brijesh kalappa – Peepal Media

ಬೆಳಗಾವಿ ಗಡಿ ವಿವಾದ: ಸರ್ವಪಕ್ಷ ಸಭೆಗೆ ಆಮ್‌ ಆದ್ಮಿ ಪಾರ್ಟಿ ಆಗ್ರಹ, ಭಾಗವಹಿಸಲು ಅವಕಾಶಕ್ಕೆ ಮನವಿ
ಬೆಂಗಳೂರು: ಬೆಳಗಾವಿ ಗಡಿ ವಿವಾದಕ್ಕೆ ಸಂಬಂಧಿಸಿ ಮಹಾರಾಷ್ಟ್ರ ಮಾದರಿಯಲ್ಲಿ ಕರ್ನಾಟಕ ಕೂಡ ಸರ್ವಪಕ್ಷಗಳ ಸಭೆ ನಡೆಸಿ ದಿಟ್ಟ ನೆಲುವು ತೆಗೆದುಕೊಳ್ಳಬೇಕೆಂದು ಆಮ್‌ ಆದ್ಮಿ ಪಾರ್ಟಿ ಆಗ್ರಹಿಸಿದ್ದು, ಸಭೆಯಲ್ಲಿ ಭಾಗವಹಿಸಲು ಆಮ್‌ ಆದ್ಮಿ ಪಾರ್ಟಿ ಪ್ರತಿನಿಧಿಗೂ ಅವಕಾಶ ನೀಡಬೇಕೆಂದು ಕೋರಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿಯವರು ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ.

ಕರ್ನಾಟಕದ ಹಿತಾಸಕ್ತಿ ಕಾಪಾಡಲು ಆಮ್‌ ಆದ್ಮಿ ಪಾರ್ಟಿ ಬದ್ಧವಾಗಿದೆ ಎಂದು ತಿಳಿಸಿರುವ ಪೃಥ್ವಿ ರೆಡ್ಡಿಯವರು, ʼನಮ್ಮ ರಾಜ್ಯದ ಹಿತಾಸಕ್ತಿಗೆ ಧಕ್ಕೆ ಉಂಟುಮಾಡುವ ಪ್ರಯತ್ನಗಳ ವಿರುದ್ಧ ಎಲ್ಲ ಪಕ್ಷಗಳೂ ಒಗ್ಗೂಡಿ ಹೋರಾಡಬೇಕಾದ ಸಮಯ ಬಂದಿದೆ. ಈ ವಿಷಯದಲ್ಲಿ ನಮ್ಮ ಆಮ್‌ ಆದ್ಮಿ ಪಾರ್ಟಿಯು ರಾಜ್ಯದ ಹಿತಾಸಕ್ತಿ ಕಾಪಾಡಲು ಬದ್ಧವಾಗಿದ್ದು, ಸರ್ವಪಕ್ಷ ಸಭೆಗೆ ರಾಜ್ಯ ಸರ್ಕಾರವು ಆಮ್‌ ಆದ್ಮಿ ಪಾರ್ಟಿಯನ್ನೂ ಆಹ್ವಾನಿಸಬೇಕು. ಭಾರತದ ಚುನಾವಣಾ ಆಯೋಗದ ಕಾನೂನಿನ ಪ್ರಕಾರ ಆಮ್‌ ಆದ್ಮಿ ಪಾರ್ಟಿಗೆ ಇನ್ನೂ ರಾಷ್ಟ್ರೀಯ ಪಕ್ಷದ ಸ್ಥಾನಮಾನ ಸಿಗದಿದ್ದರೂ, ಪ್ರಸ್ತುತ ವಸ್ತುಸ್ಥಿತಿಯ ಪ್ರಕಾರ ಆಮ್‌ ಆದ್ಮಿ ಪಾರ್ಟಿಯನ್ನು ರಾಷ್ಟ್ರೀಯ ಪಕ್ಷವೆಂದು ಪರಿಗಣಿಸಿ ಸಭೆಗೆ ಕರೆಯಬಹುದುʼ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ʼನಮ್ಮ ರಾಜ್ಯದ ಹಿತಾಸಕ್ತಿ ಕಾಪಾಡಲು ಸದಾ ಬದ್ಧವಾಗಿರುವ ಅನುಭವಿ ಹಾಗೂ ಜ್ಞಾನವುಳ್ಳ ವ್ಯಕ್ತಿಗಳು ಆಮ್‌ ಆದ್ಮಿ ಪಾರ್ಟಿಯಲ್ಲಿ ಇದ್ದಾರೆ. ಉದಾಹರಣೆಗೆ, ಕಳೆದ ಒಂದು ದಶಕದಿಂದ ನೀರುಹಂಚಿಕೆ ವಿವಾದ ಹಾಗೂ ಗಡಿ ವಿವಾದಕ್ಕೆ ಸಂಬಂಧಿಸಿದ ಸರ್ವಪಕ್ಷ ಸಭೆಗಳಲ್ಲಿ ಭಾಗವಹಿಸಿರುವ ಬ್ರಿಜೇಶ್‌ ಕಾಳಪ್ಪರವರು ಇದ್ದಾರೆ. ಆದ್ದರಿಂದ ಸರ್ವಪಕ್ಷ ಸಭೆಗೆ ನಮ್ಮ ಪಕ್ಷದ ಕೊಡುಗೆಯು ಸತ್ವಯುತವಾಗಿ, ಹೊಸತನವಾಗಿ ಹಾಗೂ ಯೋಗ್ಯವಾಗಿ ಇರುತ್ತದೆ ಎಂದು ಭರವಸೆ ನೀಡುತ್ತಿದ್ದೇನೆ. ರಾಜ್ಯದ ಹಿತಾಸಕ್ತಿಗಾಗಿ ಮುಖ್ಯಮಂತ್ರಿಯವರು ಪರಿಪೂರ್ಣವಾದ ಪ್ರಯತ್ನಗಳನ್ನು ಮಾಡಬೇಕುʼ ಎಂದು ಪೃಥ್ವಿ ರೆಡ್ಡಿ ಪತ್ರದಲ್ಲಿ ಹೇಳಿದ್ದಾರೆ.

