Booker Prize winner Banu Mushtaq – Peepal Media

ಜೂ 9 ರಂದು ಬೂಕರ್ ಪ್ರಶಸ್ತಿ ವಿಜೇತ ಬಾನು ಮುಷ್ತಾಕ್ ರವರಿಗೆ ಸನ್ಮಾನ, ಆಕರ್ಷಕ ಮೆರವಣಿಗೆ
ಹಾಸನ : ಹಾಸನ: ಜೂನ್ 9ರ ಸೋಮವಾರದಂದು ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಬೂಕರ್ ಅಂತರರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಸಾಹಿತಿ ಶ್ರೀಮತಿ ಬಾನು ಮುಷ್ತಾಕ್ ಅವರಿಗೆ ನಾಗರಿಕರಿಂದ ಸನ್ಮಾನ ಕಾರ್ಯಕ್ರಮವನ್ನು ಹಾಗೂ ಆಕರ್ಷಕ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿ, ಹಾಸನ ಜಿಲ್ಲೆಯ ಹೆಮ್ಮೆಯ ಸಾಹಿತಿ ಶ್ರೀಮತಿ ಬಾನು ಮುಷ್ತಾಕ್ ಅವರಿಗೆ ಬೂಕರ್ ಅಂತರರಾಷ್ಟ್ರೀಯ ಪ್ರಶಸ್ತಿ ಬಂದಿರುವುದು ಕನ್ನಡ, ಕರ್ನಾಟಕ ಮತ್ತು ಇಡೀ ಭಾರತಕ್ಕೇ ಹೆಮ್ಮೆ ತರುವ ಸಂಗತಿಯಾಗಿದೆ. ಕನ್ನಡ ಸಾಹಿತ್ಯಕ್ಕೆ ಜಾಗತಿಕ ಮಟ್ಟದಲ್ಲಿ ಮನ್ನಣೆ ದೊರಕಿದೆ. ಸಮೃದ್ಧ ಹಾಗೂ ಶಾಸ್ತ್ರೀಯ ಭಾಷೆಯಾದ ನಮ್ಮ ಕನ್ನಡ ಭಾಷೆ ಇಂದು ಹಲವು ಸಮಸ್ಯೆಗಳು ಮತ್ತು ದಾಳಿಗಳನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ಕನ್ನಡ ಸತ್ವ ಜಾಗತಿಕ ಮಟ್ಟದಲ್ಲಿ ಗುರುತಿಸಲ್ಪಟ್ಟಿರುವುದು ಬಹಳ ಸಂತಸದ ವಿಷಯ ಎಂದರು. ಇದನ್ನು ಸಾಧ್ಯವಾಗಿಸಿದ ಜಿಲ್ಲೆಯ ಹಿರಿಯ ಸಾಹಿತಿ, ನ್ಯಾಯವಾದಿ ಹಾಗೂ ಜನಪರ ಚಳುವಳಿಗಳ ಒಡನಾಡಿ ಶ್ರೀಮತಿ ಬಾನು ಮುಷ್ಕಾಕ್ ಮತ್ತು ಕನ್ನಡ ಕೃತಿಯನ್ನು ಅತ್ಯಂತ ಸಮರ್ಥವಾಗಿ ಅನುವಾದಿಸಿ ಕನ್ನಡಕ್ಕೆ ಜಾಗತಿಕ ಮನ್ನಡೆ ಗಳಿಸಲು ಕಾರಣರಾದ ನಮ್ಮ ಪಕ್ಕದ ಜಿಲ್ಲೆಯವರಾದ ಶ್ರೀಮತಿ ದೀಪಾ ಭಾಸ್ತಿಯವರನ್ನು ಹೃದಯ ಪೂರ್ವಕವಾಗಿ ಅಭಿನಂಧಿಸಬೇಕಾಗಿರುವುದು ಹಾಗೂ ಎಲ್ಲ ಕನ್ನಡಿಗರ ಕರ್ತವ್ಯವಾಗಿದೆ ಎಂದರು. ಕನ್ನಡ, ಕರ್ನಾಟಕ ನಮ್ಮ ಹಾಸನ, ಜಿಲ್ಲೆ ರಾಜ್ಯ ಮತ್ತು ಇಡೀ ದೇಶಕ್ಕೇ ಹೆಸರು ತಂದ ಶ್ರೀಮತಿ ಭಾನು ಮುಷ್ತಾಕ್ ಮತ್ತು ಶ್ರೀಮತಿ ದೀಪಾ ಭಾಸ್ತಿ ಅವರಿಗೆ ’ಒಂದು ನಾಗರಿಕ ಸನ್ಮಾನ’ ಮಾಡಿ ಗೌರವಿಸುವುದು ನಮ್ಮೆಲ್ಲರ ಆಧ್ಯತೆಯ ಕೆಲಸವಾಗಿದೆ. ಈ ಹಿನ್ನೆಲೆಯಲ್ಲಿ ಜೂನ್ ೯ರ ಸೋಮವಾರ ನಗರದ ಹಾಸನಾಂಭ ಕಲಾಕ್ಷೇತ್ರದಲ್ಲಿ ಶ್ರೀಮತಿ ಬಾನು ಮುಷ್ತಾಕ್ ಮತ್ತು ದೀಪಾ ಭಾಸ್ತಿ ಅವರಿಗೆ ’ನಾಗರಿಕ ಸನ್ಮಾನ’ ಮಾಡಲು ಹಾಸನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಜನಪರ ಚಳುವಳಿಗಳು, ಕನ್ನಡಪರ ಸಂಘಟನೆಗಳು, ಸಂಘಸಂಸ್ಥೆಗಳು ಹಾಗೂ ನಾಗರಿಕ ಸಮಿತಿ ನಿರ್ಧರಿಸಿವೆ. ಜೂನ್ ೯ರ ಸೋಮವಾರದಂದು ನಾಗರಿಕ ಸನ್ಮಾನ ಕಾರ್ಯಕ್ರಮವನ್ನು ಕನ್ನಡ ನಾಡಿನ ಹಿರಿಯ ಸಾಹಿತಿ ನಾಡೋಜ ಡಾ. ಬರಗೂರು ರಾಮಚಂದ್ರಪ್ಪ ಉದ್ಘಾಟಿಸಿ ಮಾತನಾಡಲಿದ್ದಾರೆ ಹಾಗೂ ಡಾ. ಎಚ್.