Border dispute – Peepal Media

ಗಡಿ ವಿವಾದ: ಕೇಂದ್ರ ಗೃಹ ಸಚಿವರ ಸಭೆಯಲ್ಲಿ ರಾಜ್ಯದ ನಿಲುವು ಸ್ಪಷ್ಟಪಡಿಸುತ್ತೇನೆ- ಬಸವರಾಜ ಬೊಮ್ಮಾಯಿ
ಮೈಸೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕರೆದಿರುವ ಎರಡೂ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಮಹಾರಾಷ್ಟ್ರದೊಂದಿಗಿನ ಗಡಿ ವಿವಾದದ ಬಗ್ಗೆ ರಾಜ್ಯದ ನಿಲುವನ್ನು ಸ್ಪಷ್ಟಪಡಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ʼಗಡಿ ವಿವಾದದ ಬಗ್ಗೆ ಚರ್ಚಿಸಲು ಕೇಂದ್ರ ಗೃಹ ಸಚಿವರು ಎರಡೂ ರಾಜ್ಯಗಳ ಮುಖ್ಯಮಂತ್ರಿಗಳನ್ನು ಕರೆದಿದ್ದಾರೆ, ಅಲ್ಲಿ ನಾವು ನಮ್ಮ ನಿಲುವನ್ನು ಸ್ಪಷ್ಟಪಡಿಸುತ್ತೇವೆ. ರಾಜ್ಯ ಪುನರ್ವಿಂಗಡಣೆ ಕಾಯ್ದೆಯ ನಂತರ ಇಲ್ಲಿಯವರೆಗೆ ನಡೆದಿರುವ ಎಲ್ಲಾ ಬೆಳವಣಿಗೆಗಳ ಬಗ್ಗೆ ನಾನು ವಿವರಗಳನ್ನು ಹಂಚಿಕೊಳ್ಳುತ್ತೇನೆ-  ಸದ್ಯಕ್ಕೆ ಪ್ರಕರಣವು ಸುಪ್ರೀಂ ಕೋರ್ಟ್ ಮುಂದೆ ಇದೆ. ಈ ಹಿನ್ನಲೆಯಲ್ಲಿ ಬುಧವಾರ ಸಂಜೆ ನವದೆಹಲಿಯಲ್ಲಿ ಸಭೆ ನಡೆಯುವ ಸಾಧ್ಯತೆಯಿದೆ ಎಂದು ಬೊಮ್ಮಾಯಿ ಹೇಳಿದ್ದಾರೆ.

ಗಡಿ ವಿವಾದವು ಕಳೆದ ವಾರ ತೀವ್ರಗೊಂಡಿತ್ತು, ಎರಡೂ ಕಡೆಯ ವಾಹನಗಳನ್ನು ಗುರಿಯಾಗಿಸಲಾಯಿತು, ಎರಡೂ ರಾಜ್ಯಗಳ ನಾಯಕರು ಮತ್ತು ಗಡಿ ಜಿಲ್ಲೆ ಬೆಳಗಾವಿಯಲ್ಲಿ ಉದ್ವಿಗ್ನ ವಾತಾವರಣದ ನಡುವೆ ಕನ್ನಡ ಮತ್ತು ಮರಾಠಿ ಪರ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದರು.ಇದಾದ ನಂತರ, ಕರ್ನಾಟಕ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿಗಳು ದೂರವಾಣಿಯಲ್ಲಿ ಪರಸ್ಪರ ಮಾತನಾಡಿ, ಎರಡೂ ಕಡೆ ಶಾಂತಿ ಮತ್ತು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಬೇಕು ಎಂದು ಒಪ್ಪಿಕೊಂಡಿದ್ದರು.

ಗಡಿ ವಿವಾದ: ಸುಪ್ರೀಂ ಕೋರ್ಟ್ ನಲ್ಲಿ ನಾಳೆ ವಿಚಾರಣೆ
ಹೊಸದಿಲ್ಲಿ: ಕರ್ನಾಟಕ – ಮಹಾರಾಷ್ಟ್ರ ಗಡಿ ವಿವಾದ ಪ್ರಕರಣ ಇದೇ 30 ರಂದು ವಿಚಾರಣೆಗೆ ಬರಲಿದ್ದು, ಈ ಕುರಿತು ಹಿರಿಯ ವಕೀಲ ಮುಕುಲ್ ರೋಹಟಗಿ ಅವರು ಕರ್ನಾಟಕದ ಪರವಾಗಿ ಸಮರ್ಥವಾಗಿ ವಾದ ಮಾಡುವ ಭರವಸೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಇಂದು ನವದೆಹಲಿಯಲ್ಲಿ ಹಿರಿಯ ವಕೀಲ ಮುಕುಲ್ ರೋಹಟಗಿ ಅವರನ್ನು ಭೇಟಿಯಾದ ಬಳಿಕ ಮಾಧ್ಯಮಗಳಿಗೆ ಅವರು ಪ್ರತಿಕ್ರಿಯೆ ನೀಡಿದ ಅವರು, ಮುಕುಲ್ ರೋಹಟಗಿ ಹಿರಿಯ ವಕೀಲರಾಗಿದ್ದು, ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ಸಂಬಂಧಪಟ್ಟ ಹಾಗೆ ಈಗಾಗಲೇ ಎಲ್ಲ ವಿಷಯವನ್ನು ನಮ್ಮ ಅಡ್ವೋಕೇಟ್ ಜನರಲ್ ವಿವರಿಸಿದ್ದಾರೆ. ನಾನು ಗಡಿ ವಿವಾದದ ಕಾನೂನಾತ್ಮಕ ಹಿನ್ನೆಲೆ ಬಗ್ಗೆ ರೋಹಟಗಿ ಅವರಿಗೆ ವಿವರಣೆ ನೀಡಿದ್ದೇನೆ. ನಾಳೆ ಸುಪ್ರೀಂ ಕೋರ್ಟ್ ನಲ್ಲಿ ವಾದ ಮಂಡನೆ ಮಾಡಲು ಎಲ್ಲಾ ರೀತಿಯ ಸಿದ್ಧತೆ ನಡೆದಿದೆ ಎಂದು ಅವರು ತಿಳಿಸಿರುವುದಾಗಿ ಹೇಳಿದ್ದಾರೆ.

