Budget – Peepal Media

2025-26ರ ಬಜೆಟ್ ನಲ್ಲಿ ಯಾವ ವಸ್ತುಗಳ ಬೆಲೆ ಏರಿಕೆ, ಯಾವ ವಸ್ತುಗಳ ಬೆಲೆ ಇಳಿಕೆ?
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2025- 26ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ. ಇದು ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಎಂಟನೇ ಬಜೆಟ್ ಆಗಿದ್ದು, ಈ ಬಜೆಟ್ ಮಧ್ಯಮ ವರ್ಗಕ್ಕೆ ವರದಾನವಾಗಲಿದೆಯಾ ಎಂಬುದನ್ನು ನೋಡಬೇಕಿದೆ.

ಮುಖ್ಯವಾಗಿ ಯಾವೆಲ್ಲಾ ವಸ್ತುಗಳ ಬೆಲೆಯಲ್ಲಿ ಏರಿಕೆಯಾಗಿದೆ, ಯಾವೆಲ್ಲಾ ವಸ್ತುಗಳ ಬೆಲೆ ಇಳಿಕೆಯಾಗಿದೆ ಅಂತಾ ನೋಡುವುದಾದರೆ ಈ ಬಾರಿಯ ಬಜೆಟ್ ನಲ್ಲಿ ಮುಖ್ಯವಾಗಿ ಕ್ಯಾನ್ಸರ್ ಹಾಗೂ ಇತರೆ ಅಪರೂಪದ ಕಾಯಿಲೆಗಳಿಗೆ ನೀಡುವ ಅಗತ್ಯ ಔಷಧಿಗಳಿಗೆ ಸುಂಕ ವಿನಾಯಿತಿಯನ್ನು ನೀಡಲಾಗುತ್ತದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಅಗತ್ಯ ಔಷಧಿ ಮಾತ್ರವಲ್ಲದೆ ಹಡಗುಗಳ ನಿರ್ಮಾಣಕ್ಕಾಗಿ ಆಮದು ಮಾಡಿಕೊಳ್ಳುವ ವಸ್ತುಗಳಿಗೂ ಈಗಾಗಲೇ ನೀಡಲಾಗಿರುವ ಸುಂಕ ವಿನಾಯಿತಿಯನ್ನು ಇನ್ನೂ ಹತ್ತು ವರ್ಷಗಳವರೆಗೆ ವಿಸ್ತರಿಸಲಾಗುವುದು ಎಂದಿದ್ದಾರೆ.

ಇದರೊಂದಿಗೆ ಇಂಟರಾಕ್ಟಿವ್ ಫ್ಲಾಟ್ ಪ್ಯಾನೆಲ್ ಡಿಸ್‌ಪ್ಲೇಯ ಸುಂಕವನ್ನು ಶೇಕಡ 10ರಿಂದ ಶೇಕಡ 20ಕ್ಕೆ ಏರಿಕೆ ಮಾಡಲಾಗಿದೆ.

ಟೆಲಿಕಾಂ ಉಪಕರಣಗಳ ಮೇಲಿನ ಸುಂಕವನ್ನು ಶೇಕಡ 10ರಿಂದ ಶೇಕಡ 15ಕ್ಕೆ ಹೆಚ್ಚಿಸಲಾಗಿದೆ.

ಪ್ಲಾಸ್ಟಿಕ್ ಉಪಕರಣಗಳ ಮೇಲಿನ ಕಸ್ಟಮ್ ಸುಂಕವನ್ನು ಶೇಕಡ 25ರಷ್ಟು ಏರಿಸಲಾಗಿದೆ.

ಇನ್ನು ಯಾವ ವಸ್ತುಗಳ ಬೆಲೆ ಇಳಿಕೆ ಆಗಿದೆ ಅನ್ನೋದನ್ನ ಗಮಸಿದರೆ

ಮೊಬೈಲ್ ಫೋನ್‌ಗಳು ಮತ್ತು 36 ಔಷಧಿಗಳಿಗೆ ಸುಂಕ ವಿನಾಯಿತಿ, ಎಲೆಕ್ಟ್ರಿಕ್ ವಾಹನಗಳ ಮೇಲೆ ಸುಂಕ ವಿನಾಯಿತಿ, ಎಲ್‌ಇಡಿ ಟಿವಿ ಮತ್ತು ಸ್ವದೇಶಿ ಬಟ್ಟೆಗಳ ಮೇಲಿನ ಸುಂಕವನ್ನು ಇಳಿಸಲಾಗಿದೆ.

ಹಸಿವೆ, ಅಪೌಷ್ಟಿಕತೆಯಿಂದ ಜನ ಸಾಯಲು ಈ ಬಜೆಟ್‌ ಮಾಡಿದ್ದಾರೋ?
ಬೆಂಗಳೂರು: ಬೆಂಗಳೂರಿನಂತ ಮಹಾನಗರಗಳಲ್ಲಿ ರಸ್ತೆ ಬದಿಗಳಲ್ಲಿ, ಕಟ್ಟಡ ನಿರ್ಮಾಣಗಳಲ್ಲಿ ಕೆಲಸ ಮಾಡುವ ಪುರುಷ ಮತ್ತು ಮಹಿಳಾ ಕಾರ್ಮಿಕರನ್ನು ದಿನನಿತ್ಯ ನೋಡುತ್ತೀರಿ. ಅವರು ಬೇರೆ ಯಾವುದೋ ರಾಜ್ಯ, ಜಿಲ್ಲೆಗಳಿಂದ ತಮ್ಮ ಮಕ್ಕಳೊಂದಿಗೆ ಬಂದು ಕೆಲಸ ಮಾಡುತ್ತಾರೆ. ಈ ನಗರದಲ್ಲಿ ಕೆಲಸ ಮುಗಿಸಿ ಇನ್ನೊಂದು ನಗರಕ್ಕೆ ಅವರ ಪ್ರಯಾಣ. ಈ ಮಕ್ಕಳ ಶಿಕ್ಷಣದ ಕತೆ ಏನು? ಈ ಕಾರ್ಮಿಕರಿಗೆ ಸರ್ಕಾರಗಳ ಕಡೆಯಿಂದ ಸಿಗಬೇಕಾದ ಪಡಿತರ ಆಹಾರದ ಕತೆ ಏನು? ಈ ಯೋಚನೆ ನಮಗೆ ಬಂದೇ ಬರುತ್ತದೆ.

ಪಡಿತರ ವ್ಯವಸ್ಥೆಯ ಅಡಿಯಲ್ಲಿ ಇವರಿಗೆ ಆಹಾರ ಸಿಗದಿರುವುದು ಸರ್ಕಾರಗಳ ಅತ್ಯಂತ ಹೇಯವಾದ ವಿಫಲತೆ. ದಿನೇ ದಿನೇ ದೇಶ ಹಸಿವೆಯಿಂದ ದಿನ ದೂಡುವ ಜನರಿಂದ ತುಂಬಿ ಹೋಗುತ್ತಿದೆ, ಮಕ್ಕಳು – ಮಹಿಳೆಯರಿಗೆ ಪೌಷ್ಟಿಕಾಂಶಯುಕ್ತ ಆಹಾರ ಸಿಗುತ್ತಿಲ್ಲ. ದೇಶ ಮುಂದುವರಿಯುತ್ತಿದೆ, ಮುಂದುವರಿದಿದೆ ಎಂದು ಭಾವಿಸುವ ಜನ ಇದನ್ನು ದೇಶ ಮತ್ತೆ ಹಿಂದಕ್ಕೆ ಹೋಗುವುದರ ಲಕ್ಷಣ ಎಂದು ಯಾಕೆ ಪರಿಗಣಿಸುತ್ತಿಲ್ಲ.

ಈ ಬಾರಿಯ ಬಜೆಟ್‌ನಲ್ಲಿ ಸಂಘಟಿತ ವಲಯದ ಕಾರ್ಮಿಕರಿಗೆ/ವಲಸೆ ಕಾರ್ಮಿಕರಿಗೆ ಊಟಕ್ಕೇನಾದರೂ ವ್ಯವಸ್ಥೆ ಮಾಡುತ್ತದೆ ಎಂದು ಭಾವಿಸಿದ್ದೆವು. ಆದರೆ ಸರ್ಕಾರ ಅವರನ್ನು ನಡುನೀರಿನಲ್ಲಿ ಬಿಟ್ಟಿದೆ. ಅವರಿನ್ನೂ ಪಡಿತರ ವ್ಯವಸ್ಥೆಯ ಒಳಗೆ ಬಂದಿಲ್ಲ. ಕೇಂದ್ರ ಸರ್ಕಾರ ತನ್ನ 2024-25 ರ ಬಜೆಟ್‌ನಲ್ಲಿ ಆಹಾರ ಸಬ್ಸಿಡಿಗಾಗಿ ನೀಡುವ ಬಜೆಟನ್ನು ಕಡಿಮೆ ಮಾಡಿದೆ. ಇದಕ್ಕಿಂತ ದೊಟ್ಟ ದುರಂತ ಈ ದೇಶದಲ್ಲಿ ಏನಿದೆ?

ಸುಪ್ರೀಂ ಕೋರ್ಟ್‌ ಅನೇಕ ಬಾರಿ ಕೇಂದ್ರ ಸರ್ಕಾರಕ್ಕೆ ನಿರ್ದೇಶನವನ್ನು ನೀಡಿದ್ದರೂ 2024-25ರ ಕೇಂದ್ರ ಬಜೆಟ್‌ನಲ್ಲಿ ಆಹಾರ ಭದ್ರತಾ ವ್ಯವಸ್ಥೆಯಿಂದ ಹೊರಗುಳಿದಿರುವ ವಲಸೆ/ ಅಸಂಘಟಿತ ವಲಯದ ಕಾರ್ಮಿಕರಿಗೆ ಪಡಿತರ ನೀಡಲು ಯಾವುದೇ ಹೆಚ್ಚುವರಿ ಹಂಚಿಕೆಯನ್ನು ಮಾಡಲಾಗಿಲ್ಲ.

ಕೊರೋನಾ ಸಂದರ್ಭದಲ್ಲಿ ವಲಸೆ ಕಾರ್ಮಿಕರು ಎದುರಿಸಿದ ಸಮಸ್ಯೆಗಳು ಮತ್ತು ಉದ್ಯೋಗ ಇಲ್ಲದೆ ಅವರು ಮರಳಿ ತಮ್ಮ ಊರುಗಳಿಗೆ ಹಿಂತಿರುಗಲು ಪರದಾಡಿದ ರೀತಿ ಹಾಗೂ ನಗರ ಪ್ರದೇಶಗಳಲ್ಲಿ ಉಳಿದಿದ್ದ ಕಾರ್ಮಿಕರು ಆಹಾರ ಇಲ್ಲದೆ ಪಟ್ಟ ಸಂಕಷ್ಟ ಅಷ್ಟಿಷ್ಟಲ್ಲ.

ಆಹಾರ ಭದ್ರತಾ ಕಾಯ್ದೆಯ ಅಡಿಯಲ್ಲಿ ಅವರನ್ನು ಸೇರಿಸಿ ಅದರ ವ್ಯಾಪ್ತಿಯನ್ನು ಹೆಚ್ಚಿಸಲು ಸುಪ್ರೀಂ ಕೋರ್ಟ್‌ ನೀಡಿದ ನಿರ್ದೇಶನದ ಹೊರತಾಗಿಯೂ ಕೇಂದ್ರ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿರಲಿಲ್ಲ. ಅಲ್ಲದೇ 2011 ರ ನಂತರ ಜನಗಣತಿ ನಡೆಸಲೂ ಕೇಂದ್ರ ಸರ್ಕಾರ ಮುಂದಾಗಿಲ್ಲ.

ಭಾರತದಲ್ಲಿ ಸದ್ಯಕ್ಕೆ ಸರಿಸುಮಾರು 81 ಕೋಟಿ ಮಂದಿ ಪಡಿತರ ಚೀಟಿಯನ್ನು ಹೊಂದಿದ್ದಾರೆ. ಇವರು ಪ್ರತೀ ತಿಂಗಳು ಇದರಡಿ 5 ಕೆಜಿ ಧಾನ್ಯವನ್ನು ಪಡೆಯುತ್ತಿದ್ದಾರೆ. ಇದನ್ನು 2011ಹಿಂದಿನ ಜನಗಣತಿಯ ಆಧಾರದಲ್ಲಿ ರೂಪಿಸಲಾಗಿದೆ. ಕಾನೂನು ಹೊಸ ಜನಗಣತಿಯ ಆಧಾರ ಮೇಲೆ ಗ್ರಾಮೀಣ ಜನಸಂಖ್ಯೆಯ 75% ಮತ್ತು ನಗರ ಜನಸಂಖ್ಯೆಯ 50% ವರೆಗೆ ಈ ವ್ಯಾಪ್ತಿಗೆ ಒಳಪಡಬೇಕು ಎಂದು ಹೇಳುತ್ತದೆ. 1881ರಿಂದ ಮೊದಲ ಬಾರಿಗೆ ಜನಗಣತಿ ಈ ದೇಶದಲ್ಲಿ ನಡೆದಿಲ್ಲ. ಒಂದು ವೇಳೆ ಜನಗಣತಿ ನಡೆದಿದ್ದರೆ ಆಹಾರ ಭದ್ರತಾ ಕಾಯ್ದೆಯ ಅಡಿಯಲ್ಲಿ 10 ಕೋಟಿ ಜನರು ಸೇರ್ಪಡೆಯಾಗುತ್ತಿದ್ದರು.

ಸದ್ಯ 81 ಕೋಟಿ ಜನ ಪಡಿತರ ಹೊಂದಿರುವುದು ದೊಡ್ಡ ಜಾಲವೆಂಬಂತೆ ಕಂಡು ಬಂದರೂ ಕೊರೋನಾ ಸಂದರ್ಭದಲ್ಲಿ ಕಂಡು ಬಂದ ಆಹಾರ ಸಂಕಷ್ಟ ಈ ವ್ಯವಸ್ಥೆಯನ್ನು ರೂಪಿಸುವಲ್ಲಿ ಆಗಿರುವ ವೈಫಲ್ಯವನ್ನು ತೋರಿಸಿತ್ತು.

