Cauvery river – Peepal Media

ಕಾವೇರಿ ವಿವಾದ : ಕರ್ನಾಟಕಕ್ಕೆ ಮತ್ತೆ ಶಾಕ್, ತಮಿಳುನಾಡಿಗೆ ಹೆಚ್ಚುವರಿ ನೀರು ಹರಿಸಲು ಸೂಚನೆ
ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ಮತ್ತೆ 2600 ಕ್ಯೂಸೆಕ್ ನೀರು ಹರಿಸುವಂತೆ CWRC ಸೂಚನೆ ನೀಡಿದೆ. ದೆಹಲಿಯಲ್ಲಿ ಕಾವೇರಿ ನದಿ ನೀರು ನಿಯಂತ್ರಣ ಸಮಿತಿ ಸಭೆ ಕರೆದಿದ್ದು, ಕರ್ನಾಟಕದ ಅಧಿಕಾರಿಗಳು ಭಾಗಿ ಆಗಿರುವ ಈ ಸಭೆಯಲ್ಲಿ ಮುಂದಿನ 15 ದಿನಗಳ ಕಾಲ ನೀರು ಹರಿಸುವಂತೆ ಸಮಿತಿ ಕರ್ನಾಟಕಕ್ಕೆ ಆದೇಶಿಸಿದೆ‌.

ಕಾವೇರಿ ನದಿ ನೀರು ನಿಯಂತ್ರಣ ಸಮಿತಿ ಈ ಹಿಂದೆ ಆದೇಶಿಸಿದಂತೆ, ಅಕ್ಟೋಬರ್ ಅಂತ್ಯದ ವರೆಗೂ 3000 ಕ್ಯೂಸೆಕ್ ನೀರು ಹರಿಸುವಂತೆ ಆದೇಶಿಸಿತ್ತು. ಈ ಬಗ್ಗೆ ರಾಜ್ಯಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾದರೂ ಸುಪ್ರೀಂಕೋರ್ಟಿನ ಕೆಂಗಣ್ಣಿಗೆ ಗುರಿ ಆಗುವುದನ್ನು ತಪ್ಪಿಸಲು ಸರ್ಕಾರ 15 ದಿನಗಳ ಕಾಲ 3000 ಕ್ಯೂಸೆಕ್ ನೀರು ಹರಿಸಿತ್ತು.

ಇದೀಗ ಮತ್ತೆ ತಮಿಳುನಾಡಿಗೆ 2600 ಕ್ಯೂಸೆಕ್ ನೀರು ಹರಿಸುವಂತೆ ಸೂಚನೆ CWRC ಸೂಚನೆ ನೀಡಿದೆ. CWRC ಸಭೆಯಲ್ಲಿ ರಾಜ್ಯದಿಂದ ಎಸಿಎಸ್ ರಾಕೇಶ್ ಸಿಂಗ್ ಭಾಗಿ ಆಗಿದ್ದರು.

ಅ.31 ರವರೆಗೆ ತಮಿಳುನಾಡಿಗೆ ಪ್ರತಿದಿನ 3000 ಕ್ಯೂಸೆಕ್ ನೀರು ಬಿಡುವಂತೆ CWMA ಸೂಚನೆ ನೀಡಿದ್ದು, CWRA ಈ ಆದೇಶವನ್ನು ಎತ್ತಿಹಿಡಿದಿತ್ತು. ಇದೀಗ ಮತ್ತೆ ಮುಂದಿನ 15 ದಿನ ತಮಿಳುನಾಡಿಗೆ ಮತ್ತೆ 2600 ಕ್ಯೂಸೆಕ್ ನೀರು ಹರಿಸುವಂತೆ CWRC ಕರ್ನಾಟಕಕ್ಕೆ ಸೂಚನೆ ನೀಡಿದೆ.

ತಮಿಳುನಾಡಿಗೆ ಮತ್ತೆ ಮೂರುಸಾವಿರ ಕ್ಯೂಸೆಕ್ಸ್ ನೀರು ಬಿಡಲು ಶಿಫಾರಸ್ಸು
ತಮಿಳುನಾಡಿಗೆ ಮತ್ತೆ ಪ್ರತಿದಿನ 3,000 ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಇಂದು ಶಿಫಾರಸ್ಸು ಮಾಡಿದೆ.

ಇಂದು ನಡೆದ ಸಭೆಯಲ್ಲಿ ಮಾಡಲಾಗಿರುವ ಈ ಶಿಫಾರಸ್ಸಿನ ಅನ್ವಯ ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 15ರ ವರೆಗೆ ಕರ್ನಾಟಕ ನಿತ್ಯ 3 ಸಾವಿರ ಕ್ಯೂಸೆಕ್ ನೀರು ಬಿಡಬೇಕಾಗಿ. ತಮಿಳುನಾಡು ಪ್ರತಿದಿನ 15 ಸಾವಿರ ಕ್ಯೂಸೆಕ್ ನೀರು ಬಿಡಲು ಒತ್ತಾಯಿಸಿತ್ತು.

ಎಷ್ಟಿದೆ ನೀರು ಕೆಆರ್​ಎಸ್ ಜಲಾಶಯದಲ್ಲಿ?

ಜಲಾಶಯದ ಗರಿಷ್ಠಮಟ್ಟ – 124.80 ಅಡಿ, ಇಂದಿನ ಮಟ್ಟ – 96.70 ಅಡಿ, ಒಳಹರಿವು – 5993 ಸಾವಿರ ಕ್ಯೂಸೆಕ್, ಒಟ್ಟ ಹೊರಹರಿವು – 6716 ಸಾವಿರ ಕ್ಯೂಸೆಕ್, ನದಿಗೆ – 4105 ಕ್ಯೂಸೆಕ್.