ಎಸ್. ಅನುಪಮಾ ಅವರು ಅಬಿಂಧನಾ ನುಡಿಗಳನ್ನು ಆಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಸಂಸದರಾದ ಶ್ರೇಯಸ್ ಪಟೇಲ್, ಶಾಸಕರಾದ ಸ್ವರೂಪ್ ಪ್ರಕಾಶ್, ನಗರಪಾಲಿಕೆ ಅಧ್ಯಕ್ಷರಾದ ಎಂ. ಚಂದ್ರೇಗೌಡ, ಜಿಲ್ಲಾಧಿಕಾರಿ ಶ್ರೀಮತಿ ಸಿ. ಸತ್ಯಭಾಮ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಕ ಅಧಿಕಾರಿ ಶ್ರೀಮತಿ ಬಿ.ಆರ್. ಪೂರ್ಣಿಮ ಮತ್ತು ಜಿಲ್ಲಾ ಪೋಲೀಸ್ ವರಿಷ್ಟಾಧಿಕಾರಿ ಶ್ರೀಮತಿ ಮೊಹಮದ್ ಸುಜೀತ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಛೇರ‍್ಮನ್ ಹೆಚ್.ಪಿ. ಮೋಹನ್ ಮಾತನಾಡಿ, ಜಿಲ್ಲೆಗೆ ಗೌರವ ತಂದಿರುವ ಬಾನು ಮುಷ್ತಾಕ್ ಅವರಿಗೆ ಸನ್ಮಾನಿಸಿರುವುದು ಉತ್ತಮವಾಗಿದೆ. ಜೂನ್ 9 ರ ಸೋಮವಾರ ಬೆಳಗ್ಗೆ 10 ಗಂಟೆಗೆ ಹಾಸನ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ವಿವಿಧ ಜನಪದ ಕಲಾತಂಡಗಳ ಮೆರವಣಿಗೆಯು ಆರಂಭವಾಗಲಿದೆ. ನಂತರ ಹಾಸನಾಂಭ ಕಲಾಕ್ಷೇತ್ರದಲ್ಲಿ ’ನಾಗರಿಕ ಸನ್ಮಾನ’ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಹಾಸನ ಜಿಲ್ಲೆಯ ಸಾಹಿತಿಗಳು, ಎಲ್ಲಾ ಜನಪರ, ಕನ್ನಡಪರ ಸಂಘಟನೆಗಳ ಮತ್ತು ಸಂಘಸಂಸ್ಥೆಗಳ ಪದಾಧಿಕಾರಿಗಳು ’ ನಾಗರಿಕರು ಹೆಚ್ಚಿನ, ಪತ್ರಕರ್ತರು ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.

ಕಸಾಪ ಗೌರವಾಧ್ಯಕ್ಷ ರವಿನಾಕಲಗೂಡು ಮಾತನಾಡಿ, ಬೂಕರ್ ಅಂತರರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಸಾಹಿತಿ ಶ್ರೀಮತಿ ಬಾನು ಮುಷ್ತಾಕ್ ಅವರನ್ನು ಹಾಸನದಲ್ಲಿ ಎಲ್ಲಾರು ಸೇರಿ ಸನ್ಮಾನಿಸಲಾಗುತ್ತಿದೆ. ಲಂಕೇಶ್ ಪತ್ರಿಕೆಯಲ್ಲದೇ ಜನತಾ ಮಾಧ್ಯಮದಲ್ಲೂ ಕೂಡ ಅವರ ಲೇಖನ ಬರುತಿತ್ತು. ಬೂಕರ್ ಪ್ರಶಸ್ತಿ ಸಿಕ್ಕಿರುವುದು ಜಿಲ್ಲೆಯಲ್ಲ. ಇಡೀ ಕರ್ನಾಟಕಕ್ಕೆ ಹೆಮ್ಮೆಯ ವಿಚಾರ. ಎಲ್ಲಾ ಸಂಘ ಸಂಸ್ಥೆಯಲ್ಲಿ ಒಂದು ದೊಡ್ಡ ಕಾರ್ಯಕ್ರಮ ಇದಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಹಿರಿಯ ದಲಿತ ಮುಖಂಡ ಕೃಷ್ಣದಾಸ್, ಸಮಾಜ ಸೇವಕ ಎಸ್.ಎಸ್. ಪಾಶ, ಸಂವಿಧಾನ ಓದು ಅಭಿಯಾನ ರಾಜು ಗೊರೂರು, ವಕೀಲರಾದ ಅನ್ಸಾದ್ ಪಾಳ್ಯ, ಡಿವೈ.ಎಫ್.ಐ. ಜಿಲ್ಲಾ ಕಾರ್ಯದರ್ಶಿ ಎಂ.ಜಿ. ಪೃಥ್ವಿ, ಪರಮಶಿವಯ್ಯ ಇತರರು ಉಪಸ್ಥಿತರಿದ್ದರು.