cec – Peepal Media

ಮಾಜಿ ಮುಖ್ಯ ಚುನಾವಣಾ ಆಯುಕ್ತ ಗಿಲ್ ನಿಧನ
ನವದೆಹಲಿ: ಮಾಜಿ ಮುಖ್ಯ ಚುನಾವಣಾ ಆಯುಕ್ತ (CEC) ಮನೋಹರ್ ಸಿಂಗ್ ಗಿಲ್ (86) ಭಾನುವಾರ ನಿಧನರಾದರು. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ದೆಹಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಕೊನೆಯುಸಿರೆಳೆದಿದ್ದಾರೆ.

1958ರ ಬ್ಯಾಚ್‌ನ IAS ಅಧಿಕಾರಿ, ಗಿಲ್ ಡಿಸೆಂಬರ್ 1996ರಿಂದ ಜೂನ್ 2001ರವರೆಗೆ 11ನೇ CEC ಆಗಿ ಸೇವೆ ಸಲ್ಲಿಸಿದರು. ನಂತರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದರು.

2008ರಲ್ಲಿ ಕೇಂದ್ರ ಕ್ರೀಡಾ ಸಚಿವರಾಗಿದ್ದರು. ಪ್ರಕಾಶ್ ಸಿಂಗ್ ಬಾದಲ್ ಪಂಜಾಬ್ ಮುಖ್ಯಮಂತ್ರಿಯಾಗಿದ್ದಾಗ ಆ ರಾಜ್ಯದಲ್ಲಿ ಸರ್ಕಾರಿ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಗಿಲ್ ಅವರು ಪತ್ನಿ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ. ಅವರ ಅಂತ್ಯಕ್ರಿಯೆ ಸೋಮವಾರ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಗಿಲ್ ನಿಧನಕ್ಕೆ ಕೇಂದ್ರ ಚುನಾವಣಾ ಆಯೋಗ ಸಂತಾಪ ವ್ಯಕ್ತಪಡಿಸಿದೆ. 1998ರಲ್ಲಿ 12ನೇ ಲೋಕಸಭೆ ಮತ್ತು 1999ರಲ್ಲಿ 13ನೇ ಲೋಕಸಭೆಗೆ ಯಶಸ್ವಿಯಾಗಿ ಚುನಾವಣೆಗಳನ್ನು ನಡೆಸಿದಕ್ಕಾಗಿ ಅವರನ್ನು ಪ್ರಶಂಸಿಸಲಾಗಿತ್ತು.