ಮಹಾರಾಷ್ಟ್ರ ಸರ್ಕಾರ ಹಾಕಿರುವ ಮೇಂಟೈನಬಲಿಟಿ ಕುರಿತಾಗಿ ವಿಚಾರಣೆ ನಡೆಯಲಿದೆ

ಹಿಂದಿನ ಸಿಜೆಐ ದೀಪಕ್ ಮಿಶ್ರ ಅವರು ಇದರ ಮೇಂಟೈನಬಲಿಟಿ ವಿಚಾರವನ್ನು ಸಿದ್ದಪಡಿಸಿದ್ದರು. ಅದಕ್ಕೆ ನಮ್ಮ ಪ್ರತಿರೋಧ ಹೇಗಿರಬೇಕು ಎಂಬುದರ ಬಗ್ಗೆ ನಾವು ಸಿದ್ದರಾಗಿದ್ದೇವೆ ಎಂದು ತಿಳಿಸಿದರು.

ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿ ಮಹಾರಾಷ್ಟ್ರದ ನಾಯಕರುಗಳು, ನಾವು ಗಂಭೀರವಾಗಿ ಇದೀವಿ ಅಂತ ತೋರಿಸಿಕೊಳ್ಳಲು ಆ ರೀತಿ ಮಾಡುತ್ತಿದ್ದಾರೆ ಎಂದರು.

ಕರ್ನಾಟಕಕ್ಕೆ ಸೇರಲು ಗ್ರಾಮಸ್ಥರ ನಿರ್ಧಾರ

ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಿಗರಿರುವ ಮಹಾರಾಷ್ಟ್ರದ ಕೆಲವು ಗ್ರಾಮಸ್ಥರು ಕರ್ನಾಟಕಕ್ಕೆ ಸೇರಲು ನಿರ್ಧರಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ಹಳ್ಳಿಗಳು ಸೇರ್ಪಡೆಯಾಗಲು ನಿಯಮಗಳಿವೆ. ಜತ್ ತಾಲೂಕಿನ 42 ಗ್ರಾಮಸ್ಥರು ಸಿಎಂ ಭೇಟಿಗೆ ಅವಕಾಶ ಕೇಳಿರುವ ಬಗ್ಗೆ ಉತ್ತರಿಸಿ ಈ ಸಮಸ್ಯೆ ಇಂದು ನಿನ್ನೆಯದಲ್ಲ. ಸರಿಯಾದ ಸೌಲಭ್ಯ ದೊರಕದ ಹಿನ್ನಲೆಯಲ್ಲಿ ಅವರು ಈ ಹೇಳಿಕೆ ಬಹಳಷ್ಟು ವರ್ಷದಿಂದ‌ ನೀಡುತ್ತಿದ್ದಾರೆ. ಆದರೆ ವಿಚಾರ ಸುಪ್ರೀಂಕೋರ್ಟ್ ನಲ್ಲಿದ್ದು, ಸರ್ವ ಪಕ್ಷ ಸಭೆ ಕರೆದು ಚರ್ಚೆ ಮಾಡಲಾಗುವುದು. ಕಾನೂನು ಸಲಹೆ ಪಡೆದು ಮುಂದುವರೆಯುವುದಾಗಿ ಬೊಮ್ಮಾಯಿ ತಿಳಿಸಿದ್ದಾರೆ.

ರಾಜಕೀಯ ಹೇಳಿಕೆ
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಈ ಬಗ್ಗೆ ರಾಜಕೀಯವಾಗಿ ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯ ಸರ್ಕಾರ ಇದ್ದಾಗಲೇ ಕುಡಿಯುವ ‌ನೀರು ನೀಡುವ ನಿರ್ಣಯ ಮಾಡಿದ್ದರು. ಅವರು ಯಾಕೆ ಸೇರಿಸಿಕೊಂಡಿಲ್ಲ ಎಂದು ಪ್ರಶ್ನಿಸಿದರು. ಜವಬ್ದಾರಿಯುತ ಸ್ಥಾನ ದಲ್ಲಿದ್ದು ಎಲ್ಲವನ್ನೂ ಕಾನೂನು ಮತ್ತು ಸಂವಿಧಾನದ ಅಡಿಯಲ್ಲಿ ಕ್ರಮ‌ಕೈಗೊಳ್ಳಲಾಗುವುದು ಎಂದರು.

ರಾಜ್ಯಸಾರಿಗೆ ಸಂಸ್ಥೆ ಬಸ್ ಮೇಲೆ ದಾಳಿ ಪರಿಸ್ಥಿತಿ ನಿಯಂತ್ರಣದಲ್ಲಿದೆ

ರಾಜ್ಯಸಾರಿಗೆ ಸಂಸ್ಥೆ ಬಸ್ ಮೇಲೆ ದಾಳಿಯಾಗಿರುವ ಬಗ್ಗೆ ಪ್ರತಿಕ್ರಿಯಿಸಿ, ಮಹಾರಾಷ್ಟ್ರ ಗೃಹ ಇಲಾಖೆಗೆ ಜೊತೆಗೆ ಈಗಾಗಲೇ ರಾಜ್ಯದ ಅಧಿಕಾರಿಗಳು ಮಾತನಾಡಿದ್ದಾರೆ ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದರು.