BJP Ticket scam – Peepal Media

ಟಿಕೆಟ್ ವಂಚನೆ ಪ್ರಕರಣ : ಚೈತ್ರ ಸೇರಿದಂತೆ 9 ಮಂದಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ
ಬಿಜೆಪಿ ಟಿಕೆಟ್ ಗೆ ಆಮಿಷವೊಡ್ಡಿ 5 ಕೋಟಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಂದಾಪುರ ಮೂಲದ ಚೈತ್ರ ಸೇರಿದಂತೆ 9 ಮಂದಿ ಆರೋಪಿಗಳ ವಿರುದ್ಧ 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಸಿಸಿಬಿ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

ಸಿಸಿಬಿ ಅಧಿಕಾರಿಗಳು 75 ಮಂದಿ ಸಾಕ್ಷಿಗಳ ಹೇಳಿಕೆ ದಾಖಲಿಸಿಕೊಂಡು ಸುಮಾರು 800 ಪುಟಗಳ ಚಾರ್ಜ್​ಶೀಟ್ ಸಲ್ಲಿಸಿದ್ದಾರೆ. ಡಿಜಿಟಲ್ ಸಾಕ್ಷಿಗಳು, ಬ್ಯಾಂಕ್ ಸ್ಟೇಟ್ ಮೆಂಟ್​ಗಳು, ಸಾಂದರ್ಭಿಕ ಸಾಕ್ಷಿಗಳು, ಸ್ವಾಮಿಜಿ ಕಾರು ಚಾಲಕ ಹಣ ಇಟ್ಟು ಹೋಗಿದ್ದ ಬಗ್ಗೆ ಸೇರಿದಂತೆ ಸ್ಪಾಟ್ ಮಹಜರ್ ನಡೆಸಿ ಹಣ ಸೀಜ್ ಮಾಡಿದ ಸ್ಥಳಗಳ ಬಗ್ಗೆ ಸಿಸಿಬಿ ಪೊಲೀಸರು ಚಾರ್ಜ್​​ಶೀಟ್​ನಲ್ಲಿ ಉಲ್ಲೇಖಿಸಿದ್ದಾರೆ.

ಅಲ್ಲದೇ ಚೈತ್ರಾ ವಂಚನೆ ಪ್ರಕರಣದಲ್ಲಿ‌ ಈವರೆಗೆ ಬರೋಬ್ಬರಿ 4 ಕೋಟಿ 11 ಲಕ್ಷ ರೂಪಾಯಿ ವಸೂಲಿ ಮಾಡಲಾಗಿದೆ. ಪ್ರಮುಖ ಆರೋಪಿ ಚೈತ್ರಾ, ಶ್ರೀಕಾಂತ್, ಗಗನ್ ಕಡೂರ್, ಹಾಲಶ್ರೀ, ಧನರಾಜ್ ಸೇರಿದಂತೆ 9 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ.

ದೂರುದಾರ ಗೋವಿಂದ ಬಾಬು ಪೂಜಾರಿ ಬಳಿ ಎಲ್ಲಾ ಆಡಿಯೋ, ವಿಡಿಯೋವನ್ನು ಸಿಸಿಬಿ ಪೊಲೀಸರು ಪಡೆದಿದ್ದಾರೆ. ಗೋವಿಂದ ಬಾಬು ಪೂಜಾರಿ ಬಳಿಯೇ ಡೀಲ್ ಸಂಬಂಧ 10 ವಿಡಿಯೋ ಪಡೆಯಲಾಗಿದೆ. ಆರೋಪಿಗಳ ಮೊಬೈಲ್ ಗಳ ಡೇಟಾ ರಿಟ್ರೀವ್ ವರದಿ ಕೂಡ ಉಲ್ಲೇಖಿಸಲಾಗಿದೆ.

ಬಿಜೆಪಿ ಟಿಕೆಟ್ ವಂಚನೆ ಪ್ರಕರಣ ; ವಿಚಾರಣೆಯಲ್ಲಿ ಕೇಳಿ ಬರುತ್ತಿದೆ ಘಟಾನುಘಟಿಗಳ ಹೆಸರು !
ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ವಂಚಿಸಿದ ಆರೋಪದ ಮೇಲೆ ಪ್ರಕರಣದ ಎಂಟನೇ ಆರೋಪಿ ಪ್ರಸಾದ್ ಬೈಂದೂರನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈಗಾಗಲೇ ಕೆಲವು ವಿಚಾರಣೆ ಎದುರಿಸಿರುವ ಪ್ರಸಾದ್ ಬೈಂದೂರಿಗೆ ನೋಟಿಸ್ ಜಾರಿ ಮಾಡಿ ವಶಕ್ಕೆ ಪಡೆದಿದ್ದಾರೆ.

ಈ ನಡುವೆ ಅಭಿನವ ಹಾಲಶ್ರೀ ಸ್ವಾಮಿಯ ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣ ದಾಖಲಾಗಿ ಇಲ್ಲಿಯವರೆಗೆ ಹಾಲಶ್ರೀ ಸ್ವಾಮಿ ತಲೆಮರೆಸಿಕೊಂಡಿದ್ದು, ಸ್ವಾಮಿ ಸಿಕ್ಕ ನಂತರ ಪ್ರಕರಣ ಬೇರೆಯದೇ ರೀತಿಯಾಗಿ ತಿರುಗುವ ಸಾಧ್ಯತೆ ಇದೆ ಎನ್ನಲಾಗಿದೆ. ಹಾಗೆಯೇ ಪ್ರಕರಣದಲ್ಲಿ ಬಿಜೆಪಿ ಘಟಾನುಘಟಿ ಮುಖಂಡರು ಜೊತೆಗೆ ಬಿಜೆಪಿಯ ಬಾಡಿಗೆ ಭಾಷಣಕಾರನೊಬ್ಬ ಭಾಗಿ ಆಗಿದ್ದಾನೆ ಎಂಬ ಮಾತು ಕೇಳಿ ಬರುತ್ತಿದೆ.

ಸಧ್ಯ ಅನಾರೋಗ್ಯ ನೆಪದಲ್ಲಿ ಆಸ್ಪತ್ರೆಗೆ ಸೇರಿರುವ ಚೈತ್ರ ಕುಂದಾಪುರ ಆರೋಗ್ಯ ಸ್ಥಿರವಾಗಿದೆ. ಯಾವುದೇ ಮೂರ್ಛೆರೋಗ ಅವರನ್ನು ಭಾದಿಸಿಲ್ಲ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ವಿಚಾರಣೆ ತಪ್ಪಿಸಿಕೊಳ್ಳಲು ಸೋಪಿನ ನೊರೆ ಬಳಸಿಕೊಂಡು ಮೂರ್ಛೆರೋಗ ಬಂದಂತೆ ನಾಟಕ ಮಾಡಿರಬಹುದು. ಎಲ್ಲಾ ರೀತಿಯ ಚಿಕಿತ್ಸೆಯ ಪ್ರಕ್ರಿಯೆ ಮುಗಿದಿದೆ ಎಂದು ಆಸ್ಪತ್ರೆ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ಹಣಕಾಸಿನ ವ್ಯವಹಾರ, ಸಂಪರ್ಕಗಳಿಗೆ ಸಂಬಂಧಿಸಿದಂತೆ ಎರಡು ದಿನದ ಹಿಂದೆ ವಿಚಾರಣೆ ನಡೆಸಿ ಕಳುಹಿಸಿದ್ದ ಪ್ರಸಾದ್​ ಬೈಂದೂರನನ್ನು ಸಿಸಿಬಿ ಪೊಲೀಸರು ಮತ್ತೊಮ್ಮೆ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣಗಳಿಗೆ ಸಂಬಂಧಿಸಿದಂತೆ ಹೊಸ ಹೊಸ ವಿಚಾರಗಳು ಬೆಳಕಿಗೆ ಬರುತ್ತಿವೆ. ಈ ನಡುವೆ, ಚೈತ್ರಾ ಮತ್ತು ಪ್ರಸಾದ್ ಮಾತನಾಡಿರುವ ಆಡಿಯೋ ಬಹಿರಂಗವಾಗಿದೆ. ಈ ಸಂಭಾಷಣೆ ವೇಳೆ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರನ್ನು ಪ್ರಸಾದ್ ಚೈತ್ರಾಗೆ ಪರಿಚಯಿಸಿದ್ದಾನೆ. ಅಷ್ಟು ಮಾತ್ರವಲ್ಲದೆ, ಮಾಜಿ ಸಚಿವ ಸುನಿಲ್ ಕುಮಾರ್ ಹೆಸರು ಕೂಡ ಪ್ರಸ್ತಾಪವಾಗಿದೆ.