bus and truck accident – Peepal Media

ಬೀದರ್‌| ಆಟೋ ರಿಕ್ಷಾ, ಟ್ರಕ್‌ ಡಿಕ್ಕಿ: 7 ಮಹಿಳೆಯರು ಸಾವು, 11 ಮಂದಿಗೆ ಗಾಯ
ಚಿಟಗುಪ್ಪ: ಶುಕ್ರವಾರ ತಡರಾತ್ರಿ ಆಟೋ ರಿಕ್ಷಾ ಮತ್ತು ಟ್ರಕ್ ಡಿಕ್ಕಿ ಹೊಡೆದ ಹಿನ್ನೆಯಲ್ಲಿ, 7 ಜನ ಮಹಿಳೆಯರು ಮೃತಪಟ್ಟಿದ್ದು, 11 ಮಂದಿ ಗಾಯಗೊಂಡಿರುವ ಘಟನೆ ಚಿಟಗುಪ್ಪ ತಾಲೂಕಿನ ಬೆಮಳಖೇಡ ಗ್ರಾಮದಲ್ಲಿ ನಡೆದಿದೆ.

ಮಾಹಿತಿ ಪ್ರಕಾರ, ಮಹಿಳೆಯರು ಕೂಲಿ ಕಾರ್ಮಿಕರಾಗಿದ್ದು, ಆಟೋ ರಿಕ್ಷಾದಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಮರಳುತ್ತಿರುವ ವೇಳೆ, ಬೆಮಳಖೇಡ ಸರ್ಕಾರಿ ಶಾಲೆಯ ಬಳಿ ಟ್ರಕ್ ಡಿಕ್ಕಿ ಹೊಡೆದಿದೆ. ಈ ಕಾರಣ ಸ್ಥಳದಲ್ಲೇ ಏಳು ಜನ ಮಹಿಳೆಯರು ಸಾವನ್ನಪ್ಪಿದ್ದು, ಗಾಯಗೊಂಡ ಮಹಿಳೆಯರನ್ನು ಆಸ್ಪತ್ರೆಗೆ ದಾಖಲಾಗಿಸಿದೆ ಎಂದು ತಿಳಿದುಬಂದಿದೆ.

ಘಟನೆ ತಿಳಿದು ಸ್ಥಳಕ್ಕೆ ಭೇಟಿ ನೀಡಿ, ಘಟನೆ ಕುರಿತು ಮಾಹಿತಿ ತಿಳಿದ ಬೆಮಳಖೇಡ ಪೊಲೀಸರು,  ಮೃತರು, ಪಾರ್ವತಿ (40), ಪ್ರಭಾವತಿ (36), ಗುಂಡಮ್ಮ (60), ಯಾದಮ್ಮ (40), ಜಗ್ಗಮ್ಮ, 34) ಈಶ್ವರಮ್ಮ (55) ಮತ್ತು ರುಕ್ಮಿಣಿ ಬಾಯಿ (60) ಎಂದು ಗುರುತಿಸಿದ್ದಾರೆ.

ವಾಹನಗಳ ಚಾಲಕರು ಸೇರಿದಂತೆ ಒಟ್ಟು 11 ಜನರು ಗಾಯಗೊಂಡಿದ್ದು, ಅವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಈ ಹಿನ್ನಲೆಯಲ್ಲಿ ಘಟನೆ ಕುರಿತು ಕೇಸ್‌ ದಾಖಲಾಗಿದೆ ಎಂದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಟ್ರಕ್‌ಗೆ ಡಿಕ್ಕಿ ಹೊಡೆದ ಬಸ್‌: 15 ಜನ ಕಾರ್ಮಿಕರು ಸಾವು 40 ಮಂದಿಗೆ ಗಾಯ
ರೇವಾ: ಟ್ರಕ್‌ಗೆ ಬಸ್‌ ಡಿಕ್ಕಿ ಹೊಡೆದ ಪರಿಣಾಮ 15 ಜನ ಕಾರ್ಮಿಕರು ಸಾವನ್ನಪ್ಪಿದ್ದು, 40 ಮಂದಿಗೆ ಗಂಭೀರ ಗಾಯವಾಗಿರುವ ಘಟನೆ ಮಧ್ಯಪ್ರದೇಶದ ರೇವಾ ಹೆದ್ದಾರಿಯಲ್ಲಿ ನಡೆದಿದೆ.

ಉತ್ತರ ಪ್ರದೇಶದ ಗೋರಖ್‌ಪುರಕ್ಕೆ ಸುಮಾರು 100 ಜನರನ್ನು ಹೊತ್ತೊಯ್ಯುತ್ತಿದ್ದ ಬಸ್‌, ನಿನ್ನೆ ತಡರಾತ್ರಿ ರೇವಾದ ಸುಹಾಗಿ ಪಹಾರಿ ಬಳಿ ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ.

