chilume – Peepal Media

ಬಿಜೆಪಿ ವಾರ್ಡ್‌ ಕಚೇರಿಯಲ್ಲೇ ಚಿಲುಮೆ ತರಬೇತಿ: ಸ್ಫೋಟಕ ಮಾಹಿತಿ ಬಹಿರಂಗ
ಬೆಂಗಳೂರು: ಮತದಾರರ ಮಾಹಿತಿ ಕಳ್ಳತನ ಮತ್ತು ಮಾರಾಟ ಹಗರಣದ ಕಿಂಗ್‌ ಪಿನ್‌ ಆಗಿರುವ ಚಿಲುಮೆ ಸಂಸ್ಥೆ, ಬಿಬಿಎಂಪಿ ನವೆಂಬರ್‌ 2 ರಂದು ಮತದಾರರ ಅಕ್ರಮ ಸರ್ವೆಯನ್ನು ಸ್ಥಗಿತಗೊಳಿಸಲು ಆದೇಶಿಸಿದ್ದರೂ, ನವೆಂಬರ್‌ 17ರವರೆಗೆ ಬಿಜೆಪಿ ವಾರ್ಡ್ ಕಚೇರಿಯೊಂದರಲ್ಲಿ ತನ್ನ ಕಾರ್ಯಕರ್ತರಿಗೆ ತರಬೇತಿ ನಡೆಸಿರುವ ಮಾಹಿತಿ ಬೆಳಕಿಗೆ ಬಂದಿದೆ.

ಈ ಕುರಿತು ವರದಿ ಮಾಡಿರುವ ʻದಿ ನ್ಯೂಸ್‌ ಮಿನಿಟ್‌ʼ ಚಿಲುಮೆ ಸಂಸ್ಥೆ ಬೆಂಗಳೂರಿನಲ್ಲಿ ನಡೆಸಿರುವ ಅಪಾರ ಪ್ರಮಾಣ ಮತದಾರರ ಮಾಹಿತಿ ಕಳ್ಳತನ ಹಗರಣದಲ್ಲಿ ಅಧಿಕಾರದಲ್ಲಿರುವ ಭಾರತೀಯ ಜನತಾ ಪಕ್ಷವು ಪ್ರಮುಖ ಪಾತ್ರ ವಹಿಸಿರುವ ಕುರಿತು ಮತ್ತಷ್ಟು ದಾಖಲಾತಿಗಳು ಲಭ್ಯವಾಗಿರುವುದಾಗಿ ವರದಿ ಮಾಡಿದೆ.

ದಿ ನ್ಯೂಸ್‌ ಮಿನಿಟ್‌ ಸಂಸ್ಥೆ ನಡೆಸಿದ ಕಾರ್ಯಾಚರಣೆ ಸಂದರ್ಭದಲ್ಲಿ ಸಂಸ್ಥೆಗೆ ಸಂಬಂಧಿಸಿದ ವ್ಯಕ್ತಿಯೋರ್ವರು ಚಿಲುಮೆ ಸಂಸ್ಥೆಯನ್ನು ಸಂಪರ್ಕಿಸಿ, ಉದ್ಯೋಗ ನೀಡಲು ಮನವಿ ಮಾಡಿದ್ದಾರೆ. ಈ ಸಂದೃಭದಲ್ಲಿ ಹೊಂಗಸಂದ್ರ ಬಿಜೆಪಿ ವಾರ್ಡ್ ಕಚೇರಿಯಲ್ಲಿ ಚಿಲುಮೆ ಸಂಸ್ಥೆ ಕ್ಷೇತ್ರ ಕಾರ್ಯಕರ್ತರರಿಗೆ ತರಬೇತಿ ನೀಡುತ್ತಿರುವ ಅಂಶ ತಿಳಿದುಬಂದಿದೆ. ತರಬೇತಿಯಲ್ಲಿ ಮತದಾರರ ಮಾಹಿತಿಗಳನ್ನು ಸಂಗ್ರಹಿಸುವುದು, ವಾರ್ಡ್‌ ಗಡಿಗಳನ್ನು ಗುರುತಿಸುವುದರ ಕುರಿತು ತರಬೇತಿ ನೀಡಲಾಗುತ್ತಿತ್ತು ಎಂದು ತಿಳಿದುಬಂದಿದೆ.‌

2020ರ ಸೆಪ್ಟೆಂಬರ್‌ ವರೆಗೆ ಹೊಂಗಸಂದ್ರ ವಾರ್ಡ್‌ ಕಚೇರಿ ಮುಂದೆ  ಆಗಿನ ಬಿಬಿಎಂಪಿ ಸದಸ್ಯೆ ಬಿಜೆಪಿಯ ಭಾರತಿ ರಾಮಚಂದ್ರ ಅವರ ನಾಮಫಲಕ ಅಳವಡಿಸಲಾಗಿತ್ತು. ಈಗ ಬೊಮ್ಮಸಂದ್ರ ಶಾಸಕ ಸತೀಶ್ ರೆಡ್ಡಿಯವರ ಹೆಸರು ಹಾಕಲಾಗಿದ್ದು, ಅವರೂ ಸಹ ಭಾರತೀಯ ಜನತಾ ಪಕ್ಷಕ್ಕೆ ಸೇರಿದವರಾಗಿದ್ದಾರೆ.

ದಿ ನ್ಯೂಸ್‌ ಮಿನಿಟ್‌ ಸಂಸ್ಥೆ ಮತದಾರರ ಮಾಹಿತಿ ಕಳ್ಳತನದ ಕುರಿತು ತನಿಖೆ ನಡೆಸಲು ಆರಂಭಿಸಿದ ಬೆನ್ನಲ್ಲೇ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ನವೆಂಬರ್‌ 2ರಂದು ಆದೇಶವನ್ನು ಹೊರಡಿಸಿ, ಚಿಲುಮೆ ಸಂಸ್ಥೆಗೆ ನೀಡಿದ್ದ ಅನುಮತಿಯನ್ನು ಹಿಂದಕ್ಕೆ ಪಡೆದು, ಕೂಡಲೇ ಕ್ಷೇತ್ರಕಾರ್ಯ ನಿಲ್ಲಿಸುವಂತೆ ಸೂಚಿಸಿತ್ತು. ಆದರೂ ನವೆಂಬರ್‌ 17ರವರೆಗೆ ಚಿಲುಮೆ ಸಂಸ್ಥೆ ತರಬೇತಿ ಮತ್ತು ಕ್ಷೇತ್ರ ಕಾರ್ಯವನ್ನು ನಿಲ್ಲಿಸಿರಲಿಲ್ಲ.