ಪಡಿತರ ಕಳ್ಳಸಾಗಣೆದಾರರೊಂದಿಗೆ ಸರ್ಕಾರ ಹೊಂದಾಣಿಕೆ: ಬ್ರಿಜೇಶ್‌ ಕಾಳಪ್ಪ ಆರೋಪ
ಬೆಂಗಳೂರು: ಬಡವರಿಗೆ ಸೇರಬೇಕಾದ ಅನ್ನಭಾಗ್ಯದ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದ್ದು, ಇದು ಪಡಿತರ ಕಳ್ಳಸಾಗಣೆದಾರರೊಂದಿಗೆ ಸರ್ಕಾರ ಮಾಡಿಕೊಂಡಿಕೊಂಡಿರುವ ಹೊಂದಾಣಿಕೆ ಎಂದು ಆಮ್‌ ಆದ್ಮಿ ಪಕ್ಷದ ಮುಖಂಡ ಹಾಗೂ ಹಿರಿಯ ವಕೀಲ ಬ್ರಿಜೇಶ್‌ ಕಾಳಪ್ಪ ಆರೋಪಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಬ್ರಿಜೇಶ್‌ ಕಾಳಪ್ಪ ಅವರು, ಅನ್ನಭಾಗ್ಯ ಯೋಜನೆಯಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಅಕ್ರಮಗಳಿಗೆ ಸರ್ಕಾರ ಶೀಘ್ರವಾಗಿ ಕಡಿವಾಣ ಹಾಕಬೇಕು. ಇಲ್ಲವಾದರೆ ಆಮ್‌ ಆದ್ಮಿ ಪಾರ್ಟಿಯು ದೊಡ್ಡ ಮಟ್ಟದ ಚಳವಳಿ ನಡೆಸಲಿದೆ ಎಂದು ಎಚ್ಚರಿಸಿದರು.