ಈ ಕುರಿತು ಮಾಹಿತಿ ನೀಡಿರುವ ಪೊಲೀಸರು, ಬಸ್‌ ಟ್ರಕ್‌ ಹಿಂಭಾಗದಲ್ಲಿ ಡಿಕ್ಕಿ ಹೊಡೆದಿದ್ದು, ಟ್ರಕ್ ಹೆದ್ದಾರಿಯಲ್ಲಿ ಸಿಲುಕಿಕೊಂಡಿದೆ. ಸದ್ಯಕ್ಕೆ ಗಾಯಾಳುಗಳನ್ನು ಸುಹಗಿಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಗಂಭೀರ ಗಾಯಗೊಂಡವರನ್ನು ರೇವಾದ ಸಂಜಯ್ ಗಾಂಧಿ ಸ್ಮಾರಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಅವಘಡದ ಕುರಿತು, ರೇವಾ ಪೊಲೀಸ್ ವರಿಷ್ಠಾಧಿಕಾರಿ ನವನೀತ್ ಭಾಸಿನ್ ಮಾತನಾಡಿ, ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಹೆಚ್ಚಿನ ಜನರು ಉತ್ತರ ಪ್ರದೇಶದ ಕಾರ್ಮಿಕರಾಗಿದ್ದು, ಮಧ್ಯಪ್ರದೇಶದ ಕಟ್ನಿಯಿಂದ ಬಸ್ ಹತ್ತಿ ದೀಪಾವಳಿಗೆಂದು ಮನೆಗೆ ತೆರಳುತ್ತಿದ್ದರು ಎಂದು ಬಸ್‌ನಲ್ಲಿದ್ದ ಕೆಲವರಿಂದ ಮಾಹಿತಿ ತಿಳಿದುಬಂದಿದೆ ಎಂದು ತಿಳಿಸಿದರು.

ಮುಂದುವರೆದು ಮಾತನಾಡಿದ ಅವರು, ಅಪಘಾತಕ್ಕೆ ನಿಖರ ಕಾರಣ ತಿಳಿಯಲು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಅಪಘಾತದ ಬಗ್ಗೆ ಮದ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು, ದುಃಖ ವ್ಯಕ್ತಪಡಿಸಿದ್ದಾರೆ. ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ಮಾತನಾಡಿ, ಮೃತದೇಹಗಳನ್ನು ಉತ್ತರ ಪ್ರದೇಶದಲ್ಲಿರುವ ಅವರ ಕುಟುಂಬ ಸದಸ್ಯರಿಗೆ ಕಳುಹಿಸುವಂತೆ ವ್ಯವಸ್ಥೆ ಮಾಡಲು ವಿನಂತಿಸಿಕೊಂಡಿದ್ದಾರೆ.

ಬಸ್‌ಗೆ ಬೆಂಕಿ: 11 ಮಂದಿ ಸಾವು 38 ಜನರಿಗೆ ಗಾಯ
ನಾಸಿಕ್: ಇಂದು ಮುಂಜಾನೆ ಟ್ರಕ್‌ಗೆ ಬಸ್‌ ಡಿಕ್ಕಿ ಹೊಡೆದ ಪರಿಣಾಮ, ಬಸ್‌ಗೆ ಬೆಂಕಿ ಹೊತ್ತಿಕೊಂಡು ಹನ್ನೊಂದು ಮಂದಿ ಸಾವನ್ನಪ್ಪಿದ್ದು, 38 ಮಂದಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ನಾಸಿಕ್‌ನಲ್ಲಿ ನಡೆದಿದೆ.

ಈ ಕುರಿತು ಮಾಹಿತಿ ನೀಡಿರುವ ನಾಸಿಕ್‌ನ ಉಪ ಪೊಲೀಸ್ ಆಯುಕ್ತ ಅಮೋಲ್ ಅವರು, ನಾಸಿಕ್‌ನ ಔರಂಗಾಬಾದ್ ರಸ್ತೆಯಲ್ಲಿ ಬೆಳಿಗ್ಗೆ 5.15 ರ ಸುಮಾರಿಗೆ ಖಾಸಗಿ ಬಸ್‌ ಒಂದು ಟ್ರಕ್‌ಗೆ ಡಿಕ್ಕಿ ಹೊಡೆದಿದ್ದು, ಬಸ್‌ಗೆ ಬೆಂಕಿ ಹೊತ್ತಿಕೊಂಡಿದೆ. ಈ ಅಪಘಾತದಲ್ಲಿ ಕನಿಷ್ಠ 11 ಜನರು ಸಾವನ್ನಪ್ಪಿದ್ದು, 38 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿಸಿದರು.

ಈ ಹಿನ್ನಲೆ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಸದ್ಯಕ್ಕೆ ಪ್ರಕರಣ ದಾಖಲಾಗಿದ್ದು, ಬೆಂಕಿಗೆ ನಿಖರ ಕಾರಣ ತಿಳಿಯಲು ತನಿಖೆ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.