ಆಹಾರ ಮತ್ತು ಕೃಷಿ ಸಂಸ್ಥೆ (FAO) ವರದಿಯ ಪ್ರಕಾರ 74.1% ಭಾರತೀಯರು ಕೊರೋನ ಸಂದರ್ಭದಲ್ಲಿ ಆರೋಗ್ಯಕರವಾದ ಆಹಾರವನ್ನು ಪಡೆಯಲು ವಿಫಲವಾಗಿದ್ದರು. ಲಾಕ್‌ಡೌನ್‌ ಜಾರಿ ಮಾಡಿದ ನಂತರ ಕೋಟಿ ಕೋಟಿ ವಲಸೆ ಕಾರ್ಮಿಕರು ತಮ್ಮ ಮಕ್ಕಳು, ಮನೆಯವರನ್ನು ಕರೆದುಕೊಂಡು ಕಿಲೋಮೀಟರ್‌ ಗಟ್ಟಲೆ ನಡೆದು ತಮ್ಮ ಊರುಗಳಿಗೆ ಹಿಂತಿರುಗಲು ಪಟ್ಟ ಪಾಡು ಇಂದಿಗೂ ನಮ್ಮ ಕಣ್ಣ ಮುಂದಿದೆ. ಈ ಭಯಾನಕರ ಪರಿಸ್ಥಿತಿಯನ್ನು ನೋಡಿಯೇ ಸುಪ್ರೀಂ ಕೋರ್ಟ್‌ ಕೇಂದ್ರ ಸರ್ಕಾರಕ್ಕೆ ಅಸಂಘಟಿತ ವಲಯದ ಕಾರ್ಮಿಕರನ್ನು ಆಹಾರ ಭದ್ರತಾ ವ್ಯವಸ್ಥೆಯ ಒಳಗೆ ತರುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಿದ್ದು, ಆದರೆ ಇದನ್ನು ಮಾಡಲು ಕೇಂದ್ರ ಸರ್ಕಾರದ ಕೈಯಲ್ಲಾಗಿಲ್ಲ!

2011 ರ ನಂತರ ಜನಗಣತಿ ಆಗಿಲ್ಲ. ಸದ್ಯ ಇರುವ ಆಹಾರ ಭದ್ರತಾ ಕಾಯ್ದೆಯ ವ್ಯವಸ್ಥೆ 2011 ರ ಜನಗಣತಿಯ ಆಧಾರದಲ್ಲಿ ರೂಪಿಸಲಾಗಿದೆ. ಹಾಗಾದರೆ ಕಳೆದ ಒಂದು ದಶಕದಿಂದ ಈ ವ್ಯವಸ್ಥೆಯಿಂದ ಹೊರಗುಳಿದವರ ಸಂಖ್ಯೆ ಎಷ್ಟು ದೊಡ್ಡದಿರಬಹುದು ಯೋಚಿಸಿ.

ಜನಗಣತಿ ಇಲ್ಲದಿದ್ದರೆ ಪೋಪ್ಯುಲೇಶನ್‌ ಪ್ರೊಜೆಕ್ಷನ್‌ ನಂಬರ್‌ನ (ಭವಿಷ್ಯದ ಜನಸಂಖ್ಯೆಯ ಅಂದಾಜು) ಮೇಲೆ ಆಹಾರ ಭದ್ರತಾ ಕಾಯ್ದೆಯ ವ್ಯಾಪ್ತಿಯನ್ನು ಪರಿಷ್ಕರಿಸುವಂತೆ ಸುಪ್ರೀಂ ಕೋರ್ಟ್‌ ಕೇಂದ್ರ ಸರ್ಕಾರಕ್ಕೆ ಹೇಳಿತ್ತು. ಆದರೆ ಜನಗಣತಿಯ ನಂತರವೇ ಈ ವ್ಯಾಪ್ತಿಯನ್ನು ಹೆಚ್ಚಿಸುತ್ತೇವೆ ಎಂದು ಕೇಂದ್ರ ಸರ್ಕಾರ ಹಠ ಹಿಡಿದು ಕುಳಿತಿದೆ. ಯಾವಾಗ ಈ ಜನಗಣತಿ ಆಗುತ್ತದೆಯೋ ಗೊತ್ತಿಲ್ಲ, ಇದಕ್ಕಾಗಿ ದಿನಾಂಕವನ್ನೂ ಘೋಷಿಸಿಲ್ಲ.

ಅಲ್ಲಿಯ ವರೆಗೆ ಜನ ಹಸಿವಿನಿಂದ ಬದುಕಲು ಸಾಧ್ಯವಿಲ್ಲ ಎಂಬುದನ್ನು ಮನಗಂಡ ಸುಪ್ರೀಂ ಕೋರ್ಟ್‌ 2023 ರ ಎಪ್ರಿಲ್‌ ತಿಂಗಳಲ್ಲಿ, ಪಡಿತರ ಚೀಟಿ ಇಲ್ಲದಿದ್ದರೂ ಇ-ಶ್ರಮ್‌ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಂಡಿರುವ ಎಂಟು ಕೋಟಿ ವಲಸೆ ಕಾರ್ಮಿಕರಿಗೆ ಪಡಿತರ ಚೀಟಿ ನೀಡುವಂತೆ ನಿರ್ದೇಶನ ನೀಡಿತು. ಕೇಂದ್ರ ಸರ್ಕಾರ ಇ-ಶ್ರಮ್‌ನಲ್ಲಿ ನೋಂದಾಯಿಸಿಕೊಂಡಿರುವವರ ಡೇಟಾಬೇಸ್‌ ಜೊತೆಗೆ ಆಹಾರ ಭದ್ರತಾ ಕಾಯ್ದೆಯ ಡೇಟಾಬೇಸನ್ನು ತುಲನೆ ಮಾಡಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದೆ.

2024 ರ ಮಾರ್ಚ್ ತಿಂಗಳಲ್ಲಿ ಇವರಿಗೆಲ್ಲಾ ಪಡಿತರ ನೀಡಲು ಕಾಯ್ದೆಯ ಅಡಿಯಲ್ಲಿ ಹಾಕಲಾಗಿರುವ ರಾಜ್ಯವಾರು ಕೋಟಾಗಳಿಂದ ಯಾವುದೇ ತೊಂದರೆ ಆಗಬಾರದು ಎಂದು ಸುಪ್ರೀಂ ಕೋರ್ಟ್‌ ಎಚ್ಚರಿಕೆ ನೀಡಿತ್ತು. ಕೇಂದ್ರ ಬಜೆಟ್ ಮಂಡನೆಗೆ ಒಂದು ವಾರದ ಮೊದಲು ಕೋರ್ಟ್‌ ತನ್ನ ಆದೇಶಗಳನ್ನು ಪಾಲಿಸದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ತರಾಟೆಗೆ ತೆಗೆದುಕೊಂಡಿತು. ಅರ್ಹರಿಗೆ 4 ವಾರಗಳಲ್ಲಿ ಪಡಿತರ ಚೀಟಿಗಳನ್ನು ವಿತರಿಸಲು ಎಲ್ಲಾ ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಿತು ಮತ್ತು ಹೆಚ್ಚುವರಿ ಪಡಿತರ ಕಾರ್ಡ್‌ಗಳಿಗಾಗಿ ರಾಜ್ಯಗಳು-ಕೇಂದ್ರಾಡಳಿತ ಪ್ರದೇಶಗಳಿಗೆ ಆಹಾರ ಧಾನ್ಯಗಳನ್ನು ಒದಗಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಸುಪ್ರೀಂ ಕೋರ್ಟ್‌ ಆದೇಶ ನೀಡಿದ ನಂತರ ಇದನ್ನು ಪಾಲಿಸಲು ಕೇಂದ್ರ ಸರ್ಕಾರ ತನ್ನ ಬಜೆಟ್‌ನಲ್ಲಿ ಏನನ್ನಾದರೂ ಮಾಡಬಹುದಿತ್ತು. ಆದರೆ ಆಗಿದ್ದು ಬೇರೆ. ಹಿಂದಿನ ವರ್ಷದ ಪರಿಷ್ಕೃತ ಅಂದಾಜಿಗೆ ಹೋಲಿಸಿದರೆ ಆಹಾರ ಸಬ್ಸಿಡಿಗೆ ಬಜೆಟ್ ನಲ್ಲಿ  2.12 ರಿಂದ 2.05 ಲಕ್ಷ ಕೋಟಿ, ಅಂದರೆ 3.3% ರಷ್ಟು ಕಡಿತಗೊಳಿಸಲಾಗಿದೆ!

ಇತ್ತೀಚೆಗೆ ಹೊರಬಂದಿರುವ Household Consumption Expenditure Survey (HCES)ಯ ಪ್ರಕಾರ ಕೇವಲ 56% ಭಾರತೀಯರು ದಿನಕ್ಕೆ ಮೂರು ಹೊತ್ತು ಊಟ ಮಾಡುತ್ತಿದ್ದಾರೆ. ಜರ್ನಲ್ ಆಫ್ ಅಮೇರಿಕನ್ ಮೆಡಿಕಲ್ ಅಸೋಸಿಯೇಷನ್‌ನಲ್ಲಿ ಪ್ರಕಟವಾದ ಅಧ್ಯಯನ ತಾನು ಸರ್ವೇ ಮಾಡಿದ 92 ದೇಶಗಳಲ್ಲಿ ಭಾರತದಲ್ಲಿಯೇ ಒಪ್ಪತ್ತಿನ ಊಟ ಮಾಡದ ಅತಿ ಹೆಚ್ಚು ಸಂಖ್ಯೆಯ ಮಕ್ಕಳು (zero-food children) (67 ಲಕ್ಷ) ಇದ್ದಾರೆ ಎಂದು ಹೇಳಿದೆ.

ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ (National Family Health Survey-5) ಭಾರತದಲ್ಲಿ 35% ಬೆಳವಣಿಗೆ ಕುಂಠಿತ , ಮತ್ತು 19% ಕ್ಷೀಣತೆ ಇರುವ ಮಕ್ಕಳೂ ಹಾಗು ರಕ್ತ ಹೀನತೆ ಇರುವ 57% ಮಹಿಳೆಯರು ಮತ್ತು 67% ಮಕ್ಕಳು ಇರುವುದನ್ನು ತೋರಿಸಿದೆ.

ಭಾರತವು 19.5 ಕೋಟಿ ಅಪೌಷ್ಟಿಕ ಜನರಿಂದ ತುಂಬಿಹೋಗಿದೆ – ಇದು ವಿಶ್ವದಲ್ಲೇ ಅತಿ ಹೆಚ್ಚು- ಎಂದು ಜುಲೈ 24 ರಂದು ಬಿಡುಗಡೆಯಾದ ಈ ವರ್ಷದ ‘ಸ್ಟೇಟ್ ಆಫ್ ಫುಡ್ ಸೆಕ್ಯುರಿಟಿ ಅಂಡ್ ನ್ಯೂಟ್ರಿಷನ್ ಇನ್ ದಿ ವರ್ಲ್ಡ್‘ (SOFI)  ವರದಿ ಹೇಳಿದೆ.

ಇದನ್ನು ಓದಿ: ಭಾರತದಲ್ಲಿ 19.5 ಕೋಟಿ ಜನ ಅಪೌಷ್ಟಿಕರು- ವಿಶ್ವದಲ್ಲೇ ಅತೀ ಹೆಚ್ಚು: ವಿಶ್ವಸಂಸ್ಥೆ ವರದಿ

ಒಪ್ಪತ್ತಿನ ಊಟವಿಲ್ಲದೆ ದಿನದೂಡುತ್ತಿರುವ ವಲಸೆ ಕಾರ್ಮಿಕರು, ಅಪೌಷ್ಟಿಕತೆಯ ಸಮಸ್ಯೆ, ಆಹಾರ ಸಂಬಂಧಿ ಆರೋಗ್ಯ ಸಮಸ್ಯೆಗಳು ಕಾರ್ಮಿಕರು, ಮಕ್ಕಳು, ಮಹಿಳೆಯರ ಜೀವ ಹಿಂಡುತ್ತಿರುವಾಗ ಕೇಂದ್ರ ಸರ್ಕಾರ ನಡೆದುಕೊಂಡಿರುವ ರೀತಿ ಅಕ್ಷಮ್ಯ. ವಲಸೆ ಕಾರ್ಮಿಕರನ್ನು ಆಹಾರ ಭದ್ರತಾ ಕಾಯ್ದೆಯ ವ್ಯಾಪ್ತಿಗೆ ಸೇರಿಸಲು, ದೇಶದಲ್ಲಿ ಹಸಿವಿನ ಪ್ರಮಾಣವನ್ನು ತಗ್ಗಿಸಲು ಕ್ರಮ ವಹಿಸಬೇಕಾದ ಕೇಂದ್ರ ಸರ್ಕಾರ ಇದಕ್ಕಾಗಿ ಬಜೆಟನ್ನೇ ಕಡಿಮೆ ಮಾಡಿ ಭಾರತೀಯರಿಗೆ ವಂಚನೆ ಮಾಡಿದೆ.

ಕೇಂದ್ರ ಬಜೆಟ್‌ 2024ರ ಮುಖ್ಯಾಂಶ: ಬಡವ, ಮಹಿಳೆ, ಯುವಕ, ಅನ್ನದಾತರ ಉದ್ಧಾರವೇ ಕೇಂದ್ರದ ಗುರಿ!
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1 ರ ಗುರುವಾರ ಲೋಕಸಭೆಯಲ್ಲಿ ಮಧ್ಯಂತರ ಬಜೆಟ್ 2024 ಅನ್ನು ಮಂಡಿಸಿದ್ದಾರೆ. 2024ರ ಲೋಕಸಭೆ ಚುನಾವಣೆಗೂ ಮುನ್ನ ನರೇಂದ್ರ ಮೋದಿ ಸರ್ಕಾರದ ಕೊನೆಯ ಬಜೆಟ್ ಇದಾಗಿದೆ.