ಬಡವರಿಗೆ ಸೇರಬೇಕಾದ ಅನ್ನಭಾಗ್ಯದ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ. ಟನ್‌ಗಟ್ಟಲೆ ಅನ್ನಭಾಗ್ಯ ಅಕ್ಕಿಯನ್ನು ನೆರೆರಾಜ್ಯಗಳಾದ ಗೋವಾ, ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿದೆ. ಸರ್ಕಾರವು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಬದಲು 40% ಕಮಿಷನ್‌ ತೆಗೆದುಕೊಂಡು ಸುಮ್ಮನಾಗುತ್ತಿದೆ. ಸರ್ಕಾರದ ಕಮಿಷನ್‌ ದಾಹಕ್ಕೆ ಬಡವರು ತೊಂದರೆ ಅನುಭವಿಸುವಂತಾಗಿದೆ. ಹೀಗಾಗಿ ಹಣಕ್ಕಾಗಿ ಜನರ ಹಿತಾಸಕ್ತಿಯನ್ನು ಬಲಿಕೊಡುತ್ತಿರುವ ಜನವಿರೋಧಿ ಭ್ರಷ್ಟ ಸರ್ಕಾರವಿದು ಎಂದು ಆರೋಪಿಸಿದರು.

ಅನ್ನಭಾಗ್ಯ ಯೋಜನೆಯ ಪಡಿತರವನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವುದಕ್ಕೆ ಸಂಬಂಧಿಸಿ ಕಳೆದ ಮೂರು ವರ್ಷಗಳಲ್ಲಿ ಬರೋಬ್ಬರಿ 800ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. 2020-21ರಲ್ಲಿ 65, 2021-22ರಲ್ಲಿ 472 ಹಾಗೂ 2022-23ರಲ್ಲಿ ಈವರೆಗೆ 300ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಇಷ್ಟು ದೊಡ್ಡ ಪ್ರಮಾಣದಲ್ಲಿ ಪ್ರಕರಣಗಳು ದಾಖಲಾಗುತ್ತಿದ್ದರೂ ಸರ್ಕಾರ ಮಾತ್ರ ಅಕ್ರಮ ತಡೆಯಲು ವ್ಯವಸ್ಥೆಗೆ ಯಾವುದೇ ಬದಲಾವಣೆ ತಂದಿಲ್ಲ. ಬದಲಾಗಿ, ಕಮಿಷನ್‌ ಲೂಟಿ ಮಾಡಲು ಇದನ್ನು ದಾರಿ ಮಾಡಿಕೊಂಡಿದೆ ಎಂದು ಹೇಳಿದರು.

ಪಡಿತರ ಕಳ್ಳಸಾಗಣೆದಾರರೊಂದಿಗೆ ಸರ್ಕಾರ ಮಾಡಿಕೊಂಡಿಕೊಂಡಿರುವ ಹೊಂದಾಣಿಕೆಯಿಂದಾಗಿ ಕರ್ನಾಟಕದಲ್ಲಿ ಅಪೌಷ್ಟಿಕತೆ ಹಾಗೂ ಮಕ್ಕಳ ಮರಣ ಪ್ರಮಾಣ ಹೆಚ್ಚಾಗುತ್ತಿದೆ. ರಾಜ್ಯದ 11,961 ಮಕ್ಕಳು ತೀವ್ರ ಅಪೌಷ್ಟಿಕತೆಯಿಂದ ಹಾಗೂ 3,64,614 ಮಕ್ಕಳು ಸಾಧಾರಣ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯೇ ತಿಳಿಸಿದೆ. ಜಾಗತಿಕ ಹಸಿವು ಸೂಚ್ಯಂಕದಲ್ಲಿ ಭಾರತದ ಸ್ಥಾನವು 107ಕ್ಕೆ ಕುಸಿದು, ಪಾಕಿಸ್ತಾನಕ್ಕಿಂತಲೂ ಕಳಪೆ ಸ್ಥಾನ ಪಡೆದಿರುವುದರಲ್ಲಿ ಕರ್ನಾಟಕದ ಪಾಲು ದೊಡ್ಡದಿದ್ದು, ಭ್ರಷ್ಟ ಬಿಜೆಪಿ ಸರ್ಕಾರವು ಇದರ ನೈತಿಕ ಹೊಣೆ ಹೊರಬೇಕು ಎಂದು ಸರ್ಕಾರದ ವಿರುದ್ಧ ಬ್ರಿಜೇಶ್‌ ಕಾಳಪ್ಪ ವಾಗ್ದಾಳಿ ನಡೆಸಿದರು.

