Chaluvarayaswamy – Peepal Media

ಕಾವೇರಿ ಚರ್ಚೆಗೆ ಸಿಗದ ಪ್ರಧಾನಿ ಜೆಡಿಎಸ್ ಜೊತೆಗಿನ ಮೈತ್ರಿಗೆ ಸಿಕ್ತಾರೆ : ಎನ್.ಚಲುವರಾಯಸ್ವಾಮಿ ಆಕ್ರೋಶ
ರಾಜ್ಯದಲ್ಲಿ ತೀವ್ರತರವಾದ ಬರಗಾಲ ಬಂದಿದೆ. ಇದರ ಜೊತೆಗೆ ಕಾವೇರಿ ನದಿ ನೀರಿನಿಂದಲೂ ರಾಜ್ಯಕ್ಕೆ ಅನ್ಯಾಯವಾಗಿದೆ. ರಾಜ್ಯ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ನೀರಿನ ಅಭಾವ ಎದುರಿಸುತ್ತಿದ್ದರೂ ಕೇಂದ್ರ ಸರ್ಕಾರ ಅಥವಾ ಪ್ರಧಾನಿ ನರೇಂದ್ರ ಮೋದಿ ಮಧ್ಯ ಪ್ರವೇಶಿಸದೇ ಇರುವುದು ಕರ್ನಾಟಕಕ್ಕೆ ಎಸಗುತ್ತಿರುವ ಅನ್ಯಾಯ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ.

ಕಾವೇರಿ ನೀರಿನ ಹಂಚಿಕೆ ವಿಚಾರದಲ್ಲಿ ಪ್ರಧಾನಿ ಮಧ್ಯೆ ಪ್ರವೇಶಿಸಬೇಕು ಎಂದು ಈಗಾಗಲೇ ಹಲವು ಬಾರಿ ಪ್ರಧಾನಿಗೆ ಪತ್ರ ಬರೆಯಲಾಗಿದೆ. ಅಷ್ಟೆ ಅಲ್ಲದೆ ಪ್ರಧಾನಿ ಭೇಟಿಗೂ ಸಹ ಕರ್ನಾಟಕ ಸರ್ಕಾರ ಪ್ರಯತ್ನಿಸಿದೆ. ಈ ವರೆಗೂ ಪ್ರಧಾನಿ ಕಛೇರಿಯಿಂದ ಪ್ರತ್ಯುತ್ತರವಾಗಲಿ ಬಂದಿಲ್ಲ. ಹಾಗೆಯೇ ರಾಜತಾಂತ್ರಿಕ ವಿಚಾರಗಳ ಬಗ್ಗೆ, ರಾಜ್ಯದ ಸಮಸ್ಯೆಗಳ ಬಗ್ಗೆಯೂ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ನಮ್ಮ ಕೈಗೆ ಸಿಗುತ್ತಿಲ್ಲ ಎಂದು ಸಚಿವ ಚಲುವರಾಯಸ್ವಾಮಿ ದೂರಿದ್ದಾರೆ.

ಇವರ ರಾಜಕೀಯ ಮೈತ್ರಿ ಹಾಗೂ ಪಕ್ಷದ ವಿಚಾರವಾಗಿ ಚರ್ಚಿಸಲು ಪ್ರಧಾನಿ ಎಷ್ಟು ಹೊತ್ತಿಗೆ ಬೇಕಾದರೂ ಜೆಡಿಎಸ್ ನವರ ಕೈಗೆ ಸಿಗುತ್ತಾರೆ. ಇದರ ನಡುವೆ ಕಾವೇರಿ ನೀರಿನ ಹಂಚಿಕೆ ವಿಚಾರಕ್ಕೆ ಜೆಡಿಎಸ್ ಪ್ರಧಾನಿ ಜೊತೆಗೆ ಎಳ್ಳಷ್ಟೂ ಚರ್ಚಿಸಿಲ್ಲ. ಆದರೆ ಜೆಡಿಎಸ್ ನವರು ಇಲ್ಲಿ ಬಂದು ಇಲ್ಲದ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ ಎಂದು ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ಇನ್ನು ನಮ್ಮ ರೈತರು, ಸಂಘಟನೆಗಳು ಸರ್ಕಾರದ ಗಮನ ಸೆಳೆಯಲು ಪ್ರತಿಭಟನೆ ಮಾಡುತ್ತಿದ್ದಾರೆ. ಅವರ ಬಗ್ಗೆ ಮಾತನಾಡುವುದಿಲ್ಲ. ನಾವು ನಮ್ಮ ಸಮಸ್ಯೆಯನ್ನು ಕೋರ್ಟ್ ಹಾಗೂ ಪ್ರಾಧಿಕಾರದ ಮುಂದೆ ಹೇಳಬಹುದಷ್ಟೆ. ಕೇಂದ್ರ ಸರ್ಕಾರ ಮಧ್ಯ ಪ್ರವೇಶ ಮಾಡುವ ಅವಕಾಶವಿದೆ ಎಂದರು.

ಬಿಜೆಪಿ ಹಾಗೂ ಜೆಡಿಎಸ್‌ನವರಿಗೆ ಕೃತಜ್ಞತೆ ಇಲ್ಲವೇ, ಮಂಡ್ಯದಲ್ಲಿ ಬಂದು ಏನು ಮಾಡುತ್ತಾರೆ, ನಮ್ಮ ಗಮನಕ್ಕೆ ತರಲು ಮಂಡ್ಯದಲ್ಲಿ ರೈತರಿಲ್ಲವೇ ಎಂದು ಪ್ರಶ್ನಿಸಿದರು. ಇನ್ನು ಮಾಜಿ ಸಿಎಂಗಳಾದ ಕುಮಾರಸ್ವಾಮಿ, ಬೊಮ್ಮಾಯಿ ಅವರು ದೆಹಲಿಗೆ ಹೋಗಿ ಪ್ರಧಾನಿಗಳ ಬಳಿ ಮಾತನಾಡಬೇಕು. ಕಾವೇರಿ ವಿಚಾರ ಸಮಸ್ಯೆ ಹೇಳಿ ಎರಡೂ ರಾಜ್ಯಗಳ ಮುಖ್ಯಮಂತ್ರಿಗಳನ್ನು ಕರೆಸಿ ಸಮಸ್ಯೆ ಬಗೆಹರಿಸಿಕೊಳ್ಳಲು ಹೇಳಬೇಕು. ಅದು ಬಿಟ್ಟು ಇಲ್ಲಿ ಬಂದು ಮಾಧ್ಯಮಗಳ ಮುಂದೆ ಪ್ರತಿಭಟನೆ ಮಾಡಬೇಕಾ ಎಂದು ವಾಗ್ದಾಳಿ ನಡೆಸಿದರು.

ಇನ್ನು ಕರ್ನಾಟಕ ಸರ್ಕಾರದ ವತಿಯಿಂದ ದೆಹಲಿಗೆ ಹೋಗಿದ್ದೇವೆ. ಇಲ್ಲಿನ ಸಂಸದರ ಸಭೆ ನಡೆಸಿದ್ದೇವೆ. ಮೂರು ಬಾರಿ ವಿರೋಧ ಪಕ್ಷಗಳ ಸಭೆಯನ್ನೂ ಮಾಡಿದ್ದೀವಿ, ಕೋರ್ಟ್ ಹಾಗೂ ಪ್ರಾಧಿಕಾರದ ಆದೇಶವನ್ನು ಎಲ್ಲಾ ಸಿಎಂಗಳು ಪಾಲಿಸಿದ್ದಾರೆ. ಇಲ್ಲಿ ಬಂದು ಶೂರರ-ವೀರರ ರೀತಿ ಭಾಷಣ ಮಾಡುವ ಜೆಡಿಎಸ್-ಬಿಜೆಪಿಯವರು ಎಲ್ಲರೂ ನೀರು ಬಿಟ್ಟಿದ್ದಾರೆ ಎಂದು ಛೇಡಿಸಿದರು.

ಈ ಹಿಂದೆ ಕಾವೇರಿ ವಿಚಾರದಲ್ಲಿ ಮಧ್ಯೆ ಪ್ರವೇಶಿಸಿದ್ದ ಹಿಂದಿನ ಪ್ರಧಾನಿ ವಾಜಪೇಯಿ ಕೂಡಾ ಕಾವೇರಿ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಿದ್ದನ್ನು ನೆನಪಿಸಿದ ಸಚಿವ ಚಲುವರಾಯಸ್ವಾಮಿ, ಈಗ ಪ್ರಧಾನಿ ಮಧ್ಯ ಪ್ರವೇಶ ಮಾಡಲು ಆಗಲ್ಲ ಅಂದರೆ ಮನೆಯಲ್ಲಿ ಇರಲಿ, ರಾಜಕಾರಣ ಯಾಕೆ ಮಾಡಬೇಕು ಎಂದು ಪ್ರಶ್ನಿಸಿದರು.

ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರ ಎರಡೂ ರಾಜ್ಯಗಳನ್ನು ಕರೆದು ಸಮಸ್ಯೆ ಬಗೆಹರಿಸಬೇಕು. ಕರ್ನಾಟಕ, ತಮಿಳುನಾಡು ಬೇರೆ ಬೇರೆ ರಾಜ್ಯ. ತಮಿಳುನಾಡಿನವರು ಅವರ ರೈತರ ಹಿತ ಕಾಯುತ್ತಾರೆ. ನಾವು ಕರ್ನಾಟಕದವರು ನಮ್ಮ ರೈತರ ಹಿತ ಕಾಯುತ್ತೇವೆ ಎಂದರು.

INDIA ಒಕ್ಕೂಟದ ರಾಜಕೀಯದಲ್ಲಿ ತಮಿಳುನಾಡಿನ ಆಡಳಿತಾರೂಢ DMK ವಿಚಾರ ಪ್ರಸ್ತಾಪಿಸಿ ಮಾತನಾಡಿದಾಗ, INDIA ಒಕ್ಕೂಟದ ರಾಜಕೀಯ ಬೇರೆ, ಕಾವೇರಿ ವಿಚಾರವೇ ಬೇರೆ. ಎರಡನ್ನೂ ಒಟ್ಟಿಗೆ ಮಾಡುವುದು ಸರಿಯಲ್ಲ. ಬೇರೆ ವಿಚಾರದಲ್ಲಿ ರಾಜಕೀಯ ಮಾಡಿಕೊಳ್ಳಲಿ, ನಾವೂ ಸಹ INDIA ಒಕ್ಕೂಟದ ಮೂಲಕ ರಾಜಕೀಯ ಮಾಡುತ್ತಿದ್ದೇವೆ. ಕಾವೇರಿ ಸಮಸ್ಯೆಯನ್ನು ಸಾಧ್ಯವಾದರೂ ಬಗೆಹರಿಸಲಿ, ಅವರ ಕೈಯ್ಯಲ್ಲಿ ಆಗದೇ ಇದ್ದರೆ ನಮ್ಮ ರೈತರನ್ನು ಉಳಿಸೋದು ಹೇಗೆ ಎಂಬುದು ನಮಗೆ ಗೊತ್ತು. ಈಗಾಗಲೇ ನಾವು ಕಾವೇರಿ ನೀರಿನ ವಿಚಾರದ ಬಗ್ಗೆ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದೇವೆ ಎಂದರು.

ಮಂಡ್ಯದಲ್ಲಿ ‘ಪೇ ಸಿಎಸ್’ ಅಭಿಯಾನ ; ಸಚಿವ ಚಲುವರಾಯಸ್ವಾಮಿ ಪರ, ವಿರೋಧದ ಪ್ರತಿಭಟನೆ
ಮಂಡ್ಯ : ಕೃಷಿ ಇಲಾಖೆ ಅಧಿಕಾರಿಗಳ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿರುವ ಆರೋಪದ ಹಿನ್ನೆಲೆಯಲ್ಲಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ವಿರುದ್ಧ ಮಂಡ್ಯ ಜಿಲ್ಲಾ ಬಿಜೆಪಿ ‘ಪೇಸಿಎಸ್ (Pay CS) ಅಭಿಯಾನ’ ನಡೆಸಿದೆ. ಮಂಡ್ಯ ಪಟ್ಟಣ ವ್ಯಾಪ್ತಿಯಲ್ಲಿ ಜಿಲ್ಲಾ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ನಗರದ ಹಲವು ಕಡೆಗಳಲ್ಲಿ ‘ಪೇಸಿಎಸ್’ ಪೋಸ್ಟರ್ ಗಳನ್ನು ಅಂಟಿಸಿ ಪ್ರತಿಭಟನೆ ನಡೆಸಿದ್ದಾರೆ.

ಪ್ರತಿಭಟನೆಯಲ್ಲಿ ‘ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೃಷಿ ಸಚಿವರೂ ಆದ ಎನ್. ಚಲುವರಾಯಸ್ವಾಮಿ ಅವರು ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರ ಮೂಲಕ ಪ್ರತಿ ತಾಲೂಕಿನ ಕೃಷಿ ಅಧಿಕಾರಿಗಳಿಂದ 6 ರಿಂದ 8 ಲಕ್ಷ ಲಂಚದ ಹಣವನ್ನು ಸಂಗ್ರಹ ಮಾಡಲು ಸೂಚಿಸಿದ್ದರ ವಿರುದ್ಧ ರಾಜ್ಯಪಾಲರಿಗೆ ಅಧಿಕಾರಿಗಳು ಪತ್ರ ಬರೆದು ನಮ್ಮ ಕುಟುಂಬ ಸಮೇತ ವಿಷ ಕುಡಿಯುತ್ತೇವೆ ಎಂದು ವಿವರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಚಲುವರಾಯಸ್ವಾಮಿ ರಾಜೀನಾಮೆ ನೀಡಬೇಕು’ ಎಂದು ಬಿಜೆಪಿ ಮುಖಂಡರು ಆಕ್ರೋಶ ಹೊರಹಾಕಿದ್ದಾರೆ.

ರಾಜ್ಯ ಸರ್ಕಾರದ ಇತಿಹಾಸದಲ್ಲೇ ಅಧಿಕಾರಿಗಳು ಸಚಿವರ ವಿರುದ್ಧ ಪತ್ರ ಬರೆದಿರುವುದು ಲಜ್ಜೆಗೇಡಿತನದ ಸಂಗತಿಯಾಗಿದೆ. ಈ ಕೂಡಲೇ ಸಚಿವರು ಆರೋಪ ಮುಕ್ತರಾಗುವವರೆಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆಗೆ ಸಹಕಾರ ನೀಡಬೇಕು ಎಂದು ಒತ್ತಾಯಿಸಿದರು.

ಮಂಡ್ಯ ನಗರದ ಹಲವೆಡೆ ‘ಪೇಸಿಎಸ್’ ಪೋಸ್ಟರ್ ಅಂಟಿಸಿದ್ದ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಗರದ ಸಂಜಯ್ ವೃತ್ತದಲ್ಲಿ ಪೋಸ್ಟರ್ ಅಂಟಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನಾಕಾರರನ್ನು ಮಂಡ್ಯ ಪಶ್ಚಿಮ ಠಾಣೆ ಪೊಲೀಸರು ವಶಕ್ಕೆ ಪಡೆದು, ಪೋಸ್ಟರ್ ಹರಿದು ಹಾಕಿದ್ದಾರೆ.

ಇತ್ತ ಕಾಂಗ್ರೆಸ್ ಮುಖಂಡರೂ ಸಹ ಬಿಜೆಪಿ ಮತ್ತು ಜೆಡಿಎಸ್ ವಿರುದ್ಧ ಮಂಡ್ಯದಲ್ಲಿ ಪ್ರತಿಭಟನೆ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಎನ್.ಚಲುವರಾಯಸ್ವಾಮಿ ಅವರ ಜನಪ್ರಿಯತೆ ಮತ್ತು ಕಾಂಗ್ರೆಸ್ ಸರ್ಕಾರದ ಮೇಲಿನ ಅಸಹನೆಯಿಂದ ಅವರ ಜನಪ್ರಿಯತೆ ಕೆಡಿಸಲು ಯಾರೋ ಷಡ್ಯಂತ್ರ ರೂಪಿಸಿದ್ದಾರೆ. ಈ ಬಗ್ಗೆ ಸೂಕ್ತ ರೀತಿಯಲ್ಲಿ ತನಿಖೆ ನಡೆಸಬೇಕು ಎಂದು ಮಂಡ್ಯ ಜಿಲ್ಲಾ ಪೊಲೀಸರಿಗೆ ಮನವಿ ಮಾಡಿದ್ದಾರೆ.

ರಾಜ್ಯಪಾಲರಿಗೆ ನಕಲಿ ದೂರು : ಪೊಲೀಸರಿಂದ ತನಿಖೆ ; ತಿರುಮಂತ್ರವಾಗುತ್ತಾ ತಂತ್ರಗಾರಿಕೆ?
ಕೃಷಿ ಸಚಿವ ಚಲುವರಾಯಸ್ವಾಮಿ ಮೇಲೆ ಭ್ರಷ್ಟಾಚಾರದ ಆರೋಪದ ಪ್ರಕರಣ ಈಗ ಆರೋಪದ ತಂತ್ರ ಹೆಣೆದವರಿಗೇ ತಿರುಮಂತ್ರ ಆಗುವ ಸಾಧ್ಯತೆ ಹೆಚ್ಚಾಗಿದೆ. ಚಲುವರಾಯಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ಬರೆದ ದೂರಿ ಪತ್ರದ ಬಗ್ಗೆ ಮಂಡ್ಯ ಜಿಲ್ಲೆಯ ಕೃಷಿ ಇಲಾಖೆಯ ಅಧಿಕಾರಿಗಳೇ ಸ್ಪಷ್ಟನೆ ಕೊಡುತ್ತಿದ್ದಂತೆ, ಪತ್ರ, ಪತ್ರದಲ್ಲಿ ಸೂಚಿಸಿದ ಅಧಿಕಾರಿಗಳು ಹಾಗೂ ಅವರ ಸಹಿ ಅಷ್ಟೂ ನಕಲಿ ಅನ್ನೋ ವಿಷಯ ಹೊರಬಿದ್ದಿದೆ.

ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಪೈಪೋಟಿಗೆ ಬಿದ್ದಂತೆ ಸರ್ಕಾರವನ್ನು ತರಾಟೆಗೆ ತಗೆದುಕೊಳ್ಳುತ್ತಿದ್ದರೆ ಕೆಲವೊಂದರಲ್ಲಿ ಮಾತ್ರ ಪ್ರತಿಪಕ್ಷಗಳೇ ಪೇಚಿಗೆ ಸಿಲುಕುವಂತಾಗಿದೆ. ಸಚಿವ ಚಲುವರಾಯಸ್ವಾಮಿ ವಿರುದ್ಧ ಬರೆದಿರುವ ದೂರಿನ ಪತ್ರ ಸಹ ಈಗ ಪ್ರತಿಪಕ್ಷಗಳಿಗೇ ಉರುಳಾಗುವ ಸಾಧ್ಯತೆ ದಟ್ಟವಾಗಿದೆ. ಸಧ್ಯ ಈ ಪ್ರಕರಣದಲ್ಲಿ ನೇರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಟ್ವಿಟ್ ಈಗ ರಾಜಕೀಯ ವಲಯದಲ್ಲಿ ದೊಡ್ಡ ಮಟ್ಟಕ್ಕೆ ಸದ್ದು ಮಾಡಿದೆ.

ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ವಿರುದ್ಧ ಹಿಂದಿನ ದಿನ ಲಂಚದ ಆರೋಪ ಕೇಳಿಬಂದಿತ್ತು. ಸಚಿವರು 8 ರಿಂದ 10 ಲಕ್ಷ ರೂಪಾಯಿ ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದಾರೆ ಎಂದು ಜಿಲ್ಲೆಯ ಏಳು ಸಹಾಯಕ ಕೃಷಿ ಅಧಿಕಾರಿಗಳ ಹೆಸರಿನಲ್ಲಿ ಆರೋಪಿಸಿ, ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ದೂರಿನ ಪತ್ರ ಕೂಡಾ ರವಾನೆಯಾಗಿತ್ತು.

ದೂರಿನ ಪ್ರತಿಯ ಗಂಭೀರತೆ ಹೇಗಿತ್ತು ಎಂದರೆ ಮಂಡ್ಯ, ಮಳ್ಳವಳ್ಳಿ, ಕೆ ಆರ್ ಪೇಟೆ, ನಾಗಮಂಗಲ, ಮದ್ದೂರು, ಶ್ರೀರಂಗಪಟ್ಟಣ ಮತ್ತು ಪಾಂಡವರ ಕೃಷಿ ಸಹಾಯಕ ಅಧಿಕಾರಿಗಳು ರಾಜ್ಯಪಾಲರಿಗೆ ಸಲ್ಲಿಸಿದ ದೂರಲ್ಲಿ, ‘ಲಂಚಕ್ಕೆ ಕಡಿವಾಣ ಹಾಕದಿದ್ದರೆ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ’ ದೂರಿನ ಪ್ರತಿಯಲ್ಲಿ ಉಲ್ಲೇಖಿಸಲಾಗಿತ್ತು. ಈ ಬಗ್ಗೆ ಬಿಜೆಪಿ ನಾ ಮುಂದು ತಾ ಮುಂದು ಎಂಬಂತೆ ಟ್ವಿಟ್ ಮೇಲೆ ಟ್ವಿಟ್ ಮಾಡಿ ಸರ್ಕಾರವನ್ನು ತರಾಟೆಗೆ ತಗೆದುಕೊಂಡಿತ್ತು.

ರಾಜ್ಯ ಬಿಜೆಪಿ ಘಟಕ, ‘ಭ್ರಷ್ಟ #ATMSarkara ದ ಮತ್ತೊಂದು ಕರ್ಮಕಾಂಡ ಅಧಿಕಾರಿಗಳಿಂದ ಬಯಲು! ಸ್ವಾಮಿ ಸಿದ್ದರಾಮಯ್ಯ ರವರೇ, ಕೃಷಿ ಸಚಿವ ಚೆಲುವರಾಯಸ್ವಾಮಿ ಅವರ ರಾಜೀನಾಮೆ ಪಡೆಯಲು “ರಾಹು”ಕಾಲಕ್ಕಾಗಿ ಕಾಯುತ್ತಿದ್ದೀರಾ..? ಬಾಯಿ ಬಿಡಿ ಸ್ವಾಮೀ..!’ ಎಂದು ಟ್ವೀಟ್ ಮಾಡಿತ್ತು.

ಆದರೆ ವಿಷಯ ಮಾಧ್ಯಮಗಳಲ್ಲಿ ದೊಡ್ಡ ಮಟ್ಟದ ಸುದ್ದಿ ಆಗ್ತಿದ್ದಂತೆ, ಎಚ್ಚೆತ್ತುಕೊಂಡ ಮಂಡ್ಯ ಜಿಲ್ಲೆಯ ಅಧಿಕಾರಿಗಳು ನಮ್ಮ ಕಡೆಯಿಂದ ಯಾವುದೇ ದೂರು ಅರ್ಜಿ ಹೋಗಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಅಷ್ಟೆ ಅಲ್ಲದೆ ದೂರಿನ ಪತ್ರ, ಪತ್ರದಲ್ಲಿ ಸೂಚಿಸಿದ ಅಧಿಕಾರಿಗಳು ಹಾಗೂ ಅವರ ಸಹಿ ಅಷ್ಟೂ ನಕಲಿ ಅನ್ನೋ ವಿಷಯ ಹೊರಬಿದ್ದಿದೆ.

ಅದಾದ ನಂತರ ಬಿಜೆಪಿ ಪಕ್ಷವನ್ನು ಉಲ್ಲೇಖಿಸಿ ಸಿಎಂ ಸಿದ್ದರಾಮಯ್ಯ ತಮ್ಮ ಜಾಲತಾಣದ ಖಾತೆಯ ಮುಖಾಂತರ ಖಡಕ್ ಸವಾಲನ್ನು ಹಾಕಿದ್ದಾರೆ. ‘ಮಂಡ್ಯ ಜಿಲ್ಲೆಯ ಅಧಿಕಾರಿಗಳು ರಾಜ್ಯಪಾಲರಿಗೆ ದೂರು ನೀಡಿದ್ದಾರೆ ಎಂಬರ್ಥದಲ್ಲಿ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪತ್ರ ನಕಲಿಯಾದುದು ಎಂದು ಬಯಲಾಗಿದೆ. ಅಂತಹ ಅಧಿಕಾರಿಗಳು ಯಾರು ಜಿಲ್ಲೆಯಲ್ಲಿ ಇಲ್ಲ ಎಂದು ಮಂಡ್ಯದ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಸ್ಪಷ್ಟಪಡಿಸಿದ್ದಾರೆ. ಹೀಗಿದ್ದರೂ ಈ ಸಂಬಂಧ ಪರಿಶೀಲನೆ ನಡೆಸಿ, ಅಗತ್ಯ ಕಂಡುಬಂದಲ್ಲಿ ತನಿಖೆ ನಡೆಸುತ್ತೇವೆ. @bjp4karnataka ದ ನಾಯಕರೇ ಇಂತಹ ನಕಲಿ ಪತ್ರವನ್ನಿಟ್ಟುಕೊಂಡು ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿರುವ ನೀವೇ ಇದರ ಸೃಷ್ಟಿಕರ್ತರೋ? ಅಥವಾ ನಿಮ್ಮ “ಬ್ರದರ್ರೋ”?’ ಎನ್ನುವ ಮೂಲಕ ಬಿಜೆಪಿ ಜೊತೆಗೆ ಜೆಡಿಎಸ್ ಪಕ್ಷಕ್ಕೂ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

ಮಂಡ್ಯ ಜಿಲ್ಲೆಯ ಅಧಿಕಾರಿಗಳು ರಾಜ್ಯಪಾಲರಿಗೆ ದೂರು ನೀಡಿದ್ದಾರೆ ಎಂಬರ್ಥದಲ್ಲಿ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪತ್ರ ನಕಲಿಯಾದುದು ಎಂದು ಬಯಲಾಗಿದೆ.

ಅಂತಹ ಅಧಿಕಾರಿಗಳು ಯಾರು ಜಿಲ್ಲೆಯಲ್ಲಿ ಇಲ್ಲ ಎಂದು ಮಂಡ್ಯದ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಸ್ಪಷ್ಟಪಡಿಸಿದ್ದಾರೆ.

ಹೀಗಿದ್ದರೂ ಈ ಸಂಬಂಧ ಪರಿಶೀಲನೆ ನಡೆಸಿ, ಅಗತ್ಯ ಕಂಡುಬಂದಲ್ಲಿ… pic.twitter.com/kPR5TQColK
— Siddaramaiah (@siddaramaiah) August 7, 2023

ಅಷ್ಟೆ ಅಲ್ಲದೆ ಈ ವಿಚಾರಕ್ಕೆ ಸಂಬಂಧಿಸಿದಂತೆ ಮಂಡ್ಯ ಜಂಟಿ ಕೃಷಿ ನಿರ್ದೇಶಕ ಅಶೋಕ್ ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದಾರೆ. ಜೊತೆಗೆ ಮಂಡ್ಯದ ಕಾಂಗ್ರೆಸ್ ನಾಯಕರೆಲ್ಲರೂ ಸೇರಿ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಸರ್ಕಾರದ ಮೇಲೆ ತಪ್ಪು ಅಭಿಪ್ರಾಯ ಹುಟ್ಟುವಂತೆ ಕಾಣದ ಕೈಗಳು ಕೆಲಸ ಮಾಡುತ್ತಿವೆ. ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಯಬೇಕು ಎಂದು ದೂರು ನೀಡಿದ್ದಾರೆ.

ದೂರನ್ನು ಗಂಭೀರವಾಗಿ ಪರಿಗಣಿಸಿದ ಮಂಡ್ಯ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಸಹಾಯಕ ಕೃಷಿ ನಿರ್ದೇಶಕರಿಂದ ರಾಜಭವನಕ್ಕೆ ದೂರು ಪ್ರಕರಣ ಸಂಬಂಧ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಖುದ್ದು ಅಡಿಷನಲ್ ಎಸ್ ಪಿ ತಿಮ್ಮಯ್ಯ ಅವರು ಮಂಡ್ಯ ಕೃಷಿ ಇಲಾಖೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಂಟಿ ಕೃಷಿ ನಿರ್ದೇಶಕರ ಕಚೇರಿ, ಸಹಾಯಕ ನಿರ್ದೇಶಕರ ಕಚೇರಿಗೆ ಭೇಟಿ ನೀಡಿದ್ದು, ಜಂಟಿ ಕೃಷಿ ನಿರ್ದೇಶಕ ಅಶೋಕ್ ಅವರಿಂದ ಪ್ರಾಥಮಿಕ ಮಾಹಿತಿ ಪಡೆದುಕೊಂಡಿದ್ದಾರೆ. ಆ ಬಳಿಕ ಮಂಡ್ಯ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲೂ ಮಾಹಿತಿ ಪಡೆದಿದ್ದಾರೆ.