chitraduraga – Peepal Media

ಚಿತ್ರದುರ್ಗದಲ್ಲಿ ಲೋಕಾಯುಕ್ತ ದಾಳಿ, ಪರಿಶೀಲನೆ
ಸೋಮವಾರ ಬೆಳ್ಳಂಬೆಳಿಗ್ಗೆ ಚಿತ್ರದುರ್ಗದಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಚಿತ್ರದುರ್ಗ ಜಿಲ್ಲೆಯಲ್ಲಿ ಇಬ್ಬರು ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ.

ಚಿತ್ರದುರ್ಗದ ಅರಣ್ಯ ಇಲಾಖೆ ಅಧಿಕಾರಿ ಎಸಿಎಫ್ ನಾಗೇಂದ್ರ ನಾಯಕ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದೆ. ಹಿರಿಯೂರು ಪಟ್ಟಣದ ಚಂದ್ರಾ ಲೇಔಟ್ ನಲ್ಲಿರುವ ನಾಗೇಂದ್ರ ಅವರ ಮನೆ, ತವಂದಿ ಗ್ರಾಮದ ಫಾರ್ಮ್ ಹೌಸ್ ಮೇಲೂ ದಾಳಿ ನಡೆಸಲಾಗಿದೆ.

ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮನೆ ಮೇಲೆಯೂ ದಾಳಿ ಮಾಡಲಾಗಿದೆ. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಕೃಷ್ಣಮೂರ್ತಿ ಅವರ ಹಿರಿಯೂರು ಪಟ್ಟಣದ ಕುವೆಂಪು ನಗರದ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ.

ಚಿತ್ರದುರ್ಗದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಗೋಡ್ಸೆ ಪೋಸ್ಟರ್‌ ಪ್ರದರ್ಶನ: ಎಫ್‌ಐಆರ್ ದಾಖಲು
ಚಿತ್ರದುರ್ಗ: ಚಿತ್ರದುರ್ಗ ನಗರದಲ್ಲಿ ಗಣೇಶ ಪ್ರತಿಮೆಯ ವಿಸರ್ಸಜನೆಯ ಮೆರವಣಿಗೆಯಲ್ಲಿ ನಾಥೂರಾಂ ಗೋಡ್ಸೆಯ ಪೋಸ್ಟರ್‌ಗಳನ್ನು ಪ್ರದರ್ಶಿಸಲಾದ ಘಟನೆಗೆ ಸಂಬಂಧಿಸಿದಂತೆ ಕರ್ನಾಟಕ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಐಪಿಸಿ ಸೆಕ್ಷನ್‌ಗಳು 505 (1) (ಸಿ) 505 1 (ಬಿ) ಅಡಿಯಲ್ಲಿ ಚಿತ್ರದುರ್ಗದ ಜೋಗಿಮಟ್ಟಿ ರಸ್ತೆಯ ನಿವಾಸಿ ಹನುಮಂತಪ್ಪ ಅವರ ದೂರಿನ ಮೇರೆಗೆ FIR ದಾಖಲಿಸಲಾಗಿದೆ.

ಅಕ್ಟೋಬರ್ 8 ರಂದು (ಭಾನುವಾರ) ಚಿತ್ರದುರ್ಗದಲ್ಲಿ ಹಿಂದೂ ಮಹಾ ಗಣಪತಿ ಶೋಭಾ ಯಾತ್ರೆ ವೇಳೆ ಈ ಘಟನೆ ನಡೆದಿದೆ. ಆರೋಪಿಗಳು ಗೋಡ್ಸೆಯ ಪೋಸ್ಟರ್‌ಗಳನ್ನು ಪ್ರದರ್ಶಿಸುವ ಮೂಲಕ ಸಮಾಜದಲ್ಲಿ ಶಾಂತಿ ಮತ್ತು ಕೋಮು ಸೌಹಾರ್ದತೆಯನ್ನು ಕದಡುತ್ತಿದ್ದಾರೆ ಎಂದು ದೂರುದಾರರು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ವಿಶ್ವ ಹಿಂದೂ ಪರಿಷತ್ ವತಿಯಿಂದ ಗಣಪತಿ ಮೂರ್ತಿ ಪ್ರತಿಷ್ಠಾಪಿಸಲಾಗಿದ್ದು, ಡಿಜೆ ಸಂಗೀತದೊಂದಿಗೆ ವಿಸರ್ಜನಾ ಮೆರವಣಿಗೆಯನ್ನು ಅದ್ಧೂರಿಯಾಗಿ ಆಯೋಜಿಸಲಾಗಿತ್ತು. ರಾಜ್ಯಾದೆಲ್ಲೆಡೆಯ ಜನರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಕರ್ನಾಟಕದಲ್ಲಿ ಹತ್ಯೆಗೀಡಾದ ಹಿಂದೂ ಕಾರ್ಯಕರ್ತರಾದ ವೀರ್ ಸಾವರ್ಕರ್, ಶರತ್ ಮಡಿವಾಳ್, ಹರ್ಷ, ಹಾಗೂ ನಾಥೂರಾಂ ಗೋಡ್ಸೆ ಅವರ ಪೋಸ್ಟರ್ ಗಳೊಂದಿಗೆ ಯುವಕರು ಕುಣಿದು ಕುಪ್ಪಳಿಸಿದ್ದರು. ಈ ಬೆಳವಣಿಗೆ ವಿವಾದಕ್ಕೆ ಎಡೆಮಾಡಿಕೊಟ್ಟಿತ್ತು.