ಮತದಾನ ಜಾಗೃತಿ ಕಾರ್ಯಕ್ಕೆ ಅನುಮತಿ ಪಡೆದಿದ್ದ ಚಿಲುಮೆ ಎಂಬ ಸರ್ಕಾರೇತರ ಸಂಸ್ಥೆ ತನ್ನ ನೂರಾರು ಕಾರ್ಯಕರ್ತರನ್ನು ತೊಡಗಿಸಿ, ನಗರದ ಸಾವಿರಾರು ಮತದಾರರ ಅತಿಸೂಕ್ಷ್ಮ ಮಾಹಿತಿಗಳನ್ನು ಕಲೆ ಹಾಕಿರುವುದು ರಾಜಕೀಯ ವಲಯದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ. ಈಗಾಗಲೇ ಚಿಲುಮೆ ಸಂಸ್ಥೆ ಮತ್ತು ಬಿಜೆಪಿಯ ಮಾಜಿ ಶಾಸಕ ನಂದೀಶ್‌ ರೆಡ್ಡಿ ನಡುವೆ ಹಣಕಾಸಿನ ವ್ಯವಹಾರ ನಡೆದಿರುವುದು ಬಹಿರಂಗವಾಗಿದೆ.

ಚಿಲುಮೆ ಸಂಸ್ಥೆಗೆ ನೀಡಿದ್ದ ಅನುಮತಿ ರದ್ದಾಗಿದ್ದರೂ ಅದು ಕಾರ್ಯಕರ್ತರನ್ನು ನೇಮಕ ಮಾಡಿಕೊಳ್ಳುತ್ತಿರುವ ಕುರಿತು ಮಾಹಿತಿ ಪಡೆದ ದಿ ನ್ಯೂಸ್‌ ಮಿನಿಟ್‌ ಸಂಸ್ಥೆ ವರದಿಗಾರರು ನವೆಂಬರ್‌ 12ರಂದು ಮಲ್ಲೇಶ್ವರಂನಲ್ಲಿರುವ ಚಿಲುಮೆಯ ಕಚೇರಿಗೆ ಉದ್ಯೋಗಾಕಾಂಕ್ಷಿಯ ರೂಪದಲ್ಲಿ ತೆರಳಿದ್ದರು. ಈ ಸಂದರ್ಭದಲ್ಲಿ ವರದಿಗಾರರನ್ನು ಸಂದರ್ಶಿಸಿದ್ದ ಮಹಿಳೆಯೊಬ್ಬರು, ನೀವು ಉದ್ಯೋಗಕ್ಕೆ ನೇಮಕವಾಗಿದ್ದೀರಿ ಎಂದು ತಿಳಿಸಿದ್ದರು. ʻʻನಾನು ಬಿಕಾಂ ಡ್ರಾಪ್‌ ಔಟ್‌ ಆಗಿದ್ದೇನೆ ಎಂದು ಹೇಳಿದಾಗ ಅವರು ನಿನ್ನ ಬಳಿ ಒಂದು ಸ್ಮಾರ್ಟ್‌ ಫೋನ್‌, ಬೈಕ್‌ ಮತ್ತು ಡ್ರೈವಿಂಗ್‌ ಲೈಸೆನ್ಸ್‌ ಇದ್ದರೆ ಸಾಕು.ʼʼ ಎಂದು ಆ ಮಹಿಳೆ ಹೇಳಿದ್ದಾಗಿ ವರದಿಗಾರರು ದಾಖಲಿಸಿದ್ದಾರೆ. ಈ ಸಂದರ್ಭದಲ್ಲಿ 23,000 ರೂ ಸಂಬಳ, 2000 ರೂ ಪೆಟ್ರೋಲ್‌ ಭತ್ಯೆ ಹಾಗು ವಿಶೇಷ ಭತ್ಯೆ ನೀಡಲಾಗುವುದು ಎಂದು ತಿಳಿಸಲಾಗಿದೆ.

ಇದಾದ ನಂತರ ದಿ ನ್ಯೂಸ್‌ ಮಿನಿಟ್‌ ವರದಿಗಾರರಿಗೆ ನವೆಂಬರ್‌ 16ರಂದು ಅದೇ ಮಹಿಳೆ ಕರೆ ಮಾಡಿ ಮಾತನಾಡಿದ್ದು, ಹೊಸ ಬ್ಯಾಚ್‌ ತರಬೇತಿ ಆರಂಭವಾಗುತ್ತಿದ್ದು, ಬಂದು ಕೆಲಸಕ್ಕೆ ಹಾಜರಾಗುವಂತೆ ಹೇಳಿದ್ದಾರೆ. ನೀವು ಸರ್ವೆ ಕೆಲಸದಲ್ಲಿ ತೊಡಗಬೇಕು ಎಂದು ಅವರು ಹೇಳಿದ್ದಲ್ಲದೆ ದಕ್ಷಿಣ ಬೆಂಗಳೂರಿನ ಹೊಂಗಸಂದ್ರ ಬಡಾವಣೆಯ ಲೊಕೇಷನ್‌ ಕಳುಹಿಸಿಕೊಟ್ಟಿದ್ದಾರೆ. ಸದರಿ ಲೊಕೇಷನ್‌ಗೆ ತೆರಳಿದಾಗ ಅದು ಬಿಜೆಪಿ ಶಾಸಕ ಸತೀಶ್‌ ರೆಡ್ಡಿಯವರ ನಾಮಫಲಕವಿದ್ದ ಬಿಜೆಪಿ ವಾರ್ಡ್‌ ಕಚೇರಿ ಎಂಬುದು ಗೊತ್ತಾಗಿದೆ. ಈ ಸಂದರ್ಭದಲ್ಲಿ ದಿ ನ್ಯೂಸ್‌ ಮಿನಿಟ್‌ ವರದಿಗಾರರು ತರಬೇತಿಯ ಚಿತ್ರಗಳನ್ನೂ ತೆಗೆದುಕೊಂಡಿದ್ದಾರೆ.

