bommai – Peepal Media

ಯುಪಿಎಕ್ಕಿಂತಲೂ ಬಿಜೆಪಿ ಸರ್ಕಾರ ರಾಜ್ಯಕ್ಕೆ ಹೆಚ್ಚು ಅನುದಾನ ನೀಡುತ್ತಿದೆ: ಬೊಮ್ಮಾಯಿ
ಬೆಂಗಳೂರು: ಹಿಂದೆ ಯುಪಿಎ ಸರ್ಕಾರ ಇದ್ದಾಗ ರಾಜ್ಯಗಳಿಗೆ ಕೇವಲ ಶೇ 20 ರಷ್ಟು ಮಾತ್ರ ಅನುದಾನ ಬರುತ್ತಿತ್ತು. ಆದರೆ ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದ ಮೇಲೆ ರಾಜ್ಯಗಳಿಗೆ ಶೇ 42% ರಷ್ಟು ಅನುದಾನ ಬರುತ್ತಿದೆ. ಕಾಂಗ್ರೆಸ್ ನವರು ಕೇಂದ್ರದ ವಿರುದ್ದ ಅನಗತ್ಯ ಆರೋಪ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೂರಿದ್ದಾರೆ.

ವಿಧಾನಸಭೆ ಕಲಾಪದಲ್ಲಿ ಕೇಂದ್ರ ಸರಕಾರದ ವಿರುದ್ದ ಕಾಂಗ್ರೆಸ್ ಮಂಡಿಸಿರುವ ನಿರ್ಣಯದ ವಿರುದ್ಧ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರು ಕೇಂದ್ರ ಸರಕಾರದ ವಿರುದ್ದ ನಿರ್ಣಯ ಮಂಡಿಸಿ ವಿಧಾನಸಭೆಯ ಪಾವಿತ್ರ್ಯತೆಯನ್ನು ಹಾಳು ಮಾಡಿ ಸುಳ್ಳು ಹೇಳುವ ದಾಷ್ಟ್ಯ ತೋರಿಸಿದ್ದಾರೆ. ಕೇಂದ್ರದಿಂದ ಅನ್ಯಾಯವಾಗಿದೆ ಅಂತ ರಾಜ್ಯದ ಜನರ ದಾರಿ ತಪ್ಪಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಸ್ವಾತಂತ್ರ್ಯ ಬಂದಾಗಿನಿಂದ 55 ವರ್ಷ ದೇಶ ಆಳಿರುವ ಕಾಂಗ್ರೆಸ್ ಅವಧಿಯಲ್ಲಿ ಕಾಂಗ್ರೆಸ್ ಆಡಳಿತದಲ್ಲಿ 20% ರಷ್ಟು ಮಾತ್ರ ಇತ್ತು. ಆಗ ರಾಮಕೃಷ್ಣ ಹೆಗಡೆ ನೇತೃತ್ವದಲ್ಲಿ ದಕ್ಷಿಣ ಭಾರತದ ಅನೇಕ ನಾಯಕರು ಸೇರಿ ರಾಜ್ಯಗಳ ತೆರಿಗೆ ಹೆಚ್ಚಳ ಮಾಡುವಂತೆ ಹೋರಾಟ ಮಾಡಿದರು. ಆದರೆ, ಯುಪಿಎ ಅವಧಿಯಲ್ಲಿ ರಾಜ್ಯಗಳ ತೆರಿಗೆ ಅನುದಾನ ಹೆಚ್ಚಳ ಮಾಡಲು ನಿರಾಕರಿಸಿದ್ದರು‌. ನರೇಂದ್ರ ಮೋದಿಯವರು ಬಂದು ಕೆಲವೇ ವರ್ಷದಲ್ಲಿ ರಾಜ್ಯಗಳ ತೆರಿಗೆ ಪಾಲನ್ನು ಶೇ 32% ರಿಂದ‌ ಶೇ 42% ಕ್ಕೆ ಹೆಚ್ಚಳ‌ ಮಾಡಿದ್ದಾರೆ ಎಂದು ಹೇಳಿದರು.

ಕೇಂದ್ರದಿಂದ ರಾಜ್ಯಕ್ಕೆ ಕೇವಲ ಜಿಎಸ್ ಟಿ ಪರಿಹಾರ, ಅನುದಾನ ಅಷ್ಟೇ ಅಲ್ಲದೇ ಕೇಂದ್ರ ಪ್ರಾಯೋಜಿತ ಯೋಜನೆಗಳಿಗೆ ಅನುದಾನ ಬರುತ್ತದೆ. ಅಲ್ಲದೇ, ಕೇಂದ್ರ ಸರಕಾರ ಫಲಾನುಭವಿಗಳ ಅಕೌಂಟ್ ಗೆ ನೇರವಾಗಿ ಹಣ ಹಾಕುತ್ತದೆ. ರಾಜ್ಯ ಸರಕಾರ ಅದೆಲ್ಲವನ್ನು ಮುಚ್ಚಿಟ್ಟು ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಸುಳ್ಳು ಹೇಳುತ್ತಿದೆ. ಬೆಂಗಳೂರಿನ ಫೆರಿಪೆರಲ್ ರಿಂಗ್ ರೊಡ್ ಗೆ ಕೇಂದ್ರದಿಂದ ಈಗಲೂ ಹಣ ಬರುತ್ತದೆ. ಆದರೆ, ರಾಜ್ಯ ಸರಕಾರ ಯೋಜನೆ‌ ಆರಂಭಿಸಬೇಕು. ರಾಷ್ಟ್ರೀಯ ಹೆದ್ದಾರಿಗೆ ಸುಮಾರು 13 ಸಾವಿರ ಕೋಟಿ ರೂ. ಕೇಂದ್ರ ಸರಕಾರ ನೀಡಿದೆ. ರೈಲ್ವೆ ಯೋಜನೆಗಳಿಗೆ ಕೇಂದ್ರದ ಅನುದಾನ ಬಂದಿದೆ. ಪ್ರಧಾನಮಂತ್ರಿ ಅವಾಸ್ ಯೋಜನೆ, ಸ್ವಚ್ಚ ಭಾರತ್, ಆಯುಷ್ಮಾನ್ ಭಾರತ, ಅಮೃತ ನಗರ ಯೊಜನೆ ಅಡಿಯಲ್ಲಿ ರಾಜ್ಯಕ್ಕೆ ಹಣ ಬಂದಿದೆ ಎಂದು ಅವರು ಮಾಹಿತಿ ನೀಡಿದರು.

ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಬೇಡ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ
ಕರ್ನಾಟಕ ರಾಜ್ಯದಲ್ಲಿ ಹೊಸ ಶಿಕ್ಷಣ ಪದ್ಧತಿಯ ಜಾರಿ ಮುಂದುವರಿದಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದಲ್ಲಿ ನೂತನ ಶಿಕ್ಷಣ ಪದ್ಧತಿಯನ್ನು ರದ್ದುಪಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಈ ನಿರ್ಧಾರಕ್ಕೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡಬೇಡಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಲಹೆ ನೀಡಿದರು.

ವಿದ್ಯಾರ್ಥಿಗಳ ಭವಿಷ್ಯದ ಜೊತೆ ರಾಜಕೀಯ ಮಾಡಬೇಡಿ ಎಂದು ಸಲಹೆ ನೀಡಿದ ಅವರು. ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ‘‘ಶಿಕ್ಷಣ ನೀತಿಯಲ್ಲಿ ಸಣ್ಣಪುಟ್ಟ ಬದಲಾವಣೆ ಮಾಡಿದರೂ ಪರವಾಗಿಲ್ಲ, ಸಿಎಂ ಸಿದ್ದರಾಮಯ್ಯ ಒಂದೇ ಬಾರಿಗೆ ರದ್ದು ಮಾಡಿರುವುದು ಅರ್ಥಹೀನ… ಇದರಿಂದ ವಿದ್ಯಾರ್ಥಿಗಳ ಭವಿಷ್ಯಕ್ಕೆ ತೀವ್ರ ತೊಂದರೆಯಾಗಲಿದೆ” ಎಂದರು.