ಕಾವೇರಿ ಕಿಚ್ಚು : ಇತ್ತ ಬೆಂಗಳೂರು ಬಂದ್, ಅತ್ತ ನೀರು ಸಾಕಾಗುತ್ತಿಲ್ಲ ಎಂದು ತಮಿಳುನಾಡು ಪಟ್ಟು
ತಮಿಳುನಾಡಿಗೆ ಪ್ರತಿದಿನ 5,000 ಕ್ಯೂಸೆಕ್ ಕಾವೇರಿ ನೀರು ಹರಿಸುತ್ತಿರುವುದಕ್ಕೆ ಬೆಂಗಳೂರು ಬಂದ್ ಸೇರಿದಂತೆ ರಾಜ್ಯಾದ್ಯಂತ ಆಕ್ರೋಶ ಬುಗಿಲೆದ್ದಿದೆ. ಇದರ ನಡುವೆ ದೆಹಲಿಯಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿ ಕಚೇರಿಯಲ್ಲಿ ಈ ವಿಷಯದ ಕುರಿತಾಗಿ ನಡೆಯುತ್ತಿರುವ ಸಭೆಯಲ್ಲಿ ಪ್ರತಿದಿನ 12,500 ಕ್ಯೂಸೆಕ್ ನೀರು ಹರಿಸಬೇಕು ಎಂದು ತಮಿಳುನಾಡು ಒತ್ತಾಯಿಸಿದೆ.

ಅಲ್ಲದೆ ಸಭೆಯಲ್ಲಿ ಇದುವರೆಗೂ ಹರಿಸಿರುವ ನೀರಿನ ಬಗ್ಗೆ ಚರ್ಚೆ ಮಾಡುತ್ತಿದ್ದಾರೆ. ತಮಿಳುನಾಡು ಅಧಿಕಾರಿಗಳು ಈ ವರೆಗೆ ಕರ್ನಾಟಕದಿಂದ ಹರಿದು ಬಂದ ನೀರು ಸಾಲದು ಎಂದು ಕಾವೇರಿ ನೀರು ಪ್ರಾಧಿಕಾರದ ಎದುರು ವಾದಿಸುತ್ತಿದ್ದಾರೆ.

ಈವರೆಗೂ ಹರಿಸಿರುವ ನೀರಿನ ಪ್ರಮಾಣದ ಬಗ್ಗೆ ತಮಿಳುನಾಡು ಗಂಭೀರ ಚರ್ಚೆ ನಡೆಸುತ್ತಿದೆ. ಜೂನ್ ನಿಂದ ಸೆಪ್ಟೆಂಬರ್ ವರೆಗೂ 123 ಟಿಎಂಸಿ ನೀರನ್ನು ಹರಿಸಬೇಕಿತ್ತು ಕರ್ನಾಟಕ ಈವರೆಗೂ ಕೇವಲ 40 ಟಿಎಂಸಿ ನೀರು ಹರಿಸಿದೆ. ಆದ್ದರಿಂದ ಬಾಕಿ ಇರುವ 83 ಟಿಎಂಸಿ ನೀರನ್ನು ಶೀಘ್ರದಲ್ಲೇ ಹರಿಸಬೇಕು ಎಂದು ವಾದಿಸಿದೆ.

ಇನ್ನು ಬಿಳಿಗೊಂಡ್ಲು ಮೂಲಕ ಹರಿಸಿರುವ ನೀರಿನ ಪ್ರಮಾಣದ ಬಗ್ಗೆ ಸಭೆಯಲ್ಲಿ ಮಾಹಿತಿ ನೀಡಿದ ತಮಿಳುನಾಡು, ಕಾವೇರಿ ಕೊಳ್ಳದಲ್ಲಿನ ನೀರಿನ ಕೊರತೆ ಪ್ರಮಾಣದ ಬಗ್ಗೆ ಚರ್ಚೆ ನಡೆಯುತ್ತಿದ್ದು, ಈ ಬಗ್ಗೆ ಶೀಘ್ರದಲ್ಲಿ ಅಂತಿಮ ಆದೇಶ ಹೊರಬೀಳುವ ಸಾಧ್ಯತೆ ಇದೆ ಎನ್ನಲಾಗಿದೆ.

ಕಳೆದ 15 ದಿನಗಳ ಹಿಂದೆ CWRC ತಮಿಳುನಾಡಿಗೆ ಪ್ರತಿನಿತ್ಯ 5000 ಕ್ಯುಸೇಕ್ ನೀರು ಹರಿಸುವಂತೆ ಆದೇಶ ನೀಡಿತ್ತು. ಈ ಆದೇಶವನ್ನು ಸುಪ್ರೀಂಕೋರ್ಟ್ ಕೂಡ ಎತ್ತಿ ಹಿಡಿದಿತ್ತು ಇದರ ಪರಿಣಾಮವಾಗಿ ಇಂದು ರಾಜ್ಯದಲ್ಲಿ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಬಾರದೆಂದು ಪ್ರತಿಭಟನೆ ಹೋರಾಟಗಳು ನಡೆಯುತ್ತಿವೆ.

ಕಾವೇರಿ ಹೋರಾಟಕ್ಕೆ ಕಿಚ್ಚ ಸುದೀಪ್ ಬೆಂಬಲ ; ಆದಷ್ಟು ಬೇಗ ಸಮಸ್ಯೆ ಬಗೆಹರಿಸಲು ಆಗ್ರಹ
ಕಾವೇರಿ ಹೋರಾಟಕ್ಕೆ ಕನ್ನಡದ ಚಿತ್ರನಟರು, ಸೆಲೆಬ್ರಿಟಿಗಳ ಬೆಂಬಲ ಘೋಷಿಸಿಲ್ಲ ಎಂಬ ಕೂಗಿನ ನಡುವೆ ಈಗ ಒಂದೊಂದಾಗಿ ಕನ್ನಡ ಚಿತ್ರರಂಗದ ನಟರು ದನಿಗೂಡಿಸಿದ್ದಾರೆ. ಎರಡು ದಿನಗಳ ಹಿಂದೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಈ ಬಗ್ಗೆ ದನಿ ಎತ್ತಿ ಹೋರಾಟದಲ್ಲಿ ಭಾಗಿ ಆದರೆ ಈಗ ನಟ ಕಿಚ್ಚ ಸುದೀಪ್ ಕೂಡಾ ತಮ್ಮ ಸಾಮಾಜಿಕ ಜಾಲತಾಣ ‘X’ ನಲ್ಲಿ ಕಾವೇರಿ ಹೋರಾಟಕ್ಕೆ ಕನ್ನಡಿಗರ ಪರ ದನಿ ಎತ್ತಿದ್ದಾರೆ.

ತಮ್ಮ ಅಕೌಂಟ್ ನಲ್ಲಿ ಬರೆದುಕೊಂಡಿರುವ ಕಿಚ್ಚ ಸುದೀಪ್ ‘ಕಾವೇರಿ ಸಮಸ್ಯೆ ಈ ವರ್ಷವೂ ಶುರುವಾಗಿದೆ. ಕನ್ನಡ ಪರ ಸಂಘಟನೆಗಳು ರೈತರು ಹೋರಾಟ ನೆಡೆಸುತ್ತಿದ್ದಾರೆ. ಕನ್ನಡದ ನೆಲ, ಜಲ ಭಾಷೆಯ ಎಲ್ಲ ಹೋರಾಟಗಳಲ್ಲಿ ನಾನು ಸದಾ ನಿಮ್ಮೊಂದಿಗೆ ಇದ್ದೇನೆ ಎಂದು ತಿಳಿಸಿದ್ದಾರೆ.

ಹಾಗೆಯೇ ಮಳೆಯ ಅಭಾವದಿಂದ ನಾಡಿನ ಜನ ಎದುರಿಸುತ್ತಿರುವ ಸಮಸ್ಯೆಯ ಬಗ್ಗೆ ಪ್ರಸ್ತಾಪಿಸಿ, ‘ಮುಂಗಾರುಮಳೆಯ ಅಭಾವದಿಂದ ರೈತರಿಗೆ ಜನತೆಯ ಕೃಷಿ ಮಾತ್ರವಲ್ಲದೆ ಕುಡಿಯುವ ನೀರಿಗೆ ತೀವ್ರ ತೊಂದರೆಯಾಗಿದೆ. ಮುಂಗಾರಿನ ಹೊರತಾಗಿ ನಮಗೆ ಕುಡಿಯುವ ನೀರಿಗಾಗಿ ಬೇರೆ ಮೂಲಗಳಿಲ್ಲ ನಾವು ಕಾವೇರಿಯನ್ನೇ ನಂಬಿದ್ದೇವೆ. ನಾನು ತಿಳಿದುಕೊಂಡಂತೆ ಬರ ಅಧ್ಯಯನ ಸಮಿತಿ- ಕಾವೇರಿ ಸಮಿತಿಯ ತಂತ್ರಜ್ಞ ರು ಕೂಡಲೇ ಟ್ರಬಿನಲ್ ನ್ಯಾಯಾಲಯಕ್ಕೆ ಮತ್ತು ಕೇಂದ್ರ ಸರ್ಕಾರಕ್ಕೆ ಪ್ರಸ್ತುತ ಕರ್ನಾಟಕದ ಬರ ಪರಿಸ್ಥಿತಿ ಯನ್ನು ತುರ್ತಾಗಿ ಮನವರಿಕೆ ಮಾಡಿಕೊಡಬೇಕಿದೆ’ ಎಂದು ಆಗ್ರಹಿಸಿದ್ದಾರೆ.

‘ಹಿಂದಿನ ಕೆಲವು ಮುಖ್ಯಮಂತ್ರಿಗಳಂತೆಯೇ ನಮ್ಮ ಮುಖ್ಯ ಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ನವರು ತಮಿಳುನಾಡಿನ ಮುಖ್ಯ ಮಂತ್ರಿಗಳೊಂದಿಗೆ ಸೌಹಾರ್ದ ಮಾತುಕತೆ ಯ ಮೂಲಕ ಸಮಸ್ಯೆಯನ್ನು ತಾತ್ಕಾಲಿಕವಾಗಿ ಬಗೆಹರಿಸಬಹುದು ಎಂದು ಹಿರಿಯರು ಹೇಳಿದ್ದನ್ನು ಕೇಳಿ ತಿಳಿದುಕೊಂಡಿದ್ದೇನೆ. ಸದ್ಯದ ಬರ -ಜಲ ಹಾಹಾಕಾರಕ್ಕೆ ಪರಿಹಾರ ಒದಗಿಸಲು ಮಾನ್ಯ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡುತ್ತೇನೆ’ ಎಂದು ಕಿಚ್ಚ ಸುದೀಪ್ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.

ಇನ್ನು ಪಕ್ಷ ಬೇಧ ಮರೆತು ಈ ಹೋರಾಟಕ್ಕೆ ಎಲ್ಲರೂ ಜೊತೆಯಾಗಬೇಕು ಎಂದು ಒತ್ತಾಯಿಸಿರುವ ಸುದೀಪ್ ‘ಕೇಂದ್ರ ಸರ್ಕಾರಕ್ಕೆ ಕರ್ನಾಟಕದ ಪರಿಸ್ಥಿಯನ್ನು ಅರ್ಥ ಮಾಡಿಸಲು ಎಲ್ಲ ಪಕ್ಷದ ನಾಯಕರು ಒಗ್ಗಟ್ಟಾಗಿ ಮುಂದಾಗಲು ಮನವಿ ಮಾಡುತ್ತೇನೆ. ತಮಿಳುನಾಡು ರೈತರಿಗೂ ಕುರವೈ ಬೆಳೆಗೆ ನೀರು ಸಿಗಲಿ ಆದರೆ ನಮ್ಮ ಕುಡಿಯುವ ನೀರಿನ ಅಭಾವ ಮೊದಲು ಬಗೆಹರಿಯಲಿ. ಆದಷ್ಟು ಬೇಗ ಈ ಸಮಸ್ಯೆ ಬಗೆ ಹರಿದು ಹೋರಾಟಕ್ಕೆ ಜಯವಾಗಲಿ. ಇದರ ಜೊತೆಗೆ ಉತ್ತರ ಕರ್ನಾಟಕದ ಕೃಷ್ಣಾ ನದಿ – ಮಹದಾಯಿ ನದಿ ಮತ್ತು ಕಳಸಾ ಬಂಡೂರಿ ವಿವಾದಗಳು ಬಗೆ ಹರಿದು ಜನರ ಸಂಕಷ್ಟ ತೀರಲೆಂದು ಆಶಿಸುವೆ.
ನಮ್ಮ ಜಲ ನಮ್ಮ ಹಕ್ಕು’ ಎಂದು ಸುದೀಪ್ ತಮ್ಮ ಸಾಮಾಜಿಕ ಜಾಲತಾಣದ ಮೂಲಕ ಆಗ್ರಹಿಸಿದ್ದಾರೆ.

ಕಾವೇರಿ ಕೂಗಿಗೆ ದನಿಗೂಡಿಸದ ಚಿತ್ರರಂಗ ; ನಾವಿದ್ದರೆ ಮಾತ್ರ ನೀವು ಎಂದು ರೈತರ ಎಚ್ಚರಿಕೆ
ರಾಜ್ಯಾದ್ಯಂತ ಕಾವೇರಿ ನದಿ ನೀರಿನ ವಿಚಾರವಾಗಿ ನಿರಂತರ ಹೋರಾಟ ನಡೆಯುತ್ತಿದೆ. ಇತ್ತ ಸರ್ಕಾರ ಕೂಡಾ ನಿರಂತರವಾಗಿ ಸರ್ವಪಕ್ಷ ಸಭೆಗಳು, ಕಾನೂನು ತಜ್ಞರ ಅಭಿಪ್ರಾಯ ಸಂಗ್ರಹ ಸೇರಿದಂತೆ ತಮಿಳುನಾಡಿಗೆ ನೀರು ಬಿಡಲು ತಡೆಯಲು ಅಗತ್ಯ ಕ್ರಮಕ್ಕೆ ಮುಂದಾಗುತ್ತಿದೆ. ಆದರೆ ಕನ್ನಡ ಚಲನಚಿತ್ರ ನಟ ನಟಿಯರು ಮಾತ್ರ ಈ ಬಗ್ಗೆ ದಿವ್ಯ ಮೌನ ವಹಿಸಿರುವುದು ರಾಜ್ಯದ ರೈತರು ಹಾಗೂ ಜನತೆಯ ಆಕ್ರೋಶಕ್ಕೆ ಕಾರಣವಾಗಿದೆ.

ಸಿನೆಮಾಗಳಲ್ಲಿ ಕನ್ನಡ, ಕರ್ನಾಟಕ, ಕಾವೇರಿ ತಾಯಿ, ನದಿ, ನೆಲ, ಜಲ ಎಂದೆಲ್ಲಾ ಪುಂಖಾನುಪುಂಖವಾಗಿ ಡೈಲಾಗ್ ಉದುರಿಸಿ ಸಿನಿರಸಿಕರಿಂದ ಚಪ್ಪಾಳೆ ಗಿಟ್ಟಿಸುವ, ಆ ಮೂಲಕ ತಮ್ಮ ಖಜಾನೆ ತುಂಬಿಸಿಕೊಳ್ಳುವ ನಟರು ಇದ್ದರೆಷ್ಟು ಬಿಟ್ಟರೆಷ್ಟು ಎಂದು ಮಂಡ್ಯ ಭಾಗದ ರೈತರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಸಾಮಾಜಿಕ ಜಾಲತಾಣಗಳ ಮೂಲಕ ರೈತರು, ರೈತ ಸಂಘಟನೆಗಳು, ಹಾಗೂ ರಾಜ್ಯದ ಜನತೆ ರೋಷಾವೇಷ ವ್ಯಕ್ತಪಡಿಸುತ್ತಿದ್ದು, ಕಾವೇರಿ ಬಗ್ಗೆ ಧ್ವನಿ ಎತ್ತದ ಕನ್ನಡ ಚಲನಚಿತ್ರ ನಟರಿಗೆ ಧಿಕ್ಕಾರ ಧಿಕ್ಕಾರ ಎಂದು ಫೇಸ್ಬುಕ್, ವಾಟ್ಸ್ ಆಪ್ ಸೇರಿದಂತೆ ವಿವಿಧ ಸೋಷಿಯಲ್ ಮೀಡಿಯಾಗಳಲ್ಲಿ ಪೋಸ್ಟ್ ಹಾಕುತ್ತಿದ್ದಾರೆ.