ನವೆಂಬರ್‌ 17ರಂದು ಬಿಜೆಪಿ ವಾರ್ಡ್‌ ಕಚೇರಿಯಲ್ಲಿ ನಡೆದ 30 ಜನರ ಹೊಸ ಜನರ ಬ್ಯಾಚ್‌ಗಳಿಗೆ ನಕ್ಷೆ ತಯಾರಿಕೆಯಲ್ಲಿ ತರಬೇತಿ ಕೊಡಲಾಗುತ್ತಿತ್ತು. ತರಬೇತಿಯಲ್ಲಿ ʼಇಂಟರ್‌ನೆಟ್‌ನಿಂದ ನೆರೆಹೊರೆಯವರ ಮಾಹಿತಿಗಳನ್ನು ಹೇಗೆ ಡೌನ್‌ಲೋಡ್‌ ಮಾಡಬೇಕು ಅವುಗಳನ್ನು ಹೇಗೆ ಭರ್ತಿ ಮಾಡುವುದು ಎಂದು ಹೇಳಿಕೊಡಲಾಯಿತು. ಪ್ರತಿಯೊಂದು ರೀತಿಯ ಆಸ್ತಿಗೂ ಅದು ಖಾಲಿ ಇದೆಯೇ ಅಥವಾ ನಿರ್ಮಾಣ ಹಂತದಲ್ಲಿದೆಯೇ, ಮಾಲೀಕರು ಅಥವಾ ಬಾಡಿಗೆದಾರರು ಆಕ್ರಮಿಸಿಕೊಂಡಿದ್ದಾರೆಯೇ ಎಂಬುದರ ಆಧಾರದ ಕುರಿತು ಕೋಡ್‌ಗಳನ್ನು ನೀಡಲಾಗಿದೆʼ ಎಂದು ತಿಳಿದು ಬಂದಿದೆ.

ಚಿಲುಮೆ ಅಕ್ರಮ: ತನಿಖೆ ಕೋರಿ ಚುನಾವಣಾ ಆಯುಕ್ತರಿಗೆ ಎಎಪಿ ಮನವಿ
ಬೆಂಗಳೂರು: ಮತದಾರರ ಮಾಹಿತಿಯನ್ನು ಚಿಲುಮೆ ಎಂಬ ಎನ್‌ಜಿಒ ದುರ್ಬಳಕೆ ಮಾಡಿಕೊಂಡಿರುವುದು ಹಾಗೂ ಮತದಾರರ ಪಟ್ಟಿಗೆ ಅಕ್ರಮವಾಗಿ ತಿದ್ದುಪಡಿ ತಂದಿರುವುದಕ್ಕೆ ಸಂಬಂಧಿಸಿ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ನೇತೃತ್ವದ ತನಿಖೆಯಾಗಬೇಕೆಂದು ಆಮ್‌ ಆದ್ಮಿ ಪಾರ್ಟಿಯು ರಾಜ್ಯ ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ.

ಎಎಪಿ ಮುಖಂಡರು ಹಾಗೂ ಸುಪ್ರೀಂಕೋರ್ಟ್‌ ಖ್ಯಾತ ವಕೀಲರಾದ ಬ್ರಿಜೇಶ್‌ ಕಾಳಪ್ಪ ನೇತೃತ್ವದ ನಿಯೋಗವು ರಾಜ್ಯ ಚುನಾವಣಾ ಆಯುಕ್ತರಿಗೆ ಪತ್ರ ಸಲ್ಲಿಸಿದ್ದು, “ಬೆಂಗಳೂರಿನ ಮತದಾರರ ಪಟ್ಟಿಯಲ್ಲಿದ್ದ ಅನೇಕ ಹೆಸರು ಅಳಿಸಿಹೋಗಿರುವುದರ ಹಿಂದೆ ಚಿಲುಮೆ ಎಂಬ ಎನ್‌ಜಿಒ ಹೆಸರು ಕೇಳಿಬಂದಿದೆ. ಖಾಸಗಿಯವರೊಂದಿಗೆ ಹಂಚಿಕೊಳ್ಳಬಾರದ ಮಾಹಿತಿಗಳನ್ನು ಚಿಲುಮೆ ಸಂಸ್ಥೆಗೆ ನೀಡಲಾಗಿದೆ ಎಂಬ ಆರೋಪವಿದೆ. ಇದು ಅತ್ಯಂತ ಗಂಭೀರ ಆರೋಪವಾಗಿದ್ದು, ಸೂಕ್ತ ತನಿಖೆ ನಡೆದು ಸತ್ಯಾಂಶ ಹೊರಬರಬೇಕಿದೆ. ಹಗರಣದಲ್ಲಿ ರಾಜ್ಯ ಸರ್ಕಾರದ ಸಿಎಂ ಹಾಗೂ ಸಚಿವರ ಪಾತ್ರವಿರುವ ಕುರಿತು ಆರೋಪ ಕೇಳಿಬರುತ್ತಿರುವುದರಿಂದ, ಅವರ ಆದೇಶದಂತೆ ಕಾರ್ಯನಿರ್ವಹಿಸುವ ಐಎಎಸ್‌ ಅಧಿಕಾರಿಯೇ ತನಿಖೆ ಮುಂದುವರಿಸುವುದು ಸರಿಯಲ್ಲ. ಈ ಪ್ರಕರಣದ ತನಿಖೆಯನ್ನು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯವರ ನೇತೃತ್ವಕ್ಕೆ ವಹಿಸಬೇಕು” ಎಂದು ಪತ್ರದಲ್ಲಿ ಆಗ್ರಹಿಸಿದ್ದಾರೆ.

“ಪ್ರಜಾಪ್ರಭುತ್ವವು ಚುನಾವಣೆಯ ಮೇಲೆ ನಿಂತಿದೆ. ಭ್ರಷ್ಟ ರಾಜಕಾರಣಿಗಳು ಚುನಾವಣೆಗೆ ಸಂಬಂಧಿಸಿ ವ್ಯಾಪಕ ಅಕ್ರಮಕ್ಕೆ ಮುಂದಾಗಿ, ಪ್ರಜಾಪ್ರಭುತ್ವದ ಮೂಲ ಆಶಯವನ್ನೇ ಬುಡಮೇಲು ಮಾಡುತ್ತಿರುವುದು ಆಘಾತಕಾರಿ. ಮತದಾರರ ಪಟ್ಟಿಯ ಪಾವಿತ್ರ್ಯತೆಯನ್ನು ಎತ್ತಿ ಹಿಡಿಯಬೇಕಾದ ಜವಾಬ್ದಾರಿ ಚುನಾವಣಾ ಆಯೋಗದ ಮೇಲಿದೆ. ರಾಜಕಾರಣಿಗಳಿಗೆ ಲಾಭ ಮಾಡಿಕೊಡಲು ಸರ್ಕಾರೇತರ ಸಂಸ್ಥೆಯು ಮತದಾರರ ಪಟ್ಟಿಗೆ ಮಾಡಿದ ಅಕ್ರಮ ತಿದ್ದುಪಡಿಗಳನ್ನು ಶೀಘ್ರವೇ ಸರಿಪಡಿಸಬೇಕು” ಎಂದು ಬ್ರಿಜೇಶ್‌ ಕಾಳಪ್ಪ ಹೇಳಿದರು.

ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಉಪಾಧ್ಯಕ್ಷರಾದ ವಿಜಯ್‌ ಶರ್ಮಾ ಮಾತನಾಡಿ, “ಪ್ರಾಮಾಣಿಕವಾಗಿ ಚುನಾವಣೆ ಎದುರಿಸಲು ತಾಕತ್ತಿಲ್ಲದ ರಾಜಕಾರಣಿಗಳು ಎನ್‌ಜಿಒಗಳ ಮೂಲಕ ಅಕ್ರಮ ನಡೆಸುತ್ತಿದ್ದಾರೆ. ಕಳೆದ ಚುನಾವಣೆಯಲ್ಲಿ ಜನತೆ ನೀಡಿದ ಅಧಿಕಾರವನ್ನು ಸರಿಯಾಗಿ ಬಳಸಿಕೊಂಡು ಉತ್ತಮ ಆಡಳಿತ ನೀಡಿದ್ದರೆ, ಈಗ ಹೀಗೆ ಅಕ್ರಮ ನಡೆಸುವ ಪ್ರಮೇಯವೇ ಬರುತ್ತಿರಲಿಲ್ಲ. ಹಗರಣದ ಸೂಕ್ತ ತನಿಖೆ ನಡೆದು, ಎಲ್ಲ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು” ಎಂದು ಹೇಳಿದರು.

ಆಮ್‌ ಆದ್ಮಿ ಪಾರ್ಟಿಯ ಮುಖಂಡರಾದ ಕೆ.ಮಥಾಯಿ, ಮೋಹನ್‌ ದಾಸರಿ, ಜಗದೀಶ್‌ ವಿ ಸದಂ, ಸುರೇಶ್‌ ರಾಥೋಡ್‌, ಚನ್ನಪ್ಪಗೌಡ ನೆಲ್ಲೂರು, ವೇಣುಗೋಪಾಲ್ ಮತ್ತಿತರ ನಾಯಕರು ಭಾಗವಹಿಸಿದ್ದರು.

ಮತದಾರರ ಪಟ್ಟಿ ಪರಿಷ್ಕರಣೆಯು ಕಾಂತಾರದ ಗುಳಿಗ-ಪಂಜುರ್ಲಿಯ ದಂತಕತೆ ಅಲ್ಲ : ಸಿದ್ದರಾಮಯ್ಯ
ಬೆಂಗಳೂರು: ಉಚಿತವಾಗಿ ಮತದಾರರ ಪಟ್ಟಿ ಪರಿಷ್ಕರಣೆ ನಡೆಸಿರುವ ಚಿಲುಮೆ ಸಂಸ್ಥೆಯ ಹಿನ್ನೆಲೆ ಏನು? ಅದರ ಮಾಲೀಕರು ಯಾರು? ಹಣಕಾಸು ಸಾಮರ್ಥ್ಯ ಏನು? ಉದ್ಯೋಗಿಗಳ ಸಂಖ್ಯೆ ಎಷ್ಟು? ಅದರ ಹಣಕಾಸಿನ ಮೂಲ ಯಾವುದು? ಈ ಬಗ್ಗೆ ತನಿಖೆಯಾಗಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ವಿಪಕ್ಷ ನಾಯಕ ಸಿದ್ಧರಾಮಯ್ಯ ಶುಕ್ರವಾರದಂದು ಸರಣಿ ಟ್ವೀಟ್‌ ಮಾಡಿ ಕಿಡಿಕಾರಿದ್ದಾರೆ.

ಚಿಲುಮೆ ಸಂಸ್ಥೆಯು ಸುಮಾರು 7-8 ಸಾವಿರ ಸಿಬ್ಬಂದಿ ಮನೆ, ಮನೆಗೆ ಹೋಗಿ ಮತದಾರರ ಮಾಹಿತಿ ಕಲೆ ಹಾಕಿದ್ದು, ಕೆಲವರು ತಮ್ಮ ಹೆಸರನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಹೇಳಿದ್ದಾರೆ. ಈಗಾಗಲೇ ಪ್ರಕರಣದ ಕುರಿತು ದೂರು ದಾಖಲಾಗಿದ್ದು, ಚಿಲುಮೆ ಸಂಸ್ಥೆಗೆ ನೀಡಿದ್ದ ಅನುಮತಿ ಆದೇಶವನ್ನು ಗೌರವ್ ಗುಪ್ತಾ ಅವರು ಏಕಾಏಕಿ ಹಿಂಪಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ಸಿದ್ಧರಾಮಯ್ಯ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಸಿದ್ಧರಾಮಯ್ಯ, ʼಆಪರೇಷನ್ ವೋಟರ್ ಹಗರಣವನ್ನು ಹಾಸ್ಯಾಸ್ಪದ ಎಂದು ತಳ್ಳಿಹಾಕಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಈ ಹಗರಣದ ರೂವಾರಿಗಳನ್ನು ರಕ್ಷಿಸಲು, ಸಂಸ್ಥೆಯ ಒಬ್ಬ ಏಜೆಂಟಿನ ವಿರುದ್ಧ ಪೊಲೀಸರಿಂದ ಎಫ್ಐಆರ್ ಹಾಕಿಸಿ ತಮ್ಮ ಸರ್ಕಾರದ ಕೆಲಸ ಎಷ್ಟು ಹಾಸ್ಯಾಸ್ಪದ ಎನ್ನುವುದನ್ನು ಸಾಬೀತುಪಡಿಸಿದ್ದಾರೆʼ ಎಂದು ಟೀಕಿಸಿದ್ಧಾರೆ.

ʼಮತದಾರರ ಪಟ್ಟಿ ಪರಿಷ್ಕರಣೆಯ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬೊಮ್ಮಾಯಿ ಅವರ ವಿರುದ್ಧವೇ ನಾವು ದೂರು ನೀಡಿದ್ದೆವು. ಮುಖ್ಯಮಂತ್ರಿಗಳು 20,000 ರೂಪಾಯಿ ಸಂಬಳದ ಬಡಪಾಯಿ ಏಜೆಂಟ್‌ನನ್ನು ಬಲಿಪಶು ಮಾಡಿ ತಾವು ಪಾರಾಗುವ ಸಂಚು ನಡೆಸಿದ್ದಾರೆʼ ಎಂದು ಹೇಳಿದ್ದಾರೆ.