"ಕಳೆದ ಹತ್ತು ವರ್ಷಗಳಲ್ಲಿ ಭಾರತದ ಆರ್ಥಿಕತೆಯು ಆಳವಾದ ಧನಾತ್ಮಕ ರೂಪಾಂತರವನ್ನು ಕಂಡಿದೆ. ಭಾರತದ ಜನರು ಭರವಸೆ ಮತ್ತು ಆಶಾವಾದದಿಂದ ಭವಿಷ್ಯವನ್ನು ಎದುರು ನೋಡುತ್ತಿದ್ದಾರೆ" - ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ಗರೀಬ್ (ಬಡವರು), ಮಹಿಳಾ (ಮಹಿಳೆಯರು), ಯುವ (ಯುವಕರು) ಮತ್ತು ಅನ್ನದಾತ (ರೈತರು) ಅವರ ಅಗತ್ಯತೆಗಳು, ಆಕಾಂಕ್ಷೆಗಳು ಮತ್ತು ಕಲ್ಯಾಣವು ಪ್ರಧಾನಿ ಮೋದಿ ನೇತೃತ್ವದ ಸರ್ಕಾರದ “ಮಹತ್ವದ ಆದ್ಯತೆ” ಎಂದು ಅವರು ಹೇಳಿದ್ದಾರೆ.

ಸಾರ್ವತ್ರಿಕ ಚುನಾವಣೆಯ ನಂತರ ಹೊಸ ಸರ್ಕಾರ ಪ್ರಮಾಣ ವಚನ ಸ್ವೀಕರಿಸಿದ ನಂತರ ಮುಂದಿನ ಪೂರ್ಣ ಪ್ರಮಾಣದ ಬಜೆಟ್ ಅನ್ನು ಜುಲೈನಲ್ಲಿ ಮಂಡಿಸಲಾಗುವುದು ಎಂದು ಹೇಳಿರುವ ನಿರ್ಮಲಾ, ಸ್ಪಷ್ಟವಾಗಿ ಇದೊಂದು ಚುನಾವಣೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಮಾಡಿರುವ ಬಜೆಟ್‌ ಎಂಬುದನ್ನು ತೋರಿಸಿಕೊಟ್ಟಿದ್ದಾರೆ.

2024-25ರ ಕೇಂದ್ರ ಬಜೆಟ್‌ನ ಪ್ರಮುಖ ಮುಖ್ಯಾಂಶಗಳು:

ಆದಾಯ ತೆರಿಗೆ ಸ್ಲ್ಯಾಬ್‌ಗಳಲ್ಲಿ ಯಾವುದೇ ಬದಲಾವಣೆ ಇಲ್ಲ.

ಕಳೆದ 10 ವರ್ಷಗಳಲ್ಲಿ 25 ಕೋಟಿ ಜನರು ಬಹು ಆಯಾಮದ ಬಡತನದಿಂದ ಹೊರಬಂದಿದ್ದಾರೆ.

ಪ್ರಧಾನ ಮಂತ್ರಿ ಆವಾಸ್ ಯೋಜನೆ – ಗ್ರಾಮೀಣ (ಪಿಎಂಎವೈ-ಜಿ) ಅಡಿಯಲ್ಲಿ ಇನ್ನೂ ಎರಡು ಕೋಟಿ ಮನೆಗಳನ್ನು ಘೋಷಿಸಲಾಗಿದೆ.

ತಂತ್ರಜ್ಞಾನ ಪರಿಣಿತ ಯುವಕರಿಗೆ ‘ಸುವರ್ಣ ಯುಗ’: ಸನ್‌ರೈಸ್ ಡೊಮೇನ್‌ಗಳಲ್ಲಿ ಸಂಶೋಧನೆ ಮತ್ತು ಆವಿಷ್ಕಾರವನ್ನು ಗಣನೀಯವಾಗಿ ಹೆಚ್ಚಿಸಲು ಖಾಸಗಿ ವಲಯವನ್ನು ಉತ್ತೇಜಿಸಲು 50 ವರ್ಷಗಳವರೆಗೆ ಬಡ್ಡಿ ರಹಿತ ಸಾಲದೊಂದಿಗೆ 1 ಲಕ್ಷ ಕೋಟಿ ರೂಪಾಯಿಗಳ ಕಾರ್ಪಸ್ ಅನ್ನು ಸ್ಥಾಪಿಸಲಾಗುವುದು.

ಮನೆಯ ಛಾವಣಿಗಳಿಗೆ ಸೋಲಾರ್‌ ಅಳವಡಿಸುವ ಮೂಲಕ ಒಂದು ಕೋಟಿ ಮನೆಗಳಿಗೆ ಪ್ರತಿ ತಿಂಗಳು 300 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್. ಈ ಯೋಜನೆಯು ರಾಮಮಂದಿರ ಶಂಕುಸ್ಥಾಪನೆಯ ದಿನದಂದು ಪ್ರಧಾನಿ ನರೇಂದ್ರ ಮೋದಿಯವರು ಮಾಡಿರುವ ಸಂಕಲ್ಪವಾಗಿದೆ.

ಪ್ರವಾಸೋದ್ಯಮ ಕ್ಷೇತ್ರಗಳ ‘ಸಮಗ್ರ’ ಅಭಿವೃದ್ಧಿ: ದೇಶೀಯ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಬಂದರು ಸಂಪರ್ಕ ಯೋಜನೆಗಳು, ಪ್ರವಾಸೋದ್ಯಮ ಮೂಲಸೌಕರ್ಯ ಮತ್ತು ಸೌಕರ್ಯಗಳನ್ನು ಲಕ್ಷದ್ವೀಪ ಸೇರಿದಂತೆ ಭಾರತಕ್ಕೆ ಸೇರಿದ ದ್ವೀಪಗಳಿಗೆ ನೀಡುವುದು.

ಪ್ರಧಾನ ಮಂತ್ರಿ-ಜನ್ ಧನ್ ಖಾತೆಗಳನ್ನು ಬಳಸಿಕೊಂಡು ಸರ್ಕಾರದಿಂದ 34 ಲಕ್ಷ ಕೋಟಿ ರೂಪಾಯಿಗಳ ನೇರ ಲಾಭ ವರ್ಗಾವಣೆ ಮಾಡಿರುವುದರಿಂದ ಕೇಂದ್ರ ಸರ್ಕಾರಕ್ಕೆ 2.7 ಲಕ್ಷ ಕೋಟಿ ರೂಪಾಯಿಗಳ ಉಳಿತಾಯವಾಗಿದೆ. ಪಿಎಂ-ಸ್ವನಿಧಿ PM-SVANidhi ಮೂಲಕ 78 ಲಕ್ಷ ಬೀದಿ ವ್ಯಾಪಾರಿಗಳಿಗೆ ಸಾಲದ ನೆರವು. ಆ ಒಟ್ಟು ಮೊತ್ತದಿಂದ 2.3 ಲಕ್ಷ ಮಂದಿ ಮೂರನೇ ಬಾರಿಗೆ ಸಾಲ ಪಡೆದ್ದಾರೆ.

ಪರಿಷ್ಕೃತ ವಿತ್ತೀಯ ಕೊರತೆ – ಸರ್ಕಾರದ ಆದಾಯ ಮತ್ತು ವೆಚ್ಚಗಳ ನಡುವಿನ ಅಂತರ – 2023-24ರ GDP ಯ 5.8% ದಷ್ಟಿದೆ. 2025-26ರಲ್ಲಿ ವಿತ್ತೀಯ ಕೊರತೆಯನ್ನು ಜಿಡಿಪಿಯ ಶೇಕಡಾ 4.5 ಕ್ಕಿಂತ ಕಡಿಮೆಗೊಳಿಸುವುದು ಗುರಿಯಾಗಿದೆ.

ಬಂಡವಾಳ ವೆಚ್ಚವನ್ನು 11.11 ಲಕ್ಷ ಕೋಟಿ ರುಪಾಯಿಗೆ ಹೆಚ್ಚಿಸಲಾಗಿದೆ: ಬಂಡವಾಳ ವೆಚ್ಚವನ್ನು 11.1% ರಿಂದ ರೂ 11.11 ಲಕ್ಷ ಕೋಟಿಗೆ – GDP ಯ 3.4 ಶೇಕಡಾಕ್ಕೆ ಹೆಚ್ಚಿಸಲು ಬಜೆಟ್ ಪ್ರಸ್ತಾಪಿಸಿದೆ.

ರಕ್ಷಣಾ ಉದ್ದೇಶಗಳಿಗಾಗಿ ಡೀಪ್-ಟೆಕ್ ತಂತ್ರಜ್ಞಾನಗಳು ಮತ್ತು ‘ಆತ್ಮನಿರ್ಭರ್ತ’ಯನ್ನು (ಸ್ವಾವಲಂಬನೆ) ಹೆಚ್ಚಿಸುವುದು.

ಬಿಜೆಪಿ ಅವಧಿಯಲ್ಲಿ ಸ್ಥಗಿತಗೊಳಿಸಿದ್ದ ವಿದ್ಯಾರ್ಥಿ ವೇತನ ಪುನರರಂಭಕ್ಕೆ ಕೃತಜ್ಞತೆ : ಸಚಿವ ಜಮೀರ್ ಅಹಮದ್
ಬೆಂಗಳೂರು : ಅಭಿವೃದ್ಧಿ ಮತ್ತು ಸಾಮಾಜಿಕ ನ್ಯಾಯದ ಮೂಲ ಮಂತ್ರದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ ಅಭಿವೃದ್ಧಿಗೆ ಪೂರಕವಾಗಿದೆ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ, ವಖ್ಫ್ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.

ಬಜೆಟ್ನಲ್ಲಿ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಬದ್ಧತೆ ತೋರಿರುವ ಜತೆಗೆ ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯುವ ನೀಲ ನಕ್ಷೆ ಬಜೆಟ್ ಒಳಗೊಂಡಿದೆ ಎಂದು ತಿಳಿಸಿದ್ದಾರೆ.

ಅಲ್ಪಸಂಖ್ಯಾತ ಸಮುದಾಯದ ಶಿಕ್ಷಣ ಮತ್ತು ಉದ್ಯೋಗ ಸೃಷ್ಟಿಗೆ ಬಜೆಟ್ ನಲ್ಲಿ ಒತ್ತು ನೀಡಿರುವುದರ ಜತೆಗೆ 2,101 ಕೋಟಿ ರೂ. ಒದಗಿಸಿ ಬಿಜೆಪಿ ಅವಧಿಯಲ್ಲಿ ಸ್ಥಗಿತ ಗೊಳಿಸಲಾಗಿದ್ದ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿ ವೇತನ ಪುನರಾರಂಭಗೊಳಿಸಸಲು 60 ಕೋಟಿ ರೂ. , ಅರ್ಧಕ್ಕೆ ನಿಂತಿರುವ ಶಾದಿ ಮಹಲ್ ಹಾಗೂ ಸಮುದಾಯ ಭವನ ಕಾಮಗಾರಿ ಪೂರ್ಣಗೊಳಿಸಲು 54 ಕೋಟಿ ರೂ. ಅನುದಾನ ನೀಡಿರುವುದಕ್ಕೆ ಮುಖ್ಯಮಂತ್ರಿ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

ಅದೇ ರೀತಿ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಮೇಲ್ದರ್ಜೆಗೇರಿಸಲು 30 ಕೋಟಿ ರೂ., ಅರಿವು ಶಿಕ್ಷಣ ಸಾಲ ಕ್ಕೆ 73 ಕೋಟಿ ರೂ., ಅಲ್ಪಸಂಖ್ಯಾತ ಸಮುದಾಯದ ಕಾಲೋನಿಗಳ ಅಭಿವೃದ್ಧಿ ಗೆ 360 ಕೋಟಿ ರೂ. ಅಲ್ಪಸಂಖ್ಯಾತ ಸಮುದಾಯದ ಶಾಲಾ ಕಾಲೇಜುಗಳಲ್ಲಿ ಕನ್ನಡ ಮತ್ತು ಇಂಗ್ಲಿಷ್ ಕಲಿಸುವ ಭಾಷಾ ಲ್ಯಾಬ್ ಗಳಿಗೆ 5 ಕೋಟಿ ರೂ., ಸ್ವಾವಲಂಭಿ ಸಾರಥಿ ಯೋಜನೆಯಡಿ 3 ಲಕ್ಷ ರೂ. ನೆರವು, ಕ್ರೈಸ್ತ ಅಭಿವೃದ್ಧಿ ನಿಗಮಕ್ಕೆ 100 ಕೋಟಿ ರೂ. ವಖ್ಫ್ ಆಸ್ತಿ ಸಂರಕ್ಷಣೆಗೆ 40 ಕೋಟಿ ರೂ. ಒದಗಿಸಿದ್ದು ಆರ್ಥಿಕ ಸಂಕಷ್ಟದ ನಡುವೆಯೂ ಬದ್ಧತೆ ಮೆರೆದಿದ್ದಾರೆ ಎಂದು ಹೇಳಿದ್ದಾರೆ.

ವಸತಿ ಇಲಾಖೆ ಯಡಿ ಹಿಂದಿನ ಸರ್ಕಾರದ ಅವಧಿಯಲ್ಲಿ ಅರ್ಧಕ್ಕೆ ನಿಂತಿರುವ 12 ಲಕ್ಷ ಮನೆಗಳ ಪೈಕಿ ಈ ವರ್ಷ 3 ಲಕ್ಷ ಮನೆ ಪೂರ್ಣ ಗೊಳಿಸಿ ಹಂಚಿಕೆ ಮಾಡಲು 2,450 ಕೋಟಿ ರೂ. ಒದಗಿಸಿರುವುದುu ಸ್ವಾಗತ ಎಂದು ತಿಳಿಸಿದ್ದಾರೆ.