ಅಡಿಕೆ ಆಮದು: ಜ್ಞಾನೇಂದ್ರ ಹೇಳಿಕೆಗೆ ಬ್ರಿಜೇಶ್‌ ಕಾಳಪ್ಪ ಕಿಡಿ
ಬೆಂಗಳೂರು: ಚೀನಾಗೆ ತೊಂದರೆ ನೀಡಲು ಭೂತಾನ್‌ನಿಂದ 17 ಸಾವಿರ ಮೆಟ್ರಿಕ್‌ ಟನ್ ಅಡಿಕೆಯನ್ನು ಆಮದು ಮಾಡಿಕೊಳ್ಳಲಾಗುತ್ತಿದೆ ಎಂಬ ಆರಗ ಜ್ಞಾನೇಂದ್ರ ಹೇಳಿಕೆ ಮೂರ್ಖತನದಿಂದ ಕೂಡಿದ್ದು, 40% ಕಮಿಷನ್‌ಗಾಗಿ ಅಡಿಕೆ ಬೆಳೆಗಾರರ ಹಿತವನ್ನು ಬಲಿಕೊಡಲಾಗುತ್ತಿದೆ ಎಂದು ಆಮ್‌ ಆದ್ಮಿ ಪಾರ್ಟಿ ಮುಖಂಡರಾದ ಬ್ರಿಜೇಶ್‌ ಕಾಳಪ್ಪ ಕಿಡಿಕಾರಿದ್ದಾರೆ.

ಆಮ್‌ ಆದ್ಮಿ ಪಾರ್ಟಿ ಕಚೇರಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಬ್ರಿಜೇಶ್‌ ಕಾಳಪ್ಪ ಅವರು, ಅಡಿಕೆ ಟಾಸ್ಕ್‌ಫೋರ್ಸ್‌ ಅಧ್ಯಕ್ಷರಾಗಿರುವ ಗೃಹ ಸಚಿವ ಆರಗ ಜ್ಞಾನೇಂದ್ರರವರು ಅಡಿಕೆ ಬೆಳಗಾರರ ಹಿತದ ಪರವಾಗಿ ಯೋಚಿಸಬೇಕು. ಆದರೆ ಅವರು ರೈತರ ಗಮನವನ್ನು ಚೀನಾ ವಿಷಯದತ್ತ ತೆಗೆದುಕೊಂಡು ಹೋಗುವ ಮೂಲಕ ರೈತರಿಗೆ ವಂಚಿಸುತ್ತಿದ್ದಾರೆ. ಅಡಿಕೆ ಬೆಳಗಾರರ ಹಿತವನ್ನು ಬಲಿಕೊಟ್ಟು ಚೀನಾಗೆ ತೊಂದರೆ ನೀಡಲು ಯತ್ನಿಸುವುದು ಎಷ್ಟು ಸರಿ? ಎಂದು ಪ್ರಶ್ನಿಸಿದರು.