ಕಾಂಗ್ರೆಸ್ ಮಕ್ಕಳ ಬದುಕಿನೊಡನೆ ರಾಜಕೀಯ ಮಾಡಬಾರದು. ದೇಶದ ಹಲವು ಬುದ್ಧಿಜೀವಿಗಳ ಶ್ರಮದಿಂದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಚಿಸಲಾಗಿದೆ.. ಅದೊಂದು ಅದ್ಭುತ ಶೈಕ್ಷಣಿಕ ರಚನೆಯಾಗಿದ್ದು ಇದುವಿದ್ಯಾರ್ಥಿಗಳ ಆಸಕ್ತಿಗೆ ಅನುಗುಣವಾಗಿ ವಿಷಯಗಳನ್ನು ಆಯ್ಕೆ ಮಾಡಿಕೊಳ್ಳುವ ಸ್ವಾತಂತ್ರ್ಯ ನೀಡುತ್ತದೆ ಎಂದರು.

ಕರ್ನಾಟಕ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಮಾಡಿರುವ ಆರೋಪಗಳನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬಲವಾಗಿ ತಳ್ಳಿಹಾಕಿದ್ದಾರೆ. ಹೊಸ ಶಿಕ್ಷಣ ವ್ಯವಸ್ಥೆ ಕರ್ನಾಟಕದಲ್ಲಿ ಮಾತ್ರ ಏಕೆ ಜಾರಿಯಲ್ಲಿದೆ ಎಂದು ಪ್ರಶ್ನಿಸಿದ ಅವರು, ಬಿಜೆಪಿ ಆಡಳಿತವಿರುವ ಗುಜರಾತ್, ಹರಿಯಾಣ, ಉತ್ತರ ಪ್ರದೇಶ, ಮಧ್ಯಪ್ರದೇಶ ರಾಜ್ಯಗಳಲ್ಲಿ ಏಕೆ ಜಾರಿಯಾಗುತ್ತಿಲ್ಲ? ಎಂದು ಕೇಳಿದರು. ದಿವಂಗತ ರಾಜೀವ್ ಗಾಂಧಿ ಅವರ ಶಿಕ್ಷಣ ನೀತಿಯನ್ನು ಡಿಕೆ ಶಿವಕುಮಾರ್ ಶ್ಲಾಘಿಸಿದರು. ಪ್ರಾಥಮಿಕ ಶಿಕ್ಷಣ, ತಾಂತ್ರಿಕ ಹಾಗೂ ಉನ್ನತ ಶಿಕ್ಷಣದ ದೃಷ್ಟಿಯಿಂದ ಇದು ಅತ್ಯಂತ ಉತ್ತಮವಾಗಿದೆ ಎಂದು ಶ್ಲಾಘಿಸಿದರು. ಈ ಹಿನ್ನೆಲೆಯಲ್ಲಿ ಹೊಸದಾಗಿ ರೂಪಿಸಿರುವ ಹೊಸ ಶಿಕ್ಷಣ ವ್ಯವಸ್ಥೆಯನ್ನು ಜಾರಿಗೆ ತರುವ ಅಗತ್ಯವಿಲ್ಲ. ಎಂದು ಅವರು ಅಭಿಪ್ರಾಯಪಟ್ಟರು.

ನೆಹರೂ ಹುಟ್ಟುಹಬ್ಬಕ್ಕೆ ಶುಭಕೋರಿದ ಗಣ್ಯರು
ಬೆಂಗಳೂರು: ನವೆಂಬರ್‌ 14, ಇಂದು ಭಾರತದ ಮೊದಲ ಪ್ರಧಾನ ಮಂತ್ರಿಯಾಗಿದ್ದ ಪಂಡಿತ್‌ ಜವಾಹರ್‌ಲಾಲ್‌ ನೆಹರೂ ಅವರ ಜನ್ಮದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ರಾಜಕೀಯ ಗಣ್ಯರು ನೆಹರೂ ಅವರ ಭಾರತಕ್ಕೆ ಕೊಟ್ಟಿರುವ ಕೊಡುಗೆಯನ್ನು ಸ್ಮರಿಸಿದ್ದಾರೆ.

ಈ ವಿಶೇಷ ದಿನದ ಕುರಿತು ಟ್ವೀಟ್‌ ಮಾಡಿರುವ ಪ್ರಧಾನಮಂತ್ರಿ ನರೇಂದ್ರಮೋದಿಯವರು, ʼನಮ್ಮ ಭಾರತದ ಮಾಜಿ ಪ್ರಧಾನಿ ಪಂಡಿತ್‌ ಜವಾಹರ್‌ಲಾಲ್‌ ನೆಹರೂ ಜಿ ಅವರ ಜನ್ಮದಿನದಂದು ಅವರಿಗೆ ನಮನಗಳು. ದೇಶಕ್ಕೆ ನೆಹರೂ ಅವರು ನೀಡಿರುವ ಕೊಡುಗೆಯನ್ನು ನಾವೂ ಸಹ ಸ್ಮರಿಸುತ್ತೇವೆʼ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ʼದೇಶದ ಪ್ರಪ್ರಥಮ ಪ್ರಧಾನಮಂತ್ರಿ ಶ್ರೀ ಪಂಡಿತ್‌ ಜವಾಹರಲಾಲ್‌ ನೆಹರೂರವರ ಜನ್ಮದಿನದಂದು ಅವರಿಗೆ ಗೌರವ ಪೂರ್ವಕ ನಮನಗಳು. ಈ ದಿನ ಅವರನ್ನು ಸ್ಮರಿಸುತ್ತಾ, ನಾಡಿನ ಎಲ್ಲಾ ಮಕ್ಕಳಿಗೂ ಮಕ್ಕಳ ದಿನಾಚರಣೆಯ ಪ್ರೀತಿಪೂರ್ವಕ ಶುಭಾಷಯಗಳುʼ ಎಂದು ಟ್ವೀಟ್‌ ಮಾಡಿ ಶುಭ ಕೋರಿದ್ದಾರೆ.

ʼವೈಜ್ಞಾನಿಕ, ವೈಚಾರಿಕ ಮತ್ತು ಸೆಕ್ಯುಲರ್ ಚಿಂತನೆಯ ಮೂಲಕ ಸ್ವಾಭಿಮಾನಿ, ಸ್ವಾವಲಂಬಿ ಮತ್ತು‌ ಬಲಿಷ್ಠ ಭಾರತದ ನಿರ್ಮಾಣಕ್ಕೆ ಬುನಾದಿ ಹಾಕಿದ ಜವಾಹರ ಲಾಲ್ ನೆಹರೂ ಅವರಿಗೆ ಗೌರವದಿಂದ ವಂದಿಸುವೆʼ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಟ್ವೀಟ್‌ ಮಾಡಿ ಗೌರವ ಸೂಚಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಟ್ವೀಟ್‌ ಮಾಡಿ, ʼಭವ್ಯ ಭಾರತ ನಿರ್ಮಾಣದೆಡೆಗೆ ನಿರಂತರವಾಗಿ ಶ್ರಮಿಸಿದ ದೂರದರ್ಶಿ ನಾಯಕ, ಭಾರತದ ಮೊದಲ ಪ್ರಧಾನಿ, ಭಾರತ ರತ್ನ ದಿವಂಗತ ಪಂಡಿತ್ ಜವಾಹರ ಲಾಲ್ ನೆಹರು ಅವರ ಜಯಂತಿಯಂದು ಅನಂತ ನಮನಗಳು. ಅವರ ಗೌರವಾರ್ಥವಾಗಿ ಆಚರಿಸಲಾಗುವ ಮಕ್ಕಳ ದಿನಾಚರಣೆಯ ಶುಭಾಶಯಗಳುʼ ಎಂದು ಹೇಳಿದ್ದಾರೆ.