ಒಟ್ಟಾರೆ ಬಜೆಟ್ ಆರ್ಥಿಕತೆ ಮತ್ತು ಅಭಿವೃದ್ಧಿ ಗೆ ವೇಗ ನೀಡಿ ರಾಜ್ಯದ ಸಮಗ್ರ ಅಭಿವೃದ್ಧಿಯ ದೃಷ್ಟಿಕೋನ ಹೊಂದಿದೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರ 14ನೇ ಬಜೆಟ್ ಭಾಷಣದ ಪೂರ್ಣ ಪಾಠ ಭಾಗ-20 – ತೆರಿಗೆ ಪ್ರಸ್ತಾವನೆಗಳು, ವಾಣಿಜ್ಯ ತೆರಿಗೆಗಳಿಗೆ ಏನು, ಎಷ್ಟು?
ತೆರಿಗೆ ಪ್ರಸ್ತಾವನೆಗಳು
ವಾಣಿಜ್ಯ ತೆರಿಗೆಗಳು

ದೇಶದ ದೊಡ್ಡ ರಾಜ್ಯಗಳಲ್ಲಿ ನಮ್ಮ ರಾಜ್ಯವು ಜಿ.ಎಸ್‍.ಟಿ ತೆರಿಗೆ ಸಂಗ್ರಹಣೆಯಲ್ಲಿ ಪ್ರಸಕ್ತ ವರ್ಷದ ಮೊದಲ ತ್ರೈಮಾಸಿಕದಲ್ಲಿ
ಶೇ. 21 ರಷ್ಟು ಅತ್ಯಧಿಕ ಬೆಳವಣಿಗೆ ದರವನ್ನು ಸಾಧಿಸಿದೆ. ಪ್ರಸ್ತುತ ಸಾಲಿನ ಮೊದಲನೇ ತ್ರೈಮಾಸಿಕದಲ್ಲಿ ಕೆ.ಜಿ.ಎಸ್‍.ಟಿ ರಾಜಸ್ವ ಸಂಗ್ರಹವು 18,962 ಕೋಟಿ ರೂ.ಗಳಾಗಿರುತ್ತದೆ.

ಪರಿಣಾಮಕಾರಿ ತೆರಿಗೆ ಆಡಳಿತಕ್ಕಾಗಿ ಹಾಗೂ ವಾಣಿಜ್ಯೋದ್ಯಮಗಳಿಗೆ ಉತ್ತಮ ಸಂಪರ್ಕವನ್ನು ನೀಡಲು, ಬೆಂಗಳೂರು ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ನಾಲ್ಕು ಹೊಸ ವಿಭಾಗಗಳನ್ನು ಶೀಘ್ರದಲ್ಲಿ ಕಾರ್ಯೋನ್ಮುಖಗೊಳಿಸಲಾಗುವುದು. ಅತ್ಯಧಿಕ ತೆರಿಗೆ ಪಾವತಿದಾರರಿಗಾಗಿ ಒಂದು ಪ್ರತ್ಯೇಕ ವಿಭಾಗವನ್ನು ಬೆಂಗಳೂರು ನಗರದಲ್ಲಿ ಸ್ಥಾಪಿಸಲಾಗುವುದು.

ದತ್ತಾಂಶ ವಿಶ್ಲೇಷಣೆಗಾಗಿ ಮತ್ತು ರಾಜಸ್ವ ಸಂಗ್ರಹಣೆಯನ್ನು ವೃದ್ಧಿಗೊಳಿಸಲು ಕೃತಕ ಬುದ್ಧಿಮತ್ತೆ ಮತ್ತು ಯಂತ್ರ ಕಲಿಕೆ ತಂತ್ರಜ್ಞಾನವನ್ನು ಬಳಸಲಾಗುತ್ತಿದೆ.

2023-24ನೇ ಸಾಲಿಗೆ ವಾಣಿಜ್ಯ ತೆರಿಗೆ ಇಲಾಖೆಯ ರಾಜಸ್ವ ಸಂಗ್ರಹಣೆಯ ಗುರಿಯನ್ನು 1,01,000 ಕೋಟಿ ರೂ.ಗಳಿಗೆ ನಿಗದಿಪಡಿಸಲಾಗಿದೆ.
ಅಬಕಾರಿ

ಮದ್ಯದ ಎಲ್ಲಾ 18 ಘೋಷಿತ ಬೆಲೆ ಸ್ಲಾಬ್‍ಗಳ ಮೇಲಿನ ಹೆಚ್ಚುವರಿ ಅಬಕಾರಿ ಸುಂಕದ ದರಗಳನ್ನು ಅನುಬಂಧ (ಅ) ರಲ್ಲಿರುವಂತೆ ಹಾಲಿ ಇರುವ ದರಗಳ ಮೇಲೆ ಶೇ.20ರಷ್ಟು ಹೆಚ್ಚಿಸಲು ಪ್ರಸ್ತಾಪಿಸುತ್ತೇನೆ. ಹಾಗೆಯೇ ಬಿಯರ್‍ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಶೇ.175 ರಿಂದ ಶೇ.185ಕ್ಕೆ ಹೆಚ್ಚಿಸಲು ಪ್ರಸ್ತಾಪಿಸುತ್ತೇನೆ. ಅಬಕಾರಿ ಸುಂಕದ ದರಗಳ ಹೆಚ್ಚಳದ ನಂತರವೂ ನಮ್ಮ ರಾಜ್ಯದಲ್ಲಿ ಮದ್ಯದ ದರವು ನೆರೆ ರಾಜ್ಯಗಳಿಗಿಂತ ಕಡಿಮೆ ಇರುತ್ತದೆ.

ಇದರೊಂದಿಗೆ, ಹೆಚ್ಚು ಪರಿಣಾಮಕಾರಿಯಾದ ಜಾರಿ ಮತ್ತು ನಿಯಂತ್ರಣಾ ಕ್ರಮಗಳ ಮೂಲಕ 2023-24ನೇ ಸಾಲಿನಲ್ಲಿ ಅಬಕಾರಿ ಇಲಾಖೆಗೆ 36,000 ಕೋಟಿ ರೂ.ಗಳ ರಾಜಸ್ವ ಸಂಗ್ರಹಣೆ ಗುರಿಯನ್ನು ನಿಗದಿಪಡಿಸಲಾಗಿದೆ.
ನೋಂದಣಿ ಮತ್ತು ಮುದ್ರಾಂಕ

2018-19ನೇ ಸಾಲಿನಲ್ಲಿ ರಾಜ್ಯದ ಎಲ್ಲಾ ಸ್ಥಿರಾಸ್ತಿಗಳ ಮಾರ್ಗಸೂಚಿ ದರಗಳನ್ನು ಪರಿಷ್ಕರಿಸಿ ದಿನಾಂಕ:01.01.2019 ರಿಂದ ಜಾರಿಗೆ ತರಲಾಗಿತ್ತು. ನಂತರದಲ್ಲಿ ಕೋವಿಡ್‍-19 ಕಾರಣದಿಂದ ಮಾರ್ಗಸೂಚಿ ದರಗಳನ್ನು ಪರಿಷ್ಕರಿಸಿರುವುದಿಲ್ಲ.

ಪ್ರಸ್ತುತ ಸ್ವತ್ತುಗಳು ಭೌತಿಕ ಬದಲಾವಣೆಗೊಂಡು ಮಾರುಕಟ್ಟೆ ದರಗಳಲ್ಲಿ ವ್ಯತ್ಯಾಸಗಳು ಆಗಿರುವುದರಿಂದ ಇದನ್ನು ಸರಿಪಡಿಸಲು ಸರಿಯಾದ ಮಾರ್ಗಸೂಚಿ ದರಗಳನ್ನು ನಿಗದಿಪಡಿಸುವುದು ಅವಶ್ಯಕವಿದ್ದು, ಪ್ರಸಕ್ತ ಸಾಲಿನಲ್ಲಿ ರಾಜ್ಯದ ಎಲ್ಲಾ ಸ್ಥಿರಾಸ್ತಿಗಳ ಮಾರ್ಗಸೂಚಿ ದರಗಳನ್ನು ಪರಿಷ್ಕರಿಸಿ ಜಾರಿಗೆ ತರಲು ಉದ್ದೇಶಿಸಲಾಗಿದೆ.

2023-24ನೇ ಸಾಲಿಗೆ ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ 25,000 ಕೋಟಿ ರೂ.ಗಳ ರಾಜಸ್ವ ಸಂಗ್ರಹಣೆ ಗುರಿಯನ್ನು ನಿಗದಿಪಡಿಸಲಾಗಿದೆ.
ಸಾರಿಗೆ

ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆಯನ್ನು ತಿದ್ದುಪಡಿಗೊಳಿಸಿ ಸರಳೀಕರಿಸಲು ಉದ್ದೇಶಿಸಿದೆ. ಮೋಟಾರು ವಾಹನ ತೆರಿಗೆ ವ್ಯವಹಾರಗಳ ನಿಖರವಾದ ಪರಿಶೀಲನೆಗಾಗಿ ಸರಳೀಕೃತ ತಂತ್ರಾಂಶವನ್ನು ತರಲಾಗುವುದು. ಪ್ರಸ್ತುತ ಆಯ್ದ ವಾಹನದ ವರ್ಗಗಳಿಗೆ ವಿಧಿಸುವ ತೆರಿಗೆಯನ್ನು ಪರಿಷ್ಕರಿಸಲಾಗುವುದು.

2023-24ನೇ ಆರ್ಥಿಕ ವರ್ಷಕ್ಕೆ ಸಾರಿಗೆ ಇಲಾಖೆಗೆ ಒಟ್ಟು
11,500 ಕೋಟಿ ರೂ.ಗಳ ರಾಜಸ್ವ ಸಂಗ್ರಹಣೆ ಗುರಿಯನ್ನು ನಿಗದಿಪಡಿಸಲಾಗಿದೆ.
ಗಣಿ ಮತ್ತು ಭೂವಿಜ್ಞಾನ

ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ವೈಜ್ಞಾನಿಕ ಮತ್ತು ತಾಂತ್ರಿಕ ವಿಧಾನಗಳನ್ನು ಅಳವಡಿಸಿಕೊಳ್ಳುವುದು ಹಾಗೂ ಖನಿಜ ಮತ್ತು ಉಪಖನಿಜಗಳ ಮೇಲಿನ ಮೇಲ್ವಿಚಾರಣೆ ನಡೆಸಿ ಸುಸ್ಥಿರ, ಸುರಕ್ಷಿತ ಮತ್ತು ವೈಜ್ಞಾನಿಕ ಗಣಿಗಾರಿಕೆಯನ್ನು ಉತ್ತೇಜಿಸಿ, ರಾಜಸ್ವ ಸಂಗ್ರಹಣೆಯನ್ನು ಹೆಚ್ಚಿಸಲು ಅವಶ್ಯಕ ಸುಧಾರಣೆಗಳನ್ನು ಜಾರಿಗೊಳಿಸಲಾಗುವುದು.

2023-24ನೇ ಸಾಲಿಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ
9,000 ಕೋಟಿ ರೂ.ಗಳ ರಾಜಸ್ವ ಸಂಗ್ರಹಣೆ ಗುರಿಯನ್ನು ನಿಗದಿಪಡಿಸಲಾಗಿದೆ.
ಆಯವ್ಯಯ ಅಂದಾಜು 2023-24

2023-24ನೇ ಸಾಲಿನಲ್ಲಿ ರಾಜಸ್ವ ಜಮೆಗಳು 2,38,410 ಕೋಟಿ ರೂ.ಗಳಾಗುತ್ತದೆಂದು ಅಂದಾಜು ಮಾಡಲಾಗಿದೆ. ಇದರಲ್ಲಿ ರಾಜ್ಯದ ಒಟ್ಟು ಸ್ವಂತ ತೆರಿಗೆ ರಾಜಸ್ವವು ಜಿ.ಎಸ್‍.ಟಿ. ಪರಿಹಾರ ಒಳಗೊಂಡಂತೆ 1,75,653 ಕೋಟಿ ರೂ.ಗಳಾಗುತ್ತದೆಂದು ಅಂದಾಜು ಮಾಡಲಾಗಿದೆ. ತೆರಿಗೆಯೇತರ ರಾಜಸ್ವಗಳಿಂದ 12,500 ಕೋಟಿ ರೂ.ಗಳನ್ನು ಸಂಗ್ರಹಿಸಬಹುದೆಂದು ನಿರೀಕ್ಷಿಸಲಾಗಿದೆ. ಕೇಂದ್ರ ತೆರಿಗೆಯ ಪಾಲಿನ ರೂಪದಲ್ಲಿ 37,252 ಕೋಟಿ ರೂ.ಗಳನ್ನು ಹಾಗೂ 13,005 ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರದಿಂದ ಸಹಾಯಾನುದಾನ ರೂಪದಲ್ಲಿ ರಾಜ್ಯ ಸರ್ಕಾರವು ನಿರೀಕ್ಷಿಸಿದೆ. ಈ ರಾಜಸ್ವ ಜಮೆಗಳಿಗೆ ಪೂರಕವಾಗಿ 85,818 ಕೋಟಿ ರೂ.ಗಳ ಒಟ್ಟು ಸಾಲಗಳು, 23 ಕೋಟಿ ರೂ.ಗಳ ಋಣೇತರ ಸ್ವೀಕೃತಿಗಳು ಮತ್ತು 228 ಕೋಟಿ ರೂ.ಗಳ ಸಾಲ ವಸೂಲು ಮೊತ್ತವನ್ನು ಅಂದಾಜಿಸಲಾಗಿದೆ. 2023-24ನೇ ಸಾಲಿನಲ್ಲಿ ಒಟ್ಟು ಜಮೆಗಳು 3,24,478 ಕೋಟಿ ರೂ.ಗಳಾಗುತ್ತದೆಂದು ಅಂದಾಜು ಮಾಡಲಾಗಿದೆ.