ಕಾಳುಮೆಣಸು ಬೆಳೆಗಾರರಿಗೆ ಕೆಜಿಗೆ 850 ರೂಪಾಯಿ ಸಿಗುತ್ತಿತ್ತು. ವಿಯೆಟ್ನಾಂನಿಂದ ಆಮದು ಆರಂಭಿಸಿದ್ದರಿಂದ ಅದರ ಬೆಲೆ 500 ರೂಪಾಯಿಗೆ ಕುಸಿದಿದೆ. ಇದರಿಂದ ರೈತರಿಗೆ ಪ್ರತಿ ಕೆಜಿಗೆ 350 ನಷ್ಟವಾಗುತ್ತಿದೆ.  ದೇಶದಲ್ಲಿ 30 ಸಾವಿರ ಮೆಟ್ರಿಕ್‌ ಟನ್‌ ಕಾಳುಮೆಣಸು ಉತ್ಪಾದನೆಯಾಗುತ್ತಿದ್ದು, ರೈತರಿಗೆ ಒಟ್ಟು 1.26 ಲಕ್ಷ ಕೋಟಿ ರೂ. ನಷ್ಟವಾಗಿದೆ. ಇದರಿಂದ ಯಾರಿಗೆ ಲಾಭವಾಗುತ್ತಿದೆ ಎಂದು ನಾವು ಯೋಚಿಸಬೇಕು. ಬಿಜೆಪಿಯ ನಾಯಕರು ಹಾಗೂ ಪ್ರಭಾವಿಗಳಿಗೆ ಕಮಿಷನ್‌ ರೂಪದಲ್ಲಿ ಈ ಹಣ ತಲುಪುತ್ತಿದ್ದು, ಇದೊಂದು ದೊಡ್ಡ ದಂಧೆಯಾಗಿದೆ. ಇದರ ತನಿಖೆ ಮಾಡಬೇಕಾದ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಬಿಜೆಪಿಯ ಆದೇಶದಂತೆ ದೆಹಲಿಯ ಎಎಪಿ ನಾಯಕರ ವಿರುದ್ಧ ಸುಳ್ಳು ಆರೋಪ ಹೊರಿಸುವುದರಲ್ಲಿ ನಿರತರಾಗಿದ್ದಾರೆ ಎಂದು ಬ್ರಿಜೇಶ್‌ ಕಾಳಪ್ಪ ಆರೋಪಿಸಿದ್ದಾರೆ.

ಭೂತಾನ್‌ನಿಂದ ಅಡಿಕೆಯನ್ನು ಆಮದು ಮಾಡಿಕೊಳ್ಳುವ ಆಮದುದಾರರ ಹೆಸರನ್ನು ಸರ್ಕಾರ ಬಹಿರಂಗ ಪಡಿಸಲಿ. ಎಷ್ಟು ಮೊತ್ತಕ್ಕೆ ಆಮದು ಮಾಡಿಕೊಳ್ಳಲಾಗುತ್ತದೆ, ಇದರಿಂದ ಆಮದುದಾರರಿಗೆ ಎಷ್ಟು ಲಾಭವಾಗುತ್ತದೆ ಎಂಬ ಮಾಹಿತಿಯನ್ನು ನೀಡಲಿ. ಎಲ್ಲವೂ ಪಾರದರ್ಶಕವಾಗಿ ಜನರಿಗೆ ತಿಳಿಯಲಿ ಎಂದು ಬ್ರಿಜೇಶ್‌ ಕಾಳಪ್ಪ ಆಗ್ರಹಿಸಿದರು.