ಹೆಸರಿಗೆ ಮಾತ್ರ ವಿಶ್ವವಿದ್ಯಾಲಯಗಳು: ಉತ್ತರ ಕರ್ನಾಟಕಕ್ಕೆ ಘೋರ ಅನ್ಯಾಯ
ಕಳೆದ ಬಜೆಟ್ಟಿನಲ್ಲಿ ಏಳು ಹೊಸ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸುವುದಾಗಿ ಘೋಷಿಸಿದ್ದ ಸರಕಾರವು ಈಗ ವಿಚಿತ್ರ ಷರತ್ತುಗಳನ್ನು ಹಾಕುವ ಮೂಲಕ ಈ ಜಿಲ್ಲೆಗಳ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದೆ. ಈ ವಿವಿಗಳಿಗೆ ಯಾವುದೇ ಹೊಸ ಜಮೀನು ಮಂಜೂರು ಮಾಡದೆ, ಯಾವುದೇ ಹೊಸ ಸಿಬ್ಬಂದಿ ನೇಮಿಸದಂತೆ ಷರತ್ತಿನಲ್ಲಿ ತಿಳಿಸುವ ಮೂಲಕ ಉತ್ತರ ಕರ್ನಾಟಕ ಮತ್ತು ಕರ್ನಾಟಕ ಇತರ ಜಿಲ್ಲೆಗಳಿಗೆ ಘೋರ ಅನ್ಯಾಯವನ್ನು ಎಸಗಿದೆ.
ಉನ್ನತ ಶಿಕ್ಷಣ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಸಹಿ ಮಾಡಿರುವ ಕರ್ನಾಟಕ ಸರ್ಕಾರದ ನಡಾವಳಿಗಳ ಅಧಿಕೃತ ಆದೇಶ ಪೀಪಲ್ ಮೀಡಿಯಾಗೆ ಲಭ್ಯವಾಗಿದ್ದು, ಹಿಂದುಳಿದ ಜಿಲ್ಲೆಗಳಿಗೆ ವಿಶೇಷವಾಗಿ ಉತ್ತರ ಕರ್ನಾಟಕದ ನಾಲ್ಕು ಜಿಲ್ಲೆಗಳ ಜನರ ಕನಸಿಗೆ ತಣ್ಣೀರೆರಚಿರುವುದು ಸ್ಪಷ್ಟವಾಗುತ್ತದೆ.

ಪ್ರಸ್ತುತ ಹೊಸ ವಿವಿಗಳನ್ನು ಘೋಷಿಸಲಾಗಿರುವ ಏಳು ಜಿಲ್ಲೆಗಳಲ್ಲಿ, ನಾಲ್ಕು ಉತ್ತರ ಕರ್ನಾಟಕದವು. ಬಹುತೇಕ ಎಲ್ಲವೂ ಹಿಂದುಳಿದ ಜಿಲ್ಲೆಗಳು, (ಹಾಸನ ಹೊರತುಪಡಿಸಿ) ಕಳೆದ ಬಜೆಟ್ಟಿನಲ್ಲಿ ಈ ಜಿಲ್ಲೆಗಳಲ್ಲಿ ಹೊಸ ವಿಶ್ವವಿದ್ಯಾಲಯ ಸ್ಥಾಪಿಸುವುದಾಗಿ ಘೋಷಿಸಲಾಗಿತ್ತು. ಈಗ ಷರತ್ತುಗಳನ್ನು ನೋಡಿದರೆ, ಇರುವ ಸ್ನಾತಕೋತ್ತರ ಕೇಂದ್ರಗಳನ್ನೇ ವಿವಿಗಳೆಂದು ಘೋಷಿಸಿ ಕೈ ತೊಳೆದುಕೊಂಡಿದೆ ಸರ್ಕಾರ. ಹೊಸ ಕಟ್ಟಡವಾಗಲಿ, ಸಿಬ್ಬಂದಿಯಾಗಲಿ, ಭೂಮಿಯಾಗಲಿ ಮಂಜೂರಾಗದ ಇರುವ ವ್ಯವಸ್ಥೆಗೇ ಹೊಸ ಹೆಸರಿಟ್ಟು ವಿವಿ ಘೋಷಣೆಯೆಂದರೆ ಅದನ್ನು ಹೇಗೆ ಒಪ್ಪುವುದೆನ್ನುವುದು ಜನಸಾಮಾನ್ಯರ ಪ್ರಶ್ನೆಯಾಗಿದೆ.

ಸಾಂಪ್ರದಾಯಿಕ ವಿವಿಗಳಿಗಿಂತ ಭಿನ್ನವಾಗಿ “ತಂತ್ರಜ್ಞಾನದ ಗರಿಷ್ಠ ಬಳಕೆ”ಯೊಂದಿಗೆ ಹೆಚ್ಚುವರಿ ಮಾನವ ಸಂಪನ್ಮೂಲ ಬಳಸದೇ ಈ ವಿವಿಗಳನ್ನು ಅಸ್ತಿತ್ವಕ್ಕೆ ತರಲಾಗುತ್ತಿದೆಯಂತೆ! ಇದರ ಅರ್ಥವೇನು? ಈಗ ಕಾರ್ಯನಿರ್ವಹಿಸುತ್ತಿರುವ ವಿವಿಗಳು ತಂತ್ರಜ್ಞಾನ ಬಳಸಿಕೊಳ್ಳದೆ, ಮಾನವ ಸಂಪನ್ಮೂಲ ಪೋಲು ಮಾಡುತ್ತಿವೆಯೇ? ಹೊಸ ವಿವಿಗಳು ಗರಿಷ್ಠ ತಂತ್ರಜ್ಞಾನ ಬಳಸಿಕೊಳ್ಳಬಹುದಾದರೆ ಹಳೆಯ ವಿವಿಗಳು ಯಾಕೆ ಬಳಸಿಕೊಳ್ಳಲಾಗದು?

ಈ ಜಿಲ್ಲೆಗಳ ಜನರು ತಮ್ಮ ಜಿಲ್ಲೆಗೂ ವಿವಿ ಬಂತು ಎಂದು ಹರ್ಷಪಟ್ಟಿದ್ದರು. ಈಗ ಇರುವ ಸ್ನಾತಕೋತ್ತರ ಕೇಂದ್ರಕ್ಕೇ ಬೋರ್ಡು ಬದಲಾಯಿಸುತ್ತಿದೆ ಸರ್ಕಾರ‌. ಉಳಿದಿರುವುದು ಜಮೀನು, ಕಟ್ಟಡ ವರ್ಗಾವಣೆಯ ತಾಂತ್ರಿಕ ಕೆಲಸಗಳು ಮಾತ್ರ. ಇದನ್ನೇ ಹೊಸ ವಿಶ್ವ ವಿದ್ಯಾಲಯ ಸ್ಥಾಪನೆಯೆನ್ನುವುದಾದರೆ ಇದನ್ನು ಕೇವಲ ಗಿಮಿಕ್‌ ಎನ್ನದೆ ಬೇರೆ ಯಾವ ಹೆಸರಿನಿಂದ ಕರೆಯಲು ಸಾಧ್ಯ?

ವಿವಿಗಳ ಸ್ಥಾಪನೆಗೆ ಸಂಬಂಧಸೊದಂತೆ ಸರಕಾರವು ಒಟ್ಟು 12 ಷರತ್ತುಗಳನ್ನು ವಿಧಿಸಿದ್ದು, ಮೊದಲ ಮೂರು ಷರತ್ತುಗಳು ಈ‌ ಕೆಳಕಂಡಂತಿವೆ.

ನೂತನ 07 ವಿಶ್ವವಿದ್ಯಾಲಯಗಳು ಪ್ರಸ್ತುತ ಇರುವ ಸ್ನಾತಕೋತ್ತರ ಕೇಂದ್ರಗಳಲ್ಲಿಯೇ ಕಾರ್ಯನಿರ್ವಹಿಸತಕ್ಕದ್ದು,

ನೂತನ 07 ವಿಶ್ವವಿದ್ಯಾಲಯಗಳ ಸ್ಥಾಪನೆಗಾಗಿ ಯಾವುದೇ ಜಮೀನನ್ನು ಖರೀದಿಸುವಂತಿಲ್ಲ ಹಾಗೂ ಹೊಸ ಕಟ್ಟಡಗಳನ್ನು ನಿರ್ಮಿಸುವಂತಿಲ್ಲ.

ಈಗಾಗಲೇ ಮಾತ್ರ ವಿಶ್ವವಿದ್ಯಾಲಯಗಳಿಗೆ ಮಂಜೂರಾಗಿರುವ ಹುದ್ದೆಗಳಲ್ಲಿ ಅವಶ್ಯ ಹುದ್ದೆಗಳನ್ನು ಈ 07 ನೂತನ ವಿಶ್ವವಿದ್ಯಾಲಯಗಳಿಗೆ ಬಳಸಿಕೊಳ್ಳುವುದು ಹಾಗೂ ಯಾವುದೇ ಹೊಸ ಹುದ್ದೆಗಳನ್ನು ಸೃಜಿಸುವಂತಿಲ್ಲ. ಈ ಉದ್ದೇಶಕ್ಕಾಗಿ ಯಾವುದೇ ಹೊಸ ಹುದ್ದೆಗಳನ್ನು ಸೃಜಿಸುವ ಬಗ್ಗೆ ಪ್ರಸ್ತಾವನೆ ಸಲ್ಲಿಸುವಂತಿಲ್ಲ.