“ಕನ್ನಡ ನಾಡು ನುಡಿ, ನೆಲ ಜಲಕ್ಕೆ ಏನೇ ಧಕ್ಕೆಯಾದರೂ ಡಾ.ರಾಜ್ ಕುಮಾರ್ ಅವರು ಆ ಬಗ್ಗೆ ದನಿ ಎತ್ತುತ್ತಿದ್ದರು. ರಾಜ್ಯದ ಜನತೆಯ ಪರ ನಿಲ್ಲುತ್ತಿದ್ದರು. ಇಂದು ಅವರ ಕೂಗಿಲ್ಲದೆ ಎಷ್ಟೋ ರೈತರು ಹಾಗೂ ಕನ್ನಡದ ಮಕ್ಕಳು ಪರಭಾಷಿಕರ ಒತ್ತಡಕ್ಕೆ ಸಿಲುಕಿ ನಮ್ಮ ಕನ್ನಡ ನಾಡಿನ ಜೀವನದಿ ಕಾವೇರಿಯನ್ನು ಕಳೆದುಕೊಳ್ಳುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಇದರ ಬಗ್ಗೆ ನಮ್ಮ ಕನ್ನಡದ ಯಾವೊಬ್ಬ ನಟರು ಧ್ವನಿ ಎತ್ತದೇ ಇರೋದು ಬಹಳ ನೋವಿನ ಸಂಗತಿ. ನಮ್ಮಿಂದ ನಟರೇ ಒರತು ನಟರಿಂದ ನಾವಲ್ಲ ಅನ್ನೋ ಸತ್ಯವನ್ನು ಅರಿತು ಇಂಥಹ ಚಲನಚಿತ್ರ ನಟರನ್ನು ನಂಬದೆ ಇನ್ನಾದರೂ ಏಳು ಕೋಟಿ ಕನ್ನಡಿಗರು ಈ ದೇಶದ ಬೆನ್ನೆಲುಬು ರೈತರ ಪರವಾಗಿ ನಿಲ್ಲಬೇಕೆಂದು ನಿಮ್ಮಲ್ಲಿ ಕೈಮುಗಿದು ವಿನಂತಿಯನ್ನು ಮಾಡಿಕೊಳ್ಳುತ್ತೇವೆ…. ರೈತ ಉಳಿದರೆ ನಾವೆಲ್ಲ ರೈತನಿಲ್ಲದ ಜಗವಿಲ್ಲ….. ನಮ್ಮ ನಿರಂತರ ಹೋರಾಟ ಕಾವೇರಿಗಾಗಿ” ಎಂದು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ಹೊರಹಾಕಿದ್ದಾರೆ.

ತಮಿಳುನಾಡಿಗೆ ಕಾವೇರಿ ನೀರು ಬಿಡದಿರಲು ಸರ್ಕಾರದ ಚಿಂತನೆ ; ಸು.ಕೋರ್ಟ್ ಮೆಟ್ಟಿಲೇರುವ ಸಾಧ್ಯತೆ
ಕಾವೇರಿ ನದಿ ನೀರು ನಿಯಂತ್ರಣ ಸಮಿತಿ ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ಐದು ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ಆದರೆ ಕರ್ನಾಟಕ ಸರ್ಕಾರ CWRC ಆದೇಶವನ್ನು ಪಾಲಿಸದಿರಲು ನಿರ್ಧರಿಸಿದೆ.

ಸರ್ಕಾರ ಆಯೋಜಿಸಿದ್ದ ಸರ್ವಪಕ್ಷ ಸಭೆಯ ನಂತರ ಎಲ್ಲಾ ಪಕ್ಷಗಳ ಒಪ್ಪಿಗೆ ಪಡೆದು ಈ ನಿರ್ಧಾರಕ್ಕೆ ಬರಲಾಗಿದೆ. ಸರ್ವಪಕ್ಷ ಸಭೆಯ ನಂತರ CWRC ಆದೇಶವನ್ನು ಧಿಕ್ಕರಿಸಿ, ತಮಿಳುನಾಡಿಗೆ ಕಾವೇರಿ ನೀರು ಬಿಡದಿರಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಸಭೆಯಲ್ಲಿ ಒಮ್ಮತದ ತೀರ್ಮಾನಕ್ಕೆ ಬರಲಾಗಿದೆ. ಈ ಬಗ್ಗೆ ಸುಪ್ರೀಂಕೋರ್ಟ್ ನಲ್ಲಿ ಹೋರಾಡಲು ಒಮ್ಮತದ ತೀರ್ಮಾನಕ್ಕೆ ಬರಲಾಗಿದೆ ಎಂದು ಸರ್ಕಾರದ ಮೂಲಗಳಿಂದ ತಿಳಿದುಬಂದಿದೆ.

‘ತಮಿಳುನಾಡಿಗೆ ನೀರು ಹರಿಸಿದರೆ ಹೋರಾಟದ ಎಚ್ಚರಿಕೆ’ – ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣ ಗೌಡ
ತಮಿಳುನಾಡಿಗೆ ಕಾವೇರಿ ನೀರು ಹರಿಸಬೇಕು ಎಂಬ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣ ಗೌಡ ಕಿಡಿಕಾರಿದ್ದಾರೆ. ಕರ್ನಾಟಕ ಸರ್ಕಾರ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಬೇಕು ಎಂದು ಮನವಿ ಮಾಡಿದ್ದಾರೆ.