2023-24ನೇ ಸಾಲಿನಲ್ಲಿ ಒಟ್ಟು 2,50,933 ಕೋಟಿ ರೂ.ಗಳ ರಾಜಸ್ವ ವೆಚ್ಚ, 54,374 ಕೋಟಿ ರೂ.ಗಳ ಬಂಡವಾಳ ವೆಚ್ಚ ಹಾಗೂ ಸಾಲದ ಮರುಪಾವತಿ 22,441 ಕೋಟಿ ರೂ.ಗಳ ವೆಚ್ಚವನ್ನು ಒಳಗೊಂಡು, ಒಟ್ಟು ವೆಚ್ಚವು 3,27,747 ಕೋಟಿ ರೂ.ಗಳಾಗುತ್ತದೆಂದು ಅಂದಾಜು ಮಾಡಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರ 14ನೇ ಬಜೆಟ್ ಭಾಷಣದ ಪೂರ್ಣ ಪಾಠ ಭಾಗ-18 – ಇ ಆಡಳಿತಕ್ಕೆ ಏನು, ಎಷ್ಟು?
ಇ-ಆಡಳಿತ

ಇ-ಆಡಳಿತ ಇಲಾಖೆಯ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಗಳಾದ FRUITS, Kutumba, GIS ಗಳನ್ನು ಬಳಸಿಕೊಂಡು ತಾಲ್ಲೂಕು ಹಂತದ ಕಛೇರಿಗಳಲ್ಲಿನ ಶಾಸನಬದ್ಧ ಕಾಲಮಿತಿ ಇರುವಂತಹ ಸೇವೆಗಳನ್ನು ಹೊರತುಪಡಿಸಿ, ಉಳಿದ ಸೇವೆಗಳನ್ನು ತತ್‌ಕ್ಷಣವೇ ಅಥವಾ ಅದೇ ದಿನದಂದು ಅಥವಾ ಅತ್ಯಂತ ಸಂಕೀರ್ಣ ಪ್ರಕರಣಗಳಲ್ಲಿ ಒಂದು ವಾರದೊಳಗೆ ಸಾರ್ವಜನಿಕರಿಗೆ ಒದಗಿಸಲು ಯತ್ನಿಸಲಾಗುವುದು. ಪ್ರಾಯೋಗಿಕವಾಗಿ ಒಂಭತ್ತು ಕೋಟಿ ರೂ.ಗಳ ವೆಚ್ಚದಲ್ಲಿ ಈ ವಿಧಾನವನ್ನು ಜಾರಿಗೆ ತರಲು ಚಿಕ್ಕಬಳ್ಳಾಪುರ, ಕೊರಟಗೆರೆ, ಚಾಮರಾಜನಗರ, ರಾಯಚೂರು, ಧಾರವಾಡ ಮತ್ತು ಬಂಟ್ವಾಳ ತಾಲ್ಲೂಕುಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ.

ಸಕಾಲದಡಿ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳು ಸಂಪರ್ಕಿತ ಡೇಟಾಬೇಸ್‌ (Connected database) ವಿಧಾನ ಬಳಸಿ ಕಡಿಮೆ ಅವಧಿಯಲ್ಲಿ ಸೇವೆಗಳನ್ನು ನೀಡಲು ಬ್ಯಾಕ್‌ ಎಂಡ್‌ ಪ್ರಕ್ರಿಯೆಗಳಲ್ಲಿ (backend processes) ಪಾರದರ್ಶಕತೆ ತರಲಾಗುವುದು.
100 ಪ್ರಮುಖ ಸೇವಾಸಿಂಧು ಸೇವೆಗಳನ್ನು ಸಕಾಲ ವಿನ್ಯಾಸಕ್ಕೆ ಅನುಗುಣವಾಗಿ ಪರಿವರ್ತಿಸಲು Business Process
Re-engineering ಕೋಶವನ್ನು ಸ್ಥಾಪಿಸಲಾಗುವುದು. ಇದರಲ್ಲಿ ಪ್ರಮುಖವಾಗಿ ಆದಾಯ ಪ್ರಮಾಣ ಪತ್ರಕ್ಕಾಗಿ ಕುಟುಂಬ ಆದಾಯವನ್ನು ವಸ್ತುನಿಷ್ಠ ನಿರ್ಣಯ ರೂಪದಲ್ಲಿ ಪರಿವರ್ತಿಸಲಾಗುವುದು. ಈ ಯೋಜನೆಗಾಗಿ ಮೂರು ಕೋಟಿ ರೂ.ಗಳನ್ನು ಒದಗಿಸಲಾಗುವುದು.

ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಕೆ-ಜಿ.ಐ.ಎಸ್. (KGIS) ತಂತ್ರಜ್ಞಾನವನ್ನು ಆಧರಿಸಿ ವೈಜ್ಞಾನಿಕ ಮತ್ತು ತರ್ಕಬದ್ದ ಮಾರ್ಗಸೂಚಿ ದರ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲಾಗುವುದು. ಎಲ್ಲಾ ರಸ್ತೆಗಳು ಮತ್ತು ಬೀದಿಗಳಿಗೆ ಹೊಂದಿಕೊಂಡಿರುವ ಆಸ್ತಿಗಳ ಮಾರ್ಗಸೂಚಿ ಮೌಲ್ಯವನ್ನು ಹಾಗೂ ಅದರ ನಿಖರ ಮುದ್ರಾಂಕ ಶುಲ್ಕವನ್ನು ಆನ್‌ಲೈನ್‌ ನಲ್ಲಿ ಪಡೆಯಲು ಅನುಕೂಲವಾಗಲಿದೆ. ಪ್ರಾಯೋಗಿಕವಾಗಿ ಈ ಯೋಜನೆಯನ್ನು ಒಂದು ಜಿಲ್ಲೆಯಲ್ಲಿ ಪ್ರಾರಂಭಿಸಲಾಗುವುದು ಮತ್ತು ಹಂತ ಹಂತವಾಗಿ ರಾಜ್ಯದೆಲ್ಲೆಡೆ ಜಾರಿಗೊಳಿಸಲಾಗುವುದು.

ಸರ್ಕಾರದ ವಿವಿಧ ಕಾರ್ಯಕ್ರಮ/ಯೋಜನೆಗಳ ಅನುಷ್ಠಾನಕ್ಕಾಗಿ ಇಲಾಖೆಗಳ ಮಧ್ಯೆ ಸಮನ್ವಯತೆ ಸಾಧಿಸಿ ಜಂಟಿ ನಿರ್ಧಾರ ಕೈಗೊಂಡು ಅನುಮೋದನೆ ನೀಡಲು ಅನುವಾಗುವಂತೆ ಜಿಐಎಸ್‌ (GIS) ಆಧಾರಿತ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲಾಗುವುದು.

ರಾಜ್ಯ ವಿಧಾನ ಮಂಡಲದ ಕಲಾಪಗಳನ್ನು ಸುಗಮವಾಗಿ ನಡೆಸುವ ಉದ್ದೇಶದಿಂದ ಹಾಗೂ ಕರ್ನಾಟಕ ವಿಧಾನ ಸಭೆ ಮತ್ತು ವಿಧಾನ ಪರಿಷತ್ತಿನ ಕಲಾಪದ ಮಾಹಿತಿ ಸುಲಭವಾಗಿ ಲಭ್ಯವಾಗಿಸುವ ನಿಟ್ಟಿನಲ್ಲಿ ವಿಧಾನ ಮಂಡಲದ ಚಟುವಟಿಕೆಗಳ ಡಿಜಿಟಲೀಕರಣದ ಯೋಜನೆಯನ್ನು ಹೊಸದಾಗಿ ರೂಪಿಸಿ ಅನುಷ್ಠಾನಗೊಳಿಸಲಾಗುವುದು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ

2015-16ನೇ ಸಾಲಿನಲ್ಲಿ ಮೈಸೂರು ಜಿಲ್ಲೆಯಲ್ಲಿ ಜಾಗತಿಕ ಮಟ್ಟದ ಚಿತ್ರನಗರಿಯನ್ನು ಸ್ಥಾಪಿಸಲು ಘೋಷಿಸಲಾಗಿತ್ತು. ನಂತರದ ಸರ್ಕಾರವು ಸದರಿ ಚಿತ್ರನಗರಿಯನ್ನು ಬೆಂಗಳೂರಿಗೆ ಸ್ಥಳಾಂತರಗೊಳಿಸಲು ಉದ್ದೇಶಿಸಿತ್ತು. ಆದರೆ ಇಲ್ಲಿಯವರೆಗೂ ಅನುಷ್ಠಾನಗೊಳಿಸಿರುವುದಿಲ್ಲ. ನಮ್ಮ ಸರ್ಕಾರವು ಹಿಂದೆ ಘೋಷಿಸಿದಂತೆ ಮೈಸೂರು ಜಿಲ್ಲೆಯಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಚಿತ್ರನಗರಿಯನ್ನು ನಿರ್ಮಿಸಲಿದೆ.

ಬೆಂಗಳೂರಿನಲ್ಲಿರುವ ಡಾ. ರಾಜ್‌ಕುಮಾರ್ ಸ್ಮಾರಕದ ಬಳಿ ಕನ್ನಡ ಚಿತ್ರರಂಗ ಬೆಳೆದು ಬಂದ ಇತಿಹಾಸವನ್ನು ದಾಖಲಿಸುವ ವಸ್ತು ಸಂಗ್ರಹಾಲಯವನ್ನು ನಿರ್ಮಿಸಲಾಗುವುದು.

ಕಳೆದ ಮೂರು ವರ್ಷಗಳಿಂದ ಕನ್ನಡದ ಗುಣಾತ್ಮಕ ಚಿತ್ರಗಳಿಗೆ ಸಹಾಯಧನ ನೀಡುವ ಯೋಜನೆ ಸ್ಥಗಿತಗೊಂಡಿತ್ತು. ಈ ಬಾರಿ, ಆಯ್ಕೆ ಸಮಿತಿಗಳನ್ನು ರಚಿಸಿ, ಸಹಾಯಧನ ನೀಡಲು ಕ್ರಮ ಕೈಗೊಳ್ಳಲಾಗುವುದು.

ಸಂಕಷ್ಟದಲ್ಲಿರುವ ಪತ್ರಕರ್ತರಿಗೆ ನೀಡಲಾಗುವ ಮಾಸಾಶನ ಮೊತ್ತವನ್ನು 10 ಸಾವಿರ ರೂ. ಗಳಿಂದ 12 ಸಾವಿರ ರೂ. ಗಳಿಗೆ ಹೆಚ್ಚಿಸಲಾಗುವುದು. ಮಾಸಾಶನ ಪಡೆಯುವ ಪತ್ರಕರ್ತರು ಮೃತಪಟ್ಟಾಗ ನೀಡಲಾಗುವ ಕುಟುಂಬ ಮಾಸಾಶನ ಮೊತ್ತವನ್ನು ಮೂರು ಸಾವಿರ ರೂ. ಗಳಿಂದ ಆರು ಸಾವಿರ ರೂ. ಗಳಿಗೆ ಹೆಚ್ಚಿಸಲಾಗುವುದು.

ಮುಖ್ಯಮಂತ್ರಿ ಸಿದ್ದರಾಮಯ್ಯನವರ 14ನೇ ಬಜೆಟ್ ಭಾಷಣದ ಪೂರ್ಣ ಪಾಠ ಭಾಗ-17 : ಕಂದಾಯ ಇಲಾಖೆಗೆ ಏನು, ಎಷ್ಟು?
ಕಂದಾಯ

ಕಂದಾಯ ಇಲಾಖೆಯು ಸರ್ಕಾರದ ಮಾತೃ ಇಲಾಖೆ ಎಂದೇ ಜನಜನಿತವಾಗಿದೆ. ಜನಸಾಮಾನ್ಯರು ದೈನಂದಿನ ಬದುಕಿನಲ್ಲಿ ಕಂದಾಯ ಇಲಾಖೆಯಿಂದ ಒಂದಲ್ಲ ಒಂದು ಸೇವೆ ಪಡೆಯುತ್ತಲೇ ಇರುತ್ತಾರೆ. ಇಲಾಖೆಯ ಸ್ಪಂದನಾಶೀಲತೆಯು ಸರ್ಕಾರದ ವರ್ಚಸ್ಸಿನ ಮೇಲೆ ಪರಿಣಾಮ ಬೀರುತ್ತದೆ. ಪ್ರಸ್ತುತ ವ್ಯವಸ್ಥೆಯಲ್ಲಿ ಜನರು ಹಲವಾರು ಸವಾಲುಗಳನ್ನು, ಅಡಚಣೆಗಳನ್ನು ಎದುರಿಸುತ್ತಿದ್ದು, ತಮ್ಮ ಕಾರ್ಯಗಳನ್ನು ಪೂರೈಸಿಕೊಳ್ಳುವುದಕ್ಕಾಗಿ ಮಧ್ಯವರ್ತಿಗಳ ಸಹಾಯವನ್ನು ಪಡೆಯುವ ಅನಿವಾರ್ಯತೆಗೆ ಒಳಗಾಗುತ್ತಿದ್ದಾರೆ. ನಮ್ಮ ಸರ್ಕಾರವು ರಾಜ್ಯದ ಜನತೆಗೆ ಭ್ರಷ್ಟಾಚಾರ ಮುಕ್ತ ಆಡಳಿತವನ್ನು ನೀಡಲು ಮತ್ತು ಇಲಾಖೆಯನ್ನು ಮತ್ತಷ್ಟು ಜವಾಬ್ದಾರಿಯಿಂದ ನಡೆಸಲು ಕಟಿಬದ್ಧವಾಗಿದೆ. ಆಡಳಿತದಲ್ಲಿ ದಕ್ಷತೆಯನ್ನು ಹೆಚ್ಚಿಸುವ ಮೂಲಕ ಕಂದಾಯ ಇಲಾಖೆಯ ಎಲ್ಲಾ ಸೇವೆಗಳನ್ನು ಸರಳವಾಗಿ, ನೇರವಾಗಿ ಮತ್ತು ಸಕಾಲದಲ್ಲಿ ಜನರಿಗೆ ತಲುಪಿಸಲು ಕ್ರಮ ವಹಿಸಲಾಗುವುದು.

ಕರ್ನಾಟಕ ಭೂ-ಕಂದಾಯ ಕಾಯಿದೆಯ ಸೆಕ್ಷನ್‌ 95ಕ್ಕೆ ತಿದ್ದುಪಡಿ ತಂದು ಜಮೀನನ್ನು ಸ್ವಯಂ ಘೋಷಣೆಯ ಮೂಲಕ ಕೃಷಿಯೇತರ ಉದ್ದೇಶಕ್ಕೆ ಭೂ ಪರಿವರ್ತನೆಗೆ ಅವಕಾಶ ಕಲ್ಪಿಸಲಾಗುವುದು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮಂಜೂರಾದ ಜಮೀನನ್ನು ಪುನರ್‌ ಸ್ಥಾಪಿಸುವುದಕ್ಕಾಗಿ ಮನವಿ ಸಲ್ಲಿಸಲು ಕಾಲಮಿತಿಯನ್ನು ಕಾಯ್ದೆಯಲ್ಲಿಯೇ ನಿಗದಿಪಡಿಸಲು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ಕೆಲವು ಭೂಮಿಗಳ ಪರಭಾರೆ ನಿಷೇಧ) ಅಧಿನಿಯಮ (PTCL), 1978ಕ್ಕೆ ಸೂಕ್ತ ತಿದ್ದುಪಡಿ ತರಲಾಗುವುದು.