ಆದೇಶ ಪ್ರತಿಗಳು

ಜನರ ವಿರೋಧಿ ಕೆಲಸ ಮಾಡುತ್ತಿದೆ ಬಿಜೆಪಿ : ಮೋಹನ್‌ ದಾಸರಿ
ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದಲ್ಲಿ ನಡೆಯುತ್ತಿರುವ ಕೆಲವು ಘಟನೆಗಳನ್ನು ಮುಂದಿಟ್ಟುಕೊಂಡು, ʼಸರ್ಕಾರಕ್ಕೆ ಬಡಜನರು, ಹಿಂದುಳಿತ ವರ್ಗದವರು, ದಲಿತರ ಮೇಲೆ ಯಾವುದೇ ರೀತಿಯ ಕಾಳಜಿ ಇಲ್ಲʼ ಎಂದು ಬೆಂಗಳೂರಿನ ಆಮ್‌ ಆದ್ಮಿ ಅಧ್ಯಕ್ಷ ಮೋಹನ್‌ ದಾಸರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತುಮಕೂರಿನಲ್ಲಿ ಕೇವಲ ತಾಯಿ ಕಾರ್ಡ್‌, ಆಧಾರ್‌ ಕಾರ್ಡ್‌ ಇಲ್ಲ ಎಂದು ತಾಯಿ ಮತ್ತು ನವಜಾತ ಶಿಶುಗಳನ್ನು ಕೊಲೆಮಾಡಿದ್ದಾರೆ.ಚಿಕ್ಕಬಳ್ಳಾಪುರದ ಒಂದು ಹಳ್ಳಿಯಲ್ಲಿ ಈಗಲೂ ದೇವಸ್ಥಾನಗಳಿಗೆ ಪ್ರವೇಶವಿಲ್ಲ. ಅಸ್ಪೃಶ್ಯತೆ ಹೋಗಿಲ್ಲ. ಹೇರ್‌ಕಟ್‌   ಮಾಡಿಸಬೇಕು ಅಂದರೆ, ದೇವಾಲಯಗಳಿಗೆ ಪೂಜೆ ಸಲ್ಲಿಸಬೇಕಾದರೆ ಟೌನ್‌ಗಳಿಗೆ ಹೋಗುತ್ತಿದ್ದಾರೆ ಎಂದು ಅಸ್ಪೃಶ್ಯತೆಯ ಈಗಿನ ವಾಸ್ತವ್ಯದ ಬಗ್ಗೆ ಮಾತನಾಡಿದ್ದಾರೆ.

ʼಗುಡಿಬಂಡೆಯಲ್ಲಿಸರ್ಕಾರ ನಡೆಸುತ್ತಿರುವ ಕಲ್ಯಾಣ ಮಂಟಪದಲ್ಲಿ ಪರಿಶಿಷ್ಟ ಜಾತಿಯ ಜನರಿಗೆ ಯಾವುದೇ ಸ್ಥಾನ ಕೊಡದಿದ್ದರೆ ಹೇಗೆ. ಮೊನ್ನೆ ಬಂದ ಟೆಂಡರ್‌ನಲ್ಲಿ ಪರಿಶಿಷ್ಟ ಜಾತಿಯವರು ಎಂದು ಜಾತಿಯ ಹೆಸರನ್ನೂ ಬರೆದು ಚಪ್ಪಲಿಗಳನ್ನು ಕಾಯುವ ಕೆಲಸ ಎಂದು ಪ್ರಕಟಿಸಿರುವು, ಅವರಿಗೆ ಸಾಮಾಜಿಕ ಗೌರವವೇ ಇಲ್ಲದಂತೆ ಮಾಡಿದೆ. ಬಡಜನರ, ದಲಿತರ, ಸಾಮಾಜಿಕವಾಗಿ ಹಿಂದುಳಿದವರಿಗೆ ಯಾವುದೇ ರೀತಿಯ ಭದ್ರತೆ ಇಲ್ಲದಂತೆ ಆಗಿದೆ. ಪರಿಶಿಷ್ಟ ಜಾತಿಯವರು ದೇವರ ಮಕ್ಕಳು ಅಂತಿರಾ. ಇದೆನಾ ನೀವು ದೇವರ ಮಕ್ಕಳನ್ನು ನೋಡಿಕೊಳ್ಳುವ ರೀತಿ ?ʼ ಎಂದು ಸರ್ಕಾರಕ್ಕೆ ಪ್ರಶ್ನೆ ಮಾಡಿದ್ದಾರೆ.

ʼಬೊಮ್ಮಾಯಿಯವರಿಗೆ ಬಡಜನರ ಮೇಲೆ, ಶೋಷಿತ ವರ್ಗದವರ ಮೇಲೆ ಯಾವುದೇ ರೀತಿಯ ಕಾಳಜಿ ಇಲ್ಲʼ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನೂ ʼಆರೋಗ್ಯ ಮಂತ್ರಿ ಡಾ. ಕೆ ಸುಧಾಕರ್‌ ಅವರು ತುಮಕೂರಿನ ಘಟನೆಯ ನಂತರ ಸಿಬ್ಬಂದಿಗ ಸಸ್ಪೆಂಡ್‌ ಮಾಡುತ್ತೇನೆ ಅಂದಿದ್ರಿ. ಹಾಗೆ ನೋಡಿದರೆ ನೀವೇ ನೈತಿಕವಾಗಿ ಹೊಣೆ ಹೊತ್ತು ನಿಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ಯಾಕಂದರೆ ನೀವು ತುಮಕೂರು ಜಿಲ್ಲಾ ಆಸ್ಪತ್ರಗೂ ಹೋಗಿ ಭೇಟಿ ಮಾಡಿಲ್ಲ. ಸರ್ಕಾರದ ಜಿಲ್ಲಾ ಆಸ್ಪತ್ರೆಗಳು ಯಾವ ರೀತಿ ಕಾರ್ಯನಿರ್ವಹಿಸುತ್ತೆ ಅಂತ ನೀವು ಯಾವತ್ತು ನೋಡಿಲ್ಲ. ಇವತ್ತು ನಿಮ್ಮದೇ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿಯವರ ವಿರುದ್ಧ ಸರ್ಕಾರ ನಡೆಸುತ್ತಿರೋ ಕಲ್ಯಾಣ ಮಂಟಪ ಸಿಗುತ್ತಿಲ್ಲ. ತುಮಕೂರಿನ ಘಟನೆಯಿಂದ ಆರೋಗ್ಯ ಸಚಿವರಾಗಿ, ಚಿಕ್ಕಬಳ್ಳಾಪುರದಲ್ಲಿ ಜಿಲ್ಲಾ ಮಂತ್ರಿಗಳಾಗಿ ವಿಫಲರಾಗಿದ್ದೀರಾ ಎಂದು ಬೆಂಗಳೂರಿನ ಆಮ್‌ ಆದ್ಮಿ ಅಧ್ಯಕ್ಷ ಮೋಹನ್‌ ದಾಸರಿ ಡಾ. ಕೆ ಸುಧಾಕರ್‌ ಅವರ ವಿರುದ್ಧ ಕಿಡಿಕಾರಿದ್ದಾರೆ.

ಜನರ ವಿರೋಧಿ ಕೆಲಸ ಮಾಡ್ತಿರೋ ಬಿಜೆಪಿ ವಿರುದ್ಧ ಬೊಮ್ಮಯಿ ಸರ್ಕಾರದ ವಿರುದ್ಧ ಜನ ಯೋಚಿಸಬೇಕು ಎಂದು ಮೋಹನ್‌ ದಾಸರಿ ಇಂದು ತಮ್ಮ ಫೇಸ್‌ಬುಕ್‌ ಲೈವ್‌ ಬಂದು ಮಾತನಾಡಿದ್ಧಾರೆ.

ತುಮಕೂರಿನ ಘಟನೆಯ ಕುರಿತು ಟ್ವೀಟ್‌ ಮಾಡಿರುವ ಮೋಹನ್‌ ದಾಸರಿಯವರು, ʼಪ್ರಾಣ ಉಳಿಸಬೇಕಾದ ವೈದ್ಯರೇ ಇಲ್ಲವೆಂದು ದೂಡಿ ತಾಯಿ ಮಕ್ಕಳು ಮನೆಯಲ್ಲಿ ಸಾಯಬೇಕಾದ ಅಮಾನವೀಯ ಘಟನೆ ನಮ್ಮ ನಾಡಲ್ಲಿ ನಡೆದಿರುವುದು ದುರಾದೃಷ್ಟಕರ!́ʼ ಎಂದು ಹೇಳಿದ್ದಾರೆ.