‘ಸೆ.12ರವರೆಗೆ ತಮಿಳುನಾಡಿಗೆ 5000 ಕ್ಯೂಸೆಕ್ಸ್ ನೀಡಬೇಕೆಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀಡಿರುವ ಆದೇಶ ಅನ್ಯಾಯ ಮಾತ್ರವಲ್ಲ ಅವಾಸ್ತವಿಕವಾಗಿದೆ. ಇದನ್ನು ಕರ್ನಾಟಕ ಸರ್ಕಾರ ಯಾವುದೇ ಕಾರಣಕ್ಕೂ ಒಪ್ಪಬಾರದು ಮತ್ತು ಜಾರಿಗೊಳಿಸಬಾರದು’ ಎಂದು ಸರ್ಕಾರಕ್ಕೆ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

ರಾಜ್ಯದಲ್ಲಿ ತೀವ್ರತರವಾದ ಬರಗಾಲದ ಛಾಯೆ ಇರುವ ಬಗ್ಗೆ ಪ್ರಸ್ತಾಪಿಸಿ ‘ರಾಜ್ಯದಲ್ಲಿ ತೀವ್ರ ಸ್ವರೂಪದ ಬರದ ಸ್ಥಿತಿ ನಿರ್ಮಾಣವಾಗಿದೆ. ರೈತರು ಮಳೆ ಇಲ್ಲದೆ ಕಂಗಾಲಾಗಿದ್ದಾರೆ. ಇಂಥ ಸ್ಥಿತಿಯಲ್ಲಿ ದಿನಕ್ಕೆ 5000 ಕ್ಯೂಸೆಕ್ಸ್ ನೀರು ಎಲ್ಲಿಂದ ತರಲು ಸಾಧ್ಯ? ಇಂಥ ಅನ್ಯಾಯದ ಆದೇಶಗಳನ್ನು ಪ್ರಾಧಿಕಾರ ನೀಡಲು ಏನು ಕಾರಣ?’ ಎಂದು ಪ್ರಶ್ನಿಸಿದ್ದಾರೆ.

ಇನ್ನು ಬೆಂಗಳೂರಿನ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಪ್ರಸ್ತಾಪಿಸಿ ‘ಮುಕ್ಕಾಲು ಭಾಗ ಬೆಂಗಳೂರು ನಗರ ಕುಡಿಯುವ ನೀರಿಗಾಗಿ ಕಾವೇರಿ ನದಿಯನ್ನೇ ನೆಚ್ಚಿಕೊಂಡಿದೆ. ಹೀಗಿರುವಾಗ ಪ್ರಾಧಿಕಾರ ಹೇಳಿದಷ್ಟು ನೀರು ಬಿಟ್ಟರೆ ಬೆಂಗಳೂರಿನ ಜನಜೀವನವೇ ಅಸ್ತವ್ಯಸ್ಥವಾಗಲಿದೆ. ಪ್ರಾಧಿಕಾರಕ್ಕೆ ಈ ಅರಿವು ಇಲ್ಲವೇ?’ ಎಂದು ಬೆಂಗಳೂರಿಗೆ ಆಗಬಹುದಾದ ನೀರಿನ ಸಮಸ್ಯೆ ಬಗ್ಗೆ ಬೆಳಕು ಚೆಲ್ಲಿದ್ದಾರೆ.

‘ರಾಜ್ಯ ಸರ್ಕಾರ ಪ್ರಾಧಿಕಾರದ ತೀರ್ಮಾನವನ್ನು ಒಪ್ಪಲು ಸಾಧ್ಯವಿಲ್ಲ ಎಂದು ಖಡಾಖಂಡಿತವಾಗಿ ಹೇಳಬೇಕು. ವಾಸ್ತವವಾಗಿ ಪ್ರಾಧಿಕಾರ ಹೇಳಿದಂತೆ ನೀರು ಬಿಟ್ಟರೆ ಹದಿನೈದು ದಿನಗಳಲ್ಲಿ ಒಟ್ಟು 7 ಟಿಎಂಸಿಯಷ್ಟು ನೀರು ಬಿಡಬೇಕಾಗುತ್ತದೆ. ಅಷ್ಟೊಂದು ನೀರು ಎಲ್ಲಿಂದ ತರಲು ಸಾಧ್ಯ?’ ಎಂದು ನೀರಿನ ಉಳಿವಿನ ಬಗ್ಗೆ ಬೆಳಕು ಚೆಲ್ಲಿ ತಿಳಿಸಿದ್ದಾರೆ.

‘ಒಂದು ವೇಳೆ ರಾಜ್ಯ ಸರ್ಕಾರ ಪ್ರಾಧಿಕಾರದ ಆದೇಶದಂತೆ ನೀರು ಬಿಟ್ಟರೆ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾದ್ಯಂತ ಹೋರಾಟ ಸಂಘಟಿಸಬೇಕಾಗುತ್ತದೆ. ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಪ್ರಾಧಿಕಾರದ ಒತ್ತಡಕ್ಕೆ ಮಣಿಯಬಾರದು’ ಎನ್ನುವ ಮೂಲಕ ರಾಜ್ಯ ಸರ್ಕಾರಕ್ಕೆ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣ ಗೌಡರು ತಮ್ಮ ಸಾಮಾಜಿಕ ಜಾಲತಾಣದ ಮೂಲಕ ಬಿಸಿ ಮುಟ್ಟಿಸಿದ್ದಾರೆ.

