಬೇಕೆಂದು ಸರ್ಕಾರದ ಸಂಕಲ್ಪವಾಗಿದೆ ಎಂದೆಲ್ಲಾ ಚರ್ಚೆಯಾಗುತ್ತಿತ್ತು.

ಈ ಕುರಿತು ಟ್ಚೀಟ್‌ ಮಾಡಿರುವ ರಾಜ್ಯ ಬಿಜೆಪಿ ಘಟಕ, ʼರಾಜ್ಯದ ಐಟಿಬಿಟಿ ಕ್ಷೇತ್ರಕ್ಕೆ ಮತ್ತೊಂದು ಗರಿಮೆ. ದೇಶದಲ್ಲೇ ಪ್ರಪ್ರಥಮ ಬಾರಿಗೆ ಕರ್ನಾಟಕದಲ್ಲಿ ಸೆಮಿಕಂಡಕ್ಟರ್‌ ಉದ್ದಿಮೆ ನಿರ್ಮಾಣವಾಗುವ ಭರವಸೆಯನ್ನು ಬಸವರಾಜ ಬೊಮ್ಮಾಯಿಯವರು ನೀಡಿದ್ದಾರೆ. $3 ಬಿಲಿಯನ್ ವೆಚ್ಚದ ಫ್ಯಾಭ್‌ ಫೆಬ್ರವರಿಯಲ್ಲಿ ಸ್ಥಾಪನೆಗೊಳ್ಳುವ ಸಾಧ್ಯತೆಯಿದ್ದು, ಮೈಸೂರಿನಲ್ಲಿ ಬೃಹತ್‌ ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಗರಿಗೆದರಿದೆʼ ಎಂದು ಹೇಳಿದ್ದಾರೆ.

ಈ ಹಿನ್ನೆಲೆಯಲ್ಲಿ ಇದಕ್ಕೆ ಪ್ರತಿಕ್ರಿಯಿಸಿರುವ ಟ್ವೀಟಿಗರು, ʼಎಲ್ಲಾ ಯೋಜನೆಗಳನ್ನು ಮೈಸೂರು ಕರ್ನಾಟಕ ಭಾಗಗಳಲ್ಲೇ ಅಭಿವೃದ್ಧಿ ಮಾಡ್ತಾ ಉತ್ತರ ಕರ್ನಾಟಕವನ್ನು ಮರೆತು ಹೋಗಿದ್ದೀರಾ. ಇಲ್ಲಿನ ಎಷ್ಟೋ ಯುವಕರಿಗೆ ಕೆಲಸ ಕೊಡಿಸುವ ಯೋಜನೆಯನ್ನು ಮಾಡಿ ಎಂದು ಕಿಡಿಕಾರಿದ್ದಾರೆ.

ಮೈಸೂರಿನಲ್ಲಿ ಅಭಿವೃದ್ಧಿ ಮಾಡುತ್ತಿರುವ ಹಾಗೆ ನಮ್ಮ ಉತ್ತರ ಕರ್ನಾಟಕವನ್ನು ಯಾವಾಗ ಉದ್ಧಾರ ಮಾಡ್ತೀರಾ? ಇಲ್ಲ ಅಂದ್ರೆ ಉತ್ತರ ಕರ್ನಾಟಕದ ಹೆಸರು ಹೇಳಿಕೊಂಡು ನೀವು ಉದ್ಧಾರ ಆಗ್ತೀದಿರಾ ಅಷ್ಟೇ ಎಂದು ಉತ್ತರ ಕರ್ನಾಟಕದ ಮಂದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪತ್ರಕರ್ತರಿಗೆ ಲಕ್ಷಗಟ್ಟಲೆ ದುಡ್ಡು: ಸಿಎಂ ಕಚೇರಿಗೆ ಪತ್ರ ಬರೆದ ಪತ್ರಿಕಾ ಸಂಸ್ಥೆ
ಬೆಂಗಳೂರು: ಪತ್ರಕರ್ತರಿಗೆ ದೀಪಾವಳಿ ಗಿಫ್ಟ್‌ ನೆಪದಲ್ಲಿ ತಲಾ 2.5 ಲಕ್ಷ ರುಪಾಯಿ ನಗದು ನೀಡಿದ ಕ್ರಮವನ್ನು ಖಂಡಿಸಿ ಕನ್ನಡದ ಪ್ರತಿಷ್ಠಿತ ಪತ್ರಿಕಾ ಸಂಸ್ಥೆಯೊಂದು ಸಿಎಂ ಕಚೇರಿಗೆ ಪತ್ರ ಬರೆದಿದ್ದು, ಅಸಮಾಧಾನ ವ್ಯಕ್ತಪಡಿಸಿದೆ.