ಬಂಡವಾಳ ಹೂಡಿಕೆಗಳ ಒಪ್ಫಂದಗಳು ಕಾರ್ಯಗತಗೊಳ್ಳಲು ಸರ್ಕಾರದ ಸಹಕಾರ: ಬೊಮ್ಮಾಯಿ
ಬೆಂಗಳೂರು : ಬೆಂಗಳೂರಿನ ಅರಮನೆ ಮೈದಾನದ ಆವರಣದಲ್ಲಿಆಯೋಜಿಸಲಾಗಿದ್ದ ʼಇನ್ವೆಸ್ಟ್ ಕರ್ನಾಟಕ ಬಿಲ್ಡ್ ಫಾರ್ ದ ವರ್ಲ್ಡ್ 2022ʼ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿ ಬಂಡವಾಳ ಹೂಡಿಕೆಗಳ ಒಪ್ಫಂದಗಳು ಕಾರ್ಯಗತಗೊಳ್ಳಲು ಸರ್ಕಾರ ಎಲ್ಲ ಸಹಕಾರ ನೀಡಲಿದೆ ಎಂದು ಮಾತನಾಡಿದರು.

ಇನ್ವೆಸ್ಟ್ ಕರ್ನಾಟಕ 2022ರ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಇಂದು ಸಹಿ ಹಾಕಲಾಗಿರುವ ಎಲ್ಲ ಬಂಡವಾಳ ಹೂಡಿಕೆಯ  ಒಪ್ಪಂದಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈ ಯೋಜನೆಗಳು ವಾಸ್ತವದಲ್ಲಿ ಕಾರ್ಯಗತಗೊಳ್ಳುವ ನಿಟ್ಟಿನಲ್ಲಿ ಸರ್ಕಾರ ಎಲ್ಲ ಅನುಮತಿಗಳನ್ನು ಹಾಗೂ ಸಹಕಾರವನ್ನು ನೀಡಲಿದೆ ಎಂದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಮೂಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ʼಕರ್ನಾಟಕದಲ್ಲಿ ಇನ್ನೂ ಹೆಚ್ಚಿನ ರೀತಿಯಲ್ಲಿ ಕೈಗಾರಿಕಾ ಸ್ನೇಹಿ ವಾತಾವರಣವನ್ನು ಸರ್ಕಾರ ನಿರ್ಮಿಸಲಿದೆ. ಗರಿಷ್ಟ ಮಟ್ಟದ, ದಕ್ಷ ಹಾಗೂ ಉತ್ತಮ ಗುಣಮಟ್ಟದ ಉತ್ಪಾದಕತೆ ರಾಜ್ಯದಲ್ಲಿ ಆಗಬೇಕಿದೆ. ಆರ್ಥಿಕತೆಯಲ್ಲಿ ಪರಿಣಾಮ ಮಾತ್ರ ಮಹತ್ವದ ಪಾತ್ರ ವಹಿಸುತ್ತದೆ. ಈ ಬಂಡವಾಳಗಳು ವಾಸ್ತವವಾಗಿ ಬದಲಾಯಿಸುವುದೇ ಸರ್ಕಾರದ ಮುಂದಿನ ಗುರಿಯಾಗಿದೆ. ಈಗ ಕಾಗದದ ಮೇಲಿರುವ ಬಂಡವಾಳ, ವಾಸ್ತವವಾಗಬೇಕು. 2.80 ಲಕ್ಷ ಕೋಟಿಗೂ ಹೆಚ್ಚಿನ ಬಂಡವಾಳ ಯೋಜನೆಗಳಿಗೆ ಈಗಾಗಲೇ ಅನುಮೋದನೆಯನ್ನು ಸರ್ಕಾರ ನೀಡಿದೆ. ಮುಂದಿನ ಮೂರು ತಿಂಗಳೊಳಗೆ ಮುಂದಿನ ಬಂಡವಾಳ ಹೂಡಿಕೆಯ ಯೋಜನೆಗಳ ಬಗ್ಗೆ ಸರ್ಕಾರ ಅನುಮೋದನೆ ನೀಡಲು ಕ್ರಮ ಕೈಗೊಳ್ಳಲಿದೆ. ರಾಜ್ಯಸರ್ಕಾರ ಬಂಡವಾಳ ಹೂಡಿಕೆಯ ಬಗ್ಗೆ ಬಹಳ ಗಂಭೀರವಾಗಿದ್ದು, ಹೂಡಿಕೆದಾರರೂ ಸಹ ಇದೇ ಗಂಭೀರತೆಯನ್ನು ಹೊಂದಬೇಕಾಗುತ್ತದೆʼ ಎಂದರು.

ʼಸಂಶೋಧನೆಗಳಿಗಾಗಿ ಆರ್ ಎಂಡ್ ಡಿ ನೀತಿಯನ್ನು ತಂದ ಮೊದಲ ರಾಜ್ಯ ಕರ್ನಾಟಕ. ಸಣ್ಣಗ್ಯಾರೇಜ್ ನಿಂದ ಹಿಡಿದು ದೊಡ್ಡ ಸಂಸ್ಥೆಯವರೆಗೆ ಸಂಶೋಧನೆಗೆ ಒತ್ತು ನೀಡಲಾಗುವುದು. ಐಐಟಿ, ಐಐಎಂ. ಐಐಎಸ್ ಸಿ, ಡಿಆರ್ ಡಿಓ ಸೇರಿದಂತೆ ಪ್ರಮುಖ ಸಂಸ್ಥೆಗಳು ರಾಜ್ಯದಲ್ಲಿವೆ. 400 ಅಂತರರಾಷ್ಟ್ರೀಯ ಗುಣಮಟ್ಟದ ಸಂಶೋಧನಾ ಕೇಂದ್ರಗಳು ಬೆಂಗಳೂರಿನಲ್ಲಿವೆ. ಪ್ರಪಂಚದಾದ್ಯಂತ ಸುಮಾರು 10 ಸಾವಿರ  ಇಂಜಿನಿಯರ್ಗಳು ಬೆಂಗಳೂರಿನಲ್ಲಿ ಸ್ಥಾಪಿತವಾಗಿರುವ ಕಂಪನಿಗಳಲ್ಲಿ ಸಂಶೋಧನಾ ಕಾರ್ಯ ಕೈಗೊಂಡಿದ್ದಾರೆ. ಜಿನೋಮ್ಯಾಟಿಕ್ಸ್ ನಿಂದ ಏರೋಸ್ಪೇಸ್ ವಲಯದಲ್ಲಿ ಸಂಶೋಧನೆಗಳು ನಡೆಯುತ್ತವೆ. ಕೇವಲ ಕರ್ನಾಟಕ, ಭಾರತ, ವಿಶ್ವವಲ್ಲದೇ, ಇಡೀ ಮಾನವ ಕುಲದ ಅಭಿವೃದ್ಧಿಯೇ  ಕರ್ನಾಟಕದಲ್ಲಾಗುತ್ತದೆ. ಕೇಂದ್ರ ನೀತಿ ಆಯೋಗದ ಸೂಚ್ಯಂಕದಂತೆ ಆವಿಷ್ಕಾರದಲ್ಲಿ ಕರ್ನಾಟಕ ಮೊದಲನೇ ಸ್ಥಾನದಲ್ಲಿದೆʼ ಎಂದು ತಿಳಿಸಿದರು.

ಮುಂದುವರೆದು ಮಾತನಾಡಿದ ಅವರು, ʼಕೋವಿಡ್ ನಂತರದ ಸಂದರ್ಭದಲ್ಲಿ ರಾಜ್ಯದ ಆರ್ಥಿಕ ಬೆಳವಣಿಗೆ ಮೊದಲಿಗಿಂತ ಹೆಚ್ಚಾಗಿತ್ತು. ಕಳೆದ ವರ್ಷದ  ಕೇವಲ ಆರು ತಿಂಗಳ ಒಳಗಾಗಿ ಆದಾಯದ ಗುರಿಗಿಂತ 13000 ಕೋಟಿ ರೂ. ಹೆಚ್ಚಿಗೆ ಆದಾಯ ಸಂಗ್ರಹಿಸಲಾಯಿತು. ಇದು ನಮ್ಮ ರಾಜ್ಯದ ಶಕ್ತಿಯಾಗಿದೆ. ಜಿಎಸ್ ಟಿ ಸಂಗ್ರಹದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಕರ್ನಾಟಕದಲ್ಲಿ ಸುಧಾರಿತ ನೀತಿಗಳು, ಕೈಗಾರಿಕಾ ಸ್ನೇಹಿ ಪರಿಸರವನ್ನು ನೀಡುತ್ತಿದೆ. ಪ್ರಗತಿಪರ ಚಿಂತನೆಯ ನೀತಿಗಳು ರಾಜ್ಯದಲ್ಲಿವೆ.ಈಸ್ ಆಫ್ ಡುಯಿಂಗ್ ಬಿಸೆನೆಸ್,ಕೈಗಾರಿಕಾ ಪ್ರೋತ್ಸಾಹಕ ನೀತಿ, ಸೆಮಿಕಂಡಕ್ಟರ್ ನೀತಿ, ಇವಿ ನೀತಿ, ಆರ್ ಎಂಡ್ ಡಿ ನೀತಿ ರಾಜ್ಯದಲ್ಲಿವೆʼ ಎಂದು ತಿಳಿಸಿದರು.

ʼಕರ್ನಾಟಕ ಈ ಕ್ಷೇತ್ರದಲ್ಲಿನ ಸ್ಪರ್ಧೆಗೆ ಸಿದ್ಧವಿದೆ. ಸ್ಪರ್ಧೆಗಳಿಂದ ದಕ್ಷತೆ ಹೆಚ್ಚುವ ಜೊತೆಗೆ ನಾವು ಸದಾ ಕಾರ್ಯೋನ್ಮುಖರಾಗಿರುತ್ತೇವೆ. ನಮ್ಮ ಸ್ಪರ್ಧೆ ವಿಶ್ವಮಟ್ಟದ್ದಾಗಿದೆ. ಕೋವಿಡ್ ನಂತರ ಆರ್ಥಿಕತೆಯಲ್ಲಿ ಮುಂದಿದ್ದ ವಿಶ್ವದ ಅನೇಕ ದೇಶಗಳು ಈಗ ಬೆಲೆ ಏರಿಕೆ ಸೇರಿದಂತೆ ಹಲವು ತೊಂದರೆಗಳನ್ನು ಅನುಭವಿಸುತ್ತಿವೆ. ಇಂತಹ ಸಂದರ್ಭದಲ್ಲಿ ವಿಶ್ವದ ಕಣ್ಣು ಭಾರತದಂತಹ ಅಭಿವೃದ್ಧಿಶೀಲ ರಾಷ್ಟ್ರಗಳ ಮೇಲೆ ನೆಟ್ಟಿದೆ. ಚೈನಾಪ್ಲಸ್ ಒನ್ ಗಮ್ಯಗಳು ಬಹಳ ಕಡಿಮೆಯಿದೆ. ಇದರಲ್ಲಿ ಪ್ರಮುಖವಾದ ಗಮ್ಯವೆಂದರೆ ಭಾರತ. ಆದ್ದರಿಂದಲೇ ಇಲ್ಲಿ ಸವಾಲುಗಳನ್ನು ಅವಕಾಶಗಳಾಗಿ ಪರಿವರ್ತಿಸಲಾಗುತ್ತಿದೆʼ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ ಗೆಲ್ಹೊತ್, ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಪ್ರಲ್ಹಾದ್ ಜೋಶಿ, ರಾಜೀವ್ ಚಂದ್ರಶೇಖರ್, ಪಿಯೂಷ್ ಗೋಯಲ್, ಸಚಿವರಾದ ಡಾ. ಅಶ್ವತ್ಥ್ ನಾರಾಯಣ, ಮುರುಗೇಶ್ ನಿರಾಣಿ, ಎಂಟಿಬಿ ನಾಗರಾಜ್, ಮೈಸೂರು ರಾಜ ವಂಶಸ್ಥರಾದ ರಾಣಿ ಪ್ರಮೋದಾದೇವಿ, ಉದ್ಯಮಿಗಳಾದ ಸಜ್ಜನ್ ಜಿಂದಾಲ್, ವಿಕ್ರಮ ಕಿರ್ಲೊಸ್ಕರ್, ರಿಷಬ್ ಪ್ರೇಮ್ ಜಿ , ಪ್ರತಿಕ್ ಅಗರವಾಲ್, ರಾಜನ್ ಮಿತ್ತಲ್, ಕರಣ್ ಅದಾನಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಹಾಗೂ ಮತ್ತಿತರರು ಹಾಜರಿದ್ದರು.

ನವೆಂಬರ್ 11 ರಂದು ಪ್ರಧಾನಿ ಭೇಟಿ: ಸಂಚಾರ ವ್ಯವಸ್ಥೆಗೆ ತೊಡಕಾಗದಂತೆ ಕ್ರಮಕ್ಕೆ ಸಿಎಂ ಸೂಚನೆ
ಬೆಂಗಳೂರು : ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 11 ರಂದು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ  ಟರ್ಮಿನಲ್ 2ರ ಉದ್ಘಾಟನೆ ಹಾಗೂ ವಿಮಾನ ನಿಲ್ದಾಣದ ಬಳಿ ನಿರ್ಮಿಸಲಾಗಿರುವ 108 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದು, ಈ ಕಾರ್ಯಕ್ರಮದ ಸಿದ್ಧತೆಗಳ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪೂರ್ವಭಾವಿ ಸಭೆ ನಡೆಸಿದರು.

ಈ ಕಾರ್ಯಕ್ರಮದಿಂದ ವಿಮಾನ ನಿಲ್ದಾಣದ ಪ್ರಯಾಣಿಕರಿಗೆ ಹಾಗೂ ಸಂಚಾರ ವ್ಯವಸ್ಥೆಗೆ ಯಾವುದೇ ತೊಡಕು ಆಗದಂತೆ ಕಾರ್ಯಕ್ರಮ ಆಯೋಜಿಸುವಂತೆ ಮುಖ್ಯಮಂತ್ರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಇದಕ್ಕೆ  ಪೂರ್ವಭಾವಿಯಾಗಿ ಎಲ್ಲ ಜಿಲ್ಲೆಗಳ ಪವಿತ್ರ ಮೃತ್ತಿಕೆಯನ್ನು ಸಂಗ್ರಹಿಸುವ ‘ಬನ್ನಿ ನಾಡ ಕಟ್ಟೋಣ’ಎಂಬ ಅಭಿಯಾನ ನಾಳೆಯಿಂದ ಪ್ರಾರಂಭವಾಗಲಿದೆ. ಈ ಅಭಿಯಾನ ಯಶಸ್ವಿಗೊಳಿಸಲು ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ನೇತೃತ್ವದಲ್ಲಿ, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಗ್ರಾಮಲೆಕ್ಕಾಧಿಕಾರಿಗಳು ಮತ್ತು ಪಿಡಿಓಗಳ ಸಹಕಾರ ಪಡೆಯುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಮೃತ್ತಿಕೆ ಸಂಗ್ರಹಿಸಲು 20 ವಾಹನಗಳನ್ನು ವ್ಯವಸ್ಥೆಗೊಳಿಸಲಾಗಿದ್ದು 15 ದಿನಗಳಲ್ಲಿ ಎಲ್ಲ ಜಿಲ್ಲೆಗಳಲ್ಲಿ ಸಂಚರಿಸಿ, ಮೃತ್ತಿಕೆ ಸಂಗ್ರಹಿಸಲಾಗುವುದು ಎಂದು ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಮಾಹಿತಿ ನೀಡಿದರು.

ಮೃತ್ತಿಕೆ ಸಂಗ್ರಹ ಅಭಿಯಾನವನ್ನು ಅರ್ಥಪೂರ್ಣವಾಗಿ ಹಾಗೂ ಯಶಸ್ವಿಯಾಗಿ ಆಯೋಜಿಸಲು ಮುಖ್ಯಮಂತ್ರಿಗಳು ಸೂಚಿಸಿದರು.

ಸಭೆಯಲ್ಲಿ ಸಚಿವರಾದ ಆರ್. ಅಶೋಕ, ಡಾ. ಸಿ.ಎನ್. ಅಶ್ವತ್ಥ ನಾರಾಯಣ, ಡಾ. ಕೆ. ಸುಧಾಕರ್, ಬಿ. ಎ. ಬಸವರಾಜ, ಕೆ. ಗೋಪಾಲಯ್ಯ, ಕೆ.ಸಿ. ನಾರಾಯಣ ಗೌಡ, ಒಕ್ಕಲಿಗರ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ. ಕೃಷ್ಣಪ್ಪ, ಕೆಂಪೇಗೌಡ ಪಾರಂಪರಿಕ ತಾಣ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಭಾಗವಹಿಸಿದ್ದರು.