ಜಿಲ್ಲಾ ಮಟ್ಟದಲ್ಲಿ ಎಲ್ಲಾ ಸರ್ಕಾರಿ ಸೇವೆಗಳು ಒಂದೇ ಸೂರಿನಡಿ ಲಭ್ಯವಾಗುವಂತೆ ಜಿಲ್ಲಾಡಳಿತ ಕಛೇರಿ ಸಂಕೀರ್ಣ ಕಟ್ಟಡಗಳನ್ನು ನಿರ್ಮಿಸಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ದಕ್ಷಿಣ ಕನ್ನಡ, ರಾಯಚೂರು, ಉತ್ತರ ಕನ್ನಡ, ಚಿತ್ರದುರ್ಗ, ಹಾಸನ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಪ್ರಗತಿಯಲ್ಲಿರುವ ಕಟ್ಟಡ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು.

ಜೊತೆಗೆ, ತಾಲ್ಲೂಕು ಮಟ್ಟದ ಎಲ್ಲಾ ಸೇವೆಗಳು ಒಂದೇ ಸೂರಿನಡಿ ಲಭ್ಯವಾಗುವಂತೆ ತಾಲ್ಲೂಕು ಆಡಳಿತ ಸೌಧಗಳನ್ನು ನಿರ್ಮಿಸಲಾಗುತ್ತಿದ್ದು, ಪ್ರಸಕ್ತ ಸಾಲಿನಲ್ಲಿ ಪ್ರಗತಿಯಲ್ಲಿರುವ
25 ತಾಲ್ಲೂಕು ಆಡಳಿತ ಸೌಧ ಕಟ್ಟಡ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು.

ಸರ್ಕಾರಿ ಸ್ವಾಮ್ಯದ ಪೆಟ್ರೋಲಿಯಂ ಕಂಪನಿಗಳ ಸಹಯೋಗದೊಂದಿಗೆ ರಾಜ್ಯ ಸರ್ಕಾರವು ʻಉದ್ಯಮ ಶಕ್ತಿʼ ಎಂಬ ಯೋಜನೆಯಡಿ 100 ಸ್ಥಳಗಳಲ್ಲಿ ಪೆಟ್ರೋಲ್‌ ಬಂಕ್‌ಗಳನ್ನು ಸ್ಥಾಪಿಸಿ, ಅವುಗಳನ್ನು ಮಹಿಳಾ ಸಹಕಾರಿ ಸ್ವಸಹಾಯ ಸಂಘಗಳ ಮೂಲಕ ಸಂಪೂರ್ಣ ನಿರ್ವಹಣೆ ಮಾಡಲು ಕ್ರಮ ವಹಿಸಲಿದೆ. ಪೆಟ್ರೋಲಿಯಂ ಕಂಪನಿಗಳು ಇದರ ನಿರ್ಮಾಣಕ್ಕೆ ಬಂಡವಾಳ ಹೂಡಲಿವೆ. ರಾಜ್ಯ ಸರ್ಕಾರವು ಪೆಟ್ರೋಲ್‌ ಬಂಕ್‌ ಸ್ಥಾಪನೆಗೆ ಭೂಮಿ ಒದಗಿಸುವುದರೊಂದಿಗೆ ತರಬೇತಿ, ಪರವಾನಗಿ, ಮತ್ತಿತರ ಬೆಂಬಲ ನೀಡಲಿದೆ.

ಹವಾಮಾನ ವೈಪರೀತ್ಯಗಳಾದ ಪ್ರವಾಹ, ಅನಾವೃಷ್ಟಿ, ನದಿ ತೀರದ ಸವೆತದಿಂದ ಉಂಟಾಗುವ ಪರಿಣಾಮಗಳನ್ನು ಪರಿಹರಿಸಲು ರಾಜ್ಯ ವಿಪತ್ತು ಉಪಶಮನ ನಿಧಿಯಿಂದ (SDMF) ಪ್ರಸಕ್ತ ಸಾಲಿನಲ್ಲಿ
422 ಕೋಟಿ ರೂ. ವೆಚ್ಚದ ಕಾಮಗಾರಿಗಳನ್ನು ತೆಗೆದುಕೊಳ್ಳಲು ಯೋಜಿಸಲಾಗಿದೆ.

ರಾಷ್ಟ್ರೀಯ ವಿಪತ್ತು ಉಪಶಮನ ನಿಧಿಯಡಿಯಲ್ಲಿ (NDMF) ನಿರ್ದಿಷ್ಟ ವಿಪತ್ತು ಅಪಾಯಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಪ್ರವಾಹ ನಿಯಂತ್ರಣ ಹಾಗೂ ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ ಮತ್ತು ಹಾಸನದಲ್ಲಿ ಭೂಕುಸಿತದ ಅಪಾಯ ತಗ್ಗಿಸುವಿಕೆ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಬಲವರ್ಧನೆ ಮುಂತಾದ ವಿಪತ್ತು ಪರಿಹಾರ ಕಾರ್ಯಕ್ರಮಗಳನ್ನು ಒಟ್ಟು 721 ಕೋಟಿ ರೂ.ಗಳ ವೆಚ್ಚದಲ್ಲಿ ತೆಗೆದುಕೊಳ್ಳಲು ಉದ್ದೇಶಿಸಿದೆ.

ಬೆಳೆಹಾನಿ ಪರಿಹಾರ ದರದಲ್ಲಿ ವಿಮಾ ಯೋಜನೆ ಮೊತ್ತವನ್ನು ಸಂಯೋಜಿಸಿರುವುದನ್ನು ಕೈಬಿಡುವಂತೆ ಹಾಗೂ ರೈತರ ಹಿತದೃಷ್ಟಿಯಿಂದ ರಾಜ್ಯ ಸರ್ಕಾರವು ಹೆಚ್ಚುವರಿಯಾಗಿ ನಿಗದಿಪಡಿಸಿರುವ ಬೆಳೆಹಾನಿ ಪರಿಹಾರ ದರಗಳಂತೆ ಕೇಂದ್ರ ಮಾರ್ಗಸೂಚಿ ದರಗಳನ್ನು ಪರಿಷ್ಕರಿಸಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು.

ರಾಜ್ಯದಲ್ಲಿ ಭಾರೀ ಮಳೆ, ಬಲವಾದ ಗಾಳಿ, ಪ್ರವಾಹದಿಂದ ಉಂಟಾಗುವ ಸಮಸ್ಯೆಗಳನ್ನು ಪರಿಹರಿಸಲು Doppler Weather Radar ಕಣ್ಗಾವಲು ಯಂತ್ರವನ್ನು ರಾಜ್ಯ ವಿಪತ್ತು ಉಪಶಮನ ನಿಧಿಯಿಂದ (SDMF) ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು.

ನೋಂದಣಿಯೇತರ ದಸ್ತಾವೇಜುಗಳಾದ ಒಪ್ಪಂದಗಳು, ಬ್ಯಾಂಕ್‌ ಗ್ಯಾರಂಟಿಗಳು, ಷೇರು ಪ್ರಮಾಣ ಪತ್ರಗಳು ಹಾಗೂ ಬ್ಯಾಂಕಿಂಗ್‌ ದಾಖಲೆಗಳು ಮುಂತಾದ ವಹಿವಾಟುಗಳಿಗೆ ಇ-ಮುದ್ರಾಂಕ ಮತ್ತು ಡಿಜಿಟಲ್‌ ಸ್ಟಾಂಪಿಂಗ್‌ ವ್ಯವಸ್ಥೆಯನ್ನು ಕಡ್ಡಾಯಗೊಳಿಸುವುದರ ಮೂಲಕ ಮುದ್ರಾಂಕ ರಾಜಸ್ವದಲ್ಲಿ ಪಾರದರ್ಶಕತೆ ಹಾಗೂ ನಿಖರತೆ ತರಲಾಗುವುದು.

ಈವರೆಗೆ ಉಪ ನೋಂದಣಾಧಿಕಾರಿಗಳ ಕಛೇರಿಯಲ್ಲಿ ಮಾತ್ರ ವಿವಾಹ ನೋಂದಣಿಯನ್ನು ಕೈಗೊಳ್ಳಲಾಗುತ್ತಿತ್ತು. ಈ ಪ್ರಕ್ರಿಯೆಯನ್ನು ಇನ್ನಷ್ಟು ಸುಗಮಗೊಳಿಸಿ ಜನಸ್ನೇಹಿಯಾಗಿಸಲು ಕಾವೇರಿ 2.0 ತಂತ್ರಾಂಶದಲ್ಲಿ ಆನ್‌ಲೈನ್‌ ಮೂಲಕ ನೋಂದಣಿ ಮಾಡಲು ಮತ್ತು ಗ್ರಾಮ ಪಂಚಾಯಿತಿಗಳಲ್ಲಿನ ಬಾಪೂಜಿ ಸೇವಾ ಕೇಂದ್ರ ಹಾಗೂ ಗ್ರಾಮ-1 ಕೇಂದ್ರಗಳಲ್ಲಿಯೂ ಸಹ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು.

ಬೆಂಗಳೂರಿನಲ್ಲಿರುವ ಉಪ-ನೋಂದಣಾಧಿಕಾರಿ ಕಛೇರಿಗಳಲ್ಲಿ ಜನದಟ್ಟಣೆ ಹೆಚ್ಚಾಗಿರುವುದರಿಂದ ಸಾರ್ವಜನಿಕರಿಗೆ ಆಗುತ್ತಿರುವ ಅನಾನುಕೂಲಗಳನ್ನು ಕಡಿಮೆ ಮಾಡಲು ಬೆಂಗಳೂರಿನ ಎಂಟು ಕಛೇರಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಮೂಲಕ ಜನಸ್ನೇಹಿ ಕಛೇರಿಗಳನ್ನಾಗಿ ಉನ್ನತೀಕರಿಸಲಾಗುವುದು.
ಧಾರ್ಮಿಕ ದತ್ತಿ

ಮೈಸೂರಿನ ಶ್ರೀ ಚಾಮುಂಡೇಶ್ವರಿ ದೇವಾಲಯಕ್ಕೆ ಬರುವ ಲಕ್ಷಾಂತರ ಭಕ್ತಾದಿಗಳಿಗೆ ಅಗತ್ಯ ಮೂಲಭೂತ ಸೌಲಭ್ಯವನ್ನು ಕಲ್ಪಿಸುವ ಸಲುವಾಗಿ ಮತ್ತು ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ದಿ ಕೈಗೊಳ್ಳುವ ದೃಷ್ಟಿಯಿಂದ ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ರಚಿಸಲಾಗುವುದು.

ರಾಜ್ಯದಲ್ಲಿ ದೇವಾಲಯಗಳ ನಿರ್ಮಾಣಕ್ಕೆ ಹೊರ ರಾಜ್ಯದ ಶಿಲ್ಪಿಗಳ ಮೇಲೆ ಅವಲಂಬಿತರಾಗಿದ್ದು, ನಮ್ಮ ರಾಜ್ಯದಲ್ಲಿಯೂ ದೇವಾಲಯಗಳ ನಿರ್ಮಾಣಕ್ಕಾಗಿ ನುರಿತ ಶಿಲ್ಪಿಗಳನ್ನು ತಯಾರಿಸಲು ಕೋಲಾರ ಜಿಲ್ಲೆಯಲ್ಲಿ ಶಿಲ್ಪಕಲಾ ತರಬೇತಿ ಕೇಂದ್ರವನ್ನು ಪ್ರಾರಂಭಿಸಲಾಗುವುದು.

ಭೂ ಸುಧಾರಣಾ ಕಾಯ್ದೆ, 1974 ರನ್ವಯ ನಾನ್ ಇನಾಂ ಜಮೀನುಗಳು ಸರ್ಕಾರದಲ್ಲಿ ವಿಹಿತವಾಗಿರುವುದಕ್ಕೆ ಪರಿಹಾರಾರ್ಥವಾಗಿ ಒಟ್ಟು 3,721 ಸಂಸ್ಥೆಗಳಿಗೆ ಪ್ರಸ್ತುತ ಮಂಜೂರು ಮಾಡುತ್ತಿರುವ ವರ್ಷಾಸನ ಮೊತ್ತವನ್ನು 48,000 ರೂ.ಗಳಿಂದ 60,000 ರೂ.ಗಳಿಗೆ ಹೆಚ್ಚಿಸಲಾಗುವುದು. ಇದಕ್ಕಾಗಿ ಒಟ್ಟು 22 ಕೋಟಿ ರೂ.ಗಳ ಅನುದಾನ ಒದಗಿಸಲಾಗುವುದು.

ಯಾವುದೇ ಗಮನಾರ್ಹ ಆದಾಯವಿಲ್ಲದ ʻಸಿʼ ವರ್ಗದ ಒಟ್ಟು 121 ಮುಜರಾಯಿ ದೇವಸ್ಥಾನಗಳಿಗೆ ಕನಿಷ್ಠ 35 ರೂ.ಗಳಿಂದ
15,000 ರೂ.ಗಳವರೆಗೆ ನಗದು ಸಹಾಯಾನುದಾನ ನೀಡಲಾಗುತ್ತಿದ್ದು, ಎಲ್ಲಾ ದೇವಸ್ಥಾನಗಳಿಗೆ ಸಮಾನವಾಗಿ
15,000 ರೂ.ಗಳ ಸಹಾಯಾನುದಾನವನ್ನು ನೀಡಲಾಗುವುದು.