ತಮಿಳುನಾಡಿಗೆ ಪ್ರತಿ ದಿನ 5 ಟಿಎಂಸಿ ನೀರು ಬಿಡುವಂತೆ ಕರ್ನಾಟಕಕ್ಕೆ ಸೂಚನೆ
ಪ್ರತಿದಿನ ತಮಿಳುನಾಡಿಗೆ 5 ಟಿಎಂಸಿ ನೀರು ಬಿಡಲು ಕಾವೇರಿ ನದಿ ನೀರು ಪ್ರಾಧಿಕಾರ ಸೂಚನೆ ನೀಡಿದೆ. ಇಂದು ನಡೆದ ಕಾವೇರಿ ನದಿ ನೀರು ಪ್ರಾಧಿಕಾರ ಸಭೆಯಲ್ಲಿ ಕರ್ನಾಟಕಕ್ಕೆ ಈ ಸೂಚನೆಯನ್ನು ನೀಡಲಾಗಿದೆ. ಮುಂದಿನ ಹದಿನೈದು ದಿನದ ತನಕ 5 ಟಿಎಂಸಿ ನೀರು ಬಿಡಲು ಕಾವೇರಿ ನದಿ ನೀರು ಪ್ರಾಧಿಕಾರ ಸೂಚಿಸಿದೆ.

ಪ್ರಾಧಿಕಾರಕ್ಕೆ ವಿಶೇಷ ಅಧಿಕಾರ ನೀಡಿದ ಸು.ಕೋರ್ಟ್
ಕಾವೇರಿ ನದಿ ನೀರು ಹಂಚಿಕೊಳ್ಳಲು ಹೊಸ ಕ್ರಮವನ್ನು ರಚಿಸುವಂತೆ ಸುಪ್ರೀಂ ಕೋರ್ಟ್‌ ಕೇಂದ್ರ ಸರಕಾರಕ್ಕೆ ಆದೇಶಿಸಿತ್ತು. ಅದರಂತೆ ಕೇಂದ್ರ ಸರ್ಕಾರವು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವನ್ನು ಸ್ಥಾಪಿಸಿದೆ. ಇದರ ಮುಖ್ಯ ಕಚೇರಿ ಹೊಸದಿಲ್ಲಿಯಲ್ಲಿದೆ. ಪ್ರಾಧಿಕಾರದ ಕಾರ್ಯನಿರ್ವಹಣೆಯ ವೆಚ್ಚವನ್ನು ಕರ್ನಾಟಕ, ತಮಿಳುನಾಡು, ಕೇರಳ, ಪಾಂಡಿಚೇರಿ 40:40:15:5 ಅನುಪಾತದಲ್ಲಿ ಹಂಚಿಕೊಳ್ಳಬೇಕಿದೆ.

ಕಾವೇರಿ ಪ್ರಾಧಿಕಾರಕ್ಕೆ ಕೇಂದ್ರ ಜಲಸಂಪನ್ಮೂಲ ಇಲಾಖೆ ಕಾರ್ಯದರ್ಶಿಯೇ ಮುಖ್ಯಸ್ಥರಾಗಿರುತ್ತಾರೆ. ಪ್ರಾಧಿಕಾರದಲ್ಲಿ ಒಟ್ಟು 10 ಮಂದಿ ಸದಸ್ಯರಿರುತ್ತಾರೆ. ನೀರಾವರಿ, ಕೃಷಿ ಸಂಬಂಧಿತ ಇಬ್ಬರು ಅಧಿಕಾರಿಗಳು ಕಾಯಂ ಸದಸ್ಯರಾಗಿರುತ್ತಾರೆ. ಇಬ್ಬರು ಅರೆಕಾಲಿಕ, ನಾಲ್ಕು ರಾಜ್ಯಗಳ ಜಲಸಂಪನ್ಮೂಲ ಕಾರ್ಯದರ್ಶಿಗಳು ಸದಸ್ಯರಾಗಿ ಇರುತ್ತಾರೆ.

ಸೆಪ್ಟೆಂಬರ್ ಮೊದಲ ವಾರದಲ್ಲಿ ‘ಬರಗಾಲ’ ಘೋಷಣೆ ಸಾಧ್ಯತೆ
ಈ ನಡುವೆ ಸೆಪ್ಟೆಂಬರ್​ ಮೊದಲ ವಾರದಲ್ಲಿ ಬರಗಾಲ ಘೋಷಣೆ ಸಾಧ್ಯತೆ ಅಂತ ಸಚಿವ ಎನ್​ ಚಲುವರಾಯಸ್ವಾಮಿ ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು ಸೆಪ್ಟೆಂಬರ್​​ 4ರೊಳಗೆ ಬರ ಘೋಷಣೆ ಬಗ್ಗೆ ತೀರ್ಮಾನ ಮಾಡಿ, ಸೆಪ್ಟೆಂಬರ್​ ಮೊದಲ ವಾರದಲ್ಲಿ ಬರಗಾಲ ಘೋಷಣೆ ಸಾಧ್ಯತೆ ಇದೆ ಎಂದು ತಿಳಿಸಿದರು.

ಕಾವೇರಿ ವಿವಾದ : ಸೆ.1ಕ್ಕೆ ವಿಚಾರಣೆಯನ್ನು ಮುಂದೂಡಿದ ಸು.ಕೋರ್ಟ್
ಕಾವೇರಿ ನೀರಿಗಾಗಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದ ತಮಿಳುನಾಡು ಸರ್ಕಾರದ ಅರ್ಜಿಯನ್ನು ಇಂದು ಸುಪ್ರೀಂಕೋರ್ಟ್ ವಿಚಾರಣೆ ನಡೆಸಿದೆ. ವಾದ ಮತ್ತು ಪ್ರತಿವಾದವನ್ನು ಆಲಿಸಿದ ನಂತರ ಮುಂದಿನ ವಿಚಾರಣೆಯನ್ನು ಬರುವ ಶುಕ್ರವಾರಕ್ಕೆ(ಸೆಪ್ಟೆಂಬರ್ 01) ಮುಂದೂಡಿದೆ.

ಈ ನಡುವೆ ಮುಂದಿನ ವಿಚಾರಣೆ ನಡೆಯುವ ಒಳಗೇ ಮಧ್ಯಂತರ ಸಭೆ ಕರೆಯುವಂತೆ ಕಾವೇರಿ ನಿರ್ವಹಣಾ ಪ್ರಾಧಿಕಾರಕ್ಕೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.

ವಾದ ಪ್ರತಿವಾದದ ನಂತರ ವಿಚಾರಣೆ ಮುಂದೂಡುವ ಮುನ್ನ ತುರ್ತಾಗಿ ಆದೇಶ ಹೊರಡಿಸುವುದು ಕಷ್ಟ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯ ಪಟ್ಟಿದೆ. ‘ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದಲ್ಲಿ ತಜ್ಞರಿದ್ದಾರೆ . ನಾವು ತಜ್ಞರಲ್ಲ ಹಾಗಾಗಿ ಯಾವುದನ್ನೂ ತನಿಖೆ ಮಾಡದೆ ತಕ್ಷಣ ಆದೇಶ ಹೊರಡಿಸುವುದು ಕಷ್ಟ ಎಂದು ಸುಪ್ರೀಂಕೋರ್ಟ್ ನ್ಯಾಯಪೀಠ ಅಭಿಪ್ರಾಯ ಪಟ್ಟಿದೆ. ಈ ಮಧ್ಯಂತರ ಅವಧಿಯಲ್ಲಿ ಸಭೆ ಕರೆಯುವಂತೆ ಕಾವೇರಿ ನಿರ್ವಹಣಾ ಪ್ರಾಧಿಕಾರಕ್ಕೆ ಸೂಚಿಸಿದೆ.

ವಿಚಾರಣೆ ಹಂತದಲ್ಲಿ ಮೊದಲು ವಾದ ಆರಂಭಿಸಿದ ತಮಿಳುನಾಡು ಪರ ವಕೀಲ ಮುಕುಲ್ ರೋಹಟಗಿ, ಸುಪ್ರೀಂ ಕೋರ್ಟ್ ಆದೇಶದಂತೆ ಕರ್ನಾಟಕ 40 ಟಿಎಂಸಿ ನೀರು ಬಿಡುತ್ತಿಲ್ಲ. ಈ ಮೊದಲು 15 ದಿನಗಳ ಕಾಲ 10 ಸಾವಿರ ಕ್ಯೂಸೆಕ್ ನೀರು ಬಿಡಲು CWMA ಆದೇಶ ನೀಡಿತ್ತು. ಇದು ಮುಂದಿನ 20 ದಿನಗಳಿಗೆ ಮುಂದುವರೆಯಬೇಕು ಎಂದು ಸುಪ್ರೀಂಕೋರ್ಟ್​ ತ್ರೀಸದಸ್ಯ ಪೀಠದ ಮುಂದೆ ವಾದ ಮಂಡಿಸಿದರು.

ಕರ್ನಾಟಕದ ಪರ ವಾದ
ತಮಿಳುನಾಡು ಪರ ವಕೀಲರ ವಾದದ ನಂತರ ವಾದ ಮಂಡಿಸಿದ ಕರ್ನಾಟಕ ಪರ ವಕೀಲರಾದ ಶ್ಯಾಮ ದಿವಾನ್ ‘ಕರ್ನಾಟಕದಲ್ಲಿ ಈ ಬಾರಿ ಮಳೆ ಪ್ರಮಾಣ ಕಡಿಮೆ ಇದೆ. ಈ ಕಾರಣ ನೀರಿನ ಪ್ರಮಾಣ ಕೂಡಾ ತುಂಬಾ ಕಡಿಮೆ ಇದೆ. ಈ ವಿಚಾರವನ್ನು ಕಾವೇರಿ ನಿರ್ವಹಣಾ ಪ್ರಾಧಿಕಾರದಲ್ಲಿ ನಾವು ನಮ್ಮ ಸಮಸ್ಯೆಗಳನ್ನು ಹೇಳಲು ಪ್ರಯತ್ನಿಸಿದಾಗ ತಮಿಳುನಾಡು ಸರ್ಕಾರದ ಅಧಿಕಾರಿಗಳು ಕೇಳದೆ ಸಭೆಯಿಂದ ಹೊರನಡೆದಿದ್ದಾರೆ ಎಂದು ಕರ್ನಾಟಕ ಪರ ಶ್ಯಾಮ ದಿವಾನ್ ವಾದ ಮಂಡಿಸಿದರು.

ಆ ನಂತರ ಮುಂದಿನ ವಿಚಾರಣೆಯನ್ನು ಬರುವ ಸೆಪ್ಟೆಂಬರ್ 01 ಕ್ಕೆ ಸುಪ್ರೀಂಕೋರ್ಟ್ ಮುಂದೂಡಿದೆ.