ದೈವ ನರ್ತಕರಿಗೆ ಪ್ರತಿ ತಿಂಗಳು 2000ರೂ ಮಾಸಾಶನ : ರಾಜ್ಯ ಸರ್ಕಾರ
ಬೆಂಗಳೂರು : 60 ವರ್ಷ ಮೇಲ್ಪಟ್ಟ ದೈವ ನರ್ತಕರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಪ್ರತಿ ತಿಂಗಳು 2000ರೂ. ಮಾಸಾಶನ ನೀಡಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರಾಜ್ಯ ಸರ್ಕಾರ ನಿರ್ಧರಿಸಿದೆ.

ದೈವನರ್ತನ ಮಾಡುವ ಕಲಾವಿದರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು60 ವರ್ಷ ಮೇಲ್ಪಟ್ಟ ದೈವ ನರ್ತಕರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಪ್ರತಿ ತಿಂಗಳು  2000 ರೂ. ಮಾಸಾಶನ ನೀಡಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬೊಮ್ಮಾಯಿ ಸರ್ಕಾರ ನಿರ್ಧರಿಸಿದೆ.

ಈ ಕುರಿತು ಟ್ವೀಟ್‌ ಮಾಡಿರುವ ರಾಜ್ಯ ಬಿಜೆಪಿ, ʼ60 ವರ್ಷ ಮೇಲ್ಪಟ್ಟ ದೈವ ನರ್ತಕರಿಗೆ ಪ್ರತಿ ತಿಂಗಳು 2000 ರೂ. ಮಾಸಾಶನ ನೀಡಲು ಬೊಮ್ಮಾಯಿ ಸರ್ಕಾರ ನಿರ್ಧರಿಸಿದೆ. ಈ ಮೂಲಕ ನಮ್ಮ ಸಂಸ್ಕೃತಿ ಆಚರಣೆ ಹಾಗೂ ಧಾರ್ಮಿಕ ಹಿರಿಮೆಯನ್ನು ಸಾರುವ ದೈವ ನರ್ತಕರ ಬದುಕಿನಲ್ಲಿ ಭರವಸೆ ಮೂಡಿಸಿದೆʼ ಎಂದು ಹೇಳಿದೆ.

ತುಳು ನಾಡು ಸಂಸ್ಕೃತಿ, ಅಲ್ಲಿನ ಭೂತಾರಾದನೆ ಆಧಾರಿತ ʼಕಾಂತಾರʼಇತ್ತೀಚೆಗೆ ಬಿಡುಗಡೆಯಾಗಿ ಬಾರೀ ಸದ್ದು ಮಾಡುತ್ತಿದ್ದುಈ ಬೆನ್ನಲ್ಲೇ ಸರ್ಕಾರ ಈ ನಿರ್ಧಾರ ಮಾಡಿರುವುದು ಕಾಂತಾರ ಸಿನೆಮಾದ ಪರಿಣಾಮ  ಸರ್ಕಾರ ಮೇಲೂ ಬಿದ್ದಿದೆಯಾ ಅನ್ನುವುದು ಅಭಿಮಾನಿಗಳ ಕುತೂಹಲಕಾರಿ ಪ್ರಶ್ನೆಯಾಗುತ್ತಿದೆ.

ಕಾಂಗ್ರೆಸಿನವರದ್ದು 85 % ಸರ್ಕಾರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬಳ್ಳಾರಿ, ಅಕ್ಟೋಬರ್ 13:ಕಾಂಗ್ರೆಸ್ ನವರದ್ದು 85 % ಸರ್ಕಾರ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಸಿರಗುಪ್ಪದಲ್ಲಿ ಆಯೋಜಿಸಿದ್ದ ಜನಸಂಕಲ್ಪ ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದರು.

ಈ ಮಾತನ್ನು ಹಿಂದೆಯೇ ರಾಜೀವ್ ಗಾಂಧಿ ಹೇಳಿದ್ದರು. ರಾಹುಲ್ ಗಾಂಧಿ ಅವರ ತಂದೆ ರಾಜೀವ್ ಗಾಂಧೀ ಇವರೆಲ್ಲರಿಗಿಂತ ಸಜ್ಜನರು. ದಿಲ್ಲಿಯಿಂದ ನೂರು ರೂಪಾಯಿ ಕಳಿಸಿದರೆ. ಹಳ್ಳಿಗೆ 15 ರೂಪಾಯಿ ತಲುಪುತ್ತಿತ್ತು ಎಂದು ಪ್ರಾಮಾಣಿಕವಾಗಿ ಹೇಳಿದ್ದರು. 85 ರೂ.ಗಳು ಮಧ್ಯದಲ್ಲಿ ಸೋರಿಹೋಗುತ್ತಿತ್ತು. ಆಗ ಕೇಂದ್ರದಲ್ಲಿ ಕಾಂಗ್ರೆಸ್ , ರಾಜ್ಯದಲ್ಲಿಯೂ ಕಾಂಗ್ರೆಸ್ ಪಕ್ಷವಿತ್ತು. ಇದು ಅಂದಿನ ವ್ಯವಸ್ಥೆ. ನರೇಂದ್ರ ಮೋದಿಯವರು ಬಂದ ನಂತರ ಎಲ್ಲಾ ಯೋಜನೆಗಳನ್ನು ನೇರವಾಗಿ ಎಲ್ಲಾ ಫಲಾನುಭವಿಗಳಿಗೆ ಶೇ 100ರಷ್ಟು ಮೊತ್ತವನ್ನು ಡಿಬಿಟಿ ವ್ಯವಸ್ಥೆಯಡಿ ತಲುಪಿಸಿದ್ದಾರೆ ಎಂದರು.

ಭೂಮಿ, ಆಕಾಶ, ಪಾತಾಳದಲ್ಲಿ ಭ್ರಷ್ಟಾಚಾರ

ಇವರ ಕಾಲದಲ್ಲಿ ಭೂಮಿಯ ಮೇಲೆ, ಆಕಾಶಕ್ಕೆ ಹಾಗೂ ಪಾತಾಳಕ್ಕೆ ಭ್ರಷ್ಟಾಚಾರ ಮಾಡಿದರು. ಆಕಾಶಕ್ಕೆ ಭ್ರಷ್ಟಾಚಾರ ಅಂದರೆ 2 ಜಿ ಹಗರಣ. ಕಾಮನ್ ವೆಲ್ತ್ ಹಾಗೂ ಕಲ್ಲಿದ್ದಲು ಹಗರಣ ಮಾಡುವ ಆಕಾಶ, ಭೂಮಿ, ಪಾತಾಳದಲ್ಲಿ ಭ್ರಷ್ಟಾಚಾರ ಮಾಡಿದ ಕಾಂಗ್ರೆಸ್ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಾರೆ. ಕೆರೆ ತುಂಬಿಸುವ ಯೋಜನೆಯಡಿ ಭ್ರಷ್ಟಾಚಾರ, ನೀರಾವರಿ,ಸಣ್ಣ ನೀರಾವರಿ, ಗಂಗಾಕಲ್ಯಾಣ ಯೋಜನೆಯಡಿ 36 ಕೊಳವೆಬಾವಿಗಳನ್ನು ಒಂದೇ ದಿನ ಮಂಜೂರು ಮಾಡಿ ದುಡ್ಡು ಹೊಡೆದರು ಎಂದರು.

ಅಧಿಕಾರಕ್ಕಾಗಿ ರಾಜಕಾರಣ

ಜನಸಂಕಲ್ಪ ಯಾತ್ರೆ ರಾಯಚೂರು, ವಿಜಯನಗರ, ಕೊಪ್ಪಳಕ್ಕೆ ಹೋಗಿ ಬಳ್ಳಾರಿಗೆ ಬಂದಿದೆ. ಹೋದಲ್ಲೆಲ್ಲಾ ಜನಬೆಂಬಲ ಹಾಗೂ ಜೋಶ್ ದೊರೆತಿದೆ. ಕಾಂಗ್ರೆಸ್ ಪಕ್ಷದವರು ಪಾದಯಾತ್ರೆ ಮಾಡುತ್ತಿದ್ದಾರೆ. ಜನಪರವಾದ ನಿರ್ಣಯ ತೆಗೆದುಕೊಳ್ಳಲು ಕಾಂಗ್ರೆಸ್ಸಿಗೆ ಬರುವುದಿಲ್ಲ. ಅಧಿಕಾರಕ್ಕಾಗಿ ರಾಜಕಾರಣ ಮಾಡುತ್ತಾರೆ. ಅಧಿಕಾರಕ್ಕೆ ಬಂದಾಗ ಅವರು ತಮ್ಮ ಸ್ವಂತ ಅಭಿವೃದ್ಧಿ ಮಾಡಿಕೊಂಡರು. ಜನರನ್ನು ಸಂಪೂರ್ಣವಾಗಿ ಮರೆಯುತ್ತಾರೆ. ಕಾಂಗ್ರೆಸ್ಸಿನ ಮಾಜಿ ಮಂತ್ರಿಗಳೊಬ್ಬರು ನಾವು ಅಧಿಕಾರ ದಲ್ಲಿದ್ದಾಗ ಮತ್ತು ಅಧಿಕಾರದಲ್ಲಿಲ್ಲದಾಗ ಅವರು ಏನಾಗುತ್ತಾರೆ ಎಂದು ತಿಳಿಸಿದ್ದರು. ಅಂದರೆ ಈ ರಾಷ್ಟ್ರವನ್ನು 50 ವರ್ಷ ಆಳಿ, ಈ ರಾಜ್ಯದ ಪ್ರಗತಿಗೆ ಮಾರಕವಾಗಿ, ರಾಜ್ಯವನ್ನು ತಮ್ಮ ಹೈ ಕಮಾಂಡಿಗೆ ಒತ್ತೆ ಇಟ್ಟು, ಕರ್ನಾಟಕ ರಾಜ್ಯದ ಸ್ವಾಭಿಮಾನವನ್ನೂ ಲೆಕ್ಕಿಸದೇ, ಕೇವಲ ಅಧಿಕಾರಕ್ಕಾಗಿ ರಾಜಕಾರಣ ಮಾಡಿರುವ ಕಾಂಗ್ರೆಸ್ಸನ್ನು ಶಾಶ್ವತವಾಗಿ ಮನೆಗೆ ಕಳಿಸುವ ಕೆಲಸವನ್ನು ಕರ್ನಾಟಕದ ಜನತೆ 2023ರಲ್ಲಿ ಮಾಡಲಿದ್ದಾರೆ ಎಂದರು.

ಕಾಂಗ್ರೆಸ್ ಸಂಸ್ಕೃತಿ

ಅಧಿಕಾರಕ್ಕೆ ಬಂದಾಗ ಜನರನ್ನು ಮರೆತಿದ್ದಕ್ಕೆ ಉದಾಹರಣೆ ಎಂದರೆ. ಸೋನಿಯಾ ಗಾಂಧಿ ಬಳ್ಳಾರಿಗೆ ಸಂಸದರಾಗಿ ಬಂದರು. ಮೂರು ಸಾವಿರ ಕೋಟಿ ಪ್ಯಾಕೇಜ್ ಮಾಡುವುದಾಗಿ ಹೇಳಿದರು. ಎಲ್ಲಿದೆ ಪ್ಯಾಕೇಜ್? ಯಾರ ಮನೆಗೆ ಹೋಗಿದೆ? ಬಳ್ಳಾರಿ ಜಿಲ್ಲೆಗೆ ಒಂದು ಪೈಸೆಯನ್ನೂ ಕೊಡಲಿಲ್ಲ. ಧನ್ಯವಾದಗಳನ್ನೂ ಹೇಳಲಿಲ್ಲ. ಇದು ಕಾಂಗ್ರೆಸ್ ಸಂಸ್ಕೃತಿ ಎಂದರು.

ಹೂವಿನಹಡಗಲಿಯ 42 ಸಾವಿರ ಎಕರೆ ಪ್ರದೇಶಕ್ಕೆ ನೀರಾವರಿ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬಳ್ಳಾರಿ, ಅಕ್ಟೋಬರ್ 13: ಹೂವಿನಹಡಗಲಿಯ 42 ಸಾವಿರ ಎಕರೆ ಪ್ರದೇಶಕ್ಕೆ ನೀರಾವರಿ ಕಲ್ಪಿಸುವ ಮೂಲಕ ಈ ಭಾಗದ ರೈತರ ನೀರಿನ ಬವಣೆಯನ್ನು ನೀಗಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಹೂವಿನಹಡಗಲಿ ಜನಸಂಕಲ್ಪ ಯಾತ್ರೆಯಲ್ಲಿ ಉದ್ಘಾಟಿಸಿ ಮಾತನಾಡಿದರು.

ಹೂವಿನ ಹಡಗಲಿಯ ಅಂತರ್ಜಲ ಹೆಚ್ಚಳ:

ನಾನು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕಳೆದ ಸಾರಿ ಇಲ್ಲಿ ಭೇಟಿ ನೀಡಿದ ಸಂದರ್ಭದಲ್ಲಿ ಸಿಂಗಟಾಲೂರು ಏತ ನೀರಾವರಿ ಪೂರ್ಣ ಮಾಡಬೇಕು ಎಂದು ಜನ ಬೇಡಿಕೆ ಇಟ್ಟಿದ್ದರು‌. ನಾನು ಜಲ ಸಂಪನ್ಮೂಲ ಸಚಿವನಾಗಿದ್ದಾಗ ಹೂವಿನ ಹಡಗಲಿಯ 42 ಸಾವಿರ ಎಕರೆ ಪ್ರದೇಶಕ್ಕೆ ನೀರಾವರಿ ಕಲ್ಪಿಸಲಾಯಿತು. ಹೂವಿನಹಡಗಲಿಯಲ್ಲಿ ಕೆರೆ ತುಂಬಿಸುವ ಕೆಲಸವನ್ನೂ ಮಾಡಲಾಗಿದೆ. ಹೂವಿನ ಹಡಗಲಿಯ ಅಂತರ್ಜಲ ಹೆಚ್ಚಿಸಲು ಕೆಲಸ ಮಾಡಲಾಗಿದೆ. ಈ ಭಾಗದ ರೈತರಿಗೆ ನೀರಿನ ಬರ ನಿವಾರಿಸಲು ಬಿಜೆಪಿ ಸರ್ಕಾರ ಮತ್ತು ಯಡಿಯೂರಪ್ಪ ಅವರು ಕಾರಣ. ಹುಲಿಗುಡ್ಡದ ಯೋಜನೆ ತಾವು ಮಾಡಿದ್ದೇವೆ ಅಂತ ಕೆಲವರು ಹೇಳಿಕೊಳ್ಳುತ್ತಿದ್ದರು. ಅದನ್ನು ರದ್ದು ಮಾಡಿ ಸಿಂಗಟಾಲೂರು ಯೋಜನೆಗೆ ಜೋಡಿಸಿ ರೂಪಿಸಲಾಯಿತು. ತಡಕಲ್ಲ ನೀರಾವರಿ ಯೊಜನೆಯನ್ನು ಪೂರ್ಣ ಮಾಡಿ ಲೋಕಾರ್ಪಣೆ ಮಾಡಲಾಗುವುದು ಎಂದರು.

ಹೂವಿನಹಡಗಲಿಯ ಸಮಗ್ರ ಅಭಿವೃದ್ಧಿ ಮಾಡಿ, ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಸಮಾವೇಶವನ್ನು ಏರ್ಪಡಿಸುವ ಈ ಭಾಗಕ್ಕೆ ನಾನು ನೀಡಿದ ಯೋಜನೆಗಳನ್ನು ನಿಮ್ಮ ಮುಂದೆ ರಿಪೋರ್ಟ್ ಕಾರ್ಡ್ ಇಟ್ಡು ಮತ್ತೆ ಅಧಿಕಾರಕ್ಕೆ ಬಂದು ಕನ್ನಡ ನಾಡಿನಲ್ಲಿ ಕಮಲ ಅರಳಿಸಿ ಕಾಂಗ್ರೆಸ್ ನ್ನು ಬೇರು ಸಮೇತ ಕಿತ್ತು ಹಾಕಬೇಕು. ನಮ್ಮ ನೆಚ್ಚಿನ ನಾಯಕರಾದ ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ 150 ಸ್ಥಾನ ಗೆಲ್ಲಿಸಬೇಕು ಎಂದರು.

ಈ ಸಂದರ್ಭದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಜಲ ಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ, ಶಶಿಕಲಾ ಜೊಲ್ಲೆ, ಬಿ.ಶ್ರೀರಾಮುಲು, ಆನಂದಸಿಂಗ್ ಹಾಗೂ ಮತ್ತಿತರರು ಹಾಜರಿದ್ದರು.