ಮುಖ್ಯಮಂತ್ರಿ ಸಿದ್ದರಾಮಯ್ಯನವರ 14ನೇ ಬಜೆಟ್ ಭಾಷಣದ ಪೂರ್ಣ ಪಾಠ ಭಾಗ-16 – ಅರಣ್ಯ, ಜೀವಿಪರಿಸ್ಥಿತಿ ಮತ್ತು ಪರಿಸರ ವಲಯಕ್ಕೆ ಏನು, ಎಷ್ಟು?
ಅರಣ್ಯ, ಜೀವಿಪರಿಸ್ಥಿತಿ ಮತ್ತು ಪರಿಸರ

ರಾಜ್ಯದಲ್ಲಿ ಮಾನವ – ಕಾಡಾನೆ ಸಂಘರ್ಷ ಹೆಚ್ಚಾಗಿರುವ ಪ್ರದೇಶಗಳಲ್ಲಿ ಕಾಡಾನೆಗಳು ಅರಣ್ಯ ಪ್ರದೇಶದಿಂದ ಹೊರಗೆ ಬಾರದಂತೆ ನಿಯಂತ್ರಿಸಲು ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಒಂದು 520 ಕಿ.ಮೀ.ಗಳ ಬ್ಯಾರಿಕೇಡ್‌ಗಳನ್ನು ನಿರ್ಮಿಸಲು ಘೋಷಿಸಲಾಗಿತ್ತು. ಈ ಯೋಜನೆಯಡಿಯಲ್ಲಿ ಇಲ್ಲಿಯವರೆಗೂ
312 ಕಿ.ಮೀ. ನಷ್ಟು ಬ್ಯಾರಿಕೇಡ್‌ ನಿರ್ಮಿಸಲಾಗಿದ್ದು, ಬಾಕಿ ಉಳಿದಿರುವ ಬ್ಯಾರಿಕೇಡ್‌ ನಿರ್ಮಾಣ ಪೂರ್ಣಗೊಳಿಸಲು ಆದ್ಯತೆ ನೀಡಲಾಗುವುದು. ಈ ಕಾಮಗಾರಿಗಳ ಅನುಷ್ಠಾನಕ್ಕೆ 2023-24 ರಲ್ಲಿ 120 ಕೋಟಿ ರೂ. ಮೀಸಲಿಡಲಾಗಿದೆ.

ಮಾನವ – ಕಾಡಾನೆ ಸಂಘರ್ಷವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಈಗಾಗಲೇ ಮೈಸೂರು, ಮಂಡ್ಯ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಆನೆ ಕಾರ್ಯಪಡೆಯನ್ನು ರಚಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ರಾಮನಗರ ಮತ್ತು ಬನ್ನೇರುಘಟ್ಟದಲ್ಲಿ ಎರಡು ಹೊಸ ಆನೆ ಕಾರ್ಯಪಡೆಗಳನ್ನು ರಚಿಸಲಾಗುವುದು.

ಮಾನವ-ವನ್ಯಪ್ರಾಣಿ ಸಂಘರ್ಷದಲ್ಲಿ ಸಂರಕ್ಷಿಸಿದ, ಗಾಯಗೊಂಡ, ಅನಾರೋಗ್ಯ ಪೀಡಿತ ಪ್ರಾಣಿಗಳನ್ನು ರಕ್ಷಣೆ/ನಿರ್ವಹಣೆ ಮಾಡುತ್ತಿರುವ ಬನ್ನೇರುಘಟ್ಟ ಮತ್ತು ಮೈಸೂರಿನಲ್ಲಿರುವ ಪುನರ್ವಸತಿ ಕೇಂದ್ರಗಳ ಸಾಮರ್ಥ್ಯ ವರ್ಧನೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಅಲ್ಲದೇ, ಶಿವಮೊಗ್ಗ ಹಾಗೂ ಬೆಳಗಾವಿಯಲ್ಲಿ ಹೊಸದಾಗಿ ಪುನರ್ವಸತಿ ಕೇಂದ್ರಗಳ ನಿರ್ಮಾಣ ಕಾರ್ಯವನ್ನು ಕೈಗೊಳ್ಳಲಾಗುವುದು.

ಬೀದರ್‌ ಜಿಲ್ಲೆಯಲ್ಲಿ ಕೃಷ್ಣಮೃಗಗಳು (Blackbuck) ಹೆಚ್ಚಾಗಿ ಕಂಡು ಬರುವುದರಿಂದ, ಇವುಗಳ ಸಂರಕ್ಷಣೆಗಾಗಿ ಕೃಷ್ಣಮೃಗ ಸಂರಕ್ಷಣಾ ಮೀಸಲು ಪ್ರದೇಶವನ್ನು ಘೋಷಿಸಲಾಗುವುದು. ಈ ಸಂರಕ್ಷಣಾ ಮೀಸಲು ಪ್ರದೇಶದ ರಕ್ಷಣೆ ಮತ್ತು ನಿರ್ವಹಣೆಗಾಗಿ ಎರಡು ಕೋಟಿ ರೂ. ಮೀಸಲಿಡಲಾಗಿದೆ.

ರಾಷ್ಟ್ರೀಯ ಅರಣ್ಯ ನೀತಿಯ ಪ್ರಕಾರ ಭೌಗೋಳಿಕ ವಿಸ್ತೀರ್ಣದ
ಶೇ.33 ರಷ್ಟು ಭಾಗ ಅರಣ್ಯ ಪ್ರದೇಶದಿಂದ ಆವೃತಗೊಂಡಿರಬೇಕಾಗಿದ್ದು, ಕರ್ನಾಟಕ ರಾಜ್ಯದ ಬಯಲುಸೀಮೆ ಪ್ರದೇಶದ 17 ಜಿಲ್ಲೆಗಳಲ್ಲಿ ಶೇ.10 ಕ್ಕಿಂತ ಕಡಿಮೆ ಅರಣ್ಯ ಪ್ರದೇಶ ಇರುತ್ತದೆ. ಹಾಗಾಗಿ ಈ ಜಿಲ್ಲೆಗಳಲ್ಲಿ 500 ಕೋಟಿ ರೂ. ವೆಚ್ಚದಲ್ಲಿ ʻಹಸಿರೀಕರಣ ಕಾರ್ಯಕ್ರಮʼ ವನ್ನು ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯೊಂದಿಗೆ ಸಂಯೋಜಿಸಿ ಐದು ವರ್ಷಗಳ ಅವಧಿಯಲ್ಲಿ ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ.

ಇಂಗಾಲದ ಹೆಜ್ಜೆಗುರುತನ್ನು (Carbon Footprint) ಕಡಿಮೆ ಮಾಡುವ ನಿಟ್ಟಿನಲ್ಲಿ ಸರ್ಕಾರದ ಎಲ್ಲಾ ಪ್ರಮುಖ ಯೋಜನೆಗಳಲ್ಲಿ ಪರಿಸರ ಹೊಂದಾಣಿಕೆಯನ್ನು ಮಾಡುವ ಕುರಿತು ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆಯ (EMPRI) ವತಿಯಿಂದ ಮೌಲ್ಯಮಾಪನ ಮಾಡಲಾಗುವುದು.

ಡಿಕಾರ್ಬೊನೈಸೇಷನ್ನಿನ (Decarbonization) ಆರ್ಥಿಕತೆಯನ್ನು ಪ್ರೋತ್ಸಾಹಿಸಲು ಮತ್ತು ಹಸಿರು ಬೆಳವಣಿಗೆಯನ್ನು ಉತ್ತೇಜಿಸಲು, ರಾಜ್ಯದಲ್ಲಿನ ಸಂಸ್ಥೆಗಳಿಂದ ಸ್ವಯಂಪ್ರೇರಿತವಾಗಿ Green House Gases (GHG) ಹೊರಸೂಸುವಿಕೆಯನ್ನು ಬಹಿರಂಗಪಡಿಸುವ ಯೋಜನೆಯನ್ನು ಪ್ರಾರಂಭಿಸಲಾಗುವುದು.

ಮುಖ್ಯಮಂತ್ರಿ ಸಿದ್ದರಾಮಯ್ಯನವರ 14ನೇ ಬಜೆಟ್ ಭಾಷಣದ ಪೂರ್ಣ ಪಾಠ ಭಾಗ-15 : ಪ್ರವಾಸೋದ್ಯಮಕ್ಕೆ ಏನು, ಎಷ್ಟು?
ಪ್ರವಾಸೋದ್ಯಮ

ನಮ್ಮ ಸರ್ಕಾರ ಜಾರಿಗೆ ತಂದ ಐದು ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಯಡಿಯಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಸಾರಿಗೆ ವ್ಯವಸ್ಥೆಯನ್ನು ಜಾರಿಗೊಳಿಸಿದ ಪರಿಣಾಮವಾಗಿ, ರಾಜ್ಯದ ಪ್ರಮುಖ ಧಾರ್ಮಿಕ ಮತ್ತು ಪಾರಂಪರಿಕ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಸಂಖ್ಯೆ ಅತಿ ಹೆಚ್ಚಾಗಿರುವುದರಿಂದ ಅಂತಹ ಸ್ಥಳಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲಾಗುವುದು.

ʻಒಂದು ರಾಜ್ಯ ಹಲವು ಜಗತ್ತುʼ ಎಂಬ ಘೋಷವಾಕ್ಯದಂತೆ ಕರ್ನಾಟಕವು ಜಾಗತಿಕ ಮಟ್ಟದ ಪ್ರವಾಸಿ ತಾಣವಾಗಿ ಹೊರಹೊಮ್ಮುವ ಸಾಮರ್ಥ್ಯ ಹೊಂದಿದ್ದರೂ, ಅದರ ಸಂಪೂರ್ಣ ಸದ್ಬಳಕೆ ಮಾಡಿಕೊಳ್ಳಲು ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ, ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ಕಲ್ಪನೆಗಳನ್ನು ಅನುಷ್ಠಾನಗೊಳಿಸಲು ಮಾಸ್ಟರ್‌ ಪ್ಲಾನ್‌ ಅನ್ನು ತಯಾರಿಸಲಾಗುವುದು.

ಕಲ್ಯಾಣ ಕರ್ನಾಟಕ ಭಾಗದ ವ್ಯಾಪ್ತಿಯಲ್ಲಿ ಬರುವ ಪ್ರವಾಸಿ ತಾಣಗಳಾದ ಹಂಪಿ, ಮೈಲಾರ, ಗಾಣಗಾಪುರ, ಸನ್ನತಿ ಮತ್ತು ಮಳಖೇಡ, ಬೀದರ್‌, ರಾಯಚೂರು ಹಾಗೂ ಕಲಬುರಗಿ ಕೋಟೆಗಳ ಸಮಗ್ರ ಅಭಿವೃದ್ಧಿಗಾಗಿ 75 ಕೋಟಿ ರೂ. ಗಳನ್ನು ಒದಗಿಸಲಾಗುವುದು.

ಕಿತ್ತೂರು ಕರ್ನಾಟಕ ಭಾಗದಲ್ಲಿನ ಸವದತ್ತಿ ಯಲ್ಲಮ್ಮನ ಗುಡ್ಡ, ದೇವರಗುಡ್ಡ, ಕಪ್ಪತ್ತಗುಡ್ಡ, ಬಾದಾಮಿ ಬನಶಂಕರಿ, ಲಕ್ಕುಂಡಿ ಪ್ರವಾಸಿ ತಾಣಗಳನ್ನು ಮತ್ತು ಗದಗ ಜಿಲ್ಲೆಯ ಮಾಗಡಿ ಪಕ್ಷಿಧಾಮವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಡಲ ತೀರದ ಪ್ರವಾಸೋದ್ಯಮ ಅಭಿವೃದ್ಧಿಗೆ ಕರಾವಳಿ ಬೀಚ್‌ ಪ್ರವಾಸೋದ್ಯಮ ಕಾರ್ಯಪಡೆಯನ್ನು ರಚಿಸಲಾಗುವುದು ಹಾಗೂ ಕಡಲ ತೀರದ ಸಮಗ್ರ ಅಭಿವೃದ್ಧಿಗಾಗಿ ವಿಸ್ತೃತ ಯೋಜನೆಯನ್ನು ತಯಾರಿಸಲಾಗುವುದು.

ಸಸಿಹಿತ್ಲು ಕಡಲ ತೀರವನ್ನು ಅಂತಾರಾಷ್ಟ್ರೀಯ ಸರ್ಫಿಂಗ್‌ ತಾಣವಾಗಿ ಅಭಿವೃದ್ಧಿಗೊಳಿಸಲು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಯೋಜನೆಯನ್ನು ರೂಪಿಸಲಾಗುವುದು.

ರಾಜ್ಯದ ವಿವಿಧ ಪ್ರವಾಸಿ ತಾಣಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವ ಮಾದರಿಯಲ್ಲಿ ಯಾತ್ರಿನಿವಾಸ/ಡಾರ್ಮಿಟರಿಗಳನ್ನು ನಿರ್ಮಾಣ ಮಾಡಲಾಗುವುದು.

ಮೈಸೂರಿನ ಹೃದಯ ಭಾಗದಲ್ಲಿರುವ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣವನ್ನು ದೆಹಲಿಯ ಪ್ರಗತಿ ಮೈದಾನದ ಮಾದರಿಯಲ್ಲಿ ಮೇಲ್ದರ್ಜೆಗೇರಿಸಲಾಗುವುದು.

ರಾಜ್ಯದಲ್ಲಿರುವ 16 ವಸ್ತುಸಂಗ್ರಹಾಲಯಗಳನ್ನು ಹಂತ ಹಂತವಾಗಿ ಆಕರ್ಷಕ ಮತ್ತು ಸಂವಾದಾತ್ಮಕವಾಗಿ ಅಭಿವೃದ್ಧಿಪಡಿಸಲಾಗುವುದು. ಈ ಆರ್ಥಿಕ ಸಾಲಿನಲ್ಲಿ ಕಲಬುರಗಿ, ಗದಗ ಮತ್ತು ಬೆಂಗಳೂರಿನ ಸರ್ಕಾರಿ ವಸ್ತುಸಂಗ್ರಹಾಲಯಗಳ ಅಭಿವೃದ್ಧಿಪಡಿಸಲು ಮತ್ತು ವಿಜಯಪುರದಲ್ಲಿರುವ ಆನಂದಮಹಲ್ ಕಟ್ಟಡವನ್ನು ವಸ್ತುಸಂಗ್ರಹಾಲಯವನ್ನಾಗಿ ಪರಿವರ್ತಿಸಲು ಉದ್ದೇಶಿಸಲಾಗಿದೆ.

