Clear forest encroachments ruthlessly – Peepal Media

ಅರಣ್ಯ ಒತ್ತುವರಿ ನಿರ್ದಾಕ್ಷಿಣ್ಯವಾಗಿ ತೆರವು ಮಾಡಿ‌ – ಸಚಿವ ಈಶ್ವರ್‌ ಖಂಡ್ರೆ
ಬೆಂಗಳೂರು : 2015ರ ಪೂರ್ವದಲ್ಲಿ ಪಟ್ಟಾ ಜಮೀನು ಮತ್ತು ಒತ್ತುವರಿ ಸೇರಿ 3 ಎಕರೆಗಿಂತ ಕಡಿಮೆ ಇರುವ ಬಡ ಜನರಿಗೆ ಪುನರ್ವಸತಿ ಕಲ್ಪಿಸುವವರೆಗೆ ತೊಂದರೆ ನೀಡದೆ, ದೊಡ್ಡ ಒತ್ತುವರಿಯನ್ನು ನಿರ್ದಾಕ್ಷಿಣ್ಯವಾಗಿ ತೆರವು ಮಾಡಿಸಲು ಸಚಿವ ಈಶ್ವರ್‌ ಖಂಡ್ರೆ ನಿರ್ದೇಶನ ನೀಡಿದ್ದಾರೆ.

ಬೆಂಗಳೂರಿನ ಅರಣ್ಯ ಭವನದಲ್ಲಿಂದು ಕೆ.ಡಿ.ಪಿ ಮತ್ತು ಎಂ.ಎಂ.ಆರ್.‌ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಅರಣ್ಯ ಭೂಮಿಯ ಇಂಡೀಕರಣಕ್ಕೆ ಪತ್ರ ಬರೆಯುವ ಬದಲು ಎ.ಸಿ. ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸುವಂತೆ ಸೂಚಿಸಿದರು.

2015ರ ನಂತರದ ಒತ್ತುವರಿಯ ವಿಚಾರದಲ್ಲಿ ಶೂನ್ಯ ಸಹಿಷ್ಣತೆ ಇರಬೇಕು, ಯಾರೇ 2015ರ ನಂತರ ಅರಣ್ಯ ಒತ್ತುವರಿ ಮಾಡಿದ್ದರೆ, ಮುಲಾಜಿಲ್ಲದೆ ತೆರವು ಮಾಡಿ ಕ್ರಮ ಜರುಗಿಸಬೇಕು, ಕಳೆದ 2 ವರ್ಷದಲ್ಲಿ ಆಗಿರುವ ಒತ್ತುವರಿ, ಮಾಡಿರುವ ತೆರವು ಮತ್ತು ಕೈಗೊಂಡ ಕ್ರಮದ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಿದರು.

ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಿ:  ಸಾರ್ವಜನಿಕರು ತಮ್ಮ ಸಮಸ್ಯೆ ಪರಿಹಾರಕ್ಕಾಗಿ ಕಚೇರಿಗೆ ಬಂದಾಗ ಅವರೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ಸೂಚನೆ ನೀಡಿದರು. ಇದೆ ಸಂದರ್ಭದಲ್ಲಿ ನಾಗರಹೊಳೆ ಎ ವೈಲ್ಡ್‌ ಪ್ಯಾರಡೈಸ್‌ ಮತ್ತು ಕಾಳಿ ಹುಲಿ ಸಂರಕ್ಷಣಾ ಪ್ರದೇಶ ಹೊರತಂದಿರುವ ವನ್ಯಜೀವಿ ವಿಧಿವಿಜ್ಞಾನ ಸಾಕ್ಷ್ಯ ಸಂಗ್ರಹಣಾ ಮಾರ್ಗದರ್ಶಿ ಎಂಬ ಎರಡು ಪುಸ್ತಕಗಳನ್ನು ಈಶ್ವರ ಖಂಡ್ರೆ ಬಿಡುಗಡೆ ಮಾಡಿದರು.

ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ, ಮುಖ್ಯ ವನ್ಯಜೀವಿ ಪರಿಪಾಲಕರಾದ ಸುಭಾಷ್‌ ಮಾಲ್ಕಡೆ ಮತ್ತಿತರರು ಉಪಸ್ಥಿತರಿದ್ದರು. ರಾಜ್ಯದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳವರೆಗಿನ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.