ಸರ್ಕಾರಕ್ಕೆ ಧಮ್‌ ಇದ್ದರೆ ಶೀಘ್ರವೇ ಬಿಬಿಎಂಪಿ ಚುನಾವಣೆ ನಡೆಸಲಿ: ಬ್ರಿಜೇಶ್‌ ಕಾಳಪ್ಪ
ಬೆಂಗಳೂರು: ಬಿಜೆಪಿಗೆ ಬೆಂಗಳೂರಿನ ಹಿತಕ್ಕಿಂತ ಅಡ್ಡದಾರಿಯಲ್ಲಿ ಅಧಿಕಾರ ಚಲಾಯಿಸುವುದೇ ಮುಖ್ಯವೆಂಬುದು ಬಿಬಿಎಂಪಿ ಚುನಾವಣೆಯ ಪದೇಪದೇ ಮುಂದೂಡಿಕೆಯಿಂದ ಸ್ಪಷ್ಟವಾಗಿದೆ ಎಂದು ಆಮ್‌ ಆದ್ಮಿ ಪಾರ್ಟಿ ಮುಖಂಡರಾದ ಬ್ರಿಜೇಶ್‌ ಕಾಳಪ್ಪ ಹೇಳಿದರು.

ಆಮ್‌ ಆದ್ಮಿ ಪಾರ್ಟಿ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಬ್ರಿಜೇಶ್‌ ಕಾಳಪ್ಪ, ʼಕಳೆದ ಬಿಬಿಎಂಪಿ ಚುನಾವಣೆ ವೇಳೆ ಬೆಂಗಳೂರಿಗೆ ಆಗಮಿಸಿದ್ದ ನರೇಂದ್ರ ಮೋದಿ ಹಾಗೂ ಅಮಿತ್‌ ಷಾರವರು ಬೆಂಗಳೂರನ್ನು ಅಭಿವೃದ್ಧಿ ಪಡಿಸುವುದಾಗಿ ಭರವಸೆ ನೀಡಿದ್ದರು. ಬಿಜೆಪಿಯು ಡಬಲ್‌ ಎಂಜಿನ್‌ ಕೇಳಿದ್ದರೆ, ಜನರು ದೇಶ, ರಾಜ್ಯ ಹಾಗೂ ಬಿಬಿಎಂಪಿಯಲ್ಲೂ ಬಿಜೆಪಿಯನ್ನು ಗೆಲ್ಲಿಸುವ ಮೂಲಕ ತ್ರಿಬಲ್‌ ಎಂಜಿನ್‌ ನೀಡಿದರು. ಆದರೆ ಅಧಿಕಾರ ಸಿಕ್ಕ ಬಳಿಕೆ ಬೆಂಗಳೂರಿನ ಜನರನ್ನು ಬಿಜೆಪಿ ಮರೆತಿದ್ದು, ಬಿಬಿಎಂಪಿ ಚುನಾವಣೆಗೆ ಹೆದರುವ ಸ್ಥಿತಿ ತಲುಪಿದೆ. ಸರ್ಕಾರಕ್ಕೆ ಧಮ್‌ ಇದ್ದರೆ ಚುನಾವಣೆ ನಡೆಸಲಿʼಎಂದು ಹೇಳಿದರು.

ಮೃತಪಟ್ಟ ಹಿಂದೂ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಕುಟುಂಬದವರಿಗೆ ಸಿಎಂ ಬಸವರಾಜ ಬೊಮ್ಮಾಯಿಯವರು ಸರ್ಕಾರಿ ನೌಕರಿ ನೀಡಿದ್ದಾರೆ. ಆದರೆ ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಬಲಿಯಾದವರ ಕುಟುಂಬದವರಿಗೆ ನೌಕರಿ ನೀಡಿಲ್ಲ. ಬೆಂಗಳೂರಿಗರ ಬಗ್ಗೆ ಮುಖ್ಯಮಂತ್ರಿಗಿರುವ ತಾತ್ಸಾರವನ್ನು ಇದರಿಂದ ತಿಳಿಯಬಹುದು. ಬಿಬಿಎಂಪಿ ಚುನಾವಣೆ ನಡೆದರೆ ಜನರ ಸಮಸ್ಯೆಗಳಿಗೆ ಸ್ಪಂದಿಸಲು 243 ಜನಪ್ರತಿನಿಧಿಗಳು ಸಿಗುತ್ತಾರೆ ಎಂಬ ಯೋಚನೆ ಕೂಡ ಈ ಸರ್ಕಾರಕ್ಕಿಲ್ಲ. ಮೊನ್ನೆ ನೆರೆ ಬಂದಾಗ ಕೂಡ ಯಾರನ್ನು ಪ್ರಶ್ನಿಸಬೇಕು ಎಂಬ ಗೊಂದಲವು ಬೆಂಗಳೂರಿನ ಜನರನ್ನು ಕಾಡಿತು. ಬಿಬಿಎಂಪಿ ಚುನಾವಣೆ ನಡೆದರೆ ಬಿಜೆಪಿ ಗೆಲ್ಲುವುದಿಲ್ಲ ಎಂಬ ಕಾರಣಕ್ಕೆ ರಾಜ್ಯ ಸರ್ಕಾರವು ಚುನಾವಣೆಯನ್ನು ಮುಂದೂಡುತ್ತಲೇ ಬಂದಿದೆ ಎಂದು ಬ್ರಿಜೇಶ್‌ ಕಾಳಪ್ಪ ಹೇಳಿದರು.