ʼಮುಖ್ಯಮಂತ್ರಿ ಬೊಮ್ಮಾಯಿಯವರು ತಮ್ಮನ್ನು ರಕ್ಷಿಸಿಕೊಳ್ಳಲು ಆಪರೇಷನ್ ವೋಟರ್ ಹಗರಣವನ್ನು ಜಾತಿಗಣತಿಗೆ ಹೋಲಿಸಿದ್ದಾರೆ. ಒಂದು ಸಂಸ್ಥೆಯ ಹಿನ್ನೆಲೆಯನ್ನೂ ಪರಿಶೀಲಿಸದೆ ಮತದಾರರ ಪಟ್ಟಿ ಪರಿಷ್ಕರಣೆಗೆ ನೀಡಿರುವ ಅನುಮತಿಗೂ, ಸುಪ್ರೀಂಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರ ನಡೆಸಿರುವ ಜಾತಿಗಣತಿಗೂ ಏನು ಸ್ವಾಮಿ ಸಂಬಂಧ? ಉಚಿತವಾಗಿ ಮತದಾರರ ಪಟ್ಟಿ ಪರಿಷ್ಕರಣೆ ನಡೆಸಿರುವ ಚಿಲುಮೆ ಸಂಸ್ಥೆಯ ಹಿನ್ನೆಲೆ ಏನು? ಅದರ ಮಾಲೀಕರು ಯಾರು? ಹಣಕಾಸು ಸಾಮರ್ಥ್ಯ ಏನು? ಉದ್ಯೋಗಿಗಳ ಸಂಖ್ಯೆ ಎಷ್ಟು? ಅದರ ಹಣಕಾಸಿನ ಮೂಲ ಯಾವುದು? ಈ ಬಗ್ಗೆ ತನಿಖೆಯಾಗಲಿ ಎಂದು ಪ್ರಶ್ನೆಗಳ ಸುರಿಮಳೆ ಸುರಿಸಿದ್ದಾರೆ.

ʼದೂರು ಬಂದ ಕಾರಣಕ್ಕೆ ಚಿಲುಮೆಗೆ ನೀಡಿರುವ ಅನುಮತಿಯನ್ನು ಬಿಬಿಎಂಪಿ ರದ್ದುಪಡಿಸಿರುವುದನ್ನು ಸ್ವಾಗತಿಸುತ್ತೇನೆ. ಮಾಡಿರುವ ಅಪರಾಧಕ್ಕೆ ಅನುಮತಿ ರದ್ದತಿ ಶಿಕ್ಷೆ ಅಲ್ಲವಲ್ಲಾ? ಗುತ್ತಿಗೆಯನ್ನು ರದ್ದುಗೊಳಿಸುವ ಮೂಲಕ ಆಗಿರುವ ಅಪರಾಧವನ್ನು ಇಲಾಖೆಯೇ ಒಪ್ಪಿಕೊಂಡಂತಾಗಿಲ್ಲವೇ?ʼ ಎಂದು ಪ್ರಶ್ನಿಸಿದ್ದಾರೆ.

ಮತದಾರರ ಪಟ್ಟಿ ಪರಿಷ್ಕರಣೆ ಎನ್ನುವುದು ಕೆಜಿಎಫ್ ಚಿತ್ರದ ರಾಕಿಭಾಯ್ ನ ಸೇಡಿನ ಕತೆಯೂ ಅಲ್ಲ, ಕಾಂತಾರ ಚಿತ್ರದ ಗುಳಿಗ-ಪಂಜುರ್ಲಿಯ ದಂತಕತೆಯೂ ಅಲ್ಲ. ಯಾರು ಯಾವ ಕೆಲಸ ಮಾಡಬೇಕೋ, ಅದನ್ನೇ ಮಾಡಬೇಕು. 8/8#OperationVoter
— Siddaramaiah (@siddaramaiah) November 18, 2022

ʼಸಮಾಜ ಸೇವೆಗೆ ಬೇಕಾದಷ್ಟು ಅವಕಾಶ ಇರುವಾಗ ಮತದಾರರ ಪಟ್ಟಿ ಪರಿಷ್ಕರಣೆಯನ್ನು ಉಚಿತವಾಗಿ ಮಾಡುತ್ತೇವೆ ಎಂದು ಸಂಸ್ಥೆ ಅರ್ಜಿ ನೀಡಿದಾಗಲೇ ಅದರ ಹಿಂದಿನ ದುರುದ್ದೇಶದ ಅರಿವು ಬಿಬಿಎಂಪಿಗೆ ಆಗಬೇಕಿತ್ತು. ಆಗಿಲ್ಲ ಎಂದರೆ ಬಿಬಿಎಂಪಿ ಹಗರಣದದಲ್ಲಿ ಭಾಗಿಯಾಗಿದೆ ಎಂದು ಅರ್ಥ ಅಲ್ಲವೇ?ʼ ಎಂದು ಕಿಡಿ ಬಿಬಿಎಂಪಿ ವಿರುದ್ಧ ಕಿಡಿಕಾರಿದ್ದಾರೆ.

ʼಮತದಾರರ ಪಟ್ಟಿ ಪರಿಷ್ಕರಣೆಗಾಗಿ ಚಿಲುಮೆ ಸಂಸ್ಥೆಗೆ ನೀಡಿರುವ ಅನುಮತಿಯನ್ನು ರದ್ದುಪಡಿಸಿದ್ದೀರಿ ಸರಿ, ಆದರೆ ಆ ಸಂಸ್ಥೆ ಅಕ್ರಮವಾಗಿ ಸಂಗ್ರಹಿಸಿರುವ ಮಾಹಿತಿ ಏನಾಯಿತು? ಆ ಸಂಸ್ಥೆ ಬಿಬಿಎಂಪಿಗೆ ಸಲ್ಲಿಸಿದೆಯಾ? ಇಲ್ಲವೇ ಯಾವುದಾದರೂ ರಾಜಕೀಯ ಪಕ್ಷಕ್ಕೆ ಮಾರಿದೆಯಾ?ʼ ಎಂದು ಕೇಳಿದ್ದಾರೆ.

ʼಮತದಾರರ ಪಟ್ಟಿ ಪರಿಷ್ಕರಣೆ ಎನ್ನುವುದು ಕೆಜಿಎಫ್ ಚಿತ್ರದ ರಾಕಿಭಾಯ್ ನ ಸೇಡಿನ ಕತೆಯೂ ಅಲ್ಲ, ಕಾಂತಾರ ಚಿತ್ರದ ಗುಳಿಗ-ಪಂಜುರ್ಲಿಯ ದಂತಕತೆಯೂ ಅಲ್ಲ. ಯಾರು ಯಾವ ಕೆಲಸ ಮಾಡಬೇಕೋ, ಅದನ್ನೇ ಮಾಡಬೇಕುʼ ಎಂದು ಉದಾಹರಣೆಯ ಮುಖಾಂತರ ವ್ಯಂಗ್ಯ ಮಾಡಿದ್ದಾರೆ.

ಮತದಾರರ ಮೂಲಭೂತ ಹಕ್ಕನ್ನು ಕಸಿಯಲಾಗಿದೆ : ಡಿಕೆಶಿ
ಬೆಂಗಳೂರು: ಚಿಲುಮೆ ಸಂಸ್ಥೆಗೆ ನೀಡಿದ್ದ ಅನುಮತಿ ಆದೇಶವನ್ನು ಗೌರವ್ ಗುಪ್ತಾ ಅವರು ಏಕಾಏಕಿ ಹಿಂಪಡೆದಿದ್ದು, ಈ ಕುರಿತು ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ನಮ್ಮ ಅವಧಿಯಲ್ಲಿ ಚಿಲುಮೆ ಸಂಸ್ಥೆ ಮೂಲಕ ಮತದಾರರ ಮಾಹಿತಿ ದುರ್ಬಳಕೆ ಮಾಡಿದ್ದರೆ ನಮ್ಮನ್ನು ಬಂಧಿಸಲಿ ಎಂದು ಹೇಳಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಮನೆಗಳಿಗೆ ಭೇಟಿ ನೀಡಿ ಆನ್‌ಲೈನ್‌ ಅಥವಾ VHA(ವೋಟರ್‌ ಹೆಲ್ಪ್‌ ಲೈನ್)‌ ಮುಖಾಂತರ ಅರ್ಜಿಗಳನ್ನು ಸಲ್ಲಿಸುವ ಸಲುವಾಗಿ ಅರಿವು ಕಾರ್ಯಕ್ರಮವನ್ನು ನಡೆಸಲು ಚಿಲುಮೆ ಶೈಕ್ಷಣಿಕ ಸಾಂಸ್ಕೃತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಗೆ ಅನುಮತಿ ನೀಡಿತ್ತು. ಆದರೆ ಆದೇಶವನ್ನು ಗೌರವ್ ಗುಪ್ತಾ ಅವರು ಏಕಾಏಕಿ ಹಿಂಪಡೆದಿದ್ದಾರೆ. ಈ ಕುರಿತು ಡಿ .ಕೆ ಶಿವಕುಮಾರ್ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ.

ʼನಮ್ಮ ಅವಧಿಯಲ್ಲಿ ಚಿಲುಮೆ ಸಂಸ್ಥೆ ಮೂಲಕ ಮತದಾರರ ಮಾಹಿತಿ ದುರ್ಬಳಕೆ ಮಾಡಿದ್ದರೆ ನಮ್ಮನ್ನು ಬಂಧಿಸಲಿ. ನಮ್ಮ ಅವಧಿಯಲ್ಲಿ ಯಾವ ಅಧಿಕಾರಿ, ಮಂತ್ರಿಗಳು ಅದಕ್ಕೆ ಅವಕಾಶ ನೀಡಿದ್ದರೋ ನನಗೆ ಗೊತ್ತಿಲ್ಲ. ಇದು ಗಂಭೀರ ಅಪರಾಧವಾಗಿದೆ. ಚುನಾವಣಾ ಆಯೋಗವು ಈ ವಿಚಾರವನ್ನು ಡಿವಿಸಿಗೆ (ವಿಭಾಗೀಯ ಅಧಿಕಾರಿ) ನೀಡಿದ್ದು, ಇದು ಡಿವಿಸಿಯಿಂದ ತನಿಖೆಯಾಗುವ ವಿಚಾರವಲ್ಲ. ನಾಳೆ ನಾವು ರಾಜ್ಯ ಚುನಾವಣಾ ಆಯೋಗದ ಅಧಿಕಾರಿಗಳನ್ನು ಭೇಟಿ ಮಾಡಲು ಸಮಯ ಕೇಳಿದ್ದೇವೆʼ ಎಂದು ತಿಳಿಸಿದ್ದಾರೆ.

ಚಿಲುಮೆ ಸಂಸ್ಥೆಗೆ ನೀಡಿದ್ದ ಅನುಮತಿ ಆದೇಶವನ್ನು ಗೌರವ್ ಗುಪ್ತಾ ಅವರು ಏಕಾಏಕಿ ಹಿಂಪಡೆದಿದ್ದಾರೆ. ಆದರೆ ಈಗಾಗಲೇ ಈ ಸಂಸ್ಥೆಯ ಸುಮಾರು 7-8 ಸಾವಿರ ಸಿಬ್ಬಂದಿ ಮನೆ, ಮನೆಗೆ ಹೋಗಿ ಮತದಾರರ ಮಾಹಿತಿ ಕಲೆ ಹಾಕಿದ್ದಾರೆ. ಮತ್ತೊಂದೆಡೆ ಕೆಲವರು ತಮ್ಮ ಹೆಸರನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಹೇಳುತ್ತಿರುವ ವರದಿಗಳನ್ನು ಮಾಧ್ಯಮಗಳಲ್ಲಿ ನೋಡಿದೆ. ಈ ಸಂಸ್ಥೆಯ ಕಾರ್ಯವ್ಯಾಪ್ತಿ ಏನಿದೆ ಎಂದು ನಮ್ಮ ಬಳಿ ಮಾಹಿತಿ ಇದೆ. ಈ ಬಗ್ಗೆ ಅಲ್ಲಿ ಕೆಲಸ ಮಾಡುತ್ತಿದ್ದವರಿಂದಲೇ ಮಾಹಿತಿ ಕಲೆ ಹಾಕಿದ್ದೇನೆ. ಅವರು ಜನ ಪ್ರತಿನಿಧಿಗಳ ಬಳಿ ಹೋಗಿ ನಾವು ನಿಮ್ಮನ್ನು ಗೆಲ್ಲಿಸುತ್ತೇವೆ ಎಂದು ಪ್ರತಿ ವಾರ್ಡ್ ನಲ್ಲಿ ಕಾರ್ಪೊರೇಟರ್ ಬಳಿ 1 ಕೋಟಿ ಹಣ ಕೇಳಿದ ಬಗ್ಗೆ ಹಲವರು ಮಾಹಿತಿ ನೀಡಿದ್ದಾರೆ. ಈ ವಿಚಾರದಲ್ಲಿ ನಾವು ಕೂಡ ನಮ್ಮದೇ ಆದ ತನಿಖೆ ಮಾಡಿದ್ದೇವೆ ಎಂದು ಮಾತನಾಡಿದ್ದಾರೆ.