ಮೈಸೂರಿನಲ್ಲಿ ಹೆಚ್ಚು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರವಾಸಿಗರು ಭೇಟಿ ನೀಡುವ ಕಾರಣದಿಂದ ಮೈಸೂರಿನ ಚಾಮುಂಡಿವಿಹಾರ ಕ್ರೀಡಾಂಗಣದ ಬಳಿ ಪುರಾತತ್ವ ಇಲಾಖೆಯ ಸುಪರ್ದಿಯಲ್ಲಿನ ಎರಡೂವರೆ ಎಕರೆ ಜಮೀನಿನಲ್ಲಿ ಕರ್ನಾಟಕದ ಶ್ರೀಮಂತ ಕಲೆ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಪ್ರದರ್ಶಿಸಲು Augmented Reality (AR) ಮತ್ತು Virtual Reality (VR) ತಂತ್ರಜ್ಞಾನದೊಂದಿಗೆ ಅಂತಾರಾಷ್ಟ್ರೀಯ ಗುಣಮಟ್ಟದ ʻಕರ್ನಾಟಕ ಪುರಾತತ್ವ ವಸ್ತುಸಂಗ್ರಹಾಲಯ ಮತ್ತು ಕಲಾಗ್ಯಾಲರಿʼ ನಿರ್ಮಾಣ ಮಾಡಲಾಗುವುದು.

ರಾಜ್ಯದಲ್ಲಿರುವ ರಾಷ್ಟ್ರೀಯ ಸಂರಕ್ಷಿತ ಸ್ಮಾರಕಗಳಾದ ಹಂಪಿಯ ವಿಜಯವಿಠಲ ದೇವಸ್ಥಾನ, ಬೀದರ್ ಕೋಟೆ, ನಂದಿಬೆಟ್ಟದ
ಶ್ರೀ ಭೋಗನಂದೀಶ್ವರ ದೇವಸ್ಥಾನ, ವಿಜಯಪುರದ ಗೋಲಗುಂಬಜ್, ಕಿತ್ತೂರು ಕೋಟೆ ಮತ್ತು ಬಾದಾಮಿ ಗುಹೆಗಳ ಬಳಿ ರಾತ್ರಿ ವೇಳೆ ಪ್ರವಾಸಿಗರ ಭೇಟಿಯನ್ನು ಉತ್ತೇಜಿಸಲು ಹಾಗೂ ಕರ್ನಾಟಕ ರಾಜ್ಯದ ಕಲೆ, ವಾಸ್ತುಶಿಲ್ಪ ಮತ್ತು ಸಾಂಸ್ಕೃತಿಕ ಪರಂಪರೆಯ ಶ್ರೀಮಂತಿಕೆಯನ್ನು ಪ್ರದರ್ಶಿಸಲು
3D ಪ್ರೊಜೆಕ್ಷನ್, ಮಲ್ಟಿಮೀಡಿಯಾ, ಸೌಂಡ್ ಮತ್ತು ಲೈಟ್ ಷೋ ಯೋಜನೆಯನ್ನು ಕೈಗೊಳ್ಳಲಾಗುವುದು.

ಮುಖ್ಯಮಂತ್ರಿ ಸಿದ್ದರಾಮಯ್ಯನವರ 14ನೇ ಬಜೆಟ್ ಭಾಷಣದ ಪೂರ್ಣ ಪಾಠ ಭಾಗ-13 – ಮಾಹಿತಿ, ಜೈವಿಕ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಏನು, ಎಷ್ಟು?
ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ

ನವೋದ್ಯಮಿಗಳಿಗೆ ಅತ್ಯಾಧುನಿಕ ಸೌಲಭ್ಯವುಳ್ಳ ವಿಶ್ವದರ್ಜೆಯ ಪರಿಪೋಷಣ ಕೇಂದ್ರ ʻINNOVERSEʼ ಅನ್ನು 50 ಕೋಟಿ ರೂ.ಗಳ ವೆಚ್ಚದಲ್ಲಿ ಸ್ಥಾಪಿಸಲಾಗುವುದು. ಇದಕ್ಕಾಗಿ ಪ್ರಸಕ್ತ ಸಾಲಿನಲ್ಲಿ 10 ಕೋಟಿ ರೂ.ಗಳ ಅನುದಾನವನ್ನು ನಿಗದಿಪಡಿಸಲಾಗಿದೆ.

ಸ್ಟಾರ್ಟಪ್‌ ನೀತಿಯಡಿಯಲ್ಲಿ ಅನುದಾನ ನೀಡಿರುವ ಸ್ಟಾರ್ಟ್‌ಅಪ್‌ಗಳ ಪರಿಹಾರಗಳ ಅಳವಡಿಕೆಯನ್ನು ವೇಗಗೊಳಿಸಲು ʻPropelʼ ಎಂಬ ಯೋಜನೆಯನ್ನು ಐದು ಕೋಟಿ ರೂ.ಗಳ ವೆಚ್ಚದಲ್ಲಿ ಆಯೋಜಿಸಲಾಗುವುದು. ಇದಕ್ಕಾಗಿ ಪ್ರಸಕ್ತ ಸಾಲಿನಲ್ಲಿ ಒಂದು ಕೋಟಿ ರೂ. ಅನುದಾನವನ್ನು ನಿಗದಿಪಡಿಸಲಾಗಿದೆ.

ಸ್ಟಾರ್ಟ್ಅಪ್‍ಗಳಿಗೆ Global Innovation Alliance- Market Access Programme (GIA-MAP) ಕಾರ್ಯಕ್ರಮವನ್ನು ಮೂರು ಕೋಟಿ ರೂ.ಗಳ ವೆಚ್ಚದಲ್ಲಿ ಆಯೋಜಿಸಲಾಗುವುದು. ಇದಕ್ಕಾಗಿ ಪ್ರಸಕ್ತ ಸಾಲಿನಲ್ಲಿ ಒಂದು ಕೋಟಿ ರೂ. ಅನುದಾನವನ್ನು ನಿಗದಿಪಡಿಸಲಾಗಿದೆ.

New Age Incubation Network (NAIN) ಕೇಂದ್ರಗಳನ್ನು ಬೆಂಬಲಿಸಲು ತಂತ್ರಜ್ಞಾನ ವರ್ಗಾವಣೆ ಸಂಸ್ಥೆಯನ್ನು (Technology Transfer Organisation) ನಾಲ್ಕು ಕೋಟಿ ರೂ. ಗಳ ಯೋಜನಾ ವೆಚ್ಚದಲ್ಲಿ ಸ್ಥಾಪಿಸಲಾಗುವುದು. ಇದಕ್ಕಾಗಿ ಪ್ರಸಕ್ತ ಸಾಲಿನಲ್ಲಿ ಎರಡು ಕೋಟಿ ರೂ. ಗಳ ಅನುದಾನವನ್ನು ನಿಗದಿಪಡಿಸಲಾಗಿದೆ.

ಹೆಲ್ತ್‌-ಟೆಕ್‌ ಮತ್ತು ಮೆಡ್-ಟೆಕ್‌ನಲ್ಲಿ ಸೆಂಟರ್‌ ಆಫ್‌ ಎಕ್ಸಲೆನ್ಸ್‌ (Centre of Excellence in Health Tech & Med Tech) ಕೇಂದ್ರವನ್ನು 50 ಕೋಟಿ ರೂ.ಗಳ ವೆಚ್ಚದಲ್ಲಿ ಸ್ಥಾಪಿಸಲಾಗುವುದು. ಇದಕ್ಕಾಗಿ ಪ್ರಸಕ್ತ ಸಾಲಿನಲ್ಲಿ 10 ಕೋಟಿ ರೂ.ಗಳ ಅನುದಾನವನ್ನು ನಿಗದಿಪಡಿಸಲಾಗಿದೆ.

ಜೈವಿಕ-ಬ್ಯಾಂಕ್ (Bio Bank) ಅನ್ನು ಐದು ಕೋಟಿ ರೂ.ಗಳ ವೆಚ್ಚದಲ್ಲಿ ಸ್ಥಾಪಿಸಲಾಗುವುದು. ಇದಕ್ಕಾಗಿ ಪ್ರಸಕ್ತ ಸಾಲಿನಲ್ಲಿ ಎರಡು ಕೋಟಿ ರೂ.ಗಳ ಅನುದಾನವನ್ನು ನಿಗದಿಪಡಿಸಲಾಗಿದೆ.

ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ʻCentre of Excellence in Wireless & Wired Technologies in Karnataka (COEWWT)ʼ ಅನ್ನು 25 ಕೋಟಿ ರೂ.ಗಳ ವೆಚ್ಚದಲ್ಲಿ ಸ್ಥಾಪಿಸಲಾಗುವುದು. ಇದಕ್ಕಾಗಿ ಪ್ರಸಕ್ತ ಸಾಲಿನಲ್ಲಿ ಐದು ಕೋಟಿ ರೂ.ಗಳ ಅನುದಾನವನ್ನು ನಿಗದಿಪಡಿಸಲಾಗಿದೆ.

ಸೆಂಟರ್‌ ಆಫ್‌ ಎಕ್ಸಲೆನ್ಸ್‌ ಇನ್‌ ಡಿಸೈನ್ (Centre of Excellence in Design) ಕೇಂದ್ರವನ್ನು 20 ಕೋಟಿ ರೂ.ಗಳ ಯೋಜನಾ ವೆಚ್ಚದಲ್ಲಿ ಸ್ಥಾಪಿಸಲಾಗುವುದು. ಇದಕ್ಕಾಗಿ ಪ್ರಸಕ್ತ ಸಾಲಿನಲ್ಲಿ ಎಂಟು ಕೋಟಿ ರೂ. ಗಳ ಅನುದಾನವನ್ನು ನಿಗದಿಪಡಿಸಲಾಗಿದೆ.

ಕರ್ನಾಟಕ ಸಂಶೋಧನೆ, ಅಭಿವೃದ್ಧಿ ಮತ್ತು ನಾವೀನ್ಯತೆ ನೀತಿಯ ಅನುಷ್ಠಾನಕ್ಕೆ ದೃಢವಾದ ಮತ್ತು ಪಾರದರ್ಶಕ ಆಡಳಿತದ ಚೌಕಟ್ಟನ್ನು ರಚಿಸುವುದು ಹಾಗೂ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಮಾಡುವುದು ಅಗತ್ಯವಾಗಿದೆ. ಈ ಉದ್ದೇಶಕ್ಕಾಗಿ ಕರ್ನಾಟಕ ರಾಜ್ಯ ಸಂಶೋಧನಾ ಪ್ರತಿಷ್ಠಾನವನ್ನು (ಕೆಎಸ್‌ಆರ್‌ಎಫ್) ರಚಿಸಲಾಗುವುದು.

ರಾಜ್ಯದ ವಿಜ್ಞಾನ ಕೇಂದ್ರಗಳ ಮೂಲಸೌಲಭ್ಯಗಳನ್ನು ಬಲಪಡಿಸಲು, ಎರಡು ಪ್ರಾದೇಶಿಕ ವಿಜ್ಞಾನ ಕೇಂದ್ರಗಳನ್ನು
ತಲಾ 50 ಲಕ್ಷ ರೂ. ವೆಚ್ಚದಲ್ಲಿ ಮತ್ತು ನಾಲ್ಕು ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರಗಳನ್ನು ತಲಾ 30 ಲಕ್ಷ ರೂ. ವೆಚ್ಚದಲ್ಲಿ ಉನ್ನತೀಕರಿಸಲಾಗುವುದು. ಈ ಯೋಜನೆಗೆ ಪ್ರಸ್ತುತ ವರ್ಷದಲ್ಲಿ ಎರಡು ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು.

ಸಂಶೋಧನೆ ಮತ್ತು ನಾವೀನ್ಯತೆ ವ್ಯವಸ್ಥೆಯು ಉದ್ಯಮಗಳು, ವಿಶ್ವವಿದ್ಯಾನಿಲಯಗಳು, ಸಂಶೋಧನಾ ಸಂಸ್ಥೆಗಳು ಮತ್ತು ಸರ್ಕಾರಗಳು ಸೇರಿದಂತೆ ಇವರ ನಡುವಿನ ಸಂಬಂಧಗಳ ಸಂಕೀರ್ಣ ವ್ಯವಸ್ಥೆಯಾಗಿದೆ. ಈ ಎಲ್ಲಾ ಭಾಗೀದಾರರನ್ನು ಒಟ್ಟುಗೂಡಿಸಲು ಮತ್ತು ಅವರ ನಡುವೆ ಸಮನ್ವಯತೆಯನ್ನು ಸಾಧಿಸಲು ಇ-ಪ್ಲಾಟ್‌ಫಾರ್ಮ್‌ e-KRDIP ಅನ್ನು ರಚಿಸಲಾಗುವುದು.

ಸ್ಥಳೀಯ ಸಮಸ್ಯೆಗಳನ್ನು ಪರಿಹರಿಸಲು ರೈತರು, ಕುಶಲಕರ್ಮಿಗಳು, ಕಾರ್ಮಿಕರು, ಯಂತ್ರಕಾರರು ಮತ್ತು ಸಾಮಾನ್ಯ ಜನರು ರಚಿಸಿದ ತಳಹಂತದ ನಾವೀನ್ಯತೆಗಳನ್ನು ಗುರುತಿಸಿ, ವ್ಯಾಖ್ಯಾನಿಸಲು ಮತ್ತು ಅವುಗಳಿಗೆ ಮೌಲ್ಯವನ್ನು ದೊರಕಿಸುವ ಮೂಲಕ ವಾಣಿಜ್ಯೀಕರಣಕ್ಕೆ ಬೆಂಬಲವನ್ನು ನೀಡುವ ಯೋಜನೆಗೆ ಐದು ಕೋಟಿ ರೂ. ಒದಗಿಸಲಾಗುವುದು.