ಬೆಂಗಳೂರಿನ ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಪಕ್ಷಗಳ 28 ಶಾಸಕರಿದ್ದಾರೆ. ಅವರಲ್ಲಿ ಯಾರೂ ಕೂಡ ಬಿಬಿಎಂಪಿ ಚುನಾವಣೆ ನಡೆಯಬೇಕು ಎಂದು ಗಟ್ಟಿಧ್ವನಿಯಲ್ಲಿ ಕೇಳುವ ಪ್ರಯತ್ನ ಮಾಡಿಲ್ಲ. ಅವರ್ಯಾರಿಗೂ ಬಿಬಿಎಂಪಿ ಚುನಾವಣೆ ನಡೆಯುವುದು ಹಾಗೂ ಬೆಂಗಳೂರಿನ ಸಮಸ್ಯೆಗಳಿಗೆ ಜವಾಬ್ದಾರಿ ಹೊರುವವರು ಇರಬೇಕು ಎಂಬ ಕಾಳಜಿಯಿಲ್ಲ. ಆಮ್‌ ಆದ್ಮಿ ಪಾರ್ಟಿಯೊಂದೇ ಬಿಬಿಎಂಪಿ ಚುನಾವಣೆ ನಡೆಯಬೇಕೆಂದು ದೀರ್ಘಕಾಲದಿಂದ ಆಗ್ರಹಿಸುತ್ತಾ ಬಂದಿದೆ. ಏಕೆಂದರೆ ಎಎಪಿಗೆ ಮಾತ್ರ ಬೆಂಗಳೂರಿನ ಸಮಸ್ಯೆಗಳು ಕಾಣಿಸುತ್ತಿವೆ ಎಂದು ಬ್ರಿಜೇಶ್‌ ಕಾಳಪ್ಪ ಹೇಳಿದರು.

ಕಾಂಗ್ರೆಸ್‌ ಮಾಜಿ ವಕ್ತಾರ ಬ್ರಿಜೇಶ್‌ ಕಾಳಪ್ಪ ಆಮ್‌ ಆದ್ಮಿ ಪಾರ್ಟಿಗೆ ಸೇರ್ಪಡೆ
ಬೆಂಗಳೂರು: ಕಾಂಗ್ರೆಸ್‌ನ ಮಾಜಿ ವಕ್ತಾರ ಮತ್ತು ಸುಪ್ರೀಂ ಕೋರ್ಟ್‌ ವಕೀಲ ಬ್ರಿಜೇಶ್‌ ಕಾಳಪ್ಪ ಆಮ್‌ ಆದ್ಮಿ ಪಾರ್ಟಿಗೆ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಅವರ ಸಮ್ಮುಖದಲ್ಲಿ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ʼರಾಜ್ಯದಲ್ಲಿರುವ ಸರ್ಕಾರದಲ್ಲಿ ಭ್ರಷ್ಟಚಾರವು ತುಂಬಿ ತುಳುಕುತ್ತಿದೆ. ಬ್ರಿಜೇಶ್‌ ಕಾಳಪ್ಪ ಅವರು ಈ ಹಿಂದೆ ಇದ್ದ ಪಕ್ಷದಲ್ಲಿ 25 ವರ್ಷ ಸೇವೆಸಲ್ಲಿಸಿದರು ಅವರಿಗೆ ಪಕ್ಷದ ಟಿಕೆಟ್ ಕೊಟ್ಟಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಇಂದಿನ ರಾಜಕೀಯ ವ್ಯವಸ್ಥೆಯು ವ್ಯಕ್ತಿಯ ಸಾಮಾರ್ಥ್ಯ ನೋಡುವಲ್ಲಿ ವಿಫಲವಾಗಿದೆ ಎಂದು ದೂರಿದರು. ಬ್ರಿಜೇಶ್‌ ಕಾಳಪ್ಪ ಅಂತಹ ವ್ಯಕ್ತಿಗಳಿಗೆ ನಮ್ಮ ಪಕ್ಷದಲ್ಲಿ ಮುಕ್ತ ಸ್ವತಂತ್ರ ಕೊಡುತ್ತೇವೆ ಮತ್ತು ದೆಹಲಿ ಮಾದರಿಯನ್ನು ಕರ್ನಾಟಕ್ಕೆ ತಂದು ಮುಂದಿನ ದಿನಗಳಲ್ಲಿ ಕರ್ನಾಟಕ ಮಾದರಿ ಮಾಡಲು ಪ್ರಯತ್ನಿಸುತ್ತೇವೆ ಎಂದು ಹೇಳಿದರು.

ಆಪ್‌ ಸೇರಿದ ಬ್ರಿಜೇಶ್‌ ಕಾಳಪ್ಪ ಮಾತನಾಡಿ ʼ25 ವರ್ಷ ಕಾಂಗ್ರೆಸ್‌ ಪಕ್ಷದಲ್ಲಿ ಕಾರ್ಯಕರ್ತನಾಗಿಯೇ ಇದ್ದೆ, ಕಾಂಗ್ರೆಸ್‌ ಪಕ್ಷದಲ್ಲಿ ನಿಮಗೆ ಟಿಕೆಟ್‌ ಸಿಗಬೇಕಾದರೆ ಪಕ್ಷದಲ್ಲಿನ ಯಾರಿಗಾದರೂ ಸಂಬಂಧಿಕನಾಗಿರಬೇಕು ಇಲ್ಲವೇ ಶ್ರೀಮಂತನಾಗಿರಬೇಕು ಎಂದು ಕಿಡಿಕಾರಿದರು. ಮೇ ತಿಂಗಳ ಕೊನೆಯ ವಾರದಲ್ಲಿ ಕಾಂಗ್ರೆಸ್‌ ಪಕ್ಷವನ್ನು ತೊರೆದ ನಂತರ ಆಮ್‌ ಆದ್ಮಿ ಪಾರ್ಟಿಗೆ ಸೇರುವ ಆಕಾಂಕ್ಷೇಯಲ್ಲಿ ಪಕ್ಷ ಸೇರ್ಪಡೆಗೊಂಡಿದ್ದೇನೆ ಎಂದು ಹರ್ಷವ್ಯಕ್ತಪಡಿಸಿದರು. ನಮ್ಮ ಶ್ರಮ ಮತ್ತು ದುಡಿಮೆ ನಂಬಿ ಕೆಲಸ ಮಾಡಲು ಆಮ್‌ ಆದ್ಮಿ ಪಾರ್ಟಿ ಮುಕ್ತ ಸ್ವತಂತ್ರ ಕೊಡುತ್ತದೆ ಎಂ ವಿಶ್ವಾಸ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ಪಕ್ಷದ ಮುಖಂಡರು ಮತ್ತು ಅನೇಕ ಕಾರ್ಯಕರ್ತರು ಭಾಗವಹಿಸಿದ್ದರು.