ಈ ಕುರಿತ ಮಾಹಿತಿ ʻಪೀಪಲ್‌ ಮೀಡಿಯಾʼಗೆ ಲಭ್ಯವಾಗಿದ್ದು, ಕನ್ನಡದ ವಿಶ್ವಾಸಾರ್ಹ ಪತ್ರಿಕೆಯೊಂದರ ಮುಖ್ಯಸ್ಥರು ಬರೆದ ಪತ್ರಕ್ಕೆ ಸಿಎಂ ಕಚೇರಿಯೂ ಪ್ರತಿಕ್ರಿಯಿಸಿದ್ದು, ಆಗಿರುವ ತಪ್ಪಿಗೆ ವಿಷಾದ ವ್ಯಕ್ತಪಡಿಸಿದೆ ಎಂದು ತಿಳಿದುಬಂದಿದೆ.

ದೀಪಾವಳಿ ಸಂದರ್ಭಕ್ಕೆ ಆಯ್ದ ಕೆಲ ಪತ್ರಕರ್ತರಿಗೆ ಮುಖ್ಯಮಂತ್ರಿಗಳ ಕಚೇರಿಯಿಂದ ಸಿಹಿ ತಿಂಡಿಗಳ ಗಿಫ್ಟ್‌ ಪ್ಯಾಕ್‌ ಒಂದನ್ನು ನೀಡಲಾಗಿತ್ತು. ಗಿಫ್ಟ್‌ ಪ್ಯಾಕ್‌ ತೆರೆದ ಪತ್ರಕರ್ತರಿಗೆ ಅಚ್ಚರಿ ಕಾದಿದ್ದು, ಪ್ರತಿ ಗಿಫ್ಟ್‌ ಪ್ಯಾಕ್‌ನಲ್ಲೂ 2.5 ಲಕ್ಷ ರುಪಾಯಿ ನಗದು ಇಡಲಾಗಿತ್ತು.

ವಿಶ್ವಾಸಾರ್ಹ ಮಾಧ್ಯಮ ಸಂಸ್ಥೆಯ ಕನ್ನಡ ಮತ್ತು ಇಂಗ್ಲಿಷ್‌ ಪತ್ರಿಕೆಗಳ ವರದಿಗಾರರಿಗೂ ಈ ಗಿಫ್ಟ್‌ ಬಾಕ್ಸ್‌ ಕೊಡಲಾಗಿದ್ದು, ಕೂಡಲೇ ಈ ವರದಿಗಾರರು ಹಣವನ್ನು ಹಿಂದಿರುಗಿಸಿ ತಮ್ಮ ಸಂಸ್ಥೆಯ ಮುಖ್ಯಸ್ಥರ ಗಮನಕ್ಕೆ ಈ ವಿಷಯವನ್ನು ತಂದಿದ್ದರು. ಈ ಹಿನ್ನೆಲೆಯಲ್ಲಿ ಸಂಸ್ಥೆಯ ಮುಖ್ಯಸ್ಥರು ಸಿಎಂ ಕಚೇರಿಗೆ ಪತ್ರ ಬರೆದು ತಮ್ಮ ಅಸಮಾಧಾನ, ಆಕ್ಷೇಪವನ್ನು ವ್ಯಕ್ತಪಡಿಸಿದ್ದಾರೆ.

ಈ ನಡುವೆ ಸಚಿವರೊಬ್ಬರು ಹಲವು ಪತ್ರಕರ್ತರಿಗೆ ದೀಪಾವಳಿ ಪ್ರಯುಕ್ತ ಚಿನ್ನದ ಕಾಯ್ನ್‌ ಗಳನ್ನು ಗಿಫ್ಟ್‌ ನೀಡಿದ್ದಾರೆ ಎಂಬ ಮಾಹಿತಿಗಳು ಮಾಧ್ಯಮ ವಲಯದಲ್ಲಿ ಹರಿದಾಡುತ್ತಿದೆ.

ಈ ಎಲ್ಲ ಬೆಳವಣಿಗೆಗಳ ಕುರಿತು ಹಿರಿಯ ಪತ್ರಕರ್ತರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಈ ಕುರಿತು ಸರಿಯಾದ ತನಿಖೆಯಾಗಲಿ, ಭ್ರಷ್ಟ ಪತ್ರಕರ್ತರಿಂದಾಗಿ ಪ್ರಾಮಾಣಿಕ ಪತ್ರಕರ್ತರೂ ತಲೆ ಎತ್ತಿ ಓಡಾಡಲು ಆಗುತ್ತಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ : ಪತ್ರಕರ್ತರಿಗೆ ಝಣಝಣಝಣ ಕಾಂಚಾಣ ಕೊಟ್ಟ ಸಿಎಂ ಕಚೇರಿ. ದೀಪಾವಳಿ ಸಿಹಿ ತಿಂಡಿ ಇದ್ದ ಗಿಫ್ಟ್ ಪ್ಯಾಕ್ ನಲ್ಲಿ 2.5 ಲಕ್ಷ ರುಪಾಯಿ ನೋಡಿ ಬೆರಗಾದ ಪತ್ರಕರ್ತರು 😱

ಪತ್ರಕರ್ತರಿಗೆ ಹಣ ಹಂಚಿಕೆ: ಲೋಕಾಯುಕ್ತ ತನಿಖೆಗೆ ಹಿರಿಯ ಪತ್ರಕರ್ತರ ಆಗ್ರಹ