ಚಿತ್ರದುರ್ಗ | ಅಂಬೇಡ್ಕರ್‌ ನಾಮಫಲಕ ಆಳವಡಿಕೆ ವಿರೋಧಿಸಿ ಮೇಲ್ಜಾತಿಗಳಿಂದ ದಲಿತರ ಮೇಲೆ ದಾಳಿ
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕು. ಐಮಂಗಲ ಹೋಬಳಿ.ಎಂ.ಡಿ.ಕೋಟೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಅಡವಿ ರಾಮಜೋಗಿಹಳ್ಳಿ ಗ್ರಾಮದಲ್ಲಿ ಅಂಬೇಡ್ಕರ್ ನಾಮಫಲಕ ಹಾಕಿದ್ದನ್ನು ಖಂಡಿಸಿ ಅದೇ ಗ್ರಾಮದ ಮೇಲ್ಜಾತಿಯ ಕುರುಬ ಮತ್ತು ಒಕ್ಕಲಿಗ ಸಮುದಾಯದವರು ಒಟ್ಟಾಗಿ ಮಾದಿಗರ  ಹಟ್ಟಿಗೆ ನುಗ್ಗಿ ಕಂಡಕಂಡವರ ಮೇಲೆ ಹಲ್ಲೆ ನಡೆಸಿರುವುದಾಗಿ ವರದಿಯಾಗಿದೆ.

ಊರಿನಲ್ಲಿ ಅಂಬೇಡ್ಕರ್‌ ಬೋರ್ಡ್‌ ನಿಲ್ಲಿಸಿದ್ದೇ ದಾಳಿಗೆ ಕಾರಣವೆನ್ನಲಾಗಿದ್ದು, ಘಟನೆಯಲ್ಲಿ ಹಲ್ಲೆಗೊಳಗಾದ ಮಾದಿಗ ಸಮುದಾಯದ ಸುಮಾರು 20ಕ್ಕೂ ಹೆಚ್ಚು ಹೆಣ್ಣು ಮಕ್ಕಳು ಹಾಗೂ 6ಜನ ಗಂಡು ಮಕ್ಕಳು ಹಿರಿಯೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹಿರಿಯೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳು

ಘಟನೆಯ ಸಂದರ್ಭದಲ್ಲಿ ಊರಿನ ಮಹಿಳೆಯರನ್ನು ಅವಾಚ್ಯವಾಗಿ ನಿಂದಿಸಿರುವುದಾಗಿ ಊರಿನ ವ್ಯಕ್ತಿಯೊಬ್ಬರು ಹೇಳಿದ್ದಾರೆ. ಜಾಗದ ವಿವಾದವೂ ಇದರಲ್ಲಿದೆಯೆಂದೂ ಹೇಳಲಾಗುತ್ತಿದ್ದು ಊರಿಗೆ ನುಗ್ಗಿದ ಮೇಲ್ಜಾತಿಯ ಜನರು ನಿಮ್ಮನ್ನು ಊರು ಬಿಡಿಸುತ್ತೇವೆ ಎನ್ನುವ ಬೆದರಿಕೆಯೊಡ್ಡಿ, ಸಿಕ್ಕ ಸಿಕ್ಕವರ ಮೇಲೆ ಹಲ್ಲೆ ನಡೆಸಿದ್ದಾರೆಂದು ಪ್ರತ್ಯಕ್ಷರ್ಶಿಯೊಬ್ಬರು ತಿಳಿಸಿದ್ದಾರೆ.

ಘಟನೆಯಲ್ಲಿ ಗಾಯಗೊಂಡವರಿಗೆ ಹಿರಿಯೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ದಲಿತ ಮಹಿಳೆ

ಐಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ.