Bhp – Peepal Media

ಹುಬ್ಬಳ್ಳಿ ಗಲಭೆ ಪ್ರಕರಣದ ಆರೋಪಿ ಶ್ರೀಕಾಂತ್ ಪೂಜಾರಿಗೆ ಜಾಮೀನು ಮಂಜೂರು
ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 16 ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪಿಯಾಗಿ ಗುರುತಿಸಿಕೊಂಡಿರುವ ಕರಸೇವಕ ಶ್ರೀಕಾಂತ್ ಪೂಜಾರಿಗೆ ಜಾಮೀನು ಮಂಜೂರು ಮಾಡಿ ಹುಬ್ಬಳ್ಳಿಯ 1 ನೇ ಹೆಚ್ಚುವರಿ ಕೋರ್ಟ್ ಆದೇಶ ಹೊರಡಿಸಿದೆ.

ರಾಮ ಮಂದಿರ ನಿರ್ಮಾಣಕ್ಕೆ ಆಗ್ರಹಿಸಿ 1992ರಲ್ಲಿ ದೇಶಾದ್ಯಂತ ನಡೆದಿದ್ದ ಗಲಭೆಗಳ ವೇಳೆ ಹುಬ್ಬಳ್ಳಿಯಲ್ಲಿ ಸಂಭವಿಸಿದ್ದ ಕೋಮುಗಲಭೆ ಪ್ರಕರಣದಲ್ಲಿ ಆರೋಪಿಯಾಗಿರುವ ಶ್ರೀಕಾಂತ ಪೂಜಾರಿ ವಿರುದ್ಧದ ಜಾಮೀನು ಅರ್ಜಿಯ ಆದೇಶವನ್ನು ಹುಬ್ಬಳ್ಳಿ ನ್ಯಾಯಾಲಯವು ಶುಕ್ರವಾರ ಪ್ರಕಟಿಸಿದೆ.

1992 ರಲ್ಲಿ ರಾಮಮಂದಿರ ಹೋರಾಟ ಸಂಬಂಧ ಹುಬ್ಬಳ್ಳಿಯಲ್ಲಿ ನಡೆದಿದ್ದ ಗಲಾಟೆಯಲ್ಲಿ ಶ್ರೀಕಾಂತ್ ಪೂಜಾರಿ ಭಾಗಿಯಾಗಿದ್ದರು. ಈ ಹಿನ್ನೆಲೆ ಇತ್ತೀಚೆಗೆ ಅವರನ್ನು ಬಂಧಿಸಲಾಗಿತ್ತು . ಇದರಿಂದ ರಾಜ್ಯದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿತ್ತು.

ಶ್ರೀಕಾಂತ್ ಪೂಜಾರಿ ಬಂಧನ ವಿರೋಧಿಸಿ ಈಗಾಗಲೇ ಬಿಜೆಪಿ ರಾಜ್ಯದ ವಿವಿಧ ಕಡೆಗಳಲ್ಲಿ ಪ್ರತಿಭಟನೆ ನಡೆಸುತ್ತಿದೆ. ಸಧ್ಯ ಶ್ರೀಕಾಂತ್ ಪೂಜಾರಿ ಜಾಮೀನು ಮಂಜೂರು ಹಿನ್ನೆಲೆಯಲ್ಲಿ ಬಿಜೆಪಿ ತನ್ನ ಪ್ರತಿಭಟನೆ ಕೈಬಿಡುವ ಸಾಧ್ಯತೆ ಕಂಡುಬಂದಿದೆ.

ರಾಮಜನ್ಮಭೂಮಿ ಹೋರಾಟ ಪ್ರಕರಣದ ಮೂರನೇ ಆರೋಪಿ ಶ್ರೀಕಾಂತ್ ಪೂಜಾರಿ ಎಂಬಾತನನ್ನು ಹುಬಳ್ಳಿ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. 1995 ಡಿಸೆಂಬರ್ 5ರಂದು ಹುಬ್ಬಳ್ಳಿ ನಗರದಲ್ಲಿ ಕರಸೇವೆ ವೇಳೆ ಗಲಭೆ ಸಂಭವಿಸಿ ಒಂದು ಮಳಿಗೆಗೆ ಬೆಂಕಿ ಹಚ್ಚಲಾಗಿತ್ತು. ಪ್ರಕರಣ ಸಂಬಂಧ 9 ಜನರ ವಿರುದ್ಧ ಹುಬ್ಬಳ್ಳಿ ಶಹರ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿತ್ತು. ಇದೀಗ ಈ ಪ್ರಕರಣಕ್ಕೆ ಮತ್ತೆ ಮರುಜೀವ ಪಡೆದಿದೆ.