ಮುಖ್ಯಮಂತ್ರಿಗಳು ಈ ವಿಚಾರದಲ್ಲಿ ಉಡಾಫೆಯಾಗಿ ಮಾತನಾಡಬಾರದು. ಮುಖ್ಯಮಂತ್ರಿಗಳು ಬೆಂಗಳೂರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದು, ಅವರು ಈ ವಿಚಾರದಲ್ಲಿ ಹೆಚ್ಚಿನ ಜವಾಬ್ದಾರಿ ಹೊಂದಿರಬೇಕು. ಯಾವ ಕ್ಷೇತ್ರಗಳಲ್ಲಿ ಎಷ್ಟು ವಾರ್ಡ್ ಗಳಲ್ಲಿ ಮಾಹಿತಿ ಕಲೆ ಹಾಕಿದ್ದಾರೆ, ಖಾಲಿ ಮನೆ, ನಿವೇಶನಗಳನ್ನು ಗುರುತಿಸಿ ಅವುಗಳ ದುರ್ಬಳಕೆಗೆ ಹೇಗೆ ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ಗೊತ್ತಿದೆ. ರಾಜ್ಯ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಿ, ಈ ಸಂಸ್ಥೆಗೆ ಅನುಮತಿ ಆದೇಶ ನೀಡಿದ್ದಾರೆ. ಆದರೂ ಆಯೋಗದವರು ಯಾಕೆ ಕ್ರಮ ಕೈಗೊಂಡಿಲ್ಲ? ಎಂದು  ಪ್ರಶ್ನೆ ಮಾಡಿದ್ದಾರೆ.

ನಾವು ಪೊಲೀಸ್ ಕಮಿಷನರ್ ಅವರಿಗೆ ಕೊಟ್ಟಿರುವ ದೂರಿನ ಮಾಹಿತಿಯನ್ನು ಇ ಮೇಲ್ ಮೂಲಕ ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದೇವೆ. ಶನಿವಾರ ಮಧ್ಯಾಹ್ನ ಚುನಾವಣಾ ಆಯೋಗದ ಅಧಿಕಾರಿಗಳನ್ನು ನಾನು, ಸಿದ್ದರಾಮಯ್ಯ ಹಾಗೂ ಇತರ ನಾಯಕರು ಭೇಟಿ ಮಾಡಲಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

ಈ ಸಂಸ್ಥೆಗಳ ನಿರ್ದೇಶಕ ರವಿಕುಮಾರ್ ಬಿಟ್ಟು ಬಿಎಲ್ಒ ಆಗಿ ಸಮೀಕ್ಷೆ ಮಾಡಿದ ಸಿಬ್ಬಂದಿ ಮೇಲೆ ಎಫ್ಐಆರ್ ದಾಖಲಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಡಿಕೆಶಿ, ‘ಮುಖ್ಯಮಂತ್ರಿಗಳು ಹಾಗೂ ಮಂತ್ರಿಗಳು ಅವರಿಗೆ ರಕ್ಷಣೆ ನೀಡುತ್ತಿದ್ದಾರೆ. ಇದನ್ನೇ ನಾವು ಹೇಳುತ್ತಿರುವುದು. ಆ ಗುರುತಿನ ಚೀಟಿ ಮಾಡಿದವರು ಯಾರು? ಈ ಗುರುತಿನ ಚೀಟಿ ವಿತರಣೆ ಮಾಡಿರುವ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಅಧಿಕಾರಗಳ ವಿರುದ್ಧವೂ ಎಫ್ಐಆರ್ ಆಗಬೇಕು. ಸರ್ಕಾರಿ ಹುದ್ದೆಯನ್ನು ಬೇರೆಯವರಿಗೆ ನೀಡಲು ಸಾಧ್ಯವಿಲ್ಲ. ನಾನು ಮುಖ್ಯಮಂತ್ರಿ ಹಾಗೂ ಸರ್ಕಾರಿ ಅಧಿಕಾರಿ ಎಂದು ಹೇಳಿಕೊಳ್ಳಲು ಸಾಧ್ಯವಿಲ್ಲ. ನಮ್ಮ ಸರ್ಕಾರದ ಅವಧಿಯಲ್ಲಿ ನಾನು, ಅಥವಾ ಕುಮಾರಸ್ವಾಮಿ ಅಥವಾ ಬೆಂಗಳೂರಿನ ಯಾವುದೇ ಸಚಿವರು, ಶಾಸಕರು ಈ ಕೆಲಸ ಮಾಡಿದ್ದರೆ ನಮ್ಮ ವಿರುದ್ಧವೂ ಕ್ರಮ ಕೈಗೊಳ್ಳಲಿ. ಈ ವಿಚಾರದಿಂದಲೂ ದೇಶದ ಮುಂದೆ ರಾಜ್ಯದ ಮಾನ ಹರಾಜಾಗುತ್ತಿದೆ. ಮುಖ್ಯಮಂತ್ರಿಗಳು ಇದರ ಗಂಭೀರತೆ ಅರಿಯಬೇಕು ಎಂದು ತಿಳಿಸಿದ್ದಾರೆ.

ಮತದಾನದ ಹಕ್ಕು ಮೂಲಭೂತ ಹಕ್ಕಾಗಿದ್ದು, ಅದನ್ನು ಕಸಿಯುವ ಅಕ್ರಮ ಮಾಡಲಾಗಿದೆ. ಚುನಾವಣೆಯಲ್ಲಿ ಸೋಲುತ್ತೇವೆ ಎಂಬ ಭಯದಿಂದ ಇಂತಹ ಅಕ್ರಮಕ್ಕೆ ಮುಂದಾಗಿರುವುದು ಪ್ರಜಾಪ್ರಭುತ್ವ ವ್ಯವಸ್ಥೆ, ಮತದಾರರಿಗೆ ಮಾಡಿರುವ ಅಪಮಾನವಾಗಿದೆ ಎಂದಿದ್ದಾರೆ.

ನಿಮ್ಮ ಸರ್ಕಾರದ ಅವಧಿಯಲ್ಲಿ ಅನುಮತಿ ನೀಡುವಾಗ ಈ ಸಂಸ್ಥೆಗಳ ಹಿನ್ನಲೆ ಪರಿಶೀಲನೆ ಮಾಡಲಿಲ್ಲವೇ ಎಂದು ಕೇಳಿದಾಗ, ‘ಇಂತಹ ತಪ್ಪನ್ನು ಯಾರೇ ಮಾಡಿದರೂ ತಪ್ಪೇ. ಅದು ಶಿವಕುಮಾರ್ ಆಗಲಿ, ಬೇರೆಯವರೇ ಆಗಲಿ. ಈ ವಿಚಾರವಾಗಿ ತನಿಖೆ ಮಾಡಿ ಎಂದು ಹೇಳಿದ್ದಾರೆ.

ಅನಧಿಕೃತವಾಗಿ ಮಾಹಿತಿ ಕಲೆಹಾಕುವುದು ಅಪರಾಧವಾಗಿರುವಾಗ ಮಾತದಾರರ ಮಾಹಿತಿ ಕಲೆ ಹಾಕಿರುವುದು ಎಷ್ಟು ಸರಿ ಎಂಬ ಪ್ರಶ್ನೆಗೆ, ‘ಸೋಷಿಯಲ್ ಇಂಪಾಕ್ಟ್ ಅಧ್ಯಯನಕ್ಕಾಗಿ ಅವರಿಗೆ ಅನುಮತಿ ನೀಡಲಾಗಿತ್ತು ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ಸೋಷಿಯಲ್ ಇಂಪಾಕ್ಟ್ ಅಧ್ಯಯನಕ್ಕೆ ಅನುಮತಿ ನೀಡಿದ್ದೇ ಆಗಿದ್ದರೆ, ಕೋವಿಡ್ ಸಮಯದಲ್ಲಿ ಅಂಗನವಾಡಿ, ಆಶಾ ಕಾರ್ಯಕರ್ತೆಯರನ್ನು ಮನೆ, ಮನೆಗೆ ಕಳುಹಿಸಿದ್ದು ಏಕೆ? ಅದು ಸೋಷಿಯಲ್ ಇಂಪಾಕ್ಟ್ ಅಲ್ಲವೇ’ ಎಂದು ಪ್ರಶ್ನೆ ಮಾಡಿದ್ದಾರೆ.

ಜಾತಿ ಗಣತಿ ಮಾಡಿದ್ದೂ ತಪ್ಪೇ ಎಂಬ ಪ್ರಶ್ನೆಗೆ, ‘ತಪ್ಪಾಗಿದ್ದರೆ ಅದರ ವಿರುದ್ಧ ಕ್ರಮ ಕೈಗೊಳ್ಳಿ. ಆದರೆ ಮತದಾನದ ಹಕ್ಕು ನಮ್ಮ ಮೂಲಭೂತ ಹಕ್ಕು. ನಮ್ಮ ಅವಧಿಯಲ್ಲಿ ಭ್ರಷ್ಟಾಚಾರವಾಗಿದ್ದರೆ ಅದನ್ನೇ ತನಿಖೆ ಮಾಡಿ ಎಂದು ಹೇಳುತ್ತಿದ್ದೇವೆ. ಇಂತಹ ವಿಚಾರ ತನಿಖೆ ಮಾಡಬೇಡಿ ಎಂದು ಎಲ್ಲಿಯೂ ಹೇಳಿಲ್ಲ. ಎಲ್ಲ ವಿಚಾರದಲ್ಲೂ ತನಿಖೆ ಮಾಡಲಿ. ನಾನು ಎಲ್ಲಿ ಹೋದರೂ ಶಾಸಕರ ಗುರುತಿನ ಚೀಟಿ ಕೇಳುವುದಿಲ್ಲ. ಕೇಳುವುದು ಆಧಾರ್ ಅಥವಾ ಮತದಾರರ ಗುರುತಿನ ಚೀಟಿ ಮಾತ್ರ. ಇಂತಹ ಹಕ್ಕು ಕಸಿಯುವುದು ಸರಿಯಲ್ಲʼ ಎಂದು ಕಿಡಿಕಾರಿದ್ದಾರೆ.

ಕಾಂಗ್ರೆಸ್ ನಾಯಕರ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕುತ್ತೇವೆ ಎಂದು ಸಚಿವ ಅಶ್ವತ್ಥ್ ನಾರಾಯಣ ಅವರ ಹೇಳಿಕೆ ವಿಚಾರವಾಗಿ ಕೇಳಿದಾಗ, ‘ಅವರು ತಡ ಮಾಡುತ್ತಿರುವುದೇಕೆ? ಮಾನನಷ್ಟ ಮೊಕದ್ದಮೆ ಹಾಕಿಲಿ. ಈ ವಿಚಾರಗಳು ಚರ್ಚೆ ಆಗಲಿ. ಅವರಿಗೆ ಅಪಮಾನವಾಗಿದ್ದರೆ ಹಾಕಲಿ. ನಮ್ಮ ಬಳಿಯೂ ಈ ಸಂಸ್ಥೆಯ ಎಲ್ಲ ಅಕ್ರಮದ ದಾಖಲೆಗಳಿವೆ. ಕಳೆದ ಬಾರಿ ನಮ್ಮ ಪಕ್ಷದಲ್ಲಿ ಇದ್ದ ಮುನಿರತ್ನ ಅವರೆ ನಕಲಿ ಮತದಾರರ ಗುರುತಿನ ಚೀಟಿ ಮಾಡಿದ್ದರು. ಈ ವಿಚಾರವಾಗಿ ಮುನಿರಾಜು ಅವರು ಪ್ರಕರಣ ದಾಖಲಿಸಿದ್ದು, ಇಲ್ಲಿಯವರೆಗೂ ಅದನ್ನು ಹಿಂಪಡೆದಿಲ್ಲ. ಈ ವಿಚಾರವಾಗಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಹೀಗಿರುವಾಗ ಈ ವಿಚಾರದಲ್ಲಿ ಯಾಕೆ ಪ್ರಕರಣ ದಾಖಲಿಸಿಲ್ಲ. ಯಾರನ್ನೂ ಬಂಧಿಸಿಲ್ಲ ಯಾಕೆ? ರವಿಕುಮಾರ್ ಯಾವ ನಾಯಕರ ಜತೆ ಸಂಪರ್ಕದಲ್ಲಿದ್ದರು ಎಂದು ಪತ್ತೆಹಚ್ಚಬಹುದಲ್ಲವೇ?’ ಎಂದು ಪ್ರಶ್ನಿಸಿದ್